Tag: ಗೌರಿ ಸಿನಿಮಾ

  • Gowri: ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ‌ ಚಂದು ಗೌಡ ವಿಲನ್

    Gowri: ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ‌ ಚಂದು ಗೌಡ ವಿಲನ್

    ನ್ನಡ- ತೆಲುಗು ಕಿರುತೆರೆಯ ಜನಪ್ರಿಯ ನಟ ಚಂದುಗೌಡ ಈಗ ‘ಗೌರಿ’ (Gowri Film) ಸಿನಿಮಾದಲ್ಲಿ ವಿಲನ್ ಆಗಿ ಅಖಾಡಕ್ಕೆ ಇಳಿಯುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶನದ ಸಿನಿಮಾದಲ್ಲಿ ನಟ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಬಗ್ಗೆ ಚಂದು ಗೌಡ, ಪಬ್ಲಿಕ್ ಟಿವಿ ಡಿಜಿಟಲ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

    ‘ಗೌರಿ’ (Gowri Film) ಚಿತ್ರತಂಡದಿಂದ ಚಂದು ಗೌಡಗೆ ಅಪ್ರೋಚ್ ಮಾಡಿದ್ದು, ಕಥೆ ಮತ್ತು ಪಾತ್ರ ಕೇಳಿ ಒಪ್ಪಿಕೊಂಡೆ. ಇಂದ್ರಜಿತ್ ಅವರ ನಿರ್ದೇಶನದಲ್ಲಿ ನಟಿಸುವುದು ಖುಷಿಯ ವಿಚಾರ. ಸಾಕಷ್ಟು ನವಪ್ರತಿಭೆಗಳನ್ನ ಇಂದ್ರಜಿತ್ ಲಾಂಚ್ ಮಾಡಿದ್ದಾರೆ. ಅವರ ನಿರ್ದೇಶನದಲ್ಲಿ ನಾನು ನಟಿಸಬೇಕು ಎಂದು ನನ್ನ ಬಹುಕಾಲದ ಕನಸಾಗಿತ್ತು. ಈಗ ನನಸಾಗಿದೆ ಎಂದು ಖುಷಿಯಿಂದ ಮಾತನಾಡಿದ್ದಾರೆ.

    ಈ ಚಿತ್ರದಲ್ಲಿ ಉದ್ಯಮಿಯಾಗಿ ನೆಗೆಟಿವ್ ಶೇಡ್‌ನಲ್ಲಿ ನಟಿಸುತ್ತಿದ್ದೇನೆ. ನಾಯಕ ಸಮರ್ಜಿತ್ ಮತ್ತು ನನ್ನ ನಡುವಿನ ಕಾಂಬಿನೇಷನ್ ಚೆನ್ನಾಗಿ ಮೂಡಿ ಬರುತ್ತಿದೆ. ಚಿತ್ರೀಕರಣ ಕಳೆದ ಎರಡು ದಿನಗಳಿಂದ ಭರದಿಂದ ಸಾಗುತ್ತಿದೆ ಎಂದು ಚಂದು ತಿಳಿಸಿದ್ದಾರೆ.‌ ಇದನ್ನೂ ಓದಿ:ಡಿಸೆಂಬರ್ ನಲ್ಲಿ ‘ಯಶ್ 19’ ಸಿನಿಮಾ ಶೂಟಿಂಗ್: ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್

    ‘ಗೌರಿ’ ಚಿತ್ರದಲ್ಲಿ ನನ್ನ ಪಾತ್ರ ಸ್ಟೈಲೀಶ್ ಆಗಿದೆ. ನಟನೆಗೆ ತುಂಬಾ ಸ್ಕೋಪ್ ಇರುವಂತಹ ಪಾತ್ರ, ತೆರೆಯ ಮೇಲೆ ಅಬ್ಬರದ ಡೈಲಾಗ್ ಹೊರಹಾಕಲು ಅವಕಾಶ ನೀಡಿದ್ದಾರೆ. ರಾಬರ್ಟ್ (Robert) ಚಿತ್ರದ ನಂತರ ಒಂದೊಳ್ಳೆ ಕಥೆ ನನಗೆ ಸಿಕ್ಕಿದೆ. ಈ ಸಿನಿಮಾದ ಭಾಗವಾಗಿರೋದಕ್ಕೆ ಖುಷಿಯಿದೆ ಎಂದಿದ್ದಾರೆ.

    ಇನ್ನೂ ಗೌರಿ (Gowri Film) ಸಿನಿಮಾದಲ್ಲಿ ಸಮರ್ಜಿತ್- ಸಾನ್ಯ ಅಯ್ಯರ್ (Saanya Iyer) ಜೋಡಿಯಾಗಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ.

    ಕಿರುತೆರೆಯಲ್ಲಿ ‘ಕಥೆಯೊಂದು ಶುರುವಾಗಿದೆ’ ಮತ್ತು ತೆಲುಗಿನಲ್ಲಿ ‘ತ್ರಿನಯನಿ’ ಎಂಬ ಸೀರಿಯಲ್‌ನಲ್ಲಿ ಲೀಡ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. ಕನ್ನಡ ಸಿನಿಮಾ ಜೊತೆ ತೆಲುಗಿನಲ್ಲೂ ಒಳ್ಳೆಯ ಪ್ರಾಜೆಕ್ಟ್ ಸಿಗುತ್ತಿದೆ. ಸದ್ಯದಲ್ಲೇ ಈ ಬಗ್ಗೆ ಅಪ್‌ಡೇಟ್ ಹಂಚಿಕೊಳ್ಳಲಿದ್ದಾರೆ.

    ಶೃತಿ ನಾಗೇಶ್‌, ಪಬ್ಲಿಕ್‌ ಟಿವಿ ಡಿಜಿಟಲ್

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟೈಲೀಶ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟ ಸಾನ್ಯ ಅಯ್ಯರ್

    ಸ್ಟೈಲೀಶ್ ಆಗಿ ಕ್ಯಾಮೆರಾಗೆ ಪೋಸ್ ಕೊಟ್ಟ ಸಾನ್ಯ ಅಯ್ಯರ್

    ‘ಬಿಗ್ ಬಾಸ್’ ಖ್ಯಾತಿಯ ಸಾನ್ಯ ಅಯ್ಯರ್ (Saanya Iyer) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಈಗ ಸ್ಟೈಲೀಶ್ ಆಗಿ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ.

    ಬಿಕಿನಿ ಫೋಟೋಶೂಟ್‌ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ನಟಿ, ಈಗ ಹೊಸ ಲುಕ್‌ನಲ್ಲಿ ಸ್ಟೈಲೀಶ್ ಗೆಟಪ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಕಪ್ಪು ಬಣ್ಣದ ಉಡುಗೆಯಲ್ಲಿ ಸಾನ್ಯ ಕಂಗೊಳಿಸಿದ್ದಾರೆ.

    ಇಂದ್ರಜಿತ್ ಲಂಕೇಶ್ (Indrajit Lankesh) ನಿರ್ದೇಶನದ ‘ಗೌರಿ’ (Gowri) ಸಿನಿಮಾದಲ್ಲಿ ಸಾನ್ಯ ನಾಯಕಿಯಾಗಿದ್ದಾರೆ. ಸಮರ್ಜಿತ್‌ಗೆ ಜೋಡಿಯಾಗಿ ಸಾನ್ಯ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಸಿನಿಮಾದ ಮುಹೂರ್ತ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಇದನ್ನೂ ಓದಿ:ಮಗು ಮಾಡಿಕೊಳ್ಳುವ‌ ಬಗ್ಗೆ ಪ್ಲ್ಯಾನ್ ಇಲ್ವಾ- ವಿಕ್ಕಿ ಕೌಶಲ್ ಹೇಳೋದೇನು?

    ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ(Bigg Boss Kannada) ಸಾನ್ಯ ಅಯ್ಯರ್ ಸ್ಪಧಿಯಾಗಿ ಭಾಗವಹಿಸಿದ್ದರು. ರೂಪೇಶ್ ಶೆಟ್ಟಿ ಜೊತೆಗಿನ ಸಾನ್ಯ ಸ್ನೇಹ ಹೈಲೆಟ್ ಆಗಿತ್ತು. ಈ ಸೀಸನ್‌ನಲ್ಲಿ ರೂಪೇಶ್ ಶೆಟ್ಟಿ (Roopesh Shetty) ವಿನ್ನರ್ ಆಗಿ ಭಾಗವಹಿಸಿದ್ದರು.

    ‘ಪುಟ್ಟ ಗೌರಿ ಮದುವೆ’ (Putta Gowri Maduve) ಸೀರಿಯಲ್ ಸೇರಿದಂತೆ ಹಲವು ಸಿನಿಮಾದಲ್ಲಿ ಸಾನ್ಯ ಬಾಲನಟಿಯಾಗಿ ನಟಿಸಿದ್ದರು. ಈಗ ನಾಯಕಿಯಾಗಿ ಮಿಂಚಲು ಪುಟ್ಟ ಗೌರಿ ರೆಡಿಯಾಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]