ಹಾಸನ: ವಿವಿಧ ಯೋಜನೆಯಲ್ಲಿ 1.49 ಕೋಟಿ ಹಣ ದುರುಪಯೋಗಪಡಿಸಿಕೊಂಡ ಆರೋಪದಡಿ ಹಾಸನ (Hassan) ಜಿಲ್ಲೆ ಅರಕಲಗೂಡು (Arakalgud) ತಾಲೂಕಿನ ಕೊಣನೂರು (Konanur) ಗ್ರಾಮ ಪಂಚಾಯ್ತಿ ಕಾರ್ಯದರ್ಶಿಯನ್ನು ಅಮಾನತುಗೊಳಿಸಲಾಗಿದೆ.
ಬಿಎನ್ ಭುವನ್ ಅಮಾನತಾದ ಕಾರ್ಯದರ್ಶಿ. ಕೊಣನೂರು ಗ್ರಾ.ಪಂ. ಜೊತೆಗೆ ಗಂಗೂರು ಗ್ರಾ.ಪಂ. ಪ್ರಭಾರ ಕಾರ್ಯದರ್ಶಿಯಾಗಿದ್ದ (Gram Panchayat Secretary) ಬಿ.ಎನ್.ಭುವನ್ ಹದಿನೈದನೇ ಹಣಕಾಸು, ಗ್ರಾಮ ಪಂಚಾಯಿತಿ ಸ್ವಂತ ಸಂಪನ್ಮೂಲ, ಸಿಬ್ಬಂದಿ ವೇತನ ಖಾತೆ, ಗ್ರಾಮ ವಿಕಾಸ ಯೋಜನೆಯಲ್ಲಿ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಮುಡಾ ಕೇಸಲ್ಲಿ ಸಚಿವರಿಬ್ಬರ ಪಾತ್ರ ಇದ್ಯಾ? – ಮುಂದಿನ ವಾರವೇ ಸಿಎಂಗೆ ಇಡಿ ಸಮನ್ಸಾ?
ನಿಯಮಬಾಹಿರವಾಗಿ 1.49 ಕೋಟಿ ಹಣ ದುರುಪಯೋಗ ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಇಲಾಖಾ ವಿಚಾರಣೆ ಕಾಯ್ದಿರಿಸಿ ಜಿಲ್ಲಾ ಪಂಚಾಯತ್ ಸಿಇಒ ಬಿಆರ್ ಪೂರ್ಣಿಮಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸರ್ಕಾರದ ಹಣ ದುರುಪಯೋಗ ಮಾಡಿದ ಪ್ರಕರಣಗಳಲ್ಲಿ ನಿಯಮಾನುಸಾರ ಶಿಸ್ತುಕ್ರಮ ಜರುಗಿಸಲು ಕ್ರಮವಹಿಸುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ 900 ಕೋಟಿ ಮೌಲ್ಯದ ಕೊಕೇನ್ ವಶ – ಇಬ್ಬರು ಅರೆಸ್ಟ್
ಶಿವಮೊಗ್ಗ: 33 ವರ್ಷದ ವ್ಯಕ್ತಿ 16 ವರ್ಷದ ಅಪ್ರಾಪ್ತೆಯೊಂದಿಗೆ ವಿವಾಹವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಯಲ್ಲದಕೋಣೆ ಗ್ರಾಮದಲ್ಲಿ ನಡೆದಿದ್ದು, ಬಾಲ್ಯ ವಿವಾಹ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಫೆ.27 ರಂದು ಯಲ್ಲದಕೋಣೆ ಗ್ರಾಮದ ರಮೇಶ್ (33) ಹಾಗೂ ಬಳ್ಳಾರಿ ಜಿಲ್ಲೆಯ ಕೆ.ಕರ್ನಾರ್ ಹಟ್ಟಿಯ 16 ವರ್ಷದ ಬಾಲಕಿ ಜೊತೆ ವಿವಾಹ ನಡೆದಿದೆ. ವಧು ಅಪ್ರಾಪ್ತೆ ಎಂದು ತಿಳಿದಿದ್ದರೂ, ಗ್ರಾಮದ ರಾಘವೇಂದ್ರ, ಪ್ರವೀಣ್, ಅನಿಲ್, ಶ್ರೀಧರ್ ಹಾಗೂ ಗ್ರಾಮ ಪಂಚಾಯ್ತಿ ಸದಸ್ಯೆ ಶ್ವೇತಾ ಶಿವಾನಂದ್ ನೇತೃತ್ವದಲ್ಲಿ ಬಾಲ್ಯ ವಿವಾಹ ನೆರವೇರಿದೆ ಎಂಬ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ನೇಪಾಳದ ಪ್ರಧಾನಿಗೆ ವಿಶಿಷ್ಟ ಉಡುಗೊರೆ ನೀಡಿದ ಪ್ರಧಾನಿ ಮೋದಿ
ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯಪಾಲರೂ ಸೇರಿದಂತೆ ಪ್ರತಿಪಕ್ಷದ ನಾಯಕರು ಘಟನೆಯನ್ನೇ ಪ್ರಮುಖವಾಗಿಟ್ಟುಕೊಂಡು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸುತ್ತಿದ್ದಾರೆ.
ಈ ನಡುವೆ ಬೀರ್ಭುಮ್ ಗ್ರಾಮಕ್ಕೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು ಹಿಂಸಾಚಾರ ನಡೆದ ಸ್ಥಳವನ್ನು ಪರಿಶೀಲಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಹಾನಿಗೊಳಗಾದ ಮನೆಗಳ ದುರಸ್ತಿಗೆ 2 ಲಕ್ಷ ರೂ. ಹಾಗೂ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶ ನೀಡುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ 10 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದಾರೆ. ಅಲ್ಲದೆ ಬೆಂಕಿ ಅನಾಹುತದಿಂದ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂ., ತೀವ್ರ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸ್ಥಳೀಯರು ನೀಡಿದ ದೂರಿನ ಮೇರೆಗೆ ರಾಮ್‍ಪುರಹತ್ ಬ್ಲಾಕ್-1 ಅಧ್ಯಕ್ಷ ಅನಾರುಲ್ ಶೇಖ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಆರೋಪಿಸುತ್ತಿರುವುದು ಇಲ್ಲಿನ ರಾಜಕೀಯ ಹಿನ್ನಡೆ. ಹಿಂಸಾಚಾರ ಹಾಗೂ ಕಾನೂನು ಬಾಹೀರತೆಗೆ ಅವಕಾಶ ನೀಡಿದಂತಾಗುತ್ತಿದೆ. ಈ ಘಟನೆಯ ಹಿಂದೆ ದೊಡ್ಡ ಶಕ್ತಿಯಿದೆ ಎಂಬುದು ಇದರಿಂದ ಗೋಚರವಾಗುತ್ತದೆ ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ
ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ಸುತ್ತುವರಿದಿದ್ದ ಗ್ರಾಮಸ್ಥರು, ನಮ್ಮ ದೂರುಗಳಿಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ಹಿಂಸಾಚಾರ ಘಟನೆ ನಡೆದಿದ್ದು, ಒಂದು ದಿನದ ನಂತರ ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯ ನಂತರ ಅನೇಕರು ಹಿಂಸಾಚಾರಕ್ಕೆ ಹೆದರಿ ಗ್ರಾಮ ತೊರೆದಿದ್ದಾರೆ. ಈ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಹತ್ಯೆ ಹಾಗೂ ಗ್ರಾಮಸ್ಥರ ಹತ್ಯೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಈಗಾಗಲೇ ಸುಮಾರು 20 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ನ್ಯಾಯಾಂಗಕ್ಕೆ ತರಲು ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇಂತಹ ಘೋರ ಅಪರಾಧ ಎಸಗಿದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿದೆ ಎಂದು ನಾನುಭಾವಿಸುತ್ತೇನೆ. ಇಂತಹ ಅಪರಾಧ, ಅಪರಾಧಿಗಳನ್ನು ಎಂದಿಗೂ ಕ್ಷಮಿಸಬೇಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಇದು ಬಿಜೆಪಿ ನಮ್ಮ ಸರ್ಕಾರದ ಮಾನಹಾನಿಗಾಗಿ ಮಾಡಿರುವ ಪಿತೂರಿ. ಬಿರ್ಭೂಮ್ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಅವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್
ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.
ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು
ಧಾರವಾಡ: ಮದುವೆ ನಿಶ್ಚಯವಾಗಿದ್ದ ಯುವತಿಗೆ ಗ್ರಾಮ ಪಂಚಾಯತಿ ಸದಸ್ಯನೋರ್ವ ಕಿರುಕುಳ ನೀಡಿದ್ದನು. ಈ ಹಿನ್ನೆಲೆ ಯುವತಿ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಬೊಗೂರ ಗ್ರಾಮದಲ್ಲಿ ನಡೆದಿದೆ.
ಸರಸ್ವತಿ ಅಜ್ಜನರ(20) ಆತ್ಮಹತ್ಯೆಗೆ ಯತ್ನಿಸಿದ ಯುವತಿ. ಮಲ್ಲಪ್ಪ ಮಾಳವಾಡ ಕಿರುಕುಳ ಕೊಟ್ಟ ಗ್ರಾಮ ಪಂಚಾಯ್ತಿ ಸದಸ್ಯನಾಗಿದ್ದು, ಮುಂದಿನ ಒಂದು ತಿಂಗಳಲ್ಲಿ ಸರಸ್ವತಿ ಮದುವೆ ನಡೆಯಬೇಕಿತ್ತು. ಆದರೆ ತನ್ನನ್ನು ಮದುವೆಯಾಗುವಂತೆ ಗ್ರಾಪಂ ಮಲ್ಲಪ್ಪ, ಸರಸ್ವತಿಗೆ ಕಿರುಕುಳ ನೀಡುತ್ತಿದ್ದ. ಇದನ್ನೂ ಓದಿ: ನರಬಲಿಗಾಗಿ 7 ವರ್ಷದ ಕಂದಮ್ಮ ಅಪಹರಣ – ಇಬ್ಬರು ಅರೆಸ್ಟ್
ಕಿರುಕುಳದಿಂದ ಬೇಸತ್ತ ಸರಸ್ವತಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪ್ರಸ್ತುತ ಯುವತಿಯನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಯುವತಿಯ ಸ್ಥಿತಿ ಚಿಂತಾಜನಕವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬದವರು ನಿರ್ಧಾರ ಮಾಡಿದ್ದಾರೆ.
ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹೆಣ್ಮಕ್ಕಳು ಕೆಲಸ ಮಾಡದಿರೋ ಕ್ಷೇತ್ರವೇ ಇಲ್ಲ. ಪುರುಷರಿಗಿಂತ ನಾವೇನ್ ಕಮ್ಮಿ ಇಲ್ಲ ಅಂತಾ ಸಾಬೀತು ಮಾಡಿ ತೋರ್ಸಿತ್ತಿದ್ದಾರೆ. ಆದರೆ ಇಲ್ಲೊಬ್ಬ ಆಸಾಮಿ ಹೆಂಡ್ತಿ ಅಧಿಕಾರ ದುರುಪಯೋಗಿಸಿಕೊಂಡು ಅಂಧಾದರ್ಬಾರ್ ಮಾಡ್ತಿದ್ದಾನೆ.
ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬಿದರೆಕೆರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪ ಮಹಿಳಾ ಮೀಸಲು ಕ್ಷೇತ್ರದಿಂದ ಗೆದ್ದು ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಹೆಸರಿಗೆ ಮಾತ್ರ ಪುಷ್ಪಾ ಅಧ್ಯಕ್ಷೆ. ಆದರೆ ಅಧಿಕಾರ ಎಲ್ಲಾ ಆಕೆಯ ಪತಿ ಸಚಿನ್‍ರದ್ದೇ. ಗ್ರಾ.ಪಂಚಾಯ್ತಿಯ ಎಲ್ಲಾ ಸಭೆ ಸಮಾರಂಭಗಳಲ್ಲಿ ಈತ ಹೇಳಿದ್ದೇ ವೇದವಾಕ್ಯ. ಮನೆ ಮಂಜೂರು, ಕಾಮಗಾರಿ ವಿಚಾರದಲ್ಲೂ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ತಾರಂತೆ. ಹೀಗಾಗಿ ಅಘೋಷಿತ ಅಧ್ಯಕ್ಷ ಸಚಿನ್ ವಿರುದ್ಧ ಗ್ರಾಮಸ್ಥರು ಕೆಂಡಾಮಂಡಲರಾಗಿದ್ದಾರೆ.
ಸಚಿನ್ ಅಂಧಾದರ್ಬಾರ್ ಬಗ್ಗೆ ಜಿ.ಪಂ ಸಿಇಒ, ಡಿಸಿ ಗಮನಕ್ಕೂ ತಂದ್ರೂ ಯಾವುದೇ ಪ್ರಯೋಜನವಾಗಿಲ್ಲ. ಬಿಜೆಪಿ ಶಾಸಕ ಚಂದ್ರಪ್ಪನ ಬೆಂಬಲಿಗ ಅಂತಾ ಅಹಂಕಾರದಲ್ಲಿ ಮೆರೆಯುತ್ತಿದ್ದಾರಂತೆ. ಹೀಗಾಗಿ ಸಚಿನ್ ವರ್ತನೆಯನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ಅಷ್ಟೇ ಅಲ್ಲದೆ ಸಚಿನ್ ದೌರ್ಜನ್ಯಕ್ಕೆ ಬ್ರೇಕ್ ಹಾಕ್ಬೇಕು, ಇಲ್ಲದಿದ್ರೆ ಪುಷ್ಪಾ ಸದಸ್ಯತ್ವ ರದ್ದು ಮಾಡ್ಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಮಾತ್ರವಲ್ಲ, ಬೆಂಗ್ಳೂರಲ್ಲೂ ಅನ್ಯಭಾಷಿಕರ ದರ್ಬಾರ್ – ಪಬ್‍ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆ ಯತ್ನ
ಒಟ್ಟಿನಲ್ಲಿ ಪತ್ನಿಯ ಅಧಿಕಾರ ದುರ್ಬಳಕೆ ಮಾಡಿಕೊಳ್ತಿರೋ ಸಚಿನ್ ವರ್ತನೆ ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ಆದಷ್ಟು ಬೇಗ ಅಂಧಾದರ್ಬಾರ್ ಗೆ ಕಡಿವಾಣ ಹಾಕಿ ನ್ಯಾಯ ಸಿಗ್ಲಿ ಅನ್ನೋದೇ ಎಲ್ಲರ ಬೇಡಿಕೆಯಾಗಿದೆ.
– ಕತ್ತಲಲ್ಲಿ ಮುಳುಗಿದ ಬಾಗಲಕೋಟೆಯ 100ಕ್ಕೂ ಹೆಚ್ಚು ಗ್ರಾಮಗಳು
ಬಾಗಲಕೋಟೆ: ಗ್ರಾಮ ಪಂಚಾಯ್ತಿಗಳು ಗ್ರಾಮದಲ್ಲಿ ಮೂಲಭೂತ ಸೌಲಭ್ಯಕ್ಕಾಗಿ, ಅಭಿವೃದ್ದಿಗಾಗಿ ಹುಟ್ಟು ಹಾಕಿದ ಸ್ಥಳೀಯ ಸಂಸ್ಥೆಗಳು. ಗ್ರಾಮದಲ್ಲಿ ರಸ್ತೆ, ವಿದ್ಯುತ್, ನೀರು ಎಲ್ಲವನ್ನೂ ಕಲ್ಪಿಸಬೇಕಾಗಿರೋದು ಗ್ರಾಪಂ ಜವಾಬ್ದಾರಿ ಹಾಗೂ ಕರ್ತವ್ಯ. ಆದರೆ ಆ ಜಿಲ್ಲೆಯಲ್ಲಿ ಗ್ರಾ.ಪಂಗಳೇ ಗ್ರಾಮಗಳನ್ನು ಅಂಧಕಾರದಲ್ಲಿ ಮುಳುಗಿಸಿವೆ. ಗ್ರಾ.ಪಂ ಬೇಜವಾಬ್ದಾರಿತನದಿಂದ 35ಕ್ಕೂ ಹೆಚ್ಚು ಹಳ್ಳಿಗಳು ಕತ್ತಲಮಯವಾಗಿವೆ. ರಾತ್ರಿ ಬೀದಿಯಲ್ಲಿ ಜನರು ಭಯದಲ್ಲಿ ಸಂಚರಿಸಬೇಕಾಗಿದೆ.
ಹೌದು. ಬಾಗಲಕೋಟೆ ಜಿಲ್ಲೆಯಲ್ಲಿ ಗ್ರಾಪಂ ನ ಬೇಜವಾಬ್ದಾರಿತನದಿಂದ ಹಳ್ಳಿ ಜನರು ರಾತ್ರಿಯಾದರೆ ಕತ್ತಲಲ್ಲಿ ಕನವರಿಸಬೇಕಾಗಿದೆ. ಯಾಕೆಂದರೆ ಬಾಗಲಕೋಟೆ ಜಿಲ್ಲೆಯಲ್ಲಿ 198 ಗ್ರಾಪಂಗಳಿಂದ ಬರೊಬ್ಬರಿ 47 ಕೋಟಿ ಕರೆಂಟ್ ಬಿಲ್ ಬಾಕಿ ಇದೆ. ಇದರಿಂದ ಹೆಸ್ಕಾಮ್ ಬಾಕಿ ಉಳಿಸಿಕೊಂಡ ಗ್ರಾಪಂಗಳ ವಿದ್ಯುತ್ ಸಂಪರ್ಕ ಕಡಿತ ಮಾಡುವ ಕಾರ್ಯಕ್ಕೆ ಮುಂದಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 35 ಕ್ಕೂ ಅಧಿಕ ಗ್ರಾಪಂ ಕಚೇರಿ ಹಾಗೂ ಆ ಗ್ರಾಪಂ ವ್ಯಾಪ್ತಿಯಲ್ಲಿನ ನೂರಕ್ಕೂ ಹೆಚ್ಚು ಹಳ್ಳಿಗಳ ಬೀದಿದೀಪಗಳ ವಿದ್ಯುತ್ ಕಡಿತ ಮಾಡಲಾಗಿದೆ. ಇದರಿಂದ ಗ್ರಾಮಸ್ಥರು ರಾತ್ರಿ ಕತ್ತಲಲ್ಲಿ ಕನವರಿಸಬೇಕಾಗಿದೆ. ಬೀದಿಯಲ್ಲಿ ಭಯದಲ್ಲಿ ಸಂಚರಿಸಬೇಕಾಗಿದೆ. ರಸ್ತೆಯಲ್ಲಿ ಹುಳು ಹುಪ್ಪಡಿಗಳು ಓಡಾಡುತ್ತವೆ. ಕತ್ತಲಲ್ಲಿ ಯಾರಿಗಾದರೂ ಏನಾದರೂ ತೊಂದರೆ ಆದರೆ ಯಾರು ಜವಾಬ್ದಾರಿ, ಕೂಡಲೇ ವಿದ್ಯುತ್ ಬಿಲ್ ಬಾಕಿ ಪಾವತಿಸಿ ಕತ್ತಲಿಂದ ಮುಕ್ತಿ ನೀಡಿ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.
ಸದ್ಯ ಬಾಗಲ ತಾಲೂಕಿನ ಮುನಾಳ, ಗದ್ದನಕೇರಿ, ಸೀಗಿಕೇರಿ, ನೀರಲಕೇರಿ ಗ್ರಾಪಂಗಳು, ಹುನಗುಂದ ತಾಲೂಕು, ಇಳಕಲ್ ತಾಲೂಕಿನ ಗ್ರಾಪಂ ಸೇರಿ ಒಟ್ಟು 35 ಕ್ಕೂ ಅಧಿಕ ಗ್ರಾಪಂ ವ್ಯಾಪ್ತಿಯ ಬೀದಿದೀಪಗಳ ವಿದ್ಯುತ್ ಕಡಿತ ಮಾಡಲಾಗಿದೆ. ಆದರೆ ಕುಡಿಯುವ ನೀರು ಸರಬರಾಜು ಮಾಡೋದಕ್ಕೆ ಬೇಕಾದ ವಿದ್ಯುತ್ ಕಡಿತ ಮಾಡಿಲ್ಲ ಎನ್ನೋದು ಸ್ವಲ್ಪ ಸಮಾಧಾನಕರ ಸಂಗತಿ. ಬಾಗಲಕೋಟೆ ಜಿಲ್ಲೆಯಲ್ಲಿ 198 ಗ್ರಾಪಂ ನಿಂದ ಪ್ರತಿ ತಿಂಗಳು ಮೂರು ಕೋಟಿ ಬಿಲ್ ಬರಬೇಕು. ಆದರೆ ಸರಿಯಾಗಿ ತುಂಬದ ಕಾರಣ 2016-17 ನೇ ಸಾಲಿನಿಂದ ಇದುವರೆಗೂ ಹೆಸ್ಕಾಮ್ ಬಾಗಲಕೋಟೆ ವೃತ್ತದಲ್ಲಿ 24,79,81 ಸಾವಿರ, ಜಮಖಂಡಿ ವೃತ್ತದಿಂದ 5,562 ಸಾವಿರ, ಮುಧೋಳ ವೃತ್ತದಿಂದ 17,19,67 ಸಾವಿರ. ಒಟ್ಟು 47,5,12 ಸಾವಿರ ಬಾಕಿ ಉಳಿದಿದೆ. ಇದನ್ನೂ ಓದಿ: ಅತ್ತೆ ಮನೆಗೆ ಮತ ಕೇಳಲು ಹೋದ ಸಿಎಂ ಬಸವರಾಜ ಬೊಮ್ಮಾಯಿ
ಹೆಸ್ಕಾಮ್ ಎಮ್ ಡಿ ಆದೇಶದ ಪ್ರಕಾರ ಬಾಕಿ ಉಳಿಸಿಕೊಂಡ ಹಿನ್ನೆಲೆ ಸಂಪರ್ಕ ಕಡಿತ ಮಾಡುತ್ತಿದ್ದೇವೆ. ಇದು ಅನಿವಾರ್ಯ ಯಾವ ಪಂಚಾಯ್ತಿಯಿಂದ ಬಾಕಿ ಪಾವತಿಸಲಾಗುತ್ತದೆ ಪುನಃ ಸಂಪರ್ಕ ಕಲ್ಪಿಸುತ್ತೇವೆ. ಬಾಕಿ ನೀಡದವರೆಗೂ ವಿದ್ಯುತ್ ಸಂಪರ್ಕ ಕಡಿತ ಕಾರ್ಯ ಮುಂದುವರಿಯುತ್ತದೆ ಅಂತ ಹೆಸ್ಕಾಮ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಗ್ರಾಪಂ ಪಿಡಿಒ ಗಳು ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಹೆಸ್ಕಾಮ್ ಅಧಿಕಾರಿಗಳ ಜೊತೆಯೂ ಮಾತಾಡಲಾಗಿದೆ. ಇನ್ನೆರಡು ದಿನದಲ್ಲಿ ಸಮಸ್ಯೆ ಸರಿಯಾಗುವ ವಿಶ್ವಾಸ ಇದೆ. ಗ್ರಾಪಂ ಅನುದಾನದಲ್ಲಿ ವಿದ್ಯುತ್ ಬಿಲ್ ಪಾವತಿಸುತ್ತೇವೆ ಅಂತಿದ್ದಾರೆ. ಒಟ್ಟಿನಲ್ಲಿ ಗ್ರಾಮದ ಶ್ರೇಯೋಭೀವೃದ್ದಿಗೆ ಇರಬೇಕಿದ್ದ ಗ್ರಾಪಂಗಳಿಂದಲೇ ಗ್ರಾಮಕ್ಕೆ ಕತ್ತಲು ಆವರಿಸುತ್ತಿದೆ. ಆದಷ್ಟು ಬೇಗ ಜಿಪಂ ಅಧಿಕಾರಿಗಳು ಹೆಸ್ಕಾಮ್ ಅಧಿಕಾರಿಗಳು ಚರ್ಚೆ ಮಾಡಿ ಈ ಸಮಸ್ಯೆ ಬಗೆಹರಿಸಬೇಕಾಗಿದೆ.
ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ ಗ್ರಾಮ ಪಂಚಾಯಿತಿಯಲ್ಲಿ ವಿವಾದ ಏರ್ಪಟ್ಟಿದ್ದು, ದೂರು- ಪ್ರತಿ ದೂರು ದಾಖಲಾಗಿದೆ.
ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಗ್ರಾಪಂ ಕಚೇರಿಯಲ್ಲಿ ಸೆ.17ರಂದು ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ನಿಮಿತ್ತ ಫೋಟೋ ಹಾಕಲಾಗಿದೆ. ಇದಕ್ಕೆ ಜೆಡಿಎಸ್ ಬೆಂಬಲಿತ ಸದಸ್ಯರು ಹಾಗೂ ಅಧಿಕಾರಿ ವರ್ಗ ವಿರೋಧ ವ್ಯಕ್ತಪಡಿಸಿದ್ದಾರೆ.
ಫೋಟೋ ಹಾಕುವುದು ಬೇಡ ಎಂದು ಸೂಚಿಸಿದ್ದೇವು. ಆದರೂ ಕರ್ತವ್ಯಕ್ಕೆ ಅಡ್ಡಿಪಡಿಸಿ ಫೋಟೋ ಹಾಕಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರಾದ ಭಾರ್ಗವಿ, ಚಂದ್ರಕಲಾ, ನಿಂಗೇಗೌಡ, ಲಕ್ಷ್ಮೀಶ ಮತ್ತು ಬಿಜೆಪಿ ಮುಖಂಡರಾದ ಗಿರೀಶ್, ಮಧು ಸೇರಿದಂತೆ 20 ಜನರ ವಿರುದ್ಧ ಪಿಡಿಒ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪಂಚೆ ಕಳಚಿದೆ ಅಂತ ಸಿದ್ದರಾಮಯ್ಯನವರ ಕಿವಿಯಲ್ಲಿ ಹೇಳಿದ್ರು ಡಿಕೆಶಿ!
ನಾನು ಪಿಡಿಒ ಒಪ್ಪಿಗೆ ಪಡೆದು ಫೋಟೋ ಹಾಕಿದ್ದೆ. ಆದರೀಗ ನನ್ನ ಜಾತಿ ಬಗ್ಗೆ ಮಾತನಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಯಾರೋ ಉತ್ತರ ಭಾರತದವನ ಫೋಟೋ ಹಾಕುತ್ತೀಯ ಎಂದು ಪ್ರಧಾನಿಗೆ ಅವಮಾನ ಮಾಡಿದ್ದಾರೆ. ಇದಕ್ಕೆ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸೇರಿದಂತೆ ಹಲವರು ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತ ಸದಸ್ಯೆಯು ಪಿಡಿಒ, ಬಿಲ್‍ಕಲೆಕ್ಟರ್, ಅಕೌಟೆಂ ಅಧ್ಯಕ್ಷ, ಉಪಾಧ್ಯಕ್ಷ ಸೇರಿದಂತೆ 16 ಜನರ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: 7.5 ಲಕ್ಷ ಕಿ.ಮೀ. ಓಡಿರುವ ಬಸ್‍ಗಳನ್ನು ಬದಲಿಸುತ್ತೇವೆ: ಶ್ರೀರಾಮುಲು
ಪ್ರಧಾನ ಮಂತ್ರಿಯ ಜನ್ಮ ದಿನಾಚರಣೆ ಬಿಜೆಪಿ- ಜೆಡಿಎಸ್ ಮುಸುಕಿನ ಗುದ್ದಾಟಕ್ಕೆ ವೇದಿಕೆ ಕಲ್ಪಿಸಿಕೊಟ್ಟಂತಾಗಿದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಕ್ಷೇತ್ರ ಇದಾಗಿದೆ.
ಚಿಕ್ಕಬಳ್ಳಾಪುರ: ಅಭಿವೃದ್ಧಿ ಕಾರ್ಯಗಳಿಗೆ ಅಧಿಕಾರಿ ಸರಿಯಾಗಿ ಸ್ಪಂದಿಸುತ್ತಿಲ್ಲ ಪಂಚಾಯ್ತಿಗೆ ಅಧ್ಯಕ್ಷೆ ಮತ್ತು ಸದಸ್ಯರು ಕಚೇರಿಗೆ ಬೀಗ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ವರ್ಲಕೊಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರ್ಲಕೊಂಡ ಗ್ರಾಮಪಂಚಾಯತಿ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ್, ಅಭಿವೃದ್ಧಿ ಕಾಮಗಾರಿಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅಧ್ಯಕ್ಷರು, ಸದಸ್ಯರ ಮಾತಿಗೆ ಕಿಮ್ಮತ್ತು ಕೊಡಲ್ಲ ಅಂತ ಆಕ್ರೋಶಗೊಂಡ ಆಧ್ಯಕ್ಷೆ ಆನಂದಮ್ಮ ಹಾಗೂ ಸದಸ್ಯರು ಇಂದು ಪಿಡಿಈ ರನ್ನ ಹೊರ ಹಾಕಿ ಕಚೇರಿಗೆ ಬೀಗ ಜಡಿದಿದ್ದಾರೆ.
ಚಾಮರಾಜನಗರ: ಗ್ರಾಮ ಪಂಚಾಯ್ತಿ ಸದಸ್ಯನೋರ್ವ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ನಿಂದಿಸಿದ್ದಾರೆ ಎಂಬ ಆರೋಪ ಕೇಳಿ ಬಂದ ಬೆನ್ನಲ್ಲೇ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಹರಳೆ ಗ್ರಾಮ ಪಂಚಾಯ್ತಿ ಸದಸ್ಯ ಹೊಸ ಹಂಪಾಪುರ ಗ್ರಾಮದ ನಾಗರಾಜು ಅಲಿಯಾಸ್ ನಾಗಟ್ಟಿ ರಾಜೀನಾಮೆ ನೀಡಿದ ಸದಸ್ಯ. ಜೂನ್.25 ರಂದು ಗ್ರಾಮ ಪಂಚಾಯ್ತಿಯಲ್ಲಿ ವಿಚಾರವೊಂದರ ಬಗ್ಗೆ ಮಾತನಾಡುವಾಗ ಅಂಬೇಡ್ಕರ್ ಬಗ್ಗೆ ಏಕವಚನದಲ್ಲಿ ನಿಂದಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸನಿಹದಲ್ಲಿದ್ದ ಕೆಲವರು ಈ ಮಾತನ್ನು ಕೇಳಿಸಿಕೊಂಡಿದ್ದು, ಹಳೇ ಹಂಪಾಪುರ ಗ್ರಾಮಸ್ಥರಿಗೆ ಈ ವಿಚಾರ ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಯುವಕರ ಗುಂಪೊಂದು ನಾಗರಾಜು ಅವರನ್ನು ಪ್ರಶ್ನಿಸಲು ಮುಂದಾಗಿದ್ದು ಸಂಪರ್ಕಕಕ್ಕೆ ಆತ ಸಿಕ್ಕಿರಲಿಲ್ಲ.
ಈ ಬಗ್ಗೆ ದಲಿತ ಮುಂಖಡರು ಪಂಚಾಯ್ತಿ ಮಾಡಲು ಸೇರಿದ್ದು ನಾಗರಾಜು ಸಭೆಗೆ ಹಾಜರಾಗಿಲ್ಲ. ಬಳಿಕ ಅದೇ ರೀತಿ ಕರೆಯಲಾಗಿದ್ದ ಮತ್ತೊಂದು ಸಭೆಗೆ ಬಂದ ನಾಗರಾಜು ನಾನೇನು ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಅದಕ್ಕೊಪ್ಪದ ದಲಿತ ಮುಖಂಡರು ಅಂಬೇಡ್ಕರ್ ಅವರನ್ನು ನಿಂದಿಸಿರುವುದು ನಮಗೆ ತಿಳಿದಿದೆ. ಆದ್ದರಿಂದ ಸದಸ್ಯತ್ವಕ್ಕೆ ರಾಜೀನಾಮೆ ನೀಡುವಂತೆ ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಮಾಡಬೇಕೆಂದು ಸೂಚಿಸಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಸಿಡಿ ತನಿಖೆಯ ಎಸ್‍ಐಟಿ ಮುಖ್ಯಸ್ಥರ ರಜೆ ಅವಧಿ ಮತ್ತೆ ವಿಸ್ತರಣೆ
ಪರಿಣಾಮ ಜೂ.28 ರಂದು ನಾಗರಾಜು ತಮ್ಮ ರಾಜೀನಾಮೆ ಪ್ರತಿಯನ್ನು ಉಪವಿಭಾಗಧಿಕಾರಿ, ತಾಲೂಕು ಪಂಚಾಯ್ತಿಯ ಇಒ ಸೇರಿದಂತೆ ಗ್ರಾಮ ಪಂಚಾಯ್ತಿ ಅಧ್ಯಕ್ಷರಿಗೆ ನೀಡಿದ್ದಾರೆ. ಗ್ರಾಮಸ್ಥರ ಸಮ್ಮುಖದಲ್ಲಿ ಅಂಬೇಡ್ಕರ್ ಭಾವ ಚಿತ್ರಕ್ಕೆ ಗ್ರಾಮ ಪಂಚಾಯ್ತಿ ಸದಸ್ಯ ನಾಗರಾಜು ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರು: ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಂದುವರಿಸುವುದಾ ಎನ್ನುವ ಕುರಿತಾಗಿ ನಾವು ಮೂರು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಹಲವರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ಪ್ರತಿ ಗ್ರಾಮ ಪಂಚಾಯ್ತಿಗೆ 50 ಸಾವಿರ ಅನುದಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಜೂನ್ 7ರ ತನಕ ಲಾಕ್ ಡೌನ್ ಮುಂದುವರಿಯಲಿದೆ. ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ. ಇಲ್ಲದಿದ್ದರೆ ಪರಿಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತೆ ಎಂದಿದ್ದಾರೆ.
5 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವೀಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವಥನಾರಾಯಣ್, ಕಂದಾಯ ಸಚಿವ ಆರ್.ಅಶೋಕ್ ಭಾಗಿಯಾಗಿದ್ದರು. 5 ಜಿಲ್ಲೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಭಾಗಿ ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಜಿಲ್ಲೆಗಳ ಕೊರೊನಾ ಸ್ಥಿತಿಗತಿ, ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯದ ಮೇರೆಗೆ ಲಾಕ್‍ಡೌನ್ ವಿಸ್ತರಣೆ ಭವಿಷ್ಯ ನಿರ್ಧಾರವಾಗುತ್ತದೆ.