ಅಂತೆಯೇ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆ ಜಿಲ್ಲಾಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ. ನಿತೇಶ್ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಗುರುದತ್ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.
ಬೆಂಗಳೂರು: ನಗರದಲ್ಲಿನ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್‍ಗಳನ್ನು ತೆರವುಗೊಳಿಸುವ ಕೆಲಸ ಇನ್ನಷ್ಟು ವೇಗವಾಗಿ ನಡೆಯಬೇಕಿದ್ದು, ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಅಧಿಕಾರಿಗಳು ತತ್‍ಕ್ಷಣ ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತರವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬಂಟಿಂಗ್ಸ್ ಮತ್ತು ಬ್ಯಾನರ್ಸ್‍ಗಳ ತೆರವುಗೊಳಿಸುವಿಕೆ ಬಗ್ಗೆ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್, ಫ್ಲೆಕ್ಸ್‍ಗಳನ್ನು ವ್ಯಾಪಕವಾಗಿ ಅಳವಡಿಸಲಾಗುತ್ತಿದೆ. ಆಯಾ ವಲಯ ವ್ಯಾಪ್ತಿಯಲ್ಲಿಯ ಸ್ಥಳೀಯ ಅಧಿಕಾರಿಗಳು ಯಾವುದೇ ಫ್ಲೆಕ್ಸ್‍ಗಳನ್ನು ಅಳವಡಿಸಲು ಬಿಡಬಾರದು. ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸುವಂತಹವರ ಮೇಲೆ ಸ್ಥಳಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಎಫ್‍ಐಆರ್ ದಾಖಲಿಸಲು ಸೂಚನೆ ನೀಡಿದರು. ಇದನ್ನೂ ಓದಿ: ಉಕ್ರೇನ್ ಗಡಿ ತಲುಪಿದ್ರೂ ಭಾರತಕ್ಕೆ ಬರಲಾಗದೆ ರಾಯಚೂರು ವಿದ್ಯಾರ್ಥಿಗಳು ಪರದಾಟ
ಚುನಾವಣೆಯ ಸಂದರ್ಭದಲ್ಲಿ ಹೇಗೆ ನಗರವು ಬ್ಯಾನರ್ಸ್, ಫ್ಲೆಕ್ಸ್‍ಗಳಿಂದ ಮುಕ್ತವಾಗಿರುತ್ತದೆಯೋ ಅದೇ ರೀತಿ ಈಗಲೂ ಕೂಡ ನಗರವು ಬ್ಯಾನರ್ಸ್, ಫ್ಲೆಕ್ಸ್‍ಗಳಿಂದ ಮುಕ್ತವಾಗಿರಬೇಕು. ನಗರದಲ್ಲಿ ಎಲ್ಲೆಲ್ಲಿ ಹೆಚ್ಚಾಗಿ ಫ್ಲೆಕ್ಸ್, ಬ್ಯಾನರ್‍ಗಳನ್ನು ಅಳವಡಿಸಲಾಗಿದೆಯೋ ಅಂತಹ ಸ್ಥಳಗಳಲ್ಲಿ ಪೊಲೀಸ್ ಸಹಯೋಗದ ಜೊತೆಗೆ ಮಾರ್ಷಲ್‍ಗಳನ್ನು ಸಹ ನಿಯೋಜನೆ ಮಾಡಿಕೊಂಡು ತೆರವುಗೊಳಿಸಲು ಮುಂದಾಗಬೇಕು. ಪಾಲಿಕೆಯ ಶಿಲ್ಟ್ ಅಂಡ್ ಟ್ರ್ಯಾಕ್ಟರ್, ಪ್ರಹಾರಿ ಸೇರಿದಂತೆ ಹೆಚ್ಚುವರಿಯಾಗಿ ಇನ್ನಿತರೆ ವಾಹನಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ತೆರವು ಕಾರ್ಯಾರಣೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್, ಭಿತ್ತಿಪತ್ರ, ಬಾವುಟಗಳು ಸೇರಿದಂತೆ ಇತ್ಯಾದಿ ಜಾಹೀರಾತು/ಪ್ರಕಟಣೆಗಳ ಅಳವಡಿಕೆಯು ಬಿಬಿಎಂಪಿ ಕಾಯ್ದೆ 2020 ಮತ್ತು ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ ತಡೆ) ಕಾಯ್ದೆ 1981ರ ಕಲಂ(3)ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ ಎಂದರು.
ಆದರೂ ಸಹ ನಗರದಲ್ಲಿ ಮತ್ತೆ ಮತ್ತೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾರ್ನರ್‍ಗಳನ್ನು ಅಳವಡಿಸಿ ನಗರದ ಸೌಂದರ್ಯ ಹಾಳಾಗುವಂತಹ ಕೆಲಸ ಮಾಡಲಾಗುತ್ತಿದೆ. ಈ ಸಂಬಂಧ ಪಾಲಿಕೆಯ ಎಲ್ಲಾ ವಲಯಗಳಲ್ಲಿಯೂ ಅಧಿಕಾರಿಗಳು ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಂಡು ತೆರವು ಕಾರ್ಯಾಚರಣೆ ಮಾಡಿ, ಯಾವುದೇ ಅನಧಿಕೃತ ಫ್ಲೆಕ್ಸ್‍ಗಳು ಇರದಂತೆ ಕ್ರಮವಹಿಸಲು ಸೂಚನೆ ನೀಡಿದರು. ಇದನ್ನೂ ಓದಿ: ನಮ್ಮ ಸ್ವಂತ ಜನರನ್ನು ನಾವು ಬಿಟ್ಟುಕೊಡಲು ಸಾಧ್ಯವಿಲ್ಲ: ಕೇಂದ್ರದ ವಿರುದ್ಧ ರಾಹುಲ್ ಕಿಡಿ
ಪೊಲೀಸ್ ಇಲಾಖೆಯಿಂದ ಸಹಯೋಗ ನೀಡಲು ಮನವಿ:
ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಸ್, ಬಂಟಿಗ್ಸ್‍ಗಳನ್ನು ಅಳವಡಿಸುವ ಪ್ರಕ್ರಿಯೆ ಹೆಚ್ಚಾಗಿದ್ದು, ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಸಿಬ್ಬಂದಿಯು ಅನಧಿಕೃತ ಫ್ಲೆಕ್ಸ್‍ಗಳನ್ನು ತೆರವುಗೊಳಿಸುವ ವೇಳೆ ಪಾಲಿಕೆ ಅಧಿಕಾರಿಗಳ ಜೊತೆ ತೆರಳಿ ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು.
ಇದಕ್ಕೆ ಪೊಲೀಸ್ ಇಲಾಖೆಗೆ ಸಹಕಾರ ಅತ್ಯಗತ್ಯ ಎಂದು ಮುಖ್ಯ ಆಯುಕ್ತರು ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್‍ರವರಿಗೆ ಮನವಿ ಮಾಡಿದರು. ಈ ವೇಳೆ ನಗರ ಪೆÇಲೀಸ್ ಆಯುಕ್ತರಾದ ಕಮಲ್ ಪಂತ್‍ರವರು ಪ್ರತಿಕ್ರಿಯಿಸಿ, ಪಾಲಿಕೆಯ ಜೊತೆಗೆ ನಮ್ಮ ಅಧಿಕಾರಿಗಳು ಕೈಜೋಡಿಸಿ ಕಾರ್ಯನಿರ್ವಹಿಸಲಿದ್ದು, ಪಾಲಿಕೆ ಅಧಿಕಾರಿಗಳಿಗೆ ಬೇಕಾದಂತಹ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಪಾಲಿಕೆಯ ಎಲ್ಲಾ ವಲಯ ಆಯುಕ್ತರುಗಳು, ಹಣಕಾಸು ವಿಭಾಗದ ಅಪರ ಆಯುಕ್ತರು ವೆಂಕಟೇಶ್. ಎಸ್, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಎಲ್ಲಾ ವಲಯ ಮುಖ್ಯ ಇಂಜಿನಿಯರ್‌ಗಳು ಎಲ್ಲಾ ವಿಭಾಗೀಯ ಕಾರ್ಯಪಾಲಕ ಇಂಜಿನಿಯರ್‍ಗಳು ಇತರ ಅಧಿಕಾರಿಗಳು ಉಪಸ್ಥಿರಿದ್ದರು.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸಹಯೋಗದೊಂದಿಗೆ ಜನಾಗ್ರಹ ಪ್ರತಿಷ್ಠಾನವು ವಾರ್ಷಿಕ ನಗರ ಬಜೆಟ್‍ಗಾಗಿ ಸಾರ್ವಜನಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಈ ಬಾರಿ ವಿಶೇಷವಾಗಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಪ್ರತಿಕ್ರಿಯೆ ಪಡೆಯುವ ಅಭಿಯಾನಕ್ಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಚಾಲನೆ ನೀಡಿದರು.
ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರು ಮಾತನಾಡಿದ್ದು, ಜನಾಗ್ರಹ ಪ್ರತಿಷ್ಠಾನದ ಮೂಲಕ ‘ನನ್ನ ನಗರ ನನ್ನ ಬಜೆಟ್’ ಎಂಬ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. 2015 ರಿಂದಲೂ ಅಭಿಯಾನವನ್ನು ನಡೆಸಿಕೊಂಡು ಬರುತ್ತಿದ್ದು, ಆ ಮೂಲಕ ನಗರದ ಬಜೆಟ್‍ನಲ್ಲಿ ಜನರು ಭಾಗವಹಿಸುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು
‘ಮೈ ಸಿಟಿ ಮೈ ಬಜೆಟ್’ ವಾಹನವು ಎಲ್ಲ ವಾರ್ಡ್‍ಗಳಿಗೆ ತೆರಳಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಕಳೆದ ಬಾರಿ ಪಾದಚಾರಿ ಮಾರ್ಗ ಮತ್ತು ಯೆಲ್ಲೋ ಸ್ಪಾಟ್(ತೆರೆದ ಸ್ಥಳಗಳಲ್ಲಿ ಮೂತ್ರ ವಿಸರ್ಜನೆ) ಬಗ್ಗೆ ಗಮನ ಹರಿಸಲಾಗಿತ್ತು. ಈ ಬಾರಿ ಉದ್ಯಾನವನ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಶೌಚಾಲಯಗಳ ಬಗ್ಗೆ ನಾಗರಿಕರ ಸಲಹೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದರು.
ಇಂತಹ ಕಾರ್ಯಕ್ರಮ ಸಕ್ರಿಯವಾಗಿ ನಡೆಯಲಿ. ಇತರ ದೊಡ್ಡ-ದೊಡ್ಡ ಮಹಾನಗರಗಳಿಗೆ ಹೋಲಿಸಿದರೆ ಪಾಲ್ಗೊಳ್ಳುವಿಕೆಯಲ್ಲಿ ಬೆಂಗಳೂರು ಸಾಕಷ್ಟು ಮುಂದಿದೆ. ನಗರದಲ್ಲಿ ವಾರ್ಡ್ ಸಮಿತಿಗಳು ಕೂಡ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ ವರ್ಷದ ಆಯವ್ಯಯದಲ್ಲಿ ಪ್ರತಿ ವಾರ್ಡ್‍ಗೆ 60 ಲಕ್ಷ ರೂ. ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿಡಲಾಗಿತ್ತು. ಇದನ್ನು ಮುಂದುವರಿಸಿಕೊಂಡು ಹೋಗುವ ಅವಶ್ಯಕತೆ ಇದೆ ಎಂದು ಹೇಳಿದರು.
‘ಮೈ ಸಿಟಿ ಮೈ ಬಜೆಟ್’ ಅಭಿಯಾನವು ವಿವಿಧ ಎನ್.ಜಿ.ಒ, ಆರ್.ಡಬ್ಲ್ಯೂ.ಎಗಳು ಸೇರಿದಂತೆ 40ಕ್ಕೂ ಹೆಚ್ಚು ಸಂಸ್ಥೆಗಳ ಸಹಯೋಗದಲ್ಲಿ ಮಾರ್ಚ್ 15 ರವರೆಗೆ ನಡೆಯಲಿದೆ. ಬಜೆಟ್ ವಾಹನವು ನಗರದ ಎಲ್ಲ ವಾರ್ಡ್‍ಗಳಲ್ಲಿ ಸಂಚರಿಸಿ ನಾಗರಿಕರಿಂದ ಸಲಹೆಗಳನ್ನು ಸಂಗ್ರಹಿಸಲಿದೆ. ಇದಲ್ಲದೆ ವೆಬ್‌ಸೈಟ್ http://mycitymybudget.in/ ಗೆ ನಾಗರಿಕರು ಭೇಟಿ ನೀಡಿ ಅಭಿಪ್ರಾಯಗಳನ್ನು ತಿಳಿಸಬಹುದು ಎಂದರು. ಇದನ್ನೂ ಓದಿ: ನಯನತಾರಾ ಜೊತೆಗಿನ ಫೋಟೋ ಹಂಚಿಕೊಂಡ ಸಮಂತಾ – ಕುಚಿಕು ಗೆಳೆತಿಯರ ಫೋಟೋ ಕಹಾನಿ
ಬೆಂಗಳೂರು: ಅನಧಿಕೃತ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಬ್ಯಾನರ್, ಫ್ಲೆಕ್ಸ್, ಪೋಸ್ಟರ್ಸ್, ಬಂಟಿಂಗ್ಸ್ ಅಳವಡಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್‌ಐಆರ್ ದಾಖಲಿಸಲು ಎಲ್ಲಾ ವಲಯದ ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: 9 ಎಫ್‍ಐಆರ್, 7 ಮಂದಿ ಅರೆಸ್ಟ್ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ
ಪಾಲಿಕೆಯ ಎಲ್ಲಾ 8 ವಲಯಗಳಲ್ಲಿಯೂ ಮುಖ್ಯ ಇಂಜಿನಿಯರ್‌ಗಳ ನೇತೃತ್ವದ ತಂಡವು ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್ಸ್, ಫ್ಲೆಕ್ಸ್ , ಪೋಸ್ಟರ್ಸ್, ಬಂಟಿಂಗ್ಸ್‌ಗಳ ತೆರವು ಕಾರ್ಯಾಚರಣೆ ತೀವ್ರಗತಿಯಲ್ಲಿ ನಡೆಯುತ್ತಿದೆ. ನಗರದಲ್ಲಿ ಇನ್ನು ಮುಂದೆ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸುವುದು ಕಂಡುಬಂದಲ್ಲಿ, ಕೂಡಲೇ ತಪ್ಪಿತಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಒಂದು ಟ್ವೀಟ್ ಎಡವಟ್ – ಶೇಷಾದ್ರಿಪುರಂ ಪೊಲೀಸರ ವಶದಲ್ಲಿ ಚೇತನ್
ಬೆಂಗಳೂರು: ಕೊರೊನಾ ಮೂರನೇ ಅಲೆಯನ್ನು ಎಲ್ಲರ ಸಹಾಯದಿಂದ ಯಶಸ್ವಿಯಾಗಿ ನಿಭಾಯಿಸಲಾಗಿದ್ದು, ನಮ್ಮ ಮುಂದಿನ ಗುರಿ ಭವಿಷ್ಯದಲ್ಲಿ ಸಂಭಾವ್ಯ ಅಲೆಗಳನ್ನು ಎದುರಿಸುವ ಬಗೆಗಿರಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.
ಪಾಲಿಕೆಯ ಕೋವಿಡ್-19 ತಜ್ಞರ ಸಮಿತಿಯೊಂದಿಗೆ ಇಂದು ನಡೆದ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಕ್ರಿಯಾಶೀಲ ಸಂಚಾರಿ ಟ್ರಯಾಜ್ ಘಟಕ ಮತ್ತು ಟೆಲಿ ಟ್ರಯಾಜ್ ಘಟಕ ನಿರ್ಮಿಸಲಾಗಿದೆ. ವೈದ್ಯರು ಮತ್ತು ಸಿಬ್ಬಂದಿ ತಂಡದ ನೆರವಿನಿಂದ ದಿನಕ್ಕೆ 3,000ಕ್ಕೂ ಹೆಚ್ಚು ಕೊರೊನಾ ಸೋಂಕಿತರಿಗೆ ಅವರವರ ಮನೆಯಲ್ಲಿ ಟ್ರಯಾಜ್ ಮಾಡಲಾಗುತ್ತಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ತಗ್ಗುತ್ತಿದ್ದು, ಎಲ್ಲರ ಶ್ರಮದಿಂದ ಕೊರೊನಾ ಮೂರನೇ ಅಲೆಯನ್ನು ನಿಭಾಯಿಸಲಾಗುತ್ತಿದೆ. ಮುಂದೇನಾದರೂ ಹೊಸ ಅಲೆಗಳು ಬಂದಲ್ಲಿ, ಎದುರಿಸುವ ಬಗ್ಗೆ ನಾವು ಸಿದ್ಧರಾಗಿರಬೇಕಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ
ನಗರದಲ್ಲಿ ಮೂರನೇ ಅಲೆಯ ಬಗ್ಗೆ ಜನರಲ್ಲಿನ ಭಯ ಹೋಗಲಾಡಿಸಿ ಅವರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಾಯಿತು. ಪರಿಸ್ಥಿತಿಯನ್ನು ಎದುರಿಸುವ ಬಗ್ಗೆ ಗಮನಹರಿಸಲಾಯಿತು. ಲಸಿಕಾಕರಣವನ್ನೂ ಮಾಡಲಾಗುತ್ತಿದೆ. ಶೀಘ್ರದಲ್ಲಿಯೇ ಮುನ್ನೆಚ್ಚರಿಕೆ ಡೋಸ್ ಲಸಿಕಾಕರಣವು ನಿರ್ದೇಶಿತ ಗುರಿ ತಲುಪಲಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಕಡಿಮೆಯಿದೆ ಎಂದರು.
ಜನವರಿ ತಿಂಗಳಲ್ಲಿ ಶೇ. 1.8 ಸಕ್ರಿಯ ಪ್ರಕರಣಗಳಿದ್ದವು. ಅದರಲ್ಲಿ ಹೆಚ್ಚಿನವರು 60 ವರ್ಷ ಮೇಲ್ಪಟ್ಟವರು. ನಗರದಲ್ಲಿ ಕೊರೊನಾ ಸೋಂಕು ದೃಢಪಟ್ಟು ಐಸಿಯುನಲ್ಲಿ ದಾಖಲಾಗುವ ಎಲ್ಲ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ಸೂಚಿಸಲಾಗಿದೆ. ಈ ಸಂಬಂಧ ಗಂಭೀರ ಪ್ರಕರಣಗಳ ಪೈಕಿ ಆಸ್ಪತ್ರೆಗೆ ದಾಖಲಾಗಿರುವವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‍ಗೆ ಕಳುಹಿಸಲಾಗುತ್ತದೆ. ಪ್ರಸ್ತುತ ಅಂತಹ ಎಲ್ಲ ಮಾದರಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ರನ್ನು ನಾವು ಬೆಂಬಲಿಸುತ್ತೇವೆ: ಮಮತಾ ಬ್ಯಾನರ್ಜಿ
ಸಭೆಯಲ್ಲಿ ವಿಶೇಷ ಆಯುಕ್ತ ಡಾ.ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್, ಕೋವಿಡ್ ತಜ್ಞರ ಸಮಿತಿ ಸದಸ್ಯರು ಹಾಗೂ ಇನ್ನಿತರು ಉಪಸ್ಥಿತರಿದ್ದರು.
ಬೆಂಗಳೂರು: ಜೆರೋಧಾ ಪ್ರಾಯೋಜಕತ್ವ, ಮಂತ್ರ 4 ಚೇಂಜ್ ಹಾಗೂ ಸೂರ್ಯ ಫೌಂಡೇಶನ್ ಸಂಸ್ಥೆಗಳು ಬಿಬಿಎಂಪಿ ಸಹಯೋಗದೊಂದಿಗೆ ದಕ್ಷಿಣವಲಯ ವ್ಯಾಪ್ತಿಗೆ ಒಂದು ಸಂಚಾರಿ ಪರೀಕ್ಷಾ ಘಟಕ(ಮೊಬೈಲ್ ಟೆಸ್ಟಿಂಗ್ ಯುನಿಟ್-ಎಂಟಿಯು)ವನ್ನು ಪಾಲಿಕೆಗೆ ಹಸ್ತಾಂತರಿಸಿದೆ. ಮುಖ್ಯ ಆಯುಕ್ತರು ಗೌರವ್ ಗುಪ್ತ ಅವರು ಇಂದು ಎಂಟಿಯುಗೆ ಚಾಲನೆ ನೀಡಿದರು.
ಈ ಸಂಚಾರಿ ಪರೀಕ್ಷಾ ಘಟಕವು ಪಾಲಿಕೆಯ ದಕ್ಷಿಣ ವಲಯದ ವಾರ್ ರೂಂ ಮತ್ತು ಸಂಚಾರಿ ಟ್ರಯಾಜ್ ಘಟಕದೊಂದಿಗೆ ಸಂಪರ್ಕ ಹೊಂದಿರುತ್ತದೆ. ವಾರ್ ರೂಂನಲ್ಲಿ ಸ್ವೀಕರಿಸಲ್ಪಡುವ ಕರೆಗಳಿಗೆ ಅನುಸಾರವಾಗಿ ಸಂಚಾರಿ ಪರೀಕ್ಷಾ ಘಟಕವು ವಲಯದ 44 ವಾರ್ಡ್‍ಗಳಲ್ಲಿಯೂ 24/7 ಕಾರ್ಯನಿರ್ವಹಿಸಲಿದ್ದು, ದಕ್ಷಿಣ ವಲಯದಲ್ಲಿ ಯಶಸ್ವಿಯಾದರೆ ಉಳಿದ 7 ವಲಯಗಳಿಗೂ ಒಂದೊಂದು ಸಂಚಾರಿ ಪರೀಕ್ಷಾ ಘಟಕ ನಿಯೋಜನೆ ಮಾಡಲಾಗುವುದು. ಇದನ್ನೂ ಓದಿ: ಮಹಿಳಾ ಉದ್ದೇಶಿತ ಆಯವ್ಯಯದಡಿ ಮುದ್ರಣ, ವಿದ್ಯುನ್ಮಾನ ಮಾಧ್ಯಮ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ
ಈ ಸಂಚಾರಿ ಪರೀಕ್ಷಾ ಘಟಕದಲ್ಲಿ ಓರ್ವ ಚಾಲಕ ಮತ್ತು ಓರ್ವ ಪ್ಯಾರಾಮೆಡಿಕ್ ಇರಲಿದ್ದು, ಪ್ಯಾರಾಮೆಡಿಕ್ ಸಿಬ್ಬಂದಿಯು ರ‍್ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡುತ್ತಾರೆ. ಪಾಸಿಟಿವ್ ದೃಢಪಟ್ಟಲ್ಲಿ ವ್ಯಕ್ತಿಗೆ ಪಾಲಿಕೆಯಿಂದ ಕರೆ ಬರುತ್ತದೆ. ಪ್ರಕರಣದ ಗಂಭೀರತೆಯ ಆಧಾರದ ಮೇಲೆ, ಟ್ರಯಾಜ್ ಬಳಿಕ ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತದೆ.
ಬೆಂಗಳೂರು: ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಇಬ್ಬರಲ್ಲಿ ದೃಢಪಟ್ಟಿದ್ದು, ಒಬ್ಬರ ಸಂಪರ್ಕಿತರ ಟ್ರಾವೆಲ್ ಹಿಸ್ಟರಿ ಲಭ್ಯವಾಗಿಲ್ಲ. ಹೀಗಾಗಿ ಹಲವರಲ್ಲಿ ರೂಪಾಂತರಿ ಇರುವ ಸಾಧ್ಯತೆ ಇದೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಎರಡು ಪ್ರಕರಣ ದೃಢಪಟ್ಟಿರುವ ಬಗ್ಗೆ ಭಾರತ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಓಮಿಕ್ರಾನ್ ದೃಢಪಟ್ಟ 66 ವಯಸ್ಸಿನ ಒಬ್ಬ ವ್ಯಕ್ತಿ ನ.20ಕ್ಕೆ ಬೆಂಗಳೂರಿಗೆ ಬಂದಿದ್ದರು. ಪರೀಕ್ಷೆ ವೇಳೆ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಅವರ ಸ್ವಾಬ್ ಅನ್ನು ಜಿನೋಟಿಕ್ ಲ್ಯಾಬ್‌ಗೆ ಕಳಿಸಲಾಗಿತ್ತು. ಒಮಿಕ್ರಾನ್ ಎಂದು ದೃಢಪಟ್ಟಿದೆ. ಅವರನ್ನು ಹೋಟೆಲ್‌ನಲ್ಲಿ ಕ್ವಾರಂಟೈನ್‌ಲ್ಲಿರಿಸಲಾಗಿತ್ತು. ಮೊದಲ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವೀತಿಯ ಸಂಪರ್ಕದಲ್ಲಿದ್ದವರ ಮೇಲೆ ನಿಗಾವಹಿಸಲಾಗಿದೆ. ಎಲ್ಲರ ವರದಿಯೂ ನಗೆಟಿವ್ ಬಂದಿದೆ ಎಂದು ತಿಳಿಸಿದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತರ ಸಂಪರ್ಕದಲ್ಲಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್: ಸುಧಾಕರ್
ಎರಡನೇ ವ್ಯಕ್ತಿ 46 ವಯಸ್ಸಿನವರಾಗಿದ್ದು, ನ.24 ರಂದು ಬೆಂಗಳೂರಿಗೆ ಆಗಮಿಸಿದ್ದರು. ಮೊದಲು ಹೋಂ ಐಸೋಲೇಷನ್ ಮಾಡಲಾಗಿತ್ತು. ಅ ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿ 12 ಹಾಗೂ ದ್ವಿತೀಯ ಸಂಪರ್ಕದಲ್ಲಿ 205 ಮಂದಿ ಇದ್ದಾರೆ ಎಂದು ಗುರುತಿಸಲಾಗಿದೆ. ಅದರಲ್ಲಿ 5 ಜನರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಈಗ 5 ಜನರ ಸ್ವಾಬ್ ಅನ್ನು ಜಿನೋಟಿಕ್ ಲ್ಯಾಬ್‌ಗೆ ಕಳಿಸಲಾಗಿದೆ. ಆದರೆ ಈ ವ್ಯಕ್ತಿಯ ಟ್ರಾವೆಲ್ ಹಿಸ್ಟರಿ ಇಲ್ಲ. ಅತನಿಗೆ ಸ್ಥಳೀಯವಾಗಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಮೂವರು ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಇಬ್ಬರಿಗೆ ಪಾಸಿಟಿವ್ ಬಂದಿದೆ. ಓಮಿಕ್ರಾನ್ ದೃಢಪಟ್ಟಿರುವ ಎರಡನೇ ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ಆರೋಗ್ಯವಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಬೌರಿಂಗ್ ಆಸ್ಪತ್ರೆಯಲ್ಲಿ ಒಮಿಕ್ರಾನ್ ರೂಪಾಂತರಿ ವೈರಸ್ ಸೋಂಕಿತರಿಗೆ ಬೆಡ್ ಮೀಸಲಿಡಲಾಗಿದೆ. ಓಮಿಕ್ರಾನ್ ಸೋಂಕಿತರು ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಅವರ ಸಂಪರ್ಕದಲ್ಲಿದ್ದು, ಕೋವಿಡ್ ಪಾಸಿಟಿವ್ ಬಂದವರ ಸ್ವಾಬ್ ಅನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಗಣೇಶ ಹಬ್ಬ ಆಚರಣೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಸಭೆಯಲ್ಲಿ ಕೊರೊನಾ ಲಸಿಕೆ ಮತ್ತು ಹಬ್ಬಗಳ ನಡುವೆ ವೈರಸ್ ನಿಯಂತ್ರಣ ಕುರಿತು ಚರ್ಚಿಸಲಾಗುತ್ತದೆ. ಈಗಾಗಲೇ ಹೊರಡಿಸಿರುವ ಮಾರ್ಗಸೂಚಿ ಪುನರ್ ಪರಿಶೀಲಿಸಲು ಸರ್ಕಾರಕ್ಕೆ ಹಕ್ಕಿದೆ, ಈ ಬಗ್ಗೆ ಪಾಲಿಕೆ ತನ್ನ ಅಭಿಪ್ರಾಯ ಸ್ಪಷ್ಟಪಡಿಸಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಗಣೇಶ ಹಬ್ಬ ಆಚರಣೆ ವಿಚಾರವಾಗಿ ಇಂದು ಸಿಎಂ ಸಭೆಯಲ್ಲಿ ಎಲ್ಲ ಚರ್ಚೆ ಆಗಲಿದೆ. ಸದ್ಯಕ್ಕಂತೂ ಈ ಹಿಂದೆ ನೀಡಿರುವ ಮಾರ್ಗಸೂಚಿ ಆಧಾರದಲ್ಲೇ ಎಲ್ಲ ಪಾಲನೆ ಆಗಲಿದೆ. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಮಾರುಕಟ್ಟೆ ಕ್ಲೋಸ್ ವಿಚಾರವೂ ಸದ್ಯಕ್ಕೆ ಇದೆಲ್ಲ ಸಾಧ್ಯವಿಲ್ಲ ಎನ್ನುತ್ತಾ, ಜನರು ಕೆಲವು ಗಂಟೆಗಳ ಕಾಲ ಮಾತ್ರ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಹಾಗಾಗಿ ಮಾರುಕಟ್ಟೆ ಕ್ಲೋಸ್ ವಿಚಾರ ಬಂದಿಲ್ಲ. ಜನರು ಮಾಸ್ಕ್ ಸರಿಯಾದ ಕ್ರಮದಲ್ಲಿ ಧರಿಸಿದರೆ ಹೆಚ್ಚು ಉಪಯುಕ್ತವಾಗಲಿದೆ. ಕಡೆಗೆ ಟಫ್ ರೂಲ್ಸ್ ಮಾತ್ರ ಜಾರಿಗೊಳಿಸಿದರೆ ಸಾಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಡ್ರಗ್ಸ್ ಕೇಸ್ – ಉದ್ಯಮಿ, ಸೆಲೆಬ್ರಿಟಿ, ಡಿಜೆ ಮನೆಗಳ ಮೇಲೆ ದಾಳಿ
ಕೊರೊನಾ ಲಸಿಕೆ ವಿಚಾರದಲ್ಲಿ ಹೊಸ ಆಲೋಚನೆಗಳಿವೆ. ಮನೆ-ಮನೆಗೆ ಲಸಿಕೆ ಎಂಬ ಆಲೋಚನೆ ಇದೆ. ಸದ್ಯಕ್ಕಂತೂ ಮಾರ್ಗಸೂಚಿ ಪ್ರಕಾರ ಮೆಡಿಕಲ್ ಸೆಂಟರ್ ನಲ್ಲಿ ಲಸಿಕೆ ಕೊಡಬೇಕು -ಮೆಡಿಕಲ್ ಎರ್ಮಜೆನ್ಸಿ ಅಟೆಂಡ್ ಮಾಡಬೇಕು ಅಂತ ಚರ್ಚೆ ಆಗಿದೆ. ಆದರೆ ಸದ್ಯ ಶೇ.75 ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ. ಶೇ.90 ರಷ್ಟು ಜನರಿಗೆ ಲಸಿಕೆ ನೀಡುವ ಲೆಕ್ಕಾಚಾರ ಇದೆ. ಈ ಹಂತದಲ್ಲಿ ಮನೆ ಮನೆ ಲಸಿಕೆ ಬಗ್ಗೆ ತಜ್ಞರು ಅಭಿಪ್ರಾಯ ಕೊಡಬೇಕಾಗಿದೆ ಎಂದರು.
ಕೆಲವೊಂದು ಕಾರ್ಮಿಕ ವರ್ಗ ವಾಸಿಸುವ ಕಡೆ ಅತಿ ಹೆಚ್ಚು ಲಸಿಕಾ ಕೇಂದ್ರ ಸ್ಥಾಪಿಸಬೇಕು ಎಂಬ ಚರ್ಚೆ ಇದೆ. ದುಡಿಯುವ ವರ್ಗದ ಜನರಿಗೆ ಬೆಳಗ್ಗೆಯೇ ಲಸಿಕೆ ನೀಡುವ ಲೆಕ್ಕಾಚಾರವಿದೆ. ಮುಂದೆ ಕೆಲಸ ಮುಗಿಸಿ ಬಂದ ನಂತರ ಲಸಿಕೆ ಕೊಡುವ ಬಗ್ಗೆಯೂ ಯೋಚನೆ ಆಗಿದೆ. ಕೆಲವೆಡೆ 24″ 7 ಲಸಿಕೆ ನೀಡಿಕೆ ಬಗ್ಗೆ ಚರ್ಚೆ ನಡೆದಿದೆ. ನಿನ್ನೆ 90 ಸಾವಿರ ಜನರಿಗೆ ಲಸಿಕೆ ನೀಡಲಾಗಿದೆ. ವೈರಸ್ ವೇರಿಯಂಟ್ ಬಗ್ಗೆ ಮಾಹಿತಿ ಇದೆ. ರೋಗ ನಿರೋಧಕ ಶಕ್ತಿ ಎಷ್ಟಿದೆ ಎಂಬ ಬಗ್ಗೆಯೂ ಗುರುತು ಮಾಡುವ ಕೆಲಸವೂ ನಡೆದಿದೆ. ಈ ಸಂಬಂಧಿತ ಫಲಿತಾಂಶ ಬರುತ್ತಿದೆ. ಡೆಲ್ಟಾ ಹಾಗೂ ಡೆಲ್ಟಾ+ ಸಂಬಂಧಿತ ಸ್ಟ್ರೇನ್ಸ್ ಸಂಬಂಧ ಜಿನೋಮಿಕ್ ಸಿಕ್ವೆನ್ಸ್ ನಡೆಯುತ್ತಲೇ ಇದೆ. ವ್ಯಾಕ್ಸಿನ್ ಹೆಚ್ಚಳದ ನಂತರ – ಎರಡನೇ ಅಲೆ ಹಿನ್ನೆಲೆಯಲ್ಲಿ ಬಹಳಷ್ಟು ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚು ಕಂಡು ಬಂದಿದೆ. ಇಷ್ಟೇ ಸಂಖ್ಯೆಯ ಹೆಚ್ಚಳ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುತ್ತದೆ ಎಂದರು. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ
ಐಡೆನ್ ಸಿಟಿ ಕಾರಿಡಾರ್ ಕೆಆರ್‍ಡಿಸಿಎಲ್‍ಗೆ ನೀಡಿ ವಿಳಂಬ ವಿಚಾರದ ಬಗ್ಗೆ ಮಾತನಾಡಿ, ಪಾಲಿಕೆ ಹಿಂದಿನ ಆಯುಕ್ತ ರಸ್ತೆ ನಿರ್ವಹಣೆ ಬೇರೆ ಕಡೆ ನೀಡಿದ್ದಕ್ಕೆ ಅಸಮಾಧಾನ ಹೊರಹಾಕಿದರು. ಆದರೆ ಇದರ ಬಗ್ಗೆ ನಾನೇನು ಹೇಳುವುದಿಲ್ಲ. ಸ್ವಂತ ಅಭಿಪ್ರಾಯವೂ ಹೇಳಲ್ಲ. ಬೆಂಗಳೂರಿನ ಹಲವು ರಸ್ತೆಗಳ ನಿರ್ವಹಣೆ ಪಾಲಿಕೆ ಮಾಡುತ್ತಲೇ ಇದೆ. ಅದಕ್ಕಾಗಿಯೇ ಅಧಿಕಾರಿಗಳ ತಂಡವೂ ಇದೆ. ಇದಕ್ಕಾಗಿ ವಿಶೇಷವಾಗಿ ಯುಟಿಲಿಟಿಸ್ ವಿಚಾರವಾಗಿ ಬೆಸ್ಕಾಂ, ಜಿಡಬ್ಲ್ಯೂಎಸ್‍ಎಸ್‍ಬಿ ಎಲ್ಲವನ್ನೂ ಹಿಡಿತದಲ್ಲಿ ಇಟ್ಟು ಕೆಲಸ ಮಾಡಿಸುವ ಲೆಕ್ಕ ಪಾಲಿಕೆಗೆ ಇದೆ. ರಸ್ತೆ ನಿರ್ವಹಣೆಗೆ ಬೇರೆ ಸಂಸ್ಥೆ ಬರುವುದಾದರೆ ಇದನ್ನು ಕಲಿಯಲೇ ಬೇಕಾಗುತ್ತದೆ ಎಂದರು.