ಬೆಳಗಾವಿ: ಗ್ರಾಮ ಪಂಚಾಯತ್‌ನಲ್ಲಿ ಭ್ರಷ್ಟಾಚಾರ (Corruption) ಆರೋಪ ಹಿನ್ನೆಲೆಯಲ್ಲಿ ಸದಸ್ಯರು ಪಂಚಾಯತ್ (Village Panchayat) ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮ ಪಂ. ಪಿಡಿಓ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ದ 19 ಸದಸ್ಯರು ಪಂಚಾಯತ್ ಸದಸ್ಯರು ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಕಾಮಗಾರಿ ಮಾಡದೇ ಬಿಲ್ ತೆಗೆದು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ
ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮುಂದಾದರು. ಒಟ್ಟು 30 ಸದಸ್ಯ ಬಲ ಹೊಂದಿರುವ ಪಂಚಾಯತಿಗೆ ಕೆಲ ಸದಸ್ಯರು ಅವಿಶ್ವಾಸ ನಿರ್ಣಯಕ್ಕೆ ಮುಂದಾದ ಹಿನ್ನೆಲೆಯಲ್ಲಿ ಚಿಕ್ಕೋಡಿ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಆದರೆ ಗ್ರಾಮದ 19 ಸದಸ್ಯರು ಮಾತ್ರ ಸಭೆಗೆ ಆಗಮಿಸಿದ್ದರು. ಅವಿಶ್ವಾಸಕ್ಕೆ ಕನಿಷ್ಠ 20 ಸದಸ್ಯರು ಬೇಕಾದ ಹಿನ್ನಲೆ ಓರ್ವ ಸದಸ್ಯ ಸಂಖ್ಯೆ ಕಡಿಮೆಯಾಗಿ ಅವಿಶ್ವಾಸ ನಿರ್ಣಯ ವಿಫಲವಾಯಿತು.
ಚಿಕ್ಕಮಗಳೂರು: ಭಾರೀ ತೆರಿಗೆ (Tax) ಏರಿಕೆ ಮಾಡಿರುವುದನ್ನು ಖಂಡಿಸಿ ಇಡೀ ಗ್ರಾಮ ಪಂಚಾಯತ್ (Village Panchayat) ವ್ಯಾಪ್ತಿಯ ಅಂಗಡಿಗಳನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮದಲ್ಲಿ ನಡೆದಿದೆ.
ಇಷ್ಟು ವರ್ಷಗಳಿಂದ ಇಲ್ಲದ ತೆರಿಗೆಯನ್ನು ಈಗ ಏಕಾಏಕಿ ತೆರಿಗೆ ಏರಿಕೆ ಮಾಡಿರುವುದನ್ನು ಖಂಡಿಸಿ ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಜಯಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
2022ರಲ್ಲಿ ಬಿಜೆಪಿ ಸರ್ಕಾರದ ಅವಧಿಯ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಇದೀಗ ಕಾಂಗ್ರೆಸ್ ಸರ್ಕಾರ ಗ್ರಾಮ ಪಂಚಾಯತ್‌ಗಳಿಗೆ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಜಯಪುರ ಗ್ರಾಮ ಪಂಚಾಯತ್ ಅಧಿಕಾರಿಗಳು ದಿಢೀರ್ ಎಂದು ತೆರಿಗೆ ಏರಿಸಿರುವುದರಿಂದ ಸುತ್ತಮುತ್ತಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಹಾಗೂ ವರ್ತಕರು ಸಿಟ್ಟಿಗೆದ್ದಿದಾರೆ. ಇದನ್ನೂ ಓದಿ: ಮದ್ಯ ಪ್ರಿಯರಿಗೆ ಶಾಕ್ – ರಾಜ್ಯದಲ್ಲಿ ಮತ್ತೆ ಬಿಯರ್ ದರ ಏರಿಕೆ
ಎಷ್ಟು ಏರಿಕೆ?
ಕೃಷಿ ತೆರಿಗೆ ಸೇರಿದಂತೆ ಬಂಡವಾಳ ಆಧಾರಿತ ಕಟ್ಟಡಗಳ ಮೇಲೆ ಅಧಿಕವಾಗಿ ಸುಮಾರು ಏಳು ಪಟ್ಟು ಪ್ರಮಾಣದಲ್ಲಿ ತೆರಿಗೆ ಹೆಚ್ಚಾಗಿದ್ದು 2,500 ರೂ. ತೆರಿಗೆ ಇದ್ದ ವರ್ತಕರ ಕಟ್ಟಡಗಳಿಗೆ 14,000 ರೂ. ಹಾಗೂ 14,000 ರೂ. ಇದ್ದ ಕಟ್ಟಡಗಳಿಗೆ 40,000 ರೂ. ನಷ್ಟು ದಿಢೀರ್ ತೆರಿಗೆ ಏರಿಸಿರುವುದು ವರ್ತಕರು ಹಾಗೂ ಇನ್ನಿತರ ವ್ಯಾಪಾರಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಕೂಡಲೇ ಹೊಸ ತೆರಿಗೆ ನೀತಿಯನ್ನು ರದ್ದುಪಡಿಸಬೇಕೆಂದು ಹಳ್ಳಿಗರು ಪಟ್ಟು ಹಿಡಿದಿದ್ದಾರೆ. ಗ್ರಾಮ ಪಂಚಾಯತ್ ಕೂಡಲೇ ನೂತನ ತೆರಿಗೆ ನೀತಿಯನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರವಾದ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಹಾವೇರಿ: ಪರಿಶಿಷ್ಟ ಜಾತಿ ಪ್ರಮಾಣಪತ್ರ (Caste Certificate) ಪಡೆಯಲು ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿದ ಶಿಗ್ಗಾಂವಿ (Shiggavi) ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಕೋಂ.ಮಾರುತಿ ಕಬ್ಬೇರ ಎಂಬಾಕೆಗೆ 7 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 19,000 ರೂ. ದಂಡ (Penalty) ವಿಧಿಸಿ ಹಾವೇರಿಯ (Haveri) ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀ ನಾರಾಯಣ ತೀರ್ಪು ನೀಡಿದ್ದಾರೆ.
ಶಿಗ್ಗಾಂವಿ ತಾಲೂಕು ವನಹಳ್ಳಿ ಗ್ರಾಮದ ಲಕ್ಷ್ಮಿ ಹಿಂದೂ ಗಂಗಾಮತಕ್ಕೆ (ಪ. ವರ್ಗ-01) ಸೇರಿದ್ದರೂ ಸಹ, ಸುಳ್ಳು ವ್ಯಾಸಂಗ ಪ್ರಮಾಣಪತ್ರ ಹಾಗೂ ಸುಳ್ಳು ಅಫಿಡವಿಟ್ ಘೋಷಣಾ ಪತ್ರ ಮತ್ತು ಇತರೆ ದಾಖಲಾತಿಗಳನ್ನು ಸೃಷ್ಟಿಸಿ ಜೂನ್ 04, 2015ರಂದು ಶಿಗ್ಗಾಂವಿ ತಹಶೀಲ್ದಾರ್ ಕಚೇರಿಯಲ್ಲಿ ಸಲ್ಲಿಸಿದ್ದಾರೆ. ಹಿಂದೂ ಗಂಟಿಚೋರ್ಸ್ ಪರಿಶಿಷ್ಠ ಜಾತಿಯ ಪ್ರಮಾಣಪತ್ರ ಪಡೆದು ಹನುಮರಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಸ್ಥಾನಕ್ಕೆ ಪರಿಶಿಷ್ಠ ಜಾತಿ ಮಹಿಳೆಗೆ ಮೀಸಲಿದ್ದ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. ನಂತರ ಎಸ್‌ಸಿ ಸ್ಥಾನಕ್ಕೆ ಮೀಸಲಾಗಿದ್ದ ಗ್ರಾ.ಪಂ (Grama Panchayat) ಅಧ್ಯಕ್ಷೆಯಾಗಿಯೂ ಆಯ್ಕೆಯಾಗಿದ್ದರು. ಇದನ್ನೂ ಓದಿ: ಇನ್ಮುಂದೆ ನೂತನ ಇಂದಿರಾ ಕ್ಯಾಂಟೀನ್ ಊಟದ ದರ 60 ರೂ.!
ಸುಳ್ಳು ಜಾತಿಪ್ರಮಾಣಪತ್ರ ಪಡೆದು ಸರ್ಕಾರಕ್ಕೆ ಮತ್ತು ನೈಜ ಪರಿಶಿಷ್ಠ ಜಾತಿಯ ಅಭ್ಯರ್ಥಿಗೆ ಮೋಸಮಾಡಿದ ಕುರಿತಂತೆ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ತನಿಖಾಧಿಕಾರಿ ದಾವಣಗೆರೆ ಡಿಸಿಆರ್‌ಒ ಪೊಲೀಸ್ ಇನ್ಸ್ಪೆಕ್ಟರ್ ಟಿಜಿ ಶ್ರೀಧರ ಶಾಸ್ತ್ರಿ ಅವರು ಪ್ರಕರಣದ ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ, 3.25 ಲಕ್ಷ ರೂ. ದಂಡ
ಲಕ್ಷ್ಮಿ ಮೇಲೆ ಕಲಂ:198, 420, 465, 468, 471 ಭಾ.ದಂ.ಸಂ. ಮತ್ತು 3(1)ಕ್ಯೂ ಎಸ್‌ಸಿ/ಎಸ್‌ಟಿ (ಪಿಎ) ತಿದ್ದುಪಡಿ ಕಾಯ್ದೆ 2015ರ ಅಡಿಯಲ್ಲಿ ಆಪಾದನೆಗಳು ರುಜುವಾತದ ಹಿನ್ನೆಲೆಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಸರೋಜಾ ಜಿ.ಕೂಲಗಿಮಠ ಅವರು ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ
ರಾಯಚೂರು: ಸಿಂಧನೂರು (Sindhanur) ತಾಲೂಕಿನ ಆರ್‌ಹೆಚ್ ಕ್ಯಾಂಪ್-1ರಲ್ಲಿ ಮುಸ್ಲಿಂ ಸಮುದಾಯದ (Muslim Community) ಸದಸ್ಯ ಅಧ್ಯಕ್ಷನಾಗಿ ಆಯ್ಕೆಯಾಗಿರುವ ಹಿನ್ನೆಲೆ ಸಾಮಾನ್ಯ ವರ್ಗದ 19 ಜನ ಸದಸ್ಯರು ಸಾಮೂಹಿಕ ರಾಜೀನಾಮೆ (Mass Resignation) ನೀಡಿದ್ದಾರೆ.
ಸಾಮಾನ್ಯ ವರ್ಗಕ್ಕೆ ಸಿಕ್ಕ ಮೀಸಲಾತಿ ಅಲ್ಪಸಂಖ್ಯಾತ ಸದಸ್ಯನ ಪಾಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಗ್ರಾಮ ಪಂಚಾಯತ್‌ನ (Grama Panchayat) 19 ಜನ ಸದಸ್ಯರು ರಾಜೀನಾಮೆ ನೀಡಿದ್ದಾರೆ. ಒಟ್ಟು 38 ಸದಸ್ಯ ಸ್ಥಾನ ಹೊಂದಿರುವ ಆರ್‌ಹೆಚ್ ಕ್ಯಾಂಪ್-1 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಂಗ್ಲಾ ವಲಸಿಗರು ವಾಸಿಸುವ ಒಟ್ಟು 6 ಆರ್‌ಹೆಚ್ ಕ್ಯಾಂಪ್‌ಗಳನ್ನು ಒಳಗೊಂಡಿವೆ. 38 ಸ್ಥಾನಗಳಲ್ಲಿ 30 ಜನ ಸಾಮಾನ್ಯ ವರ್ಗ, 7 ಎಸ್ಸಿಎಸ್ಟಿ ಹಾಗೂ ಹಿಂದುಳಿದವರ್ಗ ಮತ್ತು ಒಬ್ಬರು ಅಲ್ಪಸಂಖ್ಯಾತ ಸದಸ್ಯರಿದ್ದಾರೆ. ಇದನ್ನೂ ಓದಿ: ಮೋದಿ ಮತ್ತೆ ಪ್ರಧಾನಿಯಾಗಲಿ: ಅಮರನಾಥ ಯಾತ್ರೆ ಮಾಡಿ ಶೋಭಾ ಕರಂದ್ಲಾಜೆ ವಿಶೇಷ ಪೂಜೆ
ಹೀಗಾಗಿ 15 ವರ್ಷಗಳ ಬಳಿಕ ಸಾಮಾನ್ಯ ವರ್ಗಕ್ಕೆ ಸಿಕ್ಕ ಮೀಸಲಾತಿ ಕೈತಪ್ಪಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 3 ರಂದು ನಡೆದ ಅಧ್ಯಕ್ಷ ಸ್ಥಾನ ಚುನಾವಣೆಯಲ್ಲಿ ರಾಜಕೀಯ ಒತ್ತಡಕ್ಕೆ ಕೆಲವರು ಮನಸ್ಸಿಲ್ಲದೆ ಮತ ಹಾಕಿದ್ದಾರೆ ಎಂದು ಆರೋಪಿಸಿರುವ ಸದಸ್ಯರು ಅಧ್ಯಕ್ಷ ಸ್ಥಾನದ ಆಯ್ಕೆ ರದ್ದುಗೊಳಿಸಿ ಪುನರ್ ಆಯ್ಕೆ ಮಾಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕಳಪೆ ಊಟ ಕೊಟ್ಟರೆ ವಾರ್ಡನ್‍ಗೆ ತಿನ್ನಿಸಿ, ಹೊಡೆಯಿರಿ – ಶಾಸಕರ ಹೇಳಿಕೆ ವೈರಲ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಈ ಬಾರಿ ಮಂಡಿಸಿದ ರಾಜ್ಯ ಬಜೆಟ್ (Karnataka Budget 2023) ನಲ್ಲಿ ಪ್ರತಿ ಗ್ರಾಮ ಪಂಚಾಯತ್‍ಗೆ 22 ರಿಂದ 60 ಲಕ್ಷ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ವಿಕೇಂದ್ರೀಕೃತ ಆಡಳಿತ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಮತ್ತು ಜನರಿಗೆ ಗ್ರಾಮ ಪಂಚಾಯಿತಿಗಳ ಮುಖಾಂತರ ಸ್ಥಳೀಯವಾಗಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಅವಕಾಶ ಮಾಡಲಾಗುವುದು. ಪ್ರಸ್ತುತ ಗ್ರಾಮ ಪಂಚಾಯಿತಿಗಳಿಗೆ, ಜನಸಂಖ್ಯೆ ಆಧರಿಸಿ 12 ಲಕ್ಷ ರೂ. ಗಳಿಂದ 35 ಲಕ್ಷ ರೂ. ಗಳವರೆಗೆ ರಾಜ್ಯ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ.
2023-24ನೇ ಸಾಲಿನಲ್ಲಿ ಪ್ರತಿ ಗ್ರಾಮ ಪಂಚಾಯಿತಿ (Grama Panchayat) ಗೆ 22 ರಿಂದ 60 ಲಕ್ಷ ರೂ. ಗಳಷ್ಟು ಅನುದಾನ ಲಭ್ಯಪಡಿಸಲು 780 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ಒದಗಿಸಲಾಗುವುದು. ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ಸರ್ಕಾರವು ಹೆಚ್ಚಿನ ಮಹತ್ವವನ್ನು ನೀಡಿದೆ. ಪ್ರಸಕ್ತ ಸಾಲಿನಲ್ಲಿ 2,070 ಕೋಟಿ ರೂ. ಗಳ ವೆಚ್ಚದಲ್ಲಿ 4,504 ಕಿ.ಮೀ. ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ: Karnataka Budget 2023: ರೈತರಿಗೆ ಬಂಪರ್ ಗಿಫ್ಟ್ – 5 ಲಕ್ಷದವರೆಗೆ ಬಡ್ಡಿ ರಹಿತ ಸಾಲ
ಗ್ರಾಮೀಣ ಭಾಗದ ರಸ್ತೆಗಳ ಮತ್ತು ಕೃಷಿ ಭೂಮಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗಾಗಿ, ನರೇಗಾ ಜೊತೆಗೆ ಸಂಯೋಜಿಸಿ ಪ್ರತಿ ವಿಧಾನ ಸಭಾ ಕ್ಷೇತ್ರಕ್ಕೆ 25 ಕಿ.ಮೀ. ನಂತೆ ಒಟ್ಟಾರೆಯಾಗಿ 5,000 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲು 300 ಕೋಟಿ ರೂ. ವೆಚ್ಚ ಮಾಡಲಾಗುವುದು.
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ದಸರಾ (Dasara) ಹಬ್ಬಕ್ಕೆ, ಬಟ್ಟೆ ಕೊಟ್ಟಿಲ್ಲ, ಬೋನಸ್ (Bonus) ನೀಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆವತಿ ಗ್ರಾಮ ಪಂಚಾಯತ್ (Gram Panchayat) ನೌಕರ (Employee) ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ಆವತಿ ಗ್ರಾಮ ಪಂಚಾಯತ್ ಕಟ್ಟಡಕ್ಕೆ ಚಪ್ಪಲಿ ಹಾರ ಹಾಕುವ ಮೂಲಕ ಆಕ್ರೋಶವನ್ನು ಹೊರಹಾಕಿರುವ ಸ್ವಚ್ಛತಾ ಕೆಲಸಗಾರ ಕೃಷ್ಣಪ್ಪ ವಿರುದ್ಧ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿದ್ದಾರೆ. ಪಂಚಾಯತ್‍ಗೆ ಭೇಟಿ ನೀಡಿದ ದೇವನಹಳ್ಳಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುನಿಲ್ ಕುಮಾರ್ ಸ್ವಚ್ಛತಾಗಾರರ ಸಭೆ ಕರೆದು ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಮಗಳು ಅನ್ಯ ಜಾತಿ ಯುವಕನ ಜೊತೆ ಪರಾರಿ – ತಂದೆ, ತಾಯಿ, ತಮ್ಮ ಆತ್ಮಹತ್ಯೆ
ಈ ವೇಳೆ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಪಿಡಿಒ ಶಿವರಾಜ್ ಆವತಿ ಗ್ರಾಮ ಪಂಚಾಯತ್‍ಗೆ ಬಂದಾಗಿನಿಂದ ಪಂಚಾಯತ್‍ನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಚುನಾಯಿತ ಸದಸ್ಯರ ಗಮನಕ್ಕೆ ಬಾರದೆ ಸಭೆಗಳನ್ನು ಕರೆದು ಚುನಾಯಿತ ಸದಸ್ಯರಿಗೆ ಗೊಂದಲ ಸೃಷ್ಟಿಸುವಂತಹ ಕೆಲಸಗಳು ನಡೆಯುತ್ತಿವೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಗದ್ದೆಯಲ್ಲಿ ಅನುಮಾನಾಸ್ಪದವಾಗಿ ಯುವತಿ ಶವ ಪತ್ತೆ- ಇದು ರೇಪ್ & ಮರ್ಡರ್ ಅಂತ ಕುಟುಂಬ ಆರೋಪ
Live Tv
[brid partner=56869869 player=32851 video=960834 autoplay=true]
ಚಿಕ್ಕಬಳ್ಳಾಪುರ: ಸರ್ಕಾರ ವಿವಿಧ ಯೋಜನೆಗಳ ಲಕ್ಷಾಂತರ ರೂ. ಹಣ ಗ್ರಾಪಂ ಅಧ್ಯಕ್ಷೆಯ ಪತಿ ಖಾತೆಗೆ ಸಂದಾಯವಾಗುತ್ತಿದೆ ಎಂದು ಆರೋಪಿಸಿ ಗ್ರಾಪಂಗೆ ಬೀಗ ಹಾಕಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಗೊರ್ತಪಲ್ಲಿ ಗ್ರಾಮ ಪಂಚಾಯತಿ ಕಚೇರಿ ಎದುರು ನಡೆದಿದೆ.
ಗ್ರಾಮಗಳ ಅಭಿವೃದ್ಧಿ ಕಾರ್ಯಗಳಿಗೆ ಎಂದು ಸರ್ಕಾರ ಗ್ರಾಪಂಗಳಿಗೆ ಕೋಟಿ ಕೋಟಿ ಹಣ ಕೊಟ್ಟರೆ, ಗ್ರಾಪಂ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಸೇರಿ ಕಾಮಗಾರಿಗಳನ್ನೇ ಮಾಡದೆ ಲಕ್ಷಾಂತರ ರೂ. ಹಣವನ್ನು ಲಪಟಾಯಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಇದಕ್ಕೆ ಪೂರಕ ಎನ್ನುವಂತೆ ಗ್ರಾಪಂ ಅಧ್ಯಕ್ಷೆಯ ಪತಿಯ ಖಾತೆಗೆ ಲಕ್ಷಾಂತರ ರೂ. ಹಣ ಸಂದಾಯವಾಗಿರೋ ದಾಖಲೆ ಸಿಕ್ಕಿದ್ದು ಅನುಮಾನ ಮೂಡಿಸಿದೆ.
ಬರದನಾಡು ಗಡಿ ನಾಡು ಅಂತ್ಯಂತ ಹಿಂದುಳಿದ ತಾಲೂಕು ಎನ್ನುವ ಹಣೆಪಟ್ಟಿ ಕಟ್ಟಿಕೊಂಡಿರುವ ಬಾಗೇಪಲ್ಲಿ ತಾಲೂಕಿನ ಈ ಗೊರ್ತಪಲ್ಲಿ ಗ್ರಾಮ ಪಂಚಾಯತಿಯಲ್ಲಿ 15ನೇ ಹಣಕಾಸು ಯೋಜನೆಯಲ್ಲಿ 65 ಲಕ್ಷ ರೂ. ಹಣವನ್ನು ಲೂಟಿ ಮಾಡಲಾಗಿದೆ ಎಂದು ಆರೋಪ ಕೇಳಿ ಬರುತ್ತಿದೆ. ಇದನ್ನೂ ಓದಿ:ಅಸ್ಸಾಂನಲ್ಲಿರುವ ಶಿವಸೇನೆ ರೆಬಲ್ ಶಾಸಕರನ್ನು ಆತಿಥ್ಯಕ್ಕೆ ಕರೆದ ಮಮತಾ ಬ್ಯಾನರ್ಜಿ
ಗ್ರಾಪಂ ಪಿಡಿಓ ವೆಂಕಟರಮಣಪ್ಪ ಹಾಗೂ ಗ್ರಾಪಂ ಅಧ್ಯಕ್ಷೆ ನಿರ್ಮಲಬಾಯಿ ಪತಿ ಶ್ರೀನಿವಾಸ್ ನಾಯಕ್ ಸೇರಿ ಲಕ್ಷಾಂತರ ರೂ. ಹಣ ದೋಚಿದ್ದಾರೆ. ಹೀಗಾಗಿ ಕೆಲ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತನಿಖೆಗೆ ಆಗ್ರಹಿಸಿದರು.
ಗ್ರಾಮಸ್ಥರ ಆರೋಪಕ್ಕೆ ಪೂರಕವಾಗಿ ಗ್ರಾಪಂ ಅಧ್ಯಕ್ಷೆಯ ಪತಿ ಶ್ರೀನಿವಾಸ್ ನಾಯಕ್ ಏಜೆನ್ಸಿ ಎಂಬ ಖಾತೆಗೆ 20 ಲಕ್ಷಕ್ಕೂ ಅಧಿಕ ಹಣ, ಅಂಬಿಕಾ ಎಲೆಕ್ಟ್ರಿಕಲ್ಸ್ ಅಂಡ್ ಹಾರ್ಡ್‌ವೇರ್ ಎಜೆನ್ಸಿಯ ಖಾತೆಗೂ ಲಕ್ಷಾಂತರ ರೂ. ಹಣ ಸಂದಾಯವಾಗಿದೆ. ವಿಶೇಷ ಎಂದರೆ ಒಂದೇ ದಿನ 20ಕ್ಕೂ ಹೆಚ್ಚು ಬಾರಿ ಈ ಖಾತೆಗಳಿಗೆ ಲಕ್ಷಾಂತರ ರೂ. ಹಣ ಸಂದಾಯವಾಗಿದೆ. ಇದನ್ನೂ ಓದಿ: ಉತ್ತರ ಕರ್ನಾಟಕ ರಾಜ್ಯ ನಿರ್ಮಾಣ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಬೊಮ್ಮಾಯಿ
65 ಲಕ್ಷದಲ್ಲಿ ಬಹುತೇಕ ಹಣ ಶ್ರೀನಿವಾಸ್ ನಾಯಕ್ ಏಜೆನ್ಸಿ ಹಾಗೂ ಅಂಬಿಕಾ ಎಲೆಕ್ಟ್ರಿಕಲ್ಸ್ ಅಂಡ್ ಹಾಡ್ರ್ವೇರ್ ಖಾತೆಗಳಿಗೆ ಸಂದಾಯವಾಗಿದೆ. ಇನ್ನೂ ಗ್ರಾಮಸ್ಥರ ಪ್ರತಿಭಟನೆ ಮಾಹಿತಿ ತಿಳಿದು ಪಂಚಾಯತಿಗೆ ಭೇಟಿ ನೀಡಿದ ಜಿಲ್ಲಾ ಪಂಚಾಯತಿ ಯೋಜನಾ ಅಧಿಕಾರಿ ಧನುರೇಖಾ ತನಿಖೆ ಕೈಗೊಂಡಿದ್ದಾರೆ. ತನಿಖೆಯಲ್ಲಿ ಭ್ರಷ್ಟ ಅಧಿಕಾರಿಗಳ ಮುಖವಾಡ ಕಳಚಿ ಬೀಳುತ್ತಾ ಕಾದು ನೋಡಬೇಕಿದೆ.
ಶಿವಮೊಗ್ಗ: ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಗ್ರಾಮ ಪಂಚಾಯತ್ ಮಹಿಳಾ ಸದಸ್ಯೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಣಬಘಟ್ಟದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸದಸ್ಯೆಯನ್ನು ಕೌಸರ್ ಭಾನು(50) ಎಂದು ಗುರುತಿಸಲಾಗಿದೆ.
ದೊಣಬಘಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದಿದ್ದು ಡ್ರಾಮಾ, ಹೈಡ್ರಾಮಾಕ್ಕೆ ಎಡೆಮಾಡಿಕೊಟ್ಟಿದೆ. ಅಧ್ಯಕ್ಷರಾಗಿ ಖಲೀಲ್, ಉಪಾಧ್ಯಕ್ಷರಾಗಿ ಮಾಲಮ್ಮ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೌಸರ್ ಭಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನೂ ಓದಿ: ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ
ಆತ್ಮಹತ್ಯೆಗೆ ಯತ್ನಿಸಿದ್ದೇಕೆ?
2021 ಫೆಬ್ರವರಿಯಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆದಿತ್ತು. ಕೌಸರ್ ಭಾನು ಸಹ ದೊಣಬಘಟ್ಟದ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಈ ವೇಳೆ ಖಲೀಲ್ ತಾನು 14 ತಿಂಗಳು ಅಧ್ಯಕ್ಷನಾಗುತ್ತೇನೆ, ನೀವು 14 ತಿಂಗಳ ಬಳಿಕ ಅಧ್ಯಕ್ಷರಾಗಿ ಎಂದು ಕೌಸರ್ ಭಾನು ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಇದನ್ನೂ ಓದಿ: ಆ್ಯಸಿಡ್ ಸಂತ್ರಸ್ತೆಯ ಸರ್ಜರಿಗೆ ನೆರವಾದ ಪೊಲೀಸರು
ಖಲೀಲ್ ಮಾತಿಗೆ ತಕ್ಕಂತೆ 14 ತಿಂಗಳು ಅವಧಿ ಮುಗಿಸಿ ರಾಜೀನಾಮೆ ನೀಡಿದ್ದಾರೆ. ಒಡಂಬಡಿಕೆಯ ಪ್ರಕಾರ ಕೌಸರ್ ಭಾನು ಅಧ್ಯಕ್ಷರಾಗಬೇಕಿತ್ತು ಎಂಬುದು ಅವರ ಬೆಂಬಲಿಗರ ವಾದ. ಆದರೆ ಇಂದು ಗ್ರಾಪಂ ಅಧ್ಯಕ್ಷರಾಗಿ ಖಲೀಮ್ ಆಯ್ಕೆಯಾಗಿದ್ದಾರೆ.
ಖಲೀಲ್ ಮತ್ತು ಎಲ್ಲಮ್ಮ ನನ್ನ ಬಳಿ ಹಣ ಪಡೆದು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಬೇಕಿದ್ದ ನನಗೆ ಅಧ್ಯಕ್ಷ ಸ್ಥಾನ ತಪ್ಪಿಸಿದ್ದಾರೆ ಎಂದು ಕೌಸರ್ ಭಾನು ಆರೋಪಿಸಿದ್ದಾರೆ. ವಿಷ ಸೇವಿಸಿದ್ದ ಕೌಸರ್ ಭಾನು ಅವರನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾಸನ: ನಿವೇಶನಕ್ಕಾಗಿ ಆಗ್ರಹಿಸಿ ಗ್ರಾಮ ಪಂಚಾಯತ್ ಮುಂದೆ ಮಲಗಿ ವಿಕಲಚೇತನ ವ್ಯಕ್ತಿಯೊಬ್ಬರು ಪ್ರತಿಭಟನೆ ನಡೆಸುತ್ತಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಕೆಂಕೆರೆ ಗ್ರಾಮದಲ್ಲಿ ನಡೆದಿದೆ.
ಗುರುಲಿಂಗಪ್ಪ ಕೆಂಕೆರೆ ಗ್ರಾಮ ಪಂಚಾಯತ್ ಮುಂದೆ ಮಲಗಿ ಪ್ರತಿಭಟನೆ ನಡೆಸುತ್ತಿರುವ ವಿಕಲಚೇತನ. ಕೆಲಸ ಮಾಡುವಾಗ ಮರದಿಂದ ಬಿದ್ದು ಗುರುಲಿಂಗಪ್ಪ ಕೈಕಾಲು ಸ್ವಾಧೀನ ಕಳೆದುಕೊಂಡಿದ್ದರು. ಆನಂತರ ದುಡಿಯಲು ಕಷ್ಟವಾಗಿ ಸಂಸಾರ ನಿರ್ವಹಣೆ ದುಸ್ಥರವಾಗಿದೆ. ನಾನು ಬಡವನಾಗಿದ್ದು, ವಾಸಿಸಲು ಮನೆಯಿಲ್ಲ. ಹೀಗಾಗಿ ಒಂದು ನಿವೇಶನವನ್ನು ನೀಡುವಂತೆ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿದ್ದೆ. ನಿವೇಶನ ಕೊಡಿ ಎಂದು ಗ್ರಾಪಂ ಅಧ್ಯಕ್ಷರು ಹಾಗೂ ಪಿಡಿಓಗೆ ಮನವಿ ಮಾಡಿದ್ದೆ. ಆದರೆ ಒಂದು ವರ್ಷದಿಂದ ಗ್ರಾಮ ಪಂಚಾಯತ್‍ಗೆ ಅಲೆದರೂ ನಿವೇಶನ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊಡಗಿನ ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು
ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಕೇಳಿದ್ರೆ, ನನ್ನನ್ನೇನು ಕೇಳ್ತಿಯಾ. ನಿವೇಶನ ಇಲ್ಲದಿದ್ರೆ ಗ್ರಾಮ ಪಂಚಾಯತ್ ಮುಂದೆ ಹೋಗಿ ಮಲಗು ಅಂತಾ ಅಂತಾರೆ. ಹೀಗಾಗಿ ನಾನು ಗ್ರಾಮ ಪಂಚಾಯತ್ ಮುಂದೆ ಮಲಗಿ ಪ್ರತಿಭಟನೆ ನಡೆಸುತ್ತಿದ್ದೇನೆ. ನನಗೆ ನಿವೇಶನ ಕೊಡಿ, ಇಲ್ಲದಿದ್ರೆ ಇಲ್ಲೇ ಮಲಗಲು ಬಿಡಿ ಎಂದು ಗುರುಲಿಂಗಪ್ಪ ಅಸಹಾಯಕತೆ ತೋಡಿಕೊಂಡಿದ್ದಾರೆ. ಇದನ್ನೂ ಓದಿ: ಬಸವ ಜಯಂತಿ ಮೆರವಣಿಗೆಯಲ್ಲಿ ಕುಡುಕರ ಹಾಡು – ಸಾರ್ವಜನಿಕರಿಂದ ಟೀಕೆ
ಕೋಲಾರ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷೆಯಾದರೆ ಗ್ರಾಮ ದೇವರಿಗೆ ಪುಷ್ಪಾರ್ಚನೆ ಮಾಡುವುದಾಗಿ ಹರಕೆ ಹೊತ್ತುಕೊಂಡಿದ್ದ ಹಿನ್ನೆಲೆ ಭಕ್ತೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡಿ ಹರಕೆ ತೀರಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ದೋಣಿಮಡಗು ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳ ಮಹದೇವ್ ಹರಕೆ ತೀರಿಸಿದ ಅಧ್ಯಕ್ಷೆಯಾಗಿದ್ದಾರೆ. ಮಂಜುಳ ಮಹದೇವ್ ಗ್ರಾಮ ಪಂಚಾಯತ್ ಅಧ್ಯಕ್ಷರಾದರೆ ದೇವರ ರಥೋತ್ಸವದ ವೇಳೆ ಹೆಲಿಕಾಪ್ಟರ್ ಮೂಲಕ ಪುಷ್ಪಾರ್ಚನೆ ಮಾಡುವುದಾಗಿ ಹರಕೆ ಹೊತ್ತಿದ್ದರು. ಆ ಬಳಿಕ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಗೆದ್ದ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 4ನೇ ದಿನವೂ ಭಾರೀ ಮಳೆ