Tag: ಗ್ರಾಮ ಪಂಚಾಯತಿ

  • ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

    ಗ್ರಾಮ ಪಂಚಾಯತಿ ಆಸ್ತಿಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಯುತ್ತಿದೆ – ಪ್ರಿಯಾಂಕ್ ಖರ್ಗೆ

    ಬೆಳಗಾವಿ: ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ತಿಳಿಸಿದ್ದಾರೆ.

    ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಅವರು, ಗ್ರಾಮ ಪಂಚಾಯತಿಗಳಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿಗಳ ಮ್ಯಾನ್ಯುಯಲ್ ಸರಿಯಾಗಿ ಆಗಿಲ್ಲ. ಸಂಪೂರ್ಣವಾಗಿ ಆಸ್ತಿ ನಮೂದು ಆಗಬೇಕು. ಗ್ರಾಮ ಪಂಚಾಯತಿಗಳಲ್ಲಿ ಸರಿಯಾಗಿ ಆಸ್ತಿ ಪತ್ತೆ ಹಚ್ಚಿ, ತೆರಿಗೆ ಸಂಗ್ರಹ ಮಾಡಬೇಕು. ಇದರಿಂದ ಸರ್ಕಾರದ ಗ್ಯಾರಂಟಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯೇ ಹಣ ಕೊಡಬಹುದು. ಅಧಿಕಾರಿಗಳು ಸರಿಯಾಗಿ ಆಸ್ತಿ ಸರ್ವೇ ಮಾಡುತ್ತಿಲ್ಲ.ಬೆಂಗಳೂರಿನಲ್ಲಿ ಸರಿಯಾಗಿ ಸರ್ವೆ ಮಾಡಿಲ್ಲ. ಅಧಿಕಾರಿಗಳು ಎರಡು ಬುಕ್ ಇಟ್ಟುಕೊಂಡು ತೆರಿಗೆ ಸರ್ಕಾರಕ್ಕೆ ನಷ್ಟ ಮಾಡ್ತಿವೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಿ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಬಲಿಷ್ಠ ಸಮುದಾಯ 2ಎ ಮೀಸಲಾತಿ ಕೇಳುತ್ತಿರುವುದು ಸಂವಿಧಾನಕ್ಕೆ ಬಗೆಯುತ್ತಿರುವ ಅಪಚಾರ: ಲೇಖಕ ಕುಂ.ವೀರಭದ್ರಪ್ಪ ಕಿಡಿ

    ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯುಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್‌ನಲ್ಲಿ ನಮೂದಿಸಲಾಗಿದೆ ಎಂದರು.

    ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಬಂದ ಮೇಲೆ 8,61,524 ನಾವು ಅಸ್ತಿಗಳನ್ನ ಮ್ಯಾಪಿಂಗ್ ಮಾಡಿದ್ದೇವೆ. ಇವುಗಳ ಪೈಕಿ 4 ಲಕ್ಷ ಅಸ್ತಿಗಳು ಪಂಚತಂತ್ರದಲ್ಲಿ ನಮೂದು ಆಗಿಲ್ಲ. ಆದಷ್ಟು ಬೇಗ ಎಲ್ಲಾ ಆಸ್ತಿ ನಮೂದು ಮಾಡ್ತೀವಿ. ಇ-ಆಸ್ತಿ ನೋಂದಣಿಗೆ ಮಾಡಲು ಸರ್ವರ್ ಸಮಸ್ಯೆ ಕಾಣುತ್ತಿದೆ. ಎನ್‌ಐಸಿ ಅವರು ಸರ್ವರ್ ನಿರ್ವಹಣೆ ಮಾಡಿದ್ದಾರೆ. ಹೀಗಾಗಿ ಎನ್‌ಐಸಿಗೆ ನಾವೇ ಸರ್ವರ್ ನಿರ್ವಹಣೆ ಮಾಡೋದಾಗಿ ಹೇಳಿದ್ದೇವೆ. ಅವರು ಸಮಯ ಕೇಳಿದ್ದಾರೆ. ಇನ್ನೊಂದು ವರ್ಷದಲ್ಲಿ ಇ-ಸ್ವತ್ತು ಸಂಪೂರ್ಣವಾಗಿ ಜಾರಿ ಮಾಡೋ ಬಗ್ಗೆ ನೀಲಿನಕ್ಷೆ ಸಿದ್ಧಪಡಿಸಿದ್ದೇವೆ ಎಂದರು.ಇದನ್ನೂ ಓದಿ: ದರ್ಶನ್‌ಗೆ ಬೇಲ್: ದೇವರ ಪ್ರಸಾದ ಹಿಡಿದ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ

  • ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್ ತಡೆಯಾಜ್ಞೆ – ಗಲಭೆಗೆ ಯತ್ನಿಸಿದ 30 ಜನರ ವಿರುದ್ಧ ಎಫ್‍ಐಆರ್

    ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಹೈಕೋರ್ಟ್ ತಡೆಯಾಜ್ಞೆ – ಗಲಭೆಗೆ ಯತ್ನಿಸಿದ 30 ಜನರ ವಿರುದ್ಧ ಎಫ್‍ಐಆರ್

    ಕೊಪ್ಪಳ: ಗ್ರಾಮ ಪಂಚಾಯಿತಿ (Grama Panchayat) ಅಧ್ಯಕ್ಷ ಸ್ಥಾನದ ಮೀಸಲಾತಿ ಪ್ರಶ್ನಿಸಿ ಹೈಕೋರ್ಟ್‍ನ ಧಾರವಾಡ ಪೀಠದಿಂದ (High Court) ತಡೆಯಾಜ್ಞೆ ತಂದಿದ್ದಕ್ಕೆ ಎರಡು ಗುಂಪು ಗಲಭೆಗೆ ಯತ್ನಿಸಿದ ಪ್ರಕರಣ ಕಾರಟಗಿಯ ಬುದಗುಂಪಾ ಗ್ರಾಮದಲ್ಲಿ ನಡೆದಿದೆ. ಗಲಭೆಗೆ ಯತ್ನಿಸಿದ ಎರಡು ಗುಂಪುಗಳ 30 ಜನರ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ.

    ಗ್ರಾಮ ಪಂಚಾಯತ್‍ನ ಅಧ್ಯಕ್ಷ ಸ್ಥಾನ ಎಸ್‍ಟಿ ಸಮುದಾಯದ ಮಹಿಳೆಗೆ ಮೀಸಲಾಗಿದ್ದು, ಎಸ್‍ಸಿ ಮೀಸಲಾತಿ ಸಿಗಬೇಕಿತ್ತು ಎಂದು ಆಕ್ಷೇಪ ವ್ಯಕ್ತಪಡಿಸಿ ಗ್ರಾಮದ ಲಕ್ಷ್ಮಿ ಅಡಿವೆಪ್ಪ ಎಂಬುವರು ಹೈಕೋರ್ಟ್ ಮೊರೆ ಹೋಗಿದ್ದರು. ನಮ್ಮ ಸಮುದಾಯಕ್ಕೆ ಅಧ್ಯಕ್ಷ ಸ್ಥಾನ ಕೈತಪ್ಪುವಲ್ಲಿ ಲಕ್ಷ್ಮಿ ಅಡಿವೆಪ್ಪ ಜೊತೆ ಮುಂದುವರಿದ ಸಮಾಜದ ಕೆಲ ಜನ ಕೈ ಹಾಕಿದ್ದಾರೆ ಎನ್ನುವ ಶಂಕೆಯಿಂದಾಗಿ ಎಸ್‍ಟಿ ಸಮುದಾಯಕ್ಕೆ ಸೇರಿದ ಸುರೇಶ ನಾಯಕ ಎಂಬುವರು ಅಸಮಾಧಾನ ಗೊಂಡಿದ್ದರು. ಇದರಿಂದಾಗಿ ಎರಡೂ ಕಡೆಯ ಗುಂಪಿನ ಜನರು ಮಾರಾಕಾಸ್ತ್ರಗಳೊಂದಿಗೆ ಗ್ರಾಮದ ಕೇಂದ್ರ ಭಾಗವಾದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ್ದರು. ಜನ ಸೇರಿದ ಮಾಹಿತಿ ಲಭಿಸುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರೂ (Police) ಎರಡೂ ಗುಂಪಿನವರಿಗೆ ಎಚ್ಚರಿಕೆ ನೀಡಿ ಗಲಭೆ ತಪ್ಪಿಸಿದ್ದಾರೆ.

    ಆದರೂ ಗ್ರಾಮದಲ್ಲಿ ಬಿಗುವಿನ ವಾತಾವರಣವಿದೆ. ಶನಿವಾರ ಮಧ್ಯರಾತ್ರಿಯೇ ಬಳ್ಳಾರಿ ಐಜಿ ಲೋಕೇಶ್ ಕುಮಾರ್, ವಿಜಯನಗರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಮೇಲೆ ನಿಗಾ ವಹಿಸಲು ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು.

    ಅಲ್ಲದೇ ಗಲಭೆಗೆ ಯತ್ನಿಸಿದ ಎರಡೂ ಗುಂಪುಗಳಲ್ಲಿದ್ದ ಜನಗಳ ಮೇಲೆ ಇಲಾಖೆಯು ಸ್ವಯಂ ಪ್ರೇರಿತವಾಗಿ 30 ಜನರ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದೆ. ಎಂಟು ಜನರನ್ನು ಬಂಧಿಸಲಾಗಿದೆ ಎಂದು ಕಾರಟಗಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿದ್ರಾಮಯ್ಯ ಬಿ.ಎಂ ತಿಳಿಸಿದ್ದಾರೆ.

    ಗ್ರಾಮದಲ್ಲಿ ಮೂರು ಕೆಎಸ್‍ಆರ್‌ಪಿ ತಂಡ, ಎರಡು ಜಿಲ್ಲಾ ಮೀಸಲು ಪಡೆ ಮತ್ತು ವಿವಿಧ ಠಾಣೆಗಳ ಪೊಲೀಸರನ್ನು ನಿಯೋಜಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಫೈಟ್ – ಲಾಡ್ಜ್‌ನಲ್ಲಿ ತಂಗಿದ್ದ ನಾಲ್ವರು ಸದಸ್ಯರ ಕಿಡ್ನ್ಯಾಪ್

    ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಫೈಟ್ – ಲಾಡ್ಜ್‌ನಲ್ಲಿ ತಂಗಿದ್ದ ನಾಲ್ವರು ಸದಸ್ಯರ ಕಿಡ್ನ್ಯಾಪ್

    ಕಲಬುರಗಿ: ಚಿಂಚೋಳಿಯ ಐನೋಳ್ಳಿ ಗ್ರಾಮ ಪಂಚಾಯತಿಯ (Gram Panchayat) ನಾಲ್ವರು ಸದಸ್ಯರನ್ನು ಮಹಾರಾಷ್ಟ್ರದ ಪುಣೆಯ ಲಾಡ್ಜ್‌ನಿಂದ ಅಪಹರಿಸಿದ ಪ್ರಕರಣ ನಡೆದಿದೆ. ಅಪಹರಣದ ವೀಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಅವರ ಹುಡುಕಾಟ ನಡೆಸಲಾಗುತ್ತಿದೆ.

    18 ಸದಸ್ಯರನ್ನೊಳಗೊಂಡಿರುವ ಐನೊಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ (BJP) ಬೆಂಬಲಿತ 11 ಸದಸ್ಯರು ಕಳೆದ 15 ದಿನಗಳಿಂದ ಪ್ರವಾಸದಲ್ಲಿದ್ದರು. ಅದರಲ್ಲಿ 6 ಜನ ಸದಸ್ಯರು ಶುಕ್ರವಾರ ಪುಣೆಯ ಲಾಡ್ಜ್ ಒಂದರಲ್ಲಿ ತಂಗಿದ್ದರು. ರಾತ್ರಿ ವೇಳೆ ಹತ್ತಕ್ಕೂ ಹೆಚ್ಚು ಜನ ಲಾಡ್ಜ್‌ಗೆ ನುಗ್ಗಿ ಎಲ್ಲಾ ಸದಸ್ಯರನ್ನು ಅಪಹರಿಸಿದ್ದಾರೆ. ಬಳಿಕ ಶಶೇಂದ್ರ ಕುಮಾರ್ ಮತ್ತು ಶೇಖ್ ಭಕ್ತಿಯಾರ್ ಜಾಗೀರ್ದಾರ್ ಎಂಬವರನ್ನು ಪುಣೆಯ ಹೈವೇಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಬ್ಬರೇ ಸತ್ಯಹರಿಶ್ಚಂದ್ರರು.. ಒಬ್ರು ಹೆಚ್‍ಡಿಕೆ ಇನ್ನೊಬ್ರು ಬೊಮ್ಮಾಯಿ: ಹೆಚ್.ವಿಶ್ವನಾಥ್ ವ್ಯಂಗ್ಯ

    ಸಾಮಾನ್ಯ ಮಹಿಳೆ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರ ನಡುವೆ ಪೈಪೋಟಿ ನಡೆಯುತ್ತಿದೆ. ಗ್ರಾಮ ಪಂಚಾಯತಿ ಅಧ್ಯಕ್ಷರಾಗಲು 10 ಸದಸ್ಯರ ಬೆಂಬಲ ಬೇಕು. ಬಿಜೆಪಿ ಬೆಂಬಲಿತ ಒಟ್ಟು 11 ಸದಸ್ಯರು ಜೂನ್ 13 ರಂದು ಪ್ರವಾಸದಲ್ಲಿದ್ದರು. ಹೀಗಾಗಿ ಅಧ್ಯಕ್ಷ ಸ್ಥಾನ ಪಡೆಯಲು ಕೈ ನಾಯಕರು ಸದಸ್ಯರನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

    ಶಶೇಂದ್ರ ಕುಮಾರ್ ಹಾಗೂ ಶೇಖ್ ಭಕ್ತಿಯಾರ್ ಜಾಗೀರ್ದಾರ್ ಈ ಬಗ್ಗೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿ, ನಮ್ಮ ಬಳಿ ಇದ್ದ ಹಣ ಹಾಗೂ ಮೊಬೈಲ್ ಕಸಿದುಕೊಂಡಿದ್ದಾರೆ. ಅಲ್ಲದೇ ಅಪಹರಣಕಾರರು ಹಲ್ಲೆ ಮಾಡಿ ಪೊಲೀಸರು ನಮ್ಮವರೇ ಏನು ಮಾಡಲು ಸಾಧ್ಯವಾಗುವುದಿಲ್ಲ ಎಂದು ಬೆದರಿಸಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

    ಈ ಸಂಬಂಧ ಪುಣೆಯ ಚಿಕ್ಲಿ ಪೊಲೀಸ್ (Police) ಠಾಣೆಯಲ್ಲಿ ಐಪಿಸಿ ಸೆಕ್ಷನ್ 391 (ದರೋಡೆ), ಐಪಿಸಿ 356 (ಅಪಹರಣ) ಐಪಿಸಿ 506 (ಜೀವ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಡಿಜಿ-ಐಜಿಪಿಯಾಗಿ ಅಲೋಕ್‌ ಮೋಹನ್‌ ನೇಮಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು(ಬುಧವಾರ) 5ನೇ ದಿನಕ್ಕೆ ಕಾಲಿಟ್ಟಿದ್ದು, ಹೊಸದೊಂದು ಟ್ವಿಸ್ಟ್ ಸಿಕ್ಕಿದೆ.

    ಬೆಳಗಾವಿ ತಾಲೂಕಿನ ಬಡಸ ಗ್ರಾಮದ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮನೆಯನ್ನು ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳ್ಕರ್ ಹಾಗೂ ಎನ್.ಎಸ್.ಪಾಟೀಲ್ ಸೇರಿ ಅವರ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ. ಈ ಮಹತ್ವದ ದಾಖಲೆಗಳು ಉಡುಪಿ ಪೊಲೀಸರಿಗೆ ತನಿಖೆಯಲ್ಲಿ ಸಿಕ್ಕಿವೆ ಎನ್ನಲಾಗಿದೆ. ಇದನ್ನೂ ಓದಿ:  ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಕುರಿತಂತೆ ಉಡುಪಿ ಪೊಲೀಸರು ನಡೆಸುತ್ತಿರುವ ತನಿಖೆ ಇಂದು 5ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ಐದು ದಿನಗಳಿಂದ ಬೆಳಗಾವಿಯಲ್ಲಿ ಬೀಡುಬಿಟ್ಟಿರುವ ಉಡುಪಿ ಪೊಲೀಸರು ಸಂತೋಷ್ ಪತ್ನಿ ಜಯಶ್ರೀ, ಆತನ ಕುಟುಂಬಸ್ಥರು, ಪ್ರಸ್ತುತ ಪಿಡಿಒ ವಸಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ್ ನಾಯಿಕ್ ಅವರನ್ನು ತೀವ್ರ ವಿಚಾರಣೆ ನಡೆಸಿದ್ದರು.

    ಮಂಗಳವಾರ(ನಿನ್ನೆ) ಗ್ರಾಮ ಪಂಚಾಯತಿ ಅಧ್ಯಕ್ಷರನ್ನು ಸೇರಿದಂತೆ 12 ಜನ ತುಂಡು ಗುತ್ತಿಗೆದಾರನ್ನು ಉಡುಪಿ ಪೊಲೀಸರು ವಿಚಾರಣೆ ನಡೆಸಿದ್ದರು. ಈ ವೇಳೆ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಸಂತೋಷ್ ಮನೆಯನ್ನು ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಜಿಪಿಎ ಮಾಡಿಸಿಕೊಂಡಿದ್ರಾ? ಎನ್ನುವ ಮಾತುಗಳು ಕೇಳಿಬಂದಿವೆ.

    ಹಿಂಡಲಗಾ ಗ್ರಾಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್, ಉದ್ಯಮಿ ಹಾಗೂ ಗ್ರಾ.ಪಂ ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಮೃತ ಸಂತೋಷ್ ಪಾಟೀಲ್ ಮನೆಯನ್ನು ಜಿಪಿಎ ಮಾಡಿಸಿಕೊಂಡಿದ್ದಾರೆ ಎನ್ನುವ ಮಾಹಿತಿ ಉಡುಪಿ ಪೊಲೀಸರ ತನಿಖೆ ವೇಳೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ:  ಏಪ್ರಿಲ್ 28 ರಂದು ಇಸ್ರೇಲ್‍ನಲ್ಲಿ ಬಿಡುಗಡೆಯಾಗಲಿದೆ ‘ದಿ ಕಾಶ್ಮೀರ್ ಫೈಲ್ಸ್’

    ಈ ವೇಳೆ ಉಡುಪಿ ಪೊಲೀಸರಿಗೆ ಮಾಹಿತಿ ನೀಡಿರುವ ಗ್ರಾಮ ಪಂಚಾಯತಿ ಅಧ್ಯಕ್ಷ, ನಾಗೇಶ್ ಮನ್ನೋಳಕರ್ ಮನೆ ಜಿಪಿಎ ಮಾಡಿಸಿಕೊಂಡಿದ್ದಕ್ಕೂ ಕಾಮಗಾರಿ ವ್ಯವಹಾರಕ್ಕೂ ಸಂಬಂಧವಿಲ್ಲ. ಅದು ಬೇರೆ ವ್ಯವಹಾರ, ಇದು ಬೇರೆ ವ್ಯವಹಾರ ಇದೆ ಅಂತಾ ಹೇಳಿದ್ದಾರೆ. ಸಂತೋಷ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸಂಪೂರ್ಣ ತನಿಖೆ ನಂತರವಷ್ಟೇ ಸತ್ಯಾಸತ್ಯತೆ ಹೊರಬರಲಿದೆ.

  • ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ

    ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಜನ ಅಸ್ವಸ್ಥ

    ವಿಜಯನಗರ: ಕಲುಷಿತ ನೀರು ಕುಡಿದು 50 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರದಲ್ಲಿ ನಡೆದಿದೆ.

    ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಜೆ.ಜೆ.ಎಂ ಯೋಜನೆ ಅಡಿ ಪೈಪಲೈನ್ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಅಲ್ಲಲ್ಲಿ ಪೈಪ್‍ಗಳು ಒಡೆದಿವೆ. ಒಡೆದ ಪೈಪ್ ಮುಖಾಂತರ ಕುಡಿಯುವ ನೀರಿನಲ್ಲಿ ಚರಂಡಿ ನೀರು ಸರಬರಾಜು ಆಗಿದೆ. ಪರಿಣಾಮ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಗ್ರಾಮಸ್ಥರು ಸಂಪೂರ್ಣ ಅಸ್ವಸ್ಥರಾಗಿದ್ದಾರೆ. ಇದನ್ನೂ ಓದಿ:  ಮನೆಯ ಮೇಲ್ಛಾವಣಿ ಕುಸಿತ- ಅವಶೇಷಗಳಡಿಯಿಂದ ವೃದ್ಧೆಯ ರಕ್ಷಣೆ

    ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಜನರು ಆಕ್ರೋಶಗೊಂಡಿದ್ದಾರೆ. ಅದು ಅಲ್ಲದೇ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ.

  • ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

    ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

    ನೆಲಮಂಗಲ: ಅನಾದಿ ಕಾಲದಿಂದಲೂ ಓಡಾಡುತ್ತಿದ್ದ ರಸ್ತೆಗೆ ಅಡ್ಡಲಾಗಿ ಗ್ರಾಮ ಪಂಚಾಯತಿ ಸದಸ್ಯೆ ಪತಿ ಜೆಸಿಬಿಯಿಂದ ಕಂದಕ ತೋಡಿ ರಸ್ತೆ ಮುಚ್ಚಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಲಕ್ಕೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ತ್ಯಾಮಗೊಂಡ್ಲು ಹೋಬಳಿಯ ಕುಲುವನ ಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆಗೆ ಚುನಾವಣೆ ಹಿನ್ನೆಲೆ ಯಾರೊಬ್ಬರು ಮತ ನೀಡಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಪತಿರಾಯ ಶಿವಕುಮಾರ್ ಗ್ರಾಮದಲ್ಲಿ ಅಶಾಂತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಅವರ ಮೇಲೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡದೇ ಅಂಧ ದರ್ಬಾರ್ ನಡೆಸುತ್ತಿರುವ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ತನ್ನ ಜಮೀನಿನ ಮುಖಾಂತರ ಊರಿನ ಜನಗಳು ಕೆರೆಗೆ ಓಡಾಡುತ್ತಾರೆ ಎನ್ನುವ ಉದ್ದೇಶದಿಂದ ಮೊನ್ನೆಯಷ್ಟೇ ಗ್ರಾಮದ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಮಣ್ಣು ಸುರಿಸಿರುವ ಆರೋಪ ಈಗ ಕೇಳಿ ಬಂದಿದೆ. ಇದನ್ನೂ ಓದಿ: 7 ಕೋಟಿ ಮೊತ್ತದ ಅಡಿಕೆಯ ಜೊತೆ 7 ಲಾರಿ ಜಪ್ತಿ – 7 ಮಂದಿ ಅರೆಸ್ಟ್

    ಗ್ರಾಮ ಪಂಚಾಯತಿಗೆ ಭೇಟಿ ನೀಡಿದ ಸಿಇಒ ಶಿವಕುಮಾರ್ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಆದೇಶಿಸಿದ್ದರು. ಈ ಹಿನ್ನೆಲೆ ಕಾಂಕ್ರೀಟ್ ರಸ್ತೆಗೆ ಅಡ್ಡಲಾಗಿ ಹಾಕಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ. ಈಗ ಆತನ ಜಮೀನಿನ ದಾರಿಯಲ್ಲಿ ಸಾರ್ವಜನಿಕರು ಕೆರೆಗೆ ಓಡಾಡುತ್ತಾರೆ ಎಂದು ರಸ್ತೆಗೆ ಅಡ್ಡಲಾಗಿ ಕಂದಕ ತೆಗೆದು ಬೇಲಿ ಹಾಕಿದ್ದಾರೆ. ಇದನ್ನೂ ಓದಿ: ಯೋಗ ಇರೋರು ಮಾತ್ರ ಯೋಗ ಮಾಡುತ್ತಾರೆ: ಡಿಸಿ ಆರ್ ಲತಾ

    ಗ್ರಾಮದ ಹಿರಿಯರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50ಕ್ಕಿಂತಲೂ ಹೆಚ್ಚು ಕಂದಕ ತೋಡಿದ್ದ ಸ್ಥಳದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ನಮಗೆ ರಸ್ತೆ ಬೇಕು ಇಲ್ಲಿನ ಜನ ರೈತಾಪಿ ವರ್ಗದವಾರಗಿದ್ದು, ನಮಗೆ ಪ್ರತಿಯೊಂದಕ್ಕೂ ಕೆರೆಗೆ ಹೋಗಬೇಕಿದೆ. ಆದ್ದರಿಂದ ಸಂಬಂಧಪಟ್ಟವರು ನಮ್ಮ ಗ್ರಾಮಕ್ಕೆ ಬಂದು ಕೆರೆಗೆ ರಸ್ತೆ ಕಲ್ಪಿಸಿ ಎಂದು ಮನವಿ ಮಾಡಿದ್ದಾರೆ.

  • ಮನೆಗಳ ಬಿಲ್ ಆಗ್ತಿಲ್ಲ, ಸಮಸ್ಯೆ ಬಗೆಹರಿಸಿ ಅಂದಿದ್ದಕ್ಕೆ, ವಸತಿ ಸಚಿವ ಸೋಮಣ್ಣ ಗರಂ

    ಮನೆಗಳ ಬಿಲ್ ಆಗ್ತಿಲ್ಲ, ಸಮಸ್ಯೆ ಬಗೆಹರಿಸಿ ಅಂದಿದ್ದಕ್ಕೆ, ವಸತಿ ಸಚಿವ ಸೋಮಣ್ಣ ಗರಂ

    ಗದಗ: ಸಮಸ್ಯೆ ಹೇಳಿಕೊಂಡು ಫೋನ್ ಮಾಡಿದ ಜಿಲ್ಲೆಯ ಸವಡಿ ಗ್ರಾಮ ಪಂಚಾಯತಿ ಸದಸ್ಯರಿಗೆ ಸಚಿವ ವಿ.ಸೋಮಣ್ಣ ಖಾರವಾಗಿ ಮಾತನಾಡಿದ್ದಾರೆ. ಗ್ರಾಮ ಪಂಚಾಯತ್ ಮೇಂಬರ್ ಆದರೆ ನೀನೇನು ದೇವ್ರೆನಪ್ಪ ಅಂತಾ ಸಿಟ್ಟಿನಲ್ಲಿ ಉತ್ತರಿಸಿದ್ದಾರೆ.

    ಸವಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಯೋಜನೆಯಡಿ ನೂರಾರು ಮನೆಗಳು ನಿರ್ಮಾಣವಾಗುತ್ತಿವೆ. ಅವುಗಳಿಗೆ 3 ಹಂತದಲ್ಲಿ ಬಿಲ್ ಆಗಬೇಕು. ಮನೆಗಳು ಪೂರ್ಣ ಹಂತಕ್ಕೆ ಬಂದರೂ ಬಿಲ್ ಆಗಿರಲಿಲ್ಲ. ಈ ಬಗ್ಗೆ ಫಲಾನುಭವಿಗಳು ಗ್ರಾಮ ಪಂಚಾಯತ್ ಸದಸ್ಯರನ್ನು ಪದೇ ಪದೇ ಕೇಳುತ್ತಿದ್ದರು. ಗ್ರಾಮ ಪಂಚಾಯತ್ ಅಧಿಕಾರಿಗಳು ಈ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂಬ ಆರೋಪ ಸ್ಥಳೀಯರದ್ದಾಗಿದೆ. ಕೋವಿಡ್ ನೆಪದಲ್ಲಿ ಅಧಿಕಾರಿಗಳು ಇತರೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ಕೊಡುತ್ತಿಲ್ಲ. ಮನೆಗಳ ಬಿಲ್ ಬಗ್ಗೆ ಕೇಳಲು ಹೋದರೆ, ಸರ್ಕಾರದಿಂದ ಇನ್ನೂ ಹಣ ಬಂದಿಲ್ಲ ಎಂಬ ಹಾರಿಕೆ ಉತ್ತರ ನೀಡುತ್ತಿದ್ದಾರೆ.

    ಇದರಿಂದ ಗ್ರಾಮ ಪಂಚಾಯತಿ ಸದಸ್ಯ ಮೊಹ್ಮದ್ ರಫಿಕ್ ಕರ್ನಾಚಿ ಎಂಬವರು ಸಚಿವ ಸೋಮಣ್ಣ ಅವರಿಗೆ ಫೋನ್ ಮಾಡಿದ್ದಾರೆ. ಆರಂಭದಲ್ಲಿ ಚೆನ್ನಾಗಿಯೇ ಮಾತಾಡಿದ ಸಚಿವರು, ನಾನು ಗ್ರಾಮ ಪಂಚಾಯತಿ ಸದಸ್ಯ ಅಂತಾ ಮೊಹ್ಮದ್ ಹೇಳಿದ ಕೂಡಲೇ ಗರಂ ಆಗಿ, ಮೇಂಬರ್ ಆದರೆ ನೀನೇನು ದೇವ್ರಾ ಅಂತಾ ಗದರಿ, ಬಿಲ್ ಬರಲಿಲ್ಲ ಅಂದರೆ ಪಿಡಿಓ ಕೇಳುತ್ತಾರೆ. ನೀನಲ್ಲಾ, ಫೋನ್ ಪಿಡಿಓ ಕೈನಲ್ಲಿ ಕೊಡು ಅಂತಾ ಏಕವಚನದಲ್ಲಿಯೇ ಮಾತಾನಾಡಿದ್ದಾರೆ.

    ನಾವು ಯಾವುದನ್ನು ಪೆಂಡಿಂಗ್ ಇಟ್ಟುಕೊಂಡಿಲ್ಲ. ಎಲ್ಲಾ ಕೆಲಸ ಮಾಡುತ್ತಿದ್ದೇವೆ. ಪಿಡಿಓಗೆ ಫೋನ್ ಕೊಡು ಅಂದಿದ್ದಾರೆ. ಪಿಡಿಓ ಅವರು ಸರಿಯಾಗಿ ಬರುತ್ತಿಲ್ಲ ಅಂದ ಕೂಡಲೇ, ಅದೇನಿದೆ ರಿಪೋರ್ಟ್ ಹಾಕು ತನಿಖೆ ಮಾಡಿಸುತ್ತೇನೆ ಎಂದು ಗರಂ ಮಾತುಗಳನ್ನಾಡಿದರು. ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ. ಸಂಕಷ್ಟದಲ್ಲಿರುವ ಜನರ ಪರವಾಗಿ ನಿಂತ ಗ್ರಾಮ ಪಂಚಾಯತ್ ಸದಸ್ಯನಿಗೆ ಸಚಿವರು ಹೀಗೆ ಮಾತಾನಾಡಿದ್ದು ಎಷ್ಟು ಸರಿ ಎನ್ನುವ ಪ್ರಶ್ನೆ ಈಗ ಸಾರ್ವಜನಿಕರಲ್ಲಿ ಮೂಡಿದೆ. ಇದನ್ನೂ ಓದಿ: ಉರುಳಾದ ಜೋಕಾಲಿ – ಕ್ಷಣಾರ್ಧದಲ್ಲಿ ಹೋಯ್ತು ಬಾಲಕನ ಜೀವ

  • TDP, YSRCP ಕಾರ್ಯಕರ್ತರ ನಡುವೆ ಸಂಘರ್ಷ – 16 ಮಂದಿಗೆ ಗಂಭೀರ ಗಾಯ

    TDP, YSRCP ಕಾರ್ಯಕರ್ತರ ನಡುವೆ ಸಂಘರ್ಷ – 16 ಮಂದಿಗೆ ಗಂಭೀರ ಗಾಯ

    ಹೈದರಾಬಾದ್: ಶ್ರೀಕಾಕುಲಂನ ಮೆಟ್ಟವಲಸ ಗ್ರಾಮದಲ್ಲಿ ತೆಲಗು ದೇಶಂ ಪಕ್ಷ(ಟಿಡಿಪಿ) ಹಾಗೂ ಯುವಜನ ಶ್ರಮಿಕ ರೈತು ಕಾಂಗ್ರೆಸ್ ಪಕ್ಷದ(ವೈಎಸ್ಆರ್‌ಸಿಪಿ) ನಡುವೆ ಮಂಗಳವಾರ ಸಂಭವಿಸಿದ ಘರ್ಷಣೆಯಲ್ಲಿ 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಘಟನೆ ಕುರಿತಂತೆ ಮಾತನಾಡಿದ ಶ್ರೀಕಾಕುಲಂ ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಎಂ. ಅಹ್ಮದ್, ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ. ಹೀಗಾಗಿ ತೆಲಗು ದೇಶಂ ಪಕ್ಷ(ಟಿಡಿಪಿ) ಹಾಗೂ ಯುವಜನ ಶ್ರಮಿಕ ರೈತು ಕಾಂಗ್ರೆಸ್ ಪಕ್ಷದ(ವೈಎಸ್ಆರ್‌ಸಿಪಿ) ನಡುವೆ ಘರ್ಷಣೆ ನಡೆದಿದೆ ಹಾಗೂ ಘಟನೆಯಲ್ಲಿ ಸುಮಾರು 16 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ರಾಜಮ್ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

    ಇದೀಗ ಶ್ರೀಕಾಕುಲಂನ ಮೆಟ್ಟವಲಸ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸರು ಆಯೋಜಿಸಲಾಗಿದೆ ಎಂದರು.

    ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಟಿಡಿಪಿ ಬೆಂಬಲಿತ ಅಭ್ಯರ್ಥಿ ಜಯ ಸಾಧಿಸಿದರು. ಇದನ್ನು ಸಹಿಸಲಾಗದ ವೈಎಸ್ಆರ್‌ಸಿಪಿ ಪಕ್ಷದ ಕೆಲ ಕಾರ್ಯಕರ್ತರು ತಮ್ಮ ಸಾಮಾಜಿಕ ಜಾಲಾತಾಣದಲ್ಲಿ ಕೆಲವು ಪೋಸ್ಟ್ ಗಳನ್ನು ಮಾಡಿದ್ದಾರೆ. ವೈಎಸ್ಆರ್‌ಸಿಪಿ ಪಕ್ಷ ಅವಹೇಳನಕಾರಿ ಪೋಸ್ಟ್ ಮಾಡಿದೆ ಎಂದು ಟಿಡಿಪಿ ಪಕ್ಷದವರು ಆರೋಪಿಸಿದರು. ಈ ಹಿನ್ನೆಲೆ ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೊನೆಗೆ ಕೋಪ ವಿಕೋಪಕ್ಕೆ ತಿರುಗಿ ಕೈ-ಕೈ ಮಿಲಾಯಿಸಿದ್ದಾರೆ.

  • ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕಿದ್ದ ಅಭ್ಯರ್ಥಿಯ ಅಪಹರಣ

    ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕಿದ್ದ ಅಭ್ಯರ್ಥಿಯ ಅಪಹರಣ

    ಹಾಸನ: ಹಾಸನ ಜಿಲ್ಲೆಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದ್ದು, ಚುನಾವಣೆ ದಿನಾಂಕವೂ ನಿಗದಿಯಾಗಿದೆ. ಅಧ್ಯಕ್ಷಗಾದಿ ಹಿಡಿಯಲು ರಾಜಕೀಯ ಪಕ್ಷಗಳು ತಮ್ಮ ಬೆಂಬಲಿತ ಅಭ್ಯರ್ಥಿಗಳಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಈ ಹೊತ್ತಿನಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿಯನ್ನು ಅಪಹರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

    ಇಂದು ಹಾಸನ ತಾಲೂಕಿನ ಮಡೆನೂರು ಗ್ರಾಮಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಿತ್ತು. ಬಿಸಿಎಂ(ಎ)ಯಿಂದ ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳಿದ್ದರು. ಕಾರೇಕೆರೆಯಿಂದ ಜಯಗಳಿಸಿದ್ದ ಭಾಗ್ಯಮ್ಮ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿದ್ದರು.

    ಆದರೆ ಗ್ರಾಮ ಪಂಚಾಯತಿ ಚುನಾವಣೆ ನಂತರ ಬೆಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ನಮ್ಮ ಅಮ್ಮನನ್ನು ಜ.28 ರಂದು ಸ್ವಗ್ರಾಮ ಕಾರೇಕೆರೆಗೆ ಆಗಮಿಸುತ್ತಿದ್ದಾಗ ಅಪಹರಿಸಲಾಗಿದೆ. ಲೋಕೇಶ್ ಎಂಬವರನ್ನು ಅಧ್ಯಕ್ಷರನ್ನಾಗಿ ಮಾಡಲು ಮಡೆನೂರು, ಕಾರೇಕೆರೆ ಗ್ರಾಮದ ವೆಂಕಟೇಶ್, ಹಿರಿಯಣ್ಣಗೌಡ, ಸುರೇಂದ್ರ ಎಂಬವರು ನಮ್ಮ ತಾಯಿಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಭಾಗ್ಯಮ್ಮ ಅವರ ಮಗ ಆರೋಪಿಸಿದ್ದಾರೆ.

    ಈ ಕುರಿತಂತೆ ಶಾಂತಿಗ್ರಾಮ ಪೊಲೀಸ್ ಠಾಣೆಗೆ ಭಾಗ್ಯಮ್ಮ ಅವರಿಗೆ ಆರೋಗ್ಯ ಸಮಸ್ಯೆಯಿದ್ದು ನನ್ನ ತಾಯಿಯನ್ನು ಆದಷ್ಟು ಬೇಗ ಹುಡುಕಿಕೊಡುವಂತೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಲಾಕ್‍ಡೌನ್ ಉಲ್ಲಂಘಿಸಿದ ಸುಂಟಿಕೊಪ್ಪದ ಪ್ಯಾಂಡಿಂಗ್ಟನ್ ರೆಸಾರ್ಟ್‍ಗೆ ಬೀಗಮುದ್ರೆ

    ಲಾಕ್‍ಡೌನ್ ಉಲ್ಲಂಘಿಸಿದ ಸುಂಟಿಕೊಪ್ಪದ ಪ್ಯಾಂಡಿಂಗ್ಟನ್ ರೆಸಾರ್ಟ್‍ಗೆ ಬೀಗಮುದ್ರೆ

    ಮಡಿಕೇರಿ: ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ದೇಶವೇ ಲಾಕ್‍ಡೌನ್ ಆಗಿದ್ದರೂ ಈ ರೆಸಾರ್ಟ್ ಗೆ ಮಾತ್ರ ಧನದಾಹ. ಆದ್ದರಿಂದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪದ ಸಮೀಪದ ತೊಂಡೂರಿನಲ್ಲಿರುವ ಪ್ಯಾಡಿಂಗ್ಟನ್ ರೆಸಾರ್ಟ್‍ಗೆ ಬೀಗಮುದ್ರೆ ಹಾಕಲಾಗಿದೆ.

    ಲಾಕ್‍ಡೌನ್ ಮಾಡಿ ಜನ ಸಾಮಾನ್ಯರು ಅಗತ್ಯ ವಸ್ತುಗಳಕೊಳ್ಳಲು ಪರದಾಡುತ್ತಿದ್ದಾರೆ. ಆದರೆ ಇತ್ತ ಶ್ರೀಮಂತರ ಮತ್ತು ಅಧಿಕಾರಸ್ಥರ ಮಕ್ಕಳು ಮಾತ್ರ ಯಾವುದೆ ಅಡ್ಡಿ ಆತಂಕವಿಲ್ಲದೆ ಕೊಡಗಿನ ಪ್ಯಾಡಿಂಗ್ಟನ್ ರೆಸಾರ್ಟ್ ಗೆ ಕಳೆದ ನಾಲ್ಕು ದಿನಗಳ ಹಿಂದೆ ಬಂದು ಅಂದಿನಿಂದಲೂ ಮೋಜು ಮಸ್ತಿ ಮಾಡುತ್ತಿದ್ದರು. ಅಲ್ಲದೆ ಪ್ರವಾಸಿ ತಾಣಗಳಿಗೆ ತೆರಳಿ ಎಂಜಾಯ್ ಮಾಡುತ್ತಿದ್ದರು.

    ವಿಷಯ ತಿಳಿದ ಸುಂಟಿಕೊಪ್ಪ ಪೊಲೀಸ್ ನಿನ್ನೆ ಪ್ರಕರಣ ದಾಖಲಿಸಿದ್ದರು. ಇಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರ ನಿರ್ದೇಶನದಂತೆ ಸುಂಟಿಕೊಪ್ಪ ಪಂಚಾಯಿತಿ ಪಿಡಿಒ ರವೀಶ್ ಮತ್ತು ಸೋಮವಾರಪೇಟೆ ತಹಶೀಲ್ದಾರ್ ಗೋವಿಂದ್ ರಾಜ್ ರೆಸಾರ್ಟ್‍ಗೆ ಬೀಗಮುದ್ರೆ ಮಾಡಿದ್ದಾರೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಅಪ್ಪಚ್ಚು ರಂಜನ್ ಸೂಚಿಸಿದ್ದಾರೆ.