ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದೆ. 190ಕ್ಕೂ ಹೆಚ್ಚು ರೋಗಿಗಳನ್ನು ರಕ್ಷಿಸಲಾಗಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಜ್ರಾ ರಾಜ ವೈದ್ಯಕೀಯ ಕಾಲೇಜಿನ ಭಾಗವಾಗಿರುವ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ತೀವ್ರ ನಿಗಾ ಘಟಕದಲ್ಲಿ ಇಂದು ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು ಎಂದು ಗ್ವಾಲಿಯರ್‌ನ ಜಿಲ್ಲಾಧಿಕಾರಿ ರುಚಿಕಾ ಚೌಹಾಣ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾರು ಬಿಟ್ಟು ಬಸ್‍ನಲ್ಲಿ ಸಂಚರಿಸಿ ಮಲೆನಾಡ ಸೌಂದರ್ಯ ಸವಿದ ತೇಜಸ್ವಿ ಸೂರ್ಯ ದಂಪತಿ
ಆಸ್ಪತ್ರೆಯ ಸಿಬ್ಬಂದಿ ತಕ್ಷಣ ಕಿಟಕಿಗಳನ್ನು ಒಡೆದು ಐಸಿಯುನಲ್ಲಿದ್ದ 13 ರೋಗಿಗಳೂ ಸೇರಿದಂತೆ ಆಸ್ಪತ್ರೆಯಲ್ಲಿದ್ದ 190ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹೌತಿ ಉಗ್ರರ ಮೇಲೆ ಅಮೆರಿಕ ಏರ್‌ಸ್ಟ್ರೈಕ್, 31 ಬಲಿ – ನರಕ ತೋರಿಸ್ತೀವಿ ಎಂದು ಗುಡುಗಿದ ಟ್ರಂಪ್
ಶಾರ್ಟ್ ಸರ್ಕ್ಯೂಟ್‌ನಿಂದ ಕಮಲ ರಾಜ ಆಸ್ಪತ್ರೆಯ ಸ್ತ್ರೀರೋಗ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸ್ಪತ್ರೆಯಲ್ಲಿದ್ದ 190 ರೋಗಿಗಳನ್ನು ಸುರಕ್ಷಿತವಾಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ರಾಜ್ಯ ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ಭೋಪಾಲ್: 17 ವರ್ಷದ ಅಪ್ರಾಪ್ತನೊಬ್ಬ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಳಿಕ ದೈಹಿಕ ಹಲ್ಲೆ (Physical Assaults) ನಡೆಸಿ ವಿಕೃತಿ ಮೆರೆದಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.
ಸದ್ಯ ಸಂತ್ರಸ್ತೆಯನ್ನ ಆಸ್ಪತ್ರೆಗೆ (Gwalior hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಲಕಿಯ ಖಾಸಗಿ ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅಲ್ಲದೇ ಪ್ರಮುಖ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಬಾಲಕಿಯ ಜನನಾಂಗಗಳಿಗೆ 28 ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | 3 ವರ್ಷದಲ್ಲಿ 100 ಬೈಕ್ ಕಳ್ಳತನ – ಆರೋಪಿ ಅರೆಸ್ಟ್
ಘಟನೆ ನಡೆದಿದ್ದು ಯಾವಾಗ?
ಫೆ.22ರಂದು ಅಪ್ರಾಪ್ತ ಯುವಕ ಬಾಲಕಿಯನ್ನ ಮನೆಯ ಮೇಲ್ಛಾವಣಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯನ್ನ ಹತ್ಯೆ ಮಾಡುವ ಉದ್ದೇಶದಿಂದ ದೈಹಿಕ ಹಲ್ಲೆ ನಡೆಸಿದ್ದಾನೆ. ಆಕೆಯ ಖಾಸಗಿ ಭಾಗಗಳನ್ನ ಘಾಸಿಗೊಳಿಸಿದ್ದಾನೆ. ಇದರಿಂದ ಬಾಲಕಿ ಪ್ರಜ್ಞೆ ತಪ್ಪಿದ್ದಾಳೆ. ಮರಳಿ ಪ್ರಜ್ಞೆ ಬಂದ ಬಳಿಕ ಪೋಷಕರ ಮುಂದೆ ಘಟನೆ ವಿವರಿಸಿದ್ದಾಳೆ. ಬಳಿಕ ಪೊಷಕರು ದೂರು ದಾಖಲಿಸಿದ್ದ ಆರೋಪಿಯನ್ನು ಅಪ್ರಾಪ್ತ ಎಂದು ಪರಿಗಣಿಸದಂತೆ ಮನವಿ ಮಾಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿಸಿದ್ದಾರೆ.
– ತಾನಿಷ್ಟಪಟ್ಟ ಹುಡುಗನನ್ನ ಮದುವೆಯಾಗಲು ಮುಂದಾಗಿದ್ದಕ್ಕೆ ಹತ್ಯೆ
ಗ್ವಾಲಿಯರ್: ಖುಷಿಯಾಗಿ ಹಸೆಮಣೆ ಏರಬೇಕಿದ್ದ ಮಗಳನ್ನ ಸ್ವತಃ ಅಪ್ಪನೇ ಮಸಣಕ್ಕೆ ಕಳುಹಿಸಿದ್ದಾನೆ. ಮದುವೆಗೆ (Marriage) ಇನ್ನೂ ನಾಲ್ಕು ದಿನ ಬಾಕಿಯಿರುವಾಗಲೇ 20 ವರ್ಷದ ಸ್ವಂತ ಮಗಳನ್ನು ಪೊಲೀಸರ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.
ಮಂಗಳವಾರ ಸಂಜೆ 9 ಗಂಟೆ ಸುಮಾರಿಗೆ ನಗರದ ಗೋಲಾ ಕಾ ಮಂದಿರ ಪ್ರದೇಶದಲ್ಲಿ ಈ ಕೊಲೆ ನಡೆದಿದೆ. ಅದೇ ದಿನ ಬೆಳಗ್ಗೆ ತನ್ನ ಮಗಳು ಸಾಮಾಜಿಕ ಮಾಧ್ಯಮದಲ್ಲಿ (Social Media) ಪೋಸ್ಟ್ ಮಾಡಿದ ವೀಡಿಯೊದಿಂದ ಕೋಪಗೊಂಡ ತಂದೆ ಮಹೇಶ್ ಗುರ್ಜರ್ ದೇಶಿ ಬಂದೂಕಿನಿಂದ ಆಕೆಗೆ ಹತ್ತಿರದಿಂದ ಗುಂಡು ಹಾರಿಸಿದ್ದಾನೆ. ಈ ವೇಳೆ ತನುವಿನ ಸೋದರ ಸಂಬಂಧಿ ರಾಹುಲ್ ಮಹೇಶ್ ಗುರ್ಜರ್‌ನ ಈ ಕೆಲಸಕ್ಕೆ ಸಹಚರನಾಗಿ ಕಾರ್ಯನಿರ್ವಹಿಸಿದ್ದು, ಹೆಚ್ಚುವರಿ ಗುಂಡುಗಳನ್ನು ಹಾರಿಸಿ ಆಕೆಯ ಸಾವನ್ನು ಖಚಿತಪಡಿಸಿದ್ದಾನೆ.
ತನ್ನ ಹತ್ಯೆಗೆ ಕೆಲವೇ ಗಂಟೆಗಳ ಮೊದಲು, ತನು ಗುರ್ಜರ್ ತನ್ನ ಕುಟುಂಬದವರು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಗೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿ ಅದನ್ನು ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಳು. 52 ಸೆಕೆಂಡುಗಳ ವೀಡಿಯೊದಲ್ಲಿ, ತನ್ನ ತಂದೆ ಮಹೇಶ್ ಮತ್ತು ಇತರ ಕುಟುಂಬ ಸದಸ್ಯರು ತನ್ನ ಸಂಕಷ್ಟಕ್ಕೆ ಕಾರಣರೆಂದು ಹೇಳಿದ್ದು, ತನಗೆ ಜೀವಭಯವಿದೆ ಎಂದು ಹೇಳಿಕೊಂಡಿದ್ದಳು. ನಾನು ವಿಕ್ಕಿ ಎಂಬಾತನನ್ನ ಮದುವೆಯಾಗಲು ಬಯಸಿದ್ದೇನೆ. ನನ್ನ ಮನೆಯವರು ಆರಂಭದಲ್ಲಿ ಇದಕ್ಕೆ ಒಪ್ಪಿದ್ದರು, ನಂತರ ನಿರಾಕರಿಸಿದರು. ಅವರು ಪ್ರತಿದಿನ ನನ್ನನ್ನ ಹೊಡೆಯುತ್ತಾರೆ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಾರೆ. ನನಗೆ ಏನಾದರೂ ಸಂಭವಿಸಿದರೆ, ನನ್ನ ಕುಟುಂಬವೇ ಜವಾಬ್ದಾರವಾಗಿರುತ್ತದೆ ಎಂದು ತನು ವಿಡಿಯೋನಲ್ಲಿ ಹೇಳಿಕೊಂಡಿದ್ದಳು.
ಈಕೆ ವೀಡಿಯೋದಲ್ಲಿ ಉಲ್ಲೇಖಿಸಿದ ವಿಕ್ಕಿ ಎಂಬಾತ ಉತ್ತರ ಪ್ರದೇಶದ ಆಗ್ರಾ ನಿವಾಸಿಯಾಗಿದ್ದು, 6 ವರ್ಷಗಳಿಂದ ತನು ಜೊತೆ ಸಂಬಂಧ ಹೊಂದಿದ್ದ. ತನು ಗುರ್ಜರ್‌ನ ವೀಡಿಯೋ ವೈರಲ್ ಆದ ನಂತರ, ವರಿಷ್ಠಾಧಿಕಾರಿ ಧರ್ಮವೀರ್ ಸಿಂಗ್ ನೇತೃತ್ವದ ಪೊಲೀಸ್ ಅಧಿಕಾರಿಗಳು ತನುವಿನ ಪೋಷಕರು ಹಾಗೂ ಆಕೆಯೊಂದಿಗೆ ಮಧ್ಯಸ್ಥಿಕೆ ವಹಿಸಲು ತನು ಅವರ ಮನೆಗೆ ಧಾವಿಸಿದರು. ಸಮುದಾಯದ ಪಂಚಾಯತ್ ಕೂಡ ನಡೆಯುತ್ತಿದ್ದು, ವಿಷಯವನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದರು, ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲಿ ಗುಂಡು ಹಾರಿಸಿದ್ದಾನೆ.. ಇದನ್ನೂ ಓದಿ: ಮಂಗಳೂರು| ಹಳೆ ನಾಣ್ಯ ಖರೀದಿಸುವುದಾಗಿ ಹೇಳಿ ವ್ಯಕ್ತಿಗೆ 58 ಲಕ್ಷ ವಂಚನೆ
ಇದೇ ಜನವರಿ 18ರಂದು ಮಗಳ ಮದುವೆ ನಡೆಯಬೇಕಿತ್ತು. ಅದಕ್ಕಾಗಿ ಸಕಲ ಸಿದ್ಧತೆಯೂ ಮಾಡಿಕೊಳ್ಳಲಾಗಿತ್ತು. ಸದ್ಯ ಗುಂಡಿಕ್ಕಿ ಹತ್ಯೆಗೈದ ತಂದೆ ಮಹೇಶ್ ಗುರ್ಜರ್‌ನನ್ನ ಪೊಲೀಸರು ಬಂಧಿಸಿದ್ದು, ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಮತ್ತೊಬ್ಬ ಆರೋಪಿ ರಾಹುಲ್ ಬಂಧನಕ್ಕೆ ಪೊಲೀಸರು ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – ಹರಿಯಾಣದ ಬಿಜೆಪಿ ಅಧ್ಯಕ್ಷ, ಗಾಯಕನ ವಿರುದ್ಧ ಎಫ್‌ಐಆರ್
ಭೋಪಾಲ್: ಮನೆಯಿಂದ ಆಚೆ ಹೋಗುವ ಸಂದರ್ಭ ಹೆಂಡತಿ ಸುಗಂಧ ದ್ರವ್ಯ (Perfume) ಹಾಕಿದ್ದಕ್ಕಾಗಿ ಪತಿ ಆಕೆಯ ಮೇಲೆ ಗುಂಡು (Shoot) ಹಾರಿಸಿದ ಘಟನೆ ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್‌ನಲ್ಲಿ (Gwalior) ನಡೆದಿದೆ.
ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಗುಂಡು ಹಾರಿಸಿದ ಬಳಿಕ ಆಕೆಯ ಪತಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಬಿಜೋಯಿಲಿ (Bijoili) ಠಾಣಾ ವ್ಯಾಪ್ತಿಯ ಗಣೇಶಪುರ ನಿವಾಸಿ ನೀಲಂ ಜಾತವ್ ಎಂಬಾಕೆ 8 ವರ್ಷಗಳ ಹಿಂದೆ ಮಹೇಂದ್ರ ಜಾತವ್ ಎಂಬಾತನನ್ನು ವಿವಾಹವಾಗಿದ್ದಳು. ಮಹೇಂದ್ರ ಜಾತವ್ ಕ್ರಿಮಿನಲ್ ಹಿನ್ನಲೆಯುಳ್ಳ ವ್ಯಕ್ತಿಯಾಗಿದ್ದು, ಕಳ್ಳತನ ಪ್ರಕರಣದಲ್ಲಿ ಜೈಲುಪಾಲಾಗಿದ್ದ. ಇದನ್ನೂ ಓದಿ: ಮುತ್ತು ಕೊಡುವ ವೇಳೆ ನೆನಪಾದ ಸೇಡು – ಗಂಡನ ನಾಲಿಗೆಗೆ ಹಲ್ಲಿನಲ್ಲೇ ಕತ್ತರಿ
ಶನಿವಾರ ನೀಲಂ ಮನೆಯಿಂದ ಹೊರಗಡೆ ಹೋಗುವ ಸಂದರ್ಭ ಸುಗಂಧ ದ್ರವ್ಯವನ್ನು ಹಾಕಿದ್ದು, ಇದರ ಬಗ್ಗೆ ಪತಿ ಮಹೇಂದ್ರ ಆಕೆಯನ್ನು ಪ್ರಶ್ನಿಸಿದ್ದಾನೆ. ಇದರಿಂದಾಗಿ ದಂಪತಿ ನಡುವೆ ವಾಗ್ವಾದ ಶುರುವಾಗಿದ್ದು, ಜಗಳ ವಿಕೋಪಕ್ಕೆ ತಿರುಗಿ ಕೋಪದ ಭರದಲ್ಲಿ ಪತಿ ಗನ್ (Gun) ತೆಗೆದು ಪತ್ನಿಯ ಎದೆಗೆ ಗುಂಡು ಹಾರಿಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂ ದೇಗುಲ ಧ್ವಂಸ- ಆರೋಪಿಯ ಬಂಧನ
ಎದೆಗೆ ಗುಂಡು ತಗುಲಿದ ಬಳಿಕ ಆಕೆ ಅಲ್ಲಿಯೇ ಕುಸಿದು ಬಿದ್ದಿದ್ದಾಳೆ. ಘಟನೆ ನಡೆದ ತಕ್ಷಣ ನೀಲಂ ಅವರ ಸಹೋದರ ದಿನೇಶ್ ಜಾತವ್ ತನ್ನ ಸಂಬಂಧಿಕರಿಗೆ ಕರೆ ಮಾಡಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ನೀಲಂ ಕುಟುಂಬಸ್ಥರು ದೂರು ನೀಡಿದ್ದು, ಮಹೇಂದ್ರನ ವಿರುದ್ಧ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಆತನ ಪತ್ತೆಗಾಗಿ ಬಲೆಬೀಸಿದ್ದಾರೆ. ಇದನ್ನೂ ಓದಿ: ತಂಗಿಯ ಶಿರಚ್ಛೇದ ಮಾಡಿ ರುಂಡ ಹಿಡಿದು ಹೋಗ್ತಿದ್ದ ಅಣ್ಣನ ಬಂಧನ
ಭೋಪಾಲ್: ಅದು ಸಾವಿರ ಬೆಡ್‍ಗಳಿರುವ ಜಿಲ್ಲೆಯ ಅತ್ಯಂತ ದೊಡ್ಡ ಆಸ್ಪತ್ರೆ. ಆದರೆ ಇಂತಹ ಆಸ್ಪತ್ರೆಯಲ್ಲಿ ವೃದ್ದರೊಬ್ಬರನ್ನು ಸ್ಟ್ರೆಚರ್ (Stretcher) ಇಲ್ಲದೆ ಬಟ್ಟೆಯಲ್ಲಿಯೇ ಎಳೆದುಕೊಂಡು ಹೋಗಿರುವ ಮನಕಲಕುವ ಘಟನೆ ನಡೆದಿದೆ.
ಹೌದು. ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಆಸ್ಪತ್ರೆ ಸದ್ಯ ಸುದ್ದಿಯಲ್ಲಿದೆ. ಎರಡೂ ಕಾಲುಗಳು ಗಾಯಗೊಂಡಿರುವ ವೃದ್ದರೊಬ್ಬರು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಇಲ್ಲದೆ ಸಂಬಂಧಿಕರೊಬ್ಬರು ಬಟ್ಟೆಯಲ್ಲಿ ಕುಳಿತುಕೊಳ್ಳುವಂತೆ ಹೇಳಿ ಎಳೆದುಕೊಂಡು ಹೋಗಿದ್ದಾರೆ. ಇದರ ವೀಡಿಯೋವನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಸಂಬಂಧ ರೋಗಿ ಮತ್ತು ಆತನ ಸಂಬಂಧಿಕರು ಆಸ್ಪತ್ರೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. 400 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಸ್ಪತ್ರೆಯಲ್ಲಿ ಬೇಕಾದಷ್ಟು ಸ್ಟ್ರೆಚರ್ ಇಲ್ಲ. ಇನ್ನೂ ಇದ್ದ ಸ್ಟ್ರೆಚರ್ ಗಳಲ್ಲಿ ಚಕ್ರ ಸರಿ ಇಲ್ಲ ಎಂದು ಕಿಡಿಕಾರಿದ್ದಾರೆ.
ವೃದ್ಧ ಸೈಕಲ್‍ನಿಂದ ಬಿದ್ದಿದ್ದಾರೆ. ಗ್ವಾಲಿಯರ್ ನಿಂದ ಸುಮಾರು 70 ಕಿ.ಮೀ ದೂರದಲ್ಲಿರುವ ಭಿಂಡ್ ಜಿಲ್ಲೆಯಿಂದ ಬಂದಿರುವುದಾಗಿ ರೋಗಿಯ ಸಂಬಂಧಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಕೊಂದ ತಾಯಿ
ಸದ್ಯ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.
ಭೋಪಾಲ್: ಮಧ್ಯಪ್ರದೇಶದ (Madhya Pradesh) ಗ್ವಾಲಿಯರ್ (Gwalior) ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ.
ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಹೆಣ್ಣು ಮಗುವಿನ ತೂಕ 2.3 ಕೆಜಿ ಇದೆ. ಗ್ವಾಲಿಯರ್‌ನ ಜಯರೋಗ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷೆಗೊಳಪಡಿಸಿತು. ಇದನ್ನೂ ಓದಿ: 100 ದಿನ ಪೂರೈಸಿದ ಭಾರತ್ ಜೋಡೋ ಯಾತ್ರೆ – ಇದು ಮಹಾಸಾಧನೆ ಅಂದ್ರು ಕಾಂಗ್ರೆಸ್ ನಾಯಕರು
ಜಯರೋಗ್ಯ ಆಸ್ಪತ್ರೆ ಸೂಪರಿಂಟೆಂಡೆಂಟ್ ಡಾ. ಆರ್.ಕೆ.ಎಸ್.ಧಕಡ್ ಮಾತನಾಡಿ, ನಾಲ್ಕು ಕಾಲಿರುವ ಮಗು ಜನಿಸಿದೆ. ಆ ಮಗುವಿಕೆ ಅಂಗ ವಿಕಲತೆ ಇದೆ. ಈ ರೀತಿಯ ಹೆಚ್ಚಿನ ಅಂಗಗಳೊಂದಿಗೆ ಜನಿಸುವ ಶಿಶುಗಳಿಗೆ ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ. ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ ಎಂದು ತಿಳಿಸಿದ್ದಾರೆ.
ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ವಿಕಾರವಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದರೆ, ನಂತರ ಆ ಕಾಲುಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಗುತ್ತದೆ. ಇದರಿಂದ ಮಗು ಮುಂದೆ ಸಹಜ ಜೀವನ ನಡೆಸಬಹುದು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಝಿಕಾ ವೈರಸ್ ಭೀತಿ – ಚಿಕಿತ್ಸಾ ಕ್ರಮ ಪಟ್ಟಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
ಈ ವರ್ಷದ ಮಾರ್ಚ್‌ನಲ್ಲಿ ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ಮಹಿಳೆಯೊಬ್ಬರು ಎರಡು ತಲೆ, ಮೂರು ಕೈಗಳು ಮತ್ತು ಎರಡು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದರು.
Live Tv
[brid partner=56869869 player=32851 video=960834 autoplay=true]
ಭೂಪಾಲ್: ಲವ್ ಜಿಹಾದ್ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಈಗ ಮಧ್ಯಪ್ರದೇಶದಲ್ಲೂ ಅಂತಹದ್ದೇ ಆರೋಪ ಕೇಳಿಬಂದಿದೆ. ಹಿಂದೂ ಯುವಕನ ಹೆಸರು ಹೇಳಿ ಪರಿಚಯವಾಗಿದ್ದ ಮುಸ್ಲಿಂ ಯುವಕ, ಮತ್ತವನ ಸಹೋದರು ಹಾಗೂ ಓರ್ವ ಮೌಲ್ವಿ ಸೇರಿ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಗ್ವಾಲಿಯಾರ್‌ನಲ್ಲಿ ನಡೆದಿದೆ.
ಪತ್ನಿಯ ಮೇಲೆ ಅತ್ಯಾಚಾರ ಎಸಗಲು ಪತಿಯೇ ಕಾವಲಾಗಿ ನಿಂತಿದ್ದ ಎಂಬುದು ಶಾಕಿಂಗ್ ಸುದ್ದಿ. ಈ ಸಂಬಂಧ ಗ್ವಾಲಿಯರ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ಪತಿ ಇಮ್ರಾನ್‌ಖಾನ್ ಅಲಿಯಾಸ್ ರಾಜು ಜಾದವ್, ಅವನ ತಾಯಿ ಸುಗಾ ಬೇಗಂ, ಸಹೋರರಾದ ದೇವರ್ ಅಮನ್, ಪುನ್ನಿ ಹಾಗೂ ಮೌಲ್ವಿ ಒಸಾಮಾ ಖಾನ್ ಸೇರಿದಂತೆ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿಯನ್ನು ಗರ್ಭಿಣಿ ಮಾಡಲು ಜೀವಾವಧಿ ಕೈದಿಗೆ 15 ದಿನ ಪೆರೋಲ್ ನೀಡಿದ ಹೈಕೋರ್ಟ್
ಪೊಲೀಸರ ಮಾಹಿತಿ ಪ್ರಕಾರ, ಇಮ್ರಾನ್ ಖಾನ್ 2020ರ ಜನವರಿ ತಿಂಗಳಿನಲ್ಲಿ ಜಂಗಿಪುರ ದಬ್ರಾ ಮದರಸಾ ಬಳಿ ರಾಜು ಜಾದವ್ ಎಂಬ ಹೆಸರಿನಿಂದ ಯುವತಿಗೆ ಪರಿಚಯವಾಗಿದ್ದಾನೆ. ನಂತರ ಸ್ನೇಹಿತರಾಗಿ ಇವರಿಬ್ಬರ ಸ್ನೇಹ ಪ್ರೀತಿಗೆ ತಿರುಗಿದೆ. ಇಮ್ರಾನ್ 2021ರ ಜೂನ್ 15ರಂದು ಆಕೆಯನ್ನು ಗ್ವಾಲಿಯರ್‌ನಿಂದ ಡಾಬ್ರಾಗೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ತಂಪುಪಾನಿಯಾದಲ್ಲಿ ಅಮಲಿನ ಪದಾರ್ಥ ಬೆರಸಿ ಕುಡಿಸಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ನಂತರ ಅತ್ಯಾಚಾರ ಎಸಗಿದ್ದಾನೆ ಎಂದಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಇದನ್ನೂ ಓದಿ: 50 KG ನಿಂಬೆಹಣ್ಣನ್ನೇ ಹೊತ್ತೊಯ್ದ ಖತರ್ನಾಕ್ ಕಳ್ಳನ ವೀಡಿಯೋ ವೈರಲ್
ಅತ್ಯಾಚಾರ ಎಸಗಿದ ಬಳಿಕ ಆರೋಪಿ ತನ್ನ ತಾಯಿ ಸುಗಾ ಬೇಗಂ ನನ್ನು ಭೇಟಿ ಮಾಡಿಸಿದ್ದಾನೆ. ಮದುವೆಗೆ ಮುನ್ನವೇ ಮಗು ಆಗುವ ವಿಚಾರ ಜನರಿಗೆ ತಿಳಿದರೆ, ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಹೇಳಿ ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಸುಗಾ ಬೇಗಂ ಹೇಳಿದ್ದಾಳೆ.
ಯುವತಿ ಹೇಳಿದ್ದೇನು?
ಘಟನೆಯ ಬಳಿಕ 2021ರ ಸೆಪ್ಟಂಬರ್ 18ರಂದು ಇಬ್ಬರಿಗೂ ಗ್ವಾಲಿಯರ್‌ನ ಖಾಸಗಿ ಹೋಟೆಲೊಂದರಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಸಿದ್ದಾರೆ. ಕೆಲ ದಿನಗಳ ವರೆಗೆ ಚೆನ್ನಾಗಿದ್ದ ಸಂಸಾರದಲ್ಲಿ ಮತ್ತೆ ಬಿರುಗಾಳಿ ಎದ್ದಿತು. ಇಮ್ರಾನ್‌ಖಾನ್ ಸಹೋದರ ಪುನ್ನಿಖಾನ್ ಹಾಗೂ ದೇವರ್ ಅಮನ್ ಖಾನ್ ಇಬ್ಬರೂ ನನ್ನ ಮೇಲೆ ಅತ್ಯಾಚಾರ ಎಸಗಿದರು. ಇದನ್ನೇ ಕೆಲದಿನ ಮುಂದುವರಿಸಿದರು. ಈ ವಿಷಯವನ್ನು ಸುಗಾಬೇಗಂ ಗೆ ತಿಳಿಸಿದಾಗ ಆಕೆ ತಮಾಷೆ ಮಾಡಿ ಎಲ್ಲವನ್ನು ಮರೆಸಿದರು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಇದನ್ನೂ ಓದಿ: ಕುಂದುಜ್ಹ್ ಮಸೀದಿ ಮೇಲೆ ಬಾಂಬ್ ದಾಳಿ- 10ಕ್ಕೂ ಹೆಚ್ಚು ಮಂದಿ ದಾರುಣ ಸಾವು
ಇನ್ನೂ ಹಿಂದೂ ಪದ್ಧತಿಯಂತೆ ಮಾಡಿದ ಮದುವೆ ತನ್ನ ಧರ್ಮದಲ್ಲಿ ಮಾನ್ಯವಾಗಿಲ್ಲ, ಹಾಗಾಗಿ ಮುಸ್ಲಿಂ ಪದ್ಧತಿಯಂತೆ ಮದುವೆಯಾಗಬೇಕು ಎಂದು ಹೇಳಿ ಪುನಃ ಮದುವೆ ಮಾಡಿಸಿದ ಮೌಲ್ವಿಯೂ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ತನ್ನ ಪತಿಯೇ ಇದಕ್ಕೆ ಕಾವಲಾಗಿ ನಿಂತಿದ್ದನು ಎಂದು ಆಕೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಏಪ್ರಿಲ್ 20ರಂದು ಎಂದಿನಂತೆ ಇಮ್ರಾನ್‌ಖಾನ್ ಸಹೋದರ ಪುನ್ನಿ ಖಾನ್ ಕೋಣೆಗೆ ಬಂದು ಅತ್ಯಾಚಾರ ನಡೆಸಿದ ಬಳಿಕ ಕೋಣೆಯ ಬಾಗಿಲು ತೆರೆದು ಹೋಗಿದ್ದಾನೆ. ಇದರಿಂದಾಗಿ ನಾನು ತಪ್ಪಿಸಿಕೊಂಡು ತನ್ನ ಸಹೋದರಿಯ ಮನೆಗೆ ಓಡಿ ಬಂದೆ. ಘಟನೆ ತಿಳಿದ ಬಳಿಕ ಸಂತ್ರಸ್ತೆಯ ಸಂಬಂಧಿಕರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ, ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಯುವತಿ ಸೇನೆಯ ವಾಹನವನ್ನು ನಿಲ್ಲಿಸಿ ಹೆಡ್‍ಲೈಟ್‍ಗೆ ಪದೇ, ಪದೇ ಒದ್ದು, ಹಾನಿಗೊಳಿಸಿದ್ದಾಳೆ. ಅಲ್ಲದೇ ಆಕೆಯನ್ನು ತಡೆಯಲು ಬಂದ ಸೇನಾಧಿಕಾರಿಯನ್ನು ಹಿಂದಕ್ಕೆ ತಳ್ಳಿದ್ದಾಳೆ ಮತ್ತು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾಳೆ. ಇನ್ನೂ ಈ ಘಟನೆ ಪಡವ್ ಪೊಲೀಸ್ ಠಾಣೆಗೆ ವರದಿಯಾಗುತ್ತಿದ್ದಂತೆಯೇ, ಮಹಿಳಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಯುವತಿಯನ್ನು ಕರೆದೊಯ್ದಿದ್ದಾರೆ. ಇದನ್ನೂ ಓದಿ: ‘ಧಾರವಾಡಿ ಎಮ್ಮೆ’ ತಳಿಗೆ ದೊರೆತಿದೆ ರಾಷ್ಟ್ರಮಟ್ಟದ ಮಾನ್ಯತೆ!
An allegedly drunk 22-year-old model attacked an Army vehicle and created a ruckus in Gwalior on Wednesday night, Police said here on Thursday. the model, who came from Delhi allegedly created a ruckus on the road under the influence of alcohol and stopped Army Vehicle. #gwaliorpic.twitter.com/dFUZgwkL5p
ಈ ಕುರಿತಂತೆ ಪಡವ್ ಪೊಲೀಸ್ ಠಾಣೆಯ ಉಸ್ತುವಾರಿ ವಿವೇಕ್, ಯುವತಿ ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿದ್ದಾಳೆ. ಸೇನೆಯ ಕಡೆಯಿಂದ ಯಾವುದೇ ದೂರುಗಳಿಲ್ಲ. ಇದೀಗ ಯುವತಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ಆಕೆಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ದೆಹಲಿಯಿಂದ ಗ್ವಾಲಿಯರ್‌ಗೆ ಯುವತಿ ಮತ್ತು ಆಕೆಯ ಇಬ್ಬರು ಸ್ನೇಹಿತೆಯರು ಬಂದಿದ್ದು, ನಗರದ ಹೋಟೆಲ್‍ನಲ್ಲಿ ತಂಗಿರುವುದಾಗಿ ತಿಳಿಸಿದ್ದಾರೆ.
ಭೋಪಾಲ್: ಆಟೋವೊಂದು ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ 14 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಗ್ಗೆ ಗ್ವಾಲಿಯರ್‍ನ ಪುರಾನಿ ಚೌವಾನಿ ಪ್ರದೇಶಲ್ಲಿ ನಡೆದಿದೆ.
ಘಟನೆಯಲ್ಲಿ 12 ಮಂದಿ ಮಹಿಳೆಯರು ಅಂಗನವಾಡಿ ಕಾರ್ಮಿಕರಾಗಿದ್ದು, ಒಬ್ಬ ಆಟೋ ಚಾಲಕನಾಗಿದ್ದಾನೆ. ಒಂಬತ್ತು ಮಂದಿ ಮಹಿಳೆಯರು ಹಾಗೂ ಆಟೋ ಚಾಲಕ ಅಪಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ನಾಲ್ವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಮಾತನಾಡಿದ ಗ್ವಾಲಿಯರ್ ಎಸ್‍ಪಿ ಅಮಿತ್ ಸಿಂಗ್, ಅಪಘಾತ ಬೆಳಗ್ಗೆ ಸುಮಾರು 7 ಗಂಟೆಗೆ ಜರುಗಿದ್ದು, ಮಹಿಳೆಯರು ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಮಾಡಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.
ಈ ಕುರಿತಂತೆ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ग्वालियर में बस और ऑटो में टक्कर से हुए भीषण हादसे में कई अनमोल जिंदगियों के असमय काल कवलित होने से बहुत दुःख पहुंचा है।
ईश्वर से दिवंगत आत्माओं को अपने श्री चरणों में स्थान और परिजनों को यह वज्रपात सहन करने की शक्ति देने की प्रार्थना करता हूं। ॐ शांति!
— Shivraj Singh Chouhan (@ChouhanShivraj) March 23, 2021
ಗ್ವಾಲಿಯರ್: ಅಯೋಧ್ಯೆಯ ರಾಮಮಂದಿರ ನಿರ್ಮಾಣ ಕಾರ್ಯಗಳು ಪ್ರಾರಂಭವಾಗುವುದರೊಂದಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಅಂತ್ಯ ಪ್ರಾರಂಭವಾಗಲಿದೆ ಎಂದು ಮಧ್ಯಪ್ರದೇಶ ವಿಧಾನಸಭೆ ತಾತ್ಕಾಲಿಕ ಸ್ಪೀಕರ್, ಬಿಜೆಪಿ ನಾಯಕ ರಾಮೇಶ್ವರ್ ಶರ್ಮಾ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ಭೂಮಿ ಪೂಜೆ ಆಗಸ್ಟ್ 5 ರಂದು ನಡೆಯಲಿದ್ದು, ಭಗವಾನ್ ರಾಮ ಮಾನವಕುಲದ ಕಲ್ಯಾಣಕ್ಕಾಗಿ ಮತ್ತು ಆ ಸಮಯದಲ್ಲಿ ರಾಕ್ಷಸರನ್ನು ಕೊಲ್ಲಲು ಪುನರ್ ಜನ್ಮ ಪಡೆದಿದ್ದರು. ರಾಮಮಂದಿರ ನಿರ್ಮಾಣ ಪ್ರಾರಂಭವಾದ ಕೂಡಲೇ ಕೋವಿಡ್-19 ಸೋಂಕಿನ ನಾಶವೂ ಪ್ರಾರಂಭವಾಗುತ್ತದೆ ಎಂದು ಶರ್ಮಾ ತಿಳಿಸಿದ್ದಾರೆ.
ಭಾರತ ಮಾತ್ರವಲ್ಲ ಇಡೀ ಪ್ರಪಂಚ ಕೊರೊನಾ ವೈರಸ್ ಸೋಂಕಿನಿಂದ ಬಳಲುತ್ತಿದೆ. ನಾವು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದಷ್ಟೇ ಅಲ್ಲ, ನಮ್ಮ ಪವಿತ್ರ ವ್ಯಕ್ತಿಗಳನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಸುಪ್ರೀಂ ಕೋರ್ಟ್ ಕೂಡ ರಾಮಮಂದಿರ ನಿರ್ಮಿಸಲು ಹೇಳಿದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 5 ರಂದು ರಾಮಮಂದಿರ ಶಿಲಾನ್ಯಾಸ ಕ್ರಮ ನಡೆಸಲಿದ್ದಾರೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಖಜಾಂಚಿ ಸ್ವಾಮಿ ಗೋವಿಂದ್ ದೇವ್ ಗಿರಿ ಹೇಳಿದ್ದಾರೆ. ಅಲ್ಲದೇ ಈ ಕಾರ್ಯಕ್ರಮವನ್ನು 200ಕ್ಕೂ ಹೆಚ್ಚು ಜನರಿಲ್ಲದೆ ಸಾಮಾಜಿಕ ಅಂತರ ಪಾಲನೆ ಮಾಡಿಕೊಂಡು ಸಮಾರಂಭದಲ್ಲಿ ಭಾಗವಹಿಸಲಾಗುವುದು ಎಂದಿದ್ದಾರೆ.