Tag: ಗೌರಿ ಸಿನಿಮಾ

  • SIIMA Award | ನಟ ಸಮರ್ಜಿತ್‌ಗೆ ಡಬಲ್ ಪ್ರಶಸ್ತಿಗಳ ಧಮಾಕ

    SIIMA Award | ನಟ ಸಮರ್ಜಿತ್‌ಗೆ ಡಬಲ್ ಪ್ರಶಸ್ತಿಗಳ ಧಮಾಕ

    ಗೌರಿ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದ, ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಸಮರ್ಜಿತ್ ಲಂಕೇಶ್ (Samarjit Lankesh) ಅವರಿಗೆ ಎರಡು ಪ್ರಶಸ್ತಿಗಳು ಲಭಿಸಿವೆ. `ಗೌರಿ’ ಚಿತ್ರಕ್ಕಾಗಿ (Gowri Cinema) ಸೈಮಾ (SIIMA Award) ಅತ್ಯುತ್ತಮ ಚೊಚ್ಚಲ ನಟ ಪ್ರಶಸ್ತಿ ಹಾಗೂ ಅತ್ಯುತ್ತಮ ಉದಯೋನ್ಮುಖ ನಟನಿಗಾಗಿ ಲುಮಿಯರ್ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ ಸಮರ್ಜಿತ್.

    ಉದಯೋನ್ಮುಖ ನಟ ಸಮರ್ಜಿತ್ ಲಂಕೇಶ್ ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ಗರಿ ಸೇರಿಸಿದ್ದಾರೆ. ಸತತವಾಗಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸುವ ಮೂಲಕ ಭಾರತೀಯ ಚಿತ್ರರಂಗದ ಭರವಸೆಯ ಹೊಸ ಪ್ರತಿಭೆಗಳಲ್ಲಿ ಒಬ್ಬರಾಗಿ ಹೊರ ಹೊಮ್ಮಿದ್ದಾರೆ. ಇದೀಗ ಸಮರ್ಜಿತ್ ಬಾಲಿವುಡ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದನ್ನೂ ಓದಿ: ಮಲ್ಲಿಗೆ ಮುಡಿದ ನಟಿ ನವ್ಯಾಗೆ ಆಸ್ಟ್ರೇಲಿಯಾದಲ್ಲಿ 1 ಲಕ್ಷ ದಂಡ

    ದುಬೈನಲ್ಲಿ ನಡೆದ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025ರ ಸಮಾರಂಭದಲ್ಲಿ ಸಮರ್ಜಿತ್ ತಮ್ಮ ಪ್ರಥಮ ಚಿತ್ರ `ಗೌರಿ’ಯಲ್ಲಿನ ಅದ್ಭುತ ಅಭಿನಯಕ್ಕಾಗಿ ಅತ್ಯುತ್ತಮ ಚೊಚ್ಚಲ ನಟ (ಕನ್ನಡ) ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರ ಈ ಭರವಸೆಯ ಹೆಜ್ಜೆ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಇದನ್ನೂ ಓದಿ: `ಪುಷ್ಪ 3 ಬರೋದು ಪಕ್ಕಾ’..ಅಲ್ಲು ಅರ್ಜುನ್‌ ಗುಡ್ ನ್ಯೂಸ್ ಕೊಟ್ಟಿದ್ದೆಲ್ಲಿ?

     ದುಬೈನಲ್ಲಿ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ಸಮರ್ಜಿತ್ ಅವರು ಅವಾರ್ಡ್ ಹಿಡಿದು ವೇದಿಕೆಯಲ್ಲಿ ಸಂಭ್ರಮಿಸಿದ್ದಾರೆ.

  • ಮಹಾ ಕುಂಭಮೇಳದಲ್ಲಿ ಭಾಗಿಯಾದ ಬಿಗ್ ಬಾಸ್ ಸಾನ್ಯ ಅಯ್ಯರ್

    ಮಹಾ ಕುಂಭಮೇಳದಲ್ಲಿ ಭಾಗಿಯಾದ ಬಿಗ್ ಬಾಸ್ ಸಾನ್ಯ ಅಯ್ಯರ್

    ಪ್ರಯಾಗ್‌ರಾಜ್ ಮಹಾ ಕುಂಭಮೇಳದಲ್ಲಿ (Maha Kumbh Mela 2025) ದಿನದಿಂದ ದಿನಕ್ಕೆ ಭಕ್ತಸಾಗರ ಹರಿದು ಬರುತ್ತಿದೆ. ಅಪಾರ ಸಂಖ್ಯೆಯಲ್ಲಿ ಕುಂಭ ಮೇಳದಲ್ಲಿ ಜನ ಭಾಗಿಯಾಗುತ್ತಿದ್ದಾರೆ. ಹೀಗಿರುವಾಗ ‘ಬಿಗ್ ಬಾಸ್’ ಖ್ಯಾತಿಯ ಸಾನ್ಯ ಅಯ್ಯರ್ (Saanya Iyer) ಕೂಡ ಮಹಾ ಕುಂಭಮೇಳದಲ್ಲಿ ಭಾಗಿಯಾಗಿದ್ದಾರೆ. ಈ ಕುರಿತು ನಟಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

    ಸಾನ್ಯ ಪೋಸ್ಟ್‌ನಲ್ಲಿ, ಸಂಗಮದಲ್ಲಿ ಮೌನಿ ಅಮಾವಾಸ್ಯೆಯ ಶಾಹಿ ಸ್ನಾನವು ನನ್ನ ಅಂತರಂಗದಲ್ಲಿ ಹಲವು ವಿಷಯಗಳನ್ನು ಕಲಿಸಿದೆ. ನನಗೆ ಪುನರ್ಜನ್ಮವಲ್ಲದೆ ಬೇರೇನೂ ಅಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಮುಂದಿನ ಹೊಸ ಪ್ರಯಾಣಕ್ಕಾಗಿ ನನ್ನ ಎಲ್ಲಾ ಪಿತೃಗಳು, ಪೂರ್ವಜರಿಂದ ಆಶೀರ್ವಾದವನ್ನು ಪಡೆದಿದ್ದೇನೆ.

    ನಾವೆಲ್ಲರೂ ಮಾನವ ಜೀವನವನ್ನು ಅನುಭವಿಸುತ್ತಿರುವ ಆಧ್ಯಾತ್ಮಿಕ ಜೀವಿಗಳು, ನೀವೆಲ್ಲರೂ ಉನ್ನತ ಕ್ಷೇತ್ರಗಳಿಗೆ ಏರಬಹುದು.ನೀವು ನಿಜವಾಗಿಯೂ ಯಾರೆಂದು ನೋಡಬಹುದು ಎಂದು ನಾನು ಭಾವಿಸುತ್ತೇನೆ. ಭೂಮಿಯ ಮೇಲಿನ ನಿಮ್ಮ ಉದ್ದೇಶವು ಈಡೇರಲಿ. ಲೋಕ ಸಮಸ್ತಃ ಸುಖಿನೋ ಭವತು ಎಂದು ಬರೆದುಕೊಂಡಿದ್ದಾರೆ.

    ಅಂದಹಾಗೆ, ‘ಬಿಗ್ ಬಾಸ್ ಕನ್ನಡ 9’ರ ಸ್ಪರ್ಧಿಯಾಗಿ ಸಾನ್ಯ ಗುರುತಿಸಿಕೊಂಡಿದ್ದಾರೆ. ‘ಗೌರಿ’ (Gowri) ಎಂಬ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್‌ಗೆ ಅವರು ನಾಯಕಿಯಾಗಿ ನಟಿಸಿದ್ದರು.

  • ‘ಗೌರಿ’ ಹೀರೋ ಸಮರ್ಜಿತ್‌ಗೆ ಸಿಕ್ತು ಉದಯೋನ್ಮುಖ ನಟ ಪ್ರಶಸ್ತಿ

    ‘ಗೌರಿ’ ಹೀರೋ ಸಮರ್ಜಿತ್‌ಗೆ ಸಿಕ್ತು ಉದಯೋನ್ಮುಖ ನಟ ಪ್ರಶಸ್ತಿ

    ಭಾರತದ ಸಿನಿಮಾ ರಂಗದಲ್ಲಿ ತನ್ನ ನಟನೆಯ ಮೂಲಕ ಭರವಸೆ ಮೂಡಿಸಿರುವ ಸಮರ್ಜಿತ್ ಲಂಕೇಶ್ (Samarjith Lankesh) ಅವರಿಗೆ ರಾಷ್ಟ್ರಮಟ್ಟದ ಪ್ರತಿಷ್ಠಿತ ಲುಮಿರೆ ಅತ್ಯುತ್ತಮ ಉದಯೋನ್ಮುಖ ನಟ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ:2ನೇ ಮದುವೆಗೆ ಸಜ್ಜಾದ ಚೈತ್ರಾ ವಾಸುದೇವನ್

    ಇತ್ತೀಚೆಗೆ ರಾಘವೇಂದ್ರ ಚಿತ್ರವಾಣಿ ಉದಯೋನ್ಮುಖ ನಟ ಪ್ರಶಸ್ತಿ ಪಡೆದ ಸಮರ್ಜಿತ್ ಲಂಕೇಶ್ ತನ್ನ ಮಡಿಲಿಗೆ ಮತ್ತೊಂದು ಪ್ರಶಸ್ತಿಯನ್ನು ಸೇರಿಸಿಕೊಂಡಿದ್ದಾರೆ.

    ಡಾನ್ಸ್ ಹಾಗೂ ಮಾರ್ಷಿಯಲ್ ಆರ್ಟ್ಸ್ ಪ್ರವೀಣತೆಯನ್ನು ಹೊಂದಿರುವ ಸಮರ್ಜಿತ್ ಲಂಕೇಶ್ ಅವರು ರಾಷ್ಟ್ರಮಟ್ಟದಲ್ಲಿ ಪ್ರೇಕ್ಷಕ ಸಮೂಹವನ್ನು ಹೊಂದಿದ್ದಾರೆ. ಈಗ ಅವರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ದೊಡ್ಡ ಬ್ಯಾನರ್ ನಡಿ ನಟಿಸುತ್ತಿದ್ದಾರೆ. ಪ್ರಮುಖ ಪಾತ್ರದಲ್ಲಿ ನಡೆಸುತ್ತಿರುವ ಸಮರ್ಜಿತ್ ಲಂಕೇಶ್ ಅವರು ದೇಶದ ಪ್ರಸಿದ್ಧ ತಾರೆಯರ ಜೊತೆ ಬೆಳ್ಳಿಪರದೆಯನ್ನು ಹಂಚಿಕೊಳ್ಳುತ್ತಿದ್ದಾರೆ.

    ತನ್ನ ಪ್ರತಿಭೆ ಹಾಗೂ ನಟನೆಯ ಸಮರ್ಪಣಾ ಭಾವದಿಂದ ಸಮರ್ಜಿತ್ ಲಂಕೇಶ್ ಭಾರತದ ಸಿನಿಮಾ ರಂಗದಲ್ಲಿ ತಾರೆಯಾಗಿ ಉದಯಿಸುವ ಭರವಸೆ ಮೂಡಿಸಿದ್ದಾರೆ.

    ತಂದೆ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ (Gowri) ಚಿತ್ರದಲ್ಲಿ ಸಮರ್ಜಿತ್ ಲಂಕೇಶ್ ಅವರು ನಾಯಕ ಪಾತ್ರ ಮಾಡುವ ಮೂಲಕ ಮೆಚ್ಚುಗೆ ಪಡೆದಿದ್ದರು. ಈ ಚಿತ್ರದಲ್ಲಿ ನಾಯಕಿಯಾಗಿ ಸಾನ್ಯಾ ಅಯ್ಯರ್ (Saanya Iyer) ನಟಿಸಿದ್ದರು.

  • ಹಾಟ್ ಅವತಾರ ತಾಳಿದ ಸಾನ್ಯ ಅಯ್ಯರ್

    ಹಾಟ್ ಅವತಾರ ತಾಳಿದ ಸಾನ್ಯ ಅಯ್ಯರ್

    ‘ಬಿಗ್ ಬಾಸ್’ ಬೆಡಗಿ (Bigg Boss Kannada 9) ಸಾನ್ಯ ಅಯ್ಯರ್ (Saanya Iyer) ಸದಾ ಒಂದಲ್ಲಾ ಒಂದು ಗ್ಲ್ಯಾಮರಸ್‌ ಫೋಟೋಶೂಟ್‌ನಿಂದ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಹಾಟ್ ಅವತಾರದಲ್ಲಿ ಕಾಣಿಸಿಕೊಳ್ಳುವ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇದನ್ನೂ ಓದಿ:ಸದ್ಯದಲ್ಲೇ ನನ್ನ ನಿಶ್ಚಿತಾರ್ಥ: ಮದುವೆಯಾಗಲಿರುವ ಹುಡುಗನ ಬಗ್ಗೆ ಸೋನು ಓಪನ್‌ ಟಾಕ್

    ಗುರುತೇ ಸಿಗದಷ್ಟು ಹೊಸ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಕಪ್ಪು ಬಣ್ಣದ ಮಿನಿ ಸ್ಕರ್ಟ್- ಶಾರ್ಟ್ಸ್ ಧರಿಸಿ, ಅದರ ಮೇಲೋಂದು ನ್ಯೂಡ್ ಕಲರ್ ಕ್ರಾಪ್ ಟಾಪ್ ಧರಿಸಿದ್ದಾರೆ. ಅದಕ್ಕೆ ಮ್ಯಾಚ್ ಆಗುವಂತೆ ಫ್ರಂಟ್ ಕಟ್ ಮಾಡಿರೋ ಹೇರ್ ಸ್ಟೈಲ್ ಮಾಡಿಸಿಕೊಂಡು, ಹೈ ಪಾನಿಟೇಲ್ ಕಟ್ಟಿ, ಕಣ್ಣಿಗೊಂದು ದೊಡ್ಡದಾದ ಕನ್ನಡಕ ಹಾಕಿದ್ದಾರೆ.

    ಈ ಫೋಟೋಶೂಟ್‌ಗೆ ಬಗೆ ಬಗೆಯ ಕಾಮೆಂಟ್‌ಗಳು ಹರಿದು ಬರುತ್ತಿವೆ. ಸಾನ್ಯ ಲುಕ್‌ಗೆ ‘ಬಿಗ್ ಬಾಸ್ ಕನ್ನಡ 9’ರ (Bigg Boss Kannada 9) ವಿನ್ನರ್ ರೂಪೇಶ್ ಶೆಟ್ಟಿ ಹಾರ್ಟ್ ಇಮೋಜಿ ಹಾಕಿದ್ದಾರೆ. ಇನ್ನೂ ಕೆಲ ನೆಟ್ಟಿಗರು ನಟಿಯನ್ನು ಮಾಜಿ ನೀಲಿ ತಾರೆ ಮಿಯಾ ಖಲೀಫಾರನ್ನು ಹೊಲಿಸಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:10 ದಿನಗಳಲ್ಲಿ 300 ಕೋಟಿ ರೂ. ಕ್ಲಬ್ ಸೇರಿದ ‘ಸಿಂಗಂ ಅಗೇನ್’ ಸಿನಿಮಾ

    ಅಂದಹಾಗೆ, ‘ಪುಟ್ಟಗೌರಿ ಮದುವೆ’ ಸೀರಿಯಲ್ ಸೇರಿದಂತೆ ಅನೇಕ ಪ್ರಾಜೆಕ್ಟ್‌ಗಳಲ್ಲಿ ಬಾಲನಟಿಯಾಗಿ ಸಾನ್ಯ ಕೆಲಸ ಮಾಡಿದರು. ಆ ನಂತರ ‘ಬಿಗ್ ಬಾಸ್ ಕನ್ನಡ 9’ರಲ್ಲಿ ಸ್ಪರ್ಧಿಯಾಗಿ ಗಮನ ಸೆಳೆದಿದ್ದರು.

    ಈ ವರ್ಷ ಸಮರ್ಜಿತ್ ಲಂಕೇಶ್‌ಗೆ ನಾಯಕಿಯಾಗಿ ಗೌರಿ ಸಿನಿಮಾದಲ್ಲಿ ಸಾನ್ಯ ಅಯ್ಯರ್ ನಟಿಸಿದರು. ಈ ಚಿತ್ರವನ್ನು ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿದರು. ಈ ಚಿತ್ರಕ್ಕೆ ಅಭಿಮಾನಿಗಳಿಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

  • ಧ್ಯಾನ್, ಸದಾ ನಟನೆಯ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ

    ಧ್ಯಾನ್, ಸದಾ ನಟನೆಯ ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ

    ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶನದಲ್ಲಿ ಧ್ಯಾನ್ ಮತ್ತು ಸದಾ ನಟಿಸಿದ್ದ ಸೂಪರ್ ಹಿಟ್ ‘ಮೊನಾಲಿಸಾ’ (Monalisa) ಚಿತ್ರ ತೆರೆಕಂಡು ಇಪ್ಪತ್ತು ವರ್ಷಗಳಾಗಿದೆ. ಚಿತ್ರತಂಡದ ಸದಸ್ಯರೊಡನೆ ಕೇಕ್ ಕಟ್ ಮಾಡುವ ಮೂಲಕ ‘ಮೊನಾಲಿಸಾ’ ಚಿತ್ರದ 20 ವರ್ಷಗಳ ಸಂಭ್ರಮವನ್ನು ಆಚರಿಸಲಾಯಿತು. ನಿರ್ದೇಶಕ ಇಂದ್ರಜಿತ್ ಲಂಕೇಶ್, ನಾಯಕ ಧ್ಯಾನ್ (Dhyan), ನಾಯಕಿ ಸದಾ (Sadha), ನಟ ಶರಣ್, ಸಂಭಾಷಣೆ ಬರೆದಿದ್ದ ಬಿ.ಎ.ಮಧು, ಸ್ಥಿರ ಛಾಯಾಗ್ರಾಹಕ ಗುಂಡ್ಲುಪೇಟೆ ಸುರೇಶ್, ಡಿಸೈನರ್ ಮಣಿ ಸೇರಿದಂತೆ ಮೊನಾಲಿಸಾ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಈ ಸಂಭ್ರಮದ ಸಂಧರ್ಭದಲ್ಲಿ ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಅವರ ಮಗ ಸಮರ್ಜಿತ್ ಲಂಕೇಶ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ‘ಗೌರಿ’ ಚಿತ್ರದ ಮುದ್ದಾದ ಹಾಡು ಸೇರಿದಂತೆ ಎರಡು ಹಾಡುಗಳು ಬಿಡುಗಡೆಯಾಯಿತು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ‘ಗೌರಿ’ ಹಾಡನ್ನು ಬಿಡುಗಡೆ ಮಾಡಿದರು. ಇಂದಿರಾ ಲಂಕೇಶ್ ಅವರು ಉಪಸ್ಥಿತರಿದ್ದರು. ಈ ಹಾಡನ್ನು ಇಂದ್ರಜಿತ್ ಅವರ ಸಹೋದರಿ ಗೌರಿ ಲಂಕೇಶ್ ಅವರಿಗೆ ಅರ್ಪಿಸಲಾಗಿದೆ. ಮದ್ದಾದ ಹಾಡನ್ನು ಮೊನಾಲಿಸಾ ಚಿತ್ರದ ನಾಯಕ ಧ್ಯಾನ್, ನಾಯಕಿ ಸದಾ ಹಾಗೂ ‘ಗೌರಿ’ ಚಿತ್ರದ ಜೋಡಿ ಸಮರ್ಜಿತ್ ಹಾಗೂ ಸಾನ್ಯ ಅಯ್ಯರ್ (Saanya Iyer) ಸೇರಿ ಬಿಡುಗಡೆ ಮಾಡಿದರು. ‘ಗೌರಿ’ ಹಾಡನ್ನು ಕೆ.ಕಲ್ಯಾಣ್ ಹಾಗೂ ‘ಮುದ್ದಾದ’ ಹಾಡನ್ನು ಕವಿರಾಜ್ ಬರೆದಿದ್ದಾರೆ. ಆನಂದ್ ಆಡಿಯೋ ಮೂಲಕ ಹಾಡುಗಳು ಬಿಡುಗಡೆಯಾಗಿದೆ. ಇದನ್ನೂ ಓದಿ:ಜುಲೈ19ರಂದು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರ ಬಿಡುಗಡೆ-ದುಬೈನಲ್ಲಿ ಪ್ರೀಮಿಯರ್ ಶೋಗೆ ಮೆಚ್ಚುಗೆ

    ಹಾಡು ಬಿಡುಗಡೆ ಮಾಡಿ ಮಾತನಾಡಿದ ಹಂಸಲೇಖ ಅವರು, ಸಂಗೀತ ಎಂದರೆ ಸಿನಿಮಾ. ಸಿನಿಮಾ ಎಂದರೆ ಸಂಗೀತ. ಸಂಗೀತವಿಲ್ಲದ ಸಿನಿಮಾವನ್ನು ಊಹಿಸಿಕೊಳ್ಳಲು ಅಸಾಧ್ಯ. ಸ್ಟೈಲೀಶ್ ಚಿತ್ರಗಳಿಗೆ ಹೆಸರಾದ ಇಂದ್ರಜಿತ್ ಅವರು ಈ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ತಮ್ಮ ನಿರ್ದೇಶನದಲ್ಲೇ ಮಗನನ್ನು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿಸುತ್ತಿದ್ದಾರೆ. ಇಂದು ನನ್ನಿಂದ ಬಿಡುಗಡೆಯಾದ ಹಾಡನ್ನು ಗೌರಿ ಲಂಕೇಶ್ ಅವರಿಗೆ ಅರ್ಪಿಸಿದ್ದಾರೆ. ‘ಗೌರಿ’ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು.

    ನಿರ್ದೇಶಕ, ನಿರ್ಮಾಪಕ ಇಂದ್ರಜಿತ್ ಲಂಕೇಶ್ ಮಾತನಾಡಿ, ‘ಗೌರಿ’ ಚಿತ್ರದಲ್ಲಿ ಏಳು ಹಾಡುಗಳಿದೆ. ಇದೊಂದು ಸಂಗೀತ ಪ್ರಧಾನ ಚಿತ್ರವಾಗಿರುವುದರಿಂದ ಹಂಸಲೇಖ ಅವರಿಂದಲೇ ಹಾಡು ಬಿಡುಗಡೆ ಮಾಡಿಸಬೇಕೆಂಬ ಹಂಬಲ ನನ್ನಗಿತ್ತು. ಹಾಡು ಬಿಡುಗಡೆ ಮಾಡಿಕೊಟ್ಟ ಅವರಿಗೆ ವಂದನೆ. ಇಂದು ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದು, ‘ಮುದ್ದಾದ’ ಹಾಡನ್ನು ಕವಿರಾಜ್ ಅವರು ಬರೆದಿದ್ದು, ನಿಹಾಲ್ ತವ್ರು ಹಾಡಿದ್ದಾರೆ. ಜೆಸ್ಸಿ ಗಿಫ್ಟ್ ಸಂಗೀತ ನೀಡಿದ್ದಾರೆ. ಮತ್ತೊಂದು ಹಾಡನ್ನು ಕೆ.ಕಲ್ಯಾಣ್ ಅವರು ಬರೆದಿದ್ದು, ಆ ಹಾಡನ್ನು ನನ್ನ ಅಕ್ಕ ಗೌರಿ ಲಂಕೇಶ್ ಅವರಿಗೆ ಅರ್ಪಣೆ ಮಾಡಲಾಗಿದೆ. ಇನ್ನು ಚಿತ್ರಕ್ಕೆ ಸೆನ್ಸಾರ್ ಮಂಡಳಿ ಯು ಪ್ರಮಾಣ ಪತ್ರ ನೀಡಿದೆ. ಗಂಗಾಧರ್ ಮೈಸೂರು ಭಾಗದ ವಿತರಕರು. ಮೈಸೂರು ಒಂದನ್ನು ಬಿಟ್ಟು ವಿಶಾಲ ಕರ್ನಾಟಕಕ್ಕೆ ಜಯಣ್ಣ ಫಿಲಂಸ್ ಅವರು ವಿತರಣೆ ಮಾಡುತ್ತಿದ್ದಾರೆ. ಡಬ್ಬಿಂಗ್ ರೈಟ್ಸ್ ಕೂಡ ಮಾರಾಟವಾಗಿದೆ. ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳು ಹಾಗೂ ಟೀಸರ್ ಮೂಲಕ ನಮ್ಮ ಚಿತ್ರ ಗೆದ್ದಿದೆ. ಇನ್ನೇನಿದ್ದರೂ ನಿರ್ದೇಶಕನಾಗಿ ನಾನು ಗೆಲ್ಲಬೇಕು ಎಂದರು.

