Tag: ಗ್ಯಾಂಗ್ ಸ್ಟರ್

  • ಸಲ್ಮಾನ್ ಖಾನ್ ಬೆಂಬಲಕ್ಕೆ ನಿಂತ ರಾಖಿ ಸಾವಂತ್ ಗೆ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ

    ಸಲ್ಮಾನ್ ಖಾನ್ ಬೆಂಬಲಕ್ಕೆ ನಿಂತ ರಾಖಿ ಸಾವಂತ್ ಗೆ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ

    ಬಾಲಿವುಡ್ ನಟ ಸಲ್ಮಾನ್ ಖಾನ್ ಪರವಾಗಿ ನಿಂತಿರುವ ಮತ್ತು ಸಲ್ಮಾನ್ ಕುರಿತಾಗಿ ಸಾಕಷ್ಟು ಮೆಚ್ಚುಗೆಯ ಮಾತುಗಳನ್ನು ಆಡುವ ರಾಖಿ ಸಾವಂತ್ (Rakhi Sawant) ಗೆ ಲಾರೆನ್ಸ್ ಬಿಷ್ಣೋಯ್ ಟೀಮ್ ನಿಂದ ಬೆದರಿಕೆ ಕರೆ ಬಂದಿದೆಯಂತೆ. ಈ ಕುರಿತು  ರಾಖಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಲ್ಮಾನ್ ವಿಚಾರವಾಗಿ ಮೂಗು ತೂರಿಸಿದಂತೆ ರಾಖಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಎಚ್ಚರಿಕೆ ನೀಡಿದೆಯಂತೆ.

    ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ (Mumbai) ಪೊಲೀಸರು (Police) ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ಅಲ್ಲದೇ, ಸುಖಾಸುಮ್ಮನೆ ಅವರ ಮನೆ ಸುತ್ತ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

    salman

    ಈಗಾಗಲೇ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.

    ಸಲ್ಮಾನ್ ಖಾನ್ ಜೀವ ಉಳಿಯಬೇಕು ಎಂದರೆ, ತನ್ನ ಮಾತನ್ನು ಕೇಳಲೇಬೇಕು ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ಅವರ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದಾನೆ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎಂದಿದ್ದಾನೆ.  ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲಾದರೂ, ಅವರು ಕ್ಷಮೆ ಕೇಳಿಲ್ಲ. ಅವರು ಕ್ಷಮೆ ಕೇಳುವತನಕ ಈ ಯುದ್ಧ ನಿಲ್ಲುವುದಿಲ್ಲ. ಮುಂದಿನ ಎಲ್ಲ ಪರಿಣಾಮಗಳಿಗೆ ಸಲ್ಮಾನ್ ಸಿದ್ಧವಾಗಿರಬೇಕು ಎಂದು ಲಾರೆನ್ಸ್ ಗುಡುಗಿದ್ದಾನೆ.

  • ಶೂಟಿಂಗ್ ಮುಗಿಸಿದ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಸಿನಿಮಾ

    ಶೂಟಿಂಗ್ ಮುಗಿಸಿದ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಸಿನಿಮಾ

    ತಿಲಕ್ ಶೇಖರ್(ಉಗ್ರಂ ಖ್ಯಾತಿ) (Tilak Shekhar) ‘ಗ್ಯಾಂಗ್ ಸ್ಟರ್’ (Gangster) ಆಗಿ ಹಾಗೂ ಗಿರೀಶ್ ಕುಮಾರ್ ಬಿ (Girish Kumar)  ‘ಫ್ರಾಂಕ್ ಸ್ಟರ್’ (Frankster) ಆಗಿ ನಟಿಸಿರುವ ‘ಗ್ಯಾಂಗ್ ಸ್ಟರ್ ಅಲ್ಲ ಫ್ರಾಂಕ್ ಸ್ಟರ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಮುಖ್ಯಪಾತ್ರದಲ್ಲಿ ನಟಿಸಿರುವ ಗಿರೀಶ್ ಕುಮಾರ್ ಬಿ ಈ ಚಿತ್ರದ ನಿರ್ದೇಶಕರು ಹೌದು‌‌‌.  ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಸಹ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಪ್ರಥಮಪ್ರತಿ ಸಿದ್ದವಾಗಲಿದೆ.

    ಕಾಮಿಡಿ – ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಗಿರೀಶ್ ಕುಮಾರ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಈ ಹಿಂದೆ “ಭಾವಚಿತ್ರ” ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್ ಕುಮಾರ್ ಅವರಿಗೆ ಇದು ಮೂರನೇ ಚಿತ್ರ. ಇದನ್ನೂ ಓದಿ: ಅಭಿಷೇಕ್ ಅಂಬರೀಶ್ ನಟನೆಯ `ಬ್ಯಾಡ್ ಮ್ಯಾನರ್ಸ್’ ಫಸ್ಟ್ ಸಾಂಗ್ ಔಟ್

    ಜಾನ್ ಕೆನಡಿ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈ ಚಿತ್ರದಲ್ಲಿದೆ. ಖ್ಯಾತ  ಆನಂದ್ ಆಡಿಯೋ ಸಂಸ್ಥೆ ಮೂಲಕ ಹಾಡುಗಳು ಬಿಡುಗಡೆಯಾಗಲಿದೆ. ಅಜಯ್ ಕುಮಾರ್ ಛಾಯಾಗ್ರಹಣ, ರತೀಶ್ ಕುಮಾರ್ ಸಂಕಲನ ಹಾಗೂ ಗಿರೀಶ್ ಬಿಜ್ಜಳ್ ಅವರ ಸಹ ನಿರ್ದೇಶನ ಈ ಚಿತ್ರಕ್ಕಿದೆ.

    ತಿಲಕ್ , ಗಿರೀಶ್ ಕುಮಾರ್, ವಿರಾಣಿಕ ಶೆಟ್ಟಿ, ಬಾಲ ರಾಜವಾಡಿ, ಗಿರೀಶ್ ಬಿಜ್ಜಳ್, ಹೊನವಳ್ಳಿ ಕೃಷ್ಣ, ಸಂಗೀತ ಅನಿಲ್, ಸುಂದರ್, ರತೀಶ್ ಕುಮಾರ್ , ಮಜಾ ಟಾಕೀಸ್ ಪವನ್, ಹನುಮಂತೇಗೌಡ, ಭವಾನಿ ಪ್ರಕಾಶ್ ಮುಂತಾದವರ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಸಲ್ಮಾನ್ ಖಾನ್ ಸಾಯಿಸೋದೇ ನನ್ನ ಅಂತಿಮ ಗುರಿ: ಗ್ಯಾಂಗ್ ಸ್ಟರ್ ಸ್ಫೋಟಕ ಮಾತು

    ಸಲ್ಮಾನ್ ಖಾನ್ ಸಾಯಿಸೋದೇ ನನ್ನ ಅಂತಿಮ ಗುರಿ: ಗ್ಯಾಂಗ್ ಸ್ಟರ್ ಸ್ಫೋಟಕ ಮಾತು

    ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್  ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾರೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.

    ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ. ಇದನ್ನೂ ಓದಿ: `ನಾಟು ನಾಟು’ ಹಾಡಿಗೆ ಸ್ಟೆಪ್ ಹಾಕಿದ ಕಿಂಗ್ ಕೊಹ್ಲಿ – ವಿರಾಟ್ ಡಾನ್ಸ್‌ಗೆ ಅಭಿಮಾನಿಗಳು ಫಿದಾ

    salman

    ಸಲ್ಮಾನ್ ಖಾನ್ ಜೀವ ಉಳಿಯಬೇಕು ಎಂದರೆ, ತನ್ನ ಮಾತನ್ನು ಕೇಳಲೇಬೇಕು ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ಅವರ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದಾನೆ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎಂದಿದ್ದಾನೆ.

    ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲಾದರೂ, ಅವರು ಕ್ಷಮೆ ಕೇಳಿಲ್ಲ. ಅವರು ಕ್ಷಮೆ ಕೇಳುವತನಕ ಈ ಯುದ್ಧ ನಿಲ್ಲುವುದಿಲ್ಲ. ಮುಂದಿನ ಎಲ್ಲ ಪರಿಣಾಮಗಳಿಗೆ ಸಲ್ಮಾನ್ ಸಿದ್ಧವಾಗಿರಬೇಕು ಎಂದು ಲಾರೆನ್ಸ್ ಗುಡುಗಿದ್ದಾನೆ. ಈತನ ಮಾತಿಗೆ ಪೊಲೀಸ್ ಇಲಾಖೆ ಯಾವ ರೀತಿಯಲ್ಲಿ ಕ್ರಮ ತಗೆದುಕೊಳ್ಳತ್ತೋ ಕಾದು ನೋಡಬೇಕಿದೆ.

  • ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ಮೇಲೆ ಗುಂಡಿನ ದಾಳಿ – ತಾನೇ ಗುಂಡು ಹಾರಿಸಿದ್ದಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ ಗ್ಯಾಂಗ್‍ಸ್ಟರ್

    ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ಮೇಲೆ ಗುಂಡಿನ ದಾಳಿ – ತಾನೇ ಗುಂಡು ಹಾರಿಸಿದ್ದಾಗಿ ಫೇಸ್ ಬುಕ್ ಪೋಸ್ಟ್ ಹಾಕಿದ ಗ್ಯಾಂಗ್‍ಸ್ಟರ್

    ಚಂಡಿಗಢ :  ಖ್ಯಾತ ಪಂಜಾಬಿ ಗಾಯಕ ಪರ್ಮಿಶ್ ವರ್ಮಾ ಹಾಗೂ ಅವರ ಸ್ನೇಹಿತನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.

    ಮೊಹಾಲಿಯ ಸೆಕ್ಟರ್ 74 ರಲ್ಲಿ ಶುಕ್ರವಾರ ತಡ ರಾತ್ರಿ ದಾಳಿ ನಡೆಸಿ ಪರಾರಿಯಾಗಿದ್ದರು. ಈ ದಾಳಿಯಲ್ಲಿ ಗಾಯಗೊಂಡಿರುವ ಪರ್ಮಿಶ್ ಹಾಗೂ ಆತನ ಸ್ನೇಹಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಗುಂಡಿನ ದಾಳಿಯಲ್ಲಿ ಪರ್ಮಿಶ್ ಅವರ ಕಾಲಿಗೆ ಗುಂಡೇಟು ತಗುಲಿದೆ. ರಾತ್ರಿ ವೇಳೆ ಕಾರ್ಯಕ್ರಮವೊಂದರ ಪ್ರಚಾರ ಕಾರ್ಯ ನಡೆಸಿ ಹಿಂದಿರುಗುತ್ತಿದ್ದ ವೇಳೆ ಅವರ ಮೇಲೆ ದಾಳಿ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕುಲ್ ದೀಪ್ ಚಹಲ್ ಮಾಹಿತಿ ನೀಡಿದ್ದಾರೆ.

    ಪರ್ಮಿಶ್ ವರ್ಮಾ ಪಂಜಾಬಿಯ ಖ್ಯಾತ ಗಾಯಕರಾಗಿದ್ದು, ಇವರ ಸೂಪರ್ ಹಿಟ್ ‘ಗಾಲ್ ನಿ ಕದ್ನಿ’ ಹಾಡನ್ನು ಸುಮಾರು 11 ಕೋಟಿ ಬಾರಿ ವಿಕ್ಷಣೆ ಮಾಡಲಾಗಿದೆ. ಇವರ ಇತ್ತೀಚಿನ ಮತ್ತೊಂದು ಹಾಡು ಸಹ ಹಿಟ್ ಲಿಸ್ಟ್ ನಲ್ಲಿ ಸೇರಿತ್ತು. ಪಮಿರ್ಶ್ ಜನಪ್ರಿಯತೆ ಹೆಚ್ಚಾಗುತ್ತಿದಂತೆ ಗ್ಯಾಂಗ್‍ಸ್ಟರ್ ಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

    ಗ್ಯಾಂಗ್ ಸ್ಟರ್ ಕೈವಾಡ?
    ಘಟನೆ ಬಳಿಕ ಪರ್ಮಿಶ್ ಮೇಲೆ ತಾವೇ ಗುಂಡಿನ ದಾಳಿಯನ್ನು ತಾವೇ ನಡೆಸಿದ್ದಾಗಿ ಗ್ಯಾಂಗ್‍ಸ್ಟರ್ ದಿಲ್ ಪ್ರೀತ್ ಸಿಂಗ್ ದಹನ್ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಪೋಸ್ಟ್ ನಲ್ಲಿ ಗ್ಯಾಂಗ್ ನ ವ್ಯಕ್ತಿ ಪಿಸ್ತೂಲ್ ನೊಂದಿಗೆ ಪರ್ಮಿಶ್ ಫೋಟೋವನ್ನು ಹಾಕಿ ದಾಳಿಯ ಕುರಿತು ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮೊಹಾಲಿ ಪೊಲೀಸರು ತನಿಖೆ ನಡೆಸಿದ್ದಾರೆ.