Tag: ಘರ್ಷಣೆ

  • 1 FB ಪೋಸ್ಟ್‌ ಮತ್ತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ –  ರಾತ್ರಿ ಬೀದಿಗಿಳಿದ ವಿದ್ಯಾರ್ಥಿಗಳು

    1 FB ಪೋಸ್ಟ್‌ ಮತ್ತೆ ಬಾಂಗ್ಲಾದೇಶದಲ್ಲಿ ಹಿಂಸಾಚಾರ – ರಾತ್ರಿ ಬೀದಿಗಿಳಿದ ವಿದ್ಯಾರ್ಥಿಗಳು

    ಢಾಕಾ: ಬಾಂಗ್ಲಾದೇಶದ (Bangladesh) ರಾಜಧಾನಿ ಢಾಕಾದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಸೆಕ್ರೆಟರಿಯೇಟ್ ಬಳಿ ಭಾನುವಾರ ರಾತ್ರಿ ವಿದ್ಯಾರ್ಥಿಗಳು ಮತ್ತು ಅನ್ಸಾರ್ ಸದಸ್ಯರ ನಡುವೆ ಹಿಂಸಾತ್ಮಕ ಘರ್ಷಣೆಗಳು (Clash At Secretariat) ಸಂಭವಿಸಿವೆ.

    ರಾತ್ರಿ 9 ಗಂಟೆಯ ನಂತರ ಘರ್ಷಣೆ ಆರಂಭವಾಗಿದ್ದು, ಎರಡೂ ಕಡೆಯ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅನ್ಸರ್‌ ಸದಸ್ಯರು ನಿರಂಕುಶ ಪ್ರಭುತ್ವದ ಏಜೆಂಟ್‌ಗಳು ಎಂದು ವಿದ್ಯಾರ್ಥಿಗಳು ಕರೆದಿದ್ದಾರೆ. ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ – ಇಬ್ಬರು ಐಜಿಪಿಗಳ ನೇತೃತ್ವದಲ್ಲಿ ತನಿಖಾ ತಂಡ ರಚನೆ

    ಬಾಂಗ್ಲಾದೇಶದಲ್ಲಿ ಆಂತರಿಕ ಭದ್ರತೆ ನೀಡುತ್ತಿರುವ ಅನ್ಸಾರ್ ಸದಸ್ಯರು (Ansar Members) ನಮ್ಮ ಉದ್ಯೋಗವನ್ನು ರಾಷ್ಟ್ರೀಕರಣಗೊಳಿಸಬೇಕೆಂದು ಕೆಲ ತಿಂಗಳಿನಿಂದ ಬೇಡಿಕೆ ಇಟ್ಟಿದ್ದಾರೆ. ಈ ಬೇಡಿಕೆ ಸಂಬಂಧ ಸಭೆ ನಡೆಯುತ್ತಿರುವಾಗ ಹಿಂಸಾಚಾರ ನಡೆದಿದೆ. ಇದನ್ನೂ ಓದಿ: ದರ್ಶನ್ ಜೊತೆ ಕುಳಿತ ನಟೋರಿಯಸ್ ರೌಡಿಶೀಟರ್‌ಗಳು ಯಾರು?

    ವಿದ್ಯಾರ್ಥಿಗಳು ಪ್ರತಿಭಟಿಸಿದ್ದು ಯಾಕೆ?
    ಬಾಂಗ್ಲಾದೇಶದಲ್ಲಿ ಸುಮಾರು 60 ಲಕ್ಷ ಅನ್ಸಾರ್ ಸದಸ್ಯರಿದ್ದಾರೆ. ಇವರು ದೇಶದ ಒಳಗ ಕಾನೂನು ಸುವ್ಯವಸ್ಥೆಯನ್ನು ನೋಡಿಕೊಳ್ಳುತ್ತಾರೆ. ಈ ಅನ್ಸಾರ್‌ ಸದಸ್ಯರು ಶೇಖ್ ಹಸೀನಾ ಅವರ ಅವಾಮಿ ಲೀಗ್‌ನ ಏಜೆಂಟ್‌ಗಳು. ಶೇಖ್ ಹಸೀನಾ ಅಣತಿಯಂತೆ ನಮ್ಮ ಮೇಲೆ ಇವರಿಂದ ಹಲ್ಲೆ ನಡೆದಿದೆ ಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.

    ಭಾನುವಾರ ರಾತ್ರಿ 8:35ಕ್ಕೆ ವಿದ್ಯಾರ್ಥಿ ಆಂದೋಲನದ ಸಂಯೋಜಕ ಹಸ್ನತ್ ಅವರು, ಢಾಕಾ ವಿಶ್ವವಿದ್ಯಾಲಯದ ರಾಜು ಸ್ಮಾರಕ ಶಿಲ್ಪಕಲೆ ಬಳಿ ಜಮಾಯಿಸುವಂತೆ ಫೇಸ್‌ಬುಕ್‌ ಪೋಸ್ಟ್‌ ಮೂಲಕ ಕೇಳಿಕೊಂಡಿದ್ದಾರೆ. ಅನ್ಸಾರ್ ಸದಸ್ಯರ ಹಲವು ಬೇಡಿಕೆಗಳನ್ನು ಈಡೇರಿಸಿದರೂ ಅವರು ನಮ್ಮ ಸದಸ್ಯರನ್ನು ಸೆಕ್ರೆಟರಿಯೇಟ್‌ನಲ್ಲಿ ವಶದಲ್ಲಿ ಇರಿಸಿದ್ದಾರೆ ಎಂದು ಪೋಸ್ಟ್‌ ಹಾಕಿದ್ದರು. ಈ ಪೋಸ್ಟ್‌ ನೋಡಿ ಸಾವಿರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಜಮಾವಣೆಯಾಗಿದ್ದರಿಂದ ಮತ್ತೆ ಘರ್ಷಣೆ ನಡೆದಿದೆ.

     

  • ಕಾಂಗ್ರೆಸ್, ಬಿಜೆಪಿಯಿಂದ ಪ್ರತ್ಯೇಕ ಗಣೇಶನ ಪ್ರತಿಷ್ಠಾಪನೆ – ವಿಸರ್ಜನೆ ವೇಳೆ ಗುಂಪು ಘರ್ಷಣೆ

    ಕಾಂಗ್ರೆಸ್, ಬಿಜೆಪಿಯಿಂದ ಪ್ರತ್ಯೇಕ ಗಣೇಶನ ಪ್ರತಿಷ್ಠಾಪನೆ – ವಿಸರ್ಜನೆ ವೇಳೆ ಗುಂಪು ಘರ್ಷಣೆ

    ಚಿಕ್ಕಬಳ್ಳಾಪುರ: ಬಿಜೆಪಿಯವರು (BJP) ಪ್ರತಿಷ್ಠಾಪನೆ ಮಾಡಿದ್ದ ಗಣೇಶನ (Ganesha) ವಿಸರ್ಜನೆ ವೇಳೆ ಮೆರವಣಿಗೆ ಕಾಂಗ್ರೆಸ್‌ನವರ (Congress) ಗಣೇಶ ಪ್ರತಿಷ್ಠಾಪನಾ ಸ್ಥಳಕ್ಕೆ ಬಂದಾಗ ಪರಸ್ಪರ ವಾಗ್ವಾದ ನಡೆದು ಗುಂಪು ಘರ್ಷಣೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಪೆರೇಸಂದ್ರ (Peresandra) ಕ್ರಾಸ್ ಬಳಿಯ ಕಮ್ಮಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಕಮ್ಮಗಾನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್‌ನವರು ಹಾಗೂ ಬಿಜೆಪಿಯವರು ಪ್ರತ್ಯೇಕವಾಗಿ ಗಣೇಶನ ಪ್ರತಿಷ್ಠಾಪನೆ ಮಾಡಿದ್ದರು. ನಿನ್ನೆ ತಡರಾತ್ರಿ ಬಿಜೆಪಿಯವರು ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ನಡೆಸಿದ್ದು, ಈ ವೇಳೆ ಕಾಂಗ್ರೆಸ್‌ನವರು ಪ್ರತಿಷ್ಠಾಪನೆ ಮಾಡಿದ್ದ ಗಣೇಶನ ಬಳಿ ಬಂದಾಗ ಎರಡು ಕಡೆಯವರು ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡಿದ್ದಾರೆ. ಮಾತಿಗೆ ಮಾತು ಬೆಳೆಸಿ ವಾಗ್ವಾದ ಜೋರಾಗಿ ಹೊಡೆದಾಟ ಬಡಿದಾಟ ಮಾಡಿಕೊಂಡು, ದೊಡ್ಡ ಮಟ್ಟದ ಗುಂಪು ಘರ್ಷಣೆಯಾಗಿದೆ. ಘಟನೆಯಲ್ಲಿ ಎರಡೂ ಕಡೆಯವರಿಗೆ ಗಾಯಗಳಾಗಿವೆ.

    ಸ್ಥಳಕ್ಕೆ ಪೇರೇಸಂದ್ರ ಪೊಲೀಸರು ಆಗಮಿಸಿ ಗಲಾಟೆ ತಹಬದಿಗೆ ತರಲು ಪ್ರಯತ್ನಿಸಿದರೂ ಮಾತು ಕೇಳದಿದ್ದಾಗ ಲಾಠಿ ರುಚಿ ತೋರಿಸಿ ಎರಡು ಕಡೆಯವರನ್ನು ಚದುರಿಸಿ ಗಲಾಟೆ ಕಂಟ್ರೋಲ್ ಮಾಡಿದ್ದಾರೆ. ಈ ಸಂಬಂಧ ಎರಡು ಕಡೆಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತಡರಾತ್ರಿಯೇ ಡಿಸ್ಚಾರ್ಜ್ ಆಗಿದ್ದಾರೆ. ಘಟನೆ ಬಗ್ಗೆ ಪೇರೇಸಂದ್ರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರು ಪ್ರತ್ಯೇಕ ದೂರು ನೀಡಿದ್ದಾರೆ. ಇದನ್ನೂ ಓದಿ: ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ಬ್ಯುಸಿ – 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ದರೋಡೆ

    ಬಿಜೆಪಿಯವರು ತಡರಾತ್ರಿಯೇ ಗಣೇಶನ ವಿಸರ್ಜನೆ ಮಾಡಿದ್ದಾರೆ. ಕಾಂಗ್ರೆಸ್‌ನವರ ಗಣೇಶ ಹಾಗೇ ಇದ್ದು ಪೂಜೆ ಮಾಡೋದನ್ನೇ ನಿಲ್ಲಿಸಲಾಗಿದೆ. ಗಲಾಟೆ ನಂತರ ಎಲ್ಲರೂ ನಾಪತ್ತೆಯಾಗಿದ್ದು ಗಣೇಶನ ಬಳಿ ಯಾರೂ ಬಂದಿಲ್ಲ. ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಿ ಪೊಲೀಸರು ಬಂದೋಬಸ್ತ್ ಕೈಗೊಂಡಿದ್ದಾರೆ. ಹಾಲಿ, ಮಾಜಿ ಶಾಸಕರ ಬೆಂಬಲಿಗರ ಪ್ರತಿಷ್ಠೆಯಿಂದ ಗಲಾಟೆಗೆ ಕಾರಣವಾಗಿದ್ದು, ಗ್ರಾಮದಲ್ಲಿನ ನಿವೇಶನಗಳ ಹಂಚಿಕೆ ವಿಚಾರದಲ್ಲಿ ಉಂಟಾಗಿರೋ ವೈಮನಸ್ಸು ಹಳೆ ದ್ವೇಷದ ಹಿನ್ನೆಲೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ ಶಾಕ್‌ – ತ.ನಾಡಿಗೆ ನಿತ್ಯ 5,000 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂದು ಧಾರ್ಮಿಕ ಪೋಸ್ಟ್‌ಗೆ ನಡೀತು ಭಾರೀ ಘರ್ಷಣೆ – 1 ಸಾವು, 8 ಮಂದಿಗೆ ಗಾಯ

    ಒಂದು ಧಾರ್ಮಿಕ ಪೋಸ್ಟ್‌ಗೆ ನಡೀತು ಭಾರೀ ಘರ್ಷಣೆ – 1 ಸಾವು, 8 ಮಂದಿಗೆ ಗಾಯ

    ಮುಂಬೈ: ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಒಂದು ಪೋಸ್ಟ್‌ನಿಂದಾಗಿ 2 ಸಮುದಾಯದ ಗುಂಪುಗಳ ನಡುವೆ ಭಾರೀ ಘರ್ಷಣೆ (Clash) ನಡೆದು ಒಬ್ಬ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ (Maharashtra) ಅಕೋಲಾದಲ್ಲಿ (Akola) ನಡೆದಿದೆ.

    ನಗರದ ಓಲ್ಡ್ ಸಿಟಿಯ ಸೂಕ್ಷ್ಮ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಘರ್ಷಣೆ ನಡೆದಿದೆ. ಹಿಂಸಾಚಾರದಲ್ಲಿ ಒಬ್ಬ ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಸೇರಿದಂತೆ ಒಟ್ಟು 8 ಜನರಿಗೆ ಗಾಯಗಳಾಗಿವೆ. ಘಟನೆಗೆ ಸಂಬಂಧಿಸಿದಂತೆ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬ ಧಾರ್ಮಿಕ ಸಂಬಂಧಿತ ಪೋಸ್ಟ್ ಒಂದನ್ನು ಹಾಕಿದ್ದು ಬಳಿಕ ಅದು ವೈರಲ್ ಆಗಿದೆ. ಬಳಿಕ 2 ಗುಂಪುಗಳ ನಡುವೆ ಘರ್ಷಣೆ ನಡೆದಿದೆ. 2 ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದ್ದು, ಹಲವು ವಾಹನಗಳಿಗೂ ಹಾನಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲಸದ ನೆಪದಲ್ಲಿ ಕರೆದೊಯ್ದು ಕಾರಿನಲ್ಲಿ ಕಿರುಕುಳ- ಬೈಕಲ್ಲಿ ಬಂದವ್ರಿಂದ ಮಹಿಳೆ ರಕ್ಷಣೆ

    ಗಲಭೆಕೋರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ನಗರದ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜನರು ಗುಂಪು ಗೂಡುವುದನ್ನು ನಿಷೇಧಿಸುವ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಗದ್ದುಗೆ ಏರಿದ ಕೈಗೆ ಅಣ್ಣಾಮಲೈ ಅಭಿನಂದನೆ

  • ಯುವತಿ ಮೇಲೆ ದೌರ್ಜನ್ಯ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ – ಪೊಲೀಸ್ ಜೀಪ್ ಮೇಲೆ ಕಲ್ಲುತೂರಾಟ

    ಯುವತಿ ಮೇಲೆ ದೌರ್ಜನ್ಯ ವಿಚಾರವಾಗಿ 2 ಗುಂಪುಗಳ ನಡುವೆ ಗಲಾಟೆ – ಪೊಲೀಸ್ ಜೀಪ್ ಮೇಲೆ ಕಲ್ಲುತೂರಾಟ

    ಕಾರವಾರ: ಮುಸ್ಲಿಂ ಯುವತಿಯ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆ ಯುವಕರ 2 ಗುಂಪುಗಳ ನಡುವೆ ಗುರುವಾರ ತಡರಾತ್ರಿ ಗಲಾಟೆ ನಡೆದು ಪೊಲೀಸ್ ಜೀಪ್ (Police Jeep) ಅನ್ನು ಅಡ್ಡಗಟ್ಟಿ ಕಲ್ಲುತೂರಾಟ (Stone pelting) ನಡೆಸಿರುವ ಘಟನೆ ಉತ್ತರಕನ್ನಡ (Uttara Kannada) ಜಿಲ್ಲೆಯ ಭಟ್ಕಳದ ರಂಜಾನ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ.

    ಯುವತಿಗೆ ದೌರ್ಜನ್ಯ ಮಾಡಿದ ವಿಚಾರದಲ್ಲಿ ಹದ್ಲೂರು ನಿವಾಸಿ ಚಂದ್ರು ಸೋಮಯ್ಯಗೊಂಡ, ಸರ್ಪನಕಟ್ಟೆಯ ರವೀಂದ್ರ ಶಂಕರ ನಾಯ್ಕ, ವೆಂಕಟೇಶ್ ನಾಯ್ಕ ಗೊರಟೆ, ಸುಲ್ತಾನ್ ಸ್ಟ್ರೀಟ್ ಮೊಹಮ್ಮದ್ ಮೀರಾ, ಮೊಹ್ಮದ್ ಇಮ್ರಾನ್ ಶೇಖ್, ಸದ್ದಾಂ ಹಾಗೂ ಇತರರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರ ಎದುರೇ ಎರಡು ಗುಂಪುಗಳು ಅವಾಚ್ಯ ಶಬ್ದಗಳಿಂದ ಬೈದಾಡುತ್ತಾ ರಂಪಾಟ ನಡೆಸಿದ್ದಾರೆ.

    ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಎರಡು ಗುಂಪುಗಳಿಂದ ಚಂದ್ರ ಹಾಗೂ ಮೊಹಮ್ಮದ್ ಮೀರಾನನ್ನು ಪೊಲೀಸ್ ವಾಹನ ಹತ್ತಿಸಿದ್ದಾರೆ. ಈ ವೇಳೆ ಪೊಲೀಸ್ ವಾಹನವನ್ನು ಅಡ್ಡಗಟ್ಟಿದ ಇತರ ಆರೋಪಿಗಳು ಕಲ್ಲಿನಿಂದ ವಾಹನದ ಗಾಜು ಒಡೆದು ಹಾಕಿದ್ದಾರೆ. ಆರೋಪಿ ಮೊಹಮ್ಮದ್ ಮೀರಾ ಪೊಲೀಸ್ ಸಿಬ್ಬಂದಿ ಗೌತಮ್ ಅವರ ಬೆರಳನ್ನು ಮುರಿದಿದ್ದಾನೆ. ಇದನ್ನೂ ಓದಿ: ವಕೀಲನಂತೆ ವೇಷ ಧರಿಸಿದ್ದ ವ್ಯಕ್ತಿಯಿಂದ ದೆಹಲಿ ನ್ಯಾಯಾಲಯದಲ್ಲಿ ಗುಂಡಿನ ದಾಳಿ – ಮಹಿಳೆಯ ಸ್ಥಿತಿ ಗಂಭೀರ

    ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಯುವತಿಯ ಮನೆಯವರು ಯಾವುದೇ ದೂರು ನೀಡಿಲ್ಲ. ಆದರೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ವಾಹನದ ಗಾಜು ಒಡೆದಿರುವ ಹಿನ್ನೆಲೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಒಟ್ಟು 7 ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರದೇಶದಲ್ಲಿ ಶಾಂತಿ ಕಾಪಾಡಲು ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಖ್ಯಾತ ಗಾಯಕ ಹನಿ ಸಿಂಗ್ ವಿರುದ್ಧ ಹಲ್ಲೆ, ಅಪಹರಣ ಕೇಸ್ ದಾಖಲು

  • ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ

    ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕೊಡೇಕಲ್‌ನಲ್ಲಿ (Yadgiri) ಇದೇ ಏಪ್ರಿಲ್ 6 ರಂದು ಕಲ್ಲು ತೂರಾಟದ (Stone Pelting) ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿಸಿದ್ದ ನಿಷೇಧಾಜ್ಞೆಯನ್ನು (Prohibition) ಮತ್ತೆರಡು ದಿನಕ್ಕೆ ವಿಸ್ತರಣೆ ಮಾಡಲಾಗಿದೆ.

    ಏಪ್ರಿಲ್ 8 ರವರೆಗೂ ಇದ್ದ 144 ಸೆಕ್ಷನ್ ಅನ್ನು ಏಪ್ರಿಲ್ 12ರ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಿ, ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಆದೇಶ ನೀಡಿದ್ದಾರೆ. ಇದನ್ನೂ ಓದಿ: ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಬಿಜೆಪಿ ಶಾಸಕ ರಾಜೂಗೌಡ ಸ್ವಗ್ರಾಮ ಕೊಡೇಕಲ್‌ನಲ್ಲಿ ಕೆಲ ದಿನಗಳ ಹಿಂದೆ ಕಲ್ಲು ತೂರಾಟದ ಜೊತೆಗೆ ಮಾರಕಾಸ್ತ್ರಗಳಿಂದ ದಾಳಿ ನಡೆದಿತ್ತು. ಕಾಂಗ್ರೆಸ್-ಬಿಜೆಪಿ (Congress-BJP) ಕಾರ್ಯಕರ್ತರ ಪರಸ್ಪರ ಕಲ್ಲು ತೂರಾಟ ಪ್ರಕರಣದಲ್ಲಿ 4-5 ಜನರಿಗೆ ಗಂಭೀರ ಗಾಯಗಳಾಗಿದ್ದವು.

    ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 5 ಪ್ರಕರಣಗಳು ದಾಖಲಾಗಿವೆ. 25 ಆರೋಪಿಗಳ ಬಂಧನವಾಗಿದೆ. ಸದ್ಯ ಕ್ಷೇತ್ರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ಜೊತೆಗೆ ಇನ್ನುಳಿದ ಆರೋಪಿಗಳ ಪತ್ತೆಗಾಗಿ ನಿಷೇಧಾಜ್ಞೆ ವಿಸ್ತರಣೆ ಮಾಡಲಾಗಿದೆ. ಇದನ್ನೂ ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

  • ಕಾಂಗ್ರೆಸ್, ಬಿಜೆಪಿ ಘರ್ಷಣೆ – 4 ಎಫ್‌ಐಆರ್, 18 ಜನರ ವಶಕ್ಕೆ ಪಡೆದ ಖಾಕಿ ಪಡೆ

    ಕಾಂಗ್ರೆಸ್, ಬಿಜೆಪಿ ಘರ್ಷಣೆ – 4 ಎಫ್‌ಐಆರ್, 18 ಜನರ ವಶಕ್ಕೆ ಪಡೆದ ಖಾಕಿ ಪಡೆ

    ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ (Yadgiri) ಕೊಡೇಕಲ್‌ನಲ್ಲಿ (Kodekal) ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ (BJP – Congress Clash) ಏರ್ಪಟ್ಟಿದೆ. ಈ ಹಿನ್ನೆಲೆ ಕೊಡೇಕಲ್, ಹುಣಸಗಿ (Hunasagi) ಹಾಗೂ ಸುರಪುರದಲ್ಲಿ (Surapura) ಖಾಕಿ ಪಡೆ ಸುತ್ತುವರಿದಿದೆ. ಗಲಾಟೆ ನಿಯಂತ್ರಣಕ್ಕಾಗಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಈಗಾಗಲೇ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದು, ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸೆಕ್ಷನ್ 144 ಕಲಂ ಜಾರಿಯಾಗಿದೆ.

    ಸಂಘರ್ಷ ಹಿನ್ನೆಲೆ ಗುರುವಾರ ರಾತ್ರಿ ಕೊಡೇಕಲ್‌ಗೆ ಆಗಮಿಸಿರುವ ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್‌ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ಇದನ್ನೂ ಓದಿ: 1 ಕೋಟಿ 5 ಲಕ್ಷ ರೂ. ಮೌಲ್ಯದ ಬೆಳ್ಳಿಯ ಆಭರಣಗಳು ಜಪ್ತಿ

    ನಿಷೇಧಾಜ್ಞೆ ಜಾರಿ ಹಿನ್ನೆಲೆ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ 3 ಕೆಎಸ್‌ಆರ್‌ಪಿ ತುಕಡಿ, 1 ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, 2 ಡಿಎಸ್‌ಪಿ, 5 ಸಿಪಿಐ, 10 ಸಿಪಿಐ 100 ಕಾನ್ಸ್ಟೇಬಲ್ ನಿಯೋಜನೆ ಮಾಡಲಾಗಿದೆ.

    ಗಲಾಟೆ ಹಿನ್ನೆಲೆ ಈಗಾಗಲೇ 4 ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು 18 ಜನರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ 4 ಪ್ರಕರಣ ದಾಖಲಿಸಿಕೊಂಡು ಗಲಾಟೆಯಲ್ಲಿ ಭಾಗಿಯಾದ 118 ಜನರ ಮೇಲೆ ಸಿಆರ್‌ಪಿಸಿ 107 ಕಲಂನಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ವರುಣಾಗೆ ಬಿ.ವೈ ವಿಜಯೇಂದ್ರ ಹೆಸರು ಶಿಫಾರಸ್ಸಿಲ್ಲ!

  • ಬಿಹಾರ ರಾಮನವಮಿ ಹಿಂಸಾಚಾರ – ಮತ್ತೆ ಕೇಳಿ ಬಂತು ಸ್ಫೋಟದ ಸದ್ದು

    ಬಿಹಾರ ರಾಮನವಮಿ ಹಿಂಸಾಚಾರ – ಮತ್ತೆ ಕೇಳಿ ಬಂತು ಸ್ಫೋಟದ ಸದ್ದು

    ಪಾಟ್ನಾ: ಬಿಹಾರದ (Bihar) ರೋಹ್ತಾಸ್ ಜಿಲ್ಲೆಯ ಸಸಾರಾಮ್ (Sasaram) ನಗರದಲ್ಲಿ ಬಾಂಬ್ ಸ್ಫೋಟಗೊಂಡು (Bomb Blast) 6 ಜನರು ಗಾಯಗೊಂಡ ಘಟನೆ ನಡೆದು 2 ದಿನಗಳಾದ ಬಳಿಕ ಮತ್ತೆ ಸೋಮವಾರ ಮುಂಜಾನೆ ಸ್ಫೋಟದ (Explosion) ಸದ್ದು ಕೇಳಿ ಬಂದಿದೆ.

    ಸೋಮವಾರ ಮುಂಜಾನೆ ನಗರದ ಮೋಚಿ ತೋಲಾ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ವರದಿಯಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸಬ್ ಇನ್ಸ್‌ಪೆಕ್ಟರ್ ರಾಮ್ ನರೇಶ್ ಸಿಂಗ್, ನಾವು ಮುಂಜಾನೆ ಸ್ಫೋಟದಂತಹ ಶಬ್ದವನ್ನು ಕೇಳಿದ್ದೇವೆ. ಆದರೆ ಅದು ಬಾಂಬ್ ಸ್ಫೋಟವೇ ಅಥವಾ ಪಟಾಕಿಯೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದಿದ್ದಾರೆ. ಇದನ್ನೂ ಓದಿ: 36 ಮಂದಿ ಸಾವಿಗೆ ಕಾರಣವಾಗಿದ್ದ ಇಂದೋರ್‌ ದೇವಸ್ಥಾನ ನೆಲಸಮ

    ಮಾರ್ಚ್ 31 ರಂದು ರಾಮನವಮಿ ಮೆರವಣಿಗೆಯ ಬಳಿಕ ಸಸಾರಾಮ್‌ನಲ್ಲಿ 2 ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. ಈ ಪ್ರದೇಶದಲ್ಲಿ ಕಲ್ಲು ತೂರಾಟವೂ ನಡೆದಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಅಧಿಕಾರಿಗಳು ಸಸಾರಮ್ ನಗರದಲ್ಲಿ ಸಿಆರ್‌ಪಿಸಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದ್ದಾರೆ.

    ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ನಂತರ ಸರಣಿ ಘರ್ಷಣೆಗಳು ವರದಿಯಾಗಿವೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಪೊಲೀಸರು ಮತ್ತು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ದುಷ್ಕರ್ಮಿಗಳನ್ನು ಹಿಡಿಯಲು ಬಿಹಾರ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಸಸಾರಾಮ್‌ನಿಂದ ಇದುವರೆಗೆ 43 ಜನರನ್ನು ಬಂಧಿಸಲಾಗಿದೆ ಮತ್ತು 3 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಸಸಾರಾಮ್ ನಗರದಾದ್ಯಂತ 27 ಸ್ಥಳಗಳಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಗಿದೆ. ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಸಹ ಪ್ರಯಾಣಿಕನಿಗೆ ಬೆಂಕಿ ಹಚ್ಚಿದ ವ್ಯಕ್ತಿ – ಮೂವರು ಸಾವು

  • ಟಿಎಂಸಿ ಕಾರ್ಯಕರ್ತರ 2 ಗುಂಪಿನ ನಡುವೆ ಗಲಾಟೆ, ಗುಂಡಿನ ದಾಳಿ – ಹಲವರಿಗೆ ಗಾಯ

    ಟಿಎಂಸಿ ಕಾರ್ಯಕರ್ತರ 2 ಗುಂಪಿನ ನಡುವೆ ಗಲಾಟೆ, ಗುಂಡಿನ ದಾಳಿ – ಹಲವರಿಗೆ ಗಾಯ

    ಕೋಲ್ಕತ್ತಾ: ಭಾನುವಾರ ಪಶ್ಚಿಮ ಬಂಗಾಳದ (West Bengal) ಮಾಲ್ಡಾದಲ್ಲಿ (Malda) ತೃಣಮೂಲ ಕಾಂಗ್ರೆಸ್ ಪಕ್ಷದ (TMC) ಕಾರ್ಯಕರ್ತರ 2 ಗುಂಪುಗಳ ನಡುಗೆ ಘರ್ಷಣೆ (Clash) ಏರ್ಪಟ್ಟಿದ್ದು, ಗುಂಡಿನ ದಾಳಿ ಹಾಗೂ ಸ್ಫೋಟಗಳು ನಡೆದು ಹಲವರಿಗೆ ಗಾಯಗಳಾಗಿರುವುದಾಗಿ ವರದಿಯಾಗಿದೆ.

    ಮಾಲ್ಡಾ ಜಿಲ್ಲೆಯ ರಟುವಾದಲ್ಲಿ ಮದರಸಾ ಆಡಳಿತ ಸಮಿತಿಯ ಚುನಾವಣೆಗೆ ಸಂಬಂಧಿಸಿದಂತೆ ಗಲಾಟೆ ನಡೆದಿದೆ. ಈ ಚುನಾವಣೆಗೆ ಟಿಎಂಸಿ ಹೊರತುಪಡಿಸಿ ಇತರ ಯಾವುದೇ ರಾಜಕೀಯ ಪಕ್ಷಗಳ ನಾಮನಿರ್ದೇಶನ ಮಾಡಿಲ್ಲ ಎನ್ನಲಾಗಿದೆ.

    ಟಿಎಂಸಿ ಕಾಂಗ್ರೆಸ್‌ನ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ದಾಳಿಗಳು ನಡೆದಿವೆ. ಘಟನೆಯಲ್ಲಿ ಮೂವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅದರಲ್ಲಿ ಒಬ್ಬರಿಗೆ ಗುಂಡು ತಗುಲಿದೆ. ಗಾಯಾಳುಗಳನ್ನು ಮಾಲ್ಡಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೀತಾಮಾತೆಗೂ ಅಗ್ನಿಪರೀಕ್ಷೆ ತಪ್ಲಿಲ್ಲ, ಇನ್ನು ನಾನ್ಯಾವ ಲೆಕ್ಕ: ಲಕ್ಷ್ಮೀ ಹೆಬ್ಬಾಳ್ಕರ್

    ಗಲಾಟೆ ನಡೆಸಿದ ಎರಡೂ ಕಡೆಯವರು ಕಬ್ಬಿಣದ ರಾಡ್ ಹಾಗೂ ಬಿದಿರಿನ ಕೋಲುಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ. ಘರ್ಷಣೆಯಲ್ಲಿ ವಾಹನಗಳು ಸೇರಿದಂತೆ ಹಲವು ಆಸ್ತಿಗಳು ಧ್ವಂಸವಾಗಿದೆ. ಪ್ರದೇಶದಲ್ಲಿ ಇದೀಗ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಳೆ ದೋಸ್ತಿಗಳ ಹೊಸ ಕುಸ್ತಿ – ಮಾತೃ ಪಕ್ಷವನ್ನು ಟಾರ್ಗೆಟ್ ಮಾಡಿದ ಗುರು, ಶಿಷ್ಯ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಡೆದುಕೊಂಡು ಹೋಗ್ತಿದ್ದಾಗ ಚೂರಿ ಇರಿತ – ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ, 144 ಸೆಕ್ಷನ್ ಜಾರಿ

    ನಡೆದುಕೊಂಡು ಹೋಗ್ತಿದ್ದಾಗ ಚೂರಿ ಇರಿತ – ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ, 144 ಸೆಕ್ಷನ್ ಜಾರಿ

    ಬಾಗಲಕೊಟೆ: ಅನ್ಯ ಕೋಮಿನ ಯುವಕರ ನಡುವೆ ನಡೆದ ಘರ್ಷಣೆಯಲ್ಲಿ ಮೂವರಿಗೆ ಗಾಯಗಳಾದ ಘಟನೆ ಬಾದಾಮಿ ತಾಲೂಕಿನ ಕೆರೂರು ಬಸ್ ನಿಲ್ದಾಣದಲ್ಲಿ ನಡೆದಿದೆ.

    ಘಟನೆಯಲ್ಲಿ ಅರುಣ್, ಲಕ್ಷ್ಮಣ್, ಯಮನೂರು ಎಂಬುವರಿಗೆ ಗಾಯಗಳಾಗಿವೆ. ನೂಪುರ್ ಶರ್ಮಾ ಪರ-ವಿರೋಧ ವಿಚಾರವಾಗಿಯೇ ಬಾಗಲಕೋಟೆಯ ಕೇರೂರಿನಲ್ಲಿ ಗುಂಪು ಘರ್ಷಣೆ ನಡೆದಿದೆ. ಅನ್ಯಕೋಮಿನ ವ್ಯಕ್ತಿಯೊಬ್ಬರು ನೂಪುರ್ ವಿರುದ್ಧ ಪೋಸ್ಟ್ ಹಾಕಿದ್ದನ್ನು ವಿರೋಧಿಸಿ ಶುರುವಾದ ಜಗಳ ಕೋಮು ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.

    ಅರುಣ್ ಕಟ್ಟಿಮನಿ ಸೇರಿ ಆತನ ಸ್ನೇಹಿತರು ಬಸ್ ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಅರುಣ್ ಬೆನ್ನಿಗೆ ಚೂರಿ ಹಾಕಿದ್ದಾರೆ. ತಕ್ಷಣವೇ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಶಾಸಕ ಜಮೀರ್‌ ಅಹ್ಮದ್‌ ಆಸ್ತಿ ಶೇ.2031ರಷ್ಟು ಹೆಚ್ಚಳ!

    ಈ ಘಟನೆಯಿಂದ ರೊಚ್ಚಿಗೆದ್ದ ಹಿಂದೂ ಸಂಘಟನೆ ಕಾರ್ಯಕರ್ತರು ಕೆರೂರು ಪಟ್ಟಣದ ಬಸ್ ನಿಲ್ದಾಣದ ಮುಂದಿನ ಎರಡು ತಳ್ಳುಗಾಡಿಗಳಿಗೆ ಬೆಂಕಿ ಹಚ್ಚಿ, ಐದು ಬೈಕ್‍ಗಳನ್ನು ಜಖಂಗೊಳಿಸಿ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ತರಕಾರಿ ಅಂಗಡಿಗಳನ್ನು ಧ್ವಂಸ ಮಾಡಿದರು. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

    ಗುಂಪು ಘರ್ಷಣೆ ಹಿನ್ನೆಲೆಯಲ್ಲಿ ಕೆರೂರು ಪಟ್ಟಣಕ್ಕೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ನಾಳೆ ರಾತ್ರಿ 8 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಗೂಡಂಗಡಿ ಸೇರಿದಂತೆ ಎಲ್ಲ ತರಹದ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ನಾಳೆವರೆಗೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆ

    ಇದೇ ವೇಳೆ ಹಲ್ಲೆ ಮಾಡಿದವರ ಮೇಲೆ ಕ್ರಮಕೈಗೊಳ್ಳಬೇಕು, ಇಲ್ಲದಿದ್ದರೆ ತಲೆಗೆ ಹೊಡೆದವರ ತಲೆ ತೆಗೆಯೋದಕ್ಕೂ ಹಿಂಜರಿಯಲ್ಲ ಎಂದು ಹಿಂದೂ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ. ಘಟನೆ ಸಂಬಂಧ ಘರ್ಷಣೆಗೆ ಕಾರಣರಾದವರಿಗಾಗಿ ಪೊಲೀಸರು ಶೋಧ ನಡೆಯುತ್ತಿದ್ದು, ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬಣ್ಣ ಎರಚಾಡುವಾಗ ಎರಡು ಗುಂಪುಗಳ ನಡುವೆ ಗಲಾಟೆ: ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣ

    ಬಣ್ಣ ಎರಚಾಡುವಾಗ ಎರಡು ಗುಂಪುಗಳ ನಡುವೆ ಗಲಾಟೆ: ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣ

    ಚಿಕ್ಕೋಡಿ: ರಂಗ ಪಂಚಮಿ ಹಬ್ಬದ ಪ್ರಯುಕ್ತ ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ.

    ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ  ಬಣ್ಣ ಎರಚಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಗ್ರಾಮ ಪಂಚಾಯತ್ ಅಧ್ಯಕ್ಷನನ್ನು ತಳ್ಳಾಡುವುದರ ಜೊತೆಗೆ ಪೊಲೀಸರ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ಮಾಡಿದೆ.

    ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಪಿಎಸ್‍ಐ ಹಾಗೂ ಸಿಬ್ಬಂದಿ ದೌಡಾಯಿಸಿದ್ದಾರೆ. ಹೆಚ್ಚಿನ ಪೊಲೀಸ್ ನಿಯೋಜನೆ ಬಳಿಕ ಪರಿಸ್ಥಿತಿ ಹತೋಟಿಗೆ ತೆಗೆದುಕೊಂಡಿದ್ದಾರೆ. ಇದರಿಂದಾಗಿ ಕರೋಶಿ ಗ್ರಾಮ ಸಂಪೂರ್ಣ ಬಂದ್ ಆಗಿದೆ. ಇದನ್ನೂ ಓದಿ: ಮರಿ ಜೊತೆ ಇದ್ದ ಆನೆ ಮೇಲೆ ಜೆಸಿಬಿ ಹರಿಸಲು ಮುಂದಾದ ಚಾಲಕ – ಸಾರ್ವಜನಿಕರಿಂದ ಆಕ್ರೋಶ

    ಸದ್ಯ ಕರೋಶಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಜನರು ಆತಂಕದಲ್ಲಿದ್ದಾರೆ. ಸ್ಥಳದಲ್ಲೆ ಪೊಲೀಸ್ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ.  ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಗೋಮಾಂಸ ಸಾಗಿಸುತ್ತಿದ್ದಾನೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿಸಿದ್ರು