Tag: ಗ್ಯಾಸ್ ಸೋರಿಕೆ

  • ನೆಲಮಂಗಲ| ಗ್ಯಾಸ್‌ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು

    ನೆಲಮಂಗಲ| ಗ್ಯಾಸ್‌ ಲೀಕೇಜ್‌ನಿಂದ ಹೊತ್ತಿ ಉರಿದ ಬೆಂಕಿ – ಇಬ್ಬರು ಸಾವು

    ನೆಲಮಂಗಲ: ಗ್ಯಾಸ್‌ ಲೀಕೇಜ್‌ನಿಂದ ಮನೆ ಹೊತ್ತಿ ಉರಿದಿದ್ದು, ಇಬ್ಬರು ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ (Nelamangala) ನಡೆದಿದೆ.

    ನಾಗರಾಜ್ (50), ಶ್ರೀನಿವಾಸ್ (50) ಮೃತ ದುರ್ದೈವಿಗಳು. ಅವಘಡದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಓವರ್ ಟ್ಯಾಂಕ್ ಬಳಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಬಿಯರ್ ಪ್ರಿಯರಿಗೆ ಮತ್ತೆ ಶಾಕ್ – 20ರೂ. ಹೆಚ್ಚಳಕ್ಕೆ ನಿರ್ಧಾರ!

    ಗಂಗಯ್ಯ ಎಂಬವರಿಗೆ ಸೇರಿದ ಎರಡು ಬಾಡಿಗೆ ಮನೆ ಇವೆ. ಎರಡರಲ್ಲಿ ಒಂದು ಮನೆಯನ್ನ ನಾಗರಾಜ್ ಬಾಡಿಗೆಗೆ ಪಡೆದಿದ್ದರು. ಮೂಲತಃ ಬಳ್ಳಾರಿಯವರಾಗಿದ್ದ ನಾಗರಾಜ್ ಕುಟುಂಬ ಎರಡು ವರ್ಷದ ಹಿಂದೆ ಬಾಡಿಗೆಗೆ ಬಂದಿತ್ತು.

    ನಾಗರಾಜ್ ಪತ್ನಿ ಲಕ್ಷ್ಮಿ ದೇವಿ (35), ಮಕ್ಕಳಾದ ಬಸನಗೌಡ (19), ಅಭಿಷೇಕ್ ಗೌಡ (18) ವಾಸವಾಗಿದ್ದರು. ಬೆಳಗ್ಗೆ ಕೆಲಸಕ್ಕೆಂದು ತೆರಳುತ್ತಿದ್ದ ನಾಗರಾಜ್ ದೇವರಿಗೆ ದೀಪ ಹಚ್ಚಿದ್ದರು. ಖಾಲಿಯಾಗಿದ್ದ ಸಿಲಿಂಡರ್ ಬದಲಾಯಿಸಲು ಎರಡನೇ ಮಗ ಅಭಿಷೇಕ್ ಮುಂದಾಗಿದ್ದರು. ಈ ವೇಳೆ ಸಿಲಿಂಡರ್‌ನಿಂದ ಗ್ಯಾಸ್ ಲೀಕ್ ಆಗಿದ್ದು, ದೀಪದ ಬೆಂಕಿ ತಗುಲಿದೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿಯಲ್ಲಿ ತಂದೆ ಕಳೆದುಕೊಂಡ ಹುಡುಗಿಗೆ ಐಎಸ್‌ಸಿ ಬೋರ್ಡ್‌ ಪರೀಕ್ಷೆಯಲ್ಲಿ ಶೇ.87 ಅಂಕ

    ಮನೆ ಹೊತ್ತಿ ಉರಿದಿದ್ದು ನಾಗರಾಜ್, ಲಕ್ಷ್ಮಿದೇವಿ, ಬಸವನಗೌಡ, ಅಭಿಷೇಕ್‌ಗೂ ಬೆಂಕಿ ಅವಘಡಕ್ಕೆ ಸಿಲುಕಿದ್ದರು. ಕೂಡಲೇ ಎಲ್ಲರನ್ನೂ ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರು. ಅಭಿಷೇಕ್, ಶಿವಶಂಕರ್, ಲಕ್ಷ್ಮೀದೇವಿ ಹಾಗೂ ಬಸವ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    Bengaluru| ಸಿಲಿಂಡರ್ ಸ್ಫೋಟಗೊಂಡು 3 ಮನೆಗಳಿಗೆ ಬೆಂಕಿ – ಒಂದೇ ಕುಟುಂಬದ ನಾಲ್ವರಿಗೆ ಗಾಯ

    ಬೆಂಗಳೂರು: ಗ್ಯಾಸ್ ಸೋರಿಕೆಯಾಗಿ (Gas Leakage) ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ 3 ಮನೆಗಳಿಗೆ ಬೆಂಕಿ ತಗುಲಿದ್ದು, ಒಂದೇ ಕುಟುಂಬದ ನಾಲ್ವರು ಗಾಯಗೊಂಡಿರುವ ಘಟನೆ ಡಿಜೆ ಹಳ್ಳಿಯ (DJ Halli) ಆನಂದ್ ಥಿಯೇಟರ್ ಬಳಿ ನಡೆದಿದೆ.

    ಶನಿವಾರ ಬೆಳಗ್ಗೆ 11:30ರ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಪತಿ ನಾಜೀರ್, ಪತ್ನಿ ಕುಲ್ಸುಮ್ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾಜೀರ್ ಪಾನಿಪುರಿ ವ್ಯಾಪಾರ ಮಾಡಿಕೊಂಡಿದ್ದರು. ಸ್ಫೋಟದ ತೀವ್ರತೆಗೆ ಮೂರೂ ಮನೆಗಳು ಪುಡಿಪುಡಿಯಾಗಿವೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ರೆಗ್ಯುಲೇಟರ್ ಆನ್ ಆಗಿದ್ದರಿಂದ ಗ್ಯಾಸ್ ಲೀಕೇಜ್ ಆಗಿದೆ. ರೆಗ್ಯುಲೇಟರ್ 2016ರಲ್ಲೇ ಡೇಟ್ ಬಾರ್ ಆಗಿದೆ. ಅದರಿಂದಲೇ ಗ್ಯಾಸ್ ಲೀಕೇಜ್ ಆಗಿ ಮನೆ ತುಂಬ ಆವರಿಸಿದೆ. ಶನಿವಾರ ಬೆಳಗ್ಗೆ 11:30ಕ್ಕೆ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಡಿಜೆ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

  • ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ – ಒಂದೇ ಕುಟುಂಬದ ನಾಲ್ವರು ದುರ್ಮರಣ

    ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ – ಒಂದೇ ಕುಟುಂಬದ ನಾಲ್ವರು ದುರ್ಮರಣ

    ಮೈಸೂರು: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.

    ಮೈಸೂರಿನ ಯರಗನಹಳ್ಳಿಯ (Yaraganahalli) ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ (Gas Leak) ಮನೆಯೊಳಗೆ ಮಲಗಿದ್ದ ನಾಲ್ವರು ಮೃತಪಟ್ಟಿದ್ದಾರೆ. ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳಾ (39) ಹಾಗೂ ಇವರ ಮಕ್ಕಳಾದ ಅರ್ಚನಾ (19) ಮತ್ತು ಸ್ವಾತಿ (17) ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಕುಮಾರಸ್ವಾಮಿ ದಂಪತಿ ಮನೆಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕಾಗಿ ಮೂರು ಸಿಲಿಂಡರ್ ಇಟ್ಟುಕೊಂಡಿದ್ದರು. ಅದರಲ್ಲಿ ಒಂದು ಸಿಲಿಂಡರ್ ಸೋರಿಕೆಯಾಗಿ ಈ ಸಾವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಭೀಕರ ಅಪಘಾತ – ಭಾರತ ಮೂಲದ ಮೂವರು ವಿದ್ಯಾರ್ಥಿಗಳು ಬಲಿ

    ಮೃತ ಕುಮಾರಸ್ವಾಮಿ ಮೂಲತಃ ಕಡೂರು ತಾಲೂಕಿನ ಸಖರಾಯಪಟ್ಟಣದವರು. ಅಲ್ಲಿಯೆ ಸೋಮವಾರ ಇದ್ದ ಸಂಬಂಧಿಗಳ ಮದುವೆಗೆ ಕುಟುಂಬ ಸಮೇತರಾಗಿ ಹೋಗಿ ಸೋಮವಾರ ರಾತ್ರಿ ವಾಪಸ್ ಆಗಿದ್ದರು. ಸೋಮವಾರ ರಾತ್ರಿ ಮನೆಯೊಳಗೆ ಮಲಗಿದ ಈ ಕುಟುಂಬ ಮತ್ತೆ ಮೇಲೆ ಎದ್ದಿಲ್ಲ. ನಿನ್ನೆ ಇವರ ಸಂಬಂಧಿಕರು ಹಲವು ಬಾರಿ ಇವರಿಗೆ ಕರೆ ಮಾಡಿದ್ದಾರೆ. ಆಗ ಕರೆ ಸ್ವೀಕಾರ ಆಗಿಲ್ಲ. ಇವತ್ತು ಬೆಳಗ್ಗೆಯೂ ಕರೆ ಮಾಡಿದ್ದಾಗ ಕರೆ ಸ್ವೀಕಾರ ಮಾಡದ ಕಾರಣ ಅನುಮಾನಗೊಂಡು ಅಕ್ಕಪಕ್ಕದ ಮನೆಯವರಿಗೆ ದೂರವಾಣಿ ಕರೆ ಮಾಡಿ ಮನೆಗೆ ಹೋಗಿ ನೋಡಿ ಎದ್ದಿದ್ದಾರೆ. ಆಗ ಪಕ್ಕದ ಮನೆಯವರು ಮನೆಗೆ ಬಂದು ಕಿಟಿಕಿ ಮೂಲಕ ನೋಡಿದ್ದಾಗ ಮೃತಪಟ್ಟಿರುವ ವಿಚಾರ ಗೊತ್ತಾಗಿದೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ, ಸಾಮರ್ಥ್ಯ ಇರುವವರಿಗೆ ಕೊಡಲಿ: ಸತೀಶ್ ಜಾರಕಿಹೊಳಿ

    10*20 ಸೈಜಿನ ಈ ಮನೆಯಲ್ಲಿ ಗಾಳಿಗೆ ಯಾವುದೇ ರೀತಿಯಾದಂತ ವ್ಯವಸ್ಥೆ ಇಲ್ಲ. ಇಂತಹ ಸ್ಥಿತಿಯಲ್ಲಿ ಗ್ಯಾಸ್ ಲಿಕ್ ಆಗಿದೆ. ಲಿಕ್ ಆದ ಗ್ಯಾಸ್ ಅನ್ನೆ ಸೇವಿಸಿದ ಪರಿಣಾಮ ಈ ಸಾವುಗಳು ಉಂಟಾಗಿವೆ ಎಂಬ ಅಂಶ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಇದನ್ನೂ ಓದಿ: ಅಂಜಲಿ ಹತ್ಯೆಯ ರಹಸ್ಯ ಬಿಚ್ಚಿಟ್ಟ ಹಂತಕ ವಿಶ್ವ

    ಗ್ಯಾಸ್ ಸೋರಿಕೆಯಿಂದ ಸ್ಪೋಟ ಉಂಟಾಗಿ ಸಾವು ಸಂಭವಿಸಿದ್ದು ನೋಡಿದ್ದೇವು. ಆದರೆ, ಗ್ಯಾಸ್ ಲೀಕ್‌ನಿಂದ ನಾಲ್ವರು ಮೃತಪಟ್ಟಿರೋದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು. ಹೀಗಾಗಿಯೆ ಬಳಕೆ ಮಾಡದೇ ಇರೋ ಸಮಯದಲ್ಲಿ ಗ್ಯಾಸ್ ಅನ್ನು ಆಫ್ ಮಾಡಿ ಅಂತಾ ಗ್ಯಾಸ್ ಸಂಸ್ಥೆಗಳು ಸದಾ ಜನರಿಗೆ ಜಾಗೃತಿ ಮೂಡಿಸುತ್ತಿರುತ್ತವೆ. ಇದನ್ನೂ ಓದಿ: ಮೇ 13ರಿಂದ ನಾಪತ್ತೆಯಾಗಿದ್ದ ಸಂಸದ ಶವವಾಗಿ ಪತ್ತೆ- ಮೂವರ ಬಂಧನ

  • ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ – ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವು

    ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ – ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವು

    ಕೋಲಾರ: ಗ್ಯಾಸ್ ಸೋರಿಕೆಯಾಗಿ (Gas Leak) ಸಿಲಿಂಡರ್ ಸಿಡಿದು (Cylinder Blast) ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ (Couple) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದ ದಂಪತಿ ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್‌ಗೆ ಯತ್ನ – 2ನೇ ಮಹಡಿಯಿಂದ ಜಿಗಿದು ಕೈಕಾಲು ಮುರಿದುಕೊಂಡ ಬಿಜೆಪಿ ಕಾರ್ಯಕರ್ತ

    ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯ ಪರಿಣಾಮ ತೀವ್ರ ಗಾಯಗೊಂಡ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನಮ್ಮ ಕೂಡ ಏಕಾಏಕಿ ಕೆಳಗೆ ಬಿದ್ರು, ಕೂಡ್ಲೇ ಆಸ್ಪತ್ರೆಗೆ ಕರೆದೊಯ್ದೆ- ಪ್ರತ್ಯಕ್ಷದರ್ಶಿ ವಿವರಣೆ

    ನನ್ನಮ್ಮ ಕೂಡ ಏಕಾಏಕಿ ಕೆಳಗೆ ಬಿದ್ರು, ಕೂಡ್ಲೇ ಆಸ್ಪತ್ರೆಗೆ ಕರೆದೊಯ್ದೆ- ಪ್ರತ್ಯಕ್ಷದರ್ಶಿ ವಿವರಣೆ

    – ಜನ ರಸ್ತೆಯಲ್ಲಿ ಬಿದ್ದರೂ ಕಂಪನಿ ಕ್ಯಾರೇ ಎಂದಿಲ್ಲ

    ಹೈದರಾಬಾದ್: ನೋಡನೋಡುತ್ತಿದ್ದಂತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಚಿಕ್ಕಮಕ್ಕಳು ಸೇರಿದಂತೆ ಎಲ್ಲರೂ ಬೀಳುತ್ತಿದ್ದಾರೆ. ಆದರೆ ಕಂಪನಿ ಸಿಬ್ಬಂದಿ ಮಾತ್ರ ಸಹಾಯಕ್ಕೆ ಬರುತ್ತಿಲ್ಲ ಎಂದು ವಿಶಾಖಪಟ್ಟಣಂನಲ್ಲಿ ನಡೆದ ದುರಂತವನ್ನು ಪ್ರತ್ಯಕ್ಷದರ್ಶಿ ಯುವಕನೊಬ್ಬ ವಿವರಿಸಿದ್ದಾನೆ. ಇದನ್ನೂ ಓದಿ: ವಿಶಾಖಪಟ್ಟಣಂ ದುರಂತ- 2 ಟ್ಯಾಂಕಿನ ಒಟ್ಟು 10 ಟನ್ ವಿಷಾನಿಲ ಸೋರಿಕೆ

    ನಾನು ಮನೆಯಿಂದ ಹೊರಗಡೆ ಬಂದ ತಕ್ಷಣ ಯಾವುದೋ ಗಾಳಿ ಬರುತ್ತಿತ್ತು. ಅದು ಏನು ಅಂತ ನನಗೆ ಗೊತ್ತಾಗಿಲ್ಲ. ಆದರೆ ಮಕ್ಕಳು ಸೇರಿದಂತೆ ನಡೆದುಕೊಂಡು ಹೋಗುತ್ತಿದ್ದರೆಲ್ಲಾ ರಸ್ತೆಯ ಮೇಲೆ ಬೀಳುತ್ತಿದ್ದರು. ನಮ್ಮ ಅಮ್ಮ ಕೂಡ ಕೆಳಗೆ ಬಿದ್ದರು. ನನಗೆ ಗಾಬರಿಯಲ್ಲಿ ಏನು ಮಾಡಬೇಕು ಎಂದು ಗೊತ್ತಾಗಿಲ್ಲ. ಆದರೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋದೆ ಎಂದಿದ್ದಾನೆ. ಇದನ್ನೂ ಓದಿ: ಲಾಕ್‍ಡೌನ್ ಬಳಿಕ ತೆರೆದ ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ- ಸಾವಿನ ಸಂಖ್ಯೆ 8ಕ್ಕೆ ಏರಿಕೆ

    ಮೈಯೆಲ್ಲಾ ನವೆಯಾಗುತ್ತದೆ. ಕಣ್ಣಲ್ಲಿ ನೀರು ಬರಲು ಶುರುವಾಯ್ತು. ಎಷ್ಟೂ ದೂರ ಓಡಿದರೂ ಗಾಳಿ ಜೋರಾಗಿ ಬರುತ್ತಿತ್ತು. ರಸ್ತೆಯಲ್ಲಿ ಎಲ್ಲೆಂದರಲ್ಲಿ ಜನರು ಬೀಳುತ್ತಿದ್ದಾರೆ. ನಮ್ಮ ಮನೆಯವರನ್ನು 3-4 ಕಿ.ಮೀ ದೂರ ಮನೆಗಳಿಗೆ ಬಿಟ್ಟು ಬಂದಿದ್ದೇವೆ. ಅನೇಕರು ಅಂಬುಲೆನ್ಸ್ ಗಾಗಿ ರಸ್ತೆಯಲ್ಲಿ ಕುಳಿತು ಕಾಯುತ್ತಿದ್ದಾರೆ. ಇಷ್ಟಾದರೂ ಗ್ಯಾಸ್ ಕಂಪನಿ ಸಿಬ್ಬಂದಿ ಕಾರುಗಳಿದ್ದರೂ ಸಹಾಯಕ್ಕೆ ಬರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಇಂತಹ ಗ್ರಾಮಗಳಿರುವ ನಡುವೆ ಈ ಕಂಪನಿ ಇರುವುದು ಮುಖ್ಯನಾ?. ಹೀಗಾಗಿ ಈಗಲಾದರೂ ಈ ಕಾರ್ಖಾನೆಯನ್ನು ಮುಚ್ಚಿಸಿ ಎಂದು ಮನವಿ ಮಾಡಿಕೊಂಡರು.

    ಇಂದು ಮುಂಜಾನೆ ಜಿಲ್ಲೆಯ ಆರ್.ಆರ್.ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನ ರಾಸಾಯನಿಕ ಅನಿಲ ಕಾಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ. ಇದುವರೆಗೂ ವಿಷಾನಿಲ ದುರಂತದಿಂದ 11 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರಿಯಾಗುವ ಸಾಧ್ಯತೆ ಇದೆ. ಇನ್ನೂ 1000ಕ್ಕೂ ಹೆಚ್ಚಿನ ಮಂದಿ ಅಸ್ವಸ್ಥರಾಗಿದ್ದಾರೆ.

    ವಿಷಾನಿಲ ದುರಂತದಿಂದ ಪ್ರಾಣಿ-ಪಕ್ಷಿಗಳು ಕೂಡ ಎಲ್ಲೆಂದರಲ್ಲಿ ಮೃತಪಟ್ಟಿವೆ. ಇನ್ನೂ ಬೈಕಿನಲ್ಲಿ ಹೋಗುತ್ತಿದ್ದವರು ಅಸ್ವಸ್ಥರಾಗಿ ರಸ್ತೆಯಲ್ಲಿಯೇ ಬಿದ್ದಿದ್ದಾರೆ. ಕೆಲವರು ಮನೆಯ ಬಳಿ, ಚರಂಡಿಯೊಳಗೂ ಬಿದ್ದಿದ್ದಾರೆ. ಸದ್ಯಕ್ಕೆ ಕಾರ್ಖಾನೆ ಬಳಿ ಅಂಬುನೆಲ್ಸ್, ರಾಜ್ಯ ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ ಮತ್ತು ಪೊಲೀಸರು ಜನರನ್ನು ರಕ್ಷಿಸುವಲ್ಲಿ ನಿರತರಾಗಿದ್ದಾರೆ.

  • ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ- ಮೂವರಿಗೆ ಗಂಭೀರ ಗಾಯ

    ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ- ಮೂವರಿಗೆ ಗಂಭೀರ ಗಾಯ

    ಕೋಲಾರ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ.

    ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮೇಲಾಗಣಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಸಿಂಪರಪ್ಪ (55), ಮುನಿರಾಜು (35) ಹಾಗೂ ರೂಪ (20) ಎಂಬವರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದ್ದಾರೆ.

    ಮೂರು ಜನ ಗಾಯಾಳುಗಳನ್ನು ಸ್ಥಳೀಯ ಮಾಲೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿಲಿಂಡರ್ ಸ್ಫೋಟದಿಂದಾಗಿ ಮನೆಯಲ್ಲಿದ್ದ ಗೃಹಬಳಕೆ ವಸ್ತುಗಳೆಲ್ಲಾ ಬೆಂಕಿಗಾಹುತಿಯಾಗಿದೆ.

    ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.