Tag: ಘಟಪ್ರಭಾ

  • ಘಟಪ್ರಭಾ ತಟದಲ್ಲಿ ಪ್ರವಾಹ ಭೀತಿ – ಮುಧೋಳ ತಾಲೂಕಿನ ಸೇತುವೆಗಳು ಜಲಾವೃತ

    ಘಟಪ್ರಭಾ ತಟದಲ್ಲಿ ಪ್ರವಾಹ ಭೀತಿ – ಮುಧೋಳ ತಾಲೂಕಿನ ಸೇತುವೆಗಳು ಜಲಾವೃತ

    ಬಾಗಲಕೋಟೆ: ಮಹಾರಾಷ್ಟ್ರ (Maharashtra) ಭಾಗದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ (Ghataprabha River) ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಪರಿಣಾಮ ಬಾಗಲಕೋಟೆ ಜಿಲ್ಲೆಯ ಘಟಪ್ರಭಾ ನದಿ ದಡದ ಹಳ್ಳಿಗಳಿಗೆ ಪ್ರವಾಹ ಆತಂಕ ಶುರುವಾಗಿದೆ.

    ಮುಧೋಳ (Mudhol) ತಾಲೂಕಿನ ಘಟಪ್ರಭಾ ನದಿ ದಡದ ಅಂತಾಪುರ ಕಿರು ಸೇತುವೆ ಮುಳುಗಡೆಯಾಗಿ ರಸ್ತೆ ಸಂಪರ್ಕ ಬಂದ್ ಆಗಿದೆ. ಕಿರು ಸೇತುವೆ ಮೇಲೆ ಎರಡು ಅಡಿಯಷ್ಟು ನೀರು ಹರಿಯುತ್ತಿದ್ದು ಅಂತಾಪುರದಿಂದ ನದಿ ಆಚೆಗಿನ ಬೇರೆ ಗ್ರಾಮಗಳಿಗೆ ಓಡಾಡಲು ಜನರಿಗೆ ಸಮಸ್ಯೆಯಾಗಿದೆ. ಇದನ್ನೂ ಓದಿ: ದಾವಣಗೆರೆ | ಕಡಿಮೆ ಬೆಲೆಗೆ ಕಾಲು ಕೆಜಿ ಚಿನ್ನದ ನಾಣ್ಯ ನೀಡುವುದಾಗಿ 5 ಲಕ್ಷ ವಂಚಿಸಿ ಪರಾರಿ

    ನದಿ ದಡದ ಹೊಲಗದ್ದೆಗಳಿಗೆ ನೀರು ನುಗ್ಗಿದ್ದು ರೈತರು ಬೆಳೆದ ಬೆಳೆಗಳು ನೀರಿಗೆ ಆಹುತಿಯಾಗುತ್ತಿವೆ. ಒಟ್ಟು ಘಟಪ್ರಭಾ ನದಿದಡದ11 ಕಿರು ಸೇತುವೆಗಳು ಮುಳುಗಡೆಯಾಗಿ ಆ ಭಾಗದ ಜನರಿಗೆ ಪ್ರವಾಹದ ಆತಂಕ ಮನೆ ಮಾಡಿದೆ.

  • ಘಟಪ್ರಭಾ ನದಿಯ ಪ್ರವಾಹಕ್ಕೆ ಮಸಗುಪ್ಪಿ ಗ್ರಾಮ ಜಲಾವೃತ

    ಘಟಪ್ರಭಾ ನದಿಯ ಪ್ರವಾಹಕ್ಕೆ ಮಸಗುಪ್ಪಿ ಗ್ರಾಮ ಜಲಾವೃತ

    ಬೆಳಗಾವಿ: ಘಟಪ್ರಭಾ ನದಿಯ ಪ್ರವಾಹದ ಅಬ್ಬರಕ್ಕೆ ಬೆಳಗಾವಿಯ  ಮಸಗುಪ್ಪಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ.

    ಸಾವಿರಾರು ಮನೆಗಳ ಸುತ್ತಮುತ್ತ ಸಾಗರ ರೀತಿಯಲ್ಲಿ ನೀರು ಆವರಿಸಿಕೊಂಡಿದೆ. ಮಸಗುಪ್ಪಿ ಗ್ರಾಮದ ಸುತ್ತಮುತ್ತ ಗ್ರಾಮದ ಜಲಭಾಧೆಯಲ್ಲಿ ಜರ್ಜರಿತವಾಗಿದೆ. ನೀರು ಆವರಿಸಿದ ಗ್ರಾಮದ ದೃಶ್ಯ ಗಳು ಪಬ್ಲಿಕ್ ಟಿವಿಯ ಡ್ರೋಣ ಕ್ಯಾಮರಾದಲ್ಲಿ ಸೆರೆಯಾಗಿವೆ.

    ಮಸಗುಪ್ಪಿ ಗ್ರಾಮ ಜಲಾವೃತ
    ಮಸಗುಪ್ಪಿ ಗ್ರಾಮ ಜಲಾವೃತ

    ಖಾನಾಪುರ ಮತ್ತು ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನಲ್ಲಿನ ನವಿಲುತೀರ್ಥ ಜಲಾಶಯದಿಂದ (Naviluteertha Dam) ನೀರು ಬಿಡುಗಡೆ ಮಾಡಲಾಗಿದೆ.

    ಮಲಪ್ರಭಾ ನದಿಗೆ (Malaprabha River) ಅಡ್ಡಲಾಗಿ ಮುನವಳ್ಳಿ ಸಮೀಪ ಕಟ್ಟಲಾಗಿರುವ ನವೀಲುತೀರ್ಥ ಜಲಾಶಯ 2079.50 ಅಡಿ ಇದ್ದು ಈಗಾಗಲೇ 2072 ಅಡಿ ನೀರು ಸಂಗ್ರಹವಾಗಿದೆ. ಜಲಾಶಯ ಭರ್ತಿಗೆ 7 ಅಡಿ ಬಾಕಿ ಇರುವುದರಿಂದ ಜಲಾಶಯದಿಂದ ನೀರು ಬಿಡಲಾಗಿದೆ. ಮಲಪ್ರಭಾ ನದಿಗೆ 20 ಸಾವಿರ ಕ್ಯೂಸೆಕ್ ಒಳಹರಿವು ಇದೆ. ಹಾಗಾಗಿ ನವೀಲುತೀರ್ಥ ಜಲಾಶಯದಿಂದ 5000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ.

    ಮಸಗುಪ್ಪಿ ಗ್ರಾಮ ಜಲಾವೃತ

    ಮಸಗುಪ್ಪಿ ಗ್ರಾಮ ಜಲಾವೃತ

    ಮಲಪ್ರಭಾ ನದಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ರಾಮದುರ್ಗ, ಮುನವಳ್ಳಿ ಸೇರಿದಂತೆ ಮಲಪ್ರಭಾ ತೀರದ ಜನರಿಗೆ ಪ್ರವಾಹದ ಆತಂಕ ಸೃಷ್ಟಿಯಾಗಿದೆ.

    ಮೊಸಳೆ ಪ್ರತ್ಯಕ್ಷ: ಉಕ್ಕಿಹರಿಯುತ್ತಿರುವ ಮಲಪ್ರಭಾ ನದಿ ತಟದಲ್ಲಿ ಬೃಹತ್ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಬೈಲಹೊಂಗಲ ತಾಲೂಕಿನ ಮಾಟೋಳ್ಳಿ ಗ್ರಾಮದ ಬಳಿ ನದಿ ದಂಡೆಯ ಮೇಲೆ ಕಾಣಿಸಿಕೊಂಡಿದ್ದು, ಮೊಬೈಲ್ ನಲ್ಲಿ ಸ್ಥಳೀಯರು ದೃಶ್ಯವನ್ನು ಸೆರೆ ಹಿಡಿದಿದ್ದಾರೆ. ಮೊಸಳೆ ಪ್ರತ್ಯಕ್ಷದಿಂದ ಈ ಭಾಗದ ರೈತರಲ್ಲಿ ಆತಂಕ ಮೂಡಿದೆ. ಹಾಗಾಗಿ, ತಕ್ಷಣವೇ ಅರಣ್ಯ ಇಲಾಖೆ ಅಧಿಕಾರಿಗಳು ಮೊಸಳೆ ಪತ್ತೆ ಹಚ್ಚುವಂತೆ ಇಲ್ಲಿನ ಜನರು ಮನವಿ ಮಾಡಿಕೊಂಡಿದ್ದಾರೆ.

  • ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಬೆಳಗಾವಿ: ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಘಟಪ್ರಭಾದಲ್ಲಿ (Ghataprabha) ನಡೆದಿದ್ದು, ಇದೀಗ ಪೊಲೀಸರು 13 ಮಂದಿಯನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

    ಕೆಲ ಜನರು ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿ, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ನಂತರ ಆಕೆಗೆ ಚಪ್ಪಲಿ ಹಾರವನ್ನು ಹಾಕಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ನಮ್ಮ ಪೊಲೀಸರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿರುವುದಾಗಿ ಬೆಳಗಾವಿಯಲ್ಲಿ ಎಸ್‌ಪಿ ಡಾ. ಭೀಮಾಶಂಕರ್ ಗುಳೇದ ತಿಳಿಸಿದ್ದಾರೆ.

    ಘಟನೆಯೇನು?
    ಹನಿಟ್ರ್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪ ಹೊರಿಸಿ ಮಹಿಳೆಯೊಬ್ಬರಿಗೆ ಸ್ಥಳೀಯರೇ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಊರಿನವರು ಹಾಗೂ ಮಹಿಳೆ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಇದೇ ಕಾರಣಕ್ಕೆ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಸ್ಥಳೀಯರು ಅಮಾನವೀಯವಾಗಿ ವರ್ತಿಸಿದ್ದಾರೆ. ಇದನ್ನೂ ಓದಿ: ಪಾಕ್ ಕ್ರಿಕೆಟಿಗರಿಗೆ ಜೈ ಶ್ರೀರಾಮ್‌ ಘೋಷಣೆ: ಉದಯನಿಧಿ ಆಕ್ಷೇಪ

    ಇದೀಗ ಮಹಿಳೆಯ ದೂರಿನ ಆಧಾರದ ಮೇರೆಗೆ ಪ್ರಕರಣ ದಾಖಲಿಸಿ 13 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭೀಮಾಶಂಕರ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಅರಭಾವಿಮಠದ ಸ್ವಾಮೀಜಿ ಲಿಂಗೈಕ್ಯ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  •  ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

     ಹನಿಟ್ರ್ಯಾಪ್ ಆರೋಪ ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ

    ಬೆಳಗಾವಿ: ಹನಿಟ್ರ್ಯಾಪ್ (Honey Trap) ಮಾಡುತ್ತಿರುವ ಆರೋಪ ಹೊರಿಸಿ ಮಹಿಳೆಯೊಬ್ಬಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ಅಮಾನವೀಯ ಘಟನೆ ಗೋಕಾಕ್‌ನ ಘಟಪ್ರಭಾದಲ್ಲಿ ನಡೆದಿದೆ.

    ಮಹಿಳೆ ವಿರುದ್ಧ ಹನಿಟ್ರ‍್ಯಾಪ್ ಹಾಗೂ ಬ್ಲಾಕ್‌ಮೇಲ್ ಆರೋಪವನ್ನು ನಗರದ ಮಹಿಳೆಯರು ಹಾಗೂ ಸ್ಥಳೀಯರು ಮಾಡಿದ್ದಾರೆ. ಇದೇ ಕಾರಣಕ್ಕೆ ನಗರದ ಮೃತ್ಯುಂಜಯ ಸರ್ಕಲ್‌ನಲ್ಲಿ ಮಹಿಳೆ ಮೇಲೆ ಈ ರೀತಿಯಾಗಿ ವರ್ತಿಸಿದ್ದಾರೆ. ಮಹಿಳೆ ಬ್ಲಾಕ್‌ಮೇಲ್ ಮಾಡುತ್ತಿರುವ ವಿಚಾರವಾಗಿ ಈ ಹಿಂದೆ ಸಹ ಗಲಾಟೆಯಾಗಿತ್ತು ಎನ್ನಲಾಗಿದೆ. ಇದನ್ನೂ ಓದಿ: ಪ್ರಿಯಕರನಿಂದ ಕಿರುಕುಳ – ವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆ

    ಆಗಾಗ ಊರಿನವರು ಹಾಗೂ ಮಹಿಳೆಯ ನಡುವೆ ಗಲಾಟೆ ನಡೆಯುತ್ತಿತ್ತು. ಮಹಿಳೆ ಹನಿಟ್ರ್ಯಾಪ್ ಮಾಡುತ್ತಿರುವ ಬಗ್ಗೆ ಕೆಲವು ದಿನಗಳ ಹಿಂದೆ ಎಸ್‌ಪಿಗೂ ಮನವಿ ಮಾಡಲಾಗಿತ್ತು. ಆದರೂ ಮಹಿಳೆಯೊಂದಿಗೆ ಗಲಾಟೆ ಮುಂದುವರೆದಿದ್ದು ಸ್ಥಳೀಯರು ಈ ರೀತಿ ನಡೆದುಕೊಂಡಿದ್ದಾರೆ. ಘಟನೆ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: 15 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಹಾಸ್ಟೆಲ್ ಅಡುಗೆಯಾತ, ನಿರ್ವಾಹಕ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ಸೇತುವೆ ದಾಟುವಾಗ ಆಯತಪ್ಪಿ ನದಿಗೆ ಬಿದ್ದಿದ್ದ ಇಬ್ಬರ ಶವ ಪತ್ತೆ

    ಬೆಳಗಾವಿಯಲ್ಲಿ ಸೇತುವೆ ದಾಟುವಾಗ ಆಯತಪ್ಪಿ ನದಿಗೆ ಬಿದ್ದಿದ್ದ ಇಬ್ಬರ ಶವ ಪತ್ತೆ

    ಬೆಳಗಾವಿ: ಆಯತಪ್ಪಿ ಬೈಕ್ ಮೇಲಿಂದ ಬಿದ್ದು ಇಬ್ಬರು ನದಿಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹಗಳನ್ನು ಎಸ್‌ಡಿಆರ್‌ಎಫ್ (SDRF) ತಂಡದ ಸಿಬ್ಬಂದಿ ಹೊರತೆಗೆದಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ (Mudalagi) ತಾಲೂಕಿನ ಅವರಾದಿ ಗ್ರಾಮದ ಬಳಿಯ ಘಟಪ್ರಭಾ ನದಿ ಸೇತುವೆ ದಾಟುವ ಸಂದರ್ಭ ಆಯತಪ್ಪಿ ಇಬ್ಬರು ಸವಾರರು ನದಿಗೆ ಬಿದ್ದಿದ್ದರು. ಚನ್ನಪ್ಪ ಹರಿಜನ (38), ದುರ್ಗಾಣಿ ಹರಿಜನ (35) ಮೃತ ದುರ್ದೈವಿಗಳಾಗಿದ್ದು, ನದಿಯಿಂದ ಮೃತದೇಹವನ್ನು ಹೊರತೆಗೆಯಲಾಗಿದೆ. ಇದನ್ನೂ ಓದಿ: ಜೈನಮುನಿ ಹತ್ಯೆ ಕೇಸ್ ತನಿಖೆ ಚುರುಕು- 7 ದಿನ ಹಂತಕರು ಪೊಲೀಸ್ ಕಸ್ಟಡಿಗೆ

    ಕೆಲಸದ ನಿಮಿತ್ತ ಅವರಾದಿ ಗ್ರಾಮದಿಂದ ಮಹಾಲಿಂಗಪುರಕ್ಕೆ (Mahalingapura) ತೆರಳುತ್ತಿದ್ದಾಗ ಘಟನೆ ನಡೆದಿತ್ತು. ನಿರಂತರ ಕಾರ್ಯಾಚರಣೆ ನಡೆಸಿ ಮಂಗಳವಾರ ಚನ್ನಪ್ಪ ಹರಿಜನ ಮೃತದೇಹ ಎಸ್‌ಡಿಆರ್‌ಎಫ್ ತಂಡದ ಸಿಬ್ಬಂದಿ ಹೊರತೆಗೆದಿದ್ದರು. ಇಂದು ಮುಂಜಾನೆಯೇ ನದಿಗಿಳಿದು ಕಾರ್ಯಾಚರಣೆ ನಡೆಸಿ ದುರ್ಗಾಣಿ ಅವರ ಮೃತದೇಹವನ್ನೂ ಹೊರತೆಗೆದಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಹಾಡಹಗಲೇ ಡಬಲ್ ಮರ್ಡರ್!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಮಳೆ -ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

    ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಸ್ಥಿತಿ ಏರ್ಪಟ್ಟಿದೆ. ಒಂದು ಕಡೆ ಉತ್ತರ ಕರ್ನಾಟಕದಲ್ಲಿ ಮಳೆ ಚುರುಕು ಪಡೆದಿದ್ದು, ಅತ್ತ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಆರೆಂಜ್ ಅಲಟ್ ಘೋಷಿಸಲಾಗಿದೆ. ಪುಣೆ, ಸತಾರಾದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20ರವರೆಗೂ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಭಾರೀ ಮಳೆ ಆಗುವ ಮುನ್ನೆಚ್ಚರಿಕೆ ನೀಡಲಾಗಿದೆ.

    ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂಗಳಿಂದಲೂ ಅಪಾರ ಪ್ರಮಾಣದಲ್ಲಿ ನೀರನ್ನ ಹೊರಬಿಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ನವಿಲು ತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಸವದತ್ತಿ ತಾಲೂಕಿನ ಮುನವಳ್ಳಿ ಮನೆ, ಅಂಗಡಿಗಳು ಜಲಾವೃತಗೊಂಡಿವೆ. ಎಂಕೆ ಹುಬ್ಬಳ್ಳಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ ಜಲಾವೃತಗೊಂಡಿದೆ. ಮಂಡೋಳಿ ರಸ್ತೆಯಲ್ಲಿ ಪ್ರವಾಹದಲ್ಲಿ ಸಿಲುಕಿ ಒದ್ದಾಡ್ತಿದ್ದ ಬೈಕ್ ಸವಾರನನ್ನು ಸ್ಥಳೀಯರು ಬಚಾವ್ ಮಾಡಿದ್ದಾರೆ. ವಡಗಾವಿ, ಓಂನಗರ, ಶಾಹು ನಗರ, ಮಚ್ಷೆ, ಮಾರಿಹಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಮಾರಿಹಾಳದಲ್ಲಿ ರಸ್ತೆಯ ಬದಿಯಲ್ಲಿ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ರಸ್ತೆ ಬಂದ್ ಆಗಿದೆ.

    ನವಿಲುತೀರ್ಥ ಡ್ಯಾಂನಿಂದ ನೀರು ಬಿಟ್ಟಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಪ್ರವಾಹ ಭೀತಿ ಉಂಟಾಗಿದೆ. ಮಲಪ್ರಭಾ ನದಿ ತಟದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿಲಾಗಿದೆ. ಕ್ಷೇತ್ರದ ಶಾಸಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿ ಕೆ ರಾಜೇಂದ್ರಗೆ ದೂರವಾಣಿ ಕರೆ ಮಾಡಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

    ಗೋವನಕೊಪ್ಪ-ಕೊಣ್ಣೂರು ಮಾರ್ಗದ ಹಳೆ ರಸ್ತೆ ಸೇತುವೆ ಜಲಾವೃತಗೊಂಡಿದೆ. ಸ್ಥಳಕ್ಕೆ ಎಸ್‍ಪಿ ಲೋಕೇಶ್ ಜಗಲಾಸರ್, ಎಸಿ ಗಂಗಪ್ಪ, ಬಾದಾಮಿ ತಹಸೀಲ್ದಾರ ಸುಹಾಸ ಇಂಗಳೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹಿಡಕಲ್ ಡ್ಯಾಂನಿಂದ 33 ಸಾವಿರ ಕ್ಯೂಸೆಕ್ ನೀರು ಹೊರಬಿಟ್ಟಿರುವ ಕಾರಣ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಮುಧೋಳ ತಾಲೂಕಿನ ಮಾಚಕನೂರಲ್ಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

    ತುಂಗಾಭದ್ರಾ ಜಲಾಶಯದ ಕ್ರಸ್ಟ್ ಗೇಟ್‍ನಿಂದ 4,539 ಕ್ಯೂಸೆಕ್ ನೀರನ್ನು ಹೊರಬಿಡಲಾಗಿದ್ದು, ಹಾಲ್ನೊರೆಯಂತೆ ಉಕ್ಕುತ್ತಿರುವ ನೀರು ಬಣ್ಣದ ಬೆಳಕಿನಲ್ಲಿ ಚಿತ್ತಾರ ಮೂಡಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿರುವ ಜಲಾಶಯದ ಭರ್ತಿಗೆ ಅರ್ಧ ಅಡಿಯಷ್ಟೇ ಬಾಕಿ ಇದ್ದು, 1632 ಅಡಿಯಷ್ಟು ನೀರು ಸಂಗ್ರಹಗೊಂಡಿದೆ.

    ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂನಿಂದ 2 ಲಕ್ಷ 37 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗ್ತಿದೆ. ಹೀಗಾಗಿ ರಾಯಚೂರಲ್ಲಿ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದ್ದು, ಎನ್‍ಡಿಆರ್‍ಎಫ್ ತಂಡ ಆಗಮಿಸಿದೆ. ಧಾರವಾಡ ತಾಲೂಕಿನ ಹೊಸೆಟ್ಟಿಯಲ್ಲಿ ಗ್ರಾಮಕ್ಕೆ ಕೆರೆ ನೀರು ನುಗ್ಗಿದೆ. ವಿಜಯಪುರ ಜಿಲ್ಲೆಯಲ್ಲೂ ಮಳೆ ಆಗಗುತ್ತಿದೆ. ಕಲಬುರಗಿ ಜಿಲ್ಲೆಯ ಸೊನ್ನ ಬ್ಯಾರೆಜ್‍ನಿಂದ ಭೀಮ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದೆ, ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯಲ್ಲೂ ಪ್ರವಾಹ ಭೀತಿ ಉಂಟಾಗಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಲ್ಲೂ ಮಳೆ ಆಗ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಲ್ಲೂ ಮೂರು ದಿನ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ.

  • ಹೊಲಕ್ಕೆ ನುಗ್ಗಿದ 8 ಅಡಿ ಉದ್ದದ ಮೊಸಳೆ- ರೈತರಲ್ಲಿ ಆತಂಕ

    ಹೊಲಕ್ಕೆ ನುಗ್ಗಿದ 8 ಅಡಿ ಉದ್ದದ ಮೊಸಳೆ- ರೈತರಲ್ಲಿ ಆತಂಕ

    ಬಾಗಲಕೋಟೆ: ರೈತರ ಹೊಲಕ್ಕೆ ಮೊಸಳೆ ನುಗ್ಗಿರುವ ಘಟನೆ ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ನಡೆದಿದೆ.

    ರಮೇಶ್ ಹಂಚಿನಾಳ ಹಾಗೂ ಮಲ್ಲಪ್ಪ ಮೇಟಿ ಎಂಬವರ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಘಟಪ್ರಭಾ ನದಿಯಿಂದ ಎಂಟು ಅಡಿ ಉದ್ದದ ಮೊಸಳೆ ಹೊಲಕ್ಕೆ ನುಗ್ಗಿದ್ದು, ಮುಳ್ಳಿನ ಕಂಟಿಯಲ್ಲಿ ಸೇರಿಕೊಂಡಿದೆ.

    ಮೊಸಳೆ ಕಂಡು ರೈತರು ಆತಂಕಕ್ಕೀಡಾಗಿದ್ದು ಮೊಸಳೆ ಸ್ಥಳಾಂತರಕ್ಕೆ ಅರಣ್ಯಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ.