Tag: ಗ್ರಾಮಲೆಕ್ಕಾಧಿಕಾರಿ

  • ರೈತನಿಂದ 14 ಸಾವಿರ ಪಡೆಯೋವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮಲೆಕ್ಕಾಧಿಕಾರಿ

    ರೈತನಿಂದ 14 ಸಾವಿರ ಪಡೆಯೋವಾಗ ಎಸಿಬಿ ಬಲೆಗೆ ಬಿದ್ದ ಗ್ರಾಮಲೆಕ್ಕಾಧಿಕಾರಿ

    ಗದಗ: ರೈತನ ಜಮೀನಿನ ಪಹಣಿ ಬದಲಾವಣೆಗೆ ಲಂಚದ ಬೇಡಿಕೆಯಿಟ್ಟಿದ್ದ ಗ್ರಾಮಲೆಕ್ಕಾಧಿಕಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.

    ಲಕ್ಷ್ಮೇಶ್ವರ ತಾಲೂಕಿನ ಪುಟ್ಟಗಾಂವ್ ಬಡ್ನಿ ಪಂಚಾಯ್ತಿಯ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಫಿರೋಜ್‍ಖಾನ್ ಗೋರಿಖಾನ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಫಿರೋಜ್‍ಖಾನ್ ಪುಟಂಗಾವ್ ಬಡ್ನಿ ಗ್ರಾಮದ ರೈತ ರಾಮಪ್ಪ ಅಣ್ಣಿಗೇರಿ ಅನ್ನುವರ ಜಮೀನಿನ ಪಹಣಿ ಬದಲಾವಣೆಗೆ 14 ಸಾವಿರ ರೂಪಾಯಿ ಲಂಚ ಇಟ್ಟಿದ್ದನು.

    ಮನೆಗೆ ಬಂದು ಹಣ ಕೊಟ್ಟರೆ ಪಹಣಿ ಮನೆಯಲ್ಲಿ ಕೊಡುತ್ತೇನೆ. ಹಣ ಮನೆಗೆ ತೆಗೆದುಕೊಂಡು ಬಾ ಎಂದು ರೈತನಿಗೆ ಗ್ರಾಮ ಲೆಕ್ಕಾಧಿಕಾರಿ ಫಿರೋಜ್‍ಖಾನ್ ಹೇಳಿದ್ದನು. ಮನೆಯಲ್ಲಿ ಹಣ ನೀಡುವ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಎಸಿಬಿ ಡಿ.ವೈಎಸ್ಪಿ ವಾಸುದೇವರಾಮ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

  • ಗ್ರಾಮಲೆಕ್ಕಾಧಿಕಾರಿಯ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಗುರುವಾರ ಮಾನ್ವಿ ಬಂದ್!

    ಗ್ರಾಮಲೆಕ್ಕಾಧಿಕಾರಿಯ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಗುರುವಾರ ಮಾನ್ವಿ ಬಂದ್!

    ರಾಯಚೂರು: ಗ್ರಾಮಲೆಕ್ಕಾಧಿಕಾರಿಯ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಒತ್ತಾಯಿಸಿ ಇದೇ ಗುರುವಾರ ವಿವಿಧ ಸಂಘಟನೆಗಳು ಮಾನ್ವಿ ಪಟ್ಟಣ ಬಂದ್‍ಗೆ ಕರೆ ನೀಡಿವೆ.

    ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಹತ್ಯೆಯ ಪ್ರಕರಣವನ್ನು ನ್ಯಾಯಾಂಗ ತನಿಖೆ ನಡೆಸುವಂತೆ ವಿವಿಧ ಸಂಘಟನೆಗಳು ಆಗ್ರಹಿಸಿದೆ. ಈ ಸಂಬಂಧ ಡಿಸೆಂಬರ್ 27ರ ಗುರುವಾರ ಮಾನ್ವಿ ಬಂದ್‍ಗೂ ಸಹ ಕರೆ ನೀಡಲಾಗಿದೆ.

    ಮೃತನ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ ಹಾಗೂ ದಂಧೆಕೋರರು ಪ್ರಭಾವಿಗಳಾಗಿದ್ದು, ಅವರ ಬಂಧನಕ್ಕೆ ಆಗ್ರಹಿಸಿ ಬಂದ್ ನಡೆಸುತ್ತಿರುವುದಾಗಿ ಸಂಘಟನೆಗಳು ತಿಳಿಸಿವೆ. ಇದನ್ನೂ ಓದಿ: ಗ್ರಾಮಲೆಕ್ಕಾಧಿಕಾರಿ ಹತ್ಯೆ ಪ್ರಕರಣ: ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದ ಲಿಂಗಸುಗೂರು ಶಾಸಕ

    ಏನಿದು ಪ್ರಕರಣ?
    ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚೀಕಪರ್ವಿಯಲ್ಲಿ ಸಾಹೇಬ್ ಪಟೇಲ್ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಮಾನ್ವಿಯ ಬುದ್ದಿನ್ನಿ ಸಮೀಪದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನುವ ಮಾಹಿತಿ ಪಡೆದಿದ್ದರು. ಇದರ ಸಂಬಂಧ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕನೊಬ್ಬ ಅಧಿಕಾರಿಯನ್ನು ನೋಡುತ್ತಿದ್ದಂತೆ, ಅವರಿಂದ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ಮೇಲೆಯೇ ಲಾರಿ ಹರಿಸಿದ್ದ. ಪರಿಣಾಮ ಎರಡೂ ಕಾಲುಗಳು ಮೇಲೆ ಲಾರಿ ಹರಿದು ತೀವ್ರ ಸ್ವರೂಪದ ರಕ್ತಸ್ರಾವವಾಗಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಪಟೇಲ್ ರನ್ನು ಮಾನ್ವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ಪಟೇಲ್ ಮೃತಪಟ್ಟಿದ್ದರು.

    ಪಟೇಲ್ ರವರ ಹತ್ಯೆಯ ವಿಷಯ ತಿಳಿಯುತ್ತಿದ್ದಂತೆ ಜಿಲ್ಲೆಯ ಗ್ರಾಮಲೆಕ್ಕಾಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಟ್ಟುಹಿಡಿದಿದ್ದರು. ಅಕ್ರಮ ಮರಳು ಸಾಗಾಣಿಕೆಯಲ್ಲಿ ಪ್ರಭಾವಿ ನಾಯಕರ ಹೆಸರು ಕೇಳಿಬರುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗ್ರಾಮಲೆಕ್ಕಾಧಿಕಾರಿ ಹತ್ಯೆ ಪ್ರಕರಣ: ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದ ಲಿಂಗಸುಗೂರು ಶಾಸಕ

    ಗ್ರಾಮಲೆಕ್ಕಾಧಿಕಾರಿ ಹತ್ಯೆ ಪ್ರಕರಣ: ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆಂದ ಲಿಂಗಸುಗೂರು ಶಾಸಕ

    ರಾಯಚೂರು: ಗ್ರಾಮಲೆಕ್ಕಾಧಿಕಾರಿಯ ಹತ್ಯೆಯಲ್ಲ ಅದು ಅಸಹಜ ಸಾವಾಗಿದ್ದು, ಅವರು ಕಾಲು ಜಾರಿ ಮೃತಪಟ್ಟಿದ್ದಾರೆಂದು ಲಿಂಗಸುಗೂರು ಶಾಸಕ ಡಿ.ಎಸ್.ಹೂಲಗೇರಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.

    ಜಿಲ್ಲೆಯ ಮಾನ್ವಿಯ ಬುರಾಂಪುರದಲ್ಲಿ ಮರಳು ಲಾರಿ ಹರಿದು ಗ್ರಾಮಲೆಕ್ಕಾಧಿಕಾರಿ ಸಾವನ್ನಪ್ಪಿದ ಪ್ರಕರಣದಲ್ಲಿ ದೊಡ್ಡ ದೊಡ್ಡ ಕೈಗಳಿರುವ ಶಂಕೆ ವ್ಯಕ್ತವಾಗಿದೆ. ಮರಳು ದಂಧೆಕೋರರಿಗೆ ಕಾಂಗ್ರೆಸ್ ಶಾಸಕರ ಬೆಂಬಲ ಇರುವ ಬಗ್ಗೆ ಅನುಮಾನಗಳು ಮೂಡಿವೆ. ಕೊಲೆ ಪ್ರಕರಣ ದಾಖಲಾಗಿದ್ದರೂ, ಶಾಸಕ ಹೂಲಗೇರಿ ಮಾತ್ರ ಇದು ಕೊಲೆಯಲ್ಲ. ಉದ್ದೇಶಪೂರ್ವಕವಾಗಿಯೇ ಕೊಲೆ ಎಂದು ಬಿಂಬಿಸಲಾಗುತ್ತಿದೆ ಎಂದು ಹೇಳುವ ಮೂಲಕ ದಂಧೆಕೋರರರನ್ನು ರಕ್ಷಿಸುತ್ತಿದ್ದಾರೆಂಬ ಮಾತು ಈಗ ಕೇಳಿ ಬಂದಿದೆ.

    ಲೆಕ್ಕಾಧಿಕಾರಿಯ ಹತ್ಯೆ ಕುರಿತು ಮಾತನಾಡಿದ್ದ ಅವರು, ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರದ್ದು ಅಸಹಜ ಸಾವು ಎನ್ನುವ ಮಾಹಿತಿಯಿದೆ. ಮರಳು ಲಾರಿ ತಡೆಯಲು ಹೋದಾಗ ಲಾರಿ ಮುಂದಕ್ಕೆ ಹೋಗಿದೆ. ಈ ವೇಳೆ ಕಾಲು ಜಾರಿ ಹಿಂದಿನ ಗಾಲಿಗೆ ಬಿದ್ದು ಅಧಿಕಾರಿ ಸಾವನ್ನಪ್ಪಿದ್ದಾನೆಂದು ಹೇಳಿದ್ದಾರೆ.

    ಈಗಾಗಲೇ ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಅಕ್ರಮ ಮರಳುಗಾರಿಕೆಯ ಕಿಂಗ್‍ಪಿನ್ ಎಂದು ಹೇಳಲಾಗುತ್ತಿರುವ ಆಲ್ದಾಳ ವೀರಭದ್ರಪ್ಪ ಕಾಂಗ್ರೆಸ್ ಮುಖಂಡನಾಗಿದ್ದು, ಆತನನ್ನ ರಕ್ಷಿಸಲು ಶಾಸಕರು ಮುಂದಾಗಿದ್ದಾರೆ. ಅಲ್ಲದೇ ಶಾಸಕರು ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ. ಶಾಸಕ ಬೇಜವಾಬ್ದಾರಿ ಹೇಳಿಕೆಯ ವಿರುದ್ಧ ಹೋರಾಟದ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

    ಏನಿದು ಪ್ರಕರಣ?
    ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚೀಕಪರ್ವಿಯಲ್ಲಿ ಸಾಹೇಬ್ ಪಟೇಲ್ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶುಕ್ರವಾರ ಮಾನ್ವಿಯ ಬುದ್ದಿನ್ನಿ ಸಮೀಪದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನುವ ಮಾಹಿತಿ ಪಡೆದಿದ್ದರು. ಇದರ ಸಂಬಂಧ ಶನಿವಾರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕನೊಬ್ಬ ಅಧಿಕಾರಿಯನ್ನು ನೋಡುತ್ತಿದ್ದಂತೆ, ಅವರಿಂದ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ಮೇಲೆಯೇ ಲಾರಿ ಹರಿಸಿದ್ದ. ಪರಿಣಾಮ ಎರಡೂ ಕಾಲುಗಳು ಮೇಲೆ ಲಾರಿ ಹರಿದು ತೀವ್ರ ಸ್ವರೂಪದ ರಕ್ತಸ್ರಾವವಾಗಿತ್ತು. ಇದನ್ನು ಕಂಡ ಸ್ಥಳೀಯರು ಕೂಡಲೇ ಪಟೇಲ್ ಅವರನ್ನು ಮಾನ್ವಿಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಿದ್ದರು. ಆದರೆ ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ಪಟೇಲ್ ಮೃತಪಟ್ಟಿದ್ದರು.

    https://www.youtube.com/watch?v=RBo5tm1iM2w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗ್ರಾಮ ಲೆಕ್ಕಾಧಿಕಾರಿಯ ಪ್ರಾಣ ತೆಗೆದ ಲಾರಿ ಚಾಲಕನ ವಿರುದ್ಧ ಕೇಸ್

    ಗ್ರಾಮ ಲೆಕ್ಕಾಧಿಕಾರಿಯ ಪ್ರಾಣ ತೆಗೆದ ಲಾರಿ ಚಾಲಕನ ವಿರುದ್ಧ ಕೇಸ್

    ರಾಯಚೂರು: ಅಕ್ರಮ ಮರಳು ಸಾಗಿಸುವ ಲಾರಿಯನ್ನು ತಡೆಯಲು ಬಂದ ಅಧಿಕಾರಿಯೊಬ್ಬರ ಮೇಲೆ ಮರಳು ತುಂಬಿದ್ದ ಲಾರಿಯನ್ನೇ ಹರಿಸಿ ಹತ್ಯೆಗೈದಿದ್ದ ಚಾಲಕನ ವಿರುದ್ಧ ಕೊಲೆ ಪ್ರಕರಣ ದಾಖಸಿ, ಪೊಲೀಸರು ಬಂಧಿಸಿದ್ದಾರೆ.

    ರಂಗಪ್ಪ ಎಂಬಾತ ಬಂಧಿತ ಲಾರಿ ಚಾಲಕ. ಸಾಹೇಬ್ ಪಟೇಲ್(45) ಮೃತ ಗ್ರಾಮ ಲೆಕ್ಕಾಧಿಕಾರಿ. ರಾಯಚೂರಿನ ಮಾನ್ವಿಯ ಬುದ್ದಿನ್ನಿಯಲ್ಲಿ ಶನಿವಾರ ನಡೆದ ಘಟನೆ ಇದಾಗಿದ್ದು, ಶರಣಯ್ಯಗೌಡ ಎಂಬವನಿಗೆ ಸೇರಿದ ಲಾರಿಯ ಚಾಲಕನ ವಿರುದ್ಧ ಗ್ರಾಮಲೆಕ್ಕಾಧಿಕಾರಿ ಇಫ್ರಾನ್ ಅಲಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಸೆಕ್ಷನ್ 302(ಕೊಲೆ) ಅಡಿಯಲ್ಲಿ ಪೋಲೀಸರು ಪ್ರಕರಣ ದಾಖಲಿಸಿ, ರಂಗಪ್ಪನನ್ನು ಮಾನ್ವಿ ಪೊಲೀಸರು ಬಂಧಿಸಿದ್ದಾರೆ.

    ಘಟನೆ ವಿವರ:
    ಸಾಹೇಬ್ ಪಟೇಲ್ ಅವರು ಚೀಕಪರ್ವಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಾನ್ವಿಯ ಬುದ್ದಿನ್ನಿ ಸಮೀಪದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನುವ ಮಾಹಿತಿ ಪಡೆಡಿದ್ದ ಅವರು ಪರಿಶೀಲನೆ ನಡೆಸಲು ಹೋಗಿದ್ದರು. ಈ ವೇಳೆ ಚಾಲಕ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ಅವರ ಕಾಲುಗಳ ಮೇಲೆ ಲಾರಿ ಹರಿಸಿದ್ದಾನೆ. ಪರಿಣಾಮ ಎರಡೂ ಕಾಲು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪಟೇಲ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಹೇಬ್ ಮೃತಪಟ್ಟಿದ್ದಾರೆ.

    ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಮೃತ ದೇಹವನ್ನು ಇಂದು ಸ್ವಗ್ರಾಮ ಲಿಂಗಸುಗೂರಿನ ಚಿತ್ತಾಪುರಕ್ಕೆ ರವಾನಿಸಲಾಗಿದ್ದು, ಕುಟುಂಬಸ್ಥರ ಅಂತಿಮ ಸಂಸ್ಕಾರ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮರಳು ಅಕ್ರಮ ಸಾಗಾಣೆ ತಡೆಯಲು ಬಂದಿದ್ದ ಅಧಿಕಾರಿಯ ಪ್ರಾಣವನ್ನೇ ತೆಗೆದ ಚಾಲಕ!

    ಮರಳು ಅಕ್ರಮ ಸಾಗಾಣೆ ತಡೆಯಲು ಬಂದಿದ್ದ ಅಧಿಕಾರಿಯ ಪ್ರಾಣವನ್ನೇ ತೆಗೆದ ಚಾಲಕ!

    ರಾಯಚೂರು: ಅಕ್ರಮವಾಗಿ ಮರಳು ಸಾಗಿಸುತ್ತ ಲಾರಿಯನ್ನು ತಡೆಯಲು ಬಂದಿದ್ದ ಅಧಿಕಾರಿಯ ಮೇಲೆ ಚಾಲಕನೊಬ್ಬ ಲಾರಿ ಹರಿಸಿ ಪ್ರಾಣವನ್ನೇ ಕಿತ್ತುಕೊಂಡ ಘಟನೆ ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮಾನ್ವಿ ತಾಲೂಕಿನ ಚೀಕಪರ್ವಿ ಗ್ರಾಮದ ಮಾನ್ವಿಯ ಸಾಹೇಬ್ ಪಟೇಲ್ ಮೃತ ಅಧಿಕಾರಿ. ಘಟನಾ ಸ್ಥಳದಲ್ಲಿಯೇ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಮಾನ್ವಿ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಘಟನೆ ವಿವರ:
    ಸಾಹೇಬ್ ಪಟೇಲ್ ಅವರು ಚೀಕಪರ್ವಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮಾನ್ವಿಯ ಬುದ್ದಿನ್ನಿ ಸಮೀಪದ ತುಂಗಭದ್ರಾ ನದಿಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದಾರೆ ಎನ್ನುವ ಮಾಹಿತಿ ಪಡೆಡಿದ್ದ ಅವರು ಇಂದು ಪರಿಶೀಲನೆ ನಡೆಸಲು ಹೋಗಿದ್ದರು. ಈ ವೇಳೆ ಚಾಲಕ ತಪ್ಪಿಸಿಕೊಳ್ಳಲು ಸಾಹೇಬ್ ಪಟೇಲ್ ಅವರ ಕಾಲುಗಳ ಮೇಲೆ ಲಾರಿ ಹರಿಸಿದ್ದಾನೆ. ಪರಿಣಾಮ ಎರಡೂ ಕಾಲು ಕಳೆದುಕೊಂಡು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಾನ್ವಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಹೇಬ್ ಮೃತಪಟ್ಟಿದ್ದಾರೆ.

    ಸಾಹೇಬ್ ಪಟೇಲ್ ಅವರ ಮೃತ ದೇಹವನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ. ಮೃತರ ಕಟುಂಬಸ್ಥರು ಚಾಲಕನನ್ನು ಹಾಗೂ ಅಕ್ರಮವಾಗಿ ಮರಳು ಸಾಗುವವರ ವಿರುದ್ಧ ಕ್ರಮಕೈಗೊಳ್ಳಬೇಕು ಹಾಗೂ ನಮಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

    ಈ ಕುರಿತು ತನಿಖೆ ಆರಂಭಿಸಿದ್ದು, ಲಾರಿ ಮಾಲೀಕ ಹಾಗೂ ಚಾಲಕನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುತ್ತದೆ ಎಂದು ಮಾನ್ವಿ ಪೊಲೀಸರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv