Tag: ಗೌರವ ಡಾಕ್ಟರೇಟ್

  • ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ನ್ನಡದ ಹೆಸರಾಂತ ನಟ, ಮೊನ್ನೆಯಷ್ಟೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ (Sandalwood) ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

    ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಣಿ ‌ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಟ ಅನಂತ್ ನಾಗ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

    ನಟ ಅನಂತ್ ನಾಗ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್

    ನ್ನಡದ ಹೆಸರಾಂತ ನಟ ಅನಂತ್ ನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮೂವರು ಸಾಧಕರಿಗೆ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಿಸಿದೆ. ಸಿನಿಮಾ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗಾಗಿ ಅನಂತ್ ನಾಗ್, ಹೆಸರಾಂತ ಶಹನಾಯಿ ವಾದಕ, ಬಿಸ್ಮಿಲ್ಲಾ ಖಾನ್ ಶಿಷ್ಯರಾದ ಎಸ್. ಬಲ್ಲೇಶ್ ಭಜಂತ್ರಿ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಅಪಾರ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಈ ಸಾಲಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ ಎಂದು ಕುಲಪತಿ ಪ್ರೊ. ನಿರಂಜನ ವಾನಳ್ಳಿ ತಿಳಿಸಿದ್ದಾರೆ.

    ಕೋಲಾರದ ನಂದಿನಿ ಪ್ಯಾಲೇಸ್ ನಲ್ಲಿ ಈ ಗೌರವ ಪ್ರದಾನ ಸಮಾರಂಭವು ಇದೇ ಶುಕ್ರವಾರ ನಡೆಯಲಿದ್ದು, ಘಟಿಕೋತ್ಸವದ ಸಮಾರಂಭದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪದವಿ ನೀಡಿ ಗೌರವಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ ನಾರಾಯಣ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ:ರಾಮ್ ಗೋಪಾಲ್ ವರ್ಮಾ ‘ಲಡಕಿ’ ನೋಡಿ ಬೆಚ್ಚಿ ಬಿದ್ದರಂತೆ ಸೆನ್ಸಾರ್ ಟೀಮ್

    ಇದೇ ಸಂದರ್ಭದಲ್ಲಿ ವಿಶ್ವವಿದ್ಯಾನಿಲಯದ ಮೊದಲ ಘಟಿಕೋತ್ಸವ ನಡೆಯಲಿದ್ದು, ವಿವಿಧ ವಿಷಯಗಳಲ್ಲಿ ರಾಂಕ್ ಪಡೆದಿರುವ 41 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಕೂಡ ನಡೆಯಲಿದೆ. ಇದು ಈ ವಿವಿಯ ಮೊದಲ ಘಟಿಕೋತ್ಸವವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕ್ರೇಜಿಸ್ಟಾರ್ ರವಿಚಂದ್ರನ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಕ್ರೇಜಿಸ್ಟಾರ್ ರವಿಚಂದ್ರನ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ

    ಕ್ರೇಜಿಸ್ಟಾರ್ ರವಿಚಂದ್ರನ್ ಕಲಾವಿದನಾಗಿ ಸಾಕಷ್ಟು ವರ್ಷಗಳಿಂದ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಹಲವಾರು ಪಾತ್ರಗಳಿಂದ ಅಭಿಮಾನಿಗಳನ್ನು ರಂಜಿಸಿದ್ದಾರೆ. ನಟ ರವಿಚಂದ್ರನ್ ಅವರ ಸಾಧನೆಯನ್ನು ಗುರುತಿಸಿ ಇಂದು ಬೆಂಗಳೂರು ವಿಶ್ವವಿದ್ಯಾನಿಲಯದ ಚೊಚ್ಚಲ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.

    ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು. ಇನ್ನು 85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟ ರವಿಚಂದ್ರನ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ. ಇದನ್ನು ಓದಿ:ಕೆಜಿಎಫ್-2 ರಿಲೀಸ್ ಫಿವರ್: ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಬುಕ್ ಮಾಡಿದ ಯಶ್ ಮಹಿಳಾ ಫ್ಯಾನ್ಸ್

    ಇನ್ನು ಕಾರ್ಯಕ್ರಮದಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ವಿ. ರವಿಚಂದ್ರನ್, ಸಮಾಜ ಸೇವೆಗಾಗಿ ಎಂ. ಆರ್ ಜೈ ಶಂಕರ್, ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸತ್ಯನಾರಾಯಣ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಇನ್ನು ಈ ವೇಳೆ ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್ ಪತ್ನಿ ಸುಮತಿ, ಮಕ್ಕಳಾದ ವಿಕ್ರಮ್, ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು. ಈ ಸುದ್ದಿ ಕೇಳಿ ಕ್ರೇಜಿಸ್ಟಾರ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಪುನೀತ್‌ಗೆ  ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಸಮಾಜಮುಖಿ ಕೆಲಸಗಳು ಮತ್ತು ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಆಧರಿಸಿ, ಮೈಸೂರು ವಿವಿ ಈ ಗೌರವನ್ನು ನೀಡಿದೆ.

  • ಮಂತ್ರಾಲಯದ ಶ್ರೀಗಳಿಗೆ ಗುಲ್ಬರ್ಗ ವಿವಿ ಗೌರವ ಡಾಕ್ಟರೇಟ್

    ಮಂತ್ರಾಲಯದ ಶ್ರೀಗಳಿಗೆ ಗುಲ್ಬರ್ಗ ವಿವಿ ಗೌರವ ಡಾಕ್ಟರೇಟ್

    ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್‍ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ ಮಾಡಲಾಗಿದೆ.

    ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು.

    ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದೆ. ಅಪಾರ ಪಾಂಡಿತ್ಯ ಹೊಂದಿರುವ ಶ್ರೀಗಳು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಜೊತೆಗೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡಿದ್ದಾರೆ. ಅವರ ಈ ಸೇವೆ ಗುರತಿಸಿ ಆಯ್ಕೆ ಮಾಡಲಾಗಿದೆ ಅಂತ ಗುಲ್ಬರ್ಗ ವಿವಿ ಸಿಂಡಿಕೇಟ್ ಸದಸ್ಯ ಡಾ.ಶರಣಬಸವ ಪಾಟೀಲ್ ಜೋಳದಹೆಡಗಿ ತಿಳಿಸಿದ್ದಾರೆ.

  • ನೆಲಮಂಗಲದ ಬಿ.ರಂಗನಾಥ್ ಸಾಮಾಜಿಕ ಸೇವೆಗೆ ಒಲಿದ ಗೌರವ ಡಾಕ್ಟರೇಟ್

    ನೆಲಮಂಗಲದ ಬಿ.ರಂಗನಾಥ್ ಸಾಮಾಜಿಕ ಸೇವೆಗೆ ಒಲಿದ ಗೌರವ ಡಾಕ್ಟರೇಟ್

    ನೆಲಮಂಗಲ: ಸಾಮಾಜಿಕ ಕೆಲಸಗಳಲ್ಲಿ ಸದಾ ಮುಂದಿರುವ ನೆಲಮಂಗಲ ತಾಲೂಕು ಪಂಚಾಯತಿಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬಿ.ರಂಗನಾಥ್ ಅವರಿಗೆ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

    ಗ್ಲೋಬಲ್ ಕೌನ್ಸಿಲ್ ಫಾರ್ ಪ್ರೋಫೆಶನಲ್ ಎಜುಕೇಶನ್ ಮಿಷನ್ ವತಿಯಿಂದ ರಂಗನಾಥ್ ಅವರ ಸಾಮಾಜಿಕ ಕಳಕಳಿಯನ್ನು ಗುರುತಿಸಿ ಈ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ನೀಡಲಾಗಿದೆ. ಬಿ.ರಂಗನಾಥ್ ಅವರು ಹಲವು ವರ್ಷಗಳಿಂದ ಸಾಮಾಜಿಕ ಸೇವೆಗಳಾದ ದೀನದಲಿತರ ಉದ್ದಾರ, ಸಾಮಾಜಿಕ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.

    ಈ ವೇಳೆ ಪಬ್ಲಿಕ್ ಡಿಜಿಟಲ್ ವಾಹಿನಿಯೊಂದಿಗೆ ಮಾತನಾಡಿದ ಅವರು, ಗೌರವ ಡಾಕ್ಟರೇಟ್ ಬಂದಿರುವುದು ಸಂತೋಷವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ ಕಾರ್ಯಗಳಲ್ಲಿ ನೆರವಾಗುವ ಉದ್ದೇಶವನ್ನು ಹೊಂದಿದ್ದೇವೆ. ಈ ಪ್ರಶಸ್ತಿ ಲಭಿಸಿರುವುದು ನನ್ನ ಸಾಧನೆಗಿಂತ, ಸಾಮಾಜಿಕ ಜೀವನದಲ್ಲಿ ಅಳಿಲು ಸೇವೆ ಗುರುತಿಸಿರುವುದು ಬಹಳ ಸಂತೋಷವಾಗಿದೆ. ತಾಲೂಕು ಪಂಚಾಯಿತಿಯಲ್ಲಿ ಹಲವಾರು ಕಾರ್ಯ ಮಾಡಿದ್ದೇನೆ. ಈಗ ಪ್ರಶಸ್ತಿ ಬಂದ ಇನ್ನಷ್ಟೂ ಜವಾಬ್ದಾರಿಯನ್ನು ಹೆಚ್ಚಿಸಿದೆ ಎಂದು ರಂಗನಾಥ್ ಹೇಳಿದ್ದಾರೆ.

  • ಕ್ರೇಜಿಸ್ಟಾರ್ ರವಿಚಂದ್ರನ್‍ಗೆ ಒಲಿದು ಬಂದ ಗೌರವ ಡಾಕ್ಟರೇಟ್

    ಕ್ರೇಜಿಸ್ಟಾರ್ ರವಿಚಂದ್ರನ್‍ಗೆ ಒಲಿದು ಬಂದ ಗೌರವ ಡಾಕ್ಟರೇಟ್

    ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಒಲಿದು ಬಂದಿದೆ.

    ಸಿಎಂಆರ್ ಯೂನಿವರ್ಸಿಟಿ ರವಿಚಂದ್ರನ್‍ವರಿಗೆ ಡಾಕ್ಟರೇಟ್ ಘೋಷಿಸಿದೆ. ನವೆಂಬರ್ 3ರಂದು ನಡೆಯುವ ದೊಡ್ಡ ಕಾರ್ಯಕ್ರಮದಲ್ಲಿ ಸಿಎಂಆರ್ ವಿಶ್ವವಿದ್ಯಾಲಯ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲು ಎಲ್ಲ ತಯಾರಿ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

    ಈ ಹಿಂದೆಯೇ ಚಿತ್ರರಂಗದಲ್ಲಿ ರವಿಚಂದ್ರನ್ ಅವರು ಮಾಡಿದ ಸೇವೆಗೆ ಗೌರವ ಡಾಕ್ಟರೇಟ್ ನೀಡಬೇಕು ಎಂದು ಅಭಿಮಾನಿಗಳು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದರು. ತಮ್ಮ ಬಹುದಿನದ ಆಸೆ ಈಡೇರಿತ್ತಿರುವುದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ.

    ಸ್ಯಾಂಡಲ್‍ವುಡ್‍ನಲ್ಲಿ ರವಿಚಂದ್ರನ್ ಅವರು ನಟ, ನಿರ್ದೇಶಕ, ನಿರ್ಮಾಪಕ, ಗೀತಾ ರಚನೆ, ಸಂಗೀತ, ಸಂಭಾಷಣೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಾಯಕ ನಟರಾಗಿ ಅಭಿನಯಿಸಿದ್ದಾರೆ.

    ಭಾರತೀಯ ಚಿತ್ರರಂಗದಲ್ಲಿ ವರನಟ ರಾಜ್‍ಕುಮಾರ್ ಅವರು ಮೊದಲು ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಆ ಬಳಿಕ ವಿಷ್ಣುವರ್ಧನ್, ಅಂಬರೀಶ್, ಶಿವರಾಜ್ ಕುಮಾರ್ ಸೇರಿದಂತೆ ಹಲವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಸದ್ಯ ಈ ಸಾಲಿಗೆ ಈಗ ರವಿಚಂದ್ರನ್ ಅವರು ಕೂಡ ಸೇರ್ಪಡೆಯಾಗಿದ್ದಾರೆ.

  • ಭೀಮಾತೀರದ ಹಂತಕನಿಗೆ ಸಿಕ್ತು ಗೌರವ ಡಾಕ್ಟರೇಟ್

    ಭೀಮಾತೀರದ ಹಂತಕನಿಗೆ ಸಿಕ್ತು ಗೌರವ ಡಾಕ್ಟರೇಟ್

    ವಿಜಯಪುರ: ಭೀಮಾತೀರದ ಹಂತಕ ಮಹದೇವ ಸಾಹುಕಾರನಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ.

    ಏಷಿಯನ್ ಇಂಟರನ್ಯಾಶನಲ್ ಇಂಡೋನೇಷಿಯಾ ಯುನಿವರ್ಸಿಟಿಯವರು ಖುದ್ದಾಗಿ, ಮಹದೇವ ಸಾಹುಕಾರನ ಸ್ವಗ್ರಾಮವಾದ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರಿನ ಗ್ರಾಮಕ್ಕೆ ತೆರಳಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿದ್ದಾರೆ.

    ಮಹದೇವ ಸಾಹುಕಾರ ಒಡೆತನದ ಭೈರವನಾಥ ಶಿಕ್ಷಣ ಸಂಸ್ಥೆಯಿಂದ ಬಡಮಕ್ಕಳಿಗೆ ಶಿಕ್ಷಣ ಮತ್ತು ಹಲವು ಸಾಮಾಜಿಕ ಸೇವೆಯನ್ನು ಗುರುತಿಸಿದ ಏಷಿಯನ್ ಇಂಟರನ್ಯಾಶನಲ್ ಇಂಡೋನೇಷಿಯಾ ಯುನಿವರ್ಸಿಟಿಯ ಕರ್ನಾಟಕದ ಸಂಯೋಜಕ ಡಾ. ರಾಜು ರೋಖಡೆಯವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ.

    ಭೀಮಾ ತೀರದ ಹಂತದ ಧರ್ಮರಾಜ ಚಡಚಣ ನಕಲಿ ಎನಕೌಂಟರ್ ಹಾಗೂ ಆತನ ತಮ್ಮ ಗಂಗಾಧರ ಚಡಚಣ ನಿಗೂಢ ಕೊಲೆ ಆರೋಪ ಈ ಎರಡೂ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಮಹಾದೇವ ಸಾಹುಕಾರ ಭೈರಗೊಂಡ ಸೇರಿ ಮೂವರಿಗೆ ಏಪ್ರಿಲ್ ತಿಂಗಳಿನಲ್ಲಿ ಕಲಬುರಗಿ ಸಂಚಾರಿ ಹೈಕೋರ್ಟ್ ಪೀಠ ಜಾಮೀನು ನೀಡಿತ್ತು.

  • ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಿಎಂ

    ಗೌರವ ಡಾಕ್ಟರೇಟ್ ಪದವಿಯನ್ನು ನಿರಾಕರಿಸಿದ ಸಿಎಂ

    ಬೆಂಗಳೂರು: ಮೈಸೂರು ವಿಶ್ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಬೇಕೆಂಬ ಶಿಫಾರಸ್ಸನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

    ಸಿಎಂ ಸಿದ್ದರಾಮಯ್ಯಗೆ ಮೈಸೂರು ವಿಶ್ವ ವಿದ್ಯಾಲಯ ಗೌರವ ಡಾಕ್ಟರೇಟ್ ನೀಡುವ ಪ್ರಸ್ತಾಪವನ್ನ ಸಿದ್ದರಾಮಯ್ಯ ಅವರು ತಿರಸ್ಕರಿಸಿದ್ದಾರೆ ಎಂದು ಕಚೇರಿ ಮೂಲಗಳು ತಿಳಿಸಿವೆ.

    2018ನೇ ಸಾಲಿನ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿದ್ದರಾಮಯ್ಯ ಅವರಿಗೆ ಗೌರವ ಡಾಕ್ಟರೇಟ್ ನೀಡುವಂತೆ ವಿವಿಯ ಸಿಂಡಿಕೇಟ್ ಸದಸ್ಯ ಎಂಎಸ್‍ಎಸ್ ಕುಮಾರ್ ಅವರು ವಿವಿ ಕುಲಪತಿಗೆ ಮನವಿ ಮಾಡಿದ್ದರು.

    ಸಮಾಜದಲ್ಲಿ ಗಣ್ಯವ್ಯಕ್ತಿಗಳಿಗೆ ನೀಡುವ ಗೌರವ ಡಾಕ್ಟರೇಟ್ ಪದವಿಗೆ ಸಿದ್ದರಾಮಯ್ಯ ಅವರು ಅರ್ಹರಿದ್ದಾರೆ. ಅವರು ಇದೇ ವಿವಿಯಲ್ಲಿ ಪದವಿ ಕೂಡ ಪಡೆದಿದ್ದಾರೆ. ಮೈಸೂರಿನಿಂದ ಹೋಗಿ ರಾಜ್ಯದ ಚುಕ್ಕಾಣಿ ಹಿಡಿದು ಉತ್ತಮ ಆಡಳಿತ ನಡೆಸಿದ್ದಾರೆ. ಇಂಥವರಿಗೆ ಡಾಕ್ಟರೇಟ್ ನೀಡಿದರೆ ಮೈಸೂರು ವಿವಿಯ ಘನತೆ ಹೆಚ್ಚಲಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯನವರಿಗೆ ಈ ಸಾಲಿನ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು ಮಾಡುತ್ತಿದ್ದೇನೆ ಎಂದು ಸಿಂಡಿಕೇಟ್ ಸದಸ್ಯ ಕುಮಾರ್ ಪತ್ರದಲ್ಲಿ ವಿವರಿಸಿದ್ದರು.

    ಇದರ ಜೊತೆಗೆ ಇತರೆ ಸಿಂಡಿಕೇಟ್ ಸದಸ್ಯರು ಸುತ್ತೂರು ಶ್ರೀ, ಸಾಲು ಮರದ ತಿಮ್ಮಕ್ಕ, ಇಸ್ರೋ ಅಧ್ಯಕ್ಷ ಕಿರಣ್‍ಕುಮಾರ್ ಅವರಿಗೆ ಕೂಡ ಗೌರವ ಡಾಕ್ಟರೇಟ್ ನೀಡುವಂತೆ ಶಿಫಾರಸ್ಸು ಮಾಡಿದ್ದರು.

  • ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

    ಗೌರವ ಡಾಕ್ಟರೇಟನ್ನು ಸಿದ್ಧಗಂಗಾ ಕಿರಿಯ ಶ್ರೀ ನಿರಾಕರಿಸಿದ್ದು ಯಾಕೆ?

    ತುಮಕೂರು: ಇಲ್ಲಿನ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ಅನ್ನು ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಸಿದ್ಧಲಿಂಗ ಸ್ವಾಮೀಜಿ ನಿರಾಕರಿಸಿದ್ದಾರೆ.

    ವಿವಿಯ 10 ನೇ ಘಟಿಕೋತ್ಸವದ ಅಂಗವಾಗಿ ಇಬ್ಬರಿಗೆ ಡಾಕ್ಟರೇಟ್ ಪ್ರಧಾನ ಮಾಡಲು ವಿವಿ ಸಿಂಡಿಕೇಟ್ ನಿರ್ಧರಿಸಿತ್ತು. ಪವಾಡ ರಹಸ್ಯ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಮತ್ತು ಧಾರ್ಮಿಕ ಕ್ಷೇತ್ರದಿಂದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಆಯ್ಕೆ ಮಾಡಲಾಗಿತ್ತು.

    ಈ ಇಬ್ಬರಿಗೆ ಡಾಕ್ಟರೇಟ್ ನೀಡಲು ರಾಜ್ಯಪಾಲ ವಿಆರ್ ವಾಲಾ ಅನುಮೋದನೆ ಕೂಡಾ ಮಾಡಿದ್ದರು. ಆದರೆ ಧಾರ್ಮಿಕ ಕ್ಷೇತ್ರದಲ್ಲಿ ಸಾಧಿಸುವುದು ಇನ್ನೂ ಬಹಳಷ್ಟಿದೆ ಎಂಬ ಕಾರಣ ನೀಡಿ, ಸಿದ್ಧಲಿಂಗ ಸ್ವಾಮೀಜಿ ಡಾಕ್ಟರೇಟ್ ಪಡೆಯದಿರಲು ನಿರ್ಧರಿಸಿದ್ದಾರೆ.

    ಇತ್ತೀಚೆಗೆ ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಕ್ರಿಕೆಟ್ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿವಿ ಗೌರವ ಡಾಕ್ಟರೇಟ್ ನೀಡಲು ಮುಂದಾಗಿತ್ತು. ಆದರೆ ದ್ರಾವಿಡ್, ಕ್ರಿಕೆಟ್ ಆಡಿದ್ದಕ್ಕೆ ಡಾಕ್ಟರೇಟ್ ಪದವಿ ನೀಡುವುದು ಬೇಡ. ಕ್ರಿಕೆಟ್‍ಗೆ ಸಂಬಂಧಪಟ್ಟಂತೆ ಶೈಕ್ಷಣಿಕ ಪ್ರಬಂಧ ಮಂಡಿಸಿ ನಾನು ಡಾಕ್ಟರೇಟ್ ಪದವಿಯನ್ನು ಪಡೆಯುತ್ತೇನೆ ಎಂದು ವಿವಿಗೆ ತಿಳಿಸಿ ಗೌರವ ಡಾಕ್ಟರೇಟ್ ನಿರಾಕಸಿದ್ದರು.