Tag: ಚಂದ್ರಶೇಖರ ಗುರೂಜಿ

  • ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್‍ನಲ್ಲಿ ಮತ್ತೆ ಪೂಜೆ

    ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್‍ನಲ್ಲಿ ಮತ್ತೆ ಪೂಜೆ

    ಹುಬ್ಬಳ್ಳಿ: ವಾಸ್ತು ಗುರು ಚಂದ್ರಶೇಖರ ಗುರೂಜಿ ಹತ್ಯೆ ನಡೆದ ಹೋಟೆಲ್ ನಲ್ಲಿ ಇಂದು ಮತ್ತೆ ಪೂಜೆ ನಡೆದಿದೆ.

    ಮಂಗಳವಾರ ಮತ್ತು ಇಂದು ಹೋಮ, ಹವನ, ಯಜ್ಞಗಳನ್ನು ಶಾಸ್ತ್ರಿಗಳು ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಉಣಕಲ್ ಕೆರೆಯ ಬಳಿ ಇರುವ ಪ್ರೆಸಿಡೆಂಟ್ ಹೋಟೆಲ್‍ನಲ್ಲಿ ಅಗೋರ, ಹೋಮ, ಉದಕ ಶಾಂತಿ, ಸುದರ್ಶನ ಹೋಮ,ಗೋ ಪೂಜೆ, ಅಕಲಾ ಪೂಜೆ ನೆರವೇರಿಸುತ್ತಿದ್ದಾರೆ.

    ಕೊಲೆ ನಡೆದ ಸ್ಥಳದಲ್ಲೇ ಮತ್ತೆ ಮತ್ತೆ ಪೂಜೆ ಪುನಸ್ಕಾರಗಳನ್ನು ಪ್ರೆಸಿಡೆಂಟ್ ಹೋಟೆಲ್ ಸಿಬ್ಬಂದಿ ಮಾಡುತ್ತಿದ್ದಾರೆ. ಸರಳ ವಾಸ್ತು ಖ್ಯಾತ ತಜ್ಞ ಮೃತಪಟ್ಟಿದ್ದನ್ನು ಅಪಶಕುನ ಎಂದುಕೊಂಡರೇ ಹೋಟೆಲ್ ಮಾಲೀಕರು ಈ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದಬಂದಿದೆ. ಇದನ್ನೂ ಓದಿ: 5 ಎಕ್ರೆ ಜಾಗಕ್ಕೆ ಕಿರಿಕ್ – ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್‌ಗೆ ಮತ್ತೊಂದು ಟ್ವಿಸ್ಟ್

    ಜುಲೈ 8ರಂದು ಹುಬ್ಬಳ್ಳಿ ಖ್ಯಾತ ಪುರೋಹಿತರನ್ನು ಕರೆಯಿಸಿ ಗುರೂಜಿ ಕೊನೆಯುಸಿರೆಳೆದ ಸ್ಥಳದಲ್ಲೇ ಸುದರ್ಶನ ಹೋಮ ಮಾಡಿಸಿದ್ದರು. ಇಬ್ಬರು ಪುರೋಹಿತರು ಆಗಮಿಸಿ ಪೂಜೆಯನ್ನು ನೆರವೇರಿಸಿಕೊಟ್ಟಿದ್ದರು. ಭಯ ದೂರಮಾಡಲು ಮತ್ತು ಹೋಟೆಲ್ ಶುದ್ಧಗೊಳಿಸಲು ಹೋಮ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿತ್ತು. ಇದನ್ನೂ ಓದಿ: ವಾಸ್ತುಗುರೂಜಿ ಕೊಲೆ ಬಗ್ಗೆ ಹಂತಕರ ತಪ್ಪೊಪ್ಪಿಗೆ – ಸಂಧಾನ ನೆಪದಲ್ಲಿ ದಾಖಲೆ ಜೊತೆ ಚಾಕು ತಂದು ಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ

    ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ

    ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಪ್ರಮುಖ ಹಂತಕ ಮಹಾಂತೇಶ್ ಶಿರೂರು ಇತ್ತೀಚೆಗಷ್ಟೇ ತನ್ನ ಫೇಸ್‍ಬುಕ್‍ನಲ್ಲಿ ಫೋಸ್ಟ್ ಮಾಡಿದ್ದ ಭಗವದ್ಗೀತೆ ಗೀತೋಪದೇಶದ ಸಾಲಿನ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡುವ ಮುನ್ನ ಐದು ದಿನದ ಹಿಂದೆ ಹಂತಕ ಮಹಾಂತೇಶ್, ಶ್ರೀ ಕೃಷ್ಣ ಪರಮಾತ್ಮನ ರೌದ್ರಾವತಾರದಲ್ಲಿ ಕುದುರೆ ಏರಿ ಹೋಗುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾನೆ. ಅಲ್ಲದೇ ಈ ಫೋಟೋದಲ್ಲಿ ಅಧರ್ಮ ತಾಂಡವವಾಡುತ್ತಿರುವಾಗ ದುಷ್ಟರ ನಾಶ ಪಡಿಸಲು ಧರ್ಮ ಪುನರ್ ಸ್ಥಾಪಿಸಲು ನೀನು ಬರುವೆ ಎಂದು ವಚನ ನೀಡಿರುವೆ. ವಿಳಂಭವೇಕೆ ಮತ್ತೆ ಅವತರಿಸು ಪ್ರಭುವೆ..! ಸಂಭವಾಮಿ ಯುಗೇ ಯುಗೇ ಎಂಬ ಭಗವದ್ಗೀತೆಯ ಗೀತೋಪದೇಶದ ಸಾಲುಗಳಿರುವುದನ್ನು ಕಾಣಬಹುದಾಗಿದೆ.  ಇದನ್ನೂ ಓದಿ: ಸರಳವಾಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಸರಳವಾಸ್ತು ಖ್ಯಾತಿಯ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಉಣಕಲ್‍ನಲ್ಲಿರುವ ಖಾಸಗಿ ಹೋಟೆಲ್‍ನಲ್ಲಿ ಹಾಡಹಗಲೇ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಸದ್ಯ ಇಬ್ಬರು ಆರೋಪಿಗಳನ್ನು ಪೊಲೀಸರು ಬುಧವಾರವೇ ಬಂಧಿಸಿದ್ದು, ಈ ಸಂಬಂಧ ತೀವ್ರ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್‌ – ಗುರೂಜಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು

    Live Tv
    [brid partner=56869869 player=32851 video=960834 autoplay=true]

  • ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್‌ – ಗುರೂಜಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು

    ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್‌ – ಗುರೂಜಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು

    ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯನ್ನು ಇಬ್ಬರು ಸೇರಿ ಹತ್ಯೆ ಮಾಡಿದ್ದಲ್ಲ. 20 ರಿಂದ 25 ಜನರ ತಂಡ ಸೇರಿ ಕೊಲೆಯ ಸ್ಕೆಚ್‌ ಹಾಕಿದ್ದ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ.

    ಹೌದು. ಮಂಗಳವಾರ ಮಧ್ಯಾಹ್ನ ಮಹಾಂತೇಶ್, ಮಂಜುನಾಥ ಇಬ್ಬರು ಹುಬ್ಬಳ್ಳಿ ಹೋಟೆಲ್‌ನಲ್ಲಿ ಗುರೂಜಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆದರೆ ಈ ಹತ್ಯೆಯ ಹಿಂದೆ ಒಂದು ತಂಡವೇ ಕೆಲಸ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

    ದ್ವೇಷಕ್ಕೆ ಕಾರಣ ಏನು?
    ಮಹಾಂತೇಶ್ 2008ರಲ್ಲಿ ಗುರೂಜಿ ಅವರ ಚಂದ್ರಶೇಖರ ಗೌರಿ ಪರಿವಾರ ಪ್ರೈವೇಟ್‌ ಲಿಮಿಟೆಡ್‌ ಕಂಪನಿಯ ಕೆಲಸಕ್ಕೆ ಸೇರಿಕೊಳ್ಳುತ್ತಾನೆ. ಕೆಲಸದ ಕೌಶಲ್ಯ ಮತ್ತು ಸಾಮರ್ಥ್ಯ ಕಂಡು ಈತನನ್ನು ಮುಂಬೈ  ಬ್ರ್ಯಾಂಚ್‌  ಒಂದರ ಮುಖ್ಯಸ್ಥನನ್ನಾಗಿ ಗುರೂಜಿ ನೇಮಕ ಮಾಡುತ್ತಾರೆ. ತನಗೆ ನೀಡಿದ ಜವಾಬ್ದಾರಿಯನ್ನು ದುರುಪಯೋಗ ಪಡಿಸಿಕೊಂಡ ಈತ ಗುರೂಜಿ ಅವರ ಸಲಹೆ ಪಡೆಯಲು ಬರುವವರ ಜೊತೆಗೆ ನೇರವಾಗಿ ವ್ಯವಹಾರ ಮಾಡಲು ಆರಂಭಿಸುತ್ತಾನೆ. ಇದನ್ನೂ ಓದಿ: ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಸರಳವಾಸ್ತು ಮಾಡಿಕೊಡಿಕೊಳ್ಳಲು ನಿಗದಿಪಡಿಸಿದ ಶುಲ್ಕವನ್ನು ಕಂಪನಿಗೆ ನೀಡದೇ ತಾನೇ ಗುಳುಂ ಮಾಡುತ್ತಾನೆ. ಇದೇ ಸಮಯದಲ್ಲಿ ಮಹಾಂತೇಶ್‌ಗೆ ಮಂಜುನಾಥನ ಪರಿಚಯವಾಗುತ್ತದೆ. ಕೊನೆಗೆ ಮಂಜುನಾಥ ಮತ್ತು ಇತನ ಜೊತೆಗೆ ಇನ್ನು ಹಲವು ಮಂದಿ ಮೋಸ ಮಾಡಿರುವ ವಿಚಾರ ಗುರೂಜಿಗೆ ತಿಳಿಯುತ್ತದೆ. ಇವರ ಮೇಲೆ ಸಿಟ್ಟಾದ ಗುರೂಜಿ ಮಹಾಂತೇಶ್‌ ತಂಡದಲ್ಲಿದ್ದ 20 ರಿಂದ 25 ಮಂದಿಯನ್ನು 2016ರಲ್ಲಿ ಕೆಲಸದಿಂದಲೇ ತೆಗೆದು ಹಾಕುತ್ತಾರೆ. ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಗುರೂಜಿ ಮೇಲೆ ಇವರಿಗೆ ದ್ವೇಷ ಆರಂಭವಾಗುತ್ತದೆ.

    ಕಿರಾಣಿ ಅಂಗಡಿಯಲ್ಲಿ ನಷ್ಟ:
    ಕೆಲಸ ಬಿಟ್ಟ ಬಳಿಕ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಮಹಾಂತೇಶ್ ಕಿರಾಣಿ ಅಂಗಡಿ ತೆರೆದಿದ್ದ. 2018 ರಿಂದ ಒಂದು ವರ್ಷಗಳ ಕಾಲ ಕಿರಾಣಿ ಅಂಗಡಿ ನಡೆಸಿದ್ದರೂ ನಷ್ಟ ಅನುಭವಿಸಿದ್ದ. ಇದಾದ ಬಳಿಕ ಮಹಾಂತೇಶ್‌ ರಿಯಲ್‌ ಎಸ್ಟೇಟ್‌ ವ್ಯವಹಾರ ಮಾಡಲು ಮುಂದಾದ. ಮಹಾಂತೇಶನ ರಿಯಲ್‌ ಎಸ್ಟೇಟ್‌ ವ್ಯವಹಾರಕ್ಕೆ ಮಂಜುನಾಥನೂ ಸಹಕಾರ ನೀಡಿದ್ದ. ಇವರಿಬ್ಬರೂ ಸೇರಿ ಹುಬ್ಬಳ್ಳಿಯ ಖಾಸಗಿ ಕಟ್ಟಡದಲ್ಲಿ ರಿಯಲ್‌ ಎಸ್ಟೇಟ್‌ ಕಂಪನಿಯನ್ನು ತೆರೆದಿದ್ದರು. ಹುಬ್ಬಳ್ಳಿ, ಧಾರವಾಡ, ಜಮಖಂಡಿ, ಮುಧೋಳದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಮಾಡುತ್ತಿದ್ದರು. ಆದರೆ ಈ ವ್ಯವಹಾರ ನಷ್ಟವಾಗಿತ್ತು. ಇದರಿಂದ ಇಬ್ಬರು ಭಾರೀ ಪ್ರಮಾಣದಲ್ಲಿ ಆರ್ಥಿಕ ನಷ್ಟವನ್ನು ಅನುಭವಿಸಿದ್ದರು. ಈ ಆರ್ಥಿಕ ನಷ್ಟವನ್ನು ಸರಿಪಡಿಸಲು ಹೂಡಿದ ಕುತಂತ್ರವೇ ಬ್ಲ್ಯಾಕ್‌ಮೇಲ್‌. ಚಂದ್ರಶೇಖರ ಗುರೂಜಿ ಅವರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಸುಲಿಗೆ ಮಾಡಲು ಇವರಿಬ್ಬರು ಮುಂದಾಗಿದ್ದರು. ಈ ಕುತಂತ್ರಕ್ಕೆ ಚಂದ್ರಶೇಖರ ಗುರೂಜಿ ಬಗ್ಗಿರಲಿಲ್ಲ.

    ಬ್ಲ್ಯಾಕ್‌ಮೇಲ್‌ ಹೇಗೆ?
    ಚಂದ್ರಶೇಖರ ಗುರೂಜಿ ಹುಬ್ಬಳ್ಳಿ ವಿಮಾನ ನಿಲ್ದಾಣದ ರಸ್ತೆಯ ಡೆಕತ್ಲಾನ್ ಶೋರೂಂ ಹಿಂದೆ ʼಗೋಕುಲʼ ಹೆಸರಿನಲ್ಲಿ ಅಪಾರ್ಟ್‌ಮೆಂಟ್‌ ಕಟ್ಟಿಸಿದ್ದರು. ಆರಂಭದಲ್ಲಿ ಈ ಅಪಾರ್ಟ್‌ಮೆಂಟ್‌ ಗುರೂಜಿಯವರ ಬೇನಾಮಿ ಆಸ್ತಿಯಾಗಿದ್ದು ಮಹಾಂತೇಶ್‌ ಪತ್ನಿಯ ಹೆಸರಿನಲ್ಲಿ ನಿರ್ಮಿಸಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಈ ಆಸ್ತಿ ಬೇನಾಮಿ ಆಗಿರಲಿಲ್ಲ. ಗುರೂಜಿ ಅವರ ಸ್ವಂತ ಆಸ್ತಿಯಾಗಿದ್ದು ಈ ಅಪಾರ್ಟ್‌ಮೆಂಟ್‌ನಲ್ಲಿ ಮಹಾಂತೇಶ್‌ ಪತ್ನಿ ಜೊತೆ ವಾಸವಾಗಿದ್ದ.

    ಈ ಅಪಾರ್ಟ್‌ಮೆಂಟ್‌ ವಿಚಾರವಾಗಿ ಮಹಾಂತೇಶ್‌ ಮತ್ತು ಮಂಜುನಾಥ ಕಾನೂನು ಸಮರಕ್ಕೆ ಇಳಿದಿದ್ದರು. ಅಪಾರ್ಟ್‌ಮೆಂಟ್‌ ಸರಿಯಾಗಿ ನಿರ್ಮಾಣಗೊಂಡಿಲ್ಲ, ಪಾರ್ಕಿಂಗ್‌ಗೆ ಜಾಗವಿಲ್ಲ, ಮಳೆ ನೀರು ಸರಿಯಾಗಿ ಹೋಗುತ್ತಿಲ್ಲ, ಸೋಲಾರ್‌ ವ್ಯವಸ್ಥೆ ಇಲ್ಲ ಎಂದು ಆರೋಪಿಸಿ ಧಾರವಾಡ ಗ್ರಾಹಕ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು. ಈ ವಿಚಾರವಾಗಿ ಗುರೂಜಿ ಪ್ರಶ್ನೆ ಮಾಡಿದಾಗ ಹಣವನ್ನು ನೀಡಿದರೆ ದೂರನ್ನು ಹಿಂಪಡೆಯುವುದಾಗಿ ತಿಳಿಸಿದ್ದರು. ಅಷ್ಟೇ ಅಲ್ಲದೇ ಹಣ ನೀಡದೇ ಇದ್ದರೆ ಹತ್ಯೆ ಮಾಡುವುದಾಗಿ ಬೆದರಿಕೆ ಸಹ ಹಾಕಿದ್ದರು. ಆದರೆ ಗುರೂಜಿ ಹಂತಕರ ಜೀವ ಬೆದರಿಕೆ ಮತ್ತು ಬ್ಲ್ಯಾಕ್‌ಮೇಲ್‌ಗೆ ಬಗ್ಗಿರಲಿಲ್ಲ. ಹಣ ನೀಡದ್ದಕ್ಕೆ ಸಿಟ್ಟಾಗಿದ್ದ ಇವರು ಗುರೂಜಿ ವಿರುದ್ಧ ದ್ವೇಷ ಸಾಧಿಸಲು ಮುಂದಾಗುತ್ತಿದ್ದರು. ಯಾವುದೇ ಬೆದರಿಕೆಗೆ ಜಗ್ಗದ ಕಾರಣ ಸಿಟ್ಟಾಗಿದ್ದ ಇವರು ಪೂರ್ವ ತಯಾರಿ ಮಾಡಿಕೊಂಡು ಬಂದು ಮಂಗಳವಾರ ಮಧ್ಯಾಹ್ನ ಕೊಲೆ ಮಾಡಿದ್ದಾರೆ.

     

    ಎಫ್‌ಐಆರ್‌ ದಾಖಲು:
    ಗುರೂಜಿ ಸಂಬಂಧಿ ಸಂಜಯ್‌ ಅಂಗಡಿ ಎಂಬವರು ನೀಡಿದ ದೂರಿನ ಆಧಾರದಲ್ಲಿ ವಿದ್ಯಾನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 34(ಏಕೋದ್ದೇಶಕ್ಕಾಗಿ ಹಲವು ವ್ಯಕ್ತಿಗಳು ಮಾಡಿದ ಕೃತ್ಯ), 302(ಕೊಲೆ) ಅಡಿ ಎಫ್‌ಐಆರ್‌ ದಾಖಲಾಗಿದೆ.

    ಮಂಗಳವಾರ ಹೋಟೆಲ್‌ಗೆ ಬಂದಿದ್ದ ಮಹಾಂತೇಶ್‌ ಮತ್ತು ಮಜಂಜುನಾಥ್‌ ಅಪಾರ್ಟ್‌ಮೆಂಟ್‌ ವಿಚಾರ ಸಂಬಂಧ ಮಾತನಾಡಲು ಬನ್ನಿ ಎಂದು ಗುರೂಜಿ ಅವರನ್ನು ಕರೆದು ಹತ್ಯೆ ಮಾಡಿದ್ದಾರೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಗುರೂಜಿಯನ್ನು ನಾವು ದೇವರಂತೆ ಕಾಣುತ್ತಿದ್ದೆವು: ವನಜಾಕ್ಷಿ

    ಹುಬ್ಬಳ್ಳಿ: ಗುರೂಜಿ ಅವರನ್ನು ದೇವರಂತೆ ಕಾಣುತ್ತಿದ್ದೆವು ಎಂದು ಹೇಳುವ ಮೂಲಕ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಭೀಕರ ಹತ್ಯೆಗೆ ಹಂತಕ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಮರುಕ ವ್ಯಕ್ತಪಡಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಹಂತಕ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಅವರು, ನನ್ನ ಪತಿ ಹೀಗೆ ಮಾಡುತ್ತಾರೆ ಎಂದು ಕನಸ್ಸಿನಲ್ಲಿಯೂ ಕೂಡ ಅಂದುಕೊಂಡಿರಲಿಲ್ಲ. ಗುರೂಜಿ ನಮ್ಮನ್ನು ಬಹಳ ಚೆನ್ನಾಗಿ ನೋಡಿಕೊಂಡಿದ್ದರು. ಕೆಲಸ ಮಾಡುವ ಪ್ರತಿಯೊಬ್ಬರನ್ನು ಕೂಡ ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಇಲ್ಲಿವರೆಗೂ ಯಾವತ್ತು ಯಾರಿಗೂ ಗುರೂಜಿ ಮೋಸ ಮಾಡಿಲ್ಲ ಎಂದಿದ್ದಾರೆ.  ಇದನ್ನೂ ಓದಿ: ಸರಳವಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಗುರೂಜಿ ನಮ್ಮ ಮನೆಯ ದೇವರು, ನಮ್ಮ ತಂದೆ ತರಹ. ಗುರೂಜಿ ನನಗೆ ಯಾವುದೇ ಆಸ್ತಿ ನೀಡಿಲ್ಲ. ಅಪಾರ್ಟ್‍ಮೆಂಟ್ ಕೂಡ ಗುರೂಜಿ ಅವರ ಹೆಸರಿನಲ್ಲಿದೆ. ಆದರೆ ಒಂದು ಫ್ಲಾಟ್ ಮಾತ್ರ ನಮ್ಮದಾಗಿದೆ. ಅದನ್ನು 20 ಲಕ್ಷ ರೂಪಾಯಿ ಸಾಲ ಮಾಡಿ ಖರೀದಿಸಿದ್ದೇವೆ. ನನ್ನ ಮತ್ತು ಗಂಡನ ಹೆಸರಿನಲ್ಲಿ ಯಾವುದೇ ಬೇನಾಮಿ ಆಸ್ತಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: 60 ಬಾರಿ ಚುಚ್ಚಿ ಚುಚ್ಚಿ ಕೊಂದ ಪಾತಕಿಗಳು- ಬುಧವಾರ ಹುಬ್ಬಳ್ಳಿಯಲ್ಲೇ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    ಈ ಘಟನೆಗೂ ಮುನ್ನ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ನನ್ನ ಪತಿ 3 ದಿನದಿಂದ ಮನೆಗೆ ಬಂದಿರಲಿಲ್ಲ. ಹತ್ಯೆ ಮಾಡುವ ಮಟ್ಟಿಗೆ ನನ್ನ ಗಂಡ ಇಳಿಯುತ್ತಾನೆಂದು ಅಂದುಕೊಂಡಿರಲಿಲ್ಲ ಅಂತ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸರಳವಾಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಸರಳವಾಸ್ತು ಗುರೂಜಿ ಹೆಸರು ಹೇಳಿ ಆಸ್ತಿ ಮಾಡಲು ಮುಂದಾಗಿದ್ದ ಹಂತಕರು

    ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯನ್ನು ಇಷ್ಟು ಬಾರಿ ಇರಿದು ಹತ್ಯೆ ಮಾಡುವ ಹಿಂದೆ ಯಾವ ದ್ವೇಷ ಇತ್ತು ಎಂಬುದರ ಬಗ್ಗೆ ತನಿಖೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಬೇನಾಮಿ ಆಸ್ತಿ ವಿಚಾರವೇ ಕೊಲೆಗೆ ಪ್ರಮುಖ ಕಾರಣ ಎಂಬ ವಿಚಾರ ಬೆಳಕಿಗೆ ಬಂದಿದೆ.

    ಗುರೂಜಿ ಅವರು ಹುಬ್ಬಳ್ಳಿ, ಕಲಘಟಗಿ ಸೇರಿ ಹಲವೆಡೆ ಆಪ್ತ ಬಳಗದ ಮೂಲಕ ಅಪಾರ್ಟ್‌ಮೆಂಟ್‌, ಶಾಲೆ ಸೇರಿದಂತೆ ವಿವಿಧ ರಿಯಲ್ ಎಸ್ಟೇಟ್ ಬಿಸಿನೆಸ್ ಮಾಡುತ್ತಿದ್ದರು. ಕೊಲೆಗಾರರಾದ ಮಹಾಂತೇಶ್, ಮಂಜುನಾಥ್ ಇಬ್ಬರೂ ಗುರೂಜಿ ಅವರ ನಂಬಿಕಸ್ಥರಾಗಿದ್ದರು. ಇಬ್ಬರ ಹೆಸರಲ್ಲೂ ಗುರೂಜಿ ಆಸ್ತಿ ಮಾಡಿದ್ದರು ಎಂಬ ವಿಚಾರ ಈಗ ಮೂಲಗಳಿಂದ ಲಭ್ಯವಾಗಿದೆ.

    ಗುರೂಜಿಗಳ ಜೊತೆಗಿನ ಆಪ್ತತೆಯನ್ನು ದುರ್ಬಳಕೆ ಮಾಡಿಕೊಂಡಿದ್ದ ಹಂತಕರು, ಗುರೂಜಿ ಹೆಸರು ಹೇಳಿಕೊಂಡು ತಾವು ಕೂಡ ಆಸ್ತಿ ಮಾಡಲು ಮುಂದಾಗಿದ್ದರು. ಇದನ್ನು ಅರಿತ ಚಂದ್ರಶೇಖರ್ ಗುರೂಜಿ ಇಬ್ಬರನ್ನೂ ಕೆಲಸದಿಂದ ತೆಗೆದು ಹಾಕಿದ್ದರು. ಅಷ್ಟೇ ಅಲ್ಲದೇ ಗುರೂಜಿ ಬಳಿಯಿದ್ದ ಕೆಲ ಆಸ್ತಿಯನ್ನು ಇವರು ಮಾರಾಟ ಮಾಡಿದ್ದರು. ಅವರ ಹೆಸರಿನಲ್ಲಿ ಮಾಡಿದ್ದ ಆಸ್ತಿ ಹಿಂತಿರುಗಿಸುವ ವಿಚಾರದಲ್ಲಿ ವಾಕ್ಸಮರ ನಡೆದಿತ್ತು. ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ಗುರೂಜಿ ಹತ್ಯೆ ಪ್ರಕರಣ- ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಹಂತಕರಿಗೆ ಬೇಡಿ ತೊಡಿಸಿದ ಖಾಕಿ

    ಅಂದಹಾಗೆ, ಹಂತಕರಲ್ಲಿ ಒಬ್ಬನಾದ ಮಹಾಂತೇಶ್ ಶಿರೂರು ಕಲಘಟಗಿ ತಾಲೂಕಿನ ದುಮ್ಮವಾಡ ಗ್ರಾಮದವನು. ಸರಳವಾಸ್ತು ಸಂಸ್ಥೆಯ ಪ್ರತಿನಿಧಿಯಾಗಿ 2008ರಲ್ಲಿ ಕೆಲಸಕ್ಕೆ ಸೇರಿದ ಈತ ಸರಳ ವಾಸ್ತುವಿನ ಒಬ್ಬ ಪ್ರತಿನಿಧಿಯಾಗಿ ಬೆಳೆದಿದ್ದ. ಬಳಿಕ ಕರ್ನಾಟಕ ರಾಜ್ಯದ, ದೇಶದ ಪ್ರತಿನಿಧಿಗಳ ಮುಖ್ಯಸ್ಥನ