Tag: ಗ್ಯಾಸ್ ಏಜೆನ್ಸಿ

  • ಗ್ಯಾಸ್ ಸೋರಿಕೆಯಿಂದ ಪದೇ ಪದೇ ಅಗ್ನಿ ಅವಘಡ – ಏಜೆನ್ಸಿ ವಿರುದ್ಧ ಎಫ್‌ಐಆರ್‌

    ಗ್ಯಾಸ್ ಸೋರಿಕೆಯಿಂದ ಪದೇ ಪದೇ ಅಗ್ನಿ ಅವಘಡ – ಏಜೆನ್ಸಿ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಪದೇ ಪದೇ ಗ್ಯಾಸ್ ಸೋರಿಕೆಯಿಂದ (Gas Leakage) ಅಗ್ನಿ ಅವಘಡದಲ್ಲಿ ಸಾಕಷ್ಟು ಸಾವು ನೋವುಗಳ ಬಳಿಕ ಪೊಲೀಸ್ ಇಲಾಖೆ ಎಚ್ಚೆತ್ತಿದೆ.

    ಇದೇ ಮೊದಲ ಬಾರಿಗೆ ಗ್ಯಾಸ್ ಕಂಪನಿ ಹಾಗೂ ಏಜೆನ್ಸಿ (Gas Agency) ವಿರುದ್ಧ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಈ ಹಿಂದೆ ಗ್ಯಾಸ್ ಲೀಕ್, ಗ್ಯಾಸ್ ಸ್ಫೋಟಕ್ಕೆ ಯಾವುದೇ ಕೇಸ್ ದಾಖಲಾಗುತ್ತಿರಲಿಲ್ಲ. ಇದೀಗ ಪ್ರೈವೆಟ್ ಗ್ಯಾಸ್ ಕಂಪನಿ ಮಾಲೀಕ ಚೋಟಾ ಸಿಕಂದರ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಸ್ವಾಮೀಜಿಗಳು ಆಶೀರ್ವಾದ ಮಾಡಿದ್ರೆ, ಯೋಗ್ಯ ಅಂದ್ರೆ ಜನರ ವೋಟು ಗ್ಯಾರಂಟಿ: ಮುಖ್ಯಮಂತ್ರಿ ಚಂದ್ರು

    ಎಲ್‌ಎಲ್‌ಬಿ ವಿದ್ಯಾರ್ಥಿನಿ ಜಾಹ್ನವಿ ನೀಡಿದ ದೂರಿನ ಮೇಲೆ ಬೇಗೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜಾಹ್ನವಿ ತಂದೆ ಪಶ್ಚಿಮ ಬಂಗಾಳ ಮೂಲದ ನೇತ್ಯಾ ನಯ್ಯ ಎಂಬುವರಿಗೆ ಮನೆ ಬಾಡಿಗೆಗೆ ಕೊಟ್ಟಿದ್ರು. ಇದೇ ತಿಂಗಳ 1ನೇ ತಾರೀಖು ಸಿಲಿಂಡರ್ ಬ್ಲ್ಯಾಸ್ಟ್‌ ಆಗಿ ನೇತ್ಯಾ ನಯ್ಯ ಹಾಗೂ ಅವರ ಪತ್ನಿ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌ – CBI ತನಿಖೆಗೆ ವಹಿಸಲು ಹೈಕೋರ್ಟ್‌ ನಕಾರ

    ಸಿಲಿಂಡರ್ ಬ್ಲ್ಯಾಸ್ಟ್‌ಗೆ ಖಾಸಗಿ ಪ್ರೈವೆಟ್ ಸಿಲಿಂಡರ್ ಕಂಪನಿ ಏಜೆನ್ಸಿಯೇ ಕಾರಣ. ಹೀಗಾಗಿ ಮಾಲೀಕ ಚೋಟಾ ಸಿಕಂದರ್ ಡಿಸ್ಟ್ರಿಬ್ಯೂಟರ್ ನೈಸ್ ಎಸ್‌ಕೆಎಲ್ ಮೇಲೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು. ದೂರಿನನ್ವಯ ಇದೀ ಬಿಎನ್‌ಎಸ್ 125(ಎ), 287, 324(2) ಅಡಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: RBI: 5 ವರ್ಷಗಳ ಬಳಿಕ ರೆಪೊ ದರ ಕಡಿತ ಮಾಡಿದ ಆರ್‌ಬಿಐ

  • ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

    ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

    ಬೆಂಗಳೂರು: ಗೋಡೌನಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಬಸ್ (Bus Fire) ಗಳು ಬೆಂಕಿಗಾಹುತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಆರ್‍ಆರ್ ನಗರ (RR Nagar) ದ ಐಟಿಐ ಲೇಔಟ್ ನ ಇಂಡೆನ್ ಗ್ಯಾಸ್ ಏಜೆನ್ಸಿ ಸಮೀಪದಲ್ಲಿರುವ ಸ್ಕ್ರಾಪ್ ಗೋಡೌನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ತಗುಲಿ ಇಡೀ ಗೋಡೌನ್ ಧಗ-ಧಗನೆ ಹೊತ್ತಿ ಉರಿದಿದೆ. ಪರಿಣಾಮ ಮೂರು ಬಸ್‍ಗಳು ಸುಟ್ಟು ಕರಕಲಾಗಿವೆ. ಬೆಂಕಿ ಜ್ವಾಲೆ ವ್ಯಾಪಿಸದಂತೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

    ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

  • ವಾರಕ್ಕೊಮ್ಮೆ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ ಗ್ಯಾಸ್ ಏಜೆನ್ಸಿ ಮಾಲೀಕ

    ವಾರಕ್ಕೊಮ್ಮೆ ಪೊಲೀಸರು, ಪೌರ ಕಾರ್ಮಿಕರಿಗೆ ಬಿರಿಯಾನಿ ಊಟ ನೀಡುತ್ತಿದ್ದಾರೆ ಗ್ಯಾಸ್ ಏಜೆನ್ಸಿ ಮಾಲೀಕ

    ಕೋಲಾರ: ಕೊರೊನಾ ಮಹಾಮಾರಿ ಆವರಿಸಿದ್ದರಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ಕಳೆದ 21 ದಿನಗಳಿಂದ ನಮ್ಮನ್ನು ಕಾಯುತ್ತಿರುವ ಕೊರೊನಾ ವಾರಿಯರ್ಸ್ ಪೊಲೀಸ್ ಸಿಬ್ಬಂದಿಗೆ ಕೋಲಾರದಲ್ಲಿ ಬಿರಿಯಾನಿ ವಿತರಣೆ ಮಾಡಲಾಯಿತು.

    ಕೋಲಾರದ ರೇವತಿ ಭಾರತ್ ಗ್ಯಾಸ್ ಏಜೆನ್ಸಿ ಮಾಲೀಕರಿಂದ ವಾರಕ್ಕೊಮ್ಮೆ ಬಿರಿಯಾನಿ ವಿತರಣೆ ಮಾಡಲಾಗುತ್ತಿದೆ. ಕೋಲಾರ ನಗರ ಹಾಗೂ ಬಂಗಾರಪೇಟೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ನಗರಸಭೆ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಲಾಯಿತು.

    ಕಳೆದ ಬುಧವಾರವೂ ಹೀಗೆ ಕರ್ತವ್ಯದಲ್ಲಿದ್ದ ನೂರಾರು ಪೊಲೀಸರಿಗೆ ಬಿರಿಯಾನಿ ಮಾಡಿ, ಅದನ್ನು ಪ್ಯಾಕ್ ಮಾಡಿ ವಿತರಣೆ ಮಾಡಲಾಗಿತ್ತು. ಇಂದು ಕೂಡ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಬಿರಿಯಾನಿ ವಿತರಣೆ ಮಾಡಿ ಗ್ಯಾಸ್ ಏಜೆನ್ಸಿ ಮಾಲೀಕರು ಮಾನವೀಯತೆ ಮೆರೆದಿದ್ದಾರೆ. ಕೇವಲ ಪೊಲೀಸರಿಗೆ ಮಾತ್ರವಲ್ಲ ಪೌರ ಕಾರ್ಮಿಕರಿಗೂ ಬಿರಿಯಾನಿ ವಿತರಿಸಿ ಸಾರ್ಥಕತೆ ಮೆರೆದಿದ್ದಾರೆ. ಈ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.

  • ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟ!

    ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟ!

    ಚಾಮರಾಜನಗರ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಅಡುಗೆ ಅನಿಲ ಸೋರಿಕೆ ತಡೆಗಟ್ಟಲು ಹೋದ ವೇಳೆ ಸಿಲಿಂಡರ್ ಸ್ಫೋಟಗೊಂಡು ಮನೆ ಆಹುತಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಜರುಗಿದೆ.

    ಗ್ರಾಮದ ನಾಗರಾಜು ಮನೆಯಲ್ಲಿ ಗ್ಯಾಸ್ ಸೋರಿಕೆ ಆಗುತ್ತಿದ್ದ ಹಿನ್ನೆಲೆಯಲ್ಲಿ, ನಾಗರಾಜು ಗ್ಯಾಸ್ ಏಜೆನ್ಸಿಗೆ ಫೋನ್ ಮೂಲಕ ವಿಷಯ ತಿಳಿಸಿದ್ದಾರೆ. ನಂತರ ಮನೆಗೆ ಬಂದ ಗ್ಯಾಸ್ ಏಜೆನ್ಸಿ ಸಿಬ್ಬಂದಿ ಸಿಲಿಂಡರ್ ನ ಸೋರಿಕೆ ತಡೆಗಟ್ಟುವಲ್ಲಿ ಮುಂದಾಗಿದ್ದಾನೆ. ಈ ವೇಳೆ ಇದ್ದಕ್ಕಿದ್ದ ಹಾಗೆ ಗ್ಯಾಸ್ ಸ್ಫೋಟಗೊಂಡಿದೆ.

    ಅದೃಷ್ಟವಶಾತ್ ಗ್ಯಾಸ್ ಏಜೆನ್ಸಿ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಾಮಾರಾಜನಗರ ಗ್ರಾಮಾಂತರ ಆಸ್ಪತ್ರೆಯಲಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಲಿಂಡರ್ ಸ್ಫೋಟಗೊಂಡ ಕಾರಣ ಮನೆಯಲ್ಲಿದ್ದ ಅನೇಕ ವಸ್ತಗಳು ಸುಟ್ಟು ಕರಕಲಾಗಿವೆ.

    ಈ ಬಗ್ಗೆ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv