Tag: ಗ್ರಾಮ ಪಂಚಾಯಿತಿ

  • ತೆರಿಗೆ ಸಂಗ್ರಹ – ಗ್ರಾಮ ಪಂಚಾಯಿತಿಗಳಿಗೇ ಅಧಿಕಾರ ಕೊಡಲು ಸರ್ಕಾರ ನಿರ್ಧಾರ

    ತೆರಿಗೆ ಸಂಗ್ರಹ – ಗ್ರಾಮ ಪಂಚಾಯಿತಿಗಳಿಗೇ ಅಧಿಕಾರ ಕೊಡಲು ಸರ್ಕಾರ ನಿರ್ಧಾರ

    ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೇ (Gram Panchayat) ತೆರಿಗೆ ಸಂಗ್ರಹದ ಅಧಿಕಾರ ನೀಡುವ ʻಕರ್ನಾಟಕ ರಾಜ್ಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ವಿಧೇಯಕ 2025ʼ ಅನ್ನು ಗುರುವಾರ ವಿಧಾನ ಪರಿಷತ್‌ನಲ್ಲಿ ಅಂಗೀಕರಿಸಲಾಯಿತು.

    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ವಿಧೇಯಕ ಮಂಡಿಸಿದರು. ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅನಧಿಕೃತ ಬಡಾವಣೆ ನಿವಾಸಿಗಳಿಗೆ ಈ ವಿಧೇಯಕ ತರುತ್ತಿದ್ದೇವೆ. ಅನಧೀಕೃತ ಬಡಾವಣೆಯ ನಿವಾಸಿಗಳು ಸರ್ಕಾರದಿಂದ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಆದರೆ ಸರ್ಕಾರಕ್ಕೆ ತೆರಿಗೆ ಬರ್ತಿಲ್ಲ. ಹೀಗಾಗಿ ಗ್ರಾಮ ಪಂಚಾಯತಿಗಳಿಗೆ ತೆರಿಗೆ ಸಂಗ್ರಹ ಮಾಡುವ ಅಧಿಕಾರ ಕೊಡುತ್ತಿದ್ದೇವೆ. ಮೊದಲ ಬಾರಿಗೆ ದುಪ್ಪಟ್ಟು ದಂಡ ವಿಧಿಸುತ್ತೇವೆ, ಬಳಿಕ ಸಾಮಾನ್ಯ ದಂಡ ಕಟ್ಟುವ ನಿಯಮ ತರುತ್ತಿದ್ದೇವೆ. ಈಗಾಗಲೇ ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಈ ನಿಮಯವನ್ನ ಅಳವಡಿಸಲಾಗಿದೆ ಎಂದು ಹೇಳಿದರು. ಬಳಿಕ ಸರ್ವಾನುಮತದಿಂದ ವಿಧೇಯಕವನ್ನು ಅಂಗೀಕರಿಸಲಾಯಿತು.

    ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಸಚಿವ ಕೃಷ್ಣಭೈರೇಗೌಡ ಅವರು, ಕರ್ನಾಟಕ ವೃತ್ತಿಗಳ, ಕಸುಬುಗಳ, ಅಜೀವಿಕೆಗಳ ಮತ್ತು ಉದ್ಯೋಗಗಳ ಮೇಲಣ ತೆರಿಗೆ(ತಿದ್ದುಪಡಿ) ವಿಧೇಯಕ 2025 ಮಂಡನೆ ಮಾಡಿದರು. ಯಾವುದೇ ಚರ್ಚೆ ಇಲ್ಲದೇ ವಿಧೇಯಕ ಅಂಗೀಕರಿಸಲಾಯಿತು.

    ಜೊತೆಗೆ ಕೃಷ್ಣಭೈರೇಗೌಡ ಅವರೇ ಮಂಡಿಸಿದ ಕರ್ನಾಟಕ ಸ್ಟಾಂಪು (ತಿದ್ದುಪಡಿ) ವಿಧೇಯಕ 2025, ಕರ್ನಾಟಕ ನೋಂದಣಿ ( ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಭೂ ಕಂದಾಯ( ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಗ್ರಾಮ ಹುದ್ದೆಗಳ ರದ್ದಿಯಾತಿ( ತಿದ್ದುಪಡಿ) ವಿಧೇಯಕ 2025, ಕರ್ನಾಟಕ ಭೂ ಕಬಳಿಕೆ ನಿಷೇಧ ( ತಿದ್ದುಪಡಿ) 2025 ಗಳನ್ನು ಅಂಗೀಕರಿಸಲಾಯಿತು.

    ಬಳಿಕ ವಿಧಾನ ಪರಿಷತ್‌ನಲ್ಲಿ ರಾಜ್ಯ ಸರ್ಕಾರ ಮೂರು ನಿರ್ಣಯಗಳನ್ನು ಮಂಡನೆ ಮಾಡಿತು. ಅವುಗಳನ್ನು ನೋಡುವುದಾದ್ರೆ…

    ನಿರ್ಣಯ-1
    ಕೇಂದ್ರ ಸರ್ಕಾರ ತರಲು ಹೊರಟಿರುವ ವಕ್ಫ್ ತಿದ್ದುಪಡಿ ವಿಧೇಯಕ ತಕ್ಷಣ ವಾಪಸ್ ಪಡೆಯಬೇಕು.

    ನಿರ್ಣಯ-2
    ಕರ್ನಾಟಕ ಸರ್ಕಾರ ಜಾರಿ ಮಾಡಿರೋ ಎಸ್‌ಸಿಎಸ್‌ಪಿ-ಟಿಎಸ್‌ಪಿ ಕಾಯ್ದೆಯನ್ನು ಕೇಂದ್ರ ಸರ್ಕಾರವೂ ಜಾರಿ ಮಾಡಬೇಕು.

    ನಿರ್ಣಯ-3
    ಯುಜಿಸಿ ಕರಡು ರೆಗ್ಯುಲೇಷನ್ಸ್ 2025 ಹಿಂಪಡೆಯಬೇಕು ಎಂದು ರಾಜ್ಯ ಸರ್ಕಾರ ನಿರ್ಣಯ ಮಂಡನೆ ಮಾಡಿದೆ. ಶುಕ್ರವಾರ ಬಜೆಟ್‌ ಅಧಿವೇಶನ ಚರ್ಚೆ ಬಳಿಕ ಅಂಗೀಕಾರ ಮಾಡುವ ಸಾಧ್ಯತೆಯಿದೆ.

    ಸರ್ಕಾರದ ನಿರ್ಣಯ ಮಂಡನೆ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಸದಸ್ಯ ಪಿ.ಎಚ್.ಪೂಜಾರ್ಂ ಮುಸ್ಲಿಮರಿಗೆ ಬಜೆಟ್‌ನಲ್ಲಿ ಶಾದಿ ಭಾಗ್ಯ ಸರ್ಕಾರ ಕೊಟ್ಟಿದೆ. ಮದುವೆ ಮಾಡೋದು ಸರ್ಕಾರದ ಕೆಲಸನಾ? ಮದುವೆ ಮಾಡಿಸೋಕೆ ಹಣ ಕೊಟ್ಟ ಹಾಗೆ ಮುಂದಿನ ದಿನಗಳಲ್ಲಿ ಮುಸ್ಲಿಮರ ಹೆಂಡತಿಯರನ್ನ ಸಾಕೋಕೆ ದುಡ್ಡು ಕೊಡ್ತೀರಾ? ಮಕ್ಕಳ ನಾಮಕರಣ, ಸೀಮಂತ ಕಾರ್ಯಕ್ರಮಕ್ಕೂ ಸರ್ಕಾರ ದುಡ್ಡು ಕೊಡುತ್ತಾ ಹೇಗೆ? ಸರ್ಕಾರಕ್ಕೆ ಮದುವೆ ಮಾಡೋ ಚಿಂತೆ ಯಾಕೆ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟರು.

  • ತಿಂಗಳಿಂದ ಕುಡಿಯಲು ಕಲುಷಿತ ನೀರು – ಬನ್ನೇರುಘಟ್ಟ ಗ್ರಾಪಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    ತಿಂಗಳಿಂದ ಕುಡಿಯಲು ಕಲುಷಿತ ನೀರು – ಬನ್ನೇರುಘಟ್ಟ ಗ್ರಾಪಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    ಬನ್ನೇರುಘಟ್ಟ: ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವ ಪ್ರಮುಖ ಜವಾಬ್ದಾರಿ ಸ್ಥಳೀಯ ಸಂಸ್ಥೆಗಳದ್ದು. ಆದ್ರೆ ಇಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳು ಕಲುಷಿತ ನೀರನ್ನು (Contaminated Water) ಮನೆಗಳಿಗೆ ಸರಬರಾಜು ಮಾಡುತ್ತಿದ್ದು, ಸ್ಥಳೀಯ ನಿವಾಸಿಗಳಿಂದ ಆಕ್ರೋಶ ವ್ಯಕ್ತವಾಗಿದೆ.

    ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಂಪನಾಯಕನಹಳ್ಳಿಯಲ್ಲಿ. ಇಲ್ಲಿನ ನಿವಾಸಿಗಳಿಗೆ ವಾರಕ್ಕೊಮ್ಮೆ ಗ್ರಾಮ ಪಂಚಾಯತಿ ನೀರು ಸರಬರಾಜು ಮಾಡುತ್ತಿದೆ. ಆದ್ರೆ ಕಳೆದ 1 ತಿಂಗಳಿನಿಂದ ಸ್ಯಾನಿಟರಿ ಮತ್ತು ಚರಂಡಿ ಮಿಶ್ರೀತ ನೀರು ಸರಬರಾಜು ಮಾಡುತ್ತಿದ್ದಾರೆ. ಕಲುಷಿತ ನೀರು ಸೇವನೆಯಿಂದ ವಾಂತಿಭೇದಿ, ಕೆಮ್ಮು ಜ್ವರ ನೆಗಡಿ ಜೊತೆ ಅಲರ್ಜಿ ಕೂಡ ಕಾಡುತ್ತಿದೆ ಎಂದು ಗ್ರಾಪಂ ವಿರುದ್ಧ ಕಿರಿ ಕಾಡಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲೇ ನೀರಿನ ದರ ಏರಿಕೆ ಶಾಕ್ – ಜಲಮಂಡಳಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

    ಸಾರ್ವಜನಿಕ ನಲ್ಲಿಗಳಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿರುವ ಬಗ್ಗೆ ಹಲವು ಬಾರಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್ಲ. ಕಲುಷಿತ ನೀರು ಸೇವಿಸಿ ಮನೆ ಮಂದಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಸಂಪ್‌ಗಳನ್ನು ಸ್ವಚ್ಛಗೊಳಿಸಿ ಹಣ ನೀರು ಟ್ಯಾಂಕರ್ ನೀರು ಹೊಡೆಸಿಕೊಳ್ಳುತ್ತಿದ್ದು, ಅದು ಕೂಡ ಕಲುಷಿತ ನೀರು ಸೇರಿ ಗಬ್ಬೆದ್ದು ನಾರುತ್ತಿದೆ. ಚುನಾವಣೆ ಬಂದಾಗ ಮತ ಕೇಳಲು ಬರುವ ರಾಜಕಾರಣಿಗಳು ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಇಷ್ಟೆಲ್ಲಾ ಸಾರ್ವಜನಿಕರಿಗೆ ಸಮಸ್ಯೆ ಉಂಟಾಗುತ್ತಿದ್ದರೂ ಪಂಚಾಯತಿ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್‌ ಕುರಿಯನ್‌

  • ಗ್ರಾಪಂ ಮಾಜಿ ಅಧ್ಯಕ್ಷನ ಮಗನ ಕೊಲೆ – ಚರಂಡಿಯಲ್ಲಿ ಶವ ಮುಚ್ಚಿಹಾಕಿ ಕೊಲೆಗಾರ ಎಸ್ಕೇಪ್

    ಗ್ರಾಪಂ ಮಾಜಿ ಅಧ್ಯಕ್ಷನ ಮಗನ ಕೊಲೆ – ಚರಂಡಿಯಲ್ಲಿ ಶವ ಮುಚ್ಚಿಹಾಕಿ ಕೊಲೆಗಾರ ಎಸ್ಕೇಪ್

    – ಕೊಲೆಯಾದ ವ್ಯಕ್ತಿಯ ಮುಖ ತಿಂದು ಹಾಕಿರುವ ಪ್ರಾಣಿಗಳು

    ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿ (Gram Panchayat) ಮಾಜಿ ಅಧ್ಯಕ್ಷನ ಮಗನನ್ನ ಕೊಲೆ ಮಾಡಿ ಚರಂಡಿಯಲ್ಲಿ ಮುಚ್ಚಿ ಹಾಕಿ ಕೊಲೆಗಾರ ಎಸ್ಕೇಪ್ ಆಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮರಸನಹಳ್ಳಿ ಕೆರೆ ಬಳಿ ಇರುವ ಬಡಾವಣೆಯಲ್ಲಿ ನಡೆದಿದೆ.

    ಹಾರೋಬಂಡೆ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗರೆಡ್ಡಿ ಮಗ 30 ವರ್ಷದ ಮಾರುತೇಶ್ ಕೊಲೆಯಾಗಿರುವ ದುರ್ದೈವಿ. ಅಂದಹಾಗೆ ಪಾಳುಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೊಲೆಯಾದ ಮಾರುತೇಶ್ ಪ್ಲಂಬರ್ ಹಾಗೂ ಎಲೆಕ್ಟ್ರಿಕ್ ಕೆಲಸ ಮಾಡುತ್ತಿದ್ದ. ಕುಡಿದ ಅಮಲಿನಲ್ಲಿ ಜೊತೆಗಾರನಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

    ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮದ್ಯದ ಬಾಟಲಿಗಳು ಪತ್ತೆಯಾಗಿವೆ. ಮೂರು ದಿನಗಳಿಂದ ನಾಪತ್ತೆಯಾಗಿದ್ದ ಮಾರುತೇಶ್ ಇಂದು ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಸೋನಿಯಾ ಗಾಂಧಿ ಹೇಳಿಕೆಯಿಂದ ರಾಷ್ಟ್ರಪತಿ ಹುದ್ದೆಯ ಘನತೆಗೆ ಘಾಸಿ – ರಾಷ್ಟ್ರಪತಿ ಭವನ ಪ್ರತಿಕ್ರಿಯೆ

    ಇನ್ನೂ ಶಂಕಿತ ಆರೋಪಿಯೊರ್ವ ಗ್ರಾಮದಲ್ಲಿ ಕೊಲೆ ಮಾಡಿರುವ ಬಗ್ಗೆ ಅಸ್ಪಷ್ಟವಾಗಿ ಮಾತನಾಡಿದ್ದ ಎನ್ನಲಾಗಿದ್ದು ಇದರ ಸುಳಿ ಮೇರೆಗೆ ಪರಿಶೀಲನೆ ಮಾಡಿದಾಗ ಮೃತದೇಹ ಇರೋದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು ಶಂಕಿತ ಆರೋಪಿಯ ಬೆನ್ನುಬಿದ್ದಿದ್ದಾರೆ, ಆತನ ಬಂಧನದ ಬಳಿಕ ಕೊಲೆಗೆ ಆಸಲಿ ಕಾರಣ ತಿಳಿದುಬರಲಿದೆ. ಇದನ್ನೂ ಓದಿ: ದೆಹಲಿ ಚುನಾವಣೆ ಹೊತ್ತಲ್ಲೇ ಎಎಪಿಗೆ ಶಾಕ್‌ – ಟಿಕೆಟ್‌ ಸಿಗದಿದ್ದಕ್ಕೆ ಸಿಟ್ಟಿಗೆದ್ದು ಐವರು ಶಾಸಕರು ರಾಜೀನಾಮೆ

  • ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

    ಗ್ರಾಪಂ ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್ ರದ್ದು: ಮುನಿಯಪ್ಪ

    ಬೆಂಗಳೂರು: ಗ್ರಾಮ ಪಂಚಾಯಿತಿ (Gram Panchayat) ವ್ಯಾಪ್ತಿಯಲ್ಲಿ ಪರಿಶೀಲನೆ ಮಾಡಿ ಅನರ್ಹ ರೇಷನ್ ಕಾರ್ಡ್‌ಗಳನ್ನ ರದ್ದು ಮಾಡುವುದಾಗಿ ಸಚಿವ ಕೆ.ಹೆಚ್‌ ಮುನಿಯಪ್ಪ (KH Muniyappa) ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಕಲಾಪದಲ್ಲಿಂದು ರೇಷನ್ ಕಾರ್ಡ್ (Ration Card) ರದ್ದು ವಿಷಯ ಪ್ರಸ್ತಾಪ ಆಯ್ತು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ರು. ರೇಷನ್ ಕಾರ್ಡ್ ಹಂಚಿಕೆಯಲ್ಲಿ ಗೊಂದಲ ಆಗಿದೆ. ಅನೇಕ ಜನರ ರೇಷನ್ ಕಾರ್ಡ್ ರದ್ದು ಆಗಿದೆ. ಈ ಗೊಂದಲ ಸರಿ ಮಾಡಿ, ಮಾಹಿತಿ ಪ್ರಕಾರ 25 ಲಕ್ಷ ರೇಷನ್ ಕಾರ್ಡ್ ರದ್ದು ಆಗಿದೆ ಅಂತ ಆರೋಪ ಮಾಡಿದ್ರು.

    ಇದಕ್ಕೆ ಉತ್ತರ ನೀಡಿದ ಸಚಿವ ಮುನಿಯಪ್ಪ, ಆಹಾರ ಭದ್ರತಾ ಕಾಯ್ಡೆ ಯುಪಿಎ ಸರ್ಕಾರ ಜಾರಿ ಮಾಡಿತು. ಕರ್ನಾಟಕದಲ್ಲಿ 2014 ಎಲ್ಲಿ ಜಾರಿ ಆಯ್ತು? BPL, APL ಕಾರ್ಡ್‌ಗಳು ಸೇರಿ ಒಟ್ಟು 1,53,64,648 ಕಾರ್ಡ್ ಗೆ ರೇಷನ್ ಕೊಡ್ತಿದ್ದೇವೆ. ಒಟ್ಟು 5,29,01,752 ಫಲಾನುಭವಿಗಳಿಗೆ ರೇಷನ್ ಕೊಡಲಾಗ್ತಿದೆ. BPL ಕಾರ್ಡ್ ಗಳನ್ನ ರದ್ದು ಮಾಡಿಲ್ಲ. ಆದಾಯ 1.20 ಲಕ್ಷ ಇರೋರಿಗೆ, ತೆರಿಗೆ ಕಟ್ಟೋರಿಗೆ ಮಾತ್ರ ಕಾರ್ಡ್ ರದ್ದು ಆಗಿದೆ. ಉಳಿದ ಯಾರಿಗೂ ಕಾರ್ಡ್ ರದ್ದು ಮಾಡೊಲ್ಲ ಅಂತ ಭರವಸೆ ಕೊಟ್ರು.

    ಮುಂದುವರಿದು… APL ಕಾರ್ಡ್ ಗೆ ರೇಷನ್ ಕೊಡೋದು ಈಗ ನಿಲ್ಲಿಸಿದ್ದೇವೆ‌. 25 ಲಕ್ಷ ಕಾರ್ಡ್ ನಲ್ಲಿ 1 ಲಕ್ಷ ಕಾರ್ಡ್ ಜನರು ಮಾತ್ರ ರೇಷನ್ ತೆಗೆದುಕೊಳ್ಳುತ್ತಿದ್ದರು. ಹೀಗಾಗಿ ಸದ್ಯಕ್ಕೆ APL ಕಾರ್ಡ್ ಗೆ ರೇಷನ್ ಕೊಡ್ತಿಲ್ಲ ಎಂದು ಸ್ಪಷ್ಟನೆ ನೀಡಿದರು.

    APL ಕಾರ್ಡ್ ಅರ್ಹತೆ ಇರೋರು BPL ಕಾರ್ಡ್ ಪಡೆದಿದ್ದಾರೆ. ಈ ರೀತಿ 20% ಕಾರ್ಡ್ ಗಳು ರಾಜ್ಯದಲ್ಲಿವೆ. ಇದನ್ನ ಪರಿಷ್ಕರಣೆ ಮಾಡೋಕೆ ಮುಂದಾಗಿದ್ದೇವೆ. ಆದರೆ ಗೊಂದಲ ಆಯ್ತು, ಹೀಗಾಗಿ ಸದ್ಯಕ್ಕೆ ಪರಿಷ್ಕರಣೆ ನಿಲ್ಲಿಸಿದ್ದೇನೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಇದನ್ನ ಸರಿಯಾಗಿ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡ್ತೀವಿ. BPL ಕಾರ್ಡ್ ಒಬ್ಬರಿಗೂ ಸಮಸ್ಯೆ ಇಲ್ಲದಂತೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದರು.

    ಕರ್ನಾಟಕದಲ್ಲಿ ರೇಷನ್ ಕಾರ್ಡ್ ಜಾಸ್ತಿ ಆಗಿರೋದಕ್ಕೆ ಎಲ್ಲಾ ಸರ್ಕಾರಗಳು ಕಾರಣ. ಅದರಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಂತ ಇಲ್ಲ. ಈಗ ಕಾರ್ಡ್ ಪರಿಷ್ಕರಣೆ ಮಾಡಿದ್ರೆ ಗೊಂದಲ ಆಗಿದೆ. ಇದಕ್ಕೂ ರಾಜಕೀಯ ಪಕ್ಷಗಳು ಕಾರಣ ಆಗುತ್ತದೆ. ಹೀಗಾಗಿ ಕೂಲಂಕಷವಾಗಿ ಪರಿಶೀಲಿಸಿ ಪರಿಷ್ಕರಣೆ ಮಾಡ್ತೀವಿ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸರಿಯಾಗಿ ಮಾಹಿತಿ ಪರಿಶೀಲನೆ ಮಾಡಿ BPL ಕಾರ್ಡ್ ಪರಿಷ್ಕರಣೆ ಮಾಡ್ತೀವಿ. ಬಳಿಕ APL ಕಾರ್ಡ್ ಪರಿಷ್ಕರಣೆ ಮಾಡೋ ಕೆಲಸ ಮಾಡ್ತೀವಿ ಅಂತ ತಿಳಿಸಿದರು.

  • ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು – ಗ್ರಾ.ಪಂ ಅಧ್ಯಕ್ಷೆಗೆ ಗುಂಡೇಟು

    ಗಣರಾಜ್ಯೋತ್ಸವದ ವೇಳೆ ಗಾಳಿಯಲ್ಲಿ ಗುಂಡು – ಗ್ರಾ.ಪಂ ಅಧ್ಯಕ್ಷೆಗೆ ಗುಂಡೇಟು

    ವಿಜಯಪುರ: ವ್ಯಕ್ತಿಯೊಬ್ಬ ಗಣರಾಜ್ಯೋತ್ಸವ (Republic Day 2024) ಆಚರಣೆ ವೇಳೆ ಶೋಕಿಗಾಗಿ ಗಾಳಿಯಲ್ಲಿ ಹಾರಿಸಿದ ಗುಂಡು, ಗ್ರಾಮ ಪಂಚಾಯಿತಿ (Gram Panchayat) ಅಧ್ಯಕ್ಷೆಗೆ ತಗುಲಿದ ಘಟನೆ ಇಂಡಿ ತಾಲೂಕಿನ ಹಿರೆರೂಗಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಮಲ್ಲು ಗಿನ್ನಿ ಎಂಬಾತ ಗುಂಡು ಹಾರಿಸಿದ ವ್ಯಕ್ತಿಯಾಗಿದ್ದಾನೆ. ಈತ ಧ್ವಜಾರೋಹಣದ ವೇಳೆ ಗ್ರಾಪಂ ಎದುರು ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿದ್ದಾನೆ. ಈ ವೇಳೆ ಒಂದು ಗುಂಡು ಗ್ರಾಪಂ ಅಧ್ಯಕ್ಷೆಯಾದ ಸೋಮವ್ವ (50) ಎಂಬವರ ತೊಡೆಗೆ ತಗುಲಿದೆ. ಇದನ್ನೂ ಓದಿ: ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

    ಗುಂಡೇಟಿನಿಂದ ಗಾಯಗೊಂಡ ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ವಿಚಾರವಾಗಿ ಮಹಿಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಇದನ್ನೂ ಓದಿ: ಪ್ರೇಯಸಿಯ ಜೊತೆ ಸೇರಿ ಪತ್ನಿಯ ಹತ್ಯೆ- 19 ದಿನಗಳ ಬಳಿಕ ಕೆರೆಯಲ್ಲಿ ಶವ ಪತ್ತೆ

  • ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

    ಕಾಲಮಿತಿಯೊಳಗೆ ಜನನ-ಮರಣ ಪ್ರಮಾಣ ಪತ್ರ ವಿತರಿಸಿ – ಡಿಸಿ ಖಡಕ್‌ ಸೂಚನೆ

    ಚಿಕ್ಕಬಳ್ಳಾಪುರ: ಜನನ ಮತ್ತು ಮರಣ ಪ್ರಕರಣಗಳ (Birth And Death Certificate) ನೋಂದಣಿಯನ್ನ ನಿಗದಿತ ಕಾಲಮಿತಿಯೊಳಗೆ ತಂತ್ರಾಂಶಗಳಲ್ಲಿ ನೋಂದಾಯಿಸಿ ಪ್ರಮಾಣ ಪತ್ರಗಳನ್ನ ವಿತರಿಸುವ ವ್ಯವಸ್ಥೆ ಆಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಜನನ ಮರಣ ನೋಂದಣಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಬ್ಬರಿಗೂ ನಿಗದಿತ ಕಾಲಮಿತಿಯಲ್ಲಿ ಪ್ರಮಾಣ ಪತ್ರ ವಿತರಣೆ ಆಗಬೇಕು. ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿರುವ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ನೋಂದಣಿ ಮಾಡುವ ಸಕ್ಷಮ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ವೈಖರಿಯನ್ನ ಪರಿಶೀಲಿಸಿ ಸಕಾಲಕ್ಕೆ ವರದಿ ನೀಡಬೇಕು ಎಂದು ಎಂದು ತಾಕೀತು ಮಾಡಿದ್ದಾರೆ. ಇದನ್ನೂಓದಿ: ಯಾರೋ ಹುಡುಗರು ಮಾಡಿದ್ದಾರೆ, ಟ್ವೀಟ್‌ ವಿಥ್‌ ಡ್ರಾ ಮಾಡಿಸಿದ್ದೇನೆ: ಡಿಕೆ ಶಿವಕುಮಾರ್‌

    ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಘಟಿಸುವ ಜನನ, ಮರಣ ಪ್ರಕರಣಗಳನ್ನ ಸಂಬಂಧಪಟ್ಟ ತಂತ್ರಾಂಶದಲ್ಲಿ ನಮೂದಿಸಿ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಆನ್‌ಲೈನ್‌ ಮೂಲಕ ರವಾನಿಸಬೇಕು. ಸದರಿ ವಿವರವನ್ನ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿರುವ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಪರಿಶೀಲಿಸಿ ಪ್ರಮಾಣ ಪತ್ರಗಳನ್ನ ನಿಗದಿತ ಕಾಲಮಿತಿಯೊಳಗೆ ವಿತರಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂಓದಿ: ನಾರಾಯಣಪುರದ ಬಸವಸಾಗರ ಜಲಾಶಯ ಬಹುತೇಕ ಭರ್ತಿ – ರೈತರ ಮೊಗದಲ್ಲಿ ಮಂದಹಾಸ

    ಜನನ ಮತ್ತು ಮರಣ ಪ್ರಕರಣಗಳನ್ನ ಸ್ಥಳೀಯ ಆಡಳಿತಾಧಿಕಾರಿಗಳು ಹಾಗೂ ಗ್ರಾಮಲೆಕ್ಕಾಧಿಕಾರಿಗಳು ತಮ್ಮ ಕಾರ್ಯ ವ್ಯಾಪ್ತಿಯ ಘಟನೆಗಳ ಮಾಹಿತಿಯನ್ನ ಪಡೆದು ಪರಿಶೀಲಿಸಿ ತಂತ್ರಾಂಶದಲ್ಲಿ ನೋಂದಾಣಿ ಮಾಡುವ ಜೊತೆಗೆ ಪ್ರಮಾಣ ಪತ್ರಗಳನ್ನ ವಿತರಿಸುವ ಕೆಲಸವನ್ನೂ ಸಮರ್ಪಕವಾಗಿ ನಿರ್ವಹಿಸಬೇಕು. ಈ ನಿಯಮ ಉಲ್ಲಂಘಿಸುವ ಯಾವುದೇ ಸಂಸ್ಥೆ, ಅಧಿಕಾರಿ ಹಾಗೂ ಗ್ರಾಮಲೆಕ್ಕಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕ್ರಮಕೈಗೊಳ್ಳಬೇಕು. ವಿಶೇಷವಾಗಿ ಖಾಸಗಿ ಆಸ್ಪತ್ರೆಗಳಲ್ಲಿನ ನಮೂದು ಕಾರ್ಯದ ಮೇಲೆ ಹೆಚ್ಚು ನಿಗಾವಹಿಸಬೇಕು ಎಂದು ಎಚ್ಚರಿಸಿದ್ದಾರೆ.

    ಸಭೆಯಲ್ಲಿ 2021-22ನೇ ಸಾಲಿನ ಜಿಲ್ಲೆಯ ಅಂಕಿ ಅಂಶಗಳ ನೋಟ ಮತ್ತು ಸಾಮಾಜಿಕ ಹಾಗೂ ಆರ್ಥಿಕ ಅವಲೋಕನ ಪುಸ್ತಕ, 2022-23ನೇ ಸಾಲಿನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಬೆಳೆ ಅಂದಾಜು ಸಮೀಕ್ಷೆಯ ಕಾರ್ಯ ಯೋಜನಾ ಪಟ್ಟಿಯನ್ನ ಬಿಡುಗಡೆ ಮಾಡಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

    ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

    ಹುಬ್ಬಳ್ಳಿ: ಚುನಾವಣಾ ಸಮಯದಲ್ಲಿ ಸೌಲಭ್ಯ ಕೊಟ್ಟು ಬಳಿಕ ನಿಲ್ಲಿಸಿದ ಅಧಿಕಾರಿಗಳ ನಡೆಗೆ ಬೇಸತ್ತು ಗ್ರಾಮ ಪಂಚಾಯಿತಿ ಕಚೇರಿಗೆ (Gram Panchayat Office) ಮುತ್ತಿಗೆ ಹಾಕಿದ ಗ್ರಾಮಸ್ಥರು, ಸಿಬ್ಬಂದಿಯನ್ನು ಕೂಡಿಹಾಕಿ ಬೀಗ ಜಡಿದಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ಜಗದೀಶ್ವರ ನಗರದಲ್ಲಿ ಕಳೆದ 6 ವರ್ಷಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕ ಇರಲಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಗೆ ನಿವಾಸಿಗಳು ಮನವಿ ಮಾಡಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

    ಅಧಿಕಾರಿಗಳು ಚುನಾವಣಾ ಸಮಯದಲ್ಲಿ ತಾತ್ಕಾಲಿಕವಾಗಿ ನೀರು ಮತ್ತು ವಿದ್ಯುತ್ ಪೂರೈಕೆ ಮಾಡಿ, ಚುನಾವಣೆ ಬಳಿಕ ಮತ್ತೆ ಎಲ್ಲಾ ಸೌಲಭ್ಯವನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿಹಾಕಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

  • 9.91 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಪಂಚಾಯಿತಿ – ಕನೆಕ್ಷನ್ ಕಟ್!

    9.91 ಲಕ್ಷ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಪಂಚಾಯಿತಿ – ಕನೆಕ್ಷನ್ ಕಟ್!

    ಮಡಿಕೇರಿ: ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ (Congress Guarantee) ಘೋಷಣೆಯಾದ ಬೆನ್ನಲ್ಲೇ ರಾಜ್ಯಾದ್ಯಂತ ಜನ ವಿದ್ಯುತ್ ಬಿಲ್ ಕಟ್ಟೋದಿಲ್ಲ ಅಂತಾ ಪಟ್ಟು ಹಿಡಿಯುತ್ತಿದ್ದಾರೆ. ಈ ನಡುವೆ ಸ್ಥಳೀಯ ಸರ್ಕಾರವಾಗಿರುವ ಗ್ರಾಮ ಪಂಚಾಯಿತಿಯೇ (Gram Panchayat) ಲಕ್ಷ, ಲಕ್ಷ ವಿದ್ಯುತ್ ಬಿಲ್ (Electricity Bill) ಬಾಕಿ ಉಳಿಸಿಕೊಂಡ ಪರಿಣಾಮ ಕಳೆದ 15 ದಿನಗಳಿಂದ ಕತ್ತಲೆಯಲ್ಲಿ ಕಾಲ ದೂಡುತ್ತಿದೆ. ಇದರಿಂದಾಗಿ ದಿನ ನಿತ್ಯ ಪಂಚಾಯಿತಿಗೆ ಭೇಟಿ ನೀಡುವ ಸಾರ್ವಜನಿಕರ ಕೆಲಸಗಳೂ ಆಗದೇ ಜನರು ಪರದಾಡುತ್ತಿದ್ದಾರೆ. ಪಂಚಾಯತಿ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಹೌದು… ಕೊಡಗು (Kodagu) ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿ ಬರೋಬ್ಬರಿ 9.91 ಲಕ್ಷ ರೂ. ವಿದ್ಯುತ್ ಬಿಲ್‌ ಬಾಕಿ ಉಳಿಸಿಕೊಂಡಿದೆ. ಕಳೆದ ನಾಲ್ಕೈದು ತಿಂಗಳಿಂದ ವಿದ್ಯುತ್ ಬಿಲ್ಲನ್ನು ಪಾವತಿಸದ ಪರಿಣಾಮ ಚೆಸ್ಕಾಂ ಇಲಾಖೆಯವರು ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ್ದಾರೆ. ಪಂಚಾಯಿತಿ ಕಟ್ಟಡದ ಫ್ಯೂಜ್ ಅನ್ನೇ ಕಿತ್ತುಕೊಂಡು ಹೋಗಿದ್ದು, ಕತ್ತಲಲ್ಲಿ ದಿನದೂಡುವಂತೆ ಮಾಡಿದ್ದಾರೆ. ಸ್ವತಃ ಪಿಡಿಒ ಕೂಡ ಏನಾದರೂ ಬರೆಯಬೇಕೆಂದರೂ ಸಿಬ್ಬಂದಿಯಿಂದ ಮೊಬೈಲ್ ಟಾರ್ಚ್ ಹಾಕಿಸಿ ಬರೆಯಬೇಕಾಗಿದೆ.

    ಹೊರಗಿನಿಂದ ಯಾರಾದರೂ ಬಂದರೆ ಸಿಬ್ಬಂದಿಗೆ ಕೂಡಲೇ ಮೊಬೈಲ್ ಟಾರ್ಚ್ ಆಫ್ ಮಾಡುವಂತೆ ನಾಚಿಕೆಪಟ್ಟುಕೊಂಡು ಹೇಳುವಂತಾಗಿದೆ. ಪಂಚಾಯಿತಿಯಿಂದ ವಿದ್ಯುತ್ ಇಲಾಖೆಗೆ ಹಣ ಯಾಕೆ ಪಾವತಿ ಮಾಡಿಲ್ಲ ಎಂದು ಪಿಡಿಒ ಕೇಳಿದ್ರೆ. ನಾನು ಜನವರಿ ತಿಂಗಳಿನಲ್ಲಿ ಈ ಪಂಚಾಯಿತಿಗೆ ವರ್ಗಾವಣೆಯಾಗಿ ಬಂದಿದ್ದೇನೆ. ಆ ಸಮಯಕ್ಕೆ 7 ಲಕ್ಷಕ್ಕೂ ಹೆಚ್ಚು ವಿದ್ಯುತ್ ಬಿಲ್ಲನ್ನು ಬಾಕಿ ಉಳಿಸಲಾಗಿತ್ತು. ಸಂಗ್ರಹವಾಗುತ್ತಿರುವ ತೆರಿಗೆ ಹಣದಲ್ಲಿ ಎಷ್ಟು ಸಾಧ್ಯವೋ ಅಷ್ಟು ವಿದ್ಯುತ್ ಬಿಲ್ಲನ್ನು ಪಾವತಿಸುತ್ತಿದ್ದೇವೆ. ಆದ್ರೆ ಬೀದಿ ದೀಪ, ಕುಡಿಯುವ ನೀರಿನ ಮೋಟಾರ್ ಗಳ ಬಿಲ್ಲು ಸೇರಿದಂತೆ ತಿಂಗಳಿಗೆ 1.70 ಲಕ್ಷದಿಂದ 2 ಲಕ್ಷದವರೆಗೆ ವಿದ್ಯುತ್ ಬಿಲ್ಲು ಬರುತ್ತದೆ. ಹೀಗಾಗಿ ಅದು ಜಾಸ್ತಿಯಾಗುತ್ತಲೇ ಇದೆ. ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೂ ಕೂಡಲೇ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಿ ತೆರಿಗೆ ಸಂಗ್ರಹಿಸುತ್ತೇವೆ ಎಂದು ಸಬೂಬು ನೀಡಿದ್ದಾರೆ.

    ಇನ್ನೂ ಪಂಚಾಯಿತಿ ಅಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳ ನಡುವೆ ಹೊಂದಾಣಿಕೆ ಇಲ್ಲದಿರುವುದರಿಂದ ಗ್ರಾಮ ಪಂಚಾಯಿತಿಗೆ ಬರುವ ಆದಾಯ ಮೂಲಗಳಿಗೂ ಸಂಕಷ್ಟ ಎದುರಾಗಿದೆ. ಹೀಗಾಗಿ ವಿದ್ಯುತ್ ಹಣ ಪಾವತಿ ಮಾಡಲು ಆಗದೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ದಿನನಿತ್ಯ ನೂತನ ಜನರು ಪಂಚಾಯತಿ ಕಚೇರಿಗೆ ಬಂದು ವಾಪಸ್ಸು ಅಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಬಗ್ಗೆ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರನ್ನು ಕೇಳಿದ್ರೆ. ಪಂಚಾಯಿತಿ ವಿದ್ಯುತ್ ಸಮಸ್ಯೆ ಬಗ್ಗೆ ಈಗಾಗಲೇ ತಮ್ಮ ಗಮನಕ್ಕೆ ಬಂದಿದೆ. ಸಿಒ ಹಾಗೂ ವಿದ್ಯುತ್ ಇಲಾಖೆ ಅಧಿಕಾರಿಗಳ ಜೋತೆ ಮಾತಾನಾಡಿ ತಾತ್ಕಾಲಿಕವಾಗಿಯಾದರೂ ಕರೆಂಟ್ ಕನೆಕ್ಷನ್ ಮಾಡಿಸಲಾಗುತ್ತದೆ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ವ್ಯವಸ್ಥೆ ಮಾಡಿಲಾಗುತ್ತದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ ಎಂದು ತಿಳಿಸಿದ್ದಾರೆ.

  • ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯಿತಿ

    ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ರಾಮ ಪಂಚಾಯಿತಿ

    ತುಮಕೂರು: ವಿದ್ಯುತ್ ಪ್ರಸರಣದಲ್ಲಿ ಏರುಪೇರಿನಿಂದ ಶಾರ್ಟ್ ಸರ್ಕ್ಯೂಟ್ (Short Circuit) ಉಂಟಾಗಿ ಗ್ರಾಮ ಪಂಚಾಯಿತಿ (Gram Panchayat) ಕಚೇರಿಯ ಕಂಪ್ಯೂಟರ್ ಸೇರಿದಂತೆ ಕಡತಗಳಿಗೆ ಬೆಂಕಿ ತಗಲಿ ಸುಟ್ಟು ಭಸ್ಮವಾದ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.

    ಪಾವಗಡ (Pavagada) ತಾಲೂಕಿನ ಪೊನ್ನಸಂದ್ರ (Ponnasandra) ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸಹ ಬೆಂಕಿಯಲ್ಲಿ ಸುಟ್ಟು ಕರಕಲಾಗಿದೆ. ಘಟನೆ ನಡೆದ ಸಮಯದಲ್ಲಿ ಸ್ಥಳೀಯ ಗ್ರಾಮಸ್ಥರು ನೀರಿನಿಂದ ಬೆಂಕಿಯನ್ನು ಆರಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

    ಬಳಿಕ ಸ್ಥಳಕ್ಕೆ ಪಾವಗಡ ಅಗ್ನಿಶಾಮಕ (Fire Extinguisher) ಠಾಣೆಯ ಸಿಬ್ಬಂದಿ ಭೇಟಿ ನೀಡಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಸೇತುವೆ ಮೇಲಿನಿಂದ ಹಾರಿ ವ್ಯಕ್ತಿ ಸಾವು

  • ವಸತಿ ಮನೆ ಬಿಡುಗಡೆಗೆ ಲಂಚ ನೀಡದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಹತ್ಯೆ

    ವಸತಿ ಮನೆ ಬಿಡುಗಡೆಗೆ ಲಂಚ ನೀಡದ ವ್ಯಕ್ತಿಯ ಮರ್ಮಾಂಗಕ್ಕೆ ಒದ್ದು ಹತ್ಯೆ

    ಕಲಬುರಗಿ: ವಸತಿ ಯೋಜನೆಯಲ್ಲಿ (Housing scheme) ಮಂಜೂರಾಗಿದ್ದ ಮನೆಯ ಲಂಚದ ವಿಚಾರದಲ್ಲಿ ವ್ಯಕ್ತಿಯೊಬ್ಬ ಕೊಲೆಯಾದ ಪ್ರಕರಣ ಜೇವರ್ಗಿ (Jevargi) ತಾಲೂಕಿನ ಆಂದೋಲ (Andola) ಗ್ರಾಮದಲ್ಲಿ ನಡೆದಿದೆ.

    ಬಸವರಾಜ್ (35) ಎಂಬಾತನಿಗೆ ವಸತಿ ಯೋಜನೆ ಅಡಿ ಮನೆ ಮಂಜೂರಾಗಿತ್ತು. ಮನೆಗೆ ಹಣ ಬಿಡುಗಡೆ ಮಾಡಲು ಗ್ರಾಮ ಪಂಚಾಯಿತಿ (Gram Panchayat) ಉಪಾಧ್ಯಕ್ಷೆ ಹಾಗೂ ಆಕೆಯ ಪತಿ 25 ಸಾವಿರ ರೂ. ಲಂಚ (Bribe) ನೀಡುವಂತೆ ಕೇಳಿದ್ದರು. ಇದನ್ನೂ ಓದಿ: ತಂದೆ ಮನೆಯಿಂದ ಕಾಸ್ಟ್ಲಿ ವಾಚ್ ತರದಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ!

    ಇದರಿಂದ ಬೇಸರಗೊಂಡಿದ್ದ ಬಸವರಾಜ್ ಲಂಚದ ವಿಚಾರವನ್ನು ಊರಿನವರ ಮುಂದೆ ಹೇಳಿಕೊಂಡಿದ್ದ. ಇದರಿಂದ ಕೋಪಗೊಂಡ ಗ್ರಾಮ ಪಂಚಾಯತಿ ಉಪಾಧ್ಯಕ್ಷೆಯ ಪತಿ ಸಿದ್ದಪ್ಪ ಹಾಗೂ ಮಗ ಗುರುರಾಜ್, ಬಸವರಾಜ್‍ನ ಎದೆ ಹಾಗೂ ಮರ್ಮಾಂಕ್ಕೆ ಒದ್ದು ಕೊಲೆ ಮಾಡಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತ್ರಿಪುರ ಬಿಜೆಪಿ ಬೆಂಬಲಿಗರಿಂದ ಸಂಸದೀಯ ತಂಡದ ಮೇಲೆ ದಾಳಿ