Tag: ಗ್ರಾಹಕ

  • ಆನ್‍ಲೈನ್ ಪಂಗನಾಮ – ಬುಕ್ ಮಾಡಿದ್ದು ಸ್ಪೀಕರ್, ಕೈಗೆ ಸಿಕ್ಕಿದ್ದು ಟೈಲ್ಸ್ ಕಲ್ಲು

    ಆನ್‍ಲೈನ್ ಪಂಗನಾಮ – ಬುಕ್ ಮಾಡಿದ್ದು ಸ್ಪೀಕರ್, ಕೈಗೆ ಸಿಕ್ಕಿದ್ದು ಟೈಲ್ಸ್ ಕಲ್ಲು

    ಬೆಂಗಳೂರು: ಆನ್‍ಲೈನ್‍ನಲ್ಲಿ ಶಾಪಿಂಗ್ ಮಾಡೋ ಗ್ರಾಹಕರೇ ಎಚ್ಚರವಾಗಿರಿ. ಯಾಕೆಂದರೆ ಬೆಂಗಳೂರಿನ ಗ್ರಾಹಕರೊಬ್ಬರು ಆರ್ಡರ್ ಮಾಡಿದ್ದೇ ಒಂದು ಪ್ರಾಡಕ್ಟ್. ಆದರೆ ಅವರ ಕೈಗೆ ಸಿಕ್ಕಿದ್ದೇ ಮತ್ತೊಂದು ಪ್ರಾಡಕ್ಟ್.

    ಹೌದು. ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಮಧುಸೂದನ್ ಅವರು ಆನ್‍ಲೈನ್ ಶಾಪಿಂಗ್ ಮಾಡಿ ಮೋಸ ಹೋಗಿದ್ದಾರೆ. ಡಿಸೆಂಬರ್ 1ರಂದು ಅಮೆಜಾನ್‍ನಲ್ಲಿ ಸ್ಪೀಕರ್ ಬಾಕ್ಸ್ ಒಂದನ್ನು ಮಧುಸೂದನ್ ಆರ್ಡರ್ ಮಾಡಿದ್ದರು. ಆದರೆ ಅವರ ಕೈ ಸೇರಿದ್ದು ಮಾತ್ರ ಟೈಲ್ಸ್ ಕಲ್ಲು. ಸೋಮವಾರ ಈ ಪ್ರಾಡಕ್ಟ್ ಮಧುಸೂದನ್ ಕೈಗೆ ತಲುಪಿದೆ. ಬಾಕ್ಸ್ ಓಪನ್ ಮಾಡಿ ನೋಡಿದಾಗ ಕಲ್ಲು ಇರೋದು ಗೊತ್ತಾಗಿದೆ. ಇದನ್ನು ನೋಡಿದ ಗ್ರಾಹಕ ಕಕ್ಕಾಬಿಕ್ಕಿಯಾಗಿದ್ದು, ನನ್ನಂತೆ ಯಾರಿಗೂ ಮೋಸ ಆಗಬಾರದು. ಇದರಲ್ಲಿ ಯಾರ ನಿರ್ಲಕ್ಷ್ಯವಿದೆ ಗೊತ್ತಾಗಬೇಕು ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ರಾಯಲ್ ಎನ್‍ಫೀಲ್ಡ್ ಖರೀದಿಸಲು ಹೋಗಿ 1 ಲಕ್ಷ ರೂ. ಕಳೆದುಕೊಂಡ ಟೆಕ್ಕಿ

    ಆದ್ದರಿಂದ ಮೋಸ ಹೋದ ಮಧುಸೂದನ್ ಅಮೆಜಾನ್ ಕಂಪನಿ ವಿರುದ್ಧ ಗ್ರಾಹಕರ ವೇದಿಕೆಯಲ್ಲಿ ದೂರು ದಾಖಲಿಸಲು ಮುಂದಾಗಿದ್ದಾರೆ. ಪಾರ್ಸೆಲ್ ಬಾಕ್ಸ್ ನಲ್ಲಿ ಕಲ್ಲು ಇರೋದು ಗೊತ್ತಾದ ಮೇಲೆ, ಡೆಲಿವರಿ ಬಾಯ್‍ಗೆ ಪ್ರಾಡೆಕ್ಟ್ ವಾಪಸ್ ಮಾಡಿದ್ದಾರೆ. ದೂರು ಕೊಡಲು ಅಮೆಜಾನ್ ಕಂಪನಿಯ ಸಿಬ್ಬಂದಿಗೆ ಫೋನ್ ಮಾಡಿದರೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ ಎಂದು ಮಧುಸೂದನ್ ಆರೋಪಿಸಿದ್ದಾರೆ.

    ಈ ಎಡವಟ್ಟಿನಲ್ಲಿ ಡೆಲವರಿ ಮಾಡಲು ಹುಡಗನದ್ದು ತಪ್ಪೇ? ಅಥವಾ ಅಮೆಜಾನ್ ಕಂಪನಿಯದ್ದು ತಪ್ಪಾ ಗೊತ್ತಿಲ್ಲ. ಆದರೆ ಮೊಸ ಹೋದ ಗ್ರಾಹಕ ಮಾತ್ರ ನನ್ನ ದುಡ್ಡು ಹೊಯ್ತು, ಪ್ರಾಡಕ್ಟೂ ಹೊಯ್ತು ಅಂತ ತಲೆ ಮೇಲೆ ಕೈ ಹೊತ್ತು ಕೂತಿದ್ದಾರೆ. ಆದಕ್ಕೆ ಯಾವುದಕ್ಕೂ ಆನ್‍ಲೈನ್‍ನಲ್ಲಿ ಶಾಪಿಂಗ್ ಮಾಡುವಾಗ ನೀವು ಹುಷಾರಾಗಿರಿ.

  • ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಗ್ರಾಹಕ

    ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಗ್ರಾಹಕ

    ಚಿಕ್ಕಬಳ್ಳಾಪುರ: ಬ್ಯಾಂಕ್ ಸಿಬ್ಬಂದಿ ಮೇಲೆ ಗ್ರಾಹಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ.

    ದುರ್ಗೆನಹಳ್ಳಿ ಗ್ರಾಮದ ಕುಮಾರ್ ಎಂಬವ ವ್ಯಕ್ತಿ ಕಾರ್ಪೋರೇಷನ್ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಕ್ಷಣಾರ್ಧದಲ್ಲಿ ಸಿಬ್ಬಂದಿ ಮಚ್ಚಿನ ಏಟಿನಿಂದ ಪಾರಾಗಿದ್ದಾರೆ. ತನ್ನ ಖಾತೆಯಲ್ಲಿರುವ 268 ರೂಪಾಯಿಗಳನ್ನು ನೀಡಲೇಬೇಕೆಂದು ಬ್ಯಾಂಕಿನ ಸಿಬ್ಬಂದಿಯನ್ನು ಕೇಳಿದ್ದಾನೆ. ಬ್ಯಾಂಕ್ ಸಿಬ್ಬಂದಿ ಹಣ ನೀಡಲ್ಲ ಎಂದಾಗ ಹಲ್ಲೆಗೆ ಮುಂದಾಗಿದ್ದಾನೆ.

    ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕಿನ ಸಿಬ್ಬಂದಿ, ಕಳೆದೊಂದು ವರ್ಷದಿಂದ ಬ್ಯಾಂಕಿನಲ್ಲಿ ವ್ಯವಹಾರ ನಡೆಸದಿರುವ ಕಾರಣ ಅಕೌಂಟ್ ಲಾಕ್ ಆಗಿದೆಯೆಂದು ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಕುಮಾರ ಕೂಡಲೇ ಬ್ಯಾಂಕಿನ ಸಿಬ್ಬಂದಿ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ್ದನೆ. ಇದನ್ನು ಕಂಡ ಬ್ಯಾಂಕಿನಲ್ಲಿದ್ದ ಸ್ಥಳೀಯರು ಕುಮಾರನನ್ನು ಕೂಡಲೇ ಹಿಡಿದು, ಮಚ್ಚನ್ನು ಕಸಿದುಕೊಂಡು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗ್ರಾಹಕರ ಕಣ್ಣಲ್ಲಿ ಕಣ್ಣೀರು ತಂದ ಈರುಳ್ಳಿ ಬೆಲೆ

    ಗ್ರಾಹಕರ ಕಣ್ಣಲ್ಲಿ ಕಣ್ಣೀರು ತಂದ ಈರುಳ್ಳಿ ಬೆಲೆ

    ಬೆಂಗಳೂರು: ಈರುಳ್ಳಿ ಬೆಲೆಯಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಹೆಚ್ಚಳವಾಗಿದೆ. ಕತ್ತರಿಸುವಾಗ ಮಾತ್ರವಲ್ಲದೇ ಖರೀದಿಸುವಾಗ ಗ್ರಾಹಕರು ಕಣ್ಣೀರು ಹಾಕುವಂತಾಗಿದೆ.

    ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಈರುಳ್ಳಿ ಕೈಗೆ ಸಿಗದ ನಕ್ಷತ್ರವಾಗಿದೆ. ಬೆಂಗಳೂರಿನ ನಗರದ ಹಾಪ್‍ಕಾಮ್ಸ್, ಯಶವಂತಪುರ ಸೇರಿದಂತೆ ಇತರೆ ಮಾರುಕಟ್ಟೆಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಒಂದು ಕೆಜಿಗೆ 120 ರೂಪಾಯಿ ಆಗಿದೆ. ಮಧ್ಯಮ ಮತ್ತು ಸಣ್ಣ ಗಾತ್ರದ ಈರುಳ್ಳಿ ಬೆಲೆ 50 ರಿಂದ 60 ರೂಪಾಯಿ ಇದೆ.

    ಪ್ರವಾಹದಿಂದಾಗಿ ಈರುಳ್ಳಿ ಫಸಲು ಇಳಿಮುಖವಾಗಿದ್ದು, ಬೆಲೆ ಹೆಚ್ಚಾಗಿದೆ. ಬೆಂಗಳೂರಿಗೆ ಪ್ರತಿನಿತ್ಯ 3 ಸಾವಿರ ಟನ್‍ಗೂ ಹೆಚ್ಚು ಈರುಳ್ಳಿ ಅಗತ್ಯ ಇದೆ. ಆದರೆ ಅಗತ್ಯಕ್ಕೆ ತಕ್ಕಂತೆ ಈರುಳ್ಳಿ ಪೂರೈಕೆ ಯಾಗುತ್ತಿಲ್ಲ. ಹೀಗಾಗಿಯೇ ಬೆಲೆಯಲ್ಲಿ ಏರಿಕೆಯಾಗಿದೆ ಎಂದು ಹಾಪ್ ಕಾಮ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಗೋಪಾಲಗೌಡ ಹೇಳುತ್ತಾರೆ.

    ಈರುಳ್ಳಿ ಬೆಲೆ ಹೆಚ್ಚಳಕ್ಕೆ ಹಿಂದೊಮ್ಮೆ ಸರ್ಕರವೇ ಉರುಳಿ ಬಿದ್ದಿತ್ತು. ಈಗ ಈರುಳ್ಳಿ ಬೆಲೆ ಹೆಚ್ಚಳ ಆಗಿರೋದು ನೋಡಿ ಗೃಹಿಣಿಯರಂತೂ ಪುಲ್ ಶಾಕ್ ಆಗಿದ್ದಾರೆ. ಈರುಳ್ಳಿ ಇಲ್ಲದೇ ಅಡುಗೆ ಮಾಡೋದು ಹೇಗಪ್ಪಾ ಅಂತಾ ಚಿಂತೆಗೀಡಾಗಿದ್ದಾರೆ. ಡಿಸೆಂಬರ್ ಮುಗಿಯೋವರೆಗೆ ಈರುಳ್ಳಿ ದರ ಇಳಿಯುವ ಸಾಧ್ಯತೆ ಇಲ್ಲ ಮಾರುಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.

  • ಕಳಪೆ ಆಹಾರ ನೀಡಿದ್ದಕ್ಕೆ ರೆಸ್ಟೋರೆಂಟ್ ಕಿಚನ್‍ಗೆ ನುಗ್ಗಿ ಗ್ರಾಹಕನಿಂದ ಹಲ್ಲೆ

    ಕಳಪೆ ಆಹಾರ ನೀಡಿದ್ದಕ್ಕೆ ರೆಸ್ಟೋರೆಂಟ್ ಕಿಚನ್‍ಗೆ ನುಗ್ಗಿ ಗ್ರಾಹಕನಿಂದ ಹಲ್ಲೆ

    ಭೋಪಾಲ್: ಕಳಪೆ ಆಹಾರ ನೀಡಿದ್ದಕ್ಕೆ ಗ್ರಾಹಕನೊಬ್ಬ ರೆಸ್ಟೋರೆಂಟ್ ಕಿಚನ್‍ಗೆ ನುಗ್ಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಘಟನೆ ಸೋಮವಾರ ಮಧ್ಯಪ್ರದೇಶದ ಭೋಪಾಲ್‍ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ರೆಸ್ಟೋರೆಂಟ್‍ನಲ್ಲಿ ನಡೆದ ಗಲಾಟೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿ ರೆಸೋರೆಂಟ್‍ನ ಅಡುಗೆ ಮನೆಯಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

    ಕೆಲವರು ಊಟ ನೀಡಲು ತಡವಾಗಿದ್ದಕ್ಕೆ ಗ್ರಾಹಕರು ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಗ್ರಾಹಕರು ಮೊದಲು ಟೇಬಲ್ ಬಳಿ ಊಟಕ್ಕಾಗಿ ಕಾಯುತ್ತಿದ್ದರು. ನಂತರ ಅಡುಗೆ ಮನೆಗೆ ಹೋಗಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದರು.

    ಈ ಬಗ್ಗೆ ಪ್ರತಿಕ್ರಿಯಿಸಿದ ಎಎಸ್‍ಪಿ ಸಂಜಯ್ ಸಾಹು, ನಮಗೆ ಮಾಹಿತಿ ತಿಳಿಯುತ್ತಿದ್ದಂತೆ ರೆಸ್ಟೋರೆಂಟ್‍ಗೆ ಭೇಟಿ ನೀಡಿದ್ದೆವು. ಊಟ ನೀಡಲು ತಡವಾಗಿದಕ್ಕೆ ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿ ನಡುವೆ ಜಗಳವಾಗಿದೆ. ಗ್ರಾಹಕರು ಹಾಗೂ ಹೋಟೆಲ್ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೆವೆ ಎಂದು ಹೇಳಿದ್ದಾರೆ.

    ಇದೇ ವೇಳೆ ರೆಸ್ಟೋರೆಂಟ್ ಮಾಲೀಕ, ಗ್ರಾಹಕರು ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಬಳಿಕ ಮಾತನಾಡಿದ ಮಹಿಳಾ ಸಿಬ್ಬಂದಿ ಗ್ರಾಹಕರು ಕುಡಿದ ನಶೆಯಲ್ಲಿದ್ದರು. ನಾನು ಜಗಳವನ್ನು ತಡೆಯಲು ಹೋದಾಗ ಅವರು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.

  • ಮುಸ್ಲಿಂ ಡೆಲಿವರಿ ಬಾಯ್ ತಂದ ಆಹಾರ ತಿರಸ್ಕರಿಸಿದವನ ಮೇಲೆ ಬಿತ್ತು ಕೇಸ್

    ಮುಸ್ಲಿಂ ಡೆಲಿವರಿ ಬಾಯ್ ತಂದ ಆಹಾರ ತಿರಸ್ಕರಿಸಿದವನ ಮೇಲೆ ಬಿತ್ತು ಕೇಸ್

    ಹೈದರಾಬಾದ್: ಆನ್‍ಲೈನ್‍ನಲ್ಲಿ ಆರ್ಡರ್ ಮಾಡಿದ ಆಹಾರವನ್ನು ಮುಸ್ಲಿಂ ಡೆಲಿವರಿ ಬಾಯ್ ತಂದು ಕೊಟ್ಟ ಎಂಬ ಕಾರಣಕ್ಕೆ ಗ್ರಾಹಕ ಅದನ್ನು ತಿರಸ್ಕರಿಸಿದ್ದು, ಆತನ ವಿರುದ್ಧ ದೂರು ದಾಖಲಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ಗ್ರಾಹಕ ಅಜಯ್ ಕುಮಾರ್ ಮೇಲೆ ಡೆಲಿವರಿ ಬಾಯ್ ಮುದಾಸೀರ್ ದೂರು ದಾಖಲಿಸಿದ್ದಾರೆ. ಅಜಯ್ ಕುಮಾರ್ ಶುಕ್ರವಾರ ಆನ್‍ಲೈನ್‍ನಲ್ಲಿ ಆಹಾರ ಆರ್ಡರ್ ಮಾಡಿದ್ದರು. ತಮಗೆ ಹಿಂದೂ ವ್ಯಕ್ತಿಯೇ ಆಹಾರ ತಂದುಕೊಡಬೇಕೆಂದು ಅವರು ಆರ್ಡರ್ ಮಾಡುವಾಗ ವಿಶೇಷವಾಗಿ ಕೇಳಿಕೊಂಡಿದ್ದರು. ಆದರೆ ಹಿಂದೂ ಡೆಲಿವರಿ ಬಾಯ್ ಇಲ್ಲದ ಕಾರಣಕ್ಕೆ ಸರಿಯಾದ ಸಮಯಕ್ಕೆ ಆಹಾರ ತಲುಪಿಸುವ ಸಲುವಾಗಿ ಮುದಾಸೀರ್ ಆಹಾರ ಡೆಲಿವರಿ ನೀಡಲು ಗ್ರಾಹಕರ ಮನೆ ಬಳಿ ಬಂದಿದ್ದರು. ಇದನ್ನೂ ಓದಿ:ಹಿಂದೂವಲ್ಲದ ವ್ಯಕ್ತಿ ತಂದ ಆಹಾರ ಸ್ವೀಕರಿಸಲಾರೆ- ಝೊಮ್ಯಾಟೊ ಖಡಕ್ ತಿರುಗೇಟು

    ಈ ವೇಳೆ ಮನೆ ಬಾಗಿಲಿಗೆ ಆಹಾರದ ಡಬ್ಬ ತಂದ ಮುದಾಸೀರ್‍ನನ್ನು ಅಜಯ್ ಕುಮಾರ್ ನಿರ್ಲಕ್ಷಿಸಿದ್ದಲ್ಲದೆ, ಆತ ತಂದಿದ್ದ ಆಹಾರವನ್ನು ಪಡೆಯಲು ನಿರಾಕರಿಸಿ ಕಳುಹಿಸಿದ್ದಾರೆ. ಇದರಿಂದ ಬೇಸತ್ತ ಮುದಾಸೀರ್ ಗ್ರಾಹಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಇದನ್ನೂ ಓದಿ:ನೋವಾಗಿದೆ, ನಾನೇನು ಮಾಡಲು ಸಾಧ್ಯ, ನಾನು ಬಡವ: ಝೊಮ್ಯಾಟೊ ಡೆಲಿವರಿ ಬಾಯ್

    ಆದ್ದರಿಂದ ಪೊಲೀಸರು ಗ್ರಾಹಕನ ವಿರುದ್ಧ ಭಾರತೀಯ ದಂಡ ಸಂಹಿತೆಯಡಿ(ಐಪಿಸಿ) ಸಂಬಂಧಪಟ್ಟ ಸೆಕ್ಷನ್‍ನಡಿ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.

  • ಲೋನ್ ನೀಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ ಕಪಾಳಕ್ಕೆ ಬಾರಿಸಿದ ಗ್ರಾಹಕ

    ಲೋನ್ ನೀಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್ ಕಪಾಳಕ್ಕೆ ಬಾರಿಸಿದ ಗ್ರಾಹಕ

    ವಿಜಯಪುರ: ಹಲವು ದಿನಗಳಿಂದ ಲೋನ್‍ಗಾಗಿ ಅಲೆದಾಡಿ ರೋಸಿ ಹೋದ ಗ್ರಾಹಕರೊಬ್ಬರು ತಮ್ಮನ್ನು ಸತಾಯಿಸಿದ ಬ್ಯಾಂಕ್  ಮ್ಯಾನೇಜರ್​ಗೆ ಕಪಾಳಮೋಕ್ಷ ಮಾಡಿದ ಘಟನೆ ವಿಜಯಪುರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದ ಕೆವಿಜಿ ಬ್ಯಾಂಕಿನಲ್ಲಿ ಈ ಘಟನೆ ನಡೆದಿದ್ದು, ಗ್ರಾಹಕ ಶರಣು ಮಾಮನೆ ಕೆವಿಜಿ ಬ್ಯಾಂಕ್ ಮ್ಯಾನೇಜರ್ ಬಿ.ವಿ. ಕುಲಕರ್ಣಿಗೆ ಕಪಾಳಮೋಕ್ಷ ಮಾಡಿದ್ದಾರೆ. ಎರಡು ದಿನದ ಹಿಂದೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಹಲವು ದಿನಗಳಿಂದ ಲೋನ್‍ಗಾಗಿ ಶರಣು ಅವರು ಬ್ಯಾಂಕಿಗೆ ಅಲೆದಾಡಿ ರೋಸಿ ಹೋಗಿದ್ದರು. ಹೀಗಾಗಿ ಲೋನ್ ನೀಡಲು ಸತಾಯಿಸುತ್ತಿದ್ದ ಮ್ಯಾನೇಜರ್ ಮೇಲೆ ಕೋಪಗೊಂಡು ಕಪಾಳಮೋಕ್ಷ ಮಾಡಿದ್ದಾರೆ. ಈ ಬಗ್ಗೆ ಯಾರಿಗೂ ತಿಳಿದಿರಲಿಲ್ಲ. ಆದರೆ ಬ್ಯಾಂಕಿನಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳಿಂದ ಈ ವಿಚಾರ ಬಯಲಾಗಿದೆ. ಕಪಾಳಮೋಕ್ಷ ಮಾಡಿದ ದೃಶ್ಯಗಳು ಬ್ಯಾಂಕ್ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಈ ಘಟನೆ ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಹಿಂದೂವಲ್ಲದ ವ್ಯಕ್ತಿ ತಂದ ಆಹಾರ ಸ್ವೀಕರಿಸಲಾರೆ- ಝೊಮ್ಯಾಟೊ ಖಡಕ್ ತಿರುಗೇಟು

    ಹಿಂದೂವಲ್ಲದ ವ್ಯಕ್ತಿ ತಂದ ಆಹಾರ ಸ್ವೀಕರಿಸಲಾರೆ- ಝೊಮ್ಯಾಟೊ ಖಡಕ್ ತಿರುಗೇಟು

    ನವದೆಹಲಿ: ಹಿಂದೂ ಅಲ್ಲದ ವ್ಯಕ್ತಿ ತಂದಿರುವ ಆಹಾರವನ್ನು ನಾನು ಸೇವಿಸಲಾರೆ. ಹಾಗಾಗಿ ನನ್ನ ಆರ್ಡರ್ ಕ್ಯಾನ್ಸಲ್ ಮಾಡುತ್ತೇನೆ ಎಂದು ಹೇಳಿದ್ದ ವ್ಯಕ್ತಿಗೆ ಝೊಮ್ಯಾಟೊ ಕಂಪನಿ ಖಡಕ್ ತಿರುಗೇಟು ನೀಡಿದೆ.

    ಅಮಿತ್ ಶುಕ್ಲಾ ತಮ್ಮ ಆರ್ಡರ್ ಕ್ಯಾನ್ಸಲ್ ಮಾಡಿ ಝೊಮ್ಯಾಟೊ ಆ್ಯಪ್ ಅನ್ ಇನ್ಸಟಾಲ್ ಮಾಡಿಕೊಂಡು ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು. ಝೊಮ್ಯಾಟೊ ಆರ್ಡರ್ ನಾನು ಕ್ಯಾನ್ಸಲ್ ಮಾಡಿದ್ದೇನೆ. ಕಾರಣ ಹಿಂದೂ ಅಲ್ಲದ ವ್ಯಕ್ತಿಯ ಕೈಯಲ್ಲಿ ನನಗೆ ಆಹಾರ ಕಳುಹಿಸಲಾಗುತ್ತಿತ್ತು. ನಾನು ಡೆಲಿವರಿ ಬಾಯ್ ನನ್ನು ಬದಲಿಸಿ ಎಂದು ಕೇಳಿದ್ದಕ್ಕೆ ಆಗಲ್ಲ ಎಂದರು.

    ಕೊನೆಗೆ ಆರ್ಡರ್ ಕ್ಯಾನ್ಸಲ್ ಮಾಡಿದ್ದರಿಂದ ಹಣ ರಿಫಂಡ್ ಮಾಡಲು ಸಾಧ್ಯವಿಲ್ಲ ಎಂದು ಕಂಪನಿ ತಿಳಿಸಿತು. ನೀವು ಡೆಲಿವರಿ ತೆಗೆದುಕೊಳ್ಳುವಂತೆ ನನ್ನ ಮೇಲೆ ಒತ್ತಡ ಹಾಕುವಂತಿಲ್ಲ ಮತ್ತು ನನಗೆ ರಿಫಂಡ್ ಬೇಕಾಗಿಲ್ಲ. ಹಾಗಾಗಿ ಆರ್ಡರ್ ಕ್ಯಾನ್ಸಲ್ ಮಾಡಿ ಎಂದು ಅಮಿತ್ ಟ್ವಿಟ್ಟರ್ ನಲ್ಲಿ ಝೊಮ್ಯಾಟೊಗೆ ಟ್ಯಾಗ್ ಮಾಡಿಕೊಂಡಿದ್ದರು.

    ಮತ್ತೊಂದು ಟ್ವೀಟ್‍ನಲ್ಲಿ ಝೊಮ್ಯಾಟೊ ಆ್ಯಪ್ ಅನ್ ಇನ್ಸಟಾಲ್ ಬಗ್ಗೆ ಹೇಳಿಕೊಂಡಿರುವ ಅಮಿತ್, ನಾನು ಆ ವ್ಯಕ್ತಿಯಿಂದ ಆಹಾರ ಸ್ವೀಕರಿಸಲ್ಲ ಎಂದು ಹೇಳುತ್ತಿದ್ದರೂ ಕಂಪನಿ ನನ್ನ ಮೇಲೆ ಒತ್ತಡ ಹಾಕುತ್ತಿದೆ. ಆರ್ಡರ್ ಕ್ಯಾನ್ಸಲ್ ಮಾಡಿದ್ರೂ ರಿಫಂಡ್ ಮಾಡಿಲ್ಲ. ಈ ಸಂಬಂಧ ನಮ್ಮ ವಕೀಲರ ಬಳಿ ಚರ್ಚಿಸುತ್ತೇನೆ ಎಂದು ಹೇಳುವ ಮೂಲಕ ಕೋರ್ಟ್ ಮೊರೆ ಹೋಗುವ ಮಾಹಿತಿ ನೀಡಿದ್ದಾರೆ.

    ಝೊಮ್ಯಾಟೊ ತಿರುಗೇಟು:
    ಅಮಿತ್ ಶುಕ್ಲಾ ಟ್ವೀಟಿಗೆ ಪ್ರತಿಕ್ರಿಯಿಸಿರುವ ಝೊಮ್ಯಾಟೊ, ಆಹಾರಕ್ಕೆ ಯಾವುದೇ ಧರ್ಮವಿರಲ್ಲ. ಆಹಾರವೇ ಒಂದು ಧರ್ಮ ಎಂದು ಚಿಕ್ಕದಾಗಿ ಬರೆದು ಖಡಕ್ ತಿರುಗೇಟು ನೀಡಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಝೊಮ್ಯಾಟೊ ಸ್ಥಾಪಕ ದೀಪೇಂದ್ರ ಗೊಯಲ್, ನಮಗೆ ಐಡಿಯಾ ಆಫ್ ಇಂಡಿಯಾ, ಗೌರವಯುತ ಗ್ರಾಹಕರು ಮತ್ತು ಪಾಟ್ರ್ನನರ್ ಗಳ ವಿವಿಧತೆಯ ಬಗ್ಗೆ ಹೆಮ್ಮೆ ಇದೆ. ಆದರೆ ನಮ್ಮ ಮೌಲ್ಯಗಳಿಗೆ ಅಡ್ಡಿಯುಂಟು ಮಾಡುವ ವ್ಯವಹಾರವನ್ನು ಕಳೆದುಕೊಳ್ಳುವುದರಿಂದ ನಮಗೆ ಯಾವುದೇ ರೀತಿಯಲ್ಲಿ ದುಃಖ ಆಗಲಾರದು ಎಂದು ಬರೆದು ಕೊನೆಗೆ ತ್ರಿವರ್ಣ ಧ್ವಜದ ಟಿಕ್ಕರ್ ಹಾಕಿಕೊಂಡಿದ್ದಾರೆ.

  • 1 ರೂ. ಕಡಿಮೆ ಕೊಟ್ಟಿದ್ದಕ್ಕೆ ಗ್ರಾಹಕರ ಮೇಲೆ ಕಾದ ಎಣ್ಣೆ ಎರಚಿದ

    1 ರೂ. ಕಡಿಮೆ ಕೊಟ್ಟಿದ್ದಕ್ಕೆ ಗ್ರಾಹಕರ ಮೇಲೆ ಕಾದ ಎಣ್ಣೆ ಎರಚಿದ

    ಆಗ್ರಾ: ಸಮೋಸಕ್ಕೆ 1 ರೂಪಾಯಿ ಕಡಿಮೆ ಕೊಟ್ಟಿದ್ದಕ್ಕೆ ರೊಚ್ಚಿಗೆದ್ದ ವ್ಯಾಪಾರಿಯೋರ್ವ ಗ್ರಾಹಕನ ಸಹೋದರನ ಮೈಮೇಲೆ ಕಾದ ಎಣ್ಣೆ ಎರಚಿ ವಿಕೃತಿ ಮೆರೆದಿದ್ದಾನೆ.

    ಮಂಗಳವಾರದಂದು ಉತ್ತರಪ್ರದೇಶದ ಮಥುರಾದಲ್ಲಿ ಈ ಘಟನೆ ನಡೆದಿದೆ. ಮಥುರಾ ನಿವಾಸಿ ಹೇಮರಾಜ್(26) ಹಾಗೂ ಆತನ ಸಹೋದರ ವಿಷ್ಣು(22) ಇಬ್ಬರ ಮೇಲು ಕಾದ ಎಣ್ಣೆ ಎರಚಲಾಗಿದೆ. ಕೇವಲ 1 ರೂ. ಹಣ ಕಡಿಮೆ ನೀಡಿದ್ದೇ ಅಂಗಡಿ ಮಾಲೀಕ ಸುರೇಶ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆಯಲು ಕಾರಣವಾಗಿದೆ.

    ರೆಟಿಯಾ ಮಾರುಕಟ್ಟೆಯಲ್ಲಿರುವ ಸ್ವೀಟ್ ಅಂಗಡಿಗೆ ಹೋಗಿ ವಿಷ್ಣು ಸಮೋಸಾ ಖರೀದಿಸಿದ್ದನು. ಈ ವೇಳೆ ಆತನ ಬಳಿಕ ಕೇವಲ ಐದು ರೂಪಾಯಿ ಇದ್ದ ಕಾರಣಕ್ಕೆ ಅಷ್ಟನ್ನೇ ಅಂಗಡಿ ಮಾಲೀಕನಿಗೆ ಯುವಕ ಕೊಟ್ಟಿದ್ದಾನೆ. ಆದರೆ ಸಮೋಸಕ್ಕೆ 6 ರೂ. ನೀನು 1 ರೂ. ಕಡಿಮೆ ಕೊಟ್ಟಿದ್ದೀಯಾ ಎಂದು ಮಾಲೀಕ ಯುವಕನ ಮೇಲೆ ಜಗಳಕ್ಕಿಳಿದಿದ್ದಾನೆ. ಬಳಿಕ ಜಗಳ ದೊಡ್ಡದಾಗಿ ಅಂಗಡಿ ಮಾಲೀಕ ಹಾಗೂ ಅವನ ಮಕ್ಕಳು ಯುವಕನನ್ನು ಬೈದು, ಮನ ಬಂದಂತೆ ಥಳಿಸಿದ್ದಾರೆ.

    ಈ ವೇಲೆ ಸಹೋದರನನ್ನು ರಕ್ಷಸಿಲು ಹೇಮರಾಜ್ ಬಂದು ಗಲಾಟೆ ನಿಲ್ಲುಸುವಂತೆ ಹೇಳಿದ್ದಾನೆ. ಆದರೆ ಸಿಟ್ಟಿನಲ್ಲಿದ್ದ ಮಾಲೀಕ ಮಾತ್ರ ಯಾರ ಮಾತನ್ನು ಕೇಳದೆ ಅವರಿಬ್ಬರ ಮೇಲೆ ಕಾದ ಎಣ್ಣೆಯನ್ನು ಎರಚಿ ಕ್ರೌರ್ಯ ಮೆರೆದಿದ್ದಾನೆ. ಪರಿಣಾಮ ಹೇಮರಾಜ್‍ಗೆ ಗಂಭೀರ ಗಾಯಗೊಂಡಿದ್ದು, ವಿಷ್ಣುಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಇಬ್ಬರು ಸಹೋದರರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಆರೋಪಿ ಸುರೇಶ್ ಮಾತ್ರ ನಾನೇನು ತಪ್ಪು ಮಾಡಿಲ್ಲ. ಸಮೋಸದ ಬಾಕಿ 1 ರೂಪಾಯಿ ಕೊಡಿ ಎಂದಿದ್ದಕ್ಕೆ ಸಹೋದರರು ನಮ್ಮ ಅಂಗಡಿಯನ್ನು ಧ್ವಂಸ ಮಾಡಿ, ಹಣ ದೋಚಿದ್ದಾರೆ ಎಂದು ಆರೋಪಿಸಿದ್ದಾನೆ.

    ಈ ಬಗ್ಗೆ ಈಗಾಗಲೇ ಪೊಲೀಸರು 6 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆರೋಪಿ ಸುರೇಶ್ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • IMA ವಿರುದ್ಧ 11 ಸಾವಿರಕ್ಕೇರಿದ ಕಂಪ್ಲೆಂಟ್- ತನಿಖೆಯ ಹೊಣೆ ಎಡಿಜಿಪಿ ಸಲೀಂಗೆ ಸಾಧ್ಯತೆ

    IMA ವಿರುದ್ಧ 11 ಸಾವಿರಕ್ಕೇರಿದ ಕಂಪ್ಲೆಂಟ್- ತನಿಖೆಯ ಹೊಣೆ ಎಡಿಜಿಪಿ ಸಲೀಂಗೆ ಸಾಧ್ಯತೆ

    ಬೆಂಗಳೂರು: ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ.

    ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ.

    ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸುವ ಸಾಧ್ಯತೆಯೂ ಇದೆ. ಈ ಮಧ್ಯೆ ಸಾವಿರಾರು ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ಪಂಗನಾಮ ಹಾಕಿ ನಾಪತ್ತೆಯಾಗಿರುವ ಐಎಂಎ ಮಾಲೀಕನ ವಿರುದ್ಧ ರಸ್ತೆಗಿಳಿದಿದ್ದ ಮೋಸ ಹೋದವರು, ಧಿಡೀರ್ ಅಂತ ಶಾಸಕ ರೋಷನ್ ಬೇಗ್ ಮನೆಗೆ ಲಗ್ಗೆ ಇಟ್ಟಿದರು. ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

    ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನ ಪೊಲೀಸರು ಮನವೊಲಿಸೋ ಯತ್ನ ಮಾಡಿದರು. ರೋಷನ್ ಬೇಗ್ ಮನೆಯಲ್ಲಿ ಇಲ್ಲ ಅನ್ನೋದು ತಿಳಿದು ಪ್ರತಿಭಟನಾಕಾರರು ಜಾಗ ಖಾಲಿ ಮಾಡಿದರು. ಶಾಸಕ ರೋಷನ್ ಬೇಗ್ ದೆಹಲಿಯಿಂದ ಬೆಂಗಳೂರಿಗೆ ಮರಳುತ್ತಿದ್ದು ಮುಂಜಾಗೃತ ಕ್ರಮವಾಗಿ ರೋಷನ್ ಬೇಗ್ ಮನೆ ಬಳಿ ಪೊಲೀಸ್ ಬೀಗಿ ಭದ್ರತೆ ಒದಗಿಸಲಾಗಿದೆ.

  • ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

    ಐಎಂಎ ಪ್ರಕರಣ- ಅಜ್ಜಿ, 3ನೇ, 4ನೇ ಪತ್ನಿ, ಮಕ್ಕಳು ಸೇರಿ 10 ಮಂದಿಯೊಂದಿಗೆ ಖಾನ್ ಎಸ್ಕೇಪ್

    ಬೆಂಗಳೂರು: ರಾಜ್ಯಾದ್ಯಂತ ಭಾರೀ ವಂಚನೆ ಮಾಡಿದ ಐಎಂಎ ಜ್ಯುವೆಲ್ಲರಿ ಮಾಲೀಕ ಮನ್ಸೂರ್ ತನ್ನ ಅಜ್ಜಿ, 3ನೇ ಪತ್ನಿ, 4ನೇ ಹೆಂಡತಿ ಹಾಗೂ ಮಕ್ಕಳು ಸೇರಿದಂತೆ ಸುಮಾರು 10 ಮಂದಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸೋಮವಾರ(ಮೇ 10)ದಂದು 2 ತಿಂಗಳ ಬಡ್ಡಿ ಹಾಕೋಣ ಎಂದು ಹೇಳಿದ್ದ ಖತರ್ನಾಕ್ ಖಾನ್ ಬಗ್ಗೆ ಇದೀಗ ಮತ್ತಷ್ಟು ದೋಖಾಗಳು ಬಯಲಾಗುತ್ತಿವೆ. ಐಎಂಎ ಕಂಪನಿ ವಂಚನೆಯಿಂದ ಕಂಗಾಲಾದ ಗ್ರಾಹಕರು ಬೀದಿಗಿಳಿಯುತ್ತಿದ್ದಂತೆಯೇ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಈ ವೇಳೆ ಆತನ ಒಂದೊಂದೇ ಖತರ್ನಾಕ್ ಸ್ಟೋರಿಗಳು ಹೊರಬರುತ್ತಿವೆ.

    1,900 ಕೋಟಿ ಹಣವಿರುವ ಖಾತೆಯಿಂದ ಬರೋಬ್ಬರಿ 1,200 ಕೋಟಿ ಹಣವನ್ನು ತನ್ನ ಮತ್ತೊಂದು ಖಾತೆಗೆ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಹೀಗೆ ಹಣ ವರ್ಗಾವಣೆ ಮಾಡಿಕೊಂಡ ತಕ್ಷಣ ಮನ್ಸೂರ್ ತನ್ನ ಕುಟುಂಬಸ್ಥರ ಜೊತೆ ಎಸ್ಕೇಪ್ ಆಗಿದ್ದಾನೆ.

    ಈ ಮಧ್ಯೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಾಟಕವಾಡಿದ್ದನು. ಈ ಹೇಳಿಕೆ ನೀಡಿದ ಬಳಿಕ ಆತ ನಿನ್ನೆಯೇ 17 ಕೋಟಿ ಹಣವನ್ನು ವರ್ಗಾವಣೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಇತ್ತ ಐಎಂಎ ಮಾಲೀಕ ಮನ್ಸೂರ್ ಅವರಿಗೆ ಏನು ಆಗಿಲ್ಲ ಎಂದು ಜ್ಯುವೆಲ್ಲರಿಯ ಸೇಲ್ಸ್ ಅಸೋಶಿಯೇಟ್ ಮಹಮ್ಮದ್ ಶಾಬಾದ್ ತಿಳಿಸಿದ್ದಾರೆ.

    ವಂಚನೆ ಹೇಗೆ?
    ಐಎಂಎ ಜ್ಯುವೆಲ್ಸ್ ಚಿನ್ನ ಖರೀದಿಸುವ ಗ್ರಾಹಕರಿಗೆ ಮೇಕಿಂಗ್ ಹಾಗೂ ವೇಸ್ಟೇಜ್ ಶುಲ್ಕ ವಿಧಿಸುತ್ತಿರಲಿಲ್ಲ. ಈ ಪ್ರಕಟಣೆ ನೋಡಿ ಜನ ಚಿನ್ನ ಖರೀದಿ ಮಾಡುತ್ತಿದ್ದರು. ಖರೀದಿಗೆ ಬಂದ ಗ್ರಾಹಕರಿಗೆ ಕಂಪನಿಯಲ್ಲಿ ಹಣ ಹೂಡುವಂತೆ ಸಿಬ್ಬಂದಿ ಪುಸಲಾಯಿಸುತ್ತಿದ್ದರು. ಜ್ಯುವೆಲ್ಸ್ ಸಿಬ್ಬಂದಿಯ ಮಾತಿಗೆ ಮರುಳಾದ ಜನ ತಮ್ಮಲ್ಲಿದ್ದ ಹಣವನ್ನು ಹೂಡಿಕೆ ಮಾಡುತ್ತಿದ್ದರು. 1 ಲಕ್ಷ ರೂ. 3 ಸಾವಿರ ರೂ. ನಂತೆ ಕಂಪನಿ ಬಡ್ಡಿ ನೀಡುತಿತ್ತು. ಕಂಪನಿ ಸರಿಯಾದ ಸಮಯದಲ್ಲಿ ಲಾಭಾಂಶ ನೀಡುತ್ತಿದ್ದ ಕಾರಣ ವಿಶ್ವಾಸಾರ್ಹತೆ ಗಳಿಸಿಕೊಂಡಿತ್ತು. ಲಾಭಾಂಶ ಪಡೆದ ಗ್ರಾಹಕರು ಸ್ನೇಹಿತರಿಗೆ ಹೇಳುತ್ತಿದ್ದ ಕಾರಣ ಅವರು ಹೂಡಿಕೆ ಮಾಡತೊಡಗಿದರು. ಭಾರೀ ಪ್ರಚಾರ ಸಿಕ್ಕಿದ ಪರಿಣಾಮ ಹೂಡಿಕೆ ಹೆಚ್ಚಾಯಿತು. ಆದರೆ ಕಳೆದ 2-3 ತಿಂಗಳಿನಿಂದ ಸಂಸ್ಥೆ ಬಡ್ಡಿ ನೀಡಿರಲಿಲ್ಲ. ಈ ನಡುವೆ ಜೂನ್ 10 ರಂದು ಸಂಪೂರ್ಣ ಹಣ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಜೂ.9 ರಂದು ಮಾಲೀಕ ಮನ್ಸೂರ್ ಅಲಿ ಖಾನ್ ಆತ್ಮಹತ್ಯೆಯ ವಿಡಿಯೋ ವೈರಲ್ ಆದ ಬಳಿಕ ಮಳಿಗೆಯ ಮುಂದೆ ಜನರು ಜಮಾಯಿಸಿ ಹೂಡಿದ್ದ ಹಣವನ್ನು ಕೇಳಲು ಆರಂಭಿಸಿದರು.