Tag: ಗ್ಯಾಂಗ್‍ಸ್ಟರ್

  • ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

    ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ ಭಯೋತ್ಪಾದಕ ಎಂದು ಘೋಷಿಸಿದ ಕೇಂದ್ರ

    ನವದೆಹಲಿ: ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನನ್ನ (Goldy Brar) ಭಯೋತ್ಪಾದಕ ಎಂದು ಸೋಮವಾರ ಕೇಂದ್ರ ಸರ್ಕಾರ ಘೋಷಿಸಿದೆ.

    ದರೋಡೆಕೋರ ಗೋಲ್ಡಿ ಬ್ರಾರ್‌ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಭಯೋತ್ಪಾದಕ ಎಂದು ಘೋಷಿಸಿದೆ. ಈತ ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್ ನ್ಯಾಷನಲ್ (Babbar Khalsa International) ಜೊತೆಗೆ ಸಂಬಂಧ ಹೊಂದಿದ್ದಾನೆ ಎಂದು ಗೃಹ ಸಚಿವಾಲಯ (Home Ministry) ಪ್ರಕಟಣೆಯಲ್ಲಿ ತಿಳಿಸಿದೆ.

    ಗೋಲ್ಡಿ ಬ್ರಾರ್ ಗಡಿಯಾಚೆಗಿನ ಏಜೆನ್ಸಿಗಳಿಂದ ಬೆಂಬಲಿತನಾಗಿ ಅನೇಕ ಹತ್ಯೆಗಳಲ್ಲಿ ತೊಡಗಿಸಿಕೊಂಡಿದ್ದು ಉಗ್ರವಾದದ ಆಮೂಲಾಗ್ರ ಸಿದ್ಧಾಂತ ಪ್ರತಿಪಾದಿಸಿದ್ದಾನೆ. ರಾಷ್ಟ್ರವಾದದ ಪರ ನಾಯಕರಿಗೆ ಬೆದರಿಕೆ ಕರೆಗಳನ್ನ ಹಾಕಿದ್ದಾನೆ. ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದಾನೆ ಎಂದು ಗೃಹ ಸಚಿವಾಲಯ ಹೇಳಿದೆ. ಇದನ್ನೂ ಓದಿ: ಶ್ರೀರಾಮನ ಭಕ್ತರಿಗೆ ಮಾತ್ರ ಅಯೋಧ್ಯೆಗೆ ಆಹ್ವಾನ: ಉದ್ಧವ್ ಠಾಕ್ರೆಗೆ ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ಗಡಿಯಾಚೆಯಿಂದ ಡ್ರೋನ್‌ಗಳ ಮೂಲಕ ಉನ್ನತ ದರ್ಜೆಯ ಶಸ್ತ್ರಾಸ್ತ್ರಗಳು, ಮದ್ದು-ಗುಂಡುಗಳು ಮತ್ತು ಸ್ಫೋಟಕಗಳನ್ನ ಕಳ್ಳಸಾಗಣಿಕೆಯಲ್ಲೂ ತೊಡಗಿಸಿಕೊಂಡಿದ್ದು, ಹತ್ಯೆಗಳನ್ನು ನಡೆಸಲು ಶಾರ್ಪ್ ಶೂಟರ್‌ಗಳಿಗೆ ಸರಬರಾಜು ಮಾಡುತ್ತಿದ್ದ. ಆತನ ಸಹಚರರು ವಿಧ್ವಂಸಕ ಕೃತ್ಯಗಳು, ಭಯೋತ್ಪಾದನಾ ಘಟಕಗಳನ್ನು ಹೆಚ್ಚಿಸುವುದು, ಉದ್ದೇಶಿತ ಹತ್ಯೆಗಳನ್ನು ನಡೆಸುವುದು ಮತ್ತು ಇತರ ದೇಶ ವಿರೋಧಿ ಯೋಜನೆಗಳ ಮೂಲಕ ಪಂಜಾಬ್ ರಾಜ್ಯದಲ್ಲಿ ಶಾಂತಿ, ಕೋಮು ಸೌಹಾರ್ದತೆ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಹಾಳುಮಾಡಲು ಪಿತೂರಿ ನಡೆಸಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿದೆ.

    ಸಿಧು ಮೂಸೆವಾಲಾ ಹತ್ಯೆಯ ದಿನಗಳ ನಂತರ, 2022ರ ಜೂನ್‌ನಲ್ಲಿ ಗೋಲ್ಡಿ ಬ್ರಾರ್ ಅವರ ಹಸ್ತಾಂತರಕ್ಕಾಗಿ ಇಂಟರ್‌ಪೋಲ್ ರೆಡ್ ಕಾರ್ನರ್ ನೋಟಿಸ್ ಹೊರಡಿಸಿತ್ತು. ಆ ನಂತರ ಕ್ಯಾಲಿಫೋರ್ನಿಯಾದಲ್ಲಿ ಆತನನ್ನ ಬಂಧಿಸಲಾಗಿತ್ತು ಎಂದು ಭಾರತದ ಗುಪ್ತಚರ ಸಂಸ್ಥೆಯ ಮೂಲಗಳು ತಿಳಿಸಿದ್ದವು. ಇದನ್ನೂ ಓದಿ: ರಾಮಜನ್ಮಭೂಮಿ ನಮಗೆ ಮತ ಪಡೆಯುವ ರಾಜಕೀಯ ವಿಚಾರವಲ್ಲ: ರಾಜನಾಥ್ ಸಿಂಗ್

  • ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಗ್ಯಾಂಗ್‌ಸ್ಟರ್ ಅತೀಕ್ ಜಮೀನಿನಲ್ಲಿ ಮನೆಗಳನ್ನು ನಿರ್ಮಿಸಿ ಬಡವರಿಗೆ ಹಂಚಿದ ಯೋಗಿ ಆದಿತ್ಯನಾಥ್

    ಲಕ್ನೋ: ಕಳೆದ 2 ತಿಂಗಳ ಹಿಂದೆ ಹತ್ಯೆಯಾಗಿದ್ದ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಅತೀಕ್ ಅಹ್ಮದ್‌ನ (Atiq Ahmed) ಜಮೀನನ್ನು ಸರ್ಕಾರ ವಶಪಡಿಸಿಕೊಂಡಿತ್ತು. ಇದೀಗ ಆ ಭೂಮಿಯಲ್ಲಿ ಮನೆಗಳನ್ನು ನಿರ್ಮಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಬಡವರಿಗೆ ಹಂಚಿದ್ದಾರೆ.

    ಪ್ರಯಾಗ್‌ರಾಜ್ (Prayagraj) ಬಳಿಯ ಲುಕರ್ಗಂಜ್ ಬಳಿ ಸ್ವಾಧೀನಪಡಿಸಿಕೊಂಡ 1731 ಚ.ಮೀ ಭೂಮಿಯಲ್ಲಿ ಸಿಎಂ ಆದಿತ್ಯನಾಥ್ 2021ರ ಡಿಸೆಂಬರ್ 26ರಂದು ವಸತಿಯೋಜನೆಗೆ ಶಂಕು ಸ್ಥಾಪನೆ ಮಾಡಿದ್ದರು. ಬಳಿಕ ಭೂಮಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana) ಅಡಿಯಲ್ಲಿ 2 ಬ್ಲಾಕ್‌ಗಳಲ್ಲಿ 76 ಫ್ಲಾಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

    ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಫ್ಲಾಟ್‌ಗಳನ್ನು ಹಂಚಿಕೆ ಮಾಡಲಾಗಿದೆ. ಶುಕ್ರವಾರ ಆದಿತ್ಯನಾಥ್ ಅವರು 76 ಫ್ಲಾಟ್‌ಗಳ ಕೀಲಿಗಳನ್ನು ಬಡವರಿಗೆ ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: 4 ತಿಂಗಳಲ್ಲಿ ಮೂರನೇ ಬಾರಿಗೆ ಸಂಪುಟಕ್ಕೆ ಸರ್ಜರಿ- ಕೇಜ್ರಿವಾಲ್ ಬಳಿಕ ಅತಿಶಿ ಪ್ರಭಾವಿ ಸಚಿವೆ

    ಅಧಿಕಾರಿಗಳ ಪ್ರಕಾರ ಪ್ರತಿ ಫ್ಲಾಟ್‌ಗಳು 41 ಚ.ಮೀ ವಿಸ್ತೀರ್ಣವನ್ನು ಹೊಂದಿದೆ. ಮನೆಗಳಲ್ಲಿ 2 ಕೊಠಡಿಗಳು, ಅಡುಗೆಮನೆ, ಶೌಚಾಲಯ ಒಳಗೊಂಡಿದೆ. ಈ ಫ್ಲಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಇದರಲ್ಲಿ 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು.

    2017ಕ್ಕೂ ಮೊದಲು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಯಾವುದೇ ಮಾಫಿಯಾಗಳು ವಶಪಡಿಸಿಕೊಳ್ಳಬಹುದಾಗಿತ್ತು. ಆ ಕಾಲದಲ್ಲಿ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಇಂದು ನಾವು ಅದೇ ಭೂಮಿಯಲ್ಲಿ ಬಡವರಿಗೆ ಮನೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಮಾಫಿಯಾಗಳಿಂದ ಭೂಮಿಯನ್ನು ವಶಪಡಿಸಿಕೊಂಡಿರುವುದು ದೊಡ್ಡ ಸಾಧನೆಯಾಗಿದೆ ಎಂದು ಆದಿತ್ಯನಾಥ್ ಸಮಾರಂಭದಲ್ಲಿ ತಿಳಿಸಿದ್ದಾರೆ.

    100 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಅತೀಕ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಈ ವರ್ಷದ ಏಪ್ರಿಲ್‌ನಲ್ಲಿ ಹತ್ಯೆಯಾದರು. ವೈದ್ಯಕೀಯ ತಪಾಸಣೆಗೆಂದು ಪ್ರಯಾಗ್‌ರಾಜ್‌ಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಪತ್ರಕರ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಹತ್ಯೆಯ ವೇಳೆ ಅವರು ಪೊಲೀಸರ ವಶದಲ್ಲೇ ಇದ್ದರು. ಘಟನೆಗೂ ಕೆಲ ದಿನಗಳ ಮುನ್ನ ಅತೀಕ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ. ಇದನ್ನೂ ಓದಿ: ಕೇಂದ್ರದ ಆದೇಶವನ್ನು ಪಾಲಿಸಿ – ಟ್ವಿಟ್ಟರ್‌ ಅರ್ಜಿ ವಜಾ, 50 ಲಕ್ಷ ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಯುಪಿ ಕೋರ್ಟ್‍ನಲ್ಲೇ ಗ್ಯಾಂಗ್‍ಸ್ಟರ್ ಹತ್ಯೆ

    ಲಕ್ನೋ: ಗ್ಯಾಂಗ್‍ಸ್ಟರ್ (Gangster) ಮುಕ್ತರ್ ಸಹಚರನನ್ನು ಕೋರ್ಟ್‌ನ (Court) ಕೊಠಡಿಯಲ್ಲೇ ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಪ್ರದೇಶದ ಕೈಸರ್‌ಬಾಗ್ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದೆ.

    ವಕೀಲರ (Lawyer) ವೇಷದಲ್ಲಿ ಬಂದ ಹಂತಕರು ಏಕಾಏಕಿ ಗ್ಯಾಂಗ್‍ಸ್ಟರ್ ಸಂಜೀವ್ ಜೀವಾ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನೆಲಕ್ಕೆ ಕುಸಿದ ಆತನ ರಕ್ತಸ್ರಾವವನ್ನು ತಡೆಯಲು ಅಧಿಕಾರಿಗಳು ಪ್ರಯತ್ನಪಟ್ಟಿದ್ದಾರೆ. ಆದರೆ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಲ್ಲದೇ ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿಯ ಕಾಲಿಗೆ ಗುಂಡು ತಗುಲಿದೆ.

    ಈ ಕೊಲೆ ಪ್ರಕರಣದಲ್ಲಿ ಎಷ್ಟು ಜನ ಶೂಟರ್‌ಗಳು ಇದ್ದರು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ದಾಳಿಕೋರರು ರಿವಾಲ್ವರ್ ಹಿಡಿದುಕೊಂಡು ನ್ಯಾಯಾಲಯದ ಆವರಣಕ್ಕೆ ಹೇಗೆ ಪ್ರವೇಶಿಸಿದರು ಎಂಬುದು ಸ್ಪಷ್ಟವಾಗಿಲ್ಲ. ಆದರೆ ನ್ಯಾಯಾಲಯದಲ್ಲಿ ಹಾಜರಿದ್ದ ವಕೀಲರು ದಾಳಿಕೋರರಲ್ಲಿ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

    ಮೃತ ಸಂಜೀವ್ ಜೀವಾ ಪಶ್ಚಿಮ ಯುಪಿಯಲ್ಲಿ ಕ್ರಿಮಿನಲ್ ಗ್ಯಾಂಗ್ ನಡೆಸುತ್ತಿದ್ದ. ಅಲ್ಲದೇ ಉತ್ತರಾಖಂಡ (Uttarakhand) ಹಾಗೂ ಉತ್ತರ ಪ್ರದೇಶದಲ್ಲಿ (Uttar Pradesh) ಆತನ ವಿರುದ್ಧ ಕನಿಷ್ಠ 50 ಕ್ರಿಮಿನಲ್ ಪ್ರಕರಣಗಳಿವೆ. ಆತ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಎಂದು ತಿಳಿದು ಬಂದಿದೆ.

  • ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ – ತಮಿಳುನಾಡಿನ 7 ಪೊಲೀಸರು ಸಸ್ಪೆಂಡ್

    ತಿಹಾರ್ ಜೈಲಿನಲ್ಲಿ ಗ್ಯಾಂಗ್‌ಸ್ಟರ್ ಹತ್ಯೆ ಪ್ರಕರಣ – ತಮಿಳುನಾಡಿನ 7 ಪೊಲೀಸರು ಸಸ್ಪೆಂಡ್

    ನವದೆಹಲಿ: ತಿಹಾರ್ ಜೈಲಿನಲ್ಲಿ (Tihar Jail) ಗ್ಯಾಂಗ್‌ಸ್ಟರ್ (Gangster) ಟಿಲ್ಲು ತಾಜ್‌ಪುರಿಯಾನನ್ನು (Tillu Tajpuriya) ಸಹ ಕೈದಿಗಳು ಇರಿದು ಹತ್ಯೆಗೈದ ಸಂದರ್ಭ ಕರ್ತವ್ಯದಲ್ಲಿದ್ದ ತಮಿಳುನಾಡು ವಿಶೇಷ ಪೊಲೀಸ್‌ನ (TNSP) 7 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

    ಸಹ ಕೈದಿಗಳು ಟಿಲ್ಲು ತಾಜ್‌ಪುರಿಯಾ ಮೇಲೆ ಹಲ್ಲೆ ನಡೆಸಿ, ಇರಿದು, ಬರ್ಬರವಾಗಿ ಹತ್ಯೆ ನಡೆಸಿದ್ದು, ಇವೆಲ್ಲವನ್ನೂ ನೋಡುತ್ತ ಮೂಕಪ್ರೇಕ್ಷಕರಂತೆ ನಿಂತಿದ್ದ ಆರೋಪದ ಮೇಲೆ ತಮಿಳುನಾಡಿನ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಅವರನ್ನು ತಮಿಳುನಾಡಿಗೆ ವಾಪಸ್ ಕಳುಹಿಸಲಾಗಿದೆ ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ.

    ಟಿಲ್ಲು ತಾಜ್‌ಪುರಿಯಾ ಹತ್ಯೆ ಬಳಿಕ ದೆಹಲಿ ಕಾರಾಗೃಹಗಳ ಮಹಾನಿರ್ದೇಶಕ ಸಂಜಯ್ ಬೇನಿವಾಲ್ ತನ್ನ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತಮಿಳುನಾಡು ಪೊಲೀಸರಿಗೆ ಪತ್ರ ಬರೆದಿದ್ದರು. ಅದರಂತೆ ತಮ್ಮ ಸಿಬ್ಬಂದಿಯ ಆಪಾದಿತ ನಿರ್ಲಕ್ಷ್ಯದ ಬಗ್ಗೆ ಟಿಎನ್‌ಎಸ್‌ಪಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅವರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಜೈಲಿನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಟಿಲ್ಲು ತಾಜ್‌ಪುರಿಯಾ ಯಾರು?
    2021ರಲ್ಲಿ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಗುಂಡು ಹಾರಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಪ್ರತಿದಾಳಿ ನಡೆಸಿ ಕೊಂದಿದ್ದರು. ಈ ಪ್ರಕರಣದಲ್ಲಿ ಗುಂಡು ಹಾರಿಸುವಂತೆ ಸೂಚನೆ ನೀಡಿದ್ದ ತಾಜ್‌ಪುರಿಯಾ ಪ್ರಮುಖ ಆರೋಪಿಯಾಗಿದ್ದು, ಜೈಲು ಸೇರಿದ್ದ.

    ಜಿತೇಂದರ್ ಗೋಗಿ ಗ್ಯಾಂಗ್ ಹಾಗೂ ಟಿಲ್ಲು ಗ್ಯಾಂಗ್ ನಡುವೆ ಹಲವು ವರ್ಷಗಳಿಂದಲೇ ದ್ವೇಷವಿತ್ತು. ಜೈಲಿನೊಳಗೆ ಟಿಲ್ಲುನನ್ನು ಹತ್ಯೆಗೈದ ಆರೋಪಿಗಳು ಗೋಗಿ ಗ್ಯಾಂಗ್‌ನವರು ಎನ್ನಲಾಗಿದೆ. ಇದನ್ನೂ ಓದಿ: ದೋಣಿ ದುರಂತ- ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಿಸಿದ ಕೇರಳ ಸರ್ಕಾರ

    ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ತಿಹಾರ್ ಜೈಲಿನ ಸಿಸಿಟಿವಿ ವೀಡಿಯೋಗಳು ಹರಿದಾಡಿವೆ. ಅದರಲ್ಲಿ ಕೈದಿಗಳು ಭದ್ರತಾ ಸಿಬ್ಬಂದಿಯ ಮುಂದೆಯೇ ದಾಳಿ ನಡೆಸುತ್ತಿದ್ದುದು ಕಂಡುಬಂದಿದೆ. ತಾಜ್‌ಪುರಿಯಾಗೆ ಚೂರಿಯಿಂದ ಇರಿದ ಬಳಿಕ ಸಿಬ್ಬಂದಿ ಆತನನ್ನು ಅಲ್ಲಿಂದ ಕರೆದುಕೊಂಡು ಹೋಗಿರುವುದು ಕಾಣಿಸಿಕೊಂಡಿದೆ.

    ಇದೀಗ ತಮಿಳುನಾಡು ಪೊಲೀಸರು ತನ್ನ 7 ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ ಹಾಗೂ ರಾಜ್ಯಕ್ಕೆ ಕರೆಸಿಕೊಂಡಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಜೈಲುಗಳಲ್ಲಿದ್ದಾರೆ 654 ಭಾರತೀಯ ಮೀನುಗಾರರು; ಶುಕ್ರವಾರ 199 ಮಂದಿ ರಿಲೀಸ್‌

  • ದೆಹಲಿ ಕೋರ್ಟ್‌ನಲ್ಲಿ ಗುಂಡು ಹಾರಿಸಿದ್ದ ಆರೋಪಿ ತಿಹಾರ್ ಜೈಲಿನಲ್ಲಿ ಹತ್ಯೆ

    ದೆಹಲಿ ಕೋರ್ಟ್‌ನಲ್ಲಿ ಗುಂಡು ಹಾರಿಸಿದ್ದ ಆರೋಪಿ ತಿಹಾರ್ ಜೈಲಿನಲ್ಲಿ ಹತ್ಯೆ

    ನವದೆಹಲಿ: ಕೋರ್ಟ್‌ನಲ್ಲಿ (Court) ಗುಂಡು ಹಾರಿಸಿದ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಗ್ಯಾಂಗ್‌ಸ್ಟರ್ (Gangster) ಟಿಲ್ಲು ತಾಜ್‌ಪುರಿಯಾನನ್ನು (Tillu Tajpuriya) ಬೇರೊಂದು ಗ್ಯಾಂಗ್‌ನ ಸಹ ಕೈದಿಗಳು ಥಳಿಸಿ ಹತ್ಯೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಮಂಗಳವಾರ ಮುಂಜಾನೆ ತಿಹಾರ್ ಜೈಲಿನಲ್ಲಿದ್ದ (Tihar Jail) ಟಿಲ್ಲು ತಾಜ್‌ಪುರಿಯಾ ಅಲಿಯಾಸ್ ಸುನೀಲ್ ಮಾನ್‌ನನ್ನು ಮತ್ತೊಬ್ಬ ಗ್ಯಾಂಗ್‌ಸ್ಟರ್ ಯೋಗೇಶ್ ತುಂಡಾ ಹಾಗೂ ಆತನ ಸಹಚರರು ಕಬ್ಬಿಣದ ರಾಡ್‌ಗಳಿಂದ ಥಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಟಿಲ್ಲುನನ್ನು ತಕ್ಷಣ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಅಲ್ಲಿ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

    ಘಟನೆಯೇನು?
    2021ರಲ್ಲಿ ದೆಹಲಿಯ ರೋಹಿಣಿ ಕೋರ್ಟ್‌ನಲ್ಲಿ (Rohini Court) ಗ್ಯಾಂಗ್‌ಸ್ಟರ್ ಜಿತೇಂದರ್ ಗೋಗಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಟಿಲ್ಲು ಪ್ರಮುಖ ಆರೋಪಿಯಾಗಿದ್ದ. ನ್ಯಾಯಾಲಯದ ಒಳಗಡೆ ಇಬ್ಬರು ವಕೀಲರ ವೇಷದಲ್ಲಿ ಬಂದಿದ್ದ ಗ್ಯಾಂಗ್‌ಸ್ಟರ್‌ಗಳು ಜಿತೇಂದರ್ ಗೋಗಿ ಮೇಲೆ ಗುಂಡು ಹಾರಿಸಿ ಕೊಂದಿದ್ದರು. ಆ ವೇಳೆ ಪೊಲೀಸರು ಪ್ರತಿ ದಾಳಿ ನಡೆಸಿ ಆರೋಪಿಗಳಿಬ್ಬರನ್ನೂ ಗುಂಡಿಕ್ಕಿ ಕೊಂದಿದ್ದರು. ಇದನ್ನೂ ಓದಿ: ಮಳೆ, ಹಿಮಪಾತ – ತಂಗಿರುವ ಸ್ಥಳದಲ್ಲಿಯೇ ಇರಿ: ಕೇದಾರನಾಥ ಯಾತ್ರಾರ್ಥಿಗಳಿಗೆ ಎಚ್ಚರಿಕೆ

    ಜಿತೇಂದರ್ ಗೋಗಿ ಗ್ಯಾಂಗ್ ಹಾಗೂ ಟಿಲ್ಲು ಗ್ಯಾಂಗ್ ನಡುವೆ ಹಲವು ವರ್ಷಗಳಿಂದ ದ್ವೇಷವಿತ್ತು. ಈ ಹಿನ್ನೆಲೆ ಗುಂಡಿನ ದಾಳಿ ನಡೆಸಿದ್ದರು. ಜಿತೇಂದರ್ ಗೋಗಿ ಮೇಲೆ ಗುಂಡು ಹಾರಿಸಲು ಟಿಲ್ಲು ತಾಜ್‌ಪುರಿಯಾ ಫೋನ್ ಕಾಲ್ ಮೂಲಕ ಆರೋಪಿಗಳಿಗೆ ಸೂಚನೆಯನ್ನು ನೀಡಿದ್ದ ಎಂಬುದು ಪ್ರಕರಣದ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: ಖರ್ಗೆ ತವರಿನಲ್ಲಿ ಮೋದಿ ದಂಡಯಾತ್ರೆ – 25 ಕ್ಷೇತ್ರದ ಮೇಲೆ ಬಿಜೆಪಿ ಕಣ್ಣು