Tag: ಚಂಡೀಗಡ

  • ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಆ ಹುಡುಗಿಯ ಖಾಸಗಿ ವಿಡಿಯೋ ಹಂಚಬೇಡಿ ಎಂದು ಕೇಳಿಕೊಂಡ ನಟ ಸೋನು ಸೋದ್

    ಚಂಡೀಗಡ (Chandigarh) ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ ಎನ್ನಲಾದ ತಲೆತಗ್ಗಿಸುವ ಕೆಲಸ, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ವಿಶ್ವ ವಿದ್ಯಾಲಯದ ಆವರಣದಲ್ಲಿ ಈ ಘಟನೆಯ ಕುರಿತು ಪ್ರತಿಭಟಿಸಲಾಗುತ್ತಿದ್ದು, ತಪ್ಪತಸ್ಥರನ್ನು ಕೂಡಲೇ ಬಂಧಿಸಿ, ಉಗ್ರ ಶಿಕ್ಷೆ ನೀಡುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ. ಅಲ್ಲದೇ ಇನ್ನೂ 60 ಹುಡುಗಿಯರು ಈ ಸಂಕಷ್ಟಕ್ಕೆ ಸಿಲುಕೊಳ್ಳಲಿದ್ದಾರೆ ಎನ್ನುವುದು ಮತ್ತಷ್ಟು ಆತಂಕ್ಕೆ ಕಾರಣವಾಗಿದೆ.

    ಚಂಡೀಗಡ ವಿವಿಯ (University)  ಹಾಸ್ಟೇಲ್ ನಲ್ಲಿ ಹುಡುಗಿಯೊಬ್ಬಳು, ಬಾತ್ ರೂಮ್ ಗೆ ಹೋಗುವ ಹುಡುಗಿಯರ ಖಾಸಗಿ ವಿಡಿಯೋಗಳನ್ನು (Private Video) ಚಿತ್ರಿಸಿ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ಅಲ್ಲದೇ, 60ಕ್ಕೂ ಹೆಚ್ಚು ಇಂತಹ ವಿಡಿಯೋಗಳು ಇನ್ನೂ ಇವೆ ಎಂದು ಹೇಳಿದ್ದಾಳೆ ಎನ್ನಲಾಗುತ್ತಿದೆ. ಹಾಗಾಗಿ, ಯಾರದೆಲ್ಲ ವಿಡಿಯೋ ಆಚೆ ಬಂದು, ಇನ್ನೇನು ಆವಾಂತರ ಸೃಷ್ಟಿ ಆಗತ್ತೋ ಅನ್ನುವ ಆತಂಕ ವಿವಿ ಆವರಣದಲ್ಲಿರುವ ಹುಡುಗಿಯರದ್ದು. ಇದನ್ನೂ ಓದಿ:ಟಿವಿ ಬಿಗ್ ಬಾಸ್‌ಗೆ ಈ ಕಿರುತೆರೆ ನಟಿ ಬರೋದು ಪಕ್ಕಾ

    ಈ ವಿಷಯ ತಿಳಿಯುತ್ತಿದ್ದಂತೆಯೇ ನಟ ಸೋನು ಸೋದ್ (Sonu Sodh), ನೊಂದವರ ಬೆನ್ನಿಗೆ ನಿಂತಿದ್ದಾರೆ. ಅಲ್ಲದೇ, ಇಂತಹ ಯಾವುದೇ ವಿಡಿಯೋಗಳನ್ನು ನೋಡಬೇಡಿ ಮತ್ತು ಇತರರಿಗೆ ಕಳುಹಿಸಬೇಡಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ, ಈ ಕೃತ್ಯವನ್ನು ಖಂಡಿಸಿದ್ದಾರೆ. ಹೀನ ಮನಸ್ಥಿತಿಯವರನ್ನು ಸುಮ್ಮನೆ ಬಿಡಬೇಡಿ ಎಂದು ಮನವಿ ಮಾಡಿರುವ ಅವರು, ಹೆಣ್ಣು ಮಕ್ಕಳಿಗೆ ಗೌರವವನ್ನು ಕೊಡಿ ಎಂದು ವಿಶೇಷವಾಗಿ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಿರಿಯ ಸಚಿವರಾಗಿ ಭಗವಂತ್ ಸಂಪುಟ ಸೇರಿದ ವಕೀಲ

    ಕಿರಿಯ ಸಚಿವರಾಗಿ ಭಗವಂತ್ ಸಂಪುಟ ಸೇರಿದ ವಕೀಲ

    ಚಂಡೀಗಢ: ಪಂಜಾಬ್‍ನಲ್ಲಿ ನೂತನವಾಗಿ ರಚನೆಯಾಗಿರುವ ಆಮ್ ಆದ್ಮಿ ಪಕ್ಷದ ಸರ್ಕಾರದಲ್ಲಿ ಇಬ್ಬರು ವಕೀಲರು ಸ್ಥಾನಗಳಿಸಿದ್ದಾರೆ.

    ಸಿಎಂ ಭಗವಂತ್ ಮಾನ್ ಅವರ ಸಚಿವ ಸಂಪುಟಕ್ಕೆ ಹರ್‍ಪಲ್ ಸಿಂಗ್ ಚೀಮಾ ಹಾಗೂ ಹರ್‍ಜೋತ್ ಸಿಂಗ್ ಬೇನ್ಸ್ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ:  ಉಪ್ಪಿ ಕಂಠಸಿರಿಯಲ್ಲಿ ‘ಹುಷಾರ್’ ಹಾಡು

     

    ಈ ಇಬ್ಬರೂ ಪಂಜಾಬ್ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದವರಾಗಿದ್ದಾರೆ. 31 ವರ್ಷದ ಹರ್‍ಜೋತ್ ಅವರು ಮಾನ್ ಸಂಪುಟದ ಅತಿ ಕಿರಿಯ ವಯಸ್ಸಿನ ಸಚಿವರು ಮಾತ್ರವಲ್ಲ ಇಡೀ ದೇಶದಲ್ಲೇ ಅತಿ ಚಿಕ್ಕ ವಯಸ್ಸಿನ ಸಚಿವರಾಗಿದ್ದಾರೆ. ಹರ್‍ಪಲ್ ಅವರು ಎರಡನೇ ಬಾರಿಗೆ ವಿಧಾನಸಭೆ ಪ್ರವೇಶಿಸುತ್ತಿದ್ದಾರೆ.

    ಹರ್‍ಪಲ್ ಸಿಂಗ್ ಚೀಮಾ 2017ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು. ಜೊತೆಗೆ 2017-19ರ ಅವಧಿಯಲ್ಲಿ ಪಂಜಾಬ್‍ನ ಪ.ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮಿತಿಯಲ್ಲಿ ಸೇವೆ ಸಲ್ಲಿಸಿದ್ದರು. ಹರ್‍ಜೋತ್ ಸಿಂಗ್ ಬೇನ್ಸ್ ಪಂಜಾಬ್ ಆಮ್‍ಆದ್ಮಿ ಘಟಕದ ಮುಖ್ಯ ವಕ್ತಾರರಾಗಿದ್ದರು. 2017ರಲ್ಲಿ ಸಹ್ನೆವಾಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಇದನ್ನೂ ಓದಿ: ‘ದಿ ಕಾಶ್ಮೀರ್‌ ಫೈಲ್ಸ್’ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸಹಾಯ ಮಾಡುವುದಿಲ್ಲ: ಸಂಜಯ್ ರಾವತ್

    ಸದ್ಯ ಇಬ್ಬರೂ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರ ಸಚಿವ ಸಂಪುಟ ಸೇರಿದ್ದಾರೆ. ಸಂಪುಟದಲ್ಲಿ ಸ್ಥಾನ ನೀಡಿದ್ದಕ್ಕೆ ಚೀಮಾ ಮತ್ತು ಬೇನ್ಸ್ ಸಿಎಂ ಗೆ ಅಭಿನಂದನೆ ಸಲ್ಲಿಸಿದ್ದಾರೆ.

  • ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

    ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

    ಚಂಡೀಗಡ: ಪಂಜಾಬ್‍ನ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ `ಭ್ರಷ್ಟಾಚಾರ ಮುಕ್ತ’ ಸಹಾಯವಾಣಿ ಪ್ರಾರಂಭಿಸುತ್ತಿದ್ದು, ಮಾರ್ಚ್ 23ರಂದು ಅನಾವರಣಗೊಳ್ಳಲಿದೆ.

    ಸ್ವಾತಂತ್ರ್ಯ ಹೋರಾಟಗಾರ ಭಗತ್‍ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 23ರಂದು ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದೂ ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್

    `ಸಹಾಯವಾಣಿ ಸಂಖ್ಯೆಯು ನನ್ನ ವೈಯಕ್ತಿಕ ಸಂಪರ್ಕ ಸಂಖ್ಯೆಯಾಗಿದ್ದು, ಯಾರೇ ಲಂಚ ಕೇಳಿದರೂ ಅದರ ಆಡಿಯೋ, ವಿಡಿಯೋ ಅನ್ನು ಈ ಸಂಖ್ಯೆಗೆ ಕಳುಹಿಸಿ’ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಯಾವುದೇ ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಡಬೇಕು ಎನ್ನುವುದು ನನ್ನ ಉದ್ದೇಶವಲ್ಲ. ಶೇ.99 ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ. ಆದರೆ, ಶೇ.1 ರಷ್ಟು ನೌಕರರು ಭ್ರಷ್ಟರಾಗಿದ್ದಾರೆ. ಎಎಪ್ ನಿಂದ ಮಾತ್ರ ಈ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ ಆದ್ದರಿಂದ ಈ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹ್ಯಾಪಿ ಬರ್ತ್ ಡೇ ಅಪ್ಪು : ದಕ್ಷಿಣದ ಸಿನಿತಾರೆಯರ ಭಾವುಕ ಸಂದೇಶ 

  • ಪಂಜಾಬ್ ಸಿಎಂ ಸಂಬಂಧಿಯಿಂದ 10 ಕೋಟಿ ರೂ. ನಗದು ವಶ

    ಪಂಜಾಬ್ ಸಿಎಂ ಸಂಬಂಧಿಯಿಂದ 10 ಕೋಟಿ ರೂ. ನಗದು ವಶ

    ಚಂಡೀಗಡ: ಜಾರಿ ನಿರ್ದೇಶನಾಲಯವು(ಇಡಿ) ಪಂಜಾಬ್‍ನಲ್ಲಿ ಅಕ್ರಮ ಮರಳುಗಾರಿಕೆ ವಿರುದ್ಧ ನಡೆಸಿದ ದಾಳಿಯಲ್ಲಿ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸಂಬಂಧಿಯೊಬ್ಬರಿಂದ 10 ಕೋಟಿ ರೂ. ನಗದು ವಶಪಡಿಸಿಕೊಂಡಿದೆ.

    ನೀವೇಶನದಿಂದ 8 ಕೋಟಿ ಸೇರಿದಂತೆ ಸುಮಾರು 10 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ರಾಜ್ಯದ 12 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, ತನಿಖೆಯು ಇಂದು ಮುಂಜಾನೆ ಪೂರ್ಣಗೊಂಡಿದೆ. ಸಂಸ್ಥೆಯ ಹಲವಾರು ದಾಖಲೆಗಳು ಮತ್ತು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿವೆ. ಇದನ್ನೂ ಓದಿ: ಬೆಳಗ್ಗೆ 3-4 ಗಂಟೆಯವರೆಗೆ ನನ್ನ ಮಕ್ಕಳ ಹೋಮ್ ವರ್ಕ್ ಮಾಡಿಸುತ್ತಿದ್ದೆ: ಪ್ರಿಯಾಂಕಾ ಗಾಂಧಿ

    ಕಾರ್ಯಾಚರಣೆ ವೇಳೆ ಸರಿ ಸುಮಾರು 10 ಕೋಟಿ ರೂಪಾಯಿಯನ್ನು ವಶಪಡಿಸಿಕೊಳ್ಳಲಾಗಿದೆ. ಚರಣ್‍ಜಿತ್ ಸಿಂಗ್ ಅವರ ಸೋದರಳಿಯನಾದ ಭೂಪಿಂದರ್ ಸಿಂಗ್ ಅಲಿಯಾಸ್ ಹನಿಗೆ ಸಂಬಂಧಿಸಿದ ಮನೆಯಲ್ಲಿ 8 ಕೋಟಿ ರೂ. ನಗದು ಪತ್ತೆಯಾಗಿದೆ. ಇದನ್ನೂ ಓದಿ: ಅಕ್ರಮವಾಗಿ ಒತ್ತುವರಿಯಾಗಿದ್ದ ಜಾಗ ಶಾಲೆಗೆ ವಾಪಸ್ – ತಹಶೀಲ್ದಾರ್‌ಗೆ ಗ್ರಾಮಸ್ಥರಿಂದ ಅಭಿನಂದನೆ

    ಸಂದೀಪ್ ಕುಮಾರ್ ಎಂಬ ಮತ್ತೋರ್ವ ವ್ಯಕ್ತಿಗೆ ಸಂಬಂಧಿಸಿದ ನಿವೇಶನವು ಕೂಡಾ ದಾಳಿಗೊಳಗಾಗಿದ್ದು, 8 ಕೋಟಿ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 12 ಪ್ರದೇಶಗಳ ಮೇಲೆ ಇಡಿ ಅಧಿಕಾರಿಗಳು ದಾಳಿಮಾಡಿದ್ದಾರೆ.

    ದಾಳಿಯ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಚನ್ನಿ ಅವರು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಂಬಂಧಿಕರ ಮೇಲೆ ಬಂಗಾಳದ ವಿಧಾನಸಭಾ ಚುನಾವಣೆ ವೇಳೆ ಈ ದಾಳಿ ನಡೆಸಲಾಗಿತ್ತು. ಅದೇ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿಯೂ ದಾಳಿ ನಡೆಸಿದ್ದಾರೆ. ಇದು ರಾಜಕೀಯ ಕುತಂತ್ರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  • ಸೊಸೆ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ

    ಸೊಸೆ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ

    ಚಂಡೀಗಡ: ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಸೊಸೆಯ ಆರೋಪದ ಅವಮಾನ ತಾಳಲಾರದೆ ಬೆಂಕಿ ಹಚ್ಚಿಕೊಂಡು ಮಾವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಂಜಾಬ್‍ನ ಲುಧಿಯಾನದಲ್ಲಿ ನಡೆದಿದೆ.

    60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡಿದ್ದರು. ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡ್ರಗ್ಸ್ ಪ್ರಕರಣ – ಕೊನೆಗೂ ಮೌನ ಮುರಿದ ನಟಿ ರಾಗಿಣಿ

    ಒಂದೂವರೆ ವರ್ಷದ ಹಿಂದೆ ಅವರ ಮಗನಿಗೆ ಮದುವೆಯಾಗಿತ್ತು. 6 ತಿಂಗಳ ಮಗಳು ಕೂಡ ಇದ್ದಾಳೆ. ಮದುವೆಯಾದ ಕೂಡಲೇ ಅತ್ತೆ-ಮಾವನ ಮೇಲೆ ದೌರ್ಜನ್ಯ ನಡೆಸಲು ಶುರು ಮಾಡಿದ್ದ ಸೊಸೆ ತನ್ನ ಗಂಡನೊಂದಿಗೆ ಬೇರೆ ಮನೆಯಲ್ಲಿ ವಾಸವಾಗಿದ್ದಳು. ಇದೇ ವಿಷಯಕ್ಕೆ ಅತ್ತೆ-ಮಾವ ಹಾಗೂ ಸೊಸೆಯ ನಡುವೆ ಜಗಳವಾಗುತ್ತಿತ್ತು. ಇತ್ತೀಚೆಗೆ ಆಕೆಯ ಪೋಷಕರು ಆಕೆಯ ಅತ್ತೆ-ಮಾವನ ಮೇಲೆ ಹಲ್ಲೆಯನ್ನೂ ಮಾಡಿದ್ದರು. ಇದನ್ನೂ ಓದಿ: ದೇಶ ಬಿಟ್ಟು ತೆರಳಬೇಡಿ- ತಾಲಿಬಾನ್ ಬೆದರಿಕೆ

    60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ ಮನೆಯವರು ಬೆದರಿಕೆಯೊಡ್ಡಿದ್ದರು. ಹಾಗೇ ಹೊಡೆದು ದೈಹಿಕ ಹಿಂಸೆಯನ್ನೂ ಮಾಡಿದ್ದರು. ಅಲ್ಲದೆ ಇಡೀ ಕುಟುಂಬದ ವಿರುದ್ಧ ವರದಕ್ಷಿಣೆ ಕೇಸ್ ದಾಖಲಿಸುವುದಾಗಿ ಹೆದರಿಸಿದ್ದರು. ಇದರಿಂದ ಆತಂಕಗೊಂಡಿದ್ದ ಅವರು ಈ ಸುಳ್ಳು ಕೇಸ್‍ನಿಂದ ತಮ್ಮ ಮರ್ಯಾದೆ ಹೋಗುತ್ತದೆ ಎಂಬ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತನ ಹೆಂಡತಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯನ್ನ ಮೆಚ್ಚಿಸಲು ಕಾಂಗ್ರೆಸ್ ನಾಯಕರನ್ನು ಸಿ.ಟಿ ರವಿ, ಯತ್ನಾಳ್ ಬೈಯುತ್ತಿದ್ದಾರೆ: ಶ್ರೀನಿವಾಸ್ ಬಿ.ವಿ.

    ಸೊಸೆಯ ಮನೆಯವರು ಬ್ಲಾಕ್‍ಮೇಲ್ ಮಾಡಿದ್ದರಿಂದ ನೊಂದಿದ್ದ ವ್ಯಕ್ತಿ ಮನೆಗೆ ಬಂದು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಹೆಂಡತಿ ತಕ್ಷಣ ಪಕ್ಕದ ಮನೆಯವರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸುಟ್ಟ ಗಾಯಗಳಿಂದ ಅವರು ಸಾವನ್ನಪ್ಪಿದ್ದರು.

  • ಮೊಟ್ಟೆ ಕದ್ದ ಪೊಲೀಸ್- ವೀಡಿಯೋ ವೈರಲ್

    ಮೊಟ್ಟೆ ಕದ್ದ ಪೊಲೀಸ್- ವೀಡಿಯೋ ವೈರಲ್

    ಚಂಡೀಗಡ : ಕಳ್ಳರನ್ನು ಹಿಡಿಯುವ ಪೊಲೀಸ್ ಕಳ್ಳತನ ಮಾಡಿ ಆರಕ್ಷಕರ ಕುರಿತು ಇರುವ ಈ ನಂಬಿಕೆಯನ್ನೇ ಸುಳ್ಳಾಗಿಸುವ ಪ್ರಸಂಗವೊಂದು ಪಂಜಾಬ್ ಪೊಲೀಸ್ ಕಾನ್ಸ್‌ಸ್ಟೇಬಲ್ ಮಾಡಿದ್ದಾರೆ.

    ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸೈಕಲಿನಲ್ಲಿದ್ದ ಕೋಳಿಯ ಮೊಟ್ಟೆಗಳನ್ನು ಹೆಡ್ ಪಿಸಿ ಕಳ್ಳತನ ಮಾಡಿದ್ದಾರೆ. ಜನರ ರಕ್ಷಣೆ ಮಾಡಬೇಕಾದ ಪೊಲೀಸರೇ ಹೀಗೇ ಕಳ್ಳತನ ಮಾಡಿರುವ ವೀಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಹೀಗೆ ಮೊಟ್ಟೆ ಕಳ್ಳತನ ಮಾಡಿರುವ ಪೊಲೀಸಪ್ಪನ ಹೆಸರು ಪ್ರೀತ್ಪಾಲ್ ಸಿಂಗ್. ಈತ ರಸ್ತೆಯ ಪಕ್ಕದಲ್ಲಿ ನಿಲ್ಲಿಸಿದ್ದ ಸೈಕಲ್ ವೊಂದರಲ್ಲಿಡಲಾಗಿದ್ದ ಮೊಟ್ಟೆಗಳನ್ನು ಎಗರಿಸಿ, ತನ್ನ ಪ್ಯಾಂಟ್ ಜೇಬಿನಲ್ಲಿ ಇಳಿಸಿದ್ದಾನೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಸಮವಸ್ತ್ರದಲ್ಲಿದ್ದುಕೊಂಡೆ ಕಳ್ಳತನ ಮಾಡಿದ ಪೊಲೀಸನ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ.

    ಪ್ರೀತ್ಪಾಲ್ ಸಿಂಗ್ ಮೊಟ್ಟೆ ಕಳ್ಳತನದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದು, ಇದು ಪಂಜಾಬ್ ಪೊಲೀಸ್ ಇಲಾಖೆಯ ಗಮನಕ್ಕೂ ಬಂದಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪಿಸಿ ಪ್ರೀತ್ಪಾಲ್ ಸಿಂಗ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

  • ಗಂಡು ಮಗು ಜನಿಸದ್ದಕ್ಕೆ ಮುದ್ದಾದ 4 ಹೆಣ್ಣು ಮಕ್ಕಳನ್ನು ಕೊಂದ ತಾಯಿ

    ಗಂಡು ಮಗು ಜನಿಸದ್ದಕ್ಕೆ ಮುದ್ದಾದ 4 ಹೆಣ್ಣು ಮಕ್ಕಳನ್ನು ಕೊಂದ ತಾಯಿ

    ಚಂಡೀಗಡ: ಗಂಡು ಮಗು ಜನಿಸದ್ದಕ್ಕೆ ತಾಯಿಯೊಬ್ಬಳು ತನ್ನ ಮುದ್ದಾದ ನಾಲ್ಕು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

    ಹರಿಯಾಣದ ನುಹ್ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ನಾಲ್ವರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿಯನ್ನು ಬಂಧಿಸಲಾಗಿದೆ. 2020ರಲ್ಲಿ ನಡೆದ ಘಟನೆಯ ಆರೋಪಿಯನ್ನು ಈಗ ಸೆರೆ ಹಿಡಿಯಲಾಗಿದೆ. ಪತಿ ಖುರ್ಷಿದ್ ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರಕ್ಕೆಂದು ಹೋದಾಗ ಫರ್ಮೀನಾ ಈ ನಿರ್ಧಾರ ಕೈಗೊಂಡಿದ್ದು, ತನ್ನ 6, 4, 3 ಹಾಗೂ 1 ವರ್ಷದ ಹೆಣ್ಣು ಮಕ್ಕಳ ಗಂಟಲನ್ನು ಚಾಕುವಿನಿಂದ ಕುಯ್ದು ಕೊಲೆ ಮಾಡಿದ್ದಾಳೆ. ಮಕ್ಕಳು ಅಮ್ಮಾ ಎನ್ನುತ್ತಲೇ ಪ್ರಾಣ ಬಿಟ್ಟಿವೆ.

    ಕತ್ತು ಕುಯ್ದು ಮಕ್ಕಳನ್ನು ಅಲ್ಲೇ ಬಿಟ್ಟ ತಾಯಿ, ನಂತರ ತಾನೂ ಚಾಕುವಿನಿಂದ ಕತ್ತು ಕುಯ್ದುಕೊಂಡಿದ್ದಾಳೆ. ಅಷ್ಟರಲ್ಲೇ ಆಕೆಯ ಪತಿ ಆಗಮಿಸಿದ್ದು, ಮನೆಯನ್ನು ಒಳಗಿನಿಂದ ಚಿಲಕ ಹಾಕಿದ್ದರಿಂದ ಸ್ಥಳೀಯರ ಸಹಾಯದಿಂದ ಬಾಗಿಲು ಮುರಿದು ಒಳಗೆ ಹೋಗಿದ್ದಾನೆ. ಅಷ್ಟರಲ್ಲಾಗಲೇ ಮಕ್ಕಳ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ಪತ್ನಿ ಮಾತ್ರ ಒದ್ದಾಡುತ್ತಿದ್ದಳು. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ವಿಷಯ ತಿಳಿಸಲಾಗಿತ್ತು.

    ಇಷ್ಟು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫರ್ಮೀನಾ ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮಕ್ಕಳ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದರಿಂದ ಪೊಲೀಸರು ಆರೋಪಿ ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

  • ರೈತ ಮಸೂದೆಯ ಕುರಿತು ಮೋದಿ ತಾಯಿಗೆ ಪತ್ರ ಬರೆದ ರೈತ

    ರೈತ ಮಸೂದೆಯ ಕುರಿತು ಮೋದಿ ತಾಯಿಗೆ ಪತ್ರ ಬರೆದ ರೈತ

    ಚಂಡೀಗಢ: ರೈತ ಹೋರಾಟದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದ ಶಿಮ್ಲಾದ ರೈತರೊಬ್ಬರು ಪ್ರಧಾನಿ ಮೋದಿಯವರ ತಾಯಿಗೆ ಪತ್ರ ಬರೆದು ಪರಿಸ್ಥಿತಿಯನ್ನು ಅರ್ಥಮಾಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ.

    ಫೀರೊಜ್‍ಪುರದ ಹರ್‍ ಪ್ರೀತ್ ಸಿಂಗ್ ಪತ್ರ ಬರೆದ ರೈತ. ಹರ್ ಪ್ರೀತ್ ಕೆಲ ದಿನಗಳ ಹಿಂದೆ ಶಿಮ್ಲಾದಲ್ಲಿ ನಡೆದ ರೈತರ ಹೋರಾಟದಲ್ಲಿ ಭಾಗಿಯಾಗಿ ಬಂಧನಕ್ಕೆ ಒಳಗಾಗಿದ್ದರು. ನಂತರ ಬಿಡುಗಡೆ ಹೊಂದಿ ಇದೀಗ ಮೋದಿಯವರ ತಾಯಿಗೆ ಭಾವನಾತ್ಮಕ ಸಂದೇಶ ಇರುವ ಪತ್ರ ಬರೆದು ರೈತರ ವಿರೋಧ ಇರುವ ಮೂರು ಕಾಯ್ದೆಯ ಬಗ್ಗೆ ಮೋದಿಯವರಿಗೆ ಮನವರಿಕೆ ಮಾಡಿಸುವಂತೆ ತಿಳಿಸಿದ್ದಾರೆ.

    ಹರ್ ಪ್ರೀತ್ ಮೋದಿಯವರ ತಾಯಿ ಹಿರಾಬೆನ್ ಅವರಿಗೆ ಪತ್ರ ಬರೆದು ರೈತ ವಿರೋಧ ಇರುವ ಮೂರು ಕಾಯ್ದೆಗಳನ್ನು ಹಿಂಪಡೆಯುವಂತೆ ನಿಮ್ಮ ಮಗ ಪ್ರಧಾನಿ ಮೋದಿಯವರಿಗೆ ನೀವು ಮನವಿ ಮಾಡಿಕೊಳ್ಳಿ. ಆಗ ಅವರು ತಾಯಿಯ ಮಾತನ್ನು ಕೇಳಿಯಾದರು ಹಿಂಪಡೆಯಲು ನಿರ್ಧರಿಸಬಹುದು. ಭಾರತೀಯರು ತಾಯಿಯನ್ನು ದೇವರಾಗಿ ಕಾಣುತ್ತಾರೆ. ಹಾಗಾಗಿ ನಾನು ನಿಮ್ಮ ಬಳಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಸಾವಿರಾರೂ ರೈತರು ಕೊರೆಯುವ ಚಳಿಯಲ್ಲಿ ದೆಹಲಿಯ ಗಡಿ ಪ್ರದೇಶದಲ್ಲಿ ಹೋರಾಟ ಮಾಡುತ್ತಿದ್ದಾರೆ ಅವರ ಬಗ್ಗೆ ಒಮ್ಮೆ ಯೋಚಿಸಿ ಆ ಕಾಯ್ದೆಯನ್ನು ಹಿಂಪಡೆಯುವಂತೆ ಮನವಿ ಮಾಡಿ ಎಂದಿದ್ದಾರೆ.

    ಶಿಮ್ಲಾದಲ್ಲಿ ಅನುಮತಿ ಇಲ್ಲದೆ ನಡಸಿದ ಪ್ರತಿಭಟನೆಗಾಗಿ ಹರ್ ದೀಪ್, ಕರಣ್‍ದೀಪ್ ಸಂಧು ಮತ್ತು ಗುರ್ ದೀಪ್ ಸಿಂಗ್ ಅವರನ್ನು ಪಂಜಾಬ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 107ರ ಪ್ರಕಾರ ಬಂಧಿಸಿದ್ದರು.

  • ತಾಯಿ, ಮಗನ ಜೋಡಿ ಕೊಲೆಗೆ ಬೆಚ್ಚಿಬಿದ್ದ ಗ್ರಾಮಸ್ಥರು

    ತಾಯಿ, ಮಗನ ಜೋಡಿ ಕೊಲೆಗೆ ಬೆಚ್ಚಿಬಿದ್ದ ಗ್ರಾಮಸ್ಥರು

    – ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ

    ಚಂಡೀಗಢ: ತಾಯಿ ಮತ್ತು ಮಗನನ್ನು ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ಮಂಗತ್ ರಾಮ್ ಎಂದು ಗುರುತಿಸಲಾಗಿದೆ. ಈತ ಮೇಕೆಗಳನ್ನು ಮೇಯಿಸಿ ಜೀವನವನ್ನು ನಡೆಸುತ್ತಿದ್ದನು. ಇವನ ಜೊತೆಗೆ ತಾಯಿ ಕೊಲೆಯಾಗಿದ್ದರೆ. ತಾಯಿ ಮಗನ ಜೋಡಿ ಕೊಲೆ ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ.

    ಮನೆಯಿಂದ ಸ್ವಲ್ಪ ದೂರದಲ್ಲಿ ಹೊಲದಲ್ಲಿ ಯುವಕನ ಮೃತ ದೇಹ ಪತ್ತೆಯಾಗಿದ್ದು, ಈತನ ತಾಯಿ ಶವ ಮನೆಯಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಈ ಡಬಲ್ ಹತ್ಯೆಯಿಂದಾಗಿ ಗ್ರಾಮದ ಜನರು ಆತಂಕಕ್ಕೊಳಗಾಗಿದ್ದಾರೆ. ಹತ್ಯೆಯಾದ ವೃದ್ಧೆ ಮಹಿಳೆಗೆ ಮಾತನಾಡಲು ಸಾಧ್ಯವಾಗುತ್ತಿರಲಿಲ್ಲ, ಮತ್ತು ಆಕೆಯ ಮಗನಿಗೆ ನಡೆಯಲು ಆಗುತ್ತಿರಲಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.

    ತಾಯಿ ಮತ್ತು ಮಗನ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಕೊಲೆಯ ಹಿಂದೆ ದರೋಡೆ ನಡೆಸಿರುವ ಸಾಧ್ಯತೆಯಿದೆ ಎಂದು ನೆರೆಹೊರೆಯವರು ಅನುಮಾನಿಸಿದ್ದಾರೆ.

    ದರೋಡೆಕೋರರು ಹಣದ ಆಸೆಯಿಂದ ತಾಯಿ, ಮಗನನ್ನು ಕೊಂದಿದ್ದಾರೆ. ಈ ಜೋಡಿಕೊಲೆ ತನಿಖೆಯನ್ನು ಮಾಡುತ್ತೇವೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಕೊಲೆಯಾದ ಸ್ಥಳದಲ್ಲಿ ಯಾವುದೇ ಶಸ್ತ್ರಾಸ್ತ್ರಗಳು ನಮಗೆ ದೊರಕಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಕ್ರಮವನ್ನು ತೆಗೆದುಕೊಳ್ಳುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.

  • ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ಮೂವರು

    ವೀಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಒಂದೇ ಕುಟುಂಬದ ಮೂವರು

    ಚಂಡೀಗಡ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿ ಘಟನೆ ಪಂಜಾಬ್‍ನ ಗುರುದಾಸ್‍ಪುರ ಜಿಲ್ಲೆಯ ಧಾರಿವಾಲ್ ಪ್ರದೇಶದಲ್ಲಿ ನಡೆದಿದೆ.

    ಸಾವನ್ನಪ್ಪಿರುವವರನ್ನು ನರೇಶ್ ಕುಮಾರ್ (42) ಇವರ ಪತ್ನಿ ಭಾರತಿ ಶರ್ಮಾ (38) ಮತ್ತು ಇವರ 16 ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಕೋಣೆಗೆ ಬೀಗ ಹಾಕಿ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ಈ ಮೂವರು ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಾಕಿದ್ದಾರೆ. ನಮ್ಮ ಸಾವಿಗೆ 9 ಜನರು ಕಾರಣವಾಗಿದ್ದಾರೆ. ನಮ್ಮ ಹತ್ತಿರದ ಸಹೋದರ ಮತ್ತು ಇನ್ನು ಹಲವರಿದ್ದಾರೆ ಎಂದು ಹೇಳಿ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನರೇಶ್ ಕಬ್ಬಿನ ಹಾಲನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಭಾರೀ ಸಾಲಗಳಿಂದ ಕುಟುಂಬವು ತೊಂದರೆಗೀಡಾಗಿತ್ತು. ಸಾಲ ನೀಡಿದ ವ್ಯಕ್ತಿ ಇವರಿಗೆ ಕಿರುಕುಳ ನೀಡುತ್ತಿದ್ದನು. ಹಾಗಾಗಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾ ಸ್ಥಳಕ್ಕೆ ಎಸ್‍ಎಸ್‍ಪಿ ರಾಜಿಂದರ್ ಸಿಂಗ್ ಸೋಹಲ್ ಪರಿಶೀಲನೆ ನಡೆಸುತ್ತಿದ್ದಾರೆ. ಶವಗಳನ್ನು ಗುರುದಾಸ್‍ಪುರದ ಸಿವಿಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಯನ್ನು ನಡೆಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ.