Tag: ಗೋ ಹತ್ಯೆ ನಿಷೇಧ ಕಾಯ್ದೆ

  • ಗೋ ಹತ್ಯೆ ನಿಷೇಧ ಬಗ್ಗೆ ಸರ್ಕಾರದಿಂದ ಸಮೀಕ್ಷೆ: ಸತೀಶ್ ಜಾರಕಿಹೊಳಿ

    ಗೋ ಹತ್ಯೆ ನಿಷೇಧ ಬಗ್ಗೆ ಸರ್ಕಾರದಿಂದ ಸಮೀಕ್ಷೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಗೋ ಹತ್ಯೆ ನಿಷೇಧ ಕಾಯ್ದೆ (Cow Slaughter Prohibition Act) ಬಗ್ಗೆ ಸರ್ಕಾರದಿಂದ ಸಮೀಕ್ಷೆ ನಡೆಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.

    ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರದ ಕುರಿತು ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ (Nippani) ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನೆ-ಮನೆಗಳಿಗೆ ತೆರಳಿ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನದ ಕುರಿತು ಸಂದರ್ಶನ ನಡೆಸುತ್ತೇವೆ. ಮನೆ ಮನೆಗೆ ಹೋಗಿ ಈ ಕಾಯ್ದೆ ಬೇಕೋ ಬೇಡವೋ ಎಂದು ಜನರನ್ನು ಕೇಳುತ್ತೇವೆ. ಬಹುಮತದ ಆಧಾರದ ಮೇಲೆ ಗೋಹತ್ಯೆ ಕಾಯ್ದೆ ಅನುಷ್ಠಾನಕ್ಕೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪರಿಷ್ಕರಣೆ ಇಲ್ಲ- ಶಿಕ್ಷಣ ಇಲಾಖೆಗೆ ಸಿಎಂ ಮೌಖಿಕ ಸೂಚನೆ

    ಒರಿಜಿನಲ್ ಪಠ್ಯಪುಸ್ತಕವನ್ನು ಕಳೆದ ಬಾರಿ ಬಿಜೆಪಿ ತಿರುಚಿದೆ. ಬಸವೇಶ್ವರ, ಅಂಬೇಡ್ಕರ್ ಸೇರಿದಂತೆ ಬಹಳಷ್ಟು ಇತಿಹಾಸ ತಿರುಚಲಾಗಿದೆ. ಪಠ್ಯ ಪುಸ್ತಕ ಬದಲಾವಣೆ ಬಗ್ಗೆ ಪ್ರಣಾಳಿಕೆಯಲ್ಲಿ ಹೇಳಿದ್ದೇವೆ. ಪ್ರಣಾಳಿಕೆ ಪ್ರಕಾರ ಪಠ್ಯ ಪುಸ್ತಕ ಬದಲಾವಣೆ ಮಾಡೇ ಮಾಡುತ್ತೇವೆ. ನುರಿತ ತಜ್ಞರ ಸಮಿತಿ ರಚಿಸಿ ಪಠ್ಯ ಬದಲಾವಣೆ ಮಾಡುತ್ತೇವೆ. ಕಳೆದ ಬಾರಿ ನಡೆದ ಲೋಕೋಪಯೋಗಿ ಇಲಾಖೆ ಅಕ್ರಮದ ಬಗ್ಗೆ ಸಮಯ ತೆಗೆದುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.  ಇದನ್ನೂ ಓದಿ: ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಫಿಕ್ಸ್?- ಸಂಚಲನ ಮೂಡಿಸಿದ ಸಂಸದ ಬಸವರಾಜು ಹೇಳಿಕೆ

  • ಗೋವಾಕ್ಕೆ ಗೋ ಮಾಂಸ ರಫ್ತು ಮಾಡುತ್ತಿದ್ದರೆ ಕಾನೂನು ಕ್ರಮ: ಪ್ರಭು ಚೌಹಾಣ್

    ಗೋವಾಕ್ಕೆ ಗೋ ಮಾಂಸ ರಫ್ತು ಮಾಡುತ್ತಿದ್ದರೆ ಕಾನೂನು ಕ್ರಮ: ಪ್ರಭು ಚೌಹಾಣ್

    ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾದ ನಂತರ 1,329 ಕೇಸು ದಾಖಲಿಸಿದ್ದು, 10 ಸಾವಿರ ಹಸು (Cow) ಗಳ ರಕ್ಷಣೆ ಮಾಡಲಾಗಿದೆ. ಗೋವಾಗೆ ದನದ ಮಾಂಸ ಕಳಿಸುತ್ತಿರುವ ಆರೋಪದ ಕುರಿತು ಪರಿಶೀಲನೆ ನಡೆಸಿ ದನದ ಮಾಂಸ ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

    ವಿಧಾನ ಪರಿಷತ್ (Vidhana Parishad) ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯ ಹರೀಶ್ ಕುಮಾರ್ ಪ್ರಶ್ನೆ ಕೇಳಿದರು. ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಯಿಂದ ಗೋವಾಕ್ಕೆ ಪ್ರತಿದಿನ ರಫ್ತು ಮಾಡಲಾಗುವ ದನ ಮತ್ತು ಎಮ್ಮೆ ಮಾಂಸದ ಪ್ರಮಾಣದ ಕುರಿತು ಪ್ರಶ್ನೆ ಕೇಳಿದರು. ಇದನ್ನೂ ಓದಿ: ಮೀನೂಟ ಸವಿದು ದೇವರ ದರ್ಶನ ಮಾಡಿದ ಸಿ.ಟಿ ರವಿ ಫೋಟೋ ವೈರಲ್

    ಇದಕ್ಕೆ ಉತ್ತರಿಸಿದ ಸಚಿವ ಪ್ರಭು ಚೌಹಾಣ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲೂ ಜಾನುವಾರುಗಳ ಮಾಂಸದ ರಫ್ತು ಮಾಡುವ ಅಂಕಿ-ಅಂಶಗಳ ಮಾಹಿತಿಯನ್ನು ಇಲಾಖೆ ನಿರ್ವಹಿಸುವುದಿಲ್ಲ. ಇದು ನಮ್ಮ ಇಲಾಖೆ ವ್ಯಾಪ್ತಿಗೆ ಬರಲ್ಲ. ಆದರೂ ನಗರಾಭಿವೃದ್ಧಿ ಇಲಾಖೆ, ವಾಣಿಜ್ಯ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಮತ್ತು ಆರ್ಥಿಕ ಇಲಾಖೆ (ಜಿಎಸ್‌ಟಿ ವಿಭಾಗ) ಗಳಿಂದ ಮಾಹಿತಿ ಕೋರಲಾಗಿತ್ತು.

    ನಗರಾಭಿವೃದ್ಧಿ ಇಲಾಖೆಯು ಈ ಪ್ರಶ್ನೆ ಅನ್ವಯವಾಗಲ್ಲ ಎಂದು ಉತ್ತರಿಸಿದೆ. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಸದರಿ ಪ್ರಶ್ನೆಯು ಕರ್ನಾಟಕ ರಾಜ್ಯದಿಂದ ಗೋವಾಕ್ಕೆ ಕಳುಹಿಸಲಾಗುತ್ತಿರುವ ಮಾಂಸದ ಬಗ್ಗೆ ಇದ್ದು, ರಫ್ತಿಗೆ ಸಂಬಂಧಿಸಿರುವುದಿಲ್ಲ ಎಂದು ವರದಿ ನೀಡಿದೆ. ಗೋವಾಕ್ಕೆ ದನ ಮತ್ತು ಎಮ್ಮೆ ಮಾಂಸ ರಫ್ತು ಮಾಹಿತಿಯು ಶೂನ್ಯ ಎಂದು ಆರ್ಥಿಕ ಇಲಾಖೆಯು ವರದಿ ನೀಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬೇಕು, ಶೀಘ್ರವೇ ಪ್ರಕರಣದ ವಿಚಾರಣೆ ನಡೆಸಿ- ಸುಪ್ರೀಂಗೆ ವಕೀಲರ ಮನವಿ

    ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ದನದ ಮಾಂಸ ಸಾಗಾಣಿಕೆ ಅಕ್ರಮವಾಗಲಿದೆ. ಎಲ್ಲಿಯೂ ಸಾಗಾಣಿಕೆ ಮಾಡುತ್ತಿಲ್ಲ. ಒಂದು ವೇಳೆ ಗೋವಾಕ್ಕೆ ನಮ್ಮ ರಾಜ್ಯದಿಂದ ದನದ ಮಾಂಸ ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಿರಲಿ: ಪ್ರಭು ಚವ್ಹಾಣ್

    ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಿರಲಿ: ಪ್ರಭು ಚವ್ಹಾಣ್

    ಬೀದರ್: ಜುಲೈ 21 ರಂದು ಆಚರಿಸುತ್ತಿರುವ ಬಕ್ರೀದ್ ಹಬ್ಬ ಹಾಗೂ ಮತ್ತಿತರೆ ಸಂದರ್ಭಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳಿ ಸೂಚನೆ ನೀಡಿದ್ದಾರೆ.

    ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಗೋವನ್ನು ಮಾತೆ ಎಂದು ಕರೆಯಲಾಗುತ್ತದೆ ಮತ್ತು ಪೂಜಿಸಲಾಗುತ್ತದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವುದರಿಂದ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದನ, ಕರುಗಳು ಹಾಗೂ 13 ವರ್ಷದೊಳಗಿನ ಎಮ್ಮೆ ಮತ್ತು ಕೋಣಗಳನ್ನು ಅನಧಿಕೃತವಾಗಿ ವಧೆ ಮಾಡುವುದು ಹಾಗೂ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡುವಂತಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಕಾಯ್ದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಎಸಿಬಿ ದಾಳಿ – 15 ಲಕ್ಷ ನಗದು, 750 ಗ್ರಾಂ ಚಿನ್ನ, ಅಪಾರ ಆಸ್ತಿ ಪತ್ರ ಪತ್ತೆ

    ಜಾನುವಾರುಗಳ ಸಂರಕ್ಷಣೆಗಾಗಿ ಜಾರಿಗೆ ತಂದಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ಪಶುಪಾಲನೆ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು ಹಾಗೂ ಎಲ್ಲ ತಾಲೂಕುಗಳ ಸಹಾಯಕ ನಿರ್ದೇಶಕರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಜಿಲ್ಲೆಯಿಂದ ಯಾವೊಂದು ಗೋವು ಕಸಾಯಿಖಾನೆಗೆ ಹೋಗದಂತೆ  ಪೊಲೀಸ್  ಇಲಾಖೆ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಗಡಿಯಲ್ಲಿರುವ ಚೆಕ್ ಪೋಸ್ಟ್ ಗಳು ದಿನದ 24 ಗಂಟೆಯೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ.

  • ಗೋ ಹತ್ಯೆ ನಿಷೇಧ ಕಾಯ್ದೆ ಸ್ವಾಗತಿಸಿದ ಸಿದ್ದಗಂಗಾ ಶ್ರೀ

    ಗೋ ಹತ್ಯೆ ನಿಷೇಧ ಕಾಯ್ದೆ ಸ್ವಾಗತಿಸಿದ ಸಿದ್ದಗಂಗಾ ಶ್ರೀ

    – ನೋವಿನ ಸಂಗತಿ ಹಂಚಿಕೊಂಡ ಶ್ರೀಗಳು

    ತುಮಕೂರು: ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಶ್ರೀಗಳು ಸ್ವಾಗತಿಸಿದ್ದಾರೆ.

    ಗೋ ಹತ್ಯೆ ನಿಷೇಧ ಮಸೂದೆ ಜಾರಿ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಯ್ದೆಯನ್ನ ಮಂಡಿಸಿ ಅಂಗೀಕರಿಸಿದ್ದಾರೆ. ಬಹಳ ದಿನಗಳಿಂದ ಇದರ ಬೇಡಿಕೆ ಇತ್ತು. ಈಗಾಗಲೇ ಅನೇಕ ರಾಜ್ಯಗಳು ಗೋ ಹತ್ಯೆ ನಿಷೇಧ ಮಾಡಿವೆ. ಅದನ್ನೆಲ್ಲಾ ಪರಿಶೀಲಿಸಿ ನಮ್ಮ ಕರ್ನಾಟಕದಲ್ಲೂ ಕೂಡ ದೊಡ್ಡ ಅಭಿಲಾಷೆ ಇಟ್ಟುಕೊಂಡು ಗೋಹತ್ಯೆ ನಿಷೇಧವನ್ನು ಜಾರಿ ಮಾಡಿದ್ದಾರೆ ಎಂದರು.

    ಗೋ ಹತ್ಯೆಯನ್ನು ಸರ್ಕಾರ ನಿಷೇಧ ಮಾಡಿದೆ ಅನ್ನೊದಕ್ಕಿಂತ ಪ್ರತಿಯೊಬ್ಬ ರೈತನೂ ಜಾಗೃತರಾಗಬೇಕು. ಗೋವನ್ನ ನಮ್ಮ ಮನೆಯ ಸದಸ್ಯ ಅಂತ ಭಾವಿಸಿ ಸಂರಕ್ಷಿಸಬೇಕು. ಒಂದು ದುಃಖಕರ ಸಂಗತಿ ಅಂದ್ರೆ ಹಸುವನ್ನ ಚೆನ್ನಾಗಿರುವವರೆಗೂ ದುಡಿಸಿಕೊಂಡು ಅದರಿಂದ ಪ್ರಯೋಜನ ಪಡೆದುಕೊಂಡು ಅದು ಕೊನೆಗಾಲದಲ್ಲಿ ನಿಶ್ಯಕ್ತಿ ಆದಾಗ ಯಾವ್ಯಾವುದೂ ರೀತಿಯಲ್ಲಿ ವಿಲೇವಾರಿ ಮಾಡೋದು ತುಂಬಾ ನೋವಿನ ಸಂಗತಿ. ಈ ಸಂಸ್ಕೃತಿ ಹೋಗಬೇಕು ಎಂದು ತಿಳಿಸಿದರು.

    ರೈತರು ಮೊದಲು ಜಾಗೃತರಾಗಬೇಕು ಕೇವಲ ಕಾನೂನಿನಿಂದ ಏನೂ ಆಗಲ್ಲ. ಹಿಂದಿನಿಂದಲೂ ಗೋವುಗಳು ನಮ್ಮ ಸಂಪತ್ತು ಎಂದು ಭಾವಿಸಿಕೊಂಡು ಬಂದಿದ್ದೀವಿ. ಅಷ್ಟೇ ಅಲ್ಲ ಗೋವಿನಿಂದ ಉತ್ಪತ್ತಿಯಾಗೋ ಪಂಚಗವ್ಯಗಳು ಕೂಡ ಪವಿತ್ರವಾದದ್ದು ಎಮದು ಹೆಳಿದರು.

    ಮಸೂದೆಯ ಪ್ರಮುಖ ಅಂಶಗಳು:
    ಹಸು, ಕರು, ದನ, ಎಮ್ಮೆಗಳ ಹತ್ಯೆ ನಿಷೇಧ ಮಾಡುವುದು. ಹತ್ಯೆಗಾಗಿ ಗೋವುಗಳ ಸಾಗಣೆಗೆ ಸಂಪೂರ್ಣ ನಿರ್ಬಂಧ. ಗೋಹತ್ಯೆಗೆ 50 ಸಾವಿರದಿಂದ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುವುದು. ಗೋಹತ್ಯೆ ಅಪರಾಧದಲ್ಲಿ 2ನೇ ಬಾರಿ ಸಿಕ್ಕಿಬಿದ್ರೆ 10 ಲಕ್ಷ ರೂ ದಂಡ. ಗೋಹತ್ಯೆಗೆ 3 ರಿಂದ 7 ವರ್ಷ ಕಾಲ ಜೈಲು ಶಿಕ್ಷೆ ಮತ್ತು ಅಪರಾಧಿಗಳಿಗೆ ನಿರ್ದಿಷ್ಟ ಅವಧಿವರೆಗೆ ಜಾಮೀನು ಇಲ್ಲ. 13 ವರ್ಷ ಮೇಲ್ಪಟ್ಟ ಎಮ್ಮೆಗಳ ಹತ್ಯೆಗೆ ಷರತ್ತುಬದ್ಧ ಒಪ್ಪಿಗೆ ನೀಡಿದ್ದು, ಸಂಬಂಧಿಸಿದ ಸಂಸ್ಥೆಗಳ ಅನುಮತಿ ಅಗತ್ಯವಾಗಿ ಪಡೆದುಕೊಳ್ಳುವುದು. ಗುಜರಾತ್, ಯುಪಿ ಮಾದರಿಯಲ್ಲಿ ಶಿಕ್ಷೆ, ದಂಡ ವಿಧಿಸಲಾಗುವುದು. ಗೋಹತ್ಯೆ ಪ್ರಕರಣಗಳ ವಿಚಾರಣೆ ವಿಶೇಷ ಕೋರ್ಟ್ ನಲ್ಲಿ ನಡೆಯಲಿದೆ.