Tag: ಗೋ ಹತ್ಯೆ

  • ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

    ಗೋ ಶಾಲೆಯಲ್ಲಿ ಒಂದು ತಿಂಗಳ ಕಾಲ ಸೇವೆ – ಷರತ್ತು ವಿಧಿಸಿ ಆರೋಪಿಗೆ ಜಾಮೀನು

    ಲಕ್ನೋ: ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗೆ ಗೋ ಶಾಲೆಯಲ್ಲಿ ಒಂದು ತಿಂಗಳು ಗೋವುಗಳ ಸೇವೆ ಮಾಡುವಂತೆ ಷರತ್ತು ವಿಧಿಸಿ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಸಲೀಂ ಅಲಿಯಾಸ್ ಕಾಲಿಯಾ ಗೋ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿದ್ದ. ಆ ಬಳಿಕ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನುವಿಚಾರಣೆ ನಡೆಸಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್, ಆರೋಪಿ ಒಂದು ತಿಂಗಳ ಕಾಲ ಗೋವುಗಳ ಸೇವೆ ಮಾಡಬೇಕು ಮತ್ತು ನೋಂದಾಯಿತ ಗೋಶಾಲೆಗೆ 1 ಲಕ್ಷ ರೂ. ದಂಡ ಕಟ್ಟಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ. ಇದನ್ನೂ ಓದಿ: ರೇಪ್‌ಗೆ ಉತ್ತೇಜನ ನೀಡುವ ಪರ್ಫ್ಯೂಮ್ ಜಾಹೀರಾತು ತೆಗೆಯುವಂತೆ ಕೇಂದ್ರ ಸೂಚನೆ

    ಸಲೀಂ ವಿರುದ್ಧ ಐಪಿಸಿ ಸೆಕ್ಷನ್ 379 ಕಳ್ಳತನ ಮತ್ತು ಉತ್ತರ ಪ್ರದೇಶ ಗೋ ಹತ್ಯೆ ತಡೆ ಕಾಯ್ದೆಯಡಿ ಬರೈಲಿ ಜಿಲ್ಲೆಯ ಬೊಜಿಪುರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿತ್ತು. ಆ ಬಳಿಕ ಜಾಮೀನು ಅರ್ಜಿ ಸಲ್ಲಿಸಿ ಕೋರ್ಟ್‍ನಲ್ಲಿ ಸಲೀಂ ಪರ ವಾದಿಸಿದ ವಕೀಲರು, ಸಲೀಂ ಮುಗ್ಧ ಆತ ಮತ್ತು ಆತನ ಸಹಚರರು ಬಂಧನದ ಬಳಿಕ ಗೊಂದಲದ ಹೇಳಿಕೆ ನೀಡಿದ್ದಾರೆ. ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದರೆ ಬರೈಲಿ ಗೋ ಶಾಲೆಗೆ 1 ಲಕ್ಷ ರೂ.  ದಂಡ ಕಟ್ಟಲಾಗುವುದು ಹಾಗೂ ಒಂದು ತಿಂಗಳ ಕಾಲ ಗೋವುಗಳ ಸೇವೆ ಮಾಡುವುದಾಗಿ ವಾದ ಮಂಡಿಸಿದರು.

    court order law

    ಆ ಬಳಿಕ ಕೋರ್ಟ್ ಈ ಬಗ್ಗೆ ಅರ್ಜಿದಾರನಿಂದ ವೈಯಕ್ತಿಕ ಬಾಂಡ್ ಹಾಗೂ ಎರಡು ಶ್ಯೂರಿಟಿ ಪಡೆದುಕೊಂಡು ಜಾಮೀನು ಮಂಜೂರು ಮಾಡಿದೆ. ಗೋ ಶಾಲೆಯಲ್ಲಿ ಕೆಲಸ ಮಾಡಿದ ಮತ್ತು ಕಟ್ಟಿರುವ ಹಣದ ಬಗ್ಗೆ ದಾಖಲೆ ಕೋರ್ಟ್‍ಗೆ ಸಲ್ಲಿಸುವಂತೆ ಆದೇಶಿಸಿದೆ. ಇದನ್ನೂ ಓದಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

  • ಹಿಂದೂ ಹುಡುಗಿಯರ ತಂಟೆಗೆ ಬಂದ್ರೆ ಸುಮ್ನಿರಲ್ಲ: ಗುಜರಾತ್ ಸಿಎಂ

    ಹಿಂದೂ ಹುಡುಗಿಯರ ತಂಟೆಗೆ ಬಂದ್ರೆ ಸುಮ್ನಿರಲ್ಲ: ಗುಜರಾತ್ ಸಿಎಂ

    – ಗೋಹತ್ಯೆ ಮಾಡುವವರ ವಿರುದ್ಧ ಕಠಿಣ ಕ್ರಮ

    ಅಹಮದಾಬಾದ್: ಹಿಂದೂ ಹುಡುಗಿಯರ ತಂಟೆಗೆ ಬಂದ್ರೆ ಸುಮ್ನಿರಲ್ಲ. ಹಾಗೆಯೇ ಗೋ ಹತ್ಯೆ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಗುಡುಗಿದ್ದಾರೆ.

    ಅಹಮದಾಬಾದ್ ನ ವೈಷ್ಣೋದೇವಿ ವೃತ್ತದ ಬಳಿ ಮಾಲಧಾರಿ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೂ ಹುಡುಗಿಯರನ್ನು ಪುಲಾಯಿಸಿ ಅವರನ್ನು ಕರೆದುಕೊಂಡು ಪರಾರಿ ಆಗುವವರನ್ನು ಸುಮ್ಮನೆ ಬಿಡಲ್ಲ. ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಇದೇ ವೇಳೆ ಗೋಹತ್ಯೆ ಮಾಡುವವರ ವಿರುದ್ಧವೂ ಗುಡುಗಿರುವ ಸಿಎಂ, ಗೋ ಹತ್ಯೆ ಮಾಡುವವರ ವಿರುದ್ಧ ಕೂಡ ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ವಾರ್ನ್ ಮಾಡಿದ್ದಾರೆ. ನಮ್ಮ ಸರ್ಕಾರವು ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಹಲವು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಿದೆ. ಗೋವು ವಧೆಯನ್ನು ತಡೆಯುವುದರಿಂದ ಹಿಡಿದು, ಸರಗಳ್ಳತನ ನಿಯಂತ್ರಣದವರೆಗೆ ಹಲವು ಕಾನೂನು ಅನುಷ್ಠಾನಕ್ಕೆ ಬಂದಿದೆ. ಇದನ್ನೂ ಓದಿ: ನಟ ಸಾಯಿಧರ್ಮ ತೇಜ್ ಆರೋಗ್ಯ ಸ್ಥಿರ

    ಅಂತೆಯೇ ಲವ್ ಜಿಹಾದ್ ವಿರುದ್ಧ ಕೂಡ ಕಠಿಣ ನಿಯಮವನ್ನು ಸರ್ಕಾರ ತಂದಿದೆ. ಲವ್ ಜಿಹಾದ್ ನಿಲ್ಲಿಸಲು ಕಾನೂನು ತಂದಿದ್ದು, ಹಿಂದೂ ಹುಡುಗಿಯನ್ನು ಬಲೆಗೆ ಬೀಳಿಸುವ ಹಾಗೂ ಅವರೊಂದಿಗೆ ಓಡಿಹೋಗುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ.

  • ಗೋಹತ್ಯೆ ತಡೆ ಕಾಯ್ದೆ ಜಾರಿ- ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ : ಕಾಯ್ದೆಯಲ್ಲಿ ಏನಿದೆ?

    ಗೋಹತ್ಯೆ ತಡೆ ಕಾಯ್ದೆ ಜಾರಿ- ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ : ಕಾಯ್ದೆಯಲ್ಲಿ ಏನಿದೆ?

    ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದೆ. ಜನರಿಂದ ಗೋ ಹತ್ಯೆಯನ್ನು ತಪ್ಪಿಸಲು ಮತ್ತು ಅವುಗಳನ್ನು ರಕ್ಷಿಸಲು ಸುಗ್ರೀವಾಜ್ಞೆಯನ್ನು ಇಂದಿನಿಂದ ಜಾರಿಗೆ ತರಲಾಗಿದೆ.

    ಮೊದಲ ಬಾರಿ ಗೋ ಹತ್ಯೆ ಮಾಡುವವರಿಗೆ 3-7 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಮತ್ತು 50,000ದಿಂದ 5 ಲಕ್ಷದವರೆಗೂ ದಂಡ ವಿಧಿಸಲಾಗುತ್ತದೆ. ಗೋ ಹತ್ಯೆ ಪುನಾರಾವರ್ತನೆಯಾದಲ್ಲಿ ತಪ್ಪಿತಸ್ಥರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷದಿಂದ 10 ಲಕ್ಷದವರೆಗೂ ದಂಡ ವಿಧಿಸಲಾಗುತ್ತದೆ.

    ಕಾನೂನಿನ ಪ್ರಕಾರ ಜಾನುವಾರುಗಳ ವಧೆ ಮಾಡುವುದು ಹಾಗೂ ಅದಕ್ಕೆ ಸಹಕರಿಸುವುದು ಅಪರಾಧವಾಗಿದೆ. ಹತ್ಯೆ ಮಾಡುವ ಉದ್ದೇಶದಿಂದ ಜಾನುವಾರುಗಳ ಸಾಗಾಟ ಮತ್ತು ಸಾಗಾಟಕ್ಕೆ ಸಹಕರಿಸುವುದು ಕೂಡ ಅಪರಾಧವಾಗಿದೆ. ಅನಾರೋಗ್ಯಕ್ಕೊಳಗಾದ, ಸಾಂಕ್ರಾಮಿಕ ಕಾಯಿಲೆಗಳಿಂದ ಬಳಲುತ್ತಿರುವ 13 ವರ್ಷಕ್ಕಿಂತ ಮೇಲ್ಪಟ್ಟ ಜಾನುವಾರುಗಳನ್ನು ಮಾತ್ರ ಹತ್ಯೆ ಮಾಡಲು ಅನುಮತಿ ನೀಡಲಾಗಿದೆ. ಅದು ಪಶು ವೈದ್ಯಾಧಿಕಾರಿ ದೃಢೀಕರಿಸಿದರೆ ಮಾತ್ರ ಹತ್ಯೆ ಮಾಡಲು ಅವಕಾಶ ಕಲ್ಪಿಸಲಾಗಿದೆ.

    ಸುಗ್ರೀವಾಜ್ಞೆ ಅಡಿಯಲ್ಲಿ ಜಾನುವಾರುಗಳನ್ನು ರಕ್ಷಿಸುವ ಉತ್ತಮ ರೀತಿಯಲ್ಲಿ ವರ್ತಿಸುವ ವ್ಯಕ್ತಿಗಳ ವಿರುದ್ಧ ಯಾವುದೇ ಮೊಕದ್ದಮೆ, ಕಾನೂನು ಕ್ರಮ ಕೈಗೊಳ್ಳುವುದಿಲ್ಲ ತಿಳಿಸಲಾಗಿದೆ.

    ಕಳೆದ ತಿಂಗಳು ಚಳಿಗಾಲ ಅಧಿವೇಶನದಲ್ಲಿ ಕಾಂಗ್ರೆಸ್ ತೀವ್ರ ವಿರೋಧದ ನಡುವೆ ಗೋಹತ್ಯೆ ಮತ್ತು ಜಾನುವಾರು ಸಂರಕ್ಷಣೆ ಮಸೂದೆಯನ್ನು ಸದನದಲ್ಲಿ ಪಾಸ್ ಮಾಡಲು ಸರ್ಕಾರಕ್ಕೆ ಒಪ್ಪಿಗೆ ಸಿಗಲಿಲ್ಲ.ಕಾಂಗ್ರೆಸ್ ಹಾಗೂ ಜೆಡಿಎಸ್ ಮಸೂದೆ ರೈತ ವಿರೋಧಿ ಎಂದು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದವು. ಈ ಸಂಬಂಧ ಇದೀಗ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ.

  • ಗೋಹತ್ಯೆ ನಿಷೇಧಕ್ಕೆ ನಮ್ಮ ಬೆಂಬಲ ಇದೆ: ಸಿಎಂ ಇಬ್ರಾಹಿಂ

    ಗೋಹತ್ಯೆ ನಿಷೇಧಕ್ಕೆ ನಮ್ಮ ಬೆಂಬಲ ಇದೆ: ಸಿಎಂ ಇಬ್ರಾಹಿಂ

    – ಮುಸ್ಲಿಮರಲ್ಲಿ ಕೈ ಮುಗಿದು ಬೇಡ್ತೇನೆ ಗೋವು ತಿನ್ಬೇಡಿ

    ಹುಬ್ಬಳ್ಳಿ: ಗೋಹತ್ಯೆ ನಿಷೇಧಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ. ಮುಸ್ಲಿಮರಿಗೆ ಕೈ ಮುಗಿದು ಬೇಡಿಕೊಳ್ಳುತ್ತೇನೆ ಗೋವು ಯಾರೂ ತಿನ್ನಬಾರದು ಎಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.

    ನಗರದಲ್ಲಿಂದು ಮಾತನಾಡಿದ ಅವರು, ಗೋಹತ್ಯೆ ನಿಷೇಧಕ್ಕೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ. ಆದರೆ ಬಂಜೆಯಾದ ಗೋವು ನೋಡಿಕೊಳ್ಳುವವರು ಯಾರು? ಅದಕ್ಕಾಗಿ ಪ್ರತಿ ಪಂಚಾಯತಿಗೆ ಒಂದರಂತೆ ಗೋಶಾಲೆ ತೆರೆಯಬೇಕು. ವಯಸ್ಸಾದ ಜಾನುವಾರುಗಳನ್ನು ಸಾಕಲು ಗೋಶಾಲೆ ತೆರೆಯಬೇಕು. ಸರ್ಕಾರ ಗೋಸಾಕಾಣಿಕೆಯ ವ್ಯವಸ್ಥೆ ಮಾಡಿಕೊಡಬೇಕು. ಇಲ್ಲದಿದ್ದರೆ ರೈತರು, ಚರ್ಮಕಾರಿಗಳು ಏನು ಮಾಡಬೇಕು? ಎಂದು ಪ್ರಶ್ನಿಸಿದರು.

    ಕೊಡವರು ಗೋಮಾಂಸ ಸೇವನೆ ಕುರಿತ ಸಿದ್ದರಾಮಯ್ಯ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಅದು ನನಗೆ ಗೊತ್ತಿಲ್ಲ. ಯಾವುದೇ ವಿವಾದದ ಬಗ್ಗೆ ನಾನು ಮಾತನಾಡುವುದಿಲ್ಲ. ಅದರ ಬಗ್ಗೆ ನಾನು ಚರ್ಚೆ ಮಾಡೋದಿಲ್ಲ ಎಂದರು.

    ಲವ್ ಜಿಹಾದ್ ಕಾನೂನು ಕುರಿತು ಮಾತನಾಡಿದ ಅವರು, ಲವ್ ಜಿಹಾದ್ ಕಾನೂನು ತಂದು ಏನು ಮಾಡಲು ಸಾದ್ಯ? ಲವ್ ಜಿಹಾದ್ ಗಂಡ ಹೆಂಡತಿ ರಾಜಿ ಆದರೆ ಏನು ಮಾಡೋದಕ್ಕೆ ಆಗುತ್ತದೆ. ಒತ್ತಾಯಪೂರ್ವಕವಾಗಿ ಮಾಡಿದರೆ ಕ್ರಮ ಕೈಗೊಳ್ಳಬಹುದು ಎಂದರು.

    ಇದೇ ವೇಳೆ ಮೈತ್ರಿ ಸರ್ಕಾರ ಪತನದ ಬಗ್ಗೆ ಮಾತನಾಡಿದ ಇಬ್ರಾಹಿಂ, ಮೈತ್ರಿ ಸರ್ಕಾರ ಪತನಕ್ಕೆ ಯಾರು ಕಾರಣ ಅನ್ನೋದು ರಾಜ್ಯದ ಜನರಿಗೆ ಗೊತ್ತಿದೆ. ಅದರ ಬಗ್ಗೆ ನಾನು ಯಾಕೆ ವಿಶ್ಲೇಷಣೆ ಮಾಡಲಿ. ಮತ್ತೆ ಪುನರ್ ವಿವಾಹಕ್ಕೆ ಸಾಧ್ಯ ಇದೆಯಾ ಅನ್ನೋದನ್ನು ನಾವು ನೋಡುತ್ತಿದ್ದೇವೆ. ನಾವೇನಿದ್ದರೂ ಸೇರಿಸುವುದಕ್ಕೆ ನೋಡುವವರು, ಮುರಿಯುವವರಲ್ಲ ಎಂದರು.

  • ನೋ ಕಾಮೆಂಟ್, ಅವರವರ ಭಾವ ಅವರವರದ್ದು- ರಘು ಆಚಾರ್ ಆರೋಪಕ್ಕೆ ವಿನಯ್ ಗುರೂಜಿ ಪ್ರತಿಕ್ರಿಯೆ

    ನೋ ಕಾಮೆಂಟ್, ಅವರವರ ಭಾವ ಅವರವರದ್ದು- ರಘು ಆಚಾರ್ ಆರೋಪಕ್ಕೆ ವಿನಯ್ ಗುರೂಜಿ ಪ್ರತಿಕ್ರಿಯೆ

    ಬೆಂಗಳೂರು: ನೋ ಕಾಮೆಂಟ್, ಅವರವರ ಭಾವ ಅವರವರದ್ದು. ಅವರು ಹೇಳಿದ ಸನ್ನಿವೇಶ ಅಲ್ಲಿರಲಿಲ್ಲ ಎಂದು ಕಾಂಗ್ರೆಸ್‌ ಪರಿಷತ್‌ ಸದಸ್ಯ ರಘು ಆಚಾರ್‌ ಆರೋಪಕ್ಕೆ ವಿನಯ್‌ ಗುರೂಜಿ ಪ್ರತಿಕ್ರಿಯಿಸಿದ್ದಾರೆ.

    ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುವ ಸಂಬಂಧ ಇಂದು ವಿನಯ್‌ ಗುರೂಜಿ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

    ಭೇಟಿಯ ಬಳಿಕ ಮಾಧ್ಯಮಗಳು ರಘು ಆಚಾರ್‌ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ, ನಾನೇ ನಿಶ್ಚಯ ಮಾಡಿದ ಮದುವೆ ಇದು. ಲಿಂಗಾಯತರಲ್ಲಿ ಒಂದು ಸಂಪ್ರದಾಯ ಇದೆ. ಗುರುಗಳು ಊಟ ಮಾಡಿದ ಮೇಲೆ ಉಳಿದ ಊಟವನ್ನು ಭಕ್ತರು ಪ್ರಸಾದವಾಗಿ ಸ್ವೀಕರಿಸುವ ಪದ್ಧತಿ ಇದೆ. ನಾನು ಊಟ ಮಾಡಿದ ಮೇಲೆ ತಟ್ಟೆ ಎಲ್ಲಿಟ್ಟಿದ್ದೇನೆ. ಲೋಟ ಎಲ್ಲಿಟ್ಟಿದ್ದೇನೆ ಎಂದು ನೋಡುವುದಕ್ಕೆ ಆಗುವುದಿಲ್ಲ. ನನ್ನ ಗಮನಕ್ಕೆ ಬರದೇ ಈ ಪ್ರಸಂಗ ನಡೆದಿದೆ. ನನ್ನ ಗಮನಕ್ಕೆ ಬಂದಿದ್ದರೆ ಗಾಂಧಿವಾದ ರೀತಿ ಖಂಡಿಸುತ್ತಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಪ್ರಸಾದವೆಂದು ಬಲವಂತವಾಗಿ ಎಂಜಲು ತಿನ್ನಿಸಿದರು: ವಿನಯ್ ಗುರೂಜಿ ಮೇಲೆ ಕೈ ನಾಯಕ ಗರಂ

    ಸಿಎಂ ಜೊತೆ ಚರ್ಚೆ ನಡೆಸಿದ ವಿಷಯಕ್ಕೆ ಕೇಳಲಾದ ಪ್ರಶ್ನೆಗೆ, ಗೋಹತ್ಯೆ ನಿಷೇಧ ಕಾನೂನನ್ನು ರಾಜ್ಯದಲ್ಲಿ ಜಾರಿಗೆ ತರುವ ವಿಷಯ ಕುರಿತು ಚರ್ಚಿಸಲು ಬಂದಿದ್ದೆವು. ಹಿಂದೂ ಧರ್ಮದಲ್ಲಿ ನಾವು ಗೋವುಗಳಿಗೆ ವಿಶೇಷ ಗೌರವ ನೀಡಿದ್ದೇವೆ. ರಾಷ್ಟ್ರೀಯ ಪಕ್ಷಿ, ಪ್ರಾಣಿಗೆ ಹೇಗೆ ಈಗ ಕಾನೂನು ಇದೆಯೇ ಅದೇ ರೀತಿ ಕಾನೂನು ತರಬೇಕೆಂದು ನಾವು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

    ಗೋಹತ್ಯೆ ನಿಷೇಧ ಅನಿವಾರ್ಯ ಇದೆ. ಅಧಿಕಾರಿಗಳ ಚರ್ಚೆ ಮಾಡುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ. ನಾನು ಕೊಟ್ಟ ಸಲಹೆಗಳನ್ನು ಸಿಎಂ ಅವರು ಇಲ್ಲಿಯವರೆಗೆ ನಿರಾಕರಿಸಿಲ್ಲ. ಈ ಮನವಿಯನ್ನೂ ಈಡೇರಿಸುವ ಭರವಸೆ ಇದೆ ಎಂದು ಹೇಳಿದರು.

    ಕಳೆದ ವಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪಶುಸಂಗೋಪನೆ ಸಚಿವ ಪ್ರಭು ಚೌವ್ಹಾಣ್‌, ರಾಜ್ಯ ಸರಕಾರವು ಗೋ ಹತ್ಯೆ ನಿಷೇಧ ಕಾನೂನು ಜಾರಿಗೊಳಿಸಲಿದೆ. ಜಾನುವಾರುಗಳ ರಕ್ಷಣೆಗೆ ಸರಕಾರ ಹೊಸ ಕ್ರಮಗಳನ್ನು ಜಾರಿಗೊಳಿಸಲಿದೆ ಎಂದು ಹೇಳಿದ್ದರು.

  • ರಂಜಾನ್ ದಿನಗಳಲ್ಲಿ ಮಾತ್ರ ಮಾಂಸ ತಿನ್ನಲಿ: ಬಿಜೆಪಿ ಮುಖಂಡೆ

    ರಂಜಾನ್ ದಿನಗಳಲ್ಲಿ ಮಾತ್ರ ಮಾಂಸ ತಿನ್ನಲಿ: ಬಿಜೆಪಿ ಮುಖಂಡೆ

    – ಗೋ ಮಾಂಸ ತಿಂದ್ರೆ ಹಿಡಿದು ಹೊಡಿರಿ
    – ಪೊಲೀಸ್ ಎದುರೇ ಬೆಂಬಲಿಗರಿಗೆ ಮೇಯರ್ ಆದೇಶ

    ಲಕ್ನೋ: ರಂಜಾನ್ ದಿನಗಳಲ್ಲಿ ಉಪವಾಸ ಇರುತ್ತಾರೆ. ಹೀಗಾಗಿ ಈ ಅವಧಿಯಲ್ಲಿ ಮಾತ್ರ ಮುಸ್ಲಿಮರು ಮಾಂಸವನ್ನು ತಿನ್ನಲಿ ಎಂದು ಉತ್ತರ ಪ್ರದೇಶದ ಬಿಜೆಪಿ ಮುಖಂಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಅಲಿಘಡ್‍ನ ಮಾಜಿ ಮೇಯರ್ ಶಕುಂತಲಾ ಭಾರತಿ ಅವರು ಪೊಲೀಸ್ ಅಧಿಕಾರಿಗೆ ಅವಾಜ್ ಹಾಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶಕುಂತಲಾ ಅವರ ಹೇಳಿಕೆ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

    ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜವಾದಿ ಪಕ್ಷ (ಬಿಎಸ್‍ಪಿ) ಅಧಿಕಾರದಲ್ಲಿ ಇಲ್ಲ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಗೋವುಗಳ ಹತ್ಯೆಯ ವಿರುದ್ಧ ನಾವು ಹೋರಾಡುತ್ತಿದ್ದೇವೆ. ಗೋ ಹತ್ಯೆ ಮಾಡುವವರ ಮೇಲೆ ಜನರು ಹಲ್ಲೆ ಮಾಡಿದರೆ ನಾವು ಜವಾಬ್ದಾರರಲ್ಲ ಎಂದು ಶಕುಂತಲಾ ಭಾರತಿ, ಪೊಲೀಸ್ ಅಧಿಕಾರಿಗೆ ತಿಳಿಸಿದ್ದಾರೆ.

    ಈ ವೇಳೆ ಮಧ್ಯ ಪ್ರವೇಶ ಮಾಡಿ ಬೆಂಬಲಿಗ, ಗೋವುಗಳ ಹತ್ಯೆ ತಡೆಯಲು ಮುಂದಾದರೆ ನಮ್ಮ ವಿರುದ್ಧ ಬಿಳುತ್ತಾರೆ ಎಂದು ಹೇಳಿದ್ದಾನೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಕುಂತಲಾ ಅವರು, ಅಂತವರನ್ನು ಹಿಡಿದು ಹೊಡೆಯಿರಿ. ಏನೇ ಬಂದರೂ ನಾನು ನೋಡಿಕೊಳ್ಳುತ್ತೇನೆ ಎಂದು ಪೊಲೀಸ್ ಅಧಿಕಾರಿಯ ಎದುರೇ ಹೇಳಿದ್ದಾರೆ.

    ಮಧ್ಯಪ್ರದೇಶದ ಹಳ್ಳಿಯೊಂದರಲ್ಲಿ ಮೇ 22ರಂದು ಆಟೋದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂದು ಶಂಕಿಸಿ ಯುವಕರ ಗುಂಪೊಂದು ಮುಸ್ಲಿಂ ಯುವತಿ ಹಾಗೂ 4 ಮಂದಿ ಯುವಕರಿಗೆ ಮನಬಂದಂತೆ ಥಳಿಸಿದ್ದರು. ಹಲ್ಲೆ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಯುವಕರು ಹಲ್ಲೆ ಮಾಡುತ್ತಿರುವುದನ್ನು ಸ್ಥಳೀಯರು ವಿಡಿಯೋ ಮಾಡುತ್ತಿದ್ದರೆ ವಿನಾಃ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ. ವಿಡಿಯೋದಲ್ಲಿ ಕೆಲ ಯುವಕರ ಗುಂಪು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾ ಯುವತಿಯ ತಲೆಗೆ ಚಪ್ಪಲಿಯಿಂದ ಹೊಡೆದಿದ್ದರು ಮತ್ತು ಕೆಲ ಯುವಕರನ್ನು ಮರಕ್ಕೆ ಕಟ್ಟಿ ಅವರಿಗೆ ದೊಣ್ಣೆಗಳಿಂದ ಹೊಡೆಸಿದ್ದರು.

    ಮೇ 23 ರಂದು ಈ ವಿಡಿಯೋವನ್ನು ಶುಭಮ್ ಸಿಂಗ್ ಎಂಬ ಶ್ರೀ ರಾಮ ಸೇನಾ ಕಾರ್ಯಕರ್ತ ತನ್ನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡು ನಂತರ ತೆಗೆದು ಹಾಕಿದ್ದನು. ಈ ಆಧಾರದ ಮೇಲೆ ವಿಚಾರಣೆ ಮಾಡಿರುವ ಪೊಲೀಸರು ವಿಡಿಯೋದಲ್ಲಿ ಕಾಣುವ ಸಿಯೋನಿ ನಗರದ ಐದು ಜನ ಯುವಕರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.

  • ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

    ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

    – ಉತ್ತರ ಪ್ರದೇಶದಲ್ಲಿ ಕಲ್ಲು ತೂರಿ ಪೊಲೀಸ್ ಇನ್ಸ್​ಪೆಕ್ಟರ್ ಸೇರಿ ಇಬ್ಬರ ಹತ್ಯೆ

    ಲಕ್ನೋ: ಉತ್ತರ ಪ್ರದೇಶದ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಘಟನೆ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ಎಸ್‍ಐ ಸೇರಿದಂತೆ ಇಬ್ಬರ ಹತ್ಯೆ ನಡೆದಿದೆ. ಘಟನೆಯಲ್ಲಿ ಹಲವು ಪೊಲೀಸ್ ಪೇದೆಗಳು ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಬುಲಂದ್‍ಷಹರ್ ಗ್ರಾಮದ ಹೊರವಲಯದಲ್ಲಿ ಪ್ರಾಣಿಯ ಪಳಿಯುಳಿಕೆ ಪತ್ತೆಯಾಗಿದ್ದವು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೆಲ ಬಲಪಂಥಿಯ ಮುಖಂಡರು ಮತ್ತು ಗ್ರಾಮಸ್ಥರು ಸಯನಾ ರೋಡ್ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆ ಸಂಚಾರ ಸುಗಮಗೊಳಿಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಆರಂಭವಾಯಿತು.

    ಪ್ರತಿಭಟನಾಕಾರು ಪತ್ತೆಯಾಗಿದ್ದ ಪ್ರಾಣಿಗಳ ಪಳಿಯುಳಿಕೆಯನ್ನು ಟ್ರಾಲಿಯನ್ನು ತುಂಬಿಕೊಂಡು ಬಂದು ಚಿಂಗಾರವಾಡಿ ಪೊಲೀಸ್ ಠಾಣೆಯೆದರು ತಂದು ನಿಲ್ಲಿಸಿದ್ದಾರೆ. ಈ ಗಲಾಟೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಮತ್ತು ಮತ್ತೋರ್ವ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ ಅಧಿಕಾರಿ ತಿಳಿಸಿದ್ದಾರೆ.

    ಪ್ರತಿಭಟನಾ ಸ್ಥಳ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಘಟನೆ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋಧನಕಾರಿ ಸಂದೇಶಗಳನ್ನು ಹರಿ ಬಿಡಬಾರರು. ಸಾರ್ವಜನಿಕರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದೆಂದು ಬುಲಂದ್‍ಷಹರ್ ಎಸ್.ಎಸ್.ಪಿ. ಕೆಬಿ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೋ ಹತ್ಯೆ ಬಗ್ಗೆ ದೂರು ನೀಡಿದ್ದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ

    ಗೋ ಹತ್ಯೆ ಬಗ್ಗೆ ದೂರು ನೀಡಿದ್ದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ

    ಬೆಂಗಳೂರು: ನಗರದಲ್ಲಿ ಪ್ರಾಣಿ ಪ್ರೀತಿ ತೋರಿಸಲು ಹೋದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

    ನಂದಿನಿ ಎಂಬವರೇ ಹಲ್ಲೆಗೊಳಗಾದ ಮಹಿಳಾ ಟೆಕ್ಕಿ. ಪ್ರತಿಷ್ಠಿತ ಸಾಫ್ಟ್‍ವೇರ್ ಕಂಪನಿಯಲ್ಲಿ ಸೀನಿಯರ್ ಅಧಿಕಾರಿಯಾಗಿದ್ದ ನಂದಿನಿ ಅವರು ಗೋಹತ್ಯೆ ಬಗ್ಗೆ ತಲಘಟ್ಟಪುರ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ದೂರು ನೀಡಿ ಪೇದೆಗಳೊಂದಿಗೆ ವಾಪಸ್ ಹೊಗುವಾಗ ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ.

    ಕಾಲ್ಕಿತ್ತ ಪೇದೆಗಳು: ಪಾಕಿಸ್ತಾನ ಪರ ಘೋಷಣೆ ಕೂಗಿತ್ತಾ ಬಂದ 100ಕ್ಕೂ ಹೆಚ್ಚು ದುಷ್ಕರ್ಮಿಗಳಿದ್ದ ಗುಂಪು ನಂದಿನಿ ಅವರ ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ನಂದಿನಿ ಅವರ ಜೊತೆಗಿದ್ದ ಪೇದೆಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಲಘಟ್ಟಪುರ ಕಸಾಯಿಖಾನೆ ಬಳಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಟೆಕ್ಕಿ ನಂದಿನಿ ಅವರ ಕಾರು ಸಂಪೂರ್ಣ ಜಖಂ ಆಗಿದೆ.

    ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಪರವಾನಿಗೆ ಪಡೆದು ಎಮ್ಮೆ, ಕರು ಸಾಗಿಸುತ್ತಿದ್ದವರನ್ನ ಥಳಿಸಿದ ಬಜರಂಗದಳ ಕಾರ್ಯಕರ್ತರು

    ಪರವಾನಿಗೆ ಪಡೆದು ಎಮ್ಮೆ, ಕರು ಸಾಗಿಸುತ್ತಿದ್ದವರನ್ನ ಥಳಿಸಿದ ಬಜರಂಗದಳ ಕಾರ್ಯಕರ್ತರು

    ಉಡುಪಿ: ಗೋವು ರಕ್ಷಣೆಯ ಹೆಸರಿನಲ್ಲಿ ಅಟ್ಟಹಾಸ ಸಲ್ಲದು ಎಂದು ಪ್ರಧಾನಿ ನರೇಂದ್ರ ಮೋದಿ ಕೆಲ ದಿನಗಳ ಹಿಂದೆ ಕಟು ಟೀಕೆ ಮಾಡಿದ್ದರು. ಆದ್ರೆ ಗೋರಕ್ಷಣೆಯ ನೆಪದಲ್ಲಿ ಮಾಡುವ ದಾಳಿಗಳ ಸಂಖ್ಯೆ ಕಮ್ಮಿಯಾಗಿಲ್ಲ. ಎಮ್ಮೆಗಳನ್ನು ಸಾಗಿಸುತ್ತಿದ್ದ ಇಬ್ಬರನ್ನ ಬಜರಂಗದಳ ಕಾರ್ಯಕರ್ತರು ಅಡ್ಡಗಟ್ಟಿ ಮನಬಂದಂತೆ ಥಳಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.

    ಉಡುಪಿಯ ಬೆಳ್ಮಣ್ಣು ಸಮೀಪದ ಮುಂಡ್ಕೂರಿನಲ್ಲಿ ಎರಡು ದಿನದ ಹಿಂದೆ ಈ ಘಟನೆ ನಡೆದಿದೆ. ಸಾಧು ಪೂಜಾರಿ ಎಂಬವರು ಪಂಚಾಯತ್ ಪರವಾನಿಗೆ ಪಡೆದು, ಪಶುವೈದ್ಯರ ಸರ್ಟಿಫಿಕೇಟ್ ತೆಗೆದುಕೊಂಡು ಎಮ್ಮೆ ಮತ್ತು ಕರುವನ್ನು ಸಾಗಾಟ ಮಾಡುತ್ತಿದ್ದರು. ರಾಜೇಶ್ ಮೆಂಡೋನ್ಸ ಎಂಬವರ ಟೆಂಪೋದಲ್ಲಿ ಮೂಲ್ಕಿ ಕಡೆ ಹೋಗುತ್ತಿದ್ದಾಗ ಎಂಟತ್ತು ಮಂದಿ ಅಡ್ಡಗಟ್ಟಿದ್ದಾರೆ. ಪಂಚಾಯತ್ ಪರವಾನಿಗೆ ಇದೆ, ಇದನ್ನು ಕಸಾಯಿಖಾನೆಗೆ ತೆಗೆದುಕೊಂಡು ಹೋಗುತ್ತಿಲ್ಲ ಎಂದು ಹೇಳಿದರೂ ಇಬ್ಬರಿಗೂ ಮನಬಂದಂತೆ ಥಳಿಸಿದ್ದಾರೆ.

    ಎಮ್ಮೆ ಮತ್ತು ಕರುವನ್ನು ಮೂಲ್ಕಿಯ ಚಂದ್ರ ಶೆಟ್ಟಿ ಎಂಬವರಿಗೆ ಮಾರಾಟ ಮಾಡಲು ಸಾಧು ಪೂಜಾರಿ ಹೊರಟಿದ್ದರು. ಇದನ್ನು ಕೇಳದೆ ಅವರಿಗೆ ಥಳಿಸಿದ ಬಜರಂಗದಳ ಕಾರ್ಯಕರ್ತರು ಕಾರ್ಕಳ ಗ್ರಾಮಾಂತರ ಪೊಲೀಸರನ್ನು ಕರೆಸಿ ಒಪ್ಪಿಸಿದ್ದಾರೆ.

    ಆದ್ರೆ ಪರವಾನಿಗೆ ಇದ್ದರೂ ಸಾಧು ಪೂಜಾರಿ ಮತ್ತು ರಾಜೇಶ್ ಮೆಂಡೋನ್ಸಾ ಮೇಲೆಯೇ ಪೊಲೀಸರು ಕೇಸು ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಧು ಪೂಜಾರಿ ಮತ್ತು ರಾಜೇಶ್ ಮೆಂಡೋನ್ಸಾ ಮನೆಯವರು ಉಡುಪಿ ಎಸ್.ಪಿ ಕಚೇರಿಗೆ ಬಂದು ಸಂಘಟನೆಯ ಕಾರ್ಯಕರ್ತರ ವಿರುದ್ಧ ದೂರು ದಾಖಲು ಮಾಡುವಂತೆ, ನಿರಪರಾಧಿಗಳ ವಿರುದ್ಧದ ಕೇಸು ವಾಪಾಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ಇದರ ಹಿಂದೆ ರಾಜಕೀಯ ಕೈವಾಡವಿದೆ ಎಂದು ದೂರು ನೀಡಿದವರು ಆರೋಪ ಮಾಡಿದ್ದಾರೆ.

    ಈ ಸಂದರ್ಭ ಸ್ಥಳೀಯ ಶುಭದ್ ರಾವ್ ಎಂಬವರು ಮಾತನಾಡಿ, ಪೊಲೀಸ್ ಇಲಾಖೆ ಸರಿಯಾಗಿ ತನಿಖೆ ಮಾಡಬೇಕು. ಅಮಾಯಕರ ಮೇಲೆ ದಾಖಲಿಸಿರುವ ಕೇಸನ್ನು ವಾಪಾಸ್ ಪಡೆಯಬೇಕು. ಗ್ರಾಮಪಂಚಾಯತ್ ಪರವಾನಿಗೆ ಇದ್ದರೂ ಪೊಲೀಸರು ಮತ್ತು ಸಂಘಟನೆಯ ಕಾರ್ಯಕರ್ತರು ಕಾನೂನನ್ನು ಮೀರಿದ್ದಾರೆ ಎಂದು ಆರೋಪಿಸಿದರು.

  • ಹಿಂದೂ ಯುವತಿಯರ ಕೈಗೆ ತಲ್ವಾರ್ ಕೊಡ್ಬೇಕು, ಅನ್ಯಧರ್ಮೀಯರು ಕಣ್ಣೆತ್ತಿ ನೋಡಿದ್ರೆ ತಲೆ ಕಡೀಬೇಕು: ಸಾಧ್ವಿ ಸರಸ್ವತಿ

    ಹಿಂದೂ ಯುವತಿಯರ ಕೈಗೆ ತಲ್ವಾರ್ ಕೊಡ್ಬೇಕು, ಅನ್ಯಧರ್ಮೀಯರು ಕಣ್ಣೆತ್ತಿ ನೋಡಿದ್ರೆ ತಲೆ ಕಡೀಬೇಕು: ಸಾಧ್ವಿ ಸರಸ್ವತಿ

    ಬೆಳಗಾವಿ: ಗೋ ಹತ್ಯೆ ಮಾಡೋರನ್ನ ತಲೆ ಕಡೀಬೇಕು. ಹಿಂದೂ ಯುವತಿಯರ ಕೈಗೆ ತಲ್ವಾರ್ ಕೊಡಬೇಕು. ತಮ್ಮನ್ನು ಕಣ್ಣೆತ್ತಿ ನೋಡೋ ವಿಧರ್ಮಿಯರ ತಲೆ ಕಡೀಬೇಕು ಎಂದು ಮಹಿಳಾ ಸನ್ಯಾಸಿನಿ, ಚೈತನ್ಯ ಪೀಠದ ಪ್ರಚಾರಕಿ ಸಾಧ್ವಿ ಸರಸ್ವತಿ ಹೇಳಿದ್ದಾರೆ.

    ಬೆಳಗಾವಿಯ ಗುಜರಾತ್ ಭವನದಲ್ಲಿ ಬಜರಂಗದಳ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಸಹೋದರಿಯರೊಂದಿಗೆ ಲವ್ ಜಿಹಾದ್ ಮಾಡಲಾಗ್ತಿದೆ. ಶಾಲೆ-ಕಾಲೇಜುಗಳು, ಟ್ಯೂಷನ್ ಸೆಂಟರ್‍ಗಳು, ಬಟ್ಟೆಯಂಗಡಿ, ಮೊಬೈಲ್ ಅಂಗಡಿಗಳಲ್ಲಿ ಲವ್ ಜೆಹಾದ್ ಜಾಸ್ತಿಯಾಗ್ತಿದೆ ಎಂದರು.

    ಲವ್ ಜಿಹಾದ್ ತಪ್ಪಿಸಲು ರಕ್ಷಾ ಬಂಧನದಂದು ಅಣ್ಣಂದಿರು ತಂಗಿಯರಿಗೆ ಉಡುಗೊರೆಯಾಗಿ ತಲ್ವಾರ್ ಕೊಡ್ಬೇಕು. ನಮ್ಮತ್ತ ಕಣ್ಣ ಎತ್ತಿ ನೋಡುವವರ ತಲೆಕಡಿದು ಭಾರತ ಮಾತೆಯ ಪಾದಕ್ಕೆ ಅರ್ಪಿಸುವಂತೆ ನಮ್ಮ ಸಹೋದರಿಯರಿಗೆ ಸೂಚಿಸಿ ಎಂದು ಸಾಧ್ವಿ ಸರಸ್ವತಿ ಹೇಳಿದರು.

    ಗೋ ಹತ್ಯೆ ಮಾಡುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಷ್ಟೇ ಅಲ್ಲದೇ ಅವರ ಕತ್ತನ್ನು ಕತ್ತರಿಸಬೇಕು ಎಂದು ಅವರು ಆಗ್ರಹಿಸಿದರು.

     

    https://youtu.be/B1brRKodbtU