ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿದ ಬಜೆಟ್‌ನಲ್ಲಿ, ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳು (Indian Postal Service) ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿಗಾಗಿ ಭಾರತೀಯ ಅಂಚೆ ಸೇವೆಗಳನ್ನು ವಿಸ್ತರಿಸಲಾಗುವುದು. ಇದರಿಂದ ಸೂಕ್ಷ್ಮ ಉದ್ಯಮಗಳಿಗೆ ಡಿಬಿಟಿ, ಕ್ರೆಡಿಟ್ ಸೇವೆಗಳು, ವಿಮೆ ಸೇರಿದಂತೆ ಇತರ ಸೇವೆಗಳು ಲಭ್ಯವಾಗುತ್ತವೆ. ವಿಶ್ವಕರ್ಮರು, ಮಹಿಳೆಯರು, ಸ್ವಸಹಾಯ ಗುಂಪುಗಳು, ಎಂಎಸ್ಎಂಇಗಳು ಇತ್ಯಾದಿ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸಲು ಭಾರತೀಯ ಅಂಚೆ ಸೇವೆ ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ಸ್ ಸಂಸ್ಥೆಯಾಗಿ ಪರಿವರ್ತಿಸಲಾಗುವುದು ಎಂದು ಹೇಳಿದರು.ಇದನ್ನೂ ಓದಿ: ಇದು ಜನಸಾಮಾನ್ಯರ ಬಜೆಟ್.. ಉಳಿತಾಯ, ಹೂಡಿಕೆಗೆ ಉತ್ತೇಜನ: ಮೋದಿ ಬಣ್ಣನೆ
ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.01 ರಂದು ಸಂಸತ್ತಿನಲ್ಲಿ 2025-26ರ ಬಜೆಟ್ ಅನ್ನು ಮಂಡಿಸುತ್ತಾ, 1.5 ಲಕ್ಷ ಗ್ರಾಮೀಣ ಅಂಚೆ ಕಚೇರಿಗಳನ್ನು ಹೊಂದಿರುವ ಭಾರತೀಯ ಅಂಚೆಯನ್ನು ಇಂಡಿಯಾ ಪೋಸ್ಟ್ ಪಾವತಿ ಬ್ಯಾಂಕ್ ಮತ್ತು 2.4 ಲಕ್ಷ ಅಂಚೆ ಸೇವಕರ ವಿಶಾಲ ಪೂರಕ ಸಂಪರ್ಕ ಜಾಲವನ್ನು ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಕಾರ್ಯನಿರ್ವಹಿಸಲು ಮರುಸ್ಥಾಪಿಸಲಾಗುವುದು ಎಂದರು.
ಭಾರತ ಅಂಚೆಯ ನೂತನ ವಿಸ್ತೃತ ಸೇವೆಗಳ ವ್ಯಾಪ್ತಿಯು ಈ ಕೆಳಗಿನವುಗಳನ್ನು ಒಳಗೊಂಡಿರುತ್ತದೆ ಎಂದು ಬಜೆಟ್‌ನಲ್ಲಿ ಪ್ರಸ್ತಾಪಿಸಿದರು.
1) ಗ್ರಾಮೀಣ ಸಮುದಾಯ ಕೇಂದ್ರ ಸಹ-ಸ್ಥಳ
2) ಸಾಂಸ್ಥಿಕ ಖಾತೆ ಸೇವೆಗಳು
3) ಡಿ.ಬಿ.ಟಿ., ನಗದು ಪಾವತಿ ಮತ್ತು ಇ.ಎಂ.ಐ ಸ್ವೀಕಾರ
4) ಸೂಕ್ಷ್ಮ ಉದ್ಯಮಗಳಿಗೆ ಕ್ರೆಡಿಟ್ ಸೇವೆಗಳು
5) ವಿಮೆ
6) ನೆರವಿನ ಡಿಜಿಟಲ್ ಸೇವೆಗಳು.
ಭಾರತ ಅಂಚೆಯನ್ನು ದೊಡ್ಡ ಸಾರ್ವಜನಿಕ ಸಾಗಣೆ (ಲಾಜಿಸ್ಟಿಕ್ಸ್) ಸಂಸ್ಥೆಯಾಗಿ ಪರಿವರ್ತಿಸಲಾಗುವುದು. ಇದು ವಿಶ್ವಕರ್ಮರು, ನವೋದ್ಯಮಿಗಳು, ಮಹಿಳೆಯರು, ಸ್ವಸಹಾಯ ಗುಂಪುಗಳು, ಎಂಎಸ್ಎಂಇಗಳು ಮತ್ತು ದೊಡ್ಡ ವ್ಯಾಪಾರ ಸಂಸ್ಥೆಗಳು ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅಗತ್ಯಗಳನ್ನು ಪೂರೈಸುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಭಾರತ ಅಂಚೆ ಪಾವತಿ ಬ್ಯಾಂಕ್‌ನ ಸೇವೆಗಳನ್ನು ಇನ್ನೂ ಉತ್ತಮಗೊಳಿಸಲಾಗುವುದು ಹಾಗೂ ಆಳಗೊಳಿಸಲಾಗುವುದು ಮತ್ತು ವಿಸ್ತರಿಸಲಾಗುವುದು ಎಂದರು.ಇದನ್ನೂ ಓದಿ: Budget 2025| ಕಿತ್ತಾಟ ನಡೆಸಿದ್ರೂ ಮಾಲ್ಡೀವ್ಸ್‌ಗೆ ಅನುದಾನ ಹೆಚ್ಚಳ,ಬಾಂಗ್ಲಾಗೂ ಸಹಾಯ- ಯಾವ ದೇಶಕ್ಕೆ ಎಷ್ಟು ಕೋಟಿ?
ಬೆಂಗಳೂರು: ರಾಜ್ಯದ ಕೃಷಿ (Agriculture) ಕ್ಷೇತ್ರದ ಬಲವರ್ಧನೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಪೂರಕವಾಗಿ ಬೇಕಾಗಿರುವ ವಿವಿಧ ಸಹಾಯ ಮತ್ತು ಆರ್ಥಿಕ ಸಹಕಾರವನ್ನು ಶೀಘ್ರ ಒದಗಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ (N Chaluvarayaswamy) ಕೇಂದ್ರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ನೆರವಿನ ಭರವಸೆಯನ್ನೂ ಸಹ ಪಡೆದಿದ್ದಾರೆ.
Held a detailed meeting with Shri @ChouhanShivraj avaru, Union Minister of Agriculture and Farmers Welfare & Minister of Rural Development, on Policy Interventions & Financial Assistance for Karnataka in Agriculture, Watershed Development, and in transforming University of… pic.twitter.com/LQf0U7alG9
ಬೆಂಗಳೂರಿನ (Bengaluru) ಕುಮಾರಕೃಪಾ ಅತಿಥಿ ಗೃಹದಲ್ಲಿ ಕಂದಾಯ ಸಚಿವರಾದ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು, ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಅವರನ್ನು ಭೇಟಿ ಮಾಡಿ, ಮನವಿ ಅರ್ಪಿಸಿ ಚಲುವರಾಯಸ್ವಾಮಿರವರು ರಾಜ್ಯದ ಬೇಡಿಕೆಗಳನ್ನು ಮಂಡಿಸಿದರು. ಇದನ್ನೂ ಓದಿ: ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಕೇಸ್ – ಸಂಜಯ್ ರಾಯ್ ದೋಷಿ
ರಾಜ್ಯದಲ್ಲಿ ಕೃಷಿ ಇಲಾಖೆ ಶೇ.99 ರಷ್ಟು ಆರ್ಥಿಕ ಹಾಗೂ ಭೌತಿಕ ಗುರಿ ಸಾಧನೆ ಮಾಡಿದ್ದು, ಕೇಂದ್ರ ಪುರಸ್ಕೃತ ಯೋಜನೆಗಳಲ್ಲೂ ಶೇ.124ರಷ್ಟು ಅನುದಾನ ಬಳಸಿಕೊಂಡಿದೆ. ಈ ಹಿನ್ನಲೆಯಲ್ಲಿ ಈ ಬಾರಿಯೂ ಇದೇ ರೀತಿ ಹಣಕಾಸಿನ ನೆರವು ಒದಗಿಸಬೇಕೆಂದು ಸಚಿವರು ಕೋರಿದರು. ಕೇಂದ್ರ ಕೃಷಿ ಸಚಿವರು ಇದಕ್ಕೆ ಮುಕ್ತ ಮನಸ್ಸಿನ ಸಮ್ಮತಿ ಸೂಚಿಸಿದರು.
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಿಂದ ರೈತರಿಗೆ ಕೃಷಿ ಯಾಂತ್ರಿಕರಣಕ್ಕೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಈ ಭಾರಿ ಇನ್ನಷ್ಟು ಅಧಿಕ ಆರ್ಥಿಕ ನೆರವು ಒದಗಿಸುವಂತೆ ಮನವಿ ಮಾಡಿದ ಅವರು ಆನೇಕಲ್ ತಾಲ್ಲೂಕಿನ, ಕಾಚನಾಯಕನಹಳ್ಳಿ ಗ್ರಾಮದಲ್ಲಿ ಗುರುತಿಸಲಾಗಿರುವ 20 ಎಕರೆ ಪ್ರದೇಶದಲ್ಲಿ ಫೆಸ್ಟಿಸೈಡ್ಸ್ ಫಾರ್ಮುಲೇಷನ್ ಟೆಕ್ನಾಲಜಿ ಸಂಸ್ಥೆ ಪ್ರಾರಂಭಕ್ಕೆ ಅನುಮೋದನೆ ಒದಗಿಸುವಂತೆ ಕೋರಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಅಪ್ಪಂದಿರ ಮನೆಯಿಂದ ಈ ಸರ್ಕಾರ ಅನುದಾನ ಕೊಡ್ತಿಲ್ಲ – ಪ್ರಿಯಾಂಕ್ ಖರ್ಗೆ ವಿರುದ್ಧ ಅಶೋಕ್ ಕಿಡಿ
ಸಾವಯವ, ಸಿರಿಧಾನ್ಯ ಉತ್ಪಾದನೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳ ತಯಾರಿ ಮತ್ತು ಮಾರಾಟದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು ಇದನ್ನು ಇನ್ನಷ್ಟು ಉತ್ತಮಪಡಿಸಲು ಕೇಂದ್ರ ಸರ್ಕಾರದ ನೆರವು ಮತ್ತು ಪ್ರೋತ್ಸಾಹದ ಅಗತ್ಯವಿದೆ ಎಂದಿರುವ ಅವರು ಜ.23 ರಿಂದ 25ರ ವರೆಗೆ ನಗರದ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಸಿರಿಧಾನ್ಯ ಮೇಳದಲ್ಲಿ ಭಾಗವಹಿಸುವಂತೆ ಶಿವರಾಜ್ ಸಿಂಗ್ ಚೌಹಾಣ್ ರನ್ನ ಅಹ್ವಾನಿಸಿದರು.
ಹಿಂಗಾರು ಜೋಳಕ್ಕೆ ನೀಡಲಾಗುತ್ತಿರುವ ಬೆಂಬಲ ಬೆಲೆ ಸೌಲಭ್ಯವನ್ನು ಮುಂಗಾರಿನಿಂದಲೇ ಅನುಷ್ಠಾನಗೊಳಿಸಲು ನಿರ್ದೇಶನ ನೀಡಬೇಕು. ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನ (ತೃಣ ಧಾನ್ಯಗಳು) ಕನಿಷ್ಠ ಬೆಂಬಲ ಬೆಲೆ ಯೋಜನೆ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕೆಂದು ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವರಿಗೆ ಮನವಿ ಮಾಡಿದರು.
ಗುಣಮಟ್ಟ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಹಾಲಿ ಇರುವ ವಿವಿಧ ಕಾಯ್ದೆಗಳಿಗೆ ತಿದ್ದುಪಡಿ ತರುವುದು, ಬೀಜ ಕಾಯ್ದೆಯಡಿ ದಂಡ ಮತ್ತು ಪರವಾನಿಗೆ ಶುಲ್ಕ ಹೆಚ್ಚಳ ಕುರಿತು ರಾಷ್ಟ್ರೀಯ ಆಹಾರ ಸುರಕ್ಷತಾ ಕಾಯ್ದೆ ಪಿಎಂಕೆಎಸ್‌ವೈ – ಪಿಡಿಎಂಸಿ ವ್ಯವಸ್ಥೆಗಳ ಸುಧಾರಣೆಗಳ ಬಗ್ಗೆ ಚಲುವರಾಯಸ್ವಾಮಿರವರು ಕೇಂದ್ರ ಸಚಿವರ ಗಮನ ಸೆಳೆದರು.
ಅಲ್ಲದೇ ಜಲಾನಯನ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಈಗಾಗಲೇ ವಿಶ್ವಬ್ಯಾಂಕ್ ನೆರವಿನೊಂದಿಗೆ 567.98 ರೂ. ಕೋಟಿಗಳ ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಿದೆ. ರಾಜ್ಯದಲ್ಲಿ ಇನ್ನೂ 59.69 ಹೆಕ್ಟೇರ್ ಪ್ರದೇಶವನ್ನು ಜಲಾನಯನ ಅಭಿವೃದ್ಧಿ ಯೋಜನೆಯ ವ್ಯಾಪ್ತಿಗೆ ಸೇರಿಸಬೇಕಾಗಿದ್ದು, ಹೊಸದಾಗಿ 92 ಯೋಜನೆಗಳ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಮತ್ತು ಅನುದಾನ ಒದಗಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: 60 ಜನ ಕಾಂಗ್ರೆಸ್‌ನವರು ನಮ್ಮೊಟ್ಟಿಗೆ ಬರಲು ರೆಡಿಯಾಗಿದ್ದರು – ಯತ್ನಾಳ್ ಬಾಂಬ್
ಕರ್ನಾಟಕದ ಕೃಷಿ ಸಚಿವರು, ಕಂದಾಯ ಸಚಿವರು ಮತ್ತು ಗ್ರಾಮೀಣಾಭಿವೃದ್ಧಿ ಸಚಿವರ ಅಭಿಪ್ರಾಯ, ಮನವಿಗಳನ್ನು ಸ್ವೀಕರಿಸಿ ಚರ್ಚೆ ನಡೆಸಿದ ನಂತರ ಮಾತನಾಡಿದ ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರು ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯದ ಅಭಿವೃಧ್ಧಿಯ ದೃಷ್ಟಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸೋಣ, ರಾಜ್ಯಕ್ಕೆ ಬೇಕಾದ ಎಲ್ಲಾ ರೀತಿಯ ನೆರವನ್ನು ಒದಗಿಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.
ಆರ್ಥಿಕ ವರ್ಷ ಕೊನೆಯಾಗುತ್ತಿದ್ದು, ಒದಗಿಸುವ ಅನುದಾನವನ್ನು ಸಂಪೂರ್ಣವಾಗಿ ವೆಚ್ಚ ಮಾಡಿ ಹಣ ಸದ್ಭಳಕೆ ಪ್ರಮಾಣ ಪತ್ರವನ್ನು ನೀಡಿದ ಕೂಡಲೇ ಕೃಷಿ ಹಾಗೂ ಇತರೆ ಇಲಾಖೆಗಳಿಗೆ ಹೆಚ್ಚುವರಿ ಅನುದಾನ ಒದಗಿಸಲಾಗುವುದು ಆತ್ಮ ಯೋಜನೆಯಡಿ ಅಗತ್ಯ ಪ್ರಮಾಣದ ಸಿಬ್ಬಂದಿಯನ್ನು ಸಹ ಒದಗಿಸಲಾಗುವುದು ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದರು.
ಲೋಕಸಭಾ ಸದಸ್ಯರಾದ ಬಿ.ವೈ.ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೂ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು.
ಹಾಸನ: ಕೇಂದ್ರ ಸರ್ಕಾರ ನೀಡುವ ರಾಷ್ಟ್ರೀಯ ಪುರಸ್ಕಾರಕ್ಕೆ ಹಾಸನ ಜಿಲ್ಲೆ ಆಯ್ಕೆಯಾಗಿತ್ತು. ಇಂದು ರಾಜ್ಯದಲ್ಲೇ ಉತ್ತಮ ಸಾಧನೆಗಾಗಿ ಜಿಲ್ಲೆಗೆ ಅಧಿಕೃತವಾಗಿ ರಾಷ್ಟ್ರೀಯ ಪ್ರಶಸ್ತಿ ಹಸ್ತಾಂತರಗೊಂಡಿದೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿವಸದ ಅಂಗವಾಗಿ ನವದೆಹಲಿಯಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೋವಿಡ್ -19 ಹಿನ್ನೆಲೆಯಲ್ಲಿ ವರ್ಚುವಲ್ ವೇದಿಕೆ ಮುಖಾಂತರ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಗ್ ತೋಮರ್, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮೀಣ ಸಶಕ್ತೀಕರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.
ದೆಹಲಿಯಲ್ಲಿ ನಡೆದ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ಮಾತನಾಡಿದರು, ಪ್ರಶಸ್ತಿ ವಿಜೇತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅದರ ಅಧಿಕಾರಿಗಳಿಗೆ ಶುಭ ಕೋರಿದರು. ದೇಶದ ಶಕ್ತಿ ಗ್ರಾಮಗಳಲ್ಲಿದ್ದು ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಸಂಪೂರ್ಣ ಪ್ರಗತಿ ಸಾಧ್ಯ. ಹಳ್ಳಿಗಳು ಮತ್ತು ಬಡವರ ಉದ್ಧಾರ ಸರ್ಕಾರದ ಆದ್ಯತೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ ಅವುಗಳನ್ನು ಸಕಾಲದಲ್ಲಿ ಅರ್ಹರಿಗೆ ತಲಿಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದಕ್ಕೆ ರಾಜ್ಯ ಸರ್ಕಾರಗಳು ಹಾಗೂ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಸಂಪೂರ್ಣ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಹಾಗಾಗಿ ಈ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುವ, ಸಮರ್ಪಕ ಸಾಧನೆ ಮಾಡುವ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಇನ್ನಷ್ಟು ಮಾದರಿಯಾಗಿ ಕೆಲಸ ಮಾಡಿ ಎಂದು ಪ್ರಧಾನಿ ಕರೆ ನೀಡಿದರು.
We've to ensure that guidelines issued from time to time are followed in villages. We have the security cover of vaccines this time. So, we've to ensure that everyone in villages gets both the doses of vaccine: PM Modi at an event on Panchayati Raj Diwas, via video conferencing pic.twitter.com/BPHlJ5GubS
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರು ಪಂಚಾಯಿತಿ ಸಶಕ್ತೀಕರಣ ಯೋಜನೆಯ ಉದ್ದೇಶ, ಆಶಯ ಆಯ್ಕೆ ಸ್ವರೂಪ ಪ್ರಶಸ್ತಿ ಪಡೆವ ಸಂಸ್ಥೆಗಳ ಜವಾಬ್ದಾರಿಗಳನ್ನು ವಿವರಿಸಿ ಎಲ್ಲಾ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು, ಜನಪ್ರತಿನಿಧಿಗಳನ್ನು ಮತ್ತು ಅಧಿಕಾರಿಗಳನ್ನು ಅಭಿನಂದಿಸಿದರು.
ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಹಾಗೂ ಪ್ರಶಸ್ತಿ ಮೊತ್ತವನ್ನು ಆಯಾಯ ಜಿಲ್ಲಾ ಪಂಚಾಯತಿಗಳಿಗೆ ಆನ್ ಲೈನ್ ಮೂಲಕ ವರ್ಗಾವಣೆ ಮಾಡಿದ ನಂತರ ಇತ್ತ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್ ಅವರಿಗೆ ಪ್ರಶಸ್ತಿ ಫಲಕವನ್ನು ಹಸ್ತಾಂತರ ಮಾಡಿ ಅಭಿನಂದನೆ ಸಲ್ಲಿಸಿದರು.
ಇದೊಂದು ಹೆಮ್ಮೆಯ ಸಾಧನೆ. ಜಿಲ್ಲೆಗೆ ಸಂದ ಗೌರವ ಇದಕ್ಕೆ ಕಾರಣರಾದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯತಿ ಸಿ.ಇ.ಒ ಇತರ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳನ್ನು ತಾವು ಅಭಿನಂದಿಸುವುದಾಗಿ ಆರ್.ಗಿರೀಶ್ ಹೇಳಿದರು.
When we met for Panchayati Raj Diwas a year back, the entire country was fighting against Corona. At that time I had urged all of you to carry out your duty in stopping Corona from reaching villages: PM Narendra Modi at an event on Panchayati Raj Diwas, via video conferencing pic.twitter.com/J7jgzjhwR5
ಜಿಲ್ಲಾ ಪಂಚಾಯಿತಿ ಸಿ.ಇ.ಒ ಪರಮೇಶ್ ಅವರು ಸಹ ಪ್ರಶಸ್ತಿ ಬಂದ ಬಗ್ಗೆ ಸಂತಸ ವ್ಯಕ್ತಪಡಿಸಿ ಈ ಸಾಧನೆಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಇತರ ಎಲ್ಲಾ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಧನ್ಯವಾದ ಸಮರ್ಪಿಸುವುದಾಗಿ ತಿಳಿಸಿದರು
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್, ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಯೋಜನಾ ನಿರ್ದೇಶಕರಾದ ವಿಠಲ ಕಾವಳೆ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಮತ್ತಿತರರು ಹಾಜರಿದ್ದರು.