    ನನ್ನ ಬಹು ದಿನಗಳ ಕನಸು ನನಸ್ಸಾಗುವ ಸಮಯ ಸಮೀಪಿಸಿದೆ. ಮೊದಲು ನಾನು ನನ್ನ ಅಪ್ಪನಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಸಮರ್ಜಿತ್ ಲಂಕೇಶ್. ಇಷ್ಟು ದಿಗ್ಗಜ್ಜರ ನಡುವೆ ನಮ್ಮ ಚಿತ್ರದ ಹಾಡು ಬಿಡುಗಡೆಯಾಗಿದು ಖುಷಿಯಾಗಿದೆ ಎಂದರು ನಾಯಕಿ ಸಾನ್ಯಾ ಅಯ್ಯರ್. ‘ಗೌರಿ’ ಚಿತ್ರದ ಛಾಯಾಗ್ರಾಹಕ ಕೆ.ಕೆ, ಗೀತರಚನೆ ಮಾಡಿರುವ ಕೆ.ಕಲ್ಯಾಣ್, ಕವಿರಾಜ್ ಚಿತ್ರದ ಕುರಿತು ಮಾತನಾಡಿದರು.

    ‘ಮೊನಾಲಿಸಾ’ ಚಿತ್ರದ ಬಗ್ಗೆ ನಾಯಕ ಧ್ಯಾನ್, ನಾಯಕಿ ಸದಾ, ಸಂಭಾಷಣೆ ಬರೆದಿರುವ ಬಿ.ಎ.ಮಧು ಮುಂತಾದವರು ಅನುಭವಗಳನ್ನು ಹಂಚಿಕೊಂಡರು.

  • ಸಮರ್ಜಿತ್ ಲಂಕೇಶ್ ಜೊತೆ ಆರ್‌ಸಿಬಿ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಮಸ್ತ್ ಸ್ಟೆಪ್ಸ್

    ಸಮರ್ಜಿತ್ ಲಂಕೇಶ್ ಜೊತೆ ಆರ್‌ಸಿಬಿ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಮಸ್ತ್ ಸ್ಟೆಪ್ಸ್

    ಸ್ಯಾಂಡಲ್‌ವುಡ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ (Indrajit Lankesh) ಇದೀಗ ಪುತ್ರ ಸಮರ್ಜಿತ್ ಲಂಕೇಶ್‌ರನ್ನು (Samarjith Lankesh) ಚಿತ್ರರಂಗಕ್ಕೆ ಗ್ರ್ಯಾಂಡ್‌ ಆಗಿ ಲಾಂಚ್ ಮಾಡುತ್ತಿದ್ದಾರೆ. ಇದರ ನಡುವೆ ‘ಗೌರಿ’ (Gowri Film) ಸಿನಿಮಾದ ಹಾಡೊಂದಕ್ಕೆ ಆರ್‌ಸಿಬಿ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಜೊತೆ ಯುವ ನಟ ಸಮರ್ಜಿತ್ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗುತ್ತಿದೆ.

    ಒಂದೇ ಥರದ ಪ್ರಚಾರಗಳೇ ತುಂಬಿ ಹೋಗಿರುವ ಸ್ಯಾಂಡಲ್‌ವುಡ್‌ನಲ್ಲಿ ಹೊಸ ಹೊಸ ಆವಿಷ್ಕಾರ ಮಾಡ್ತಾನೇ ಬಂದಿರುವ ಇಂದ್ರಜಿತ್ ತಮ್ಮ ಕನಸಿನ ‘ಗೌರಿ’ ಚಿತ್ರದ ‘ಲವ್ ಯೂ ಸಮಂತಾ’ ಹಾಡೊಂದನ್ನ ಬಿಡುಗಡೆ ಮಾಡಲು, ಶ್ರೇಯಾಂಕಾ ಪಾಟೀಲ್ ಅವರನ್ನ ಕರೆತಂದಿದ್ದರು. ಮೈಸೂರಿನ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶ್ರೇಯಾಂಕಾ ಅವರಿಂದ ಹಾಡನ್ನ ಬಿಡುಗಡೆಗೊಳಿಸುವ ಮೂಲಕ ಯೂತ್ಸ್‌ಗೆ ಹುಚ್ಚೆಬ್ಬಿಸಿದ್ದಾರೆ. ಇದನ್ನೂ ಓದಿ:ಡೀಪ್‍ ಫೇಕ್‍ ಸುಳಿಯಲ್ಲಿ ಮತ್ತೆ ರಶ್ಮಿಕಾ ಮಂದಣ್ಣ

    ಅಂದಹಾಗೆ, ಇದು ಶ್ರೇಯಾಂಕಾಗೆ ಮೊದಲ ಸಿನಿಮಾ ಸಮಾರಂಭ. ಅದರಲ್ಲಿಯೂ ಕಣ್ಮುಂದೆ ಉತ್ಸಾಹಿ ಯುವಕ ಯುವತಿಯರ ಗುಂಪು ಇದ್ದಾಗ, ಉತ್ಸಾಹ ಇನ್ನೂ ಹೆಚ್ಚಾಗುತ್ತೆ. ಉತ್ಸಾಹದಿಂದ ಶ್ರೇಯಾಂಕಾ ಅವರು ಇಂದ್ರಜಿತ್ ಲಂಕೇಶ್ ಪುತ್ರನ ಸಮರ್ಜಿತ್ ಲಂಕೇಶ್ ಜೊತೆ ಶ್ರೇಯಾಂಕ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ.

    ‘ಗೌರಿ’ (Gowri Film) ಸಿನಿಮಾದಲ್ಲಿ ಸಮರ್ಜಿತ್ ಲಂಕೇಶ್‌ಗೆ ‘ಬಿಗ್ ಬಾಸ್’ ಬೆಡಗಿ ಸಾನ್ಯಾ ಅಯ್ಯರ್ (Saanya Iyer) ನಾಯಕಿಯಾಗಿ ನಟಿಸಿದ್ದಾರೆ. ಈ ಮೂಲಕ ಇಬ್ಬರೂ ಹೊಸ ಪ್ರತಿಭೆಗಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.

  • ಬ್ರೈಡಲ್ ಲುಕ್‌ನಲ್ಲಿ ಮಿಂಚಿದ ಸಾನ್ಯ ಅಯ್ಯರ್

    ಬ್ರೈಡಲ್ ಲುಕ್‌ನಲ್ಲಿ ಮಿಂಚಿದ ಸಾನ್ಯ ಅಯ್ಯರ್

    ಸ್ಯಾಂಡಲ್‌ವುಡ್ (Sandalwood) ನಟಿ ಸಾನ್ಯ ಅಯ್ಯರ್ (Saanya Iyer) ವಧುವಿನಂತೆ ಬ್ರೇಡಲ್ ಲುಕ್‌ನಲ್ಲಿ ಮಿಂಚಿದ್ದಾರೆ. ರಾಯಲ್ ಲುಕ್‌ನಲ್ಲಿ ಕಂಗೊಳಿಸುತ್ತಿರುವ ಸಾನ್ಯರನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ನಟಿಯ ಸುಂದರ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ.

    ಕೆಂಪು ಬಣ್ಣದ ಧಿರಿಸಿನಲ್ಲಿ ಸಾನ್ಯ ವಧುವಿನಂತೆಯೇ ಕಂಗೊಳಿಸಿದ್ದಾರೆ. ಕ್ಯಾಮೆರಾಗೆ ಮಸ್ತ್ ಆಗಿ ಪೋಸ್ ಕೊಟ್ಟಿದ್ದು, ‘ರಾಣಿ ರಾಣಿ ನಿನ್ನ ಕಂಡಾಗ ನನ್ನ ಮರೆತೇ ನಾನೀಗ’ ಎಂದು ಸಾನ್ಯ ಸೌಂದರ್ಯವನ್ನು ನೆಟ್ಟಿಗನೊಬ್ಬ ಬಣ್ಣಿಸಿದ್ದಾರೆ. ಸಾನ್ಯ ಲುಕ್‌ಗೆ ಉತ್ತಮ ರೆಸ್ಪಾನ್ಸ್‌ ಸಿಕ್ಕಿದೆ. ಇದನ್ನೂ ಓದಿ:ಸೆಲೆಬ್ರಿಟಿಯ ಬದುಕನ್ನು ಜೈಲುವಾಸಕ್ಕೆ ಹೋಲಿಸಿದ ನಟ ಜಗ್ಗೇಶ್

    ‘ಬಿಗ್ ಬಾಸ್’ (Bigg Boss Kannada 9) ಶೋ ನಂತರ ‘ಗೌರಿ’ ಚಿತ್ರದ ಮೂಲಕ ಸಾನ್ಯ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಸಮರ್ಜಿತ್ ಲಂಕೇಶ್‌ಗೆ ನಾಯಕಿಯಾಗಿ ನಟಿಸಿದ್ದಾರೆ. ಇಂದ್ರಜಿತ್ ಲಂಕೇಶ್ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

    ಇತ್ತೀಚೆಗೆ ‘ಗೌರಿ’ (Gowri Film) ಸಿನಿಮಾದ ಮೊದಲ ಟೀಸರ್ ಆಗಿ ಧೂಳೆಬ್ಬಿಸಿತ್ತು. ಹೊಸ ಪ್ರತಿಭೆ ಸಮರ್ಜಿತ್ ಮಾಸ್ ಎಂಟ್ರಿಗೆ ಫಿದಾ ಆಗಿದ್ದರು. ಇದನ್ನೂ ಓದಿ:ನಿರ್ಮಾಣ ಸಂಸ್ಥೆ ಆರಂಭಿಸಿದ ‘ಜೈಲರ್’ ಡೈರೆಕ್ಟರ್

    ಈ ಸಿನಿಮಾ ಜೊತೆಗೆ ಹೊಸ ಬಗೆಯ ಕಥೆಗಳನ್ನು ಕೇಳ್ತಿದ್ದಾರೆ. ಸದ್ಯದಲ್ಲೇ ಹೊಸ ಚಿತ್ರದ ಬಗ್ಗೆ ಮಾಹಿತಿ ಹೊರಬೀಳಲಿದೆ.

  • ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ ‘ಸಲಗ’ ಬ್ಯೂಟಿ ಸಂಜನಾ ಆನಂದ್‌

    ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ ‘ಸಲಗ’ ಬ್ಯೂಟಿ ಸಂಜನಾ ಆನಂದ್‌

    ಸ್ಯಾಂಡಲ್‌ವುಡ್‌ಗೆ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ನಾಯಕ ನಟನಾಗಿ ಎಂಟ್ರಿ ಕೊಡ್ತಿದ್ದಾರೆ. ಚೊಚ್ಚಲ ಸಿನಿಮಾ ‘ಗೌರಿ’ (Gowri Film) ಶೂಟಿಂಗ್ ಕೂಡ ಭರದಿಂದ ನಡೆಯುತ್ತಿದೆ. ‘ಗೌರಿ’ ಸಿನಿಮಾದಲ್ಲಿ ಸಲಗ (Salaga) ಸುಂದರಿ ಸಂಜನಾ ಆನಂದ್ (Sanjana Anand) ಕೂಡ ನಟಿಸುತ್ತಿದ್ದಾರೆ.

    ಇಂದ್ರಜಿತ್ ನಿರ್ದೇಶನದ ಈ ಸಿನಿಮಾದಲ್ಲಿ ಸಮರ್ಜಿತ್‌ಗೆ ನಾಯಕಿಯಾಗಿ ಸಾನ್ಯ ಅಯ್ಯರ್ (Saanya Iyer) ನಟಿಸುತ್ತಿದ್ದಾರೆ. ಲವ್ ಸ್ಟೋರಿ ಜೊತೆ ಆ್ಯಕ್ಷನ್ ಓರಿಯೆಂಟೆಡ್ ಸಿನಿಮಾವಾಗಿದೆ. ಇದೇ ಚಿತ್ರದಲ್ಲಿ ಸಂಜನಾ ಆನಂದ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ:ಶಾರುಖ್‌ ಪುತ್ರಿ ಸುಹಾನಾ ಸೌಂದರ್ಯಕ್ಕೆ ಪಡ್ಡೆಹುಡುಗರು ಫಿದಾ

    ಚಿತ್ರದಲ್ಲಿ ಸಂಜನಾ ಪಾತ್ರ ತಿರುವು ಕೊಡಲಿದೆ. ಅಷ್ಟೇ ಅಲ್ಲ, ಹೀರೋ ಸಮರ್ಜಿತ್ ಜೊತೆ ಸ್ಪೆಷಲ್ ಹಾಡಿಗೆ ಮಸ್ತ್ ಆಗಿ ಹೆಜ್ಜೆ ಹಾಕಿ ಬಂದಿದ್ದಾರೆ. ಸಂಜನಾ ಆ್ಯಕ್ಟಿಂಗ್ ಜೊತೆಗೆ ಡ್ಯಾನ್ಸ್ ಕೂಡ ತೆಗೆಸಿದ್ದಾರೆ ನಿರ್ದೇಶಕರು. ಎರಡು ದಿನ ರಿಹರ್ಸಲ್ ಮಾಡಿದ್ದು, ಇನ್ನೆರಡು ದಿನಗಳಲ್ಲಿ ಹಾಡಿನ ಚಿತ್ರೀಕರಣ ಮಾಡಿದ್ದಾರೆ. ಸಮರ್ಜಿತ್ ನೃತ್ಯ ಕೌಶಲ್ಯದ ಬಗ್ಗೆ ನಟಿ ಮೆಚ್ಚುಗೆ ಸೂಚಿಸಿದ್ದಾರೆ.

    ಕನ್ನಡ ಮತ್ತು ತೆಲುಗು ಸಿನಿಮಾಗಳಲ್ಲಿ ಸಂಜನಾ ಆನಂದ್ ಬ್ಯುಸಿಯಾಗಿದ್ದಾರೆ. ಸದ್ಯ ಹೊಸ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಸಾನ್ಯ ಬರ್ತ್‌ಡೇಯಲ್ಲಿ ಕಾಣಿಸಿಕೊಂಡ ರೂಪೇಶ್ ಶೆಟ್ಟಿಗೆ ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

    ಸಾನ್ಯ ಬರ್ತ್‌ಡೇಯಲ್ಲಿ ಕಾಣಿಸಿಕೊಂಡ ರೂಪೇಶ್ ಶೆಟ್ಟಿಗೆ ವಿಶೇಷ ಬೇಡಿಕೆಯಿಟ್ಟ ಫ್ಯಾನ್ಸ್

    ಬಿಗ್ ಬಾಸ್ ಬೆಡಗಿ ಸಾನ್ಯ ಅಯ್ಯರ್ (Saanya Iyer) ಹೀರೋಯಿನ್ ಆಗಿ ‘ಗೌರಿ’ (Gowri) ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ. ಇದೇ ಖುಷಿಯಲ್ಲಿ ಬಿಗ್ ಬಾಸ್ ಸ್ನೇಹಿತರು, ಆಪ್ತರ ಜೊತೆ ಗ್ರ್ಯಾಂಡ್‌ ಆಗಿ ಸಾನ್ಯ ಬರ್ತ್‌ಡೇ ಪಾರ್ಟಿ ಮಾಡಿದ್ದಾರೆ. ಪಾರ್ಟಿಯಲ್ಲಿ ರೂಪೇಶ್ ಶೆಟ್ಟಿ (Roopesh Shetty) ಕೂಡ ಪಾಲ್ಗೊಂಡಿದ್ದಾರೆ. ಈ ಫೋಟೋಗಳು ವೈರಲ್ ಆದ ಬೆನ್ನಲ್ಲೇ ಈ ಜೋಡಿಗೆ ಫ್ಯಾನ್ಸ್ ವಿಶೇಷ ಬೇಡಿಕೆಯೊಂದನ್ನ ಇಟ್ಟಿದ್ದಾರೆ.

    ಸೆ.21ರಂದು ಸಾನ್ಯ ಅಯ್ಯರ್ ಜನ್ಮದಿನದಂದು ಸೀಸನ್ 9ರ ಬಿಗ್ ಬಾಸ್ ಸ್ಪರ್ಧಿಗಳು, ಗೌರಿ ಚಿತ್ರತಂಡದ ಜೊತೆ ಅದ್ದೂರಿಯಾಗಿ ಸೆಲೆಬ್ರೇಟ್ ಮಾಡಿದ್ದು, ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಕೂಡ ಭಾಗಿಯಾಗಿ ಸಾನ್ಯಗೆ ವಿಶ್ ಮಾಡಿದ್ದಾರೆ. ಬಳಿಕ ಕ್ಯಾಮೆರಾಗೆ ಮಸ್ತ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಜೋಡಿಯ ಫೋಟೋ ನೋಡ್ತಿದ್ದಂತೆ ನಿಮ್ಮಿಬ್ಬರ ಮದುವೆ ಯಾವಾಗ? ಎಂದು ಫ್ಯಾನ್ಸ್ ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಇಬ್ಬರ ಕಡೆಯಿಂದಲೂ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ.

    ಬಿಗ್ ಬಾಸ್ ಒಟಿಟಿ ಮತ್ತು ಟಿವಿ ಬಿಗ್ ಬಾಸ್‌ನಲ್ಲಿ ಒಟ್ಟಿಗೆ ಸ್ಪರ್ಧಿಸಿದ ಈ‌ ಜೋಡಿ ನಡುವೆ ಉತ್ತಮ ಒಡನಾಟವಿತ್ತು. ಪ್ರೇಮ ಪಕ್ಷಿಗಳೆಂದೇ ಬಿಂಬಿತರಾಗಿದ್ರು. ಇಬ್ಬರ ನಡುವೆ ಪ್ರೀತಿ ಇದ್ಯಾ? ಎಂದು ಕೇಳಿದ್ರೆ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಪ್ರತಿಕ್ರಿಯೆ ನೀಡ್ತಿದ್ದರು. ಇಬ್ಬರ ಬಾಂಧವ್ಯ ತೆರೆ ಹಿಂದೆ ಕೂಡ ಉತ್ತಮವಾಗಿದ್ದು, ಇಬ್ಬರು ಮದುವೆಯಾದರೆ ಚೆಂದ ಎಂಬುದು ಅಭಿಮಾನಿಗಳ ಆಶಯ. ಅದು ನೆರವೇರುತ್ತಾ? ಕಾಯಬೇಕಿದೆ. ಇದನ್ನೂ ಓದಿ:ಲೋಕಸಭೆ ಚುನಾವಣೆಗೆ ನಟ ಕಮಲ್ ಹಾಸನ್ ಸಿದ್ಧತೆ

    ಇಂದ್ರಜೀತ್ ಲಂಕೇಶ್ (Indrajit Lankesh) ನಿರ್ದೇಶನದ ಸಿನಿಮಾದಲ್ಲಿ ಸಮರ್ಜಿತ್‌ಗೆ ನಾಯಕಿಯಾಗಿ ಸಾನ್ಯ ಎಂಟ್ರಿ ಕೊಡಲಿದ್ದಾರೆ. ಸಾನ್ಯ ಬರ್ತ್‌ಡೇ ಸೆಲೆಬ್ರೇಶನ್‌ನಲ್ಲಿ ಇಂದ್ರಜಿತ್, ಸಮರ್ಜಿತ್, ಆರ್ಯವರ್ಧನ್ ಗುರೂಜಿ, ಜಯಶ್ರೀ ಆರಾಧ್ಯ, ಅನುಪಮಾ ಗೌಡ, ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲ ಚಿತ್ರದ ಶೂಟಿಂಗ್‌ ಎಲ್ಲಿಗೆ ಬಂತು? ಅಪ್‌ಡೇಟ್‌ ಕೊಟ್ರು ಸಾನ್ಯ ಅಯ್ಯರ್

    ಮೊದಲ ಚಿತ್ರದ ಶೂಟಿಂಗ್‌ ಎಲ್ಲಿಗೆ ಬಂತು? ಅಪ್‌ಡೇಟ್‌ ಕೊಟ್ರು ಸಾನ್ಯ ಅಯ್ಯರ್

    ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಸಾನ್ಯ ಅಯ್ಯರ್ (Saanya Iyer)  ಸ್ಯಾಂಡಲ್‌ವುಡ್‌ಗೆ (Sandalwood) ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಮೊದಲ ಸಿನಿಮಾ ‘ಗೌರಿ’ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸಿನಿಮಾ ಯಾವ ಹಂತಕ್ಕೆ ಬಂದಿದೆ ಎಂಬುದರ ಬಗ್ಗೆ ನಟಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ.

    ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ (Gowri) ಸಿನಿಮಾದಲ್ಲಿ ಸಮರ್ಜಿತ್ ಲಂಕೇಶ್‌ಗೆ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಇನ್ನೂ ಕೆಲವು ದಿನಗಳ ಶೂಟಿಂಗ್ ಬಾಕಿಯಿದೆ. ಇದನ್ನೂ ಓದಿ:‘ಆದಿಪುರುಷ್’ ಸೋಲಿನ ಬಳಿಕ ಮಾಸ್ ಆಗಿ ಎಂಟ್ರಿ ಕೊಟ್ರು ಕೃತಿ ಸನೋನ್

    ಈ ಚಿತ್ರದ ಮೂಲಕ ಮಗ ಸಮರ್ಜಿತ್‌ರನ್ನ ಚಿತ್ರರಂಗಕ್ಕೆ ಇಂದ್ರಜಿತ್ ಲಂಕೇಶ್ (Indrajit Lankesh) ಪರಿಚಯಿಸುತ್ತಿದ್ದಾರೆ. ಸಮರ್ಜಿತ್ ಮುಂದೆ ವಿಲನ್ ಆಗಿ ಚಂದು ಗೌಡ ಅಬ್ಬರಿಸುತ್ತಿದ್ದಾರೆ. ವಿಭಿನ್ನ ಕಥೆಯನ್ನ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪರಿಚಯಿಸಲು ಹೊರಟಿದ್ದಾರೆ.

    ‘ಪುಟ್ಟಗೌರಿ ಮದುವೆ’ ಮದುವೆ ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ (Bigg Boss Kannada) ಮೂಲಕ ಕನ್ನಡಿಗರ ಮನಗೆದ್ದ ನಟಿ ಈಗ ನಾಯಕಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ಸಕಲ ತಯಾರಿ ಮಾಡಿಕೊಂಡೇ ನಟನೆಯ ಅಖಾಡಕ್ಕೆ ಸಾನ್ಯ ಇಳಿದಿದ್ದಾರೆ. ನಾಯಕಿಯಾಗಿ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]