– ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ ಲಾರಿ ಮಾಲೀಕರು
ಬೆಂಗಳೂರು: ಸರ್ಕಾರದ ಅನ್ನಭಾಗ್ಯ ಗ್ಯಾರಂಟಿ ಯೋಜನೆಗೆ ಮತ್ತೊಂದು ವಿಘ್ನ ಎದುರಾಗಿದೆ. ಬಾಡಿಗೆ ನೀಡದ ಸರ್ಕಾರದ ವಿರುದ್ದ ಲಾರಿ ಚಾಲಕರು ಮತ್ತು ಮಾಲೀಕರು ಆಕ್ರೋಶ ಹೊರಹಾಕಿ ಆಹಾರ ಧಾನ್ಯ ಸಾಗಾಣಿಕೆಯನ್ನು ಇಂದಿನಿಂದ ಬಂದ್ ಮಾಡಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ.
ಫೆಬ್ರವರಿಯಿಂದ ಮೇ ತಿಂಗಳವರೆಗೆ ಸರ್ಕಾರ ಬಾಕಿ ಮೊತ್ತ ಪಾವತಿಸಿಲ್ಲ. ಬಾಕಿ ಹಣ ಪಾವತಿಯಾಗುವವರೆಗೆ ಅನ್ನಭಾಗ್ಯದ ಅಕ್ಕಿ ಸರಬರಾಜು ಮಾಡುವುದಿಲ್ಲ. ಹಣ ಪಾವತಿಯಾಗದ ಕಾರಣ ಮೂರರಿಂದ ನಾಲ್ಕು ಸಾವಿರ ಲಾರಿ ಮಾಲೀಕರು ಕಂ ಚಾಲಕರು ಸಂಕಷ್ಟದಲ್ಲಿದ್ದಾರೆ. ಮುಷ್ಕರದಿಂದ ಯಶವಂತಪುರ ಎಂಪಿಎಂಸಿ, ಚಾಮರಾಜಪೇಟೆ ಲಾರಿ ಸ್ಟ್ಯಾಂಡ್ ಬಳಿ ಲಾರಿಗಳು ನಿಂತಲ್ಲೇ ನಿಂತಿವೆ. ಇದನ್ನೂಓದಿ: ಮಾಟ ಮಾಡ್ತಾರೆ ಅಂತ ಒಂದೇ ಕುಟುಂಬದ ಐವರನ್ನು ಜೀವಂತವಾಗಿ ಸುಟ್ಟು ಹತ್ಯೆ
ಸರ್ಕಾರ ಅನ್ನಭಾಗ್ಯ ಅಕ್ಕಿ ಸಾಗಣೆಯ ಸುಮಾರು 260 ಕೋಟಿ ರೂ. ಬಾಡಿಗೆಯನ್ನು ಬಾಕಿ ಉಳಿಸಿಕೊಂಡಿದೆ. ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರರ ಸಂಘ ಇಂದಿನಿಂದ ಬಂದ್‌ಗೆ ಕರೆ ನೀಡಿವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ತಿಳಿಸಿದ್ದಾರೆ. ಇದನ್ನೂಓದಿ: ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ
ಬಾಡಿಗೆ ನೀಡದ ಕಾರಣ ಇಪಿಎಫ್, ಇಎಸ್ಐ ಕಟ್ಟಿಲ್ಲ. ಸರ್ಕಾರದ ಜೊತೆಗೆ ಅಧಿಕಾರಿಗಳೇ ಓಡಿಸಿಕೊಳ್ಳಲಿ. ಸಾಗಾಣಿಕೆ ಟೆಂಡರ್‌ಗಳಲ್ಲಿ ಭಾಗವಹಿಸುವಾಗ ನೀಡಿದ್ದ ಇಎಂಡಿ ಮೊತ್ತವನ್ನು ಬ್ಯಾಂಕ್ ಗ್ಯಾರಂಟಿ ನೀಡಿದ ನಂತರವೂ ಗುತ್ತಿಗೆದಾರರಿಗೆ ಮರುಪಾವತಿ ಮಾಡಿಲ್ಲ. ಆಯ್ಕೆಯಾಗದ ಬಿಡ್‌ದಾರರಿಗೂ ಇಎಂಡಿ ಹಣ ಹಿಂತಿರುಗಿಸಿಲ್ಲ. ಒಂದು ದಿನ ತೆರಿಗೆ ಕಟ್ಟದೇ ಇದ್ದರೆ ದಂಡ ವಿಧಿಸುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು.
ಚಿಕ್ಕಬಳ್ಳಾಪುರ: ಗ್ಯಾರಂಟಿಗಳಿಂದ (Guarantee Scheme) ಖಜಾನೆ ಖಾಲಿ, ಪಾಪರ್ ಸರ್ಕಾರ ಎಂದು ಬಿಜೆಪಿಯವರು (BJP) ಟೀಕೆ ಮಾಡುತ್ತಾರೆ. ಬಿಜೆಪಿಯವರ ಮಾತಲ್ಲಿ ಎಳ್ಳಷ್ಟು ಸತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಿಪಕ್ಷಗಳಿಗೆ ಟಾಂಗ್ ಕೊಟ್ಟಿದ್ದಾರೆ.
ರಾಜ್ಯ ಸರ್ಕಾರದ 2 ವರ್ಷದ ಸಾಧನೆಯ ಹೆಸರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಭೈರದೇನಹಳ್ಳಿ ಬಳಿ ಸಾಧನೆ ಸಮಾವೇಶ ನಡೆಸಲಾಯಿತು. ಸಮಾವೇಶದಲ್ಲಿ ಮಾತನಾಡಿದ ಸಿಎಂ, ಚುನಾವಣಾ ಪೂರ್ವದಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಿದ್ದೆವು. ಅಧಿಕಾರಕ್ಕೆ ಬಂದ ಕೂಡಲೇ ನಾವು 5 ಗ್ಯಾರಂಟಿಗಳನ್ನ ಜನರಿಗೆ ಕೊಡುತ್ತಿದ್ದೇವೆ. 2 ವರ್ಷದಲ್ಲಿ 80 ಸಾವಿರ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದ್ದೇವೆ. ಈ ವರ್ಷವೂ ಕೂಡ 50 ಸಾವಿರ ಕೋಟಿಗೂ ಹೆಚ್ಚು ಹಣ ಬಜೆಟ್‌ನಲ್ಲಿಟ್ಟಿದ್ದೇವೆ. ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹಾಗಿದ್ರೆ ಇಂದು 1,000 ಕೋಟಿಗೂ ಅಧಿಕ ಕಾಮಗಾರಿಗಳಿಗೆ ಚಾಲನೆ ಕೊಡೋಕೆ ಆಗುತ್ತಿತ್ತಾ? ಪಾಪರ್ ಆಗಿರುವ ಸರ್ಕಾರ ಈ ಕೆಲಸ ಮಾಡಲು ಸಾಧ್ಯ ಇಲ್ಲ ಎಂದರು. ಇದನ್ನೂ ಓದಿ: ಎನ್‌ಎಸ್‌ಎಸ್ ಶಿಬಿರದಲ್ಲಿ ನಮಾಜ್ ಮಾಡುವಂತೆ ಒತ್ತಾಯ – 8 ಮಂದಿಯ ವಿರುದ್ಧ FIR
ಬಿಜೆಪಿಯವರು ಜನಾಕ್ರೋಶ ಅಂತ ಹೋರಾಟ ಮಾಡುತ್ತಿದ್ದಾರೆ. ಸುರ್ಜೇವಾಲರು ಹೇಳಿರುವ ಹಾಗೆ ಗೋಡೆ ಮಂಕಾಗಿದೆ, ಕೊಳಕಾಗಿದೆ ಎಂದು ಹೆಣ್ಣುಮಗಳು ಹೇಳುತ್ತಾಳೆ. ಆದರೆ ಕೊಳಕು ಆಗಿರೋದು ಹೆಣ್ಣುಮಗಳ ಕಿಟಕಿಯ ಗಾಜು. ಕಿಟಕಿಯ ಗಾಜು ಶುದ್ಧ ಮಾಡದೇ ನೋಡಿ ಹಾಗೆ ಹೇಳುತ್ತಾಳೆ. ಅದೇ ರೀತಿ ಬಿಜೆಪಿಯವರು ಸಹ ನಮ್ಮ ಬಗ್ಗೆ ಟೀಕೆ ಮಾಡುತ್ತಾರೆ. ಕೇಂದ್ರ ಸರ್ಕಾರ ದಿನೇದಿನೇ ಬೆಲೆ ಏರಿಕೆ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಮೇಲೆ ಬೆಲೆ ಏರಿಕೆ ಮಾಡಿದ್ದರು. ಬಿಜೆಪಿ ಜನಾಕ್ರೋಶ ಆರಂಭ ಮಾಡಿದ ಮೇಲೆ ಬೆಲೆ ಏರಿಕೆ ಆಗಿದ್ದು, ಬೆಲೆ ಏರಿಕೆಗೆ ನೇರ ಕಾರಣ ಕೇಂದ್ರ ಸರ್ಕಾರ, ನರೇಂದ್ರ ಮೋದಿ ಕಾರಣ. ನಾವು ಅಭಿವೃದ್ಧಿ ಜೊತೆಗೆ ಗ್ಯಾರಂಟಿಗಳನ್ನು ಜನರಿಗೆ ಕೊಟ್ಟಿದ್ದೇವೆ. ಪಾಪರ್ ಸರ್ಕಾರದಲ್ಲಿ 38 ಸಾವಿರ ಕೋಟಿ ಹೆಚ್ಚು ಬಜೆಟ್ ಮಂಡಿಸಲು ಸಾಧ್ಯ ಇಲ್ಲ. ಬಿಜೆಪಿಯವರು ಸುಳ್ಳು ಅಪಾದನೆ ಆರೋಪ ಮಾಡೋದೆ ಅವರ ಕೆಲಸ. ಕರ್ನಾಟಕದ ಜನ ಬಿಜೆಪಿಯವರಿಗೆ ಪೂರ್ಣ ಬಹುಮತ ಎಂದೂ ಕೊಟ್ಟಿಲ್ಲ. ಹಿಂಬಾಗಿಲಿನ ಮೂಲಕ ಅಧಿಕಾರಿ ಹಿಡಿದವರು ಬಿಜೆಪಿಯವರು ಎಂದು ಟೀಕಿಸಿದರು. ಇದನ್ನೂ ಓದಿ: ರಿಕ್ಕಿ ರೈ ಮೇಲೆ ಫೈರಿಂಗ್ ಪ್ರಕರಣದಲ್ಲಿ ನಮ್ಮ ಪಾತ್ರ ಇಲ್ಲ – ವಿಚಾರಣೆ ಬಳಿಕ ಮುತ್ತಪ್ಪ ರೈ 2ನೇ ಪತ್ನಿ ಪ್ರತಿಕ್ರಿಯೆ
– ರಾಗಿ ಕಟಾವು ಯಂತ್ರಗಳಿಗೆ ಭಾರೀ ಬೇಡಿಕೆ – ಹಳ್ಳಿಗಳಲ್ಲಿ ಕೂಲಿ ಕೆಲಸಕ್ಕೆ ಬರುತ್ತಿಲ್ಲ ಮಹಿಳೆಯರು
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರಂತೂ ಪುಲ್ ಖುಷಿಯಾಗಿದ್ದಾರೆ. ಆದರೆ ಇದೇ ಗ್ಯಾರಂಟಿ ಈಗ ಇನ್ನೊಂದು ಕಡೆದ ರೈತರ ಸಮಸ್ಯೆಗಳಿಗೂ ಕಾರಣವಾಗುತ್ತಿದೆ.
ಈಗ ಹಳ್ಳಿಗಾಡಿನಲ್ಲಿ ರಾಗಿ ಕಟಾವು ಮಾಡಿ ಮನೆ ತುಂಬಿಸಿಕೊಳ್ಳುವ ಸಮಯ. ಆದರೆ ಗ್ಯಾರಂಟಿ ಯೋಜನೆಗಳ ಪರಿಣಾಮದಿಂದ ಗ್ರಾಮೀಣ ಭಾಗದಲ್ಲಿ ಕೃಷಿ ಕಾಯಕ ಮಾಡಲು ಕೂಲಿಯಾಳುಗಳು ಸಿಗುತ್ತಿಲ್ಲ ಎಂದು ರೈತರು ನೋವು ತೋಡಿಕೊಂಡಿದ್ದಾರೆ.
ಚಂಡಮಾರುತದಿಂದ ಜಡಿ ಮಳೆ ಆಗುತ್ತಿದ್ದು ರಾಗಿ ಕಟಾವಿಗೆ ಕೊಡಬಾರದ ಕಾಟ ಕೊಡುತ್ತಿದೆ. ಕಾರ್ಮಿಕರಿದ್ದರೆ ಸರಿಯಾದ ಸಮಯದಲ್ಲಿ ಫಸಲು ತೆಗೆಯಬಹುದಿತ್ತು. ಆದರೆ ಕಾರ್ಮಿಕರು ಸಿಗದ ಕಾರಣ ಬಂದ ಬೆಳೆ ಹಾಳಾಗದೇ ಇರಲು ರೈತರು ಈಗ ಕಟಾವು ಯಂತ್ರಗಳ ಮೊರೆ ಹೋಗುತ್ತಿದ್ದಾರೆ. ಇದರಿಂದಾಗಿ ಈಗ ಕಟಾವು ಯಂತ್ರಗಳಿಗೆ ಭಾರೀ ಬೇಡಿಕೆ ಬಂದಿದೆ.
ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂ. ಬರುತ್ತಿದೆ. ರಾಜ್ಯಾದ್ಯಂತ ಬಸ್ಸಿನಲ್ಲಿ ಉಚಿತವಾಗಿ ಓಡಾಡಬಹುದು. ಸರ್ಕಾರಿಂದಲೇ ಅಕ್ಕಿ ಸಹ ಉಚಿತವಾಗಿ ಸಿಗುತ್ತಿದೆ. ವಿದ್ಯುತ್ ಬಿಲ್ ಸಹ ಪಾವತಿಸುವ ಅಗತ್ಯವಿಲ್ಲ. ಈ ಕಾರಣದಿಂದ ಈಗ ಗ್ರಾಮೀಣ ಭಾಗದಲ್ಲಿ ಕೆಲಸಕ್ಕೆ ಜನ ಸಿಗುತ್ತಿಲ್ಲ ಎಂದು ರೈತರಾದ ಅಶ್ವತ್ಥಪ್ಪ ಬೇಸರ ತೋಡಿಕೊಂಡಿದ್ದಾರೆ.
ರಾಗಿ ಕಟಾವು ಮಾಡುವ ಯಂತ್ರಕ್ಕೆ ಭಾರೀ ಬೇಡಿಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ರಾಗಿ ಕಟಾವು ಯಂತ್ರಗಳಿಗೆ ಒಂದು ಗಂಟೆಗೆ 2,700 ರೂ. ದರ ನಿಗದಿಮಾಡಿದೆ. ದರ ನಿಗದಿಯಾಗಿದ್ದರೂ ಬೇಡಿಕೆ ಜಾಸ್ತಿ ಇರುವ ಹಿನ್ನೆಲೆಯಲ್ಲಿ ಯಂತ್ರಗಳ ಮಾಲೀಕರು ರೈತರ ಬಳಿ ಹೆಚ್ಚು ಹಣ ಪಡೆದು ರಾಗಿ ಕಟಾವು ಮಾಡಿಕೊಡುತ್ತಿದ್ದಾರೆ ಎಂಬ ದೂರುಗಳು ಸಹ ಬರುತ್ತಿವೆ.
ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ 80% ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ. ಮತ್ತು ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ, ಸರ್ಕಾರ ಇದ್ದನ್ನು ಗಮನದಲ್ಲಿಟ್ಟು ಅವರಿಗೆ ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು…
ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi), ಶೋಭಾ ಕರಂದ್ಲಾಜೆ (Shobha Karandlaje) ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ. ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ. ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.
ಬೆಂಗಳೂರು: ಸಚಿವ ಸಂಪುಟ ಪುನಾರಚನೆ (Cabinet Reshuffle) ವಿಚಾರ ಸಂಪೂರ್ಣವಾಗಿ ಮುಖ್ಯಮಂತ್ರಿಗಳಿಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರೊಂದಿಗೆ ಸಮಾಲೋಚನೆ ಮಾಡಿಕೊಂಡು ಮಾಡುವ ಪದ್ಧತಿ ಇದೆ. ಹೈಕಮಾಂಡ್‌ನೊಂದಿಗೆ ಚರ್ಚೆ ಮಾಡಿ, ಅವರಿಬ್ಬರು ಯಾವ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬುದು ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ – ಯುವಕನ ಕೊಲೆಯಲ್ಲಿ ಜಗಳ ಅಂತ್ಯ
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿವಾದಾತ್ಮಕ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿದ ಅವರು, ಸಂವಿಧಾನದ ಆಶಯಗಳು, ಸಂವಿಧಾನದಲ್ಲಿ ಪ್ರತಿಯೊಂದು ಸಮುದಾಯಗಳಿಗೆ ಮತ್ತು ಧರ್ಮಗಳಿಗೆ ಕೊಟ್ಟಿರುವ ಹಕ್ಕು ಮತ್ತು ಅವಕಾಶಗಳನ್ನು ಅವರು ಸರಿಯಾಗಿ ನೋಡಿಕೊಂಡಿಲ್ಲ. ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅದಕ್ಕೆ ವ್ಯತಿರಿಕ್ತವಾಗಿ ನಾವು ಮಾತನಾಡುವುದಾಗಲಿ ಅಥವಾ ಕ್ರಮ ಮಾಡುವುದು ಸರಿಯಲ್ಲ. ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಯಾರು ಮಾತನಾಡಬಾರದು ಎಂದು ಹೇಳಿದರು. ಇದನ್ನೂ ಓದಿ: ಶೋಭಾ ಕರಂದ್ಲಾಜೆ ಭೇಟಿ ಮಾಡಿದ ಮುನಿಯಪ್ಪ – ಕೋಲಾರದಲ್ಲಿ ಕೌಶಲ್ಯ ಆಧಾರಿತ ಕೇಂದ್ರ ಸ್ಥಾಪನೆಗೆ ಅನುದಾನ ಬಿಡುಗಡೆಗೆ ಮನವಿ
ಎರಡು ಗ್ಯಾರಂಟಿ ಯೋಜನೆ (Guarantee Scheme) ನಿಲ್ಲಿಸುವಂತೆ ಶಾಸಕ ಗವಿಯಪ್ಪ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಗ್ಯಾರಂಟಿ ಯೋಜನೆಗಳ ಬಗ್ಗೆ ಪಕ್ಷ ಮತ್ತು ಸರ್ಕಾರ ತೀರ್ಮಾನ ತೆಗೆದುಕೊಂಡಿದೆ. ಯಾರಿಗೂ ಗೊತ್ತಿಲ್ಲದೇ ಕದ್ದು ಮುಚ್ಚಿ ತೆಗೆದುಕೊಂಡಿರುವ ತೀರ್ಮಾನವೇನಲ್ಲ. ಚುನಾವಣೆಗೂ ಮೊದಲೇ ಪ್ರಣಾಳಿಕೆಯಲ್ಲಿ ತಿಳಿಸಲಾಗಿತ್ತು. ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಜನಸಮುದಾಯ ನಮ್ಮನ್ನು ನಂಬಿ ಮತ ಚಲಾಯಿಸಿರಬಹುದು. ಹೀಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವುದು ನಮ್ಮ ಕರ್ತವ್ಯ. ನಮ್ಮನಮ್ಮ ಅಭಿಪ್ರಾಯಗಳು ಬೇರೆ ಇರಬಹುದು. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳಬೇಕು. ಯಾವುದೇ ಶಾಸಕರು ತಮ್ಮ ಕ್ಷೇತ್ರಕ್ಕೆ ಅನುದಾನ ಕೇಳುವುದರಲ್ಲಿ ತಪ್ಪಿಲ್ಲ ಎಂದರು. ಇದನ್ನೂ ಓದಿ: ನವವೃಂದಾವನ ಗಡ್ಡೆಯ ಪದ್ಮನಾಭ ತೀರ್ಥರ ಆರಾಧನೆ ರಾಯರಮಠಕ್ಕೆ – ಸುಪ್ರೀಂ
ಅದಾನಿ ವಿಷಯ ರಾಷ್ಟ್ರೀಯ ವಿಚಾರಕ್ಕೆ ಸಂಬಂಧಿಸಿದ್ದು. ಅಮೆರಿಕನ್ ಎಸ್ಟಬ್ಲಿಷ್‌ಮೆಂಟ್ಸ್ ಯಾವ ರೀತಿ ಅವರ ಕಂಪನಿ ನಡೆದುಕೊಳ್ಳುತ್ತಿದೆ ಎಂಬುದನ್ನು ತೋರಿಸಿದೆ. ಈ ಬಗ್ಗೆ ಅದಾನಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುವುದರಲ್ಲಿ ತಪ್ಪೇನಿದೆ? ರಾಹುಲ್ ಗಾಂಧಿಯವರು ಪ್ರತಿಯೊಂದು ಭಾಷಣದಲ್ಲಿ ಹೇಳಿಕೊಂಡು ಬಂದಿದ್ದಾರೆ. ಅದಾನಿ ಅವರು ಅನೇಕ ಅವ್ಯವಹಾರಗಳನ್ನು ಮಾಡುತ್ತಿದ್ದಾರೆ. ಅವರಿಗೆ ಬೆಂಬಲಿಸುತ್ತಿದ್ದೀರಿ ಎಂದು ಪ್ರಧಾನಿಯವರಿಗೆ ನೇರವಾಗಿ ಹೇಳಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷ ಚರ್ಚಿಸಲು ಅವಕಾಶ ಕೇಳುವುದು ತಪ್ಪೇನಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ಹುಲಿ ಉಗುರು ಸಾಗಿಸುತ್ತಿದ್ದ ಆರೋಪಿ ಬಂಧನ
ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹಿಂದಿನ ಸರ್ಕಾರ ಲಕ್ಷಾಂತರ ಕೋಟಿ ರೂ. ಬಿಲ್ ಬಾಕಿ ಉಳಿಸಿ ಹೋಗಿತ್ತು. ಅದನ್ನೆಲ್ಲ ನಾವು ಭರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ 56,000 ಕೋಟಿ ರೂ. ಹೆಚ್ಚುವರಿ ಖರ್ಚಾಗಿದೆ. ಬಜೆಟ್ ಅಮೌಂಟ್ 3.27 ಲಕ್ಷ ಕೋಟಿಯಿಂದ, 3.75 ಲಕ್ಷ ಕೋಟಿಗೆ ಹೆಚ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರು, ಹೆಚ್ಚಿನ ಹಣ ದೊರಕುತ್ತದೆ ಎಂದರು. ಇದನ್ನೂ ಓದಿ: ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ದಂಪತಿ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್ – ಸ್ಥಳದಲ್ಲೇ ಸಾವು
ಕೇಂದ್ರ ಸರ್ಕಾರ ನಮಗೆ ಬರಬೇಕಾದ ಹಣವನ್ನು ಸರಿಯಾಗಿ ನೀಡುತ್ತಿಲ್ಲ. ಒತ್ತಾಯ ಮಾಡಿ ಹಣ ತಂದು, ಸಂಪನ್ಮೂಲ ಕ್ರೂಢೀಕರಣವನ್ನು ಜಾಸ್ತಿ ಮಾಡಲಾಗಿದೆ. ಹಣಕಾಸಿನ ಸ್ಥಿತಿಗತಿಯನ್ನು ಬ್ಯಾಲೆನ್ಸ್ ಮಾಡಲು ಮುಖ್ಯಮಂತ್ರಿಗಳು ಕ್ಯಾಬಿನೆಟ್‌ನಲ್ಲಿ ಎರಡು ಬಾರಿ ನಮಗೆಲ್ಲ ಹೇಳಿದ್ದಾರೆ. ಯಾವುದೂ ತೊಂದರೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಜಮೀನಿನ ತಂತಿ ಬೇಲಿಗೆ ಹರಿಸಲಾಗಿದ್ದ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಮರಿ ಸಾವು
ಭೋವಿ ನಿಗಮದಲ್ಲಿನ ಅವ್ಯವಹಾರ ಪ್ರಕರಣದ ಕುರಿತು ಮಾತನಾಡಿ, ಸಿಐಡಿ, ಎಸ್‌ಐಟಿ ತನಿಖೆ ಮಾಡುತ್ತಿದೆ. ತನಿಖೆ ಪೂರ್ಣಗೊಳ್ಳುವವರೆಗೂ ಹೆಚ್ಚಿಗೆ ಏನು ಹೇಳಲು ಆಗುವುದಿಲ್ಲ. ಹಣ ಕೇಳಿರುವ ಆರೋಪಕ್ಕೆ ಸಬಂಧಿಸಿದಂತೆ ಸಿಐಡಿ ಅಧಿಕಾರಿಗಳ ಮೇಲೆ ಬೇರೆ ರೀತಿಯಲ್ಲಿ ತನಿಖೆ ಮಾಡುತ್ತೇವೆ. ಹಿರಿಯ ಅಧಿಕಾರಿಗಳಿಂದ ತನಿಖೆ ಮಾಡಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಖಂಡನೆ, ಮಂಡನೆ, ಎಚ್ಚರಿಕೆ ಸಾಕು, ಬಾಂಗ್ಲಾದೇಶಕ್ಕೆ ಸರಿಯಾಗಿ ಬುದ್ಧಿ ಕಲಿಸಿ: ಮುತಾಲಿಕ್
ಕರ್ನಾಟಕದಲ್ಲಿ (Karnataka) ಗ್ಯಾರಂಟಿಗಳು ಸರಿಯಾಗಿ ಕೊಡ್ತಿಲ್ಲ ಎಂದು ಮಹಾರಾಷ್ಟ್ರ ಚುನಾವಣೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ. ಮಹಾರಾಷ್ಟ್ರ ಜನರನ್ನು ದಾರಿ ತಪ್ಪಿಸಲು ಹೇಳುತ್ತಿದ್ದಾರೆ. ಮತ ಪಡೆಯಲು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಜಾಹೀರಾತು ಅಲ್ಲಿನ ಬಿಜೆಪಿ ಸರ್ಕಾರ ನೀಡಿದೆ. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕಾನೂನು ಹೋರಾಟ ಮಾಡಲು ಕಾನೂನು ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದರು.
ನವದೆಹಲಿ: ಚುನಾವಣೆಗಾಗಿ ಮಾಡುವ ಘೋಷಣೆ ಎಷ್ಟರ ಮಟ್ಟಿಗೆ ತೊಂದರೆ ಕೊಡುತ್ತವೆ ಎನ್ನುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಗ್ಯಾರಂಟಿಗಳೇ ಸಾಕ್ಷಿ. ರಾಜ್ಯ ಸರ್ಕಾರದ ಈ ತೊಳಲಾಟವನ್ನು ಬಹಿರಂಗವಾಗಿ ಹೇಳಿರುವ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಕೇಂದ್ರ ರೈಲ್ವೆ, ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ (V Somanna) ಹೇಳಿದ್ದಾರೆ.
ದೆಹಲಿಯಲ್ಲಿ (Delhi) ಮಾಧ್ಯಮದವರೊಂದಿಗೆ ಶಕ್ತಿ ಯೋಜನೆ ಪರಿಷ್ಕರಣೆ ಬಗ್ಗೆ ಡಿಸಿಎಂ ಡಿಕೆಶಿ ನೀಡಿದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕಾಸಿಲ್ಲದೇ ಕರಿಮಣಿ ಹೊಲಿಸಿಕೊಂಡಿದ್ದಾರೆ. ಕೂಸು ಹುಟ್ಟುವ ಮುನ್ನ ಕುಲಾಯಿ ಹೊಲಿಸಿಕೊಂಡ ಹಾಗೇ ಈ ಗ್ಯಾರಂಟಿ ಯೋಜನೆಗಳು. ಚುನಾವಣೆಗಾಗಿ ಗ್ಯಾರಂಟಿ ನೀಡಿ ಈಗ ಪರಿತಪಿಸುತ್ತಿದ್ದಾರೆ. ದೇಶದ ವ್ಯವಸ್ಥೆಯಲ್ಲಿ, ರಾಜ್ಯದ ಪಾಲುದಾರಿಕೆಯಲ್ಲಿ ಇತಿಮಿತಿಯಲ್ಲಿ ಸರ್ಕಾರ ನಡೆಸಬೇಕು. ಸಿಎಂ ಸಿದ್ದರಾಮಯ್ಯ (CM Siddaramaiah), ಎಲ್ಲ ಮಂತ್ರಿಗಳು ಮತ್ತು ಕಾಂಗ್ರೆಸ್ (Congress) ಎಲ್ಲ ನಾಯಕರ ಭಾವನೆಯೂ ಇದೆ ಆಗಿದೆ. ಹೊಟ್ಟೆಯಲ್ಲಿರುವ ನೋವನ್ನು ಡಿಕೆಶಿ ಹೇಳಿಕೊಂಡಿದ್ದಾರೆ. ಹೀಗಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದರು.ಇದನ್ನೂ ಓದಿ: ವಿಜಯ್ ದೇವರಕೊಂಡ ಮನೆಯಲ್ಲಿ ದೀಪಾವಳಿ ಹಬ್ಬ ಆಚರಿಸಿದ ರಶ್ಮಿಕಾ
ನವೆಂಬರ್ ಬಳಿಕ ಗ್ಯಾರಂಟಿಗಳಿಗೆ ಜನ ಗಣ ಮನ ಹಾಡುತ್ತಾರೆ. ರಾಜ್ಯ ಕಾಂಗ್ರೆಸ್ ನಾಯಕರ ಬಣ, ರಾಜಕೀಯ ಹಿನ್ನೆಲೆ ಕುರಿತು ಕಾಂಗ್ರೆಸ್ ನಾಯಕರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಹಿರಂಗ ಟೀಕೆ ಮಾಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಮಾತನಾಡಿ, ಖರ್ಗೆ ಅವರು ಹಿರಿಯ ರಾಜಕಾರಣಿ, ಅವರ ಅನುಭವ ಹಂಚಿಕೊಂಡಿದ್ದಾರೆ. ಆದರೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕೈಯಿಂದ ಆಗದ ಕೆಲಸ ಖರ್ಗೆ ಅವರಿಂದ ಆಗುತ್ತಾ? ಇದನ್ನು ನೀವೇ ಯೋಚನೆ ಮಾಡಬೇಕು. ಖರ್ಗೆ ಅವರು ಏನೇ ಹೇಳಿದರೂ ನಾಯಿ ಬಾಲ ಡೊಂಕು ಎಂದು ವ್ಯಂಗ್ಯವಾಡಿದರು.
ಕಾಂಗ್ರೆಸ್ ಸರ್ಕಾರ ಪತನವಾಗುವ ಬಗ್ಗೆ ಹೆಚ್‌ಡಿಕೆ (HD Kumaraswamy) ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಹೆಚ್‌ಡಿ ಕುಮಾರಸ್ವಾಮಿ ಅವರ ಅನುಭವ ಹಂಚಿಕೊಂಡಿದ್ದಾರೆ. ಎರಡು ಬಾರಿ ಸಿಎಂ ಆಗಿದ್ದವರು, ಮಾಜಿ ಪ್ರಧಾನಿ ದೇವೇಗೌಡರ ಗರಡಿಯಲ್ಲಿ ಬೆಳೆದವರು, ಅವರಿಗೆ ಯಾವ ರೀತಿಯ ಮಾಹಿತಿ ಇದೆ ಗೊತ್ತಿಲ್ಲ. ಅವರು ಹೇಳಿದ್ದು ಆಗಬಹುದು, ಆಗದಿರಬಹುದು. ಕಾಂಗ್ರೆಸ್ ಡೋಲಾಮಾನಯ ಸ್ಥಿತಿಯಲ್ಲಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಏನಾದರೂ ಕೆಲಸ ಆಗುತ್ತಿದೆಯೇ? ಮಳೆ ಬಂದು ಪ್ರವಾಹ ಆದರೂ ಯಾರಾದರೂ ಮಂತ್ರಿ ಹೋಗಿ ಪರಿಶೀಲನೆ ಮಾಡಿದ್ದಾರಾ? ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ, ನಾನು ದೊಡ್ಡವನು ಎನ್ನುವ ಮನಸ್ಥಿತಿ ಬಂದಿದೆ. ಕಾಂಗ್ರೆಸ್ ಸರ್ಕಾರ ಇದೆ ಎನ್ನುವುದಕ್ಕಿಂತ, ವ್ಯಕ್ತಿಗತ ಸರ್ಕಾರ ಇದೆ ಎನ್ನುವ ಭಾವನೆ ಇದೆ. ಎಷ್ಟು ವರ್ಷ ಇರುತ್ತಾರೋ ಗೊತ್ತಿಲ್ಲ. ಪಾಪದ ವ್ಯವಸ್ಥೆ ಆದಾಗ ಇಂತಹ ಪರಿಸ್ಥಿತಿ ಬರುತ್ತದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಬೆನ್ನುನೋವಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಯತ್ತ ದರ್ಶನ್ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ
ಶ್ರೀನಗರ: ಕರ್ನಾಟಕದಲ್ಲಿ (Karnataka) ಗ್ಯಾರಂಟಿ ಯೋಜನೆಯನ್ನು (Guarantee Scheme) ವಿರೋಧಿಸುತ್ತಿರುವ ಬಿಜೆಪಿ (BJP) ಕಣಿವೆ ರಾಜ್ಯವನ್ನು ಗೆಲ್ಲಲು ಭರವಸೆಗಳ ಮಹಾಪೂರವನ್ನೇ ಹರಿಸಿದೆ.
ಕುಟುಂಬದ ಹಿರಿಯ ಮಹಿಳೆಗೆ ವರ್ಷಕ್ಕೆ 18 ಸಾವಿರ ರೂ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ 10 ಸಾವಿರ ರೂ., ವಿದ್ಯಾರ್ಥಿಗಳಿಗೆ ವರ್ಷಕ್ಕೆ 3 ಸಾವಿರ ರೂ., ಪಿಯು ಮಕ್ಕಳಿಗೆ ಲ್ಯಾಪ್‌ಟಾಪ್, ವರ್ಷಕ್ಕೆರಡು ಗ್ಯಾಸ್ ಸಿಲಿಂಡರ್., ಆಯುಷ್ಮಾನ್ ಭಾರತ್ ಯೋಜನೆಯಡಿ ಐದು ಲಕ್ಷ ರೂ.ವರೆಗೂ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಭರವಸೆ ನೀಡಿದೆ.
For 70 years, the children of J&K had to go to other cities in the country for education, but today, children from all over the country are coming to J&K to avail education. #BJPJnKSankalpPatrapic.twitter.com/sMUXZ1c6sl
ಪ್ರಮುಖ ಭರವಸೆಗಳು
– ‘ಮಾ ಸಮ್ಮಾನ್ ಯೋಜನೆ’ ಮೂಲಕ ಪ್ರತಿ ಮನೆಯ ಹಿರಿಯ ಮಹಿಳೆಗೆ ವರ್ಷಕ್ಕೆ 18,000 ರೂ.
– ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ವರ್ಷ 2 ಉಚಿತ ಎಲ್‌ಪಿಜಿ ಸಿಲಿಂಡರ್
– 3 ಪಂಡಿತ್ ಪ್ರೇಮ್ ನಾಥ್ ಡೋಗ್ರಾ ರೋಜ್ಗಾರ್ ಯೋಜನೆ (PPNDRY) ಮೂಲಕ ಜಮ್ಮು ಮತ್ತು ಕಾಶ್ಮೀರದಲ್ಲಿ 5 ಲಕ್ಷ ಉದ್ಯೋಗಾವಕಾಶಗಳನ್ನು ಸೃಷ್ಟಿ.
– ‘ಪ್ರಗತಿ ಶಿಕ್ಷಾ ಯೋಜನೆ’ ಅಡಿಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯಾಗಿ DBT ಮೂಲಕ ವಾರ್ಷಿಕ 3,000 ರೂ.
For 70 years, the children of J&K had to go to other cities in the country for education, but today, children from all over the country are coming to J&K to avail education. #BJPJnKSankalpPatrapic.twitter.com/sMUXZ1c6sl
– ದೂರದ ಪ್ರದೇಶಗಳಲ್ಲಿ ಹೈಯರ್ ಸೆಕೆಂಡರಿ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳು/ಲ್ಯಾಪ್‌ಟಾಪ್.
– ಶ್ರೀನಗರ ನಗರದ ದಾಲ್ ಸರೋವರವನ್ನು ವಿಶ್ವ ದರ್ಜೆಯ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವುದು ಮತ್ತು ಜಲ ಕ್ರೀಡೆಗಳಿಗೆ ಉತ್ತೇಜನ.
– ಶ್ರೀನಗರದ ಟ್ಯಾಟೂ ಮೈದಾನದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ಸ್ಥಾಪನೆ. ಜಮ್ಮು ನಗರದಲ್ಲಿ ವಿಶೇಷ ಆರ್ಥಿಕ ವಲಯ (SEZ) ಆಗಿ IT ಹಬ್ ನಿರ್ಮಾಣ.
– ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಡಿಯಲ್ಲಿ ರೈತರಿಗೆ ಈಗ ನೀಡಲಾಗುತ್ತಿರುವ 6,000 ರೂ. ಜೊತೆಗೆ ಹೆಚ್ಚುವರಿಯಾಗಿ 4,000 ರೂ. ಪಾವತಿ.
– ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಬಡ್ತಿಯಲ್ಲಿ ಮೀಸಲಾತಿ.
– ಸರ್ಕಾರಿ ಉದ್ಯೋಗಗಳು ಮತ್ತು ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರ್‌ಗಳಿಗೆ 20% ಕೋಟಾ.
– ಪಾಳುಬಿದ್ದ ದೇವಾಲಯಗಳ ಜೀರ್ಣೋದ್ಧಾರ, ನ್ಯಾಯಯುತ ಜನಗಣತಿ.
ಬೆಂಗಳೂರು: ಗ್ಯಾರಂಟಿಗಳ (Congress Guarantee) ವಿಚಾರವಾಗಿ ಸರ್ಕಾರದ ಮಟ್ಟದಲ್ಲೇ ಎದ್ದಿರುವ ಭಿನ್ನಸ್ವರದ ಜೊತೆಗೆ ಗ್ಯಾರಂಟಿಗಳ ಮುಂದುವರಿಕೆ ಅನುಮಾನ ಎಂದು ವಿಪಕ್ಷಗಳು ಹೇಳುತ್ತಿರುವುದು ಜನರನ್ನು ಗೊಂದಲಕ್ಕೆ ತಳ್ಳಿದೆ. ಈ ನಡುವೆಯೂ ಇದು ತಮ್ಮ ವೈಯಕ್ತಿಕ ಅಭಿಪ್ರಾಯ ಎನ್ನುತ್ತಾ ಹಲವು ಸಚಿವರು ಗ್ಯಾರಂಟಿಗಳ ಮಾನದಂಡದಲ್ಲಿ ಬದಲಾವಣೆ ಆಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಬಿಪಿಎಲ್ ಕಾರ್ಡಿಗೆ (BPL Card) ಕೆಲವೊಂದು ಷರತ್ತು ಹಾಕುವ ಮೂಲಕ 25,000 ಕೋಟಿ ರೂ. ಉಳಿತಾಯಕ್ಕೆ ಸರ್ಕಾರ ಪ್ಲ್ಯಾನ್ ಮಾಡಿಕೊಂಡಿದೆ. ಅಕ್ಟೋಬರ್ ಹೊತ್ತಿಗೆ ಆಪರೇಷನ್ ಬಿಪಿಎಲ್ ಕಾರ್ಡ್‌ಗೆ (Operation BPL Card) ಚಾಲನೆ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಬಿಪಿಎಲ್ ಕಾರ್ಡ್‌ಗಳ ಪರಿಶೀಲನೆ ನಡೆದರೆ ಅನರ್ಹ ಫಲಾನುಭವಿಗಳು ಪತ್ತೆಯಾಗುತ್ತಾರೆ. ಹೀಗೆ ಮಾಡಿದ್ದಲ್ಲಿ ಅನರ್ಹರು ಸಹಜವಾಗಿಯೇ ಗ್ಯಾರಂಟಿ ಯೋಜನೆಗಳಿಂದ ಹೊರಗುಳಿಯಬೇಕಾಗುತ್ತದೆ ಎನ್ನುವುದು ಸರ್ಕಾರದ ಲೆಕ್ಕಾಚಾರ.
ರಾಜ್ಯದಲ್ಲಿ 14 ಲಕ್ಷಕ್ಕೂ ಹೆಚ್ಚು ಅಕ್ರಮ ಬಿಪಿಎಲ್ ಕಾರ್ಡ್ ಇದೆ ಎನ್ನಲಾಗುತ್ತಿದೆ. ಅಕ್ರಮ ಪತ್ತೆಯಾದರೆ ಮೊದಲ ಹಂತದಲ್ಲಿ 6 ತಿಂಗಳು ಕಾರ್ಡ್ ಅಮಾನತು ಮಾಡಲಾಗುತ್ತದೆ.
ಇದೀಗ ಅನರ್ಹ, ಅಕ್ರಮ ಫಲಾನುಭವಿಗಳನ್ನು ಪತ್ತೆ ಹಚ್ಚಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಾಲ್ಕು ಬೇರೆ ಇಲಾಖೆಗಳ ಸಹಕಾರ ಪಡೆಯಲು ಮುಂದಾಗಿದೆ. ಕಾರ್ಡ್‌ದಾರರ ಹೆಸರಲ್ಲಿ ವಾಹನ ಇವೆಯಾ ಎಂಬುದನ್ನು ಪತ್ತೆ ಹಚ್ಚಲು ಸಾರಿಗೆ ಇಲಾಖೆ, ಜಮೀನು ಎಷ್ಟಿದೆ ಎಂಬುದನ್ನು ತಿಳಿಯಲು ಕಂದಾಯ ಇಲಾಖೆ, ತೆರಿಗೆ ಪಾವತಿದಾರರಾ ಎಂಬುದನ್ನು ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆಯ ನೆರವು ಪಡೆಯಲು ಆಹಾರ ಇಲಾಖೆ ಸಜ್ಜಾಗುತ್ತಿದೆ. ಇದನ್ನೂ ಓದಿ: ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಮನವಿ – ಸಚಿವರಿಗೆ ಹೀಗಾದ್ರೆ ಸಾಮಾನ್ಯರ ಕತೆ ಏನು?
ಯಾರ ಕಾರ್ಡ್ ರದ್ದಾಗಬಹುದು?
ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಮೀರಿದಲ್ಲಿ, ಆದಾಯ ತೆರಿಗೆ ಪಾವತಿ ಮಾಡಿದ್ದರೆ, ನಿಗದಿಗಿಂತ ಹೆಚ್ಚು ಜಮೀನು ಹೊಂದಿದ್ದರೆ, ನಗರಗಳಲ್ಲಿ 1000 ಚದರಡಿಯ ಪಕ್ಕಾ ಮನೆ ಇದ್ದಲ್ಲಿ, ವೈಟ್ ಬೋರ್ಡ್ 4 ಚಕ್ರದ ವಾಹನ ಇದ್ದು ಬಿಪಿಎಲ್ ಕಾರ್ಡ್ ಮಾಡಿಸಿದವರ ಕಾರ್ಡ್ ರದ್ದಾಗಲಿದೆ.
ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು (Guarantee Scheme) ನಮ್ಮ ಸರ್ಕಾರ ಬದಲಾವಣೆ ಮಾಡುವುದಿಲ್ಲ ಮತ್ತು ಕತ್ತರಿ ಹಾಕುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.
ಪದ್ಮನಾಭನಗರದಲ್ಲಿ ಗ್ಯಾರಂಟಿ ಅನುಷ್ಠಾನ ಕೇಂದ್ರವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕಲಾಗುತ್ತದೆ ಎಂಬ ಸುದ್ದಿ ಬರುತ್ತಿದೆ. ಆದರೆ ಇದು ಸುಳ್ಳು ಸುದ್ದಿಯಾಗಿದೆ. ನಾನು ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಕೆಲವು ಕಡೆ ಆದಾಯ ಹೆಚ್ಚಳ ಇರುವವರು ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ಅವುಗಳನ್ನು ನಾವು ಪರಿಶೀಲನೆ ಮಾಡುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ ಎನ್ನುವುದು ಸುಳ್ಳು ಎಂದರು.
ಅಭಿವೃದ್ಧಿ ಯೋಜನೆಗಳಿಗೆ ಹಣ ಸಿಗುತ್ತಿಲ್ಲ ಎಂಬ ಮುನಿಯಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಮುನಿಯಪ್ಪನವರು ಹೇಳಿಲ್ಲ. ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇವೆ ಎಂದು ಉತ್ತರಿಸಿದರು.