Tag: ಚಂದ್ರಶೇಖರ್ ರಾವ್

  • ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

    ಹೊಸ ರಾಷ್ಟ್ರೀಯ ಪಕ್ಷ ಘೋಷಿಸಲಿರುವ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್

    ನವದೆಹಲಿ: 2024ರ ಲೋಕಸಭೆ ಚುನಾವಣೆ (Lok Sabha Elections) ಸನಿಹವಾಗುತ್ತಿರುವ ಹಿನ್ನೆಲೆ ಹಲವು ರಾಜಕೀಯ ಪಕ್ಷಗಳು ತಂತ್ರಗಾರಿಕೆ ಆರಂಭಿಸಿದ್ದು, ಇದರ ಭಾಗವಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ (K Chandrasekhar Rao) ಹೊಸ ರಾಷ್ಟ್ರೀಯ ಪಕ್ಷವನ್ನು ಘೋಷಿಸಲಿದ್ದಾರೆ ಎಂದು ಮೂಲಗಳು ಖಚಿತ ಪಡಿಸಿವೆ.

    ಅಕ್ಟೋಬರ್ 5 ರಂದು ಸಂಜೆ ಏಳು ಗಂಟೆಗೆ ಹೊಸ ಪಕ್ಷದ ಹೆಸರನ್ನು ಘೋಷಣೆ ಮಾಡಲಿದ್ದು, ಡಿಸೆಂಬರ್ 9 ರಂದು ದೆಹಲಿಯಲ್ಲಿ (NewDelhi) ದೊಡ್ಡ ಕಾರ್ಯಕ್ರಮ ಆಯೋಜಿಸುವ ಮೂಲಕ ತಮ್ಮ ರಾಷ್ಟ್ರೀಯ ಅಜೆಂಡಾವನ್ನು ಚಂದ್ರಶೇಖರ್ ರಾವ್ ಜನರಿಗೆ ತಿಳಿಸಲಿದ್ದಾರೆ. ಇದನ್ನೂ ಓದಿ: ಸೇನೆ ಸೇರಿದ ಭಾರತದ ಮೊದಲ ಲಘು ಯುದ್ಧ ಹೆಲಿಕಾಪ್ಟರ್ – ಏನಿದರ ವಿಶೇಷತೆ?

    ಮೂಲಗಳ ಪ್ರಕಾರ ತೆಲಂಗಾಣ ರಾಷ್ಟ್ರ ಸಮಿತಿ (TRS) ಅನ್ನು ಭಾರತೀಯ ರಾಷ್ಟ್ರ ಸಮಿತಿ (BRS) ಆಗಿ ಮರು ನಾಮಕರಣ ಮಾಡಲು ಚಂದ್ರಶೇಖರ್ ರಾವ್ ಪಕ್ಷದ ಇತರೆ ನಾಯಕರಿಂದ ಅನುಮತಿ ಪಡೆದುಕೊಂಡಿದ್ದಾರೆ. ಪಕ್ಷದ ಹೆಸರು ಮಾತ್ರ ಬದಲಾಗಲಿದ್ದು, ಚಿಹ್ನೆ ಹಾಗೂ ಧ್ವಜ ಮುಂದುವರಿಯಲಿದೆ. ಇದನ್ನೂ ಓದಿ : ನಮ್ಮ ಇಲಾಖೆಯಲ್ಲಿರುವ ಕಳ್ಳ ಅಧಿಕಾರಿಗಳಿಗೆ ನಾನೇ ಬಾಸ್‌ ಎಂದಿದ್ದ ಕೃಷಿ ಸಚಿವ ರಾಜೀನಾಮೆ

    ಕೆಸಿಆರ್ ನೇತೃತ್ವದ ಬಿಆರ್‌ಎಸ್ ಪಕ್ಷವು ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಇತರ ಕೆಲವು ರಾಜ್ಯಗಳ 100 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ. ಇದು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬಹುದು. ಕೆಲವು ರಾಜಕೀಯ ಪಕ್ಷಗಳು ಬಿಆರ್‌ಎಸ್‍ನೊಂದಿಗೆ ವಿಲೀನಗೊಳ್ಳಬಹುದು ಮತ್ತು ರಾಷ್ಟ್ರ ಮಟ್ಟದಲ್ಲಿ ಬಿಆರ್‌ಎಸ್‍ನೊಂದಿಗೆ ಕೆಲಸ ಮಾಡಲು ಸಿದ್ಧರಿರುವ ಇತರ ನಾಯಕರೂ ಪಕ್ಷ ಸೇರಬಹುದು ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

    ತೃತೀಯ ರಂಗ ರಚನೆಗೆ ದೇವೇಗೌಡರ ಜೊತೆ ಚಂದ್ರಶೇಖರ್ ರಾವ್ ಚರ್ಚೆ

    ಬೆಂಗಳೂರು: ದೇಶದಲ್ಲಿ ತೃತೀಯ ರಂಗದ ಸದ್ದು ಮತ್ತೊಮ್ಮೆ ಪ್ರಾರಂಭವಾಗಿದೆ. ಇದಕ್ಕೆ ವೇದಿಕೆ ಎಂಬಂತೆ ಇಂದು ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು.

    ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ಸುಮಾರು ಎರಡೂವರೆ ಗಂಟೆಗಳಿಗೂ ಹೆಚ್ಚು ಕಾಲ ಇಬ್ಬರು ನಾಯಕರು ಚರ್ಚೆ ನಡೆಸಿದರು. ಚರ್ಚೆಯಲ್ಲಿ ತೃತೀಯ ರಂಗದ ಬಗ್ಗೆ ಚರ್ಚೆ ಆಗಿರೋದನ್ನ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಒಪ್ಪಿಕೊಂಡರು. ಇದನ್ನೂ ಓದಿ: ಹಣಕಾಸಿನ ವಿಷಯಕ್ಕೆ ಗೆಳೆಯನನ್ನೆ ಕೊಲೆ ಮಾಡಿಸಿದ ಕಿಡಿಗೇಡಿ 

    ಸಭೆ ಬಳಿಕ ಮಾತನಾಡಿದ ಚಂದ್ರಶೇಖರ್ ರಾವ್, ದೇಶದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವ ಶಕ್ತಿ ದೇಶದಲ್ಲಿದೆ. ದೇಶದಲ್ಲಿ ಹಲವು ಸಂಪನ್ಮೂಲಗಳಿವೆ. ಇವತ್ತಿಗೂ ಹಲವು ಸಮಸ್ಯೆ ಬಗ್ಗೆ ಚರ್ಚೆಯಾಗಿಲ್ಲ. ಈ ಬಗ್ಗೆ ಚರ್ಚೆ ಮಾಡಲಾಗಿದೆ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನ ಸಾಕಷ್ಟು ಕೊಡಬಹುದು. ಆದರೆ ಯಾವ ಕ್ರಮ ತೆಗೆದುಕೊಳ್ಳಲಾಗಿದೆ ಅನ್ನೋದು ಮುಖ್ಯ ಎಂದು ಹೆಸರು ಹೇಳದೆ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಿಡಿಕಾರಿದರು.

    ಇವತ್ತು ದೇಶಕ್ಕೆ ಅಪಮಾನ ಮಾಡೋ ಕೆಲಸ ಆಗುತ್ತಿದೆ. ಸರ್ಕಾರ ಮಾಡೋದು ಮುಖ್ಯ ಅಲ್ಲ. ಸಮಸ್ಯೆ ಪರಿಹಾರ ಆಗಿದೆಯಾ ಅನ್ನೋದು ಮುಖ್ಯ. 75 ವರ್ಷಗಳ ಅಮೃತ ಮಹೋತ್ಸವದಲ್ಲಿ ನಾವು ಇದ್ದೇವೆ. ಆದರೂ ಕೂಡ ದೇಶ ನೀರಿನ ಸಮಸ್ಯೆ ಎದುರಿಸುತ್ತಿದೆ. ಅಷ್ಟೇ ಅಲ್ಲ ಅನೇಕ ಸಮಸ್ಯೆಗಳನ್ನ ಎದುರಿಸುತ್ತಿದೆ ಎಂದರು.

    ಕಾಂಗ್ರೆಸ್-ಬಿಜೆಪಿ ಸರ್ಕಾರ ಮಾಡೋದು ಮುಖ್ಯ ಅಲ್ಲ. ಉಜ್ವಲ ಭಾರತ ಆಗೋದು ನಮಗೆ ಮುಖ್ಯ. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ಮಾಧ್ಯಮಗಳು ಈ ನಿಟ್ಟಿನಲ್ಲಿ ನಮ್ಮ ಜೊತೆ ಸಹಕಾರ ಕೊಡಿ. ಸೆನ್ಸೇಷನಲ್ ಸುದ್ದಿಗಳನ್ನ ಬಿಡಿ. ದೇಶದ ಧನಾತ್ಮಕ ದಾರಿಯಲ್ಲಿ ಹೋಗುವಂತ ನಿಟ್ಟಿನಲ್ಲಿ ಸುದ್ದಿಗಳನ್ನ ಕೊಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ:  ತಲೆಗೆ 25 ಲಕ್ಷ ಬಹುಮಾನ ಘೋಷಣೆಗೆಯಾಗಿದ್ದ ನಕ್ಸಲ್‌ ನಾಯಕ ಶವವಾಗಿ ಪತ್ತೆ 

    ದೇಶದಲ್ಲಿ ಇಂದು ಯಾವ ವರ್ಗಗಳು ಸಂತೋಷವಾಗಿ ಇಲ್ಲ. ಡಾಲರ್ ಬೆಲೆ ಇವತ್ತು ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ಕುಸಿದಿದೆ. ಇದೆಲ್ಲವೂ ಸರಿ ಹೋಗಬೇಕು. ಈ ನಿಟ್ಟಿನಲ್ಲಿ ನಾವು ಕೆಲಸ ಮಾಡ್ತಿದ್ದೇವೆ. ರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಭಾರತ ಬದಲಾವಣೆ ಖಂಡಿತ ಆಗಲಿದ್ದು, 2-3 ತಿಂಗಳಲ್ಲಿ ನಿಮಗೆ ಒಂದು ಉತ್ತಮ ಸುದ್ದಿಕೊಡ್ತೀವಿ ಎಂದು ತಿಳಿಸಿದರು.

  • ಪ್ರಧಾನಿಗೆ ನಾಚಿಕೆಯಾಗಬೇಕು: ಮುಖ್ಯಮಂತ್ರಿಗಳ ವಾಗ್ದಾಳಿ

    ಪ್ರಧಾನಿಗೆ ನಾಚಿಕೆಯಾಗಬೇಕು: ಮುಖ್ಯಮಂತ್ರಿಗಳ ವಾಗ್ದಾಳಿ

    ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆಗೆ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿಗಳು ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌, ಪ್ರಧಾನಿಗೆ ನಾಚಿಕೆಯಾಗಬೇಕು ಎಂದು ಕಟು ಶಬ್ದವನ್ನು ಪ್ರಯೋಗಿಸಿದ್ದಾರೆ. ಅಲ್ಲದೇ ತನ್ನ ರಾಜ್ಯದಲ್ಲಿ 2015 ರಿಂದ ಇಂಧನ ತೆರಿಗೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಇನ್ನೂ ಮುಗಿದಿಲ್ಲ, ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಿ: ಉದ್ಧವ್ ಠಾಕ್ರೆ

    ರಾಜ್ಯಗಳನ್ನು ಕೇಳುವ ಬದಲು ಕೇಂದ್ರವು ತೆರಿಗೆಯನ್ನು ಏಕೆ ಕಡಿತಗೊಳಿಸಬಾರದು? ಕೇಂದ್ರವು ಕೇವಲ ತೆರಿಗೆಯನ್ನಷ್ಟೇ ಹೆಚ್ಚಿಸಿಲ್ಲ, ಸೆಸ್ ಕೂಡ ಸಂಗ್ರಹಿಸುತ್ತದೆ. ನಿಮಗೆ ಧೈರ್ಯವಿದ್ದರೆ, ಮೌಲ್ಯವರ್ಧಿತ ತೆರಿಗೆಗಳ ಬಗ್ಗೆ ವಿವರ ನೀಡಿ ಎಂದು ಸವಾಲು ಹಾಕಿದ್ದಾರೆ.

    ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಪ್ರಧಾನಿ ಮೋದಿಯವರು ಸಂಪೂರ್ಣ ಏಕಪಕ್ಷೀಯ ಮತ್ತು ದಾರಿತಪ್ಪಿಸುವ ಭಾಷಣ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಸಂಗತಿಗಳು ತಪ್ಪು. ಕಳೆದ ಮೂರು ವರ್ಷಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂಪಾಯಿ ಸಬ್ಸಿಡಿ ನೀಡುತ್ತಿದ್ದೇವೆ. ಇದಕ್ಕಾಗಿ 1,500 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸಿ: ರಾಜ್ಯಗಳಿಗೆ ಮೋದಿ ಮನವಿ

    ಕೇಂದ್ರಕ್ಕೆ 97,000 ಕೋಟಿ ರೂ. ಬಾಕಿ ಇದೆ. ಅರ್ಧದಷ್ಟು ಮೊತ್ತ ಪಡೆದ ಮರುದಿನ 3,000 ಕೋಟಿ ರೂ., ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿ ನೀಡುತ್ತೇವೆ. ಸಬ್ಸಿಡಿಯಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ನಾನು ನನ್ನ ಸರ್ಕಾರವನ್ನು ಹೇಗೆ ನಡೆಸುವುದು ಎಂದು ಪ್ರಶ್ನಿಸಿದ್ದಾರೆ.

    5,000 ಕೋಟಿ ಮತ್ತು 3,000 ಕೋಟಿ ರೂ., ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿಯನ್ನು ಒದಗಿಸಿದ್ದಕ್ಕಾಗಿ ಉತ್ತರ ಪ್ರದೇಶ ಮತ್ತು ಗುಜರಾತ್‌ನಂತಹ ಬಿಜೆಪಿ ಆಡಳಿತದ ರಾಜ್ಯಗಳನ್ನು ಹೊಗಳಿಸಿದ್ದ ಪ್ರಧಾನಿಗೆ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ಈ ರಾಜ್ಯಗಳು ಕೇಂದ್ರದಿಂದ ಉತ್ತಮ ಆರ್ಥಿಕ ನೆರವು ಪಡೆಯುತ್ತವೆ. ಇದಕ್ಕೆ ವಿರುದ್ಧವಾಗಿ ತನ್ನ ರಾಜ್ಯವು ಬಹಳ ಕಡಿಮೆ ಹಣವನ್ನು ಪಡೆದಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ನೀವು ಮಾಡಿರುವ ತಪ್ಪಿಗೆ ನಮ್ಮನ್ನು ದೂಷಿಸಬೇಡಿ – ಮೋದಿ ವಿರುದ್ಧ ಠಾಕ್ರೆ ಕಿಡಿ

    ಇಂಧನ ಬೆಲೆ ಏರಿಕೆಗೆ ರಾಜ್ಯ ಸರ್ಕಾರಗಳು ಹೊಣೆಯಾಗುವುದಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

  • ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ

    ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿ – ಸಿಎಂ ಕೆಸಿಆರ್‌ಗೆ ಕಾಂಗ್ರೆಸ್ ಒತ್ತಾಯ

    ಹೈದರಾಬಾದ್: ಕಾಂಗ್ರೆಸ್ ಪಕ್ಷವು ತೆಲಂಗಾಣದಲ್ಲಿ ನಿರುದ್ಯೋಗ ತುರ್ತು ಪರಿಸ್ಥಿತಿಗೆ ಕರೆ ನೀಡಿದ್ದು, ರಾಜ್ಯದ ನಿರುದ್ಯೋಗ ಪರಿಸ್ಥಿತಿಯಿಂದ 40 ಲಕ್ಷ ಜನರು ಬಳಲುತ್ತಿದ್ದಾರೆ ಎಂದು ತಿಳಿಸಿದೆ.

    ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ವಕ್ತಾರ ಹಾಗೂ ತೆಲಂಗಾಣ ಕಾಂಗ್ರೆಸ್ ಹಿರಿಯ ನಾಯಕ ಡಾ.ದಾಸೋಜು ಶ್ರವಣ್ ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ನಿರುದ್ಯೋಗ ಪರಿಸ್ಥಿತಿಯನ್ನು ಪರಿಹರಿಸಲು ಮತ್ತು ನಿವಾರಿಸಲು ಸ್ಪಷ್ಟವಾದ ಉಪಕ್ರಮಗಳನ್ನು ಅನ್ವೇಷಿಸಬೇಕು ಎಂದಿದ್ದಾರೆ.

    ರಾಜ್ಯದ ನಿರುದ್ಯೋಗ ಸಮಸ್ಯೆಯನ್ನು ಪರಿಹರಿಸಲು ನಿರ್ದಿಷ್ಟ ಕಾರ್ಯ ನೀತಿಗಳೊಂದಿಗೆ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳು, ಶಿಕ್ಷಣ ತಜ್ಞರು, ಬುದ್ಧಿಜೀವಿಗಳು, ತಂತ್ರಜ್ಞರು ಮತ್ತು ನೀತಿ ನಿರೂಪಕರನ್ನು ಒಳಗೊಂಡ ಉನ್ನತ ಮಟ್ಟದ ಕಾರ್ಯಪಡೆಯನ್ನು ಸಂಘಟಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ಖಾಸಗಿ ವಲಯದಲ್ಲೂ ಶೇ.95ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಮೀಸಲಿಡುವಂತೆ ಶಾಸನಬದ್ಧ ಕಾಯಿದೆಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯಿಂದ 40 ಲಕ್ಷ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ : ಸೂಟ್‍ಕೇಸ್‍ನಲ್ಲಿ 40 ಕೆಜಿ ಹಸಿರು ಬಟಾಣಿ ತುಂಬಿ ಸಾಗಿಸಿದ ಐಪಿಎಸ್ ಅಧಿಕಾರಿ

  • ಹಿಜಬ್‌ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಸಿಎಂ ಅಸಮಾಧಾನ

    ಹಿಜಬ್‌ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಸಿಎಂ ಅಸಮಾಧಾನ

    ಹೈದರಾಬಾದ್: ಹಿಜಬ್‌ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ರಾಜ್ಯ ವಿಧಾನಸಭೆಯಲ್ಲಿ ಹಿಜಬ್‌ ವಿವಾದ ಕುರಿತು ಮಾತನಾಡಿದ ಅವರು, ಯಾರು ಏನು ಧರಿಸುತ್ತಾರೆ ಎಂಬುದಕ್ಕೂ ಸರ್ಕಾರಕ್ಕೂ ಏನು ಸಂಬಂಧ? ಹಿಜಬ್ ವಿವಾದ ಏಕೆ? ವಾತಾವರಣ ಬಿಗಡಾಯಿಸುವಂತೆ ಏಕೆ ಮಾಡುತ್ತಿದ್ದೀರಿ ಎಂದು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಎಲ್ಲಿ, ಏನು ಬೇಕಾದರೂ ಧರಿಸಬಹುದು, ಆದರೆ…: ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ

    ಇತ್ತೀಚಿನ ದಿನಗಳಲ್ಲಿ ಕೇಂದ್ರ ಬಿಜೆಪಿ ಆಡಳಿತದ ಬಗ್ಗೆ ತೆಲಂಗಾಣ ಸಿಎಂ ವ್ಯಾಪಕ ಟೀಕೆಯನ್ನು ವ್ಯಕ್ತಪಡಿಸಿದ್ದಾರೆ. ಅಂತೆಯೇ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೂ ಹರಿಹಾಯ್ದಿದ್ದಾರೆ. ಹಿಜಬ್‌ ವಿವಾದದಲ್ಲಿ ಕರ್ನಾಟಕ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

    ಶಿಕ್ಷಣ ಸಂಸ್ಥೆಯೊಂದರಲ್ಲಿ ಶುರುವಾರ ಹಿಜಬ್‌ ವಿವಾದ ಹೈಕೋರ್ಟ್‌ ಮೆಟ್ಟಿಲೇರಿತ್ತು. 11 ದಿನಗಳ ವಾದ-ಪ್ರತಿವಾದವನ್ನು ಆಲಿಸಿದ ಕರ್ನಾಟಕ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಿತು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ಧರಿಸುವಂತಿಲ್ಲ ಎಂದು ಕೋರ್ಟ್‌ ತೀರ್ಪು ನೀಡಿದೆ. ಕೋರ್ಟ್‌ ತೀರ್ಪಿನ ವಿಚಾರವಾಗಿ ಪರ-ವಿರೋಧದ ಚರ್ಚೆ ಹುಟ್ಟುಕೊಂಡಿದೆ. ಇದನ್ನೂ ಓದಿ: ಹಿಜಬ್ ವಿಚಾರವನ್ನ ಅನಗತ್ಯವಾಗಿ ವಿವಾದ ಮಾಡದೆ ಸ್ವಾಗತಿಸಬೇಕು: ಬಿಎಸ್‍ವೈ

  • ಕತ್ತೆ ಕದ್ದ ಆರೋಪದಡಿ ತೆಲಂಗಾಣ ಕಾಂಗ್ರೆಸ್ ಮುಖಂಡನ ಬಂಧನ

    ಕತ್ತೆ ಕದ್ದ ಆರೋಪದಡಿ ತೆಲಂಗಾಣ ಕಾಂಗ್ರೆಸ್ ಮುಖಂಡನ ಬಂಧನ

    ಹೈದರಾಬಾದ್: ತೆಲಂಗಾಣದ ಕರೀಂನಗರದಲ್ಲಿ ಕತ್ತೆ ಕದ್ದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿದ್ದಾರೆ. ಕುತೂಹಲಕಾರಿಯಾಗಿ ವಿಚಾರವೆಂದರೆ ಇತ್ತೀಚೆಗೆ ಕೆಸಿಆರ್ ವಿರುದ್ಧದ ನಡೆಸಿದ ಸಣ್ಣ ಪ್ರತಿಭಟನೆಯಲ್ಲಿ ಈ ಕತ್ತೆಯನ್ನೇ ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

    ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಜನ್ಮದಿನದಂದು ಕತ್ತೆ ಜೊತೆ ಪ್ರತಿಭಟನೆ ನಡೆಸಿದ ತೆಲಂಗಾಣ ಎನ್‍ಎಸ್‍ಯುಐ ಅಧ್ಯಕ್ಷ ವೆಂಕಟ್ ಬಲ್ಮೂರ್ ಅವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

    ಈ ಸಂಬಂಧ ಶುಕ್ರವಾರ ಕರೀಂನಗರದ ಜಮ್ಮುಕುಂಟಾ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ದಾಖಲಾಗಿದ್ದು, ಇನ್ನೂ 6 ಮಂದಿಯ ಹೆಸರನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಅವರೆಲ್ಲರೂ ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಕುಟುಂಬ ಮಣಿಪುರವನ್ನು ಎಟಿಎಂ ಆಗಿ ಬಳಸಿದೆ: ಸ್ಮೃತಿ ಇರಾನಿ

    ಇದೀಗ ಪೊಲೀಸರು ಕಾನೂನುಬಾಹಿರ ಸಭೆ, ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ, ಕಳ್ಳತನ ಮತ್ತು ಪ್ರಾಣಿಗಳ ಮೇಲೆ ಕ್ರೌರ್ಯ ತೋರಿದ ಆರೋಪದಡಿ 7 ಮಂದಿಯ ಮೇಲೆ . ಭಾರತೀಯ ದಂಡ ಸಂಹಿತೆ (IPಅ) ಸೆಕ್ಷನ್ 143, 153, 504, 379 ರ ಅಡಿಯಲ್ಲಿ 149, ಐಟಿ ಕಾಯ್ದೆಯ ಸೆಕ್ಷನ್ 67 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 11 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಿದ್ದಾರೆ.

    ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳ ಕೊರತೆಯ ವಿರುದ್ಧ ವೆಂಕಟ್ ಬಲ್ಮೂರ್ ಮತ್ತು ಇತರ ಆರೋಪಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕತ್ತೆಯ ಮೇಲೆ ಕೆಸಿಆರ್ ಫೋಟೋವನ್ನು ಹಾಕಿ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ಹೈಕೋರ್ಟ್ ಮಧ್ಯಂತರ ಆದೇಶ ಪಾಲಿಸಿ – ಅಂಜುಮನ್ ಸಂಸ್ಥೆಯಿಂದ ಮನವಿ

  • ಕೋಮುವಾದ ರಾಜಕಾರಣದ ವಿರುದ್ಧ ಕೆಸಿಆರ್ ಹೋರಾಟ – ಬೆಂಬಲ ವ್ಯಕ್ತಪಡಿಸಿದ ಹೆಚ್‍ಡಿಡಿ

    ಕೋಮುವಾದ ರಾಜಕಾರಣದ ವಿರುದ್ಧ ಕೆಸಿಆರ್ ಹೋರಾಟ – ಬೆಂಬಲ ವ್ಯಕ್ತಪಡಿಸಿದ ಹೆಚ್‍ಡಿಡಿ

    ಹೈದರಾಬಾದ್: ರಾಜ್ಯದಲ್ಲಿ ಆರಂಭವಾದ ಹಿಜಾಬ್-ಕೇಸರಿ ಶಾಲು ಗಲಭೆ ಈಗ ರಾಷ್ಟ್ರ ಮಟ್ಟದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ತರಗತಿಗಳಲ್ಲಿ ಹಿಜಬ್ ಬ್ಯಾನ್ ಮಾಡಿದ್ದನ್ನು ವಿರೋಧಿಸಿ ದೇಶದ್ಯಾಂತ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ.

    ಒಂದು ಕಡೆ ಜನ ಸಾಮಾನ್ಯರು ಪ್ರತಿಭಟನೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಈಗ ಮಾಜಿ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್ ಅಖಾಡಕ್ಕೆ ಇಳಿದಿದ್ದಾರೆ. ರಾಜ್ಯ ಸರ್ಕಾರ ಅದರಲ್ಲೂ ವಿಶೇಷವಾಗಿ ಬಿಜೆಪಿ ಟಾರ್ಗೆಟ್ ಮಾಡಿರುವ ಕೆಸಿಆರ್ ಕೋಮುವಾದ ರಾಜಕೀಯ ವಿರುದ್ಧ ಹೋರಾಟ ಆರಂಭಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ವಿವಾದ – ಅಪ್ರಾಪ್ತ ಬಾಲಕಿಯರ ವೈಯಕ್ತಿಕ ವಿವರ ಟ್ವೀಟ್‌ ಮಾಡ್ತಿದೆ ಬಿಜೆಪಿ: ಶಿವಸೇನಾ ಸಂಸದೆ ತರಾಟೆ

    ಚಂದ್ರಶೇಖರ್ ರಾವ್ ಆರಂಭಿಸಿರುವ ಈ ಹೋರಾಟಕ್ಕೆ ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಕೆಸಿಆರ್ ಜೊತೆಗೆ ದೂರವಾಣಿ ಮೂಲಕ ಮಾತಮಾಡಿದ ಹೆಚ್‍ಡಿಡಿ, ರಾವ್ ಸಾಬ್ ಉತ್ತಮವಾಗಿ ಹೋರಾಟ ಮಾಡ್ತಿದ್ದೀರಿ, ನಿಮ್ಮಂತೆ ಎಲ್ಲರೂ ಕೂಡ ಕೋಮುಗಲಭೆ ವಿರುದ್ಧ ಹೋರಾಟ ನಡೆಸಬೇಕು. ನಮ್ಮ ದೇಶದ ಜಾತ್ಯತೀತತೆ, ಸಂಸ್ಕೃತಿ ಮತ್ತು ವೈವಿಧ್ಯಮಯ ಸಂಸ್ಕೃತಿ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ: ರಾಜವಂಶಸ್ಥ ಯದುವೀರ್ ಒಡೆಯರ್

    ಸದ್ಯ ನೀವೂ ಆರಂಭಿಸಿರುವ ಹೋರಾಟಕ್ಕೆ ನಾವು ನೈತಿಕ ಬೆಂಬಲ ನೀಡುತ್ತಿದ್ದು, ಹೋರಾಟವನ್ನು ಮುಂದುವರಿಸಿ ಎಂದು ಹೇಳಿದ್ದಾರೆ. ಇದಕ್ಕೆ ಹರ್ಷ ವ್ಯಕ್ತಪಡಿಸಿದ ಕೆಸಿಆರ್, ಬೆಂಗಳೂರಿಗೆ ಬಂದಾಗ ಖುದ್ದು ಭೇಟಿ ಮಾಡುವುದಾಗಿ ಹೇಳಿದ್ದಾರೆ.

  • ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್ – ಪ್ರಜಾಪ್ರಭುತ್ವದ ಕೊಲೆ ಎಂದ ಜೆ.ಪಿ.ನಡ್ಡಾ

    ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್ – ಪ್ರಜಾಪ್ರಭುತ್ವದ ಕೊಲೆ ಎಂದ ಜೆ.ಪಿ.ನಡ್ಡಾ

    ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಬಂಧನದಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ತೆಲಂಗಾಣ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ಸರ್ಕಾರವು ಸಂಜಯ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಸಂಜಯ್ ಅವರು ಸರ್ಕಾರದ ಎಲ್ಲಾ ಮಾರ್ಗಸೂಚಿಯನ್ನು ಅನುಸರಿಸಿಯೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಪೊಲೀಸರು ಅವರನ್ನು ಬಂಧಿಸುವ ಮೊದಲು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಕೊಲೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

    ಇತ್ತೀಚಿನ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಸಿಗುತ್ತಿರುವ ಜನಬೆಂಬಲ ಹಾಗೂ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿನಿಂದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‍ರಾವ್ ಹತಾಶರಾಗಿದ್ದಾರೆ. ಅದಕ್ಕೆ ಈ ರೀತಿ ವರ್ತಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

    ಭಾನುವಾರದಂದು ವಿವಿಧ ಬೇಡಿಕೆಗಳನ್ನು ಈಡೇರಿಸಲು ಶಿಕ್ಷಕರ ಸಂಘಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಜಯ್ ನೇತೃತ್ವವನ್ನು ವಹಿಸಿದ್ದರು. ಆದರೆ ಕೊರೊನಾ ತಡೆಗೆ ಸರ್ಕಾರ ಹಾಕಿದ್ದ ನಿರ್ಬಂಧಗಳನ್ನು ಉಲ್ಲೇಖಿಸಿದ್ದಾರೆ ಎಂಬ ಆರೋಪದ ಮೇಲೆ ಕರೀಂ ನಗರದ ಪೊಲೀಸರು ಸಂಜಯ್ ಅವರನ್ನು ಬಂಧಿಸಿದ್ದಾರೆ.  ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ

  • ತೆಲಂಗಾಣದಲ್ಲಿ ಮೇ 1ರವರೆಗೂ ನೈಟ್ ಕರ್ಫ್ಯೂ ಘೋಷಿಸಿದ ಸರ್ಕಾರ

    ತೆಲಂಗಾಣದಲ್ಲಿ ಮೇ 1ರವರೆಗೂ ನೈಟ್ ಕರ್ಫ್ಯೂ ಘೋಷಿಸಿದ ಸರ್ಕಾರ

    ಹೈದರಾಬಾದ್: ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆ ಇಂದಿನಿಂದ ಮೇ 1ರವರೆಗೂ ತೆಲಂಗಾಣ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಿದೆ.

    ತೆಲಂಗಾಣ ಸರ್ಕಾರದ ಆದೇಶದಂತೆ ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ. ಕೊರೊನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

    ಈ ಹಿಂದೆ ತೆಲಂಗಾಣ ಹೈಕೋರ್ಟ್ ಕೂಡ ಕೋವಿಡ್-19 ಸೋಂಕನ್ನು ತಡೆಗಟ್ಟಲು ರಾತ್ರಿ ಹಾಗೂ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ವಿಧಿಸುವಂತೆ ಸರ್ಕಾರಕ್ಕೆ ತಿಳಿಸಿತ್ತು. ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ರಾವ್‍ಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.

  • ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್‍ಗೆ ಕೊರೊನಾ

    ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್‍ಗೆ ಕೊರೊನಾ

    ಹೈದರಾಬಾದ್: ತೆಲಂಗಾಣದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಸೋಮವಾರ ದೃಢಪಟ್ಟಿದೆ.

    ಸದ್ಯ ಮುಖ್ಯಮಂತ್ರಿಗಳು ಮೆದಕ್ ಜಿಲ್ಲೆಯ ಎರ್ರಾವಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಐಸೋಲೇಟ್ ಆಗಿದ್ದಾರೆ. ವೈದ್ಯರ ತಂಡ ಸಿಎಂ ಆರೋಗ್ಯದ ಮೇಲೆ ನಿಗಾ ವಹಿಸಿದೆ ಎಂದು ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿಎಂ ಅವರು ಏಪ್ರಿಲ್ 14 ರಂದು ನಲ್ಗೊಂಡ ಜಿಲ್ಲೆಯ ಹಲಿಯಾದಲ್ಲಿ ಟಿಆರ್‍ಎಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸಿದ್ದರು.