Tag: ಗೌರಿಲಂಕೇಶ್

  • ಪತ್ರಕರ್ತೆ ಗೌರಿಲಂಕೇಶ್ ಹತ್ಯೆಗೈದ ಶಂಕಿತ ಶೂಟರ್ ಅರೆಸ್ಟ್!

    ಪತ್ರಕರ್ತೆ ಗೌರಿಲಂಕೇಶ್ ಹತ್ಯೆಗೈದ ಶಂಕಿತ ಶೂಟರ್ ಅರೆಸ್ಟ್!

    ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ಶಂಕಿತ ಆರೋಪಿಯನ್ನು ಬಂಧಿಸಿದೆ.

    ಸಿಂಧಗಿಯ ಹಿಂದೂ ಪರ ಸಂಘಟನೆಯ ಕಾರ್ಯಕರ್ತನಾದ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಲಾಗಿದೆ ಎಂದು ಎಸ್‍ಐಟಿ ಮೂಲಗಳು ತಿಳಿಸಿವೆ.

    ಸೋಮವಾರ ಮಹಾರಾಷ್ಟ್ರದಲ್ಲಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸಿದ್ದು, ಮೂರನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಾಗ್ಮೋರೆಯನ್ನು ನೀಡಿದೆ. ಈತ 5 ಅಡಿ ಒಂದು ಇಂಚು ಎತ್ತರ ಹೊಂದಿದ್ದು, 75-80 ಕೆಜಿ ತೂಕವನ್ನು ಹೊಂದಿದ್ದಾನೆ.

    ಕಳೆದ ವರ್ಷದ ಸೆಪ್ಟಂಬರ್ 5 ರಂದು ನಡೆದ ಗೌರಿ ಹತ್ಯೆಗೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳಾದ ನವೀನ್ ಕುಮಾರ್, ಅಮಿತ್, ಪ್ರವೀಣ್ ವಿಚಾರಣೆ ಮಾಡುತ್ತಿರುವ ಎಸ್‍ಐಟಿ ಪೊಲೀಸರು ಆರೋಪಿಗಳ ಹೇಳಿಕೆಯ ಆಧಾರದ ಮೇಲೆ ಕೆಲ ತಿಂಗಳಿನಿಂದ ಪರುಶುರಾಮ್ ವಾಗ್ಮೋರೆಯ ಚಲನವಲನಗಳ ಮೇಲೆ ನಿಗಾ ವಹಿಸಿದ್ದರು.

    ಪರಶುರಾಮ್ ಹೇಳಿಕೆ ಆಧರಿಸಿ ಮಂಗಳೂರಿನಲ್ಲಿ ನಿನ್ನೆ ಮತ್ತೊಬ್ಬನನ್ನು ಬಂಧಿಸಲಾಗಿದೆ. ಶಂಕಿತರನ್ನು ಬಂಧಿಸಿದ್ದರೂ ಪಿಸ್ತೂಲ್ ಯಾರ ಬಳಿ ಇದೆ ಎನ್ನುವುದು ತಿಳಿದು ಬಂದಿಲ್ಲ.

    ಸಿಸಿಟಿವಿ ದೃಶ್ಯಾವಳಿ ಆಧಾರದ ಎಸ್‍ಐಟಿ ನಾಲ್ವರು ಆರೋಪಿಗಳ ರೇಖಾಚಿಕತ್ರವನ್ನು ಬಿಡಿಸಿತ್ತು. ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದ ವಿಧಿ ವಿಜ್ಞಾನ ಪ್ರಯೋಗಾಲಯ 5.1 ಅಡಿ ಅಥವಾ 5.2 ಅಡಿ ಎತ್ತರ ಹಾಗೂ 70 ಕೆಜಿಯಷ್ಟು ತೂಕ ಇರುವ ವ್ಯಕ್ತಿಯಿಂದ ಶೂಟ್ ಆಗಿದೆ ಎಂದು ಹೇಳಿತ್ತು.

  • ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

    ಶೀಘ್ರವೇ ಗೌರಿ ಹತ್ಯೆ ಆರೋಪಿಗಳು ಅರೆಸ್ಟ್: ರಾಮಲಿಂಗಾರೆಡ್ಡಿ

    ಚಿಕ್ಕಬಳ್ಳಾಪುರ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ತನಿಖೆ ಬಹುತೇಕ ಮುಗಿದಿದ್ದು ಸದ್ಯದಲ್ಲೇ ಹಂತಕರನ್ನು ಬಂಧಿಸುತ್ತೇವೆಂದು ಗೃಹಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

    ಇಂದಿರಾ ನಮನ ಕಾರ್ಯಕ್ರಮದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಈ ಹಿಂದೆ ಕೂಡ ಸಾಕಷ್ಟು ಬಾರಿ ಹೇಳಿದ್ದೇನೆ. ತನಿಖೆ ಮಾಡಲಾಗಿದ್ದು, ಹಂತಕರು ಯಾರು ಅಂತ ತಿಳಿದಿದೆ. ಶೀಘ್ರದಲ್ಲೇ ಆರೋಪಿಗಳು ಯಾರು ಅಂತ ಪ್ರಕಟಿಸಲಾಗುತ್ತೆ. 100 ಕ್ಕೆ 100 ರಷ್ಟು ಹಂತಕರನ್ನ ಬಂಧಿಸುತ್ತೇವೆ. ಆರೋಪಿಗಳ ಬಂಧನಕ್ಕೆ ಇನ್ನೂ ಸ್ವಲ್ಪ ದಿನಗಳ ಕಾಲ ಕಾಯಬೇಕು ಎಂದರು.

    ರಾಜ್ಯದ 30 ಜಿಲ್ಲೆಗಳಲ್ಲೂ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಎಲ್ಲಾ ಅಗತ್ಯ ಕ್ರಮಗಳನ್ನ ಕೈಗೊಂಡಿದೆ ಎಂದು ಹೇಳಿದ್ದಾರೆ.

    https://youtu.be/L8QXSCaOqbM