Tag: ಗ್ರಾಮ ಪಂಚಾಯ್ತಿ ಸದಸ್ಯ

  • ಮೊಬೈಲ್‍ನಲ್ಲಿ ಮಾತಾಡ್ತಿದ್ದಾಗ ದಾಳಿ- ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

    ಮೊಬೈಲ್‍ನಲ್ಲಿ ಮಾತಾಡ್ತಿದ್ದಾಗ ದಾಳಿ- ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಹತ್ಯೆ

    ಬೆಂಗಳೂರು: ಹಳೆಯ ದ್ವೇಷದಿಂದ ಗ್ರಾಮ ಪಂಚಾಯತಿ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹೊಸಕೋಟೆಯಲ್ಲಿ (Hosakote) ನಡೆದಿದೆ.

    ಮೃತನನ್ನು ಅಮೀರ್ ಖಾನ್ (45) ಎಂದು ಗುರುತಿಸಲಾಗಿದೆ. ಇವರು ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯ್ತಿ ಸದಸ್ಯ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ನಂದಗುಡಿ ಪೊಲಿಸ್ ಠಾಣಾ ವ್ಯಾಪ್ತಿಯ ಬೈಲ್ ನರಸಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಗ್ರಾಮ ಪಂಚಾಯತಿ ಕಛೇರಿಯ ಬಳಿ ಮೊಬೈಲ್ ಫೋನ್‍ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಗ್ರಾಮದ ಮೆಹಬೂಬ್ ಇತರೊಂದಿಗೆ ಬಂದು ಲಾಂಗ್ ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಇತ್ತ ಘಟನೆಯಿಂದ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಮೀರ್ ಖಾನ್ ಅವರನ್ನು ಕೂಡಲೇ ಎಂ ವಿಜಿ ಆಸ್ಪತ್ರೆಗೆ ಸೇರಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ ಮಾರ್ಗ ಮಧ್ಯದಲ್ಲಿ ಅಮೀರ್ ಖಾನ್ ಮೃತಪಟ್ಟರು.

    ಘಟನಾ ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಎಂವಿಜೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದವನ ಮೇಲೆ ಕೊಲೆ ಆರೋಪದ ಸಂಚು – ಮಗುವನ್ನು ಬಾವಿಗೆ ಎಸೆದ ಅಪ್ರಾಪ್ತೆ

  • ಲೋಕಾಯುಕ್ತ ದಾಳಿ: ಗ್ರಾಮ ಪಂಚಾಯ್ತಿ ಸದಸ್ಯನ ಮನೆಯಲ್ಲಿ ಫಾರಿನ್‌ ಬ್ರ್ಯಾಂಡ್‌ ಎಣ್ಣೆ ಪತ್ತೆ!

    ಲೋಕಾಯುಕ್ತ ದಾಳಿ: ಗ್ರಾಮ ಪಂಚಾಯ್ತಿ ಸದಸ್ಯನ ಮನೆಯಲ್ಲಿ ಫಾರಿನ್‌ ಬ್ರ್ಯಾಂಡ್‌ ಎಣ್ಣೆ ಪತ್ತೆ!

    – ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್
    – ರಾಮನಗರದ ಹಲವೆಡೆ ದಾಳಿ, ಕಂತೆ ಕಂತೆ ಹಣ ಸೀಜ್‌

    ರಾಮನಗರ: ಇಲ್ಲಿನ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದ್ದು, KRIDLನ ಎಇಇ ಸೈಯದ್ ಮುನೀರ್ ಅಹಮದ್ ಮನೆ ಮೇಲೆ ದಾಳಿ (Lokayukta Raid) ಮಾಡಿ ಪರಿಶೀಲನೆ ನಡೆಸಿದ್ದಾರೆ.

    ರಾಮನಗರದ KRIDL ಕಚೇರಿಯಲ್ಲೂ ಪರಿಶೀಲನೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳ ತಂಡ, ಸುಮಾರು 2 ಗಂಟೆಗಳ ಕಾಲ ಶೋಧ ನಡೆಸಿ ಹಲವು ದಾಖಲೆಗಳನ್ನ ವಶಕ್ಕೆ ಪಡೆದುಕೊಂಡಿದೆ. ಲೋಕಾಯುಕ್ತ ಪೊಲೀಸ್ ಇನ್ಪೆಕ್ಟರ್ ಮಂಜು ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಕಡತಗಳನ್ನ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗ್ಳೂರು, ಮಂಡ್ಯ ಸೇರಿ ರಾಜ್ಯದ 30 ಕಡೆ ದಾಳಿ

    ಎಇಇ ಸೈಯದ್ ಮುನೀರ್ ಅಹಮದ್‌ನ ಬೆಂಗಳೂರಿನ ಆರ್‌.ಟಿ ನಗರದಲ್ಲಿನ ಮನೆ ಮೇಲೂ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುರಿಸಿದ್ದಾರೆ. ಇನ್ನೂ ಆನೆಕಲ್‌ನ ನಗರ ಯೋಜನೆ ಜಂಟಿ ನಿರ್ದೇಶಕ ಮಂಜೇಶ್ ಮನೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಜೇಶ್‌ಗೆ ಸೇರಿರುವ ಕನಕಪುರ ತಾಲೂಕಿನ ಸಾಸಲುಪುರ ಗ್ರಾಮದ ಫಾರ್ಮ್ ಹೌಸ್‌ಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಹೆತ್ತ ಮಗುವನ್ನೇ ಹತ್ಯೆಗೈದ ಬೆಂಗ್ಳೂರಿನ CEO – ಸೂಟ್‌ಕೇಸ್‌ನಲ್ಲಿ ಶವವಿಟ್ಕೊಂಡು ಹೋಗುವಾಗ ಅರೆಸ್ಟ್

    ಗ್ರಾಪಂ ಸದಸ್ಯನ ಮನೆಯಲ್ಲಿ ಫಾರಿನ್‌ ಬ್ರ್ಯಾಂಡ್‌ ಎಣ್ಣೆ ಪತ್ತೆ:
    ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ತಾಲೂಕಿನ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿ.ಹೆಚ್‌ ಸುರೇಶ್‌ ಮನೆ ಮೇಲೆ ದಾಳಿ ನಡೆಸಲಾಗಿದೆ. ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ನೇತೃತ್ವದಲ್ಲಿ ಸೀಗೆಹಳ್ಳಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ 500 ರೂ.ಗಳ ಕಂತೆ ನೋಟುಗಳು ಹಾಗೂ ವಿದೇಶಿ ಬ್ರ್ಯಾಂಡ್‌ ಮದ್ಯ ಪತ್ತೆಯಾಗಿದೆ.

  • ಮೊದ್ಲು ಲಾಂಗು, ಮಚ್ಚು ಹಿಡಿದು ಟಿಕ್‍ಟಾಕ್ – ಆಮೇಲೆ ಸ್ಕೆಚ್ ಹಾಕಿ ಅಟ್ಯಾಕ್

    ಮೊದ್ಲು ಲಾಂಗು, ಮಚ್ಚು ಹಿಡಿದು ಟಿಕ್‍ಟಾಕ್ – ಆಮೇಲೆ ಸ್ಕೆಚ್ ಹಾಕಿ ಅಟ್ಯಾಕ್

    ಚಿಕ್ಕಬಳ್ಳಾಪುರ: ಟಿಕ್‍ಟಾಕ್‍ನಲ್ಲಿ ಲಾಂಗು, ಮಚ್ಚು ಹಿಡಿದು ಟಗರು ಸಿನಿಮಾದ ಹಾಡಿಗೆ ರಿಹರ್ಸಲ್ ಮಾಡಿ, ಮರ್ಡರ್ ಮಾಡೇ ಮಾಡ್ತೀನಿ ಎಂದು ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಗುರುವಾರ ಬೆಳಗ್ಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಎಚ್ ಕ್ರಾಸ್ ಬಳಿ ಆರೋಪಿಗಳು ಕೃತ್ಯವೆಸೆಗಿದ್ದರು. ಹೊಸಕೋಟೆ ತಾಲೂಕಿನ ತರಬಳ್ಳಿ ಗ್ರಾಮ ಪಂಚಾಯ್ತಿ ಸದಸ್ಯ ತ್ಯಾಗರಾಜು ಮೇಲೆ ಮೂವರು ಯುವಕರು ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ತ್ಯಾಗರಾಜು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇತ್ತ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು, ಆರೋಪಿಗಳಾದ ಗಂಭೀರನಹಳ್ಳಿ ಗ್ರಾಮದ ಸೋಮು ಅಲಿಯಾಸ್ ಸೋಮಶೇಖರ್, ಪಾಂಡು ಅಲಿಯಾಸ್ ಮಂಜು ಹಾಗೂ ನಂದನ್ ಅಲಿಯಾಸ್ ನಂದಕುಮಾರ್ ನನ್ನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೂ ಮುನ್ನ ಪಾಂಡು ಹಾಗೂ ನಂದಕುಮಾರ್ ಪ್ರಕರಣದಲ್ಲಿ ಭಾಗಿಯಾಗದ ತನ್ನ ಮತ್ತೋರ್ವ ಸ್ನೇಹಿತ ಮಂಜುನಾಥ್ ಜೊತೆ ಮಾಡಿರುವ ಟಿಕ್‍ಟಾಕ್ ರಿಹರ್ಸಲ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

    ಹಳೆ ವೈಷಮ್ಯದ ಹಿನ್ನಲೆ ಕೊಲೆಗೆ ಪ್ಲಾನ್:
    ಹಲ್ಲೆಗೊಳಗಾಗಿ ಆಸ್ಪತ್ರೆ ಸೇರಿರುವ ತ್ಯಾಗರಾಜು ಹಾಗೂ ಆರೋಪಿ ಸೋಮು ನಡುವೆ ಜಗಳ ನಡೆದಿತ್ತು. ಈ ವೇಳೆ ಸೋಮು ಮನೆಗೆ ನುಗ್ಗಿದ್ದ ತ್ಯಾಗರಾಜು ಹಲ್ಲೆ ನಡೆಸಿದ್ದ ಎನ್ನಲಾಗಿದೆ. ಈ ಹಳೆ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎನ್ನುವುದು ತಿಳಿದುಬಂದಿದೆ.

    ಹಳೆ ಪ್ರಕರಣದ ದ್ವೇಷ ಇಟ್ಟುಕೊಂಡಿದ್ದ ಸೋಮು ಸ್ನೇಹಿತರೊಂದಿಗೆ ಸೇರಿ ಈ ಕೃತ್ಯವೆಸೆಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದರು. ಆದರೆ ಸೋಮು ಜೊತೆ ಗುರುತಿಸಿಕೊಂಡಿದ್ದ ಪಾಂಡು ಹೆಸರನ್ನ ಗಾಯಗೊಂಡಿದ್ದ ತ್ಯಾಗರಾಜು ಪೊಲೀಸರು ವಿಚಾರಣೆ ನಡೆಸಿದ ವೇಳೆ ಹೇಳಿದ್ದರು. ಈ ಆಧಾರದ ಮೇಲೆ ಮೂವರನ್ನ ಬಂಧಿಸಿರುವ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.