Tag: ಗ್ರೆನೇಡ್ ದಾಳಿ

  • ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ – ಗ್ರೆನೇಡ್ ದಾಳಿಗೆ ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ – ಗ್ರೆನೇಡ್ ದಾಳಿಗೆ ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಹಾಡಹಗಲೇ ಶ್ರೀನಗರದ ಜನನಿಬಿಡ ಮಾರುಕಟ್ಟೆ ಪ್ರದೇಶದಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಮತ್ತು ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    Srinagar

    ಇಂದು ಭಾನುವಾರವಾದ ಕಾರಣ ಮಾರುಕಟ್ಟೆಯಲ್ಲಿ ಜನ ಜಂಗುಳಿ ಇರುತ್ತದೆ. ಇದನ್ನೇ ಗುರಿಯಾಗಿಟ್ಟುಕೊಂಡು ಉಗ್ರರು ದಾಳಿ ನಡೆಸಿದ್ದಾರೆ.ಸಂಜೆ 4:20ರ ಸುಮಾರಿಗೆ ಹರಿ ಸಿಂಗ್ ಹೈ ಸ್ಟ್ರೀಟ್‍ನಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳ ನಿಯೋಜನೆಯ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ ಮೊಹಮ್ಮದ್ ಅಸ್ಲಾಮ್ ಮಖ್ದೂಮಿ(71) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಉಳಿದ ಗಾಯಾಳುಗಳನ್ನು ಶ್ರೀ ಮಹಾರಾಜ ಹರಿ ಸಿಂಗ್ (ಎಸ್‍ಎಂಹೆಚ್‍ಎಸ್) ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಮತ್ತು ಘಟನೆಯಲ್ಲಿ ಗಾಯಗೊಂಡವರ ಪೈಕಿ ಪೊಲೀಸರೂ ಸಹ ಇದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಕೇಶ್ ಬಲ್ವಾಲ್ ಹೇಳಿದ್ದಾರೆ. ಇದನ್ನೂ ಓದಿ:  ಭಾರತ ಮಹಿಳಾ ಕ್ರಿಕೆಟ್ ತಂಡಕ್ಕೆ ಅನುಷ್ಕಾ ಶರ್ಮಾ ಶುಭ ಹಾರೈಕೆ

    ಇದೀಗ ಘಟನಾ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಸೇರಿದಂತೆ ಭದ್ರತಾ ಪಡೆಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಕೋರ ಉಗ್ರನಿಗಾಗಿ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ. ಅತಿ ಶೀಘ್ರದಲ್ಲೇ ಉಗ್ರನನ್ನು ಪತ್ತೆ ಹಚ್ಚಿ ಬಂಧಿಸುವುದಾಗಿ ಭದ್ರತಾ ಪಡೆಗಳು ತಿಳಿಸಿವೆ. ಈವರೆಗೆ ಯಾವುದೇ ಉಗ್ರ ಸಂಘಟನೆಯೂ ಈ ಘಟನೆಯ ಹೊಣೆಯನ್ನು ಹೊತ್ತುಕೊಂಡಿಲ್ಲ ಎಂದು ತಿಳಿದುಬಂದಿದೆ.

    ಸದ್ಯ ಈ ಕುರಿತಂತೆ ಟ್ವೀಟ್ ಮಾಡಿರುವ ಎಂದು ಸಚಿವೆ ಮೆಹಬೂಬಾ ಮುಫ್ತಿ ಅವರು, ಈ ಭೀಕರ ದಾಳಿಯನ್ನು ಖಂಡಿಸುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಜನರು ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ. ದುಃಖಕರ ವಿಚಾರವೆಂದರೆ ಭಾರತ ಅಥವಾ ಪಾಕಿಸ್ತಾನವು ಈ ಸಂಘರ್ಷವನ್ನು ಕೊನೆಗೊಳಿಸಲು ಮತ್ತು ಈ ರಕ್ತಪಾತವನ್ನು ನಿಲ್ಲಿಸಲು ಏನನ್ನೂ ಮಾಡುತ್ತಿಲ್ಲ. ದುಃಖದಲ್ಲಿರುವ ಕುಟುಂಬಸ್ಥರಿಗೆ ಮತ್ತು ಅವರ ಪ್ರೀತಿಪಾತ್ರರಿಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳಾ ವಿಶ್ವಕಪ್ 2022- ಪಾಕ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

  • ಶಂಕಿತ ಉಗ್ರರ ಗುಂಡಿಗೆ ಪೊಲೀಸ್ ಅಧಿಕಾರಿ ಸಾವು

    ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಸನಾವೋದಲ್ಲಿ ಶನಿವಾರ ನಡೆದ ಶಂಕಿತ ಉಗ್ರರ ದಾಳಿಯಲ್ಲಿ ಹೆಡ್ ಕಾನ್‍ಸ್ಟೇಬಲ್ ಅಲಿ ಮೊಹಮ್ಮದ್ ಗನಿ ಹತ್ಯೆಯಾಗಿದ್ದಾರೆ.

    ಹೆಡ್ ಕಾನ್‍ಸ್ಟೇಬಲ್ ಮೊಹಮ್ಮದ್ ಗನಿ ಅವರನ್ನು ಕುಲ್ಗಾಮ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ದಾಳಿ ವೇಳೆ ಗನಿ ಅವರಿಗೆ ಗುಂಡು ತಗುಲಿತ್ತು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

    ಮೂರು ವಾರಗಳ ಹಿಂದೆ ಕಾಶ್ಮೀರದ ಇದೇ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾಗಿದ್ದರು. ಇದನ್ನೂ ಓದಿ: ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ನೆರೆಮನೆಯಾತನ ಬಂಧನ

    ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ:
    ಇದೇ ಸಂದರ್ಭದಲ್ಲಿ ಶ್ರೀನಗರದ ಮಹಾರಾಜ್ ಬಜಾರ್ ಪ್ರದೇಶದಲ್ಲಿ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಸದ್ಯ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪೆಗಾಸಸ್ ಖರೀದಿಸಿ ಮೋದಿ ಸರ್ಕಾರ ದೇಶದ್ರೋಹ ಮಾಡಿದೆ: ರಾಹುಲ್ ಗಾಂಧಿ

    ಶನಿವಾರ ಸಂಜೆ ಸುಮಾರು 4.30ರ ವೇಳೆಗೆ ಸಿಆರ್‍ಪಿಎಫ್ ತಂಡ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಗ್ರೆನೇಡ್ ದಾಳಿ ನಡೆದಿತ್ತು. ದಾಳಿ ನಡೆದಿರುವ ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವರಿದಿದ್ದು, ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

  • ಶ್ರೀನಗರದಲ್ಲಿ ಗ್ರೆನೇಡ್ ದಾಳಿ- ಓರ್ವ ಸಾವು, 15 ಮಂದಿಗೆ ಗಾಯ

    ಶ್ರೀನಗರದಲ್ಲಿ ಗ್ರೆನೇಡ್ ದಾಳಿ- ಓರ್ವ ಸಾವು, 15 ಮಂದಿಗೆ ಗಾಯ

    ಜಮ್ಮು-ಕಾಶ್ಮೀರ: ಭಾರತ ಸರ್ಕಾರವು ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು, ಆದರೂ ಅಲ್ಲಿ ಒಂದಲ್ಲ ಒಂದು ರೀತಿಯ ಘಟನೆಗಳು ನಡೆಯುತ್ತಲೇ ಇದೆ.

    ಇಂದು ಮಧ್ಯಾಹ್ನ 1.20ರ ಸುಮಾರಿಗೆ ಶ್ರೀನಗರದಲ್ಲಿರುವ ವೆಜಿಟೆಬಲ್ ಮಾರ್ಕೆಟ್ ಬಳಿ ಗ್ರೆನೇಡ್ ದಾಳಿ ನಡೆದಿದ್ದು, ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಇದಕ್ಕೂ ಮೊದಲು ಉತ್ತರ ಕಾಶ್ಮೀರದ ಸೊಪುರ್ ನಲ್ಲಿ ಉಗ್ರರು ನಡೆಸಿದ್ದ ಗ್ರೆನೇಡ್ ದಾಳಿಗೆ 15 ಮಂದಿ ನಾಗರಿಕರು ಗಾಯಗೊಂಡಿದ್ದರು. ಈ ಘಟನೆ ನಡೆದು ಒಂದು ವಾರದ ಬಳಿಕ ಇದೀಗ ಮತ್ತೊಂದು ಘಟನೆ ನಡೆದಿದೆ.

    ಇಂದು ಮಧ್ಯಾಹ್ನ ಹರಿಸಿಂಗ್ ಹೈ ಸ್ಟ್ರೀಟ್ ನಲ್ಲಿರುವ ವೆಜಿಟೆಬಲ್ ಮಾರ್ಕೆಟ್ ಜನಜಂಗುಳಿಯಿಂದ ಕೂಡಿತ್ತು. ಇದೇ ಸಂದರ್ಭವನ್ನು ಉಪಯೋಗಿಸಿಕೊಂಡು ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಘಟನೆ ನಡೆದ ಸ್ಥಳದಲ್ಲಿ ಜಮಾಯಿಸಿದ್ದು, ಕೃತ್ಯ ಎಸಗಿದವರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

    ಇದು ಕಳೆದ 10 ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ನಡೆದ ಮೂರನೇ ಘಟನೆಯಾಗಿದೆ. ಕಳೆದ ವಾರ ಸೊಪೊರೆಯಲ್ಲಿ ನಾಗರಿಕರು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದು, ಅದರಲ್ಲಿ 15 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮೊದಲು ಅಕ್ಟೋಬರ್ 26ರಂದು ಸಿಆರ್‌ಪಿಎಫ್ ತಂಡವು ಚೆಕ್ ಪೋಸ್ಟ್ ನಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಉಗ್ರರು ಗ್ರೆನೇಡ್ ದಾಳಿ ಮಾಡಿದ್ದರು. ಪರಿಣಾಮ 6 ಮಂದಿ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು.