Tag: ಚಂಡಮಾರುತ

  • ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ

    ಮುಂಬೈಗೆ ಸೈಕ್ಲೋನ್ `ಶಕ್ತಿʼಯ ಭೀತಿ – ಸೋಮವಾರ ಗುಜರಾತ್‌ಗೂ ಅಪ್ಪಳಿಸಲಿದೆ ಚಂಡಮಾರುತ

    – `ಶಕ್ತಿ’ ಹೆಸರು ಕೊಟ್ಟಿದ್ದೇ ಲಂಕಾ; ಅ.7ರ ವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ

    ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ (Shakti Cyclone) ಅಬ್ಬರ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ ಅ.7ರ ವರೆಗೆ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಇದು ಮುಂಗಾರು ಬಳಿಕ ಅರಬ್ಬಿ ಸಮುದ್ರದಲ್ಲಿ ಅಪ್ಪಳಿಸುವ ಮೊದಲ ಚಂಡಮಾರುತವಾಗಿದೆ.

    ಚಂಡಮಾರುತ ಬೀಸುವ ಹಿನ್ನೆಲೆ ಮುಂಬೈ (Mumbai), ಥಾಣೆ, ಪಾಲ್ಘರ್, ರಾಯಗಡ್, ರತ್ನಗಿರಿ ಮತ್ತು ಸಿಂಧುದುರ್ಗ ಸೇರಿದಂತೆ ಮಹಾರಾಷ್ಟ್ರದ ಹಲವಾರು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹವಾಮಾನ ಇಲಾಖೆಯು ಮಹಾರಾಷ್ಟ್ರದ ಒಳಭಾಗಗಳಲ್ಲಿ, ಅದ್ರಲ್ಲೂ ಮುಖ್ಯವಾಗಿ ಪೂರ್ವ ವಿದರ್ಭ ಮತ್ತು ಮರಾಠವಾಡದ ಕೆಲ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

    ಉತ್ತರ ಕೊಂಕಣದ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಸ್ಥಳೀಯ ಆಡಳಿತ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿದೆ. ಇದನ್ನೂ ಓದಿ: ಕಂದಮ್ಮಗಳ ಜೀವ ತೆಗೆದ ಕೆಮ್ಮಿನ ಸಿರಪ್ – ಕೇಂದ್ರ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

    ಗುಜರಾತ್‌ಗೆ ಅಪ್ಪಳಿಸಲಿದೆ ಚಂಡಮಾರುತ
    ಹವಾಮಾನ ಇಲಾಖೆ (IMD) ವಿಜ್ಞಾನಿ ಅಭಿಮನ್ಯು ಚೌಹಾಣ್ ಪ್ರಕಾರ, ಈಶಾನ್ಯ ಅರೇಬಿಯನ್‌ ಸಮುದ್ರದಲ್ಲಿ (Arabian Sea) ಚಂಮಾರುತ ತೀವ್ರಗೊಂಡಿದೆ. ಗಂಟೆಗೆ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಹೀಗಾಗಿ ಅಕ್ಟೋಬರ್‌ 6ರಂದು ಬೆಳಗ್ಗಿನ ವೇಳೆಗೆ ಚಂಡಮಾರುತವು ಗುಜರಾತ್‌ ಕಡೆಗೆ ಬೀಸುವ ನಿರೀಕ್ಷೆಯಿದೆ. ಆದಾಗ್ಯೂ ರಾಜ್ಯದಲ್ಲಿ ಮಳೆಯ ಪರಿಣಾಮ ಕಡಿಮೆ ಇರಲಿದ್ದು, ಗಾಳಿಯು ಗಂಟೆಗೆ 40-55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ವಿಧಾನಸಭೆ ಚುನಾವಣೆ; ತಯಾರಿ ಪರಿಶೀಲಿಸಿದ ಕೇಂದ್ರ ಚುನಾವಣಾ ಆಯೋಗ

    ಶಕ್ತಿ ಚಂಡಮಾರುತ ಎದುರಿಸಲು ಸಕಲ ತಯಾರಿ
    ಇನ್ನೂ ಶಕ್ತಿ ಚಂಡ ಮಾರುತ ಎದುರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಮಹಾರಾಷ್ಟ್ರ ಸರ್ಕಾರ (Maharashtra Government) ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ. ವಿಪತ್ತು ನಿರ್ವಹಣಾ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಬೇಕು, ಕರಾವಳಿ ಮತ್ತು ತಗ್ಗು ಪ್ರದೇಶಗಳಲ್ಲಿ ನೆಲೆಸಿರುವ ಜನರನ್ನ ಸ್ಥಳಾಂತರಿಸಲು ಕ್ರಮ ವಹಿಸಬೇಕು, ಮೀನುಗಾರರು ಸಮುದ್ರಕ್ಕಿಳಿದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದೆ. ‌

    ಸೈಕ್ಲೋನ್‌ ಶಕ್ತಿ ಈಗ ಎಲ್ಲಿದೆ?
    ಹವಾಮಾನ ಇಲಾಖೆ ಪ್ರಕಾರ, ಶಕ್ತಿ ಚಂಡಮಾರುತವು ಪ್ರಸ್ತುತ ಗುಜರಾತ್‌ನ ನಲಿಯಾದಿಂದ ನೃಋತ್ಯಕ್ಕೆ ಸುಮಾರು 270 ಕಿಮೀ ದೂರದಲ್ಲಿ, ಪೋರ್‌ಬಂದರ್‌ನಿಂದ ಪಶ್ಚಿಮಕ್ಕೆ 300 ಕಿಮೀ ಮತ್ತು ದಕ್ಷಿಣಕ್ಕೆ 360 ಕಿಮೀ ದೂರದಲ್ಲಿದೆ. ಸುಮಾರು 8 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸುತ್ತಿದ್ದು, 100 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಇದನ್ನೂ ಓದಿ: ಪಾಕಿನ ಎಫ್‌-16 , ಜೆಎಫ್‌-17 ಯುದ್ಧ ವಿಮಾನಗಳನ್ನು ಹೊಡೆದಿದ್ದೇವೆ: ಏರ್ ಚೀಫ್ ಮಾರ್ಷಲ್

    `ಶಕ್ತಿ’ ಹೆಸರು ಕೊಟ್ಟಿದ್ದೇ ಶ್ರೀಲಂಕಾ
    ʻಶಕ್ತಿʼ ಚಂಡಮಾರುತದ ಹೆಸರು ಗಮನ ಸೆಳೆದಿದೆ. ಆದ್ರೆ ಚಂಡಮಾರುತಕ್ಕೆ ʻಶಕ್ತಿʼ ಎಂದು ಹೆಸರು ಕೊಟ್ಟಿದ್ದೇ ಶ್ರೀಲಂಕಾ. ವಿಶ್ವ ಹವಾಮಾನ ಸಂಸ್ಥೆ (WMO) ಹಾಗೂ ಏಷ್ಯಾ ಮತ್ತು ಪೆಸಿಫಿಕ್‌ನ ಆರ್ಥಿಕ ಮತ್ತು ಸಾಮಾಜಿಕ ಆಯೋಗ (ESCAP) ನಿರ್ವಹಿಸುವ ಸಂಘಟಿತ ವ್ಯವಸ್ಥೆಯ ಅಡಿಯಲ್ಲಿ ಶ್ರೀಲಂಕಾ ʻಶಕ್ತಿʼ ಎಂದು ಹೆಸರಿಸಿದೆ. 2020ರಲ್ಲಿ ಪರಿಚಯಿಸಲಾದ ಈ ಸಂಘಟಿತ ವ್ಯವಸ್ಥೆಯು ಬಾಂಗ್ಲಾದೇಶ, ಭಾರತ, ಮಾಲ್ಡೀವ್ಸ್, ಮ್ಯಾನ್ಮಾರ್, ಓಮನ್, ಪಾಕಿಸ್ತಾನ, ಶ್ರೀಲಂಕಾ ಮತ್ತು ಥೈಲ್ಯಾಂಡ್ ಸದಸ್ಯರಾಷ್ಟ್ರಗಳನ್ನು ಒಳಗೊಂಡಿದೆ.

    ಚಂಡಮಾರುತವನ್ನು ಸುಲಭವಾಗಿ ಗುರುತಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಇದಕ್ಕೆ ಹೆಸರುಗಳನ್ನು ನೀಡಲಾಗುತ್ತದೆ. ಈ ಋತುವಿನ ಮೊದಲ ಚಂಡಮಾರುತ ಇದಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ

  • ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ

    ಅರಬ್ಬಿ ಸಮುದ್ರದಲ್ಲಿ ‘ಶಕ್ತಿ’ ಅಬ್ಬರ – ಮಹಾರಾಷ್ಟ್ರದಲ್ಲಿ ಅ.7ರವರೆಗೆ ಭಾರೀ ಮಳೆ ಸಾಧ್ಯತೆ

    ಮುಂಬೈ: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತ (Shakti Cyclone) ಅಬ್ಬರ ಹಿನ್ನೆಲೆ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

    ಅಕ್ಟೋಬರ್ 3ರಿಂದ 7ರವರೆಗೆ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ. ಬಲವಾದ ಗಾಳಿ, ಚಂಡಮಾರುತದ ಎಚ್ಚರಿಕೆ ನೀಡಿದ್ದು, ಮುಂಬೈ, ಥಾಣೆ, ಪಾಲ್ಘರ್, ರಾಯಗಢ, ರತ್ನಗಿರಿ, ಸಿಂಧುದುರ್ಗ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಜೈಲಲ್ಲಿ ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು

    ಗುಜರಾತ್‌ನ ದ್ವಾರಕಾದಿಂದ ಸುಮಾರು 250 ಕಿ.ಮೀ ಪಶ್ಚಿಮ-ನೈಋತ್ಯಕ್ಕೆ ಚಂಡಮಾರುತ ಕೇಂದ್ರೀಕೃತವಾಗಿದೆ. ಇಂದು ಈ ಚಂಡಮಾರುತ ಇನ್ನಷ್ಟು ಬಲಗೊಳ್ಳಲಿದೆ. ಭಾರತೀಯ ಭೂಪ್ರದೇಶದ ಮೇಲೆ ಇದು ಗಮನಾರ್ಹ ಪರಿಣಾಮ ಬೀರುವ ಸಾಧ್ಯತೆಯಿಲ್ಲ. ಗಂಟೆಗೆ 8 ಕಿ.ಮೀ. ವೇಗದಲ್ಲಿ ವಾಯುವ್ಯಕ್ಕೆ ಚಲಿಸುತ್ತಿದ್ದು, ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ ಮಧ್ಯ ಅರಬ್ಬಿ ಸಮುದ್ರದ ಕಡೆಗೆ ಸಾಗುವ ನಿರೀಕ್ಷೆಯಿದೆ. ನಾಳೆ ವೇಳೆಗೆ ಉತ್ತರ ಮತ್ತು ಪಕ್ಕದ ಮಧ್ಯ ಅರೇಬಿಯನ್ ಸಮುದ್ರದ ಮಧ್ಯ ಭಾಗಗಳನ್ನು ತಲುಪುವ ಸಾಧ್ಯತೆಯಿದೆ. ಗುಜರಾತ್ ತಲುಪುವ ಮುನ್ನ ಇದು ದುರ್ಬಲ ಆಗಬಹುದು. ಈ ಹಿನ್ನೆಲೆ ಮಳೆ ಹೊರತುಪಡಿಸಿ ಯಾವುದೇ ಆತಂಕ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಇಂದಿನಿಂದ ಜಾತಿಗಣತಿ ಸಮೀಕ್ಷೆ – 32 ಲಕ್ಷ ಮನೆ, ಎರಡು ವಾರಗಳ ಟಾರ್ಗೆಟ್

  • ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

    ತೈವಾನ್‌ನಲ್ಲಿ ʻರಗಾಸಾʼ ಚಂಡಮಾರುತಕ್ಕೆ 14 ಬಲಿ, 124 ಮಂದಿ ಮಿಸ್ಸಿಂಗ್‌

    ತೈಪೆ: ತೈವಾನ್‌ನಲ್ಲಿ ಸಂಭವಿಸಿದ ರಗಾಸಾ (Super Typhoon Ragasa) ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ಕಾಣೆಯಾಗಿದ್ದಾರೆ. ದುರಂತದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಆತಂಕ ಸೃಷ್ಟಿಸಿದೆ.

    ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್‌ನಲ್ಲಿ (South Taiwan) ಭಾರೀ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ H-1B ವೀಸಾ ಟಫ್‌ ರೂಲ್ಸ್‌ ನಡುವೆಯೂ ಭಾರತೀಯರಿಗೆ ಮಣೆ ಹಾಕಿದ ಕಂಪನಿಗಳು – ಮೈಸೂರಲ್ಲಿ ಓದಿದ್ದ ವ್ಯಕ್ತಿಗೆ ಸಿಇಒ ಪಟ್ಟ

    ‘ರಾಗಸ’ ಚಂಡಮಾರುತ ಮಂಗಳವಾರ ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: PublicTV Explainer: ಭಾರತದ ಯುವ ಪ್ರತಿಭೆಗಳಿಗೆ ಅಮೆರಿಕ ವೀಸಾ ತಡೆಗೋಡೆ?; ಏನಿದು H-1B ವೀಸಾ ಹೊಸ ರೂಲ್ಸ್‌?

    ಭೂಕುಸಿತಕ್ಕೆ ನಲುಗಿದ ಜನ
    ತೈವಾನ್‌ ಪೂರ್ವ ಪ್ರದೇಶದಲ್ಲಿ ಭಾರೀ ಮಳೆಯಾದ ನಂತರ ಭೂಕುಸಿತ ಉಂಟಾಗಿದೆ. ಮಂಗಳವಾರ 2 ಇದ್ದ ಸಾವಿನ ಸಂಖ್ಯೆ ಬುಧವಾರ 14ಕ್ಕೆ ಏರಿಕೆಯಾಗಿದೆ. ಈವರೆಗೆ 124 ಮಂದಿ ನಾಪತ್ತೆಯಾಗಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯ ನಡೆಸುತ್ತಿವೆ. ಇದನ್ನೂ ಓದಿ: ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

  • ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಬಂಗಾಳಕೊಲ್ಲಿಯಲ್ಲಿ ಚುರುಕುಗೊಂಡ ಚಂಡಮಾರುತ – ಒಂದು ವಾರ ರಾಜ್ಯದಲ್ಲಿ ಗಾಳಿ ಸಹಿತ ಮಳೆ

    ಬೆಂಗಳೂರು: ಗುರುವಾರದಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತಗಳು (Cyclone) ಚುರುಕುಗೊಂಡ ಹಿನ್ನೆಲೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 03, 04 ಮತ್ತು 05ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕನ್ನಡ, ಕನ್ನಡಿಗರಿಗಾಗಿ 2 ಕೋಟಿ ಈಡುಗಾಯಿ ಹೊಡೆಯಿರಿ: ವಾಟಾಳ್ ನಾಗರಾಜ್ ಕರೆ

    ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್

  • ಮಧ್ಯ ಅಮೆರಿಕದಲ್ಲಿ ಭೀಕರ ಚಂಡಮಾರುತಕ್ಕೆ 33 ಮಂದಿ ಬಲಿ

    ಮಧ್ಯ ಅಮೆರಿಕದಲ್ಲಿ ಭೀಕರ ಚಂಡಮಾರುತಕ್ಕೆ 33 ಮಂದಿ ಬಲಿ

    ವಾಷಿಂಗ್ಟನ್‌: ಅಮೆರಿಕದ ಮಧ್ಯ ಭಾಗದಲ್ಲಿ ಶನಿವಾರ ಚಂಡಮಾರುತ ಅಪ್ಪಳಿಸಿ ಕನಿಷ್ಠ 33 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.

    ಈ ವಾರಾಂತ್ಯದಲ್ಲಿ ತೀವ್ರತರ ಸುಂಟರಗಾಳಿಯಿಂದಾಗಿ ಮನೆಗಳ ಛಾವಣಿಗಳು ಹರಿದುಹೋಗಿವೆ. ದೊಡ್ಡ ಟ್ರಕ್‌ಗಳು ಉರುಳಿಬಿದ್ದಿವೆ. ಕಾನ್ಸಾಸ್‌ನಲ್ಲಿ 50 ಕ್ಕೂ ಹೆಚ್ಚು ವಾಹನಗಳು ಪರಸ್ಪರ ಸಂಪರ್ಕ ಕಡಿತಗೊಂಡು ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ತೀವ್ರ ಧೂಳಿನ ಬಿರುಗಾಳಿಯಿಂದಾಗಿ ಸುತ್ತಮುತ್ತ ಏನೂ ಕಾಣಿಸುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಮಿಸೌರಿ ರಾಜ್ಯ ಹೆದ್ದಾರಿ ಗಸ್ತು ತಂಡವು ಚಂಡಮಾರುತದಿಂದ 12 ಸಾವುನೋವುಗಳನ್ನು ದೃಢಪಡಿಸಿದೆ. ಹವಾಮಾನ ವೈಪರಿತ್ಯದಿಂದಾಗಿ ನಾಶವಾದ ಮರೀನಾದಲ್ಲಿ ಒಂದರ ಮೇಲೊಂದು ರಾಶಿ ಬಿದ್ದಿರುವ ದೋಣಿಗಳ ಚಿತ್ರಗಳನ್ನು ಹಂಚಿಕೊಂಡಿದೆ.

    ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿಬಿದ್ದಿವೆ. ಕಟ್ಟಡಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಪೊಲೀಸರು ವರದಿ ಮಾಡಿದ್ದಾರೆ. ಕೆಲವು ಪ್ರದೇಶಗಳು ಬಿರುಗಾಳಿ, ಗುಡುಗು ಸಹಿತ ಮಳೆ ಮತ್ತು ದೊಡ್ಡ ಆಲಿಕಲ್ಲು ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿವೆ.

    ಇದು ನಾನು ಅನುಭವಿಸಿದ ಅತ್ಯಂತ ಭಯಾನಕ ವಿಷಯವಾಗಿತ್ತು, ಅದು ತುಂಬಾ ವೇಗವಾಗಿತ್ತು, ನಮ್ಮ ಕಿವಿಗಳು ಸಿಡಿಯುವ ಹಂತದಲ್ಲಿದ್ದವು” ಎಂದು ಮಿಸೌರಿಯ ತನ್ನ ಮನೆಯಿಂದ ಸ್ಥಳಾಂತರಿಸಲ್ಪಟ್ಟ ಅಲಿಸಿಯಾ ವಿಲ್ಸನ್ ಟಿವಿ ಸ್ಟೇಷನ್ ಕೆಎಸ್‌ಡಿಕೆಗೆ ತಿಳಿಸಿದರು.

    ಮಿಸಿಸಿಪ್ಪಿಯ ದಕ್ಷಿಣದಲ್ಲಿ ಶನಿವಾರ ತಡರಾತ್ರಿ ಆರು ಸಾವುಗಳು ವರದಿಯಾಗಿವೆ. ಮೂವರು ಕಾಣೆಯಾಗಿದ್ದಾರೆ ಎಂದು ರಾಜ್ಯದ ಗವರ್ನರ್ ಮಾಹಿತಿ ನೀಡಿದ್ದಾರೆ. ಟೆಕ್ಸಾಸ್‌ನಲ್ಲಿ ಧೂಳಿನ ಬಿರುಗಾಳಿ ಮತ್ತು ಬೆಂಕಿಯಿಂದಾಗಿ ರಸ್ತೆಗಳಲ್ಲಿ ಗೋಚರತೆ ಕಡಿಮೆಯಾದ ಪರಿಣಾಮ ವಾಹನ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

  • ಫೆಂಗಲ್ ಚಂಡಮಾರುತಕ್ಕೆ ರೈತರು ಕಂಗಾಲು – ಜಡಿಮಳೆಗೆ ತೊಗರಿ, ಭತ್ತ ಹಾನಿ

    ಫೆಂಗಲ್ ಚಂಡಮಾರುತಕ್ಕೆ ರೈತರು ಕಂಗಾಲು – ಜಡಿಮಳೆಗೆ ತೊಗರಿ, ಭತ್ತ ಹಾನಿ

    ಕೊಪ್ಪಳ: ಫೆಂಗಲ್ ಚಂಡಮಾರುತದಿಂದ (Fengal Cyclone) ಜಿಲ್ಲೆಯಲ್ಲಿ ಕಳೆದೆರಡು ದಿನದಿಂದ ಮೋಡ ಕವಿದ ವಾತಾವರಣ ಮತ್ತು ಜಡಿಮಳೆ ಶುರುವಾಗಿದ್ದು, ರೈತರು ಕಂಗಾಲಾಗಿದ್ದಾರೆ.

    ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬಹುತೇಕ ರೈತರು ಭತ್ತ ಕಟಾವು ಮಾಡಿದ್ದಾರೆ. ಮಳೆಯಾಶ್ರಿತ ಪ್ರದೇಶದಲ್ಲಿ ತೊಗರಿ, ಮೆಕ್ಕೆಜೋಳ ಸೇರಿ ನಾನಾ ಬೆಳೆಗಳು ಹಾನಿಯಾಗಿವೆ. ಮತ್ತೊಂದೆಡೆ ನಗರ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ.ಇದನ್ನೂ ಓದಿ: ದರ್ಶನ್‌ ಸೂಚನೆ ಮೇರೆಗೆ ಕಿಡ್ನಾಪ್‌ – ಕೊಲೆಯಲ್ಲಿ ಪವಿತ್ರಾ ಪಾತ್ರವಿಲ್ಲ: ವಕೀಲರ ವಾದ

    ಕೊಪ್ಪಳ ಜಿಲ್ಲೆಯಲ್ಲಿ ಭತ್ತ ಮತ್ತು ತೊಗರಿ ಕಟಾವು ಮಾಡಿದ ರೈತರು ಫಸಲು ಒಣಗಿಸಲು ಪರದಾಡುತ್ತಿದ್ದಾರೆ. ಕಟಾವು ಮಾಡದ ರೈತರು ಇನ್ನೊಂದು ರೀತಿಯಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಕಟಾವು ಮಾಡದ ಭತ್ತ ಗಾಳಿ ಸಹಿತ ಜಡಿಮಳೆಗೆ ನೆಲಕ್ಕೆ ಉರುಳಿದ್ದು, ಕಟಾವು ಮಾಡುವ ಯಂತ್ರಕ್ಕೆ ಹೆಚ್ಚುವರಿ ಹಣ ನೀಡಬೇಕಿದೆ. ಇನ್ನು ತೊಗರಿ ಬೆಳೆ ಮಳೆಯಿಂದ ನಿಂತಲ್ಲೇ ಮೊಳಕೆಯೊಡೆದು, ಫಸಲು ಕಪ್ಪು ಬಣ್ಣಕ್ಕೆ ತಿರುಗುತ್ತಿದೆ.

    ಭತ್ತ ನೀರು ಪಾಲು:
    ತುಂಗಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರು ರಸ್ತೆಯಲ್ಲಿ ಭತ್ತ ಒಣಗಿಸುತ್ತಿದ್ದಾರೆ. ಮಳೆಯಿಂದ ರೈತರು ದೊಡ್ಡ ತಾಡಪಲ್ ಹಾಕಿ, ಭತ್ತ ಸುರಕ್ಷಿತವಾಗಿಡಲು ಹರಸಾಹಸ ಪಡುತ್ತಿದ್ದಾರೆ. ಆದಾಗ್ಯೂ ಭತ್ತ ಮಳೆಯಿಂದಾಗಿ ನೀರಿಗೆ ಕೊಚ್ಚಿ ಹೋಗಿದೆ. ಕೆಲಕಡೆ ಭತ್ತ ನೀರಿನಲ್ಲಿ ತೊಯ್ದಿದ್ದರಿಂದ ಮೊಳಕೆ ಒಡೆಯುವ ಸ್ಥಿತಿಯಲ್ಲಿದೆ.

    ಗಂಗಾವತಿ, ಕಾರಟಗಿ ಮತ್ತು ಕೊಪ್ಪಳ ತಾಲೂಕಿನ ಹಿಟ್ನಾಳ್ ಸೇರಿ ನಾನಾ ಕಡೆ ಇಂತಹ ಸ್ಥಿತಿ ಸಹಜವಾಗಿದೆ. ಜಿಲ್ಲೆಯಲ್ಲಿ ಸುಮಾರು 69 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರೈತರು ಭತ್ತ ಬೆಳೆದಿದ್ದು, ಬಹುತೇಕ ರೈತರಿಗೆ ಸಮಸ್ಯೆಯಾಗಿದೆ. ಈ ಬಾರಿ ನೀರಿನ ಸಮಸ್ಯೆ ಇಲ್ಲದ್ದರಿಂದ ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದರು. ಆದರೆ, ಸೈಕ್ಲೋನ್ ಮತ್ತೊಂದು ಚಿಂತೆಗೆ ದೂಡಿದೆ. ರಸ್ತೆ ಮೇಲಿನ ನೀರು ಭತ್ತದ ರಾಶಿಗೆ ಹೋಗಿದ್ದರಿಂದ ಸಾಕಷ್ಟ ಭತ್ತ ಕೊಚ್ಚಿಕೊಂಡು ಹೋಗಿದೆ.

    ಖುಷ್ಕಿ ಪ್ರದೇಶದಲ್ಲೂ ಹಾನಿ:
    ಮೋಡ ಕವಿದ ವಾತಾವರಣ ಮತ್ತು ಜಡಿಮಳೆಯಿಂದ ಮಳೆಯಾಶ್ರಿತ ಪ್ರದೇಶದಲ್ಲೂ ಭಾರಿ ಪ್ರಮಾಣದಲ್ಲಿ ತೊಗರಿ ಬೆಳೆ ನಾಶವಾಗಿದೆ. ಒಟ್ಟಿನಲ್ಲಿ ಫೆಂಗಲ್ ಚಂಡಮಾರುತ ಕೊಪ್ಪಳ ಜಿಲ್ಲೆಯ ರೈತರಿಗೆ ದೊಡ್ಡ ಮಟ್ಟದ ಶಾಕ್ ನೀಡುತ್ತಿದೆ. ಇನ್ನೂ ಮಳೆ ಇದೇ ರೀತಿ ಮುಂದುವರಿದರೆ ರೈತರು ಇನ್ನಷ್ಟು ಸಂಕಷ್ಟಕ್ಕೆ ಒಳಗಾಗಲಿದ್ದು, ಸರ್ಕಾರ ರೈತರ ನೆರವಿಗೆ ಬರಬೇಕಿದೆ.ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆಗೆ ಒಕ್ಕೊರಲ ಒತ್ತಾಯ – ಬಿಜೆಪಿ ಸರಣಿ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

  • Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

    – 500ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
    – ವಿಮಾನ, ರೈಲು ಸಂಚಾರದಲ್ಲಿ ವಿಳಂಬ

    ಚೆನ್ನೈ: ತಮಿಳುನಾಡಿಗೆ (Tamil Nadu) ಅಪ್ಪಳಿಸಿರುವ ಫೆಂಗಲ್‌ ಚಂಡಮಾರುತ ಹಲವು ಅವಾಂತರಗಳನ್ನ ತಂದೊಡ್ಡಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆ ಉಂಟಾಗಿದೆ, ಇದರಿಂದ ಹಲವು ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದೆ. ಅಲ್ಲದೇ ವಿಮಾನ, ರೈಲು, ಬಸ್‌ ಸೇರಿದಂತೆ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡಿದೆ. ಚೆನ್ನೈ ಏರ್‌ಪೋರ್ಟ್‌ನಲ್ಲಿ (Chennai Airport) ವಿಮಾನವೊಂದು ಲ್ಯಾಂಡಿಂಗ್‌ಗಾಗಿ ಪರದಾಡಿದ ಪ್ರಸಂಗವೂ ಕಂಡುಬಂದಿದೆ.

    ಚೆನ್ನೈನಲ್ಲಿ ಸಂಭವಿಸಿದ ಮಳೆಯಿಂದಾಗಿ ವಿವಿಧೆಡೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮೂವರಲ್ಲಿ ಓರ್ವ ವಲಸೆ ಕಾರ್ಮಿಕ ಮತ್ತೊಬ್ಬರು ಎಟಿಎಂನಿಂದ (ATM) ಹಣ ಡ್ರಾ ಮಾಡಲು ಹೋದಾಗ, ಮತ್ತೊಬ್ಬರು ಹೆಣವಾಗಿ ತೇಲುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

    ಎಲ್ಲೆಲ್ಲಿ ಎಷ್ಟು ಮಳೆ?
    ಕೇಂದ್ರಾಡಳಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 8.30ರಿಂದ ಸಂಜೆ 6ರ ವರೆಗೆ ಸುಮಾರು 10 ಸೆಂ.ಮೀ ಮಳೆ ದಾಖಲಾಗಿದೆ. ಇನ್ನೂ ಪ್ರದೇಶವಾರು ನೋಡುವುದಾದರೆ ವಿಲ್ಲುಪುರಂ – ಮೈಲಾಮ್‌ನಲ್ಲಿ 498 ಎಂ.ಎಂ, ಪಾಂಡೀಚೇರಿ – 469 ಎಂಎಂ, ಕೂಡ್ಲೂರೆ – 179 ಎಂಎಂ, ತಿರುವಣ್ಣಾಮಲೈ – ತಿರುವಣ್ಣಾಮಲೈ ಇಸ್ರೋ – 176 ಎಂಎಂ, ತಿರುವಣ್ಣಾಮಲೈ – ಚೆಯ್ಯರ್ – 160 ಎಂಎಂ, ತಿರುವಳ್ಳುವರ್ – ಆರ್‌ಕೆ ಪೇಟೆ – 124 ಎಂಎಂ, ತಿರುವಳ್ಳುವರ್ – ಕೊಲ್ಲಪಕ್ಕಂ – 120 ಎಂಎಂ ಮಳೆಯಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

    100ಕ್ಕೂ ಅಧಿಕ ಜನರ ರಕ್ಷಣೆ:
    ಮಳೆಯ ಅವಾಂತರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೇರಿಯ ಕೃಷ್ಣನಗರದ ಕೆಲವು ಪ್ರದೇಶಗಳಲ್ಲಿ 5 ಅಡಿಗಳಷ್ಟು ಎತ್ತರಕ್ಕೆ ನೀರು ಹರಿಯುತ್ತಿದ್ದು, ಸುಮಾರು 500 ಮನೆಗಳು ಜಲಾವೃತವಾಗಿವೆ. ಇದರಿಂದ ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಭಾರತೀಯ ಸೇನೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ ಭಾರತೀಯ ಸೇನೆ 100ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದೆ ಎಂದು ವರದಿ ಹೇಳಿದೆ.

    ಸಿಎಂ, ಡಿಸಿಎಂ ಮೇಲ್ವಿಚಾರಣೆ:
    ಇನ್ನೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಅನುಷ್ಠಾನಗೊಳಿಸುತ್ತಿರುವ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ‌, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರವಾಹ ಪರಿಸ್ಥಿತಿಯ ನಗ್ಗೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳ ಉನ್ನತಮಟ್ಟದ ಸಭೆ ಕರೆಯಲಾಗಿದೆ. ಇದನ್ನೂ ಓದಿ: ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

  • ಚೆನ್ನೈ ಚಂಡಮಾರುತ ಎಫೆಕ್ಟ್ – ಕೋಲಾರದಲ್ಲಿ ಜಡಿಮಳೆ

    ಚೆನ್ನೈ ಚಂಡಮಾರುತ ಎಫೆಕ್ಟ್ – ಕೋಲಾರದಲ್ಲಿ ಜಡಿಮಳೆ

    ಕೋಲಾರ: ತಮಿಳುನಾಡಿನ (Tamil Nadu) ಚೆನ್ನೈನಲ್ಲಿ ಚಂಡಮಾರುತ (Chennai Cyclone) ಎದ್ದಿರುವ ಪರಿಣಾಮ ಕೋಲಾರ ಜಿಲ್ಲೆಯಲ್ಲಿ ಜಡಿಮಳೆಯಾಗುತ್ತಿದೆ.

    ಚೆನ್ನೈನಲ್ಲಿ ಚಂಡಮಾರುತದ ಅಬ್ಬರ ಜೋರಾದ ಹಿನ್ನೆಲೆ ಗುರುವಾರ ಮುಂಜಾನೆಯಿಂದ ಕೋಲಾರ (Kolar) ಜಿಲ್ಲೆಯ ಹಲವೆಡೆ ಜಡಿ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಹಾಗೂ ಮಳೆಯ (Rain) ಸಿಂಚನವಾಗುತ್ತಿದೆ. ಆದರೆ ಇಂದು ಮುಂಜಾನೆಯಿಂದ ಜಿಲ್ಲೆಯಲ್ಲಿ ಜೋರು ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ನಾಗ್ಪುರ-ಕೋಲ್ಕತ್ತಾ ಇಂಡಿಗೋ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ – ಓರ್ವನ ಬಂಧನ

    ಇನ್ನೂ ನೀರು ಹರಿದು ಬರುವಂತಹ ಜೋರು ಮಳೆಯಾಗಿಲ್ಲವಾದರೂ ತೇವಾಂಶ ಹೆಚ್ಚಾಗಿ ತೋಟಗಾರಿಕೆ ಬೆಳೆಗಳು ಸೇರಿದಂತೆ ರಾಗಿ ಭತ್ತ ಕೊಯ್ಲಿಗೆ ಇದು ಕಂಟಕವಾಗಲಿದೆ. ಕೋಲಾರ ಜಿಲ್ಲೆಯಾದ್ಯಂತ ಮಳೆಯ ಸಿಂಚನ ಮೂಡಿರುವುದು ಸದ್ಯ ಮೇವಿನ ಬವಣೆ ನೀಗಿದೆ. ಇನ್ನೂ ಎರಡು ದಿನ ಮಳೆ ಬರುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ಕಬ್ಬು ಬೆಲೆ ನಿಗದಿಗಾಗಿ ಹೋರಾಟ- ಸಿಎಂಗೆ ಘೇರಾವ್ ಹಾಕಲು ನಿರ್ಧರಿಸಿದ ಮುಧೋಳ ರೈತರು

  • ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಒಡಿಶಾ ತೀರಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ – ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

    ಭುವನೇಶ್ವರ/ಕೋಲ್ಕತ್ತಾ: ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಡಾನಾ ಚಂಡಮಾರುತ (Cyclone Dana) ನಿರೀಕ್ಷೆಯಂತೆ ಮಧ್ಯರಾತ್ರಿ ಒಡಿಶಾ ಕರಾವಳಿಗೆ (Odisha Coast) ಅಪ್ಪಳಿಸಿದೆ. ಕೇಂದ್ರಪಾರ ಜಿಲ್ಲೆಯ ಭಿತರ್ಕಾನಿಕಾ ಮತ್ತು ಭದ್ರಕ್‌ನ ಧಮ್ರಾ ನಡುವೆ ಅಪ್ಪಳಿಸಿ ಜೋರು ಮಳೆಯಾಗುತ್ತಿದೆ.

    ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು ಒಡಿಶಾ, ಬಂಗಾಳದ ತೀರ ಪ್ರದೇಶಗಳಲ್ಲಿ (West Bengal) ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದೆ. ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಉತ್ತರ ವಾಯುವ್ಯ ದಿಕ್ಕಿನತ್ತ ಚಲಿಸುತ್ತಿದೆ.

    ನೆರೆಯ ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಮತ್ತು ಕೋಲ್ಕತ್ತಾದಲ್ಲಿ ಚಂಡಮಾರುತದ ಪ್ರಭಾವದಿಂದ ಭಾರೀ ಮಳೆ (Rain) ಸುರಿಯುತ್ತಿದೆ. ಇದನ್ನೂ ಓದಿ: ಮುಡಾ ಕೇಸ್; ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿಎಂ ಮೊರೆ

    ಒಡಿಶಾದ ಕರಾವಳಿ ಜಿಲ್ಲೆಗಳಾದ ಭದ್ರಕ್, ಕೇಂದ್ರಪಾರ, ಬಾಲಸೋರ್ ಮತ್ತು ಸಮೀಪದ ಜಗತ್‌ಸಿಂಗ್‌ಪುರದಲ್ಲಿ ಗಂಟೆಗೆ 100 ರಿಂದ 120 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ.


    ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆಯಿಂದ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 9 ಗಂಟೆಯಿಂದ ಆರಂಭಗೊಳ್ಳಲಿದೆ. ವಿಮಾನ ನಿಲ್ದಾಣವನ್ನು ಬಂದ್‌ ಮಾಡಿದ ಪರಿಣಾಮ ಸುಮಾರು 40 ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಮೇಲೆ ಪರಿಣಾಮ ಬೀರಿದೆ.

    ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಸಂಚರಿಸುವ 400ಕ್ಕೂ ಹೆಚ್ಚು ರೈಲುಗಳ ಸೇವೆಯನ್ನು ರದ್ದುಗೊಳಿಸಲಾಗಿದೆ. ಒಡಿಶಾದಲ್ಲಿ ಸುಮಾರು 6 ಲಕ್ಷ ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

     

  • ಅಮೆರಿಕದಲ್ಲಿ ಹೆಲೆನ್ ಚಂಡಮಾರುತದ ಆರ್ಭಟ – 33 ಮಂದಿ ಸಾವು

    ಅಮೆರಿಕದಲ್ಲಿ ಹೆಲೆನ್ ಚಂಡಮಾರುತದ ಆರ್ಭಟ – 33 ಮಂದಿ ಸಾವು

    ವಾಷಿಂಗ್ಟನ್: ಅಮೆರಿಕದಲ್ಲಿ (America) ಹೆಲೆನ್ ಚಂಡಮಾರುತದಿಂದ (Hurricane) ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಚಂಡಮಾರುತದಿಂದ ಫ್ಲೋರಿಡಾ (Florida) ರಾಜ್ಯದ ರಾಜಧಾನಿ ತಲ್ಲಾಹಸ್ಸೀ ಬಳಿ ಭೂಕುಸಿತ ಉಂಟಾಗಿದೆ. ಇದರಿಂದಾಗಿ ರಸ್ತೆಗಳು, ಮನೆಗಳು ಮತ್ತು ವಾಣಿಜ್ಯ ಕಟ್ಟಡಗಳು ನೆಲಸಮವಾಗಿವೆ. ಅಲ್ಲದೇ ಧಾರಾಕಾರ ಮಳೆಯಿಂದ ಹಲವಾರು ಪ್ರದೇಶಗಳು ಪ್ರವಾಹದಿಂದ (Flood) ತತ್ತರಿಸಿವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವಮಟ್ಟದಲ್ಲಿ ಮುಜುಗರ – ಮುಳುಗಿತು Made In China ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆ

    ದಕ್ಷಿಣ ಕೆರೊಲಿನಾದಲ್ಲಿ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜಾರ್ಜಿಯಾ ಗವರ್ನರ್ ಬ್ರಿಯಾನ್ ಕೆಂಪ್ ತನ್ನ ರಾಜ್ಯದಲ್ಲಿ ರಕ್ಷಣಾ ಸಿಬ್ಬಂದಿಯೂ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ವಾಲ್ಡೋಸ್ಟಾ ನಗರವು 115ಕ್ಕೂ ಹೆಚ್ಚು ಕಟ್ಟಡಗಳು ಹಾನಿಗೊಳಗಾಗಿದ್ದು, ಅನೇಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಅಧ್ಯಕ್ಷ ಜೋ ಬೈಡನ್ ಮತ್ತು ಅಧಿಕಾರಿಗಳು ಹೆಲೆನ್ ಚಂಡಮಾರುತದಿಂದ ಹಾನಿಗೊಳಗಾಗುವ ಪ್ರದೇಶಗಳ ಬಗ್ಗೆ ಮೊದಲೇ ಸೂಚನೆ ನೀಡಿದ್ದರು. ಜನ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದರು. ಆದರೂ ಜನ ಮನೆಗಳಲ್ಲೇ ಉಳಿದಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಪ್ರಯಾಣಿಕರಿದ್ದ ವಿಮಾನ ಟೇಕಾಫ್ ಆಗ್ತಿದ್ದಂತೆಯೇ ಸೆಕ್ಸ್ ಶುರು ಹಚ್ಕೊಂಡ ಜೋಡಿಗೆ ಕೋರ್ಟ್ ಶಿಕ್ಷೆ