Tag: ಗ್ರಾಮಾಯಣ ಸಿನಿಮಾ

  • ಮೇಘಾ ಶೆಟ್ಟಿ ಬರ್ತ್‌ಡೇ- ಫ್ಯಾನ್ಸ್‌ಗೆ ಭರ್ಜರಿ ಸರ್ಪ್ರೈಸ್

    ಮೇಘಾ ಶೆಟ್ಟಿ ಬರ್ತ್‌ಡೇ- ಫ್ಯಾನ್ಸ್‌ಗೆ ಭರ್ಜರಿ ಸರ್ಪ್ರೈಸ್

    ರಾವಳಿ ನಟಿ ಮೇಘಾ ಶೆಟ್ಟಿ (Megha Shetty) ಅವರು ಇಂದು (ಆ.4) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ದಿನ ಅವರ ಮುಂದಿನ ಸಿನಿಮಾದ ಲುಕ್ ಅನ್ನು ಚಿತ್ರತಂಡ ಅನಾವರಣ ಮಾಡುವ ಮೂಲಕ ಫ್ಯಾನ್ಸ್‌ಗೆ ಸೂಪರ್ ಸರ್ಪ್ರೈಸ್ ಕೊಟ್ಟಿದ್ದಾರೆ. ಇದನ್ನೂ ಓದಿ:ಬದುಕಿನಲ್ಲಿ ಎದುರಿಸಿದ ಏರಿಳಿತಗಳ ಬಗ್ಗೆ ಮಾತನಾಡಿದ ಸಮಂತಾ

    ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಿರುವ ಮೇಘಾ ಶೆಟ್ಟಿ ಇದೀಗ ಅವರ ಮುಂಬರುವ 3 ಸಿನಿಮಾಗಳ ಪೋಸ್ಟರ್ ರಿವೀಲ್ ಆಗಿದೆ. ಈ ಮೂಲಕ ಅಭಿಮಾನಿಗಳ ಕುತೂಹಲಕ್ಕೆ ಚಿತ್ರತಂಡ ತೆರೆ ಎಳೆದಿದ್ದಾರೆ. ಆಪರೇಷನ್ ಲಂಡನ್ ಕೆಫೆ, ಗ್ರಾಮಾಯಣ, ಚೀತಾ (Cheetah) ಸಿನಿಮಾಗಳ ಪೋಸ್ಟರ್‌ನಲ್ಲಿ ಡಿಫರೆಂಟ್ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ‘ಆಪ್ಟರ್‌ ಆಪರೇಷನ್ ಲಂಡನ್ ಕೆಫೆ’ (After Operation London Cafe) ಸಿನಿಮಾದಲ್ಲಿ ಲಂಗ ದಾವಣಿ ಧರಿಸಿ ನಟಿ ಮುದ್ದಾಗಿ ಕಾಣಿಸಿಕೊಂಡಿರುವ ಲುಕ್ ರಿವೀಲ್ ಆಗಿದೆ. ಈ ಚಿತ್ರಕ್ಕೆ ಸಡಗರ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಸದ್ಯದಲ್ಲೇ ಚಿತ್ರದ ಟೀಸರ್ ಮತ್ತು ರಿಲೀಸ್ ಬಗ್ಗೆ ಮಾಹಿತಿ ಸಿಗಲಿದೆ. ಕವೀಶ್ ಶೆಟ್ಟಿಗೆ ಮೇಘಾ ನಾಯಕಿಯಾಗಿ ನಟಿಸಿದ್ದಾರೆ. ಕನ್ನಡ, ಮರಾಠಿ ಸೇರಿದಂತೆ ಹಲವು ಭಾಷೆಗಳಲ್ಲಿ ಚಿತ್ರ ಮೂಡಿ ಬಂದಿದೆ.

    ‘ಗ್ರಾಮಾಯಣ’ (Gramayana) ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್‌ಗೆ ಮೇಘಾ ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲೂ ಭಿನ್ನ ಪಾತ್ರಕ್ಕೆ ನಟಿ ಜೀವ ತುಂಬಿದ್ದಾರೆ. ಈ ಚಿತ್ರವನ್ನು ಜಿ. ಮನೋಹರ್ ಮತ್ತು ಶ್ರೀಕಾಂತ್ ಕೆ.ಪಿ ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ದೇವನೂರು ಚಂದ್ರು ನಿರ್ದೇಶನ ಮಾಡಿದ್ದಾರೆ.

    ಪ್ರಜ್ವಲ್ ದೇವರಾಜ್ ನಟನೆಯ ‘ಚೀತಾ’ (Cheetah) ಸಿನಿಮಾದಲ್ಲಿ ಮೇಘಾ ಶೆಟ್ಟಿ ಲೀಡ್ ರೋಲ್‌ನಲ್ಲಿ ನಟಿಸಿದ್ದು, ರೌದ್ರಾವತಾರದಲ್ಲಿ ಕಾಣಿಸಿಕೊಂಡಿರುವ ನಟಿಯ ಪೋಸ್ಟರ್ ಈಗ ರಿವೀಲ್ ಆಗಿದೆ. ಮೇಘಾ ನಟಿಸಿರುವ 3 ಸಿನಿಮಾಗಳ ಪೋಸ್ಟರ್ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಶುಭಕೋರಿದ್ದಾರೆ.

    ಅಂದಹಾಗೆ, ‘ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಅನು ಸಿರಿಮನೆ ಪಾತ್ರದಿಂದ ಮನಗೆದ್ದ ನಟಿ ಮೇಘಾ ಬೆಳ್ಳಿಪರದೆಯಲ್ಲಿ ಬ್ಯಾಕ್ ಟು ಬ್ಯಾಕ್ ಚಿತ್ರಗಳ ಮೂಲಕ ಮಿಂಚುತ್ತಿದ್ದಾರೆ.

  • ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ಮಂಗಳೂರ್ ಬ್ಯೂಟಿ ಮೇಘಾ ಶೆಟ್ಟಿ (Megha Shetty) ಹೊಸ ಫೋಟೋಶೂಟ್ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದ್ದಾರೆ. ಹೊಸ ಫೋಟೋಶೂಟ್‌ನಲ್ಲಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

    ಬೂದು ಬಣ್ಣದ ಉಡುಗೆಯಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಕಣ್ಣಿಗೆ ಮಸ್ತ್ ಆಗಿ ಪೋಸ್ ನೀಡಿದ್ದಾರೆ. ಮೇಘಾ ಶೆಟ್ಟಿ ಹೊಸ ಅವತಾರ ನೋಡಿ ಅಭಿಮಾನಿಗಳು, ನಮಗೆ ಹಳೆಯ ಮೇಘಾ ಶೆಟ್ಟಿ ಬೇಕು ಎಂದು ಕಾಮೆಂಟ್ ಮಾಡಿದ್ರೆ, ಇನ್ನೂ ಕೆಲವರು ಯಾವ ಬಾಲಿವುಡ್ ನಟಿಗೂ ನೀವು ಕಮ್ಮಿಯಿಲ್ಲ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

    ದೊಡ್ಮನೆ ಕುಡಿ ವಿನಯ್ ರಾಜ್‌ಕುಮಾರ್ (Vinay Rajkumar) ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಮೇಘಾ ಶೆಟ್ಟಿ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ಅಕ್ಟೋಬರ್ ಮೊದಲ ವಾರದಿಂದ ಸಿನಿಮಾ ಶೂಟಿಂಗ್ ಶುರುವಾಗಲಿದೆ. ಇದನ್ನೂ ಓದಿ:ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಅದ್ದೂರಿ ಮದುವೆ ಫೋಟೋಸ್

    ಧನ್ವೀರ್ ಗೌಡ (Dhanveer Gowda) ಜೊತೆ ಕೈವ ಸಿನಿಮಾ, ಆಪರೇಷನ್ ಲಂಡನ್ ಕೆಫೆ ಸಿನಿಮಾಗಳನ್ನ ನಟಿ ಮುಗಿಸಿ ಕೊಟ್ಟಿದ್ದಾರೆ. ಈ ಸಿನಿಮಾಗಳಲ್ಲಿ ಹೀರೋಯಿನ್ ಆಗಿ ನಟಿಸಿದ್ದಾರೆ.

    ಜೊತೆ ಜೊತೆಯಲಿ (Jothe Jotheyali) ಸೀರಿಯಲ್ ಮೂಲಕ ಫೇಮಸ್ ಆಗಿರುವ ನಟಿ ಈಗಾಗಲೇ ತ್ರಿಬಲ್ ರೈಡಿಂಗ್, ದಿಲ್ ಪಸಂದ್ ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ಮತ್ತೆ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾಗೆ ಚಾಲನೆ

    ದೊಡ್ಮನೆ ಕುಡಿ ನಟ ವಿನಯ್ ರಾಜ್‌ಕುಮಾರ್ (Vinay Rajkumar) ಅವರು ಗ್ರಾಮಾಯಣ ಚಿತ್ರಕ್ಕೆ ಮತ್ತೆ ಚಾಲನೆ ಸಿಕ್ಕಿದೆ. ಮೂರ್ನಾಲ್ಕು ವರ್ಷಗಳ ಹಿಂದೆ ಶುರುವಾಗಿದ್ದ ಸಿನಿಮಾಗೆ ಹಲವು ಕಾರಣಗಳಿಂದ ನಿಂತು ಹೋಗಿತ್ತು. ಇದೀಗ ಮತ್ತೆ ‘ಗ್ರಾಮಾಯಣ’ (Gramayana) ಸಿನಿಮಾ ತರಲು ಭರ್ಜರಿ ತಯಾರಿ ನಡೆಯುತ್ತಿದೆ. ಅದಕ್ಕೆ ಅದ್ದೂರಿ ಮುಹೂರ್ತ ಕೂಡ ಫಿಕ್ಸ್ ಆಗಿದೆ.

    ‘ಸಿದ್ಧಾರ್ಥ್’ (Siddarth) ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿನಯ್ ರಾಜ್‌ಕುಮಾರ್ ಅವರು ಇತ್ತೀಚಿಗೆ ಹೊಸ ರೀತಿಯ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಗ್ರಾಮಾಯಣ’ ಚಿತ್ರದ ವಿಚಾರವಾಗಿ ನಟ ವಿನಯ್ ಸುದ್ದಿಯಲ್ಲಿದ್ದಾರೆ. ಈ ಹೆಸರು ಕೇಳಿದ ತಕ್ಷಣ ಹಲವರಿಗೆ ಇದು ಈಗಾಗಲೇ ಆರಂಭವಾಗಿರುವ ಸಿನಿಮಾವಲ್ಲವೇ ಎಂಬ ಪ್ರಶ್ನೆ ಮೂಡುತ್ತದೆ. ಹೌದು, ‘ಗ್ರಾಮಾಯಣ’ ಸಿನಿಮಾ ಆರಂಭವಾಗಿ ಮೂರ್ನಾಲ್ಕು ವರ್ಷಗಳಾಗಿವೆ. ಆದರೆ ಹಲವು ಕಾರಣಗಳಿಂದ ನಿಂತು ಹೋಗಿದ್ದ ಚಿತ್ರವನ್ನು ಖ್ಯಾತ ನಿರ್ಮಾಪಕ ಕೆ.ಪಿ ಶ್ರಿಕಾಂತ್ ಅವರು ಲಹರಿ ಫಿಲ್ಮ್ಸ್ ಮನೋಹರ್ ನಾಯ್ಡು ಜೊತೆಗೆ ಸೇರಿ ಆರಂಭಿಸುತ್ತಿದ್ದಾರೆ. ‘ಯುಐ’ ಸಿನಿಮಾದ ನಂತರ ಶ್ರಿಕಾಂತ್ ಮತ್ತು ಮನೋಹರ್ ನಾಯ್ಡು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇದನ್ನೂ ಓದಿ:ಅಂಬಿ ಪುತ್ರನ ಅದ್ದೂರಿ ಕಲ್ಯಾಣ- ಮದುವೆಯ ಕಲರ್‌ಫುಲ್ ಫೋಟೋಸ್

    ದೇವನೂರು ಚಂದ್ರು ನಿರ್ದೇಶನದ ‘ಗ್ರಾಮಾಯಣ’ ಸಿನಿಮಾ ಒಂದೇ ಒಂದು ಟೀಸರ್‌ನಿಂದ ಹಲವರ ಗಮನ ಸೆಳೆದಿತ್ತು. ಕೋವಿಡ್‌ನಿಂದ ಮತ್ತು ಹಲವು ಕಾರಣಗಳಿಂದ ಸಿನಿಮಾ ಅರ್ಧಕ್ಕೆ ನಿಂತು ಹೋಗಿತ್ತು. ಇದೀಗ ಹೊಸದಾಗಿ ಚಿತ್ರವನ್ನ ಶುರು ಮಾಡ್ತಿದ್ದಾರೆ. ಜೂನ್ 8ರಂದು ಈ ಸಿನಿಮಾದ ಮುಹೂರ್ತ ನಡೆಯಲಿದೆ ಎಂಬ ಮಾಹಿತಿ ಚಿತ್ರತಂಡದಿಂದ ಅಪ್‌ಡೇಟ್ ಸಿಕ್ಕಿದೆ.

    ‘ಗ್ರಾಮಾಯಣ’ ಹೆಸರೇ ಹೇಳುವಂತೆ ಹಳ್ಳಿ ಬ್ಯಾಕ್‌ಗ್ರೌಂಡ್‌ನಲ್ಲಿ ನಡೆಯುವ ಕಥೆಯಾಗಿದೆ. ನಮ್ಮ ನೆಲದ ಕಥೆಯಾಗಿದ್ದು, ಒಂದು ಹಳ್ಳಿಯಲ್ಲಿ ಏನೇನು ನಡೆಯುತ್ತದೆ, ಅಲ್ಲಿನ ವಾತಾವರಣ, ಜನ ಜೀವನವನ್ನು ಈ ಸಿನಿಮಾ ಮೂಲಕ ತೆರೆದಿಡುವ ಪ್ರಯತ್ನ ಮಾಡಲಾಗುತ್ತಿದೆ. ‘ಗ್ರಾಮಾಯಣ’ ಸಿನಿಮಾಗೆ ಬೆಂಗಳೂರಿನಲ್ಲಿ ಜೂನ್ 8ರಂದು ಅದ್ಧೂರಿ ಮುಹೂರ್ತ ನಡೆಯಲಿದ್ದು, ಈ ಸಮಾರಂಭದಲ್ಲಿ ಡಾ. ರಾಜ್‌ಕುಮಾರ್ ಕುಟುಂಬದ ಎಲ್ಲಾ ಸದಸ್ಯರು, ರಾಜ್ಯದ ಹಿರಿಯ ರಾಜಕಾರಣಿಗಳು, ಚಿತ್ರರಂಗದ ಗಣ್ಯರು ಪಾಲ್ಗೊಳ್ಳಲಿದ್ದಾರೆ.