Tag: ಗ್ಲಿಂಪ್ಸ್

  • ಕಿಕ್ ಕೊಟ್ಟ ‘ಸುಬ್ರಹ್ಮಣ್ಯ’ ಫಸ್ಟ್ ಗ್ಲಿಂಪ್ಸ್: ಆರ್ಮುಗ ರವಿಶಂಕರ್ ಮಗನ ಆರ್ಭಟ

    ಕಿಕ್ ಕೊಟ್ಟ ‘ಸುಬ್ರಹ್ಮಣ್ಯ’ ಫಸ್ಟ್ ಗ್ಲಿಂಪ್ಸ್: ಆರ್ಮುಗ ರವಿಶಂಕರ್ ಮಗನ ಆರ್ಭಟ

    ರ್ಮುಗ ರವಿಶಂಕರ್ ‘(Ravishankar) ಸುಬ್ರಹ್ಮಣ್ಯ’ (Subrahmanya) ಸಿನಿಮಾ ಮೂಲಕ ಮಗ ಅದ್ವೈ ಅವರನ್ನು ಸಿನಿಮಾಪ್ರೇಮಿಗಳಿಗೆ ಪರಿಚಯಿಸುತ್ತಿದ್ದಾರೆ. ಈ ಚಿತ್ರದ ಪ್ರೀ-ಲುಕ್ ಈಗಾಗಲೇ ಗಮನ ಸೆಳೆದಿದ್ದು, ಇದೀಗ ಚಿತ್ರತಂಡ ‘ಸುಬ್ರಹ್ಮಣ್ಯ’ನ ಫಸ್ಟ್ ಗ್ಲಿಂಪ್ಸ್ ನ್ನು ಅನಾವರಣ ಮಾಡಿದೆ. ಯೂಟ್ಯೂಬ್ ನಲ್ಲಿ ಬಿಡುಗಡೆಗೂ ಮೊದಲೇ ದುಬೈನಲ್ಲಿ ನಡೆದ ಸೈಮಾದಲ್ಲಿ ‘ಸುಬ್ರಹ್ಮಣ್ಯ’ನ ಮೊದಲ ತುಣುಕನ್ನು ರಿಲೀಸ್ ಮಾಡಲಾಯಿತು.

    ಇಂದು ಎಸ್ ಜಿ ಮೂವೀಸ್ ಯೂಟ್ಯೂಬ್ ನಲ್ಲಿ ಸುಬ್ರಹ್ಮಣ ಗ್ಲಿಂಪ್ಸ್ ಬಿಡುಗಡೆಯಾಗಿದೆ. 3 ನಿಮಿಷ 14 ಸೆಕೆಂಡ್ ಇರುವ ಝಲಕ್ ಮೈನವಿರೇಳಿಸುವಂತಿದೆ. ವಿಷಪೂರಿತ ಹಾವುಗಳಿಂದ ತುಂಬಿದ ಬಾವಿಗೆ ಅದ್ವೈ ಹಗ್ಗದ ಮೂಲಕ ಎಂಟ್ರಿ ಕೊಡುತ್ತಾರೆ. ಆ ಬಾವಿಯಲ್ಲಿರುವ ಪುರಾತನ ಪುಸ್ತಕವನ್ನು ಎತ್ತಿಕೊಂಡು ಹೊರ ಬರ್ತಾರೆ. ಎಲ್ಲಾ ಹಾವುಗಳು ಅವನನ್ನು ಬೆನ್ನಟ್ಟುವುದರೊಂದಿಗೆ ಓಡಲು ಪ್ರಾರಂಭಿಸುತ್ತಾರೆ. ಅದ್ವೈ ಸ್ಟೈಲೀಶ್ ಲುಕ್ ನಲ್ಲಿ ನೋಡುಗರಿಗೆ ಇಷ್ಟವಾಗ್ತಾರೆ. ಕೊನೆಯ ಕೆಲ ಸೆಕೆಂಡ್ ಗಳು ಅದ್ಭುತವಾಗಿ ಕಟ್ಟಿಕೊಡಲಾಗಿದೆ. ವಿಷ್ಯುವಲ್ಸ್ ಟ್ರೀಟ್ ಹಾಗೂ ಗ್ರಾಫಿಕ್ಸ್ ವರ್ಕ್ ಕೆಲಸಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

    ಸುಬ್ರಹ್ಮಣ ಗ್ಲಿಂಪ್ಸ್ ಅರವತ್ತಕ್ಕೂ ಹೆಚ್ಚು VFX ತಂತ್ರಜ್ಞನರು ಕಳೆದ ನಾಲ್ಕು ತಿಂಗಳಿನಿಂದ ದುಡಿದಿದ್ದಾರೆ.  ‘ಸುಬ್ರಹ್ಮಣ್ಯ’ದ ಕ್ರಿಯೇಟಿವ್ ನಿರ್ಮಾಪಕ ಮತ್ತು ವಿಎಫ್‌ಎಕ್ಸ್ ಮೇಲ್ವಿಚಾರಕ ನಿಖಿಲ್ ಕೋಡೂರು ನೇತೃತ್ವದಲ್ಲಿ, ಮುಂಬೈ, ಹೈದರಾಬಾದ್, ಬೆಂಗಳೂರು ಮತ್ತು ಚೆನ್ನೈನ ಪ್ರಸಿದ್ಧ ಸ್ಟುಡಿಯೋಗಳಲ್ಲಿ VFX ಕೆಲಸ ನಡೆದಿದೆ. ‘ಸುಬ್ರಹ್ಮಣ್ಯ’ ಸಿನಿಮಾ ಸೋಶಿಯೋ-ಫ್ಯಾಂಟಸಿ ಶೈಲಿಯ ಸಿನಿಮಾ. ಜೊತೆ ಅಡ್ವೆಂಚರ್ ಎಲಿಮೆಂಟ್ಸ್‌ ಕೂಡ ಈ ಸಿನಿಮಾದಲ್ಲಿದೆ.

    ‘ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ‘ಕೆಜಿಎಫ್’ ಹಾಗೂ ‘ಸಲಾರ್’ ಸಿನಿಮಾಗೆ ಸಂಗೀತ ನೀಡಿರುವ ರವಿ ಬಸ್ರೂರು ಈ ಸಿನಿಮಾಗೆ ಟ್ಯೂನ್ ಹಾಕುತ್ತಿದ್ದಾರೆ. ವಿಘ್ನೇಶ್ ರಾಜ್ ಕ್ಯಾಮರಾ ವರ್ಕ್ ಇದ್ದರೆ, ವಿಜಯ್ ಎಂ. ಕುಮಾರ್ ಎಡಿಟಿಂಗ್ ಮಾಡುತ್ತಿದ್ದಾರೆ. ಮಗನಿಗಾಗಿ ಎರಡು ದಶಕಗಳ ಬಳಿಕ ಡೈರೆಕ್ಟರ್ಕ್ಯಾಪ್ಧರಿಸಿರೋ ರವಿಶಂಕರ್ ಚಿತ್ರರಂಗಕ್ಕೆ ಹೀರೋ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾ ಕೊಡುತ್ತಿದ್ದಾರೆ.

  • ಯಶ್ ಹುಟ್ಟು ಹಬ್ಬಕ್ಕೆ ‘ಟಾಕ್ಸಿಕ್’ ಟೀಮ್ ನಿಂದ ಸ್ಪೆಷಲ್ ಗಿಫ್ಟ್

    ಯಶ್ ಹುಟ್ಟು ಹಬ್ಬಕ್ಕೆ ‘ಟಾಕ್ಸಿಕ್’ ಟೀಮ್ ನಿಂದ ಸ್ಪೆಷಲ್ ಗಿಫ್ಟ್

    ನವರಿ 8ಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬ. ಈ ಹುಟ್ಟು ಹಬ್ಬವನ್ನು ಮತ್ತಷ್ಟು ರಂಗೇರಿಸಲು ಟಾಕ್ಸಿಕ್ ಟೀಮ್ ರೆಡಿ ಆಗುತ್ತಿದೆ. ಅಂದು ಚಿತ್ರದ ಗ್ಲಿಂಪ್ಸ್ ರಿಲೀಸ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಚಿತ್ರದ ಟೈಟಲ್ ಅನ್ನು ಹೊಸ ರೀತಿಯಲ್ಲೇ ತೋರಿಸಿದ್ದ ಟಾಕ್ಸಿಕ್ ಟೀಮ್, ಗ್ಲಿಂಪ್ಸ್ (Glimpse) ಅನ್ನು ಇನ್ನೂ ಬೇರೆಯದಾಗಿಯೇ ಪ್ರೇಕ್ಷಕರ ಮುಂದೆ ಇಡಲಿದ್ದಾರೆ.

    ಯಶ್ ಅವರ ಹುಟ್ಟು ಹಬ್ಬ ಮುಗಿಯುತ್ತಿದ್ದಂತೆಯೇ ಸಿನಿಮಾದ ಶೂಟಿಂಗ್ (Shooting) ಕೂಡ ಶುರುವಾಗಲಿದೆ. ಜನವರಿ (January) ಎರಡನೇ ವಾರದಿಂದ ಚಿತ್ರೀಕರಣಕ್ಕೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿತ್ರೀಕರಣಕ್ಕೆ ಈಗಿನಿಂದಲೇ ಭರ್ಜರಿ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ.

    ಯಶ್ (Yash) ಈ ಬಾರಿ ಪ್ಯಾನ್ ಇಂಡಿಯಾವನ್ನೂ ದಾಟಿಕೊಂಡು ಯೋಚನೆ ಮಾಡಿದ್ದಾರೆ. ಸಿನಿಮಾದ ಟೈಟಲ್ ಮತ್ತು ಆಯ್ಕೆ ಮಾಡಿಕೊಂಡಿರುವ ಕಥೆ ನೋಡಿದರೆ, ಇದೊಂದು ಹಾಲಿವುಡ್ ರೇಂಜ್ ನಲ್ಲಿ ತಯಾರಾಗುತ್ತಿರುವ ಕನ್ನಡದ ಸಿನಿಮಾ ಎಂದೇ ಹೇಳಬಹುದು. ಯಾವುದೇ ಭಾಷೆಯಲ್ಲಿ ಈ ಸಿನಿಮಾ ಬಂದರೂ, ಅದಕ್ಕೆ ತೊಂದರೆ ಆಗದಿರುವಂತೆ ‘ಟಾಕ್ಸಿಕ್’ (Toxic) ಎಂದು ಹೆಸರಿಟ್ಟಿದ್ದಾರೆ. ಇದು ಎಲ್ಲ ಭಾಷೆಗೂ ಸಲ್ಲುವಂತೆ ಟೈಟಲ್ ಆಗಿದೆ.

    ಇದರ ಜೊತೆಗೆ ಮತ್ತೊಂದು ವಿಷಯವೂ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ಇಂದು ರಿಲೀಸ್ ಆಗಿರುವ ಟೈಟಲ್ ಟೀಸರ್ ನಲ್ಲಿ ಅದರ ಛಾಯೆ ಕೂಡ ಇದೆ. ಟಾಕ್ಸಿಕ್ ಸಿನಿಮಾದಲ್ಲಿ ಇಂಟರ್ ನ್ಯಾಷನಲ್ ಡ್ರಗ್ಸ್ ಮಾಫಿಯಾ ಕುರಿತಾದ ಕಥೆಯನ್ನು ಹೇಳಲಿದ್ದಾರಂತೆ ನಿರ್ದೇಶಕ ಗೀತು ಮೋಹನದಾಸ್ (Geethu Mohan Das). ಟೈಟಲ್ ಟೀಸರ್ ನಲ್ಲಿ ಒಂದು ಕಡೆ ಯಶ್ ಕೈಯಲ್ಲಿ ಗನ್, ಬಾಯಲ್ಲಿ ಸಿಗಾರೆ ಮತ್ತು ಅವನ ಸುತ್ತಮುತ್ತ ಪೌಡರ್ ಹಾರುತ್ತಿದೆ. ಹಾಗಾಗಿ ಇದೊಂದು ಡ್ರಗ್ಸ್ ಮಾಫಿಯಾದ ಕಥೆ ಎಂದು ಹೇಳಲಾಗುತ್ತಿದೆ.

    ಮತ್ತೊಂದು ಅಚ್ಚರಿಯ ಸಂಗತಿ ಅಂದರೆ, ಈ ಚಿತ್ರದ ಮೂಲಕ ಯಶ್ ನಿರ್ಮಾಪಕರಾಗಿಯೂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕೆವಿಎನ್ ಪ್ರೊಡಕ್ಷನ್ (KVN Production) ಜೊತೆ ಮಾನ್ ಸ್ಟರ್ ಮೈಂಡ್ ಕ್ರಿಯೇಸನ್ಸ್‌ ಹೆಸರು ಕೂಡ ಇದ್ದು, ಈ ಸಂಸ್ಥೆಯು ಯಶ್ ಅವರದ್ದು ಎಂದು ಹೇಳಲಾಗುತ್ತಿದೆ. 2019 ರಲ್ಲಿ ಮಾನ್ ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಯನ್ನು ಯಶ್  ನೋಂದಣಿ ಮಾಡಿದ್ದಾರೆ. ಇದೀಗ ತಮ್ಮ 19ನೇ ಸಿನಿಮಾ ಮೂಲಕ ನಿರ್ಮಾಪಕರಾಗಿಯೂ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ತಮ್ಮ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದ ಸಿನಿಮಾಗಳನ್ನ ನಿರ್ಮಾಣ ಮಾಡಲು ಯಶ್ ನಿರ್ಧಾರ ಮಾಡಿದ್ದಾರೆ.

     

    ಈ ನಡುವೆ ಮತ್ತೊಂದು ಹೊಸ ವಿಷಯ ಹರಿದಾಡುತ್ತಿದೆ. ಮೊನ್ನೆಯಷ್ಟೇ ಈ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಚಿತ್ರಕ್ಕೆ ಕೇವಲ ಒಬ್ಬರು ನಾಯಕಿಯರಲ್ಲ, ಮೂವರು ನಾಯಕಿಯರು ಇರಲಿದ್ದಾರೆ ಎನ್ನುವುದು ಲೇಟೆಸ್ಟ್ ಮಾಹಿತಿ. ಸಾಯಿ ಪಲ್ಲವಿ, ಮೃಣಾಲ್‌ ಠಾಕೂರ್ ಹೀಗೆ ಮೂವರು ಹಿರೋಯಿನ್ ಚಿತ್ರದಲ್ಲಿ ಪಾತ್ರವಾಗಲಿದ್ದಾರಂತೆ.

  • ಪ್ರಭಾಸ್ ನಟನೆಯ ‘ಪ್ರಾಜೆಕ್ಟ್ ಕೆ’ ಚಿತ್ರದ ಟೈಟಲ್ ಬೇರೆ: ಅಚ್ಚರಿ ಮೂಡಿಸಿದ ಗ್ಲಿಂಪ್ಸ್

    ಪ್ರಭಾಸ್ ನಟನೆಯ ‘ಪ್ರಾಜೆಕ್ಟ್ ಕೆ’ ಚಿತ್ರದ ಟೈಟಲ್ ಬೇರೆ: ಅಚ್ಚರಿ ಮೂಡಿಸಿದ ಗ್ಲಿಂಪ್ಸ್

    ಭಾರೀ ಬಜೆಟ್ ನಲ್ಲಿ ರೆಡಿ ಆಗುತ್ತಿರುವ ಪ್ರಾಜೆಕ್ಟ್ ಕೆ (Project K) ಸಿನಿಮಾದ ಪ್ರಭಾಸ್ (Prabhas) ಫಸ್ಟ್ ಲುಕ್ ಮೊನ್ನೆಯಷ್ಟೇ ರಿಲೀಸ್ ಆಗಿ, ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿತ್ತು. ಇದೀಗ ಗ್ಲಿಂಪ್ಸ್  (Glimpse)ರಿಲೀಸ್ ಆಗಿದ್ದು ಅಚ್ಚರಿ ಎನ್ನುವಂತೆ ಅದ್ಭುತವಾಗಿದೆ.

    ಮಧ್ಯರಾತ್ರಿ ಪ್ರಾಜೆಕ್ಟ್ ಕೆ ಸಿನಿಮಾದ ಟೈಟಲ್ ಮತ್ತು ಗ್ಲಿಂಪ್ಸ್ ರಿಲೀಸ್ ಆಗಿದ್ದು, ಪ್ರಭಾಸ್ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ತುಂಬಾ ಅದ್ದೂರಿಯಾಗಿ ಗ್ಲಿಂಪ್ಸ್ ಮೂಡಿ ಬಂದಿದೆ. ಅಲ್ಲದೇ, ಈ ಸಿನಿಮಾಗೆ ‘ಕಲ್ಕಿ’ (Kalki) ಎಂದು ಹೆಸರಿಡಲಾಗಿದೆ. ಗ್ಲಿಂಪ್ಸ್ ನಲ್ಲಿ ಸಾಕಷ್ಟು ಸಂಗತಿಗಳನ್ನು ಹೇಳಿದ್ದಾರೆ ನಿರ್ದೇಶಕರು.

    ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್ (Kamal Haasan),  ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ (First Look) ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:ಅಭಿಮಾನಿ ವರ್ತನೆಗೆ ಬೆಚ್ಚಿಬಿದ್ದ ವಿಜಯ್ ದೇವರಕೊಂಡ

    `ಪಠಾಣ್’ (Pathaan) ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ (Deepika Padukone) `ಪ್ರಾಜೆಕ್ಟ್ ಕೆ’ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. `ಪಠಾಣ್’ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ `ಪ್ರಾಜೆಕ್ಟ್ ಕೆ’ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.

     

    ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕಂಗುವ’ ಚಿತ್ರದಲ್ಲಿ ಸೂರ್ಯ: ಜುಲೈ 23ಕ್ಕೆ ಗ್ಲಿಂಪ್ಸ್ ರಿಲೀಸ್

    ‘ಕಂಗುವ’ ಚಿತ್ರದಲ್ಲಿ ಸೂರ್ಯ: ಜುಲೈ 23ಕ್ಕೆ ಗ್ಲಿಂಪ್ಸ್ ರಿಲೀಸ್

    ಗಾಗಲೇ ತನ್ನ ಫಸ್ಟ್ ಲುಕ್ ನಿಂದಾಗಿ ಗಮನ ಸೆಳೆದಿರುವ ತಮಿಳಿನ ಸೂರ್ಯ (Surya) ನಟನೆ ಕಂಗುವ ಸಿನಿಮಾ ತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಈ ಸಿನಿಮಾದ ಫಸ್ಟ್ ಗ್ಲಿಂಪ್ಸ್  (Glimpse) ಇದೇ ಜುಲೈ 23 ರಂದು ರಿಲೀಸ್ ಮಾಡುವುದಾಗಿ ಟೀಮ್ ಘೋಷಣೆ ಮಾಡಿದೆ. ತನ್ನ ಪೋಸ್ಟರ್ ನಿಂದಾಗಿಯೇ ಈಗಾಗಲೇ ಕುತೂಹಲ ಮೂಡಿಸಿರುವ ಕಂಗುವ, ಗ್ಲಿಂಪ್ಸ್ ಯಾವ ರೀತಿಯಲ್ಲಿ ತರಬಹುದು ಎನ್ನುವ ನಿರೀಕ್ಷೆ ಮೂಡಿಸಿದೆ.

    ‘ಕಂಗುವ’ (Kanguva) ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಆರಂಭಿಸಿದೆ. ಮೊನ್ನೆಯಷ್ಟೇ ಚಿತ್ರದ ಶೀರ್ಷಿಕೆಯನ್ನು ರಿಲೀಸ್ ಮಾಡಿ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿತ್ತು ಚಿತ್ರತಂಡ. ಇದೀಗ  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಇದನ್ನೂ ಓದಿ:ಜಯಣ್ಣ ಪಾಲಾದ ‘ಜೈಲರ್’ ಚಿತ್ರದ ಕರ್ನಾಟಕ ವಿತರಣಾ ಹಕ್ಕು

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

    ‘ಕಂಗುವ’ ಚಿತ್ರವು 10 ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

     

    ವೆಟ್ರಿ ಪಳನಿಸಾಮಿ ಅವರ ಛಾಯಾಗ್ರಹಣ ಮತ್ತು ದೇವಿ ಶ್ರೀಪ್ರಸಾದ್ ಅವರ ಸಂಗೀತವಿರುವ ಈ ಚಿತ್ರವು ದೊಡ್ಡ ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದ್ದು, ವಿ ಎಫ್ ಎಕ್ಸ್ ಗೆ ಸಾಕಷ್ಟು ಹಣ ಖರ್ಚಾಗಲಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸಾಕಷ್ಟು ಸಮಯ ಬೇಕಾಗಿದ್ದು, ಚಿತ್ರವು 2024ರಲ್ಲಿ ಬಿಡುಗಡೆಯಾಗಲಿದೆ.  ಈಗಾಗಲೇ ಗೋವಾ, ಚೆನ್ನೈ ಮುಂತಾದ ಕಡೆ ಚಿತ್ರಕ್ಕೆ ಶೇ. 50ರಷ್ಟು ಚಿತ್ರೀಕರಣ ಮುಗಿದಿದ್ದು, ಬಾಕಿ ಇರುವ ಚಿತ್ರೀಕರಣವನ್ನು ಬೇಗ ಮುಗಿಸಿ, ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಿಸುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಳೆ ಬೆಳಗ್ಗೆ 11.46ಕ್ಕೆ ಕಿಚ್ಚನ ಹೊಸ ಸಿನಿಮಾದ ಗ್ಲಿಂಪ್ಸ್ ರಿಲೀಸ್

    ನಾಳೆ ಬೆಳಗ್ಗೆ 11.46ಕ್ಕೆ ಕಿಚ್ಚನ ಹೊಸ ಸಿನಿಮಾದ ಗ್ಲಿಂಪ್ಸ್ ರಿಲೀಸ್

    ಕಿಚ್ಚನ (Kiccha) ಅಭಿಮಾನಿಗಳಿಗೆ ನಾಳೆ ಹಬ್ಬವೋ ಹಬ್ಬ. ಅದೆಷ್ಟೋ ತಿಂಗಳುಗಳಿಂದ ಕಾಯುತ್ತಿದ್ದ ಕ್ಷಣ ನಾಳೆ ಬೆಳಗ್ಗೆ 11.46ಕ್ಕೆ ಮೊಟ್ಟೆಯೊಡೆದು ರೆಕ್ಕೆ ಬಿಚ್ಚಿ ಹಾರಲಿದೆ. ಅಂದರೆ, ಸುದೀಪ್ ನಟನೆಯ 46ನೇ ಸಿನಿಮಾದ ಗ್ಲಿಂಪ್ಸ್ (Glimpse) ರಿಲೀಸ್ ಆಗುವುದರ ಜೊತೆಗೆ ಆ ಹೊಸ ಸಿನಿಮಾದ ಸಾಕಷ್ಟು ವಿಷಯಗಳು ಅಭಿಮಾನಿಗಳಿಗೆ ಸಿಗಲಿವೆ.

    ಸುದೀಪ್ (Sudeep) ನಟನೆಯ ಈ ಹೊಸ ಸಿನಿಮಾಗೆ ತಮಿಳಿನ ಹೊಸ ಹುಡುಗ ವಿಜಯ್ ಕಾರ್ತಿಕೇಯ (Vijay Karthikeya) ಎನ್ನುವವರು ನಿರ್ದೇಶನ ಮಾಡಲಿದ್ದು, ಇದು ವಿಜಯ್ ಅವರ ಎರಡನೇ ಸಿನಿಮಾವಾಗಿದ್ದರೂ, ಮೊದಲ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ ಎನ್ನುವ ಮಾಹಿತಿ ಇದೆ. ಹಾಗಾಗಿ ಇದು ವಿಜಯ್ ಅವರ ಫಸ್ಟ್ ಸಿನಿಮಾ ಎಂದು ಹೇಳಲಾಗುತ್ತಿದೆ.

    ಈಗಾಗಲೇ ತಿಳಿದಿರುವಂತೆ ಕಿಚ್ಚ ಸುದೀಪ್​ ಅವರು ಮೂರು ಸಿನಿಮಾಗಳಿಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಆ ಪೈಕಿ ‘ವಿ ಕ್ರಿಯೇಷನ್ಸ್​’ನ ಕಲೈಪುಲಿ ಎಸ್​. ಧಾನು (Kalaipuli S. Dhanu) ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾ ಮೊದಲು ಸೆಟ್ಟೇರಿದೆ. ಕೆಲವೇ ದಿನಗಳ ಹಿಂದೆ ಅವರು ಪ್ರೋಮೋ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು ಸುದೀಪ್. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ 30 ಸೆಕೆಂಡ್ ಲಿಪ್ ಲಾಕ್: ಕಣ್ಮುಚ್ಚಿಕೊಂಡ ಪೂಜಾ ಭಟ್

    ಕಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ವಿ ಕ್ರಿಯೇಷನ್ಸ್​’ ಜೊತೆ ಕಿಚ್ಚ ಸುದೀಪ್ ​ ಅವರು ಕೈ ಜೋಡಿಸಿದ್ದು, ಅದ್ದೂರಿ ಬಜೆಟ್​ನಲ್ಲಿ ‘ಕಿಚ್ಚ 46’ ಚಿತ್ರ ನಿರ್ಮಾಣ ಆಗುತ್ತಿದೆ. ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಕಲೈಪುಲಿ ಎಸ್​. ಧಾನು ಅವರಿಗೆ ಇದೆ.

     

    ಡಾರ್ಲಿಂಗ್ ಕೃಷ್ಣ, ನವೀನ್ ಶಂಕರ್, ಕಾಂತಾರ ನಟಿ ಸಪ್ತಮಿ ಗೌಡ, ವಾಸುಕಿ ವೈಭವ್, ಅನುಪ್ ಭಂಡಾರಿ, ವಿನಯ್ ರಾಜ್‌ಕುಮಾರ್ ಮತ್ತು ಡಾಲಿ ಧನಂಜಯ ಮುಂತಾದ ಕನ್ನಡದ ಪ್ರಮುಖ ಕಲಾವಿದರನ್ನು ಒಳಗೊಂಡ ವಿಶೇಷ ವೀಡಿಯೊಂದನ್ನು ಗ್ಲಿಂಪ್ಸ್ ರಿಲೀಸ್ ಗಾಗಿ ಚಿತ್ರ ನಿರ್ಮಾಪಕರು ಶೂಟ್ ಮಾಡಿದ್ದರು. ಅದು ವೈರಲ್ ಕೂಡ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನಾರ್ದನ್ ರೆಡ್ಡಿಗೂ ‘ಆದಿಕೇಶವ’ ಸಿನಿಮಾ ಕಥೆಗೂ ಸಂಬಂಧ ಇದೆಯಾ?

    ಜನಾರ್ದನ್ ರೆಡ್ಡಿಗೂ ‘ಆದಿಕೇಶವ’ ಸಿನಿಮಾ ಕಥೆಗೂ ಸಂಬಂಧ ಇದೆಯಾ?

    ವೈಷ್ಣವ್ ತೇಜ್ (Vaishnav Tej) ನಟನೆಯ ‘ಆದಿಕೇಶವ’ (Adikesava) ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಈ ಸಮಯದಲ್ಲಿ ಗ್ಲಿಂಪ್ಸ್ ಗೆ (Glimpse) ರಿಲೀಸ್ ಆಗಿತ್ತು. ಆ ಗ್ಲಿಂಪ್ಸ್ ನ ವಿಡಿಯೋ ತುಣುಕೊಂದು ಭಾರೀ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಜನಾರ್ದನ್ ರೆಡ್ಡಿ ಸಿರಿತನದ ಅವನತಿಗೆ ಕಾರಣವಾದ ಸುಗ್ಗಳಮ್ಮ ದೇವಿಯ ಹೆಸರು ಪ್ರಸ್ತಾಪವಾಗುತ್ತಿದೆ. ಈ ಕಾರಣದಿಂದಾಗಿಯೇ ರೆಡ್ಡಿಗೂ ಈ ಸಿನಿಮಾಗೂ (Cinema) ಸಂಬಂಧವಿದೆ ಎಂದು ಹೇಳಲಾಗುತ್ತಿದೆ.

    ರಿಲೀಸ್ ಆದ ಗ್ಲಿಂಪ್ಸ್ ಡೈಲಾಗ್ ಗಳು ಸಖತ್ ಆಗಿದ್ದು, ಗಾಲಿ ಜನಾರ್ದನ್ ರೆಡ್ಡಿ (Janardhan Reddy) ಜೀವನದಲ್ಲಿ ನಡೆದ ಘಟನೆಗಳನ್ನು ನೆನಪಿಸುತ್ತಿವೆ. ಗ್ಲಿಂಪ್ಸ್ ನಲ್ಲಿ ಊರಲ್ಲೊಂದು ದೇವಸ್ಥಾನ. ಅದರ ಸುತ್ತ ನಡೆಯುವ ಗಣಿಗಾರಿಕೆಯನ್ನು ತೋರಿಸಲಾಗುತ್ತದೆ. ಗಣಿಗಾರಿಕೆಯ ನೆಪದಲ್ಲಿ ದೇವಸ್ಥಾನವನ್ನು ಕೆಡವಲು ತಯಾರಾಗುತ್ತಾರೆ. ಆಗ ದೇವಸ್ಥಾನ ರಕ್ಷಣೆಗೆ ನಾಯಕ ಬರುತ್ತಾನೆ. ಈ ದೃಶ್ಯವೇ ಜನಾರ್ದನ್ ರೆಡ್ಡಿ ಅವರನ್ನು ನೆನಪಿಸುತ್ತದೆ. ಇದನ್ನೂ ಓದಿ:ಲಂಡನ್‌ನಲ್ಲಿ ‘ಸಲಾರ್’ ನಟಿ ಶ್ರುತಿ ಹಾಸನ್ ನ್ಯೂ ಫೋಟೋಶೂಟ್

     

    ಜನಾರ್ದನ್ ರೆಡ್ಡಿ ಮೈನಿಂಗ್ ನಡೆಸುತ್ತಿರುವ ಸಂದರ್ಭದಲ್ಲಿ ಆಂಧ್ರ- ಕರ್ನಾಟಕ ಗಡಿ ಭಾಗದಲ್ಲಿರುವ ಸುಗ್ಗಳಮ್ಮ ದೇವಸ್ಥಾನವನ್ನು ಕೆಡವುತ್ತಾರೆ. ಯಾರು ಹೇಳಿದರೂ, ಅವರು ಕೇಳುವುದಿಲ್ಲ. ಆ ದೇವಸ್ಥಾನವನ್ನು ಕೆಡವಿದ ನಂತರವೇ ರೆಡ್ಡಿ ಅವನತಿ ಶುರುವಾಯಿತು ಎಂದು ಈಗಲೂ ಆ ಊರಿನ ಜನತೆ ಮಾತಾಡುತ್ತಾರೆ. ಆ ದೃಶ್ಯವನ್ನೇ ಆದಿಕೇಶವ ಸಿನಿಮಾದಲ್ಲಿ ತರಗಾಲಿದೆ ಎಂದು ಹೇಳಲಾಗುತ್ತಿದೆ.

  • ಸಾಯಿಧರಮ್ ತೇಜ್ ನಟನೆಯ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ರಿಲೀಸ್

    ಸಾಯಿಧರಮ್ ತೇಜ್ ನಟನೆಯ ‘ವಿರೂಪಾಕ್ಷ’ ಚಿತ್ರದ ಟೈಟಲ್ ಗ್ಲಿಂಪ್ಸ್ ರಿಲೀಸ್

    ‘ಸುಪ್ರೀಂ ಹೀರೋ’ ಸಾಯಿಧರಮ್ ತೇಜ್ ಅಭಿನಯದ ಪ್ಯಾನ್-ಇಂಡಿಯಾ ಮಿಸ್ಟಿಕ್ ಥ್ರಿಲ್ಲರ್ ಚಿತ್ರಕ್ಕೆ ‘ವಿರೂಪಾಕ್ಷ’ ಎಂಬ ಹೆಸರಿಡಲಾಗಿದ್ದು, ಟೈಟಲ್ ಗ್ಲಿಂಪ್ಸ್ ಬಿಡುಗಡೆಯಾಗಿದೆ. ‘ವಿರೂಪಾಕ್ಷ’ ಚಿತ್ರವನ್ನು ಸುಕುಮಾರ್ ರೈಟಿಂಗ್ಸ್ ಸಹಯೋಗದಲ್ಲಿ ಶ್ರೀ ವೆಂಕಟೇಶ್ವರ ಸಿನಿ ಚಿತ್ರ ಎಲ್‌ಎಲ್‌ಪಿ ನಿರ್ಮಿಸುತ್ತಿದೆ. ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಬಿ.ವಿ.ಎಸ್.ಎನ್. ಪ್ರಸಾದ್ ನಿರ್ಮಿಸಿದರೆ, ಬಾಪಿನೀಡು ಪ್ರಸ್ತುತಪಡಿಸಿದ್ದಾರೆ.

    ಇದು 1990ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದ್ದು, ಕಾಡಿಗೆ ಅಂಟಿಕೊಂಡಿರುವ ಹಳ್ಳಿಯೊಂದರಲ್ಲಿ ಮೂಢನಂಬಿಕೆಗಳ ಹೆಸರಿನಲ್ಲಿ ನಡೆಯುವ ಕೆಲವು ವಿಲಕ್ಷಣ ಘಟನೆಗಳನ್ನು ನಾಯಕ ಹೇಗೆ ನಿಭಾಯಿಸುತ್ತಾನೆ ಎಂಬುದು ತೋರಿಸಲಾಗಿದೆ.  ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

    ಕಳೆದ ವರ್ಷ ಹೈದರಾಬಾದ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಚೇತರಿಸಿಕೊಂಡಿರುವ ಸಾಯಿಧರಮ್​ ತೇಜ್ ಈ ಚಿತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರವನ್ನು ಕಾರ್ತಿಕ್​ ದಂಡು ನಿರ್ದೇಶಿಸಿದ್ದು, ಶ್ಯಾಮ್​ ದತ್​ ಅವರ ಛಾಯಾಗ್ರಹಣ ಮತ್ತು ಕನ್ನಡದ ಅಜನೀಶ್​ ಲೋಕನಾಥ್​ ಸಂಗೀತವಿದೆ. ‘ವಿರೂಪಾಕ್ಷ’ ಚಿತ್ರವು ಏಪ್ರಿಲ್ 21, 2023ರಂದು ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಪ್ಯಾನ್​ ಇಂಡಿಯಾ ಚಿತ್ರವಾಗಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]