Tag: ಗ್ರಾಮ ಪಂಚಾಯಿತಿ

  • ಗ್ರಾ.ಪಂಗೂ ಕಾಲಿಟ್ಟ ರೆಸಾರ್ಟ್ ಪಾಲಿಟಿಕ್ಸ್ – ಬೆಂಗಳೂರಿನ ರೆಸಾರ್ಟ್‍ನಲ್ಲಿ 40 ದಿನ ಇದ್ರು ಸದಸ್ಯರು

    ಗ್ರಾ.ಪಂಗೂ ಕಾಲಿಟ್ಟ ರೆಸಾರ್ಟ್ ಪಾಲಿಟಿಕ್ಸ್ – ಬೆಂಗಳೂರಿನ ರೆಸಾರ್ಟ್‍ನಲ್ಲಿ 40 ದಿನ ಇದ್ರು ಸದಸ್ಯರು

    ಹಾವೇರಿ: ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ರೆಸಾರ್ಟ್ ರಾಜಕೀಯ ಇದೀಗ ಗ್ರಾಮ ಪಂಚಾಯಿತಿಗೂ (Gram Panchayat) ಕಾಲಿಟ್ಟಿದ್ದು, ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ ಪಂಚಾಯತಿ ಸದಸ್ಯರು 40 ದಿನಗಳ ಕಾಲ ಬೆಂಗಳೂರಿನ (Bengaluru) ರೆಸಾರ್ಟ್‍ನಲ್ಲಿ ಇದ್ದರು ಎಂಬ ವಿಷಯ ಇದೀಗ ಬೆಳಕಿಗೆ ಬಂದಿದೆ.

    ಹಾವೇರಿ (Haveri) ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮ ಪಂಚಾಯಿತಿಯು ಒಟ್ಟು 13 ಸದಸ್ಯರನ್ನು ಒಳಗೊಂಡಿದೆ. ಆ ಪಂಚಾಯಿತಿಗೆ ಮಾಲತೇಶ್ ದುರಗಪ್ಪ ನಾಯರ್ ಹಾಲಿ ಅಧ್ಯಕ್ಷರಾಗಿದ್ದಾರೆ. ಆದರೆ ಅಧಿಕಾರ ಸ್ವೀಕರಿಸುವ ವೇಳೆಯಲ್ಲಿ ಮಾಲತೇಶ್ ಅಧ್ಯಕ್ಷರ ಆಡಳಿತಾವಧಿ ವಿಚಾರದಲ್ಲಿ ನಡೆದ ಒಪ್ಪಂದದಂತೆ 15 ತಿಂಗಳು ಅಧಿಕಾರ ನಡೆಸುವುದಾಗಿ ತಿಳಿಸಿದ್ದರು. ನಂತರ ಆ ಸ್ಥಾನವನ್ನು ಬಿಟ್ಟುಕೊಡುವುದಾಗಿಯೂ ತಿಳಿಸಿದ್ದರು. ಆದರೆ ಮಾಲತೇಶ್ 15 ತಿಂಗಳ ನಂತರ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡದೆ ಸತಾಯಿಸುತ್ತಿದ್ದ. ಹೀಗಾಗಿ ಗ್ರಾ.ಪಂ ಅಧ್ಯಕ್ಷ ಮಾಲತೇಶ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸದಸ್ಯರು ನಿರ್ಧರಿಸಿದ್ದಾರೆ.

    ಒಟ್ಟು 13 ಜನ ಗ್ರಾ.ಪಂ ಸದಸ್ಯರಲ್ಲಿ 9 ಸದಸ್ಯರು ಸಂತೋಷ್ ಭಟ್ ಗುರೂಜಿ ಬಣದವರು, ಇನ್ನುಳಿದ ನಾಲ್ವರು ಬಿಜೆಪಿ ಸದಸ್ಯರಾಗಿದ್ದರು. ಗ್ರಾ.ಪಂ ಅಧ್ಯಕ್ಷ ಮಾಲತೇಶ್ ಮಾತಿಗೆ ತಪ್ಪಿದ ಕಾರಣ ಅವಿಶ್ವಾಸ ನಿರ್ಣಯಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಮಾಲತೇಶ್ ಗ್ರಾ.ಪಂ ಸದಸ್ಯರನ್ನು ಹೈಜಾಕ್ ಮಾಡಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಸಂತೋಷ್ ಭಟ್ ಗುರೂಜಿ ಅವರು ಗ್ರಾ.ಪಂ ಸದಸ್ಯರನ್ನು ಬೆಂಗಳೂರಿನ ರೆಸಾರ್ಟ್‍ಗೆ ಕಳಿಸಿಕೊಟ್ಟಿದ್ದರು. ಸುಮಾರು 40 ದಿನಗಳ ಕಾಲ ಅದೇ ರೆಸಾರ್ಟ್‍ನಲ್ಲೇ ಗ್ರಾಪಂ ಸದಸ್ಯರು ತಂಗಿದ್ದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

    ಇಂದು ಬೆಂಗಳೂರಿನಿಂದ ವಿಮಾನದಲ್ಲಿ ಬಂದು ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆಯಲ್ಲಿ ಗ್ರಾ.ಪಂ ಸದಸ್ಯರು ಭಾಗಿಯಾದ್ದಾರೆ. ತಾಲೂಕು ಉಪ ವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆ ನಡೆಸಿದ್ದಾರೆ. ಒಟ್ಟಾರೆಯಾಗಿ ಆಪರೇಶನ್ ಕಮಲದ ಮಾದರಿಯಲ್ಲೇ ಆಪರೇಶನ್ ಗ್ರಾಮ ಪಂಚಾಯಿತಿ ಆಗಿದೆ. ಇದನ್ನೂ ಓದಿ: ಮರ್ಯಾದೆ ಉಳಿಸಿಕೊಳ್ಳೋಕೆ ಸಿದ್ದರಾಮಯ್ಯ ಯಾವ ಕ್ಷೇತ್ರ ಕೊಟ್ರೂ ಓಕೆ ಅಂತಾರೆ – ಈಶ್ವರಪ್ಪ

    Live Tv
    [brid partner=56869869 player=32851 video=960834 autoplay=true]

  • ಗಡಿ ಜಿಲ್ಲೆಗಳ 1,800 ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ – ಬೊಮ್ಮಾಯಿ ಭರವಸೆ

    ಗಡಿ ಜಿಲ್ಲೆಗಳ 1,800 ಗ್ರಾಪಂ ಅಭಿವೃದ್ಧಿಗೆ ವಿಶೇಷ ಯೋಜನೆ – ಬೊಮ್ಮಾಯಿ ಭರವಸೆ

    ಬೆಳಗಾವಿ: ಕನ್ನಡಿಗರ ಅಭಿವೃದ್ಧಿ ಮತ್ತು ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದೆ. ಅದಕ್ಕಾಗಿ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳ 1,800 ಗ್ರಾಮ ಪಂಚಾಯತಿ (Gram Panchayat) ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಭರವಸೆ ನೀಡಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂಪನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ರಾಮದುರ್ಗ ತಾಲೂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಾಜು 671.28 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಇದನ್ನೂ ಓದಿ: ಐಪಿಎಲ್‍ಗೆ ನಿವೃತ್ತಿ ಘೋಷಿಸಿದ ಬ್ರಾವೋ – ಚೆನ್ನೈ ತಂಡದಲ್ಲಿ ಮುಂದುವರಿಕೆ

    ಸರ್ಕಾರ (Government) ಜನಪ್ರಿಯವಾದರೆ ಸಾಲದು, ಜನಪರವಾಗಬೇಕು. ಆಗ ಮಾತ್ರ ಕಟ್ಟಕಡೆಯ ಗ್ರಾಮಕ್ಕೂ ಅಭಿವೃದ್ಧಿ ಯೋಜನೆಗಳು ತಲುಪುತ್ತವೆ. ನಮ್ಮ ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿ ಹೆಸರಿನಲ್ಲಿ ಕೆಲಸ ಮಾಡುತ್ತಿವೆ. ಮಹಾರಾಷ್ಟ್ರ (Maharashtra), ತಮಿಳುನಾಡು (Tamil Nadu), ಗೋವಾ ಹಾಗೂ ತೆಲಂಗಾಣ ರಾಜ್ಯದ ಗಡಿಭಾಗದಲ್ಲಿರುವ ಜಿಲ್ಲೆಗಳಲ್ಲಿ 1,800 ಗ್ರಾಮ ಪಂಚಾಯತಿ ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಅದೇ ರೀತಿ ರಸ್ತೆಗಳ ಸುಧಾರಣೆಗೆ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜನಾರ್ದನ ರೆಡ್ಡಿ ಮೊಮ್ಮಗಳ ನಾಮಕರಣ ಸಮಾರಂಭದಲ್ಲಿ ಬಿಎಸ್‌ವೈ ಭಾಗಿ

    ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ:
    ನಮ್ಮ ಸರ್ಕಾರ ಗಡಿಭಾಗದ ಶಾಲೆಗಳ (Schools) ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಪ್ರಸಕ್ತ ವರ್ಷದಲ್ಲೇ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಿದೆ. ಗೋವಾದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಜೊತೆಗೆ ಸೊಲ್ಲಾಪುರ ಹಾಗೂ ಕಾಸರಗೂಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ 10 ಕೋಟಿ ರೂ. ಸಹ ನೀಡಲಿದೆ ಎಂದು ಭರವಸೆ ನೀಡಿದರು.

    ತಡೆಗೋಡೆ ನಿರ್ಮಾಣ- ಕೆರೆಗಳಿಗೆ ನೀರು:
    ರಾಮದುರ್ಗ ತಾಲ್ಲೂಕಿನ ಕೆಲ ಗ್ರಾಮಗಳು ಪದೇ ಪದೆ ಪ್ರವಾಹಕ್ಕೆ ಸಿಕ್ಕಿ ನಲುಗುತ್ತಿವೆ. ಆದ್ದರಿಂದ ಮಲಪ್ರಭಾ ನದಿತೀರದಲ್ಲಿ ತಡೆಗೋಡೆ ನಿರ್ಮಿಸಲು ಸರ್ಕಾರ ಮುಂದಾಗಿದೆ. ಏತ ನೀರಾವರಿಯಿಂದ ವಂಚಿತಗೊಂಡಿರುವ 19 ಗ್ರಾಮಗಳ ಕೆರೆ ತುಂಬಿಸುವ ಯೋಜನೆ ಜಾರಿಗೆ ತರಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಅವರು ನಿರಂತರ ಒತ್ತಡ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರ ಕಳಕಳಿಯನ್ನು ಅರಿತುಕೊಂಡು ಅವರ ಒತ್ತಾಯದಂತೆ 19 ಕೆರೆಗಳನ್ನು ತುಂಬಿಸುವ ಯೋಜನೆಗೆ ಕೂಡಲೇ ಡಿಪಿಆರ್ ತಯಾರಿಸಿ ಮುಂದಿನ ಬಜೆಟ್ ನಲ್ಲಿ ಅನುದಾನ ಮೀಸಲಿಡುತ್ತೇನೆ ಎಂದು ಸಿಎಂ ಘೋಷಿಸಿದರು.

    600 ಕೋಟಿ ಶಿಷ್ಯ ವೇತನ:
    ರಾಜ್ಯದ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 600 ಕೋಟಿ ರೂಪಾಯಿಗಿಂತಲೂ ಅಧಿಕ ಶಿಷ್ಯವೇತನವನ್ನು ರೈತನಿಧಿ ಯೋಜನೆ ಮೂಲಕ ಒದಗಿಸಲಾಗಿದೆ. ಇದೇ ರೀತಿ ಕೃಷಿ ಕೂಲಿಕಾರರು, ಮೀನುಗಾರರು, ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ ಎಂದರು.

    Live Tv
    [brid partner=56869869 player=32851 video=960834 autoplay=true]

  • ಮನೆ ಮಂಜೂರು ಮಾಡಲು 20 ಸಾವಿರ ಲಂಚ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ PDO

    ಮನೆ ಮಂಜೂರು ಮಾಡಲು 20 ಸಾವಿರ ಲಂಚ – ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ PDO

    ಹಾವೇರಿ: ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿಡಿಒ (PDO) ಲೋಕಾಯುಕ್ತ (Karnataka Lokayukta) ಬಲೆಗೆ ಬಿದ್ದಿರುವ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ.

    ಶಿಗ್ಗಾಂವಿ ತಾಲ್ಲೂಕಿನ ನಾರಾಯಣಪುರದ ಗ್ರಾಮ ಪಂಚಾಯಿತಿ ಪಿಡಿಒ (PDO) ಈರಣ್ಣ ಗಾಣಿಗಿ, ಪಂಚಾಯಿತಿ ವ್ಯಾಪ್ತಿಯ ಮುನವಳ್ಳಿ ಗ್ರಾಮದ ಸಂಗಪ್ಪ ಕಿವುಡನ ಅವರಿಂದ ಹಣ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಇದನ್ನೂ ಓದಿ: ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್‌’ ಸ್ಫೂರ್ತಿ – ರೋಚಕ ಸತ್ಯ ಬಯಲು

    ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಅತಿಯಾದ ಮಳೆಯಿಂದ (RainFall) ಸಂಗಪ್ಪ ಅವರ ಮನೆ ಹಾನಿಗೊಳಗಾಗಿತ್ತು. ಮನೆ ಹಾನಿಗೆ ಪರಿಹಾರ ನೀಡುವಂತೆ ಅರ್ಜಿ ಸಲ್ಲಿಸಿದ್ದ ಸಂಗಪ್ಪ ಅವರನ್ನು ಫಲಾನುಭವಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಮನೆ ನಿರ್ಮಾಣಕ್ಕೆ ವರ್ಕ್ ಆರ್ಡರ್ ನೀಡಲು ಒಟ್ಟು 50 ಸಾವಿರ ರೂ.ಗೆ ಬೇಡಿಕೆಯಿಟ್ಟಿದ್ದರು. ನವಂಬರ್ 10 ರಂದು ಮುಂಗಡ ಹಣವಾಗಿ 20 ಸಾವಿರ ರೂ. ಗಣ ಪಿಡಿಒ ಪಡೆದ್ದರು. ಇದನ್ನೂ ಓದಿ: ಕಾಮೋತ್ತೇಜಕ ಮಾತ್ರೆ ಸೇವಿಸಿ ರೇಪ್ – ವಿಪರೀತ ರಕ್ತಸ್ರಾವದಿಂದ ಗೆಳತಿ ಸಾವು

    ಇಂದು ಇನ್ನೂ 20 ಸಾವಿರ ಹಣ ಪಡೆಯುತ್ತಿದ್ದ ವೇಳೆ ಪಿಡಿಒ (PDO) ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹಾವೇರಿ ಲೋಕಾಯುಕ್ತ ಪೊಲೀಸರು (Lokayukta Police) ಪ್ರಕರಣ ದಾಖಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

    ಗ್ರಾಮ ಪಂಚಾಯ್ತಿ ಕಚೇರಿಯಲ್ಲೇ ಪಿಡಿಒಗೆ ಕಿಸ್ ಕೊಟ್ಟ ಸದಸ್ಯ!

    ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 48 ವರ್ಷಗಳ ಹಿಂದೆ ಹೀಗಿತ್ತು ನನ್ನ ರೆಸ್ಯೂಮ್ – ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬಿದ ಬಿಲ್‌ಗೇಟ್ಸ್

    ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಳವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

    Live Tv

  • ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

    ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

    ದಾವಣಗೆರೆ: ಗ್ರಾಮಗಳಲ್ಲಿ ನಾವು ದಲಿತರೆಂದು ಮನೆಯ ಒಳಗೆ ಸೇರಿಸುವುದಿಲ್ಲ ಎಂದು ಆಶಾ ಕಾರ್ಯಕರ್ತೆಯೊಬ್ಬರು ತಹಶೀಲ್ದಾರರ ಮುಂದೆ ಕಣ್ಣೀರು ಹಾಕಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗ್ರಾಪಂ ವ್ಯಾಪ್ತಿಯ ಕಾನನಕಟ್ಟೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮಗಳಲ್ಲಿ ಸಮೀಕ್ಷಾ ಕಾರ್ಯ ಮಾಡಲು ಪ್ರತಿ ಮನೆಗೆ ತೆರಳಿದರೆ ನಾವು ದಲಿತರೆನ್ನುವ ಕಾರಣಕ್ಕೆ ಒಳಗೆ ಪ್ರವೇಶ ನೀಡದೆ ಹೊರಗೇ ನಿಲ್ಲಿಸುತ್ತಾರೆ. ಹೀಗಿರುವಾಗ ಹೇಗೆ ಕೆಲಸ ಮಾಡಲಿ ಸರ್? ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: 819 ಕೋಟಿ ವಂಚಿಸಿದ್ರಾ ಮಾಜಿ ಸಚಿವ..? – ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಣ್ ಗಂಭೀರ ಆರೋಪ

    ಕಾನನಕಟ್ಟೆ ಗ್ರಾಮದ ಗ್ರಾಮಸ್ಥರು ನಿಗೂಢ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಪತಿ, ತಾಲೂಕು ಆರೋಗ್ಯಾಧಿಕಾರಿ ನಾಗರಾಜ್, ಆರೋಗ್ಯ ರಕ್ಷಾ ಸಮಿತಿ ಸದಸ್ಯ ಪೂಜಾರ ಸಿದ್ದಪ್ಪ ಕಾನನಕಟ್ಟೆಗೆ ಭೇಟಿ ನೀಡಿದ್ದರು. ಈ ವೇಳೆ ಆಶಾ ಕಾರ್ಯಕರ್ತೆ ತಮ್ಮ ನೋವು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಜರಿಗಾಗಿ ಸುನೀಲ್ ಶೆಟ್ಟಿ ಪುತ್ರಿ ಜೊತೆ ಜರ್ಮನಿಗೆ ಹಾರಿದ ಕ್ರಿಕೆಟಿಗ ಕೆ.ಎಲ್ ರಾಹುಲ್

    ಅಧಿಕಾರಿಗಳು ಕೆಲಸ ಮಾಡಿ ಎಂದು ಹೇಳುತ್ತಾರೆ. ಆದರೆ ನಾವು ಎಸ್ಸಿ ಜನಾಂಗದವರೆಂದು ಸವರ್ಣಿಯರು ಮನೆಯೊಳಗೆ ಪ್ರವೇಶ ನೀಡುತ್ತಿಲ್ಲ. ಇದರಿಂದ ನೀರು ಸಂಗ್ರಹಿಸುವ ತೊಟ್ಟಿಗಳನ್ನು ಪರಿಶೀಲನೆ ನಡೆಸಲು ಸಾಧ್ಯವಿಲ್ಲ. ಸಮೀಕ್ಷೆ ಮಾಡಿ ವರದಿ ನೀಡಲೂ ಸಾಧ್ಯವಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಬಳಿಕ ತಾಪಂ ಇಓ ಲಕ್ಷ್ಮೀಪತಿ ಸಮಾಧಾನಪಡಿಸಿ ಸಮೀಕ್ಷೆ ಕಾರ್ಯ ನಡೆಸುವಂತೆ ಸಲಹೆ ನೀಡಿದ್ದಾರೆ.

    Live Tv

  • ನಾನು ಇಬ್ಬರನ್ನೂ ಬಿಡಲ್ಲ, I Love You – 2 ಅಂತ ಗೆಳತಿಯರನ್ನ ಒಟ್ಟಿಗೇ ಮದ್ವೆಯಾದ ಭೂಪ

    ನಾನು ಇಬ್ಬರನ್ನೂ ಬಿಡಲ್ಲ, I Love You – 2 ಅಂತ ಗೆಳತಿಯರನ್ನ ಒಟ್ಟಿಗೇ ಮದ್ವೆಯಾದ ಭೂಪ

    ರಾಂಚಿ: ನಾನು ಇಬ್ಬರನ್ನೂ ಪ್ರೀತಿಸುತ್ತೇನೆ ಎಂದು ಏಕಕಾಲದಲ್ಲಿ ಇಬ್ಬರು ಗೆಳತಿಯರನ್ನು ವಿವಾಹವಾಗಿರುವ ಘಟನೆ ಜಾರ್ಖಂಡ್‌ನ ಲೋಹರ್ದಗಾ ಎಂಬ ಹಳ್ಳಿಯಲ್ಲಿ ನಡೆದಿದೆ.

    ಕುಸುಮ್ ಲಾಕ್ರಾ ಮತ್ತು ಸ್ವಾತಿ ಕುಮಾರಿ ಇಬ್ಬರೂ ಮಹಿಳೆಯರು ವರ ಸಂದೀಪ್ ಓರಾನ್ ನನ್ನು ಪ್ರೀತಿಸುತ್ತಿದ್ದರು. ಇಂದು ಪರಸ್ಪರ ಒಪ್ಪಿ ಮದುವೆಯಾಗಿದ್ದಾರೆ. ಒಟ್ಟಿಗೆ ಮದುವೆಯಾಗಲು ಕಾನೂನು ಸಮಸ್ಯೆ ಇರಬಹುದು. ಆದರೆ ನಾನು ಇಬ್ಬರನ್ನೂ ಪ್ರೀತಿಸುತ್ತೇನೆ. ಇಬ್ಬರನ್ನೂ ಬಿಡಲು ಸಾಧ್ಯವಿಲ್ಲ ಎಂದು ನವ ವಿವಾಹಿತ ಸಂದೀಪ್ ಹೇಳಿದ್ದಾರೆ. ಇದನ್ನೂ ಓದಿ: ಹೊಸತನದ ಪ್ರಯೋಗದೊಂದಿಗೆ ಹರಿಕಥೆ ಅಲ್ಲ ಗಿರಿಕಥೆ ಎಂಟ್ರಿಗೆ ತಯಾರಿ..!

    ಏನಿದು ಟು-ಇನ್-ಒನ್ ಲವ್‌ಸ್ಟೋರಿ?
    ಸಂದೀಪ್ ಹಾಗೂ ಕುಸುಮ್ ಲಾಕ್ರಾ ಕಳೆದ ಮೂರು ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಾ ಲಿವ್‌ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಅವರಿಬ್ಬರಿಗೂ ಒಂದು ಗಂಡು ಮಗು ಸಹ ಇದೆ. ಈ ನಡುವೆ ಸಂದೀಪ್ ಪಶ್ಚಿಮ ಬಂಗಾಳದ ಇಟ್ಟಿಗೆ ಗೂಡು ಕೆಲಸಕ್ಕೆ ಹೋದಾಗ ಅಲ್ಲಿಯೇ ಕೆಲಸಕ್ಕೆ ಬಂದಿದ್ದ ಸ್ವಾತಿ ಕುಮಾರಿಯನ್ನು ಭೇಟಿಯಾದರು. ಮನೆಗೆ ಹಿಂದಿರುಗಿದ ನಂತರವೂ ಇಬ್ಬರೂ ಭೇಟಿಯಾಗುವುದನ್ನು ಮುಂದುವರಿಸಿದರು. ಇದನ್ನೂ ಓದಿ: 28 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗೆ ಮೋದಿ ಶಂಕು – ವಿಕಾಸವಾದದ ಮಂತ್ರ ಪಠಿಸಿದ ನಮೋ

    ಕೊನೆಗೆ ಇವರಿಬ್ಬರ ಸಂಬಂಧ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ವಿರೋಧಿಸಿದರು. ಪ್ರತಿದಿನ ಒಂದಿಲ್ಲೊಂದು ಜಗಳವಾಗುತ್ತಲೇ ಇತ್ತು. ಈ ಸಂಬಂಧ ನ್ಯಾಯ ತೀರ್ಮಾನಿಸಲು ಗ್ರಾಮಸ್ಥರು ಗ್ರಾಮಪಂಚಾಯ್ತಿಗೆ ಸೇರಿಸಿದ್ದರು. ಈ ವೇಳೆ ಸಂದೀಪ್ ತಾನು ಇಬ್ಬರನ್ನೂ ಮದುವೆಯಾಗುವುದಾಗಿ ಹೇಳಿದ್ದಾನೆ. ಮೂವರು ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ.

    Live Tv

  • ಉಡುಪಿಯಲ್ಲಿ ದಲಿತ್ Vs ಎಸ್‌ಡಿಪಿಐ ಜಟಾಪಟಿ

    ಉಡುಪಿಯಲ್ಲಿ ದಲಿತ್ Vs ಎಸ್‌ಡಿಪಿಐ ಜಟಾಪಟಿ

    ಉಡುಪಿ: ದಲಿತ ಸಮುದಾಯಕ್ಕೆ ಸೇರಿದ ಆರಾಧನಾ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಮುಸ್ಲಿಂ ಸಮುದಾಯದವರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ದಲಿತ್ ವರ್ಸಸ್ SDPI ಜಟಾಪಟಿ ನಡೆಯುತ್ತಿದೆ.

    2

    ದಲಿತ ಸಮುದಾಯಕ್ಕೆ ಸೇರಿದ ಆರಾಧನಾ ಕ್ಷೇತ್ರವಾದ ಬಬ್ಬುಸ್ವಾಮಿ ಮೂಲ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಸರ್ಕಾರಿ ಸ್ಥಳ ಮತ್ತು ರಸ್ತೆ ಸಂಚಾರಕ್ಕೆ ಅಡ್ಡಿಯಾಗುತ್ತದೆ ಎಂಬ ನೆಪವೊಡ್ಡಿ ಮುಸ್ಲಿಂ ಸಮುದಾಯದವರು ತಡೆಯೊಡ್ಡಿದ್ದಾರೆ. ಕಂಚಿನಡ್ಕ ಕ್ಷೇತ್ರಕ್ಕೆ ಮೇಲ್ಚಾವಣಿ ಅಳವಡಿಸಲು ವಿರೋಧ ವ್ಯಕ್ತಪಿಸಿದ್ದಾರೆ. ಇದರಿಂದಾಗಿ ನೂರಾರು ದಲಿತ ಕಾರ್ಯಕರ್ತರು ಎಸ್‌ಡಿಪಿಐಗೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    UDP

    ತುಳುನಾಡಿನ ಕಾರಣಿಕದ ಬಬ್ಬುಸ್ವಾಮಿ ಕ್ಷೇತ್ರಕ್ಕೆ ಕಬ್ಬಿಣದ ಚಪ್ಪರ ಅಳವಡಿಸಿದರೆ ವಾಹನ ಸಂಚಾರಕ್ಕೆ ತೊಡಕಾಗುತ್ತದೆ ಎಂದು ಮುಸ್ಲಿಂ ಸಮುದಾಯದ ಜನರು ಅಡ್ಡಿಪಡಿಸಿದ್ದಾರೆ. ಇಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಎಸ್‌ಡಿಪಿಐ ಸಂಘಟನೆ ಸಹ ಇದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇದರಿಂದ ಬೇಸತ್ತ ದಲಿತ ಮುಖಂಡರು ಪಕ್ಷದಿಂದ ಹೊರಬಂದಿದ್ದಾರೆ. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಹಿಂದೂ ಸಂಘಟನೆಗಳು ಮೇಲ್ಛಾವಣಿ ಅಳವಡಿಸಲು ಬಿಜೆಪಿ ಅಧಿಕಾರದಲ್ಲಿರುವ ಪಡುಬಿದ್ರಿ ಗ್ರಾಮ ಪಂಚಾಯಿತಿಗೆ ಒಂದು ವಾರದ ಗಡುವು ನೀಡಿವೆ. ಈ ಪ್ರಕರಣವನ್ನು ಇತ್ಯರ್ಥಗೊಳಿಸದೇ ಇದ್ದರೆ ದೊಡ್ಡ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

  • ಕುಸಿದು ಬಿದ್ದ ಮನೆ ಗೋಡೆ- ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

    ಕುಸಿದು ಬಿದ್ದ ಮನೆ ಗೋಡೆ- ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ

    ಶಿವಮೊಗ್ಗ: ಸತತವಾಗಿ ಸುರಿಯುತ್ತಿರುವ ಅಕಾಲಿಕ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿದೆ. ಈ ಘಟನೆ ತಾಲೂಕಿನ ಕೂಡಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ನಡೆದಿದೆ. ಪಾರ್ವತಮ್ಮ ಅವರಿಗೆ ಸೇರಿದ ಮನೆಯೇ ಕುಸಿದು ಬಿದ್ದಿದೆ.

    ಮುಂಜಾನೆ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರಿದ್ದರು. ಈ ವೇಳೆ ಮಣೆ ಗೋಡೆ ಕುಸಿದು ಬಿದ್ದಿದೆ. ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಮನೆ ಬಿದ್ದು ಕುಟುಂಬಸ್ಥರು ಅತಂತ್ರರಾಗಿದ್ದರೂ ಸ್ಥಳಕ್ಕೆ ಇಲ್ಲಿಯವರೆಗೂ ಯಾವುದೇ ಅಧಿಕಾರಿಗಳಾಗಲಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಆಗಲಿ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದನ್ನೂ ಓದಿ: ಹೆಸರುವಾಸಿಯಾಗಿದ್ದ ಕೇರಳದ ಟೀ ಮಾರಾಟಗಾರ ನಿಧನ

    ಸಂತ್ರಸ್ಥ ಕುಟುಂಬಕ್ಕೆ ಗ್ರಾಮದ ಸಮುದಾಯ ಭವನದಲ್ಲಿ ಆಶ್ರಯ ಕಲ್ಪಿಸಲಾಗಿದೆ. ಸಂತ್ರಸ್ಥ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಾತ್ ಟಬ್‍ನಲ್ಲಿ ಕುಳಿತು ಹಾಟ್ ಪೋಸ್ ಕೊಟ್ಟ ಹೀನಾ ಖಾನ್

  • ಬಲಾಢ್ಯರಿಂದ ಕಂದಾಯ ವಸೂಲಿ ಯಾಕಿಲ್ಲ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ಫುಲ್ ಕ್ಲಾಸ್

    ಬಲಾಢ್ಯರಿಂದ ಕಂದಾಯ ವಸೂಲಿ ಯಾಕಿಲ್ಲ: ಅಧಿಕಾರಿಗಳಿಗೆ ಸಾರ್ವಜನಿಕರಿಂದ ಫುಲ್ ಕ್ಲಾಸ್

    ನೆಲಮಂಗಲ: ಗ್ರಾಮ ಪಂಚಾಯತಿ ಅಧಿಕಾರಿಗಳಿಂದ, ಕಂದಾಯ ವಸೂಲಾತಿಯಲ್ಲಿ ತಾರತಮ್ಯ ನಡೆಯುತ್ತಿದೆ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ತಾಲೂಕಿನ ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.

    ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಇಂದು ಅಧಿಕಾರಿಗಳು ಗ್ರಾಮಸಭೆ ಅಯೋಜಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸಭೆಯಲ್ಲಿ ಭಾಗವಹಿಸಿ, ಕಂದಾಯ ವಸೂಲಾತಿಯಲ್ಲಿ ಆಗುತ್ತಿರುವ ತಾರತಮ್ಯದ ಕುರಿತು ಅಧಿಕಾರಿಗಳನ್ನು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ಪ್ರಶ್ನೆಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ಆಪ್ತರಿಗೆ ಸರ್ಕಾರದಲ್ಲಿ ಮಣೆ – ರೇಣುಕಾಚಾರ್ಯ, ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ಮರು ನೇಮಕ

    ಕಳೆದ 5 ವರ್ಷದಿಂದ ಕಾರ್ಖಾನೆಗಳ ಕಂದಾಯ ಬಾಕಿ ಇದೆ. ಬಡವರ ಕಂದಾಯ ಬಾಕಿಯಿದ್ದರೆ ಕಟ್ಟುವಂತೆ ಒತ್ತಾಯ ಮಾಡುತ್ತಿರಿ ಬಲಾಢ್ಯರಿಂದ ಕಂದಾಯ ವಸೂಲಿ ಮಾತ್ರ ಯಾಕೆ ಮಾಡಲ್ಲ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಅಲ್ಲದೆ ಈ ವೇಳೆ ಅಧಿಕಾರಿಯಿಂದ ಮೈಕ್ ಕಿತ್ತು ಆಕ್ರೋಶ ಹೊರಹಾಕಿದ್ದಾರೆ. 50 ಸಾವಿರ ಕಂದಾಯ ಕಟ್ಟುವ ಕಂಪನಿಯಿಂದ ಕಂದಾಯ ವಸೂಲಿ ಮಾಡಿಲ್ಲ. ಬಡವರ ಮನೆ ಮುಂದೆ ಬಂದು ಹಣ ಕಟ್ಟುವಂತೆ ಹಿಂಸೆ ಕೊಡುತ್ತಿರಿ ಎಂದು ಪಿಡಿಓ ಅಧಿಕಾರಿ ಪ್ರಶಾಂತ್‍ಗೆ ಗ್ರಾಮಸ್ಥರು ಚಳಿ ಬಿಡಿಸಿದ್ದಾರೆ.  ಇದನ್ನೂ ಓದಿ: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ- ಮಗಳ ಸಾವಿನ ಬಗ್ಗೆ ಅನುಮಾನ ಇದೆ ಎಂದ ತಂದೆ

    ಗ್ರಾಮಸ್ಥರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಪಂಚಾಯತಿಯಿಂದ ಸಮರ್ಪಕವಾಗಿ ಗ್ರಾಮಗಳ ಅಭಿವೃದ್ಧಿ ಮಾಡುತ್ತಿಲ್ಲ. ನಾನಾ ಸಮಸ್ಯೆಗಳನ್ನ ಜನರು ಎದುರಿಸುತಿದ್ದು ಕೂಡಲೇ ಸಮಸ್ಯೆ ಬಗೆಹರಿಸುವಂತೆ ಜನರು ಸಭೆಯಲ್ಲಿ ಆಗ್ರಹಿಸಿದ್ದಾರೆ.

  • ಮುಂದಿನ 6 ತಿಂಗಳಲ್ಲಿ 330 ಗ್ರಾ.ಪಂಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕು: ಈಶ್ವರಪ್ಪ ಸೂಚನೆ

    ಮುಂದಿನ 6 ತಿಂಗಳಲ್ಲಿ 330 ಗ್ರಾ.ಪಂಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕು: ಈಶ್ವರಪ್ಪ ಸೂಚನೆ

    ತುಮಕೂರು: ಜಿಲ್ಲೆಯಲ್ಲಿ ಮುಂದಿನ 6 ತಿಂಗಳೊಳಗಾಗಿ ಎಲ್ಲಾ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಎಸ್.ಐ.ಟಿ ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೈಸೂರಿನ ಅಬ್ದುಲ್ ನಜೀರ್ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಹೊಸದಾಗಿ ಆಯ್ಕೆಯಾಗಿರುವ ಗ್ರಾಮಪಂಚಾಯತಿ ಅಧ್ಯಕ್ಷರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುವುದರೊಂದಿಗೆ ತ್ಯಾಜ್ಯ ನಿರ್ವಹಣೆ ಮಾಡಲು ಸೂಕ್ತ ಕಟ್ಟಡವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ

    ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಗ್ರಾಮಗಳ ಅಭಿವೃದ್ಧಿಗೆ ಸಿಕ್ಕಿರುವ 5 ವರ್ಷಗಳ ಅಧಿಕಾರಾವಕಾಶವನ್ನು ಬಳಸಿಕೊಳ್ಳಬೇಕು. ಉತ್ತಮ ಕೆಲಸವನ್ನು ಮಾಡುವುದರ ಮೂಲಕ ನಂಬಿಕೆ ಇಟ್ಟು ಗೆಲ್ಲಿಸಿರುವ ಜನರ ಋಣವನ್ನು ತೀರಿಸಬೇಕು. ಪ್ರತಿ ದಿನ ಗ್ರಾಮಪಂಚಾಯತಿ ಕಚೇರಿಗೆ ಭೇಟಿ ನೀಡಿ, ಪಂಚಾಯತಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಜನರ ವಿಶ್ವಾಸವನ್ನು ತೆಗೆದುಕೊಂಡು ಪರಿಹರಿಸಬೇಕು ಎಂದು ಗ್ರಾ.ಪಂ. ಅಧ್ಯಕ್ಷರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಬದಲಾಗಿದ್ದೇವೆ ಅಂತಲೇ ತಾಲಿಬಾನ್ ಹಿಂಸಾಚಾರ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, ಇಬ್ಬರು ಬಲಿ

    ದೇಶದ ಯಾವುದೇ ಉದ್ಯೋಗ ರಹಿತ ಪ್ರಜೆ ಉಪವಾಸವಿರಬಾರದೆಂದು ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಬಡವರಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು. ನರೇಗಾ ಯೋಜನೆಯಡಿ ಅಂಗನವಾಡಿ ದುರಸ್ಥಿಯಲ್ಲದೆ ಶಾಲಾ ಕಟ್ಟಡ ದುರಸ್ಥಿಗೂ ಅವಕಾಶ ಮಾಡಿಕೊಡಲಾಗುವುದು. ನರೇಗಾ ಯೋಜನೆಯಡಿ ಕೇಂದ್ರದಿಂದ 13 ಕೋಟಿ ಮಾನವ ದಿನಗಳನ್ನು ಸೃಜಿಸಲು ಗುರಿ ನೀಡಲಾಗಿತ್ತು. ಗುರಿ ಮೀರಿದ ಸಾಧನೆಗಾಗಿ ಪ್ರಧಾನ ಮಂತ್ರಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆ

    ನರೇಗಾ ಯೋಜನೆಯಡಿ ಪ್ರತಿಯೊಬ್ಬರಿಗೂ ಕೆಲಸ ನಿರ್ವಹಿಸುವ ಅವಕಾಶವಿದ್ದು, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು. ಕಲ್ಯಾಣಿ, ಗೋಕಟ್ಟೆ, ಕೊಳವೆ ಬಾವಿಗೆ ಮರುಪೂರಣ ಗುಂಡಿ, ಕೃಷಿ ಹೊಂಡ, ಕೆರೆಗಳ ಹೂಳೆತ್ತುವುದು ಸೇರಿದಂತೆ ಅನೇಕ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆರೆ-ಕಟ್ಟೆ, ಕಲ್ಯಾಣಿಗಳು ಒತ್ತುವರಿಯಾಗದಂತೆ ಕ್ರಮವಹಿಸುವುದು ಪ್ರತೀ ಸದಸ್ಯನ ಹೊಣೆಗಾರಿಕೆಯಾಗಿದೆ ಎಂದರು. ಇದನ್ನೂ ಓದಿ: ತಾಲಿಬಾನಿಗಳಿಗೆ ಸಂಸದ ಬರ್ಖ್, ಓವೈಸಿ ಸಪೋರ್ಟ್ – ಸ್ವಾತಂತ್ರ್ಯ ಹೋರಾಟಗಾರರಿಗೆ ಉಗ್ರರ ಹೋಲಿಕೆ

    ಪ್ರತಿ ಹಳ್ಳಿಗಳಲ್ಲು ಬಯಲು ಶೌಚಾಲಯ ಮುಕ್ತಗೊಳಿಸಲು ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯ್ತಿಯ ಸದಸ್ಯರು, ಪಿಡಿಓಗಳು ಜನರಲ್ಲಿ ಅರಿವು ಮೂಡಿಸಬೇಕು. ವಿಶೇಷ ಘಟಕ ಯೋಜನೆಯಡಿ ಎಸ್.ಸಿ., ಎಸ್.ಟಿ ಸಮುದಾಯಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ನೀಡಲಾಗುತ್ತಿದ್ದ 15 ಸಾವಿರ ರೂ.ಗಳ ಸಹಾಯಧನವನ್ನು 20 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಪಕ್ಷಬೇಧ ಮರೆತು ತಮ್ಮ ಗ್ರಾಮದ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಗ್ರಾಮಪಂಚಾಯತಿಗಳಲ್ಲಿ ಪ್ರತಿವರ್ಷ ಹೊಸ ಯೋಜನೆಗಳನ್ನು ರೂಪಿಸಿ ಜನಪರ ಕೆಲಸಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.  

    ಕ.ರಾ.ವಿ.ಯೋ.ಅ.ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಉಡುಪಿ ಜಿ.ಪಂ. ಯೋಜನಾಧಿಕಾರಿ ಶ್ರೀನಿವಾಸರಾವ್, ಪರಿಸರವಾದಿ ಶಿವಾನಂದ ಕಳವೆ, ಗ್ರಾಮಪಂಚಾಯತಿ ಆಯುಕ್ತಾಲಯದ ನಿರ್ದೇಶಕ ಯಾಲಕ್ಕಿಗೌಡ ಮಾತನಾಡಿದರು.ಕಾರ್ಯಾಗಾರಕ್ಕೆ ಗೈರು ಹಾಜರಾಗಿದ್ದ ಮಧುಗಿರಿ ತಾಲ್ಲೂಕು ಚಂದ್ರಗಿರಿ ಗ್ರಾ.ಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತ್ತು ಮಾಡಲು ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಅವರಿಗೆ ನಿರ್ದೇಶನ ನೀಡಿದರು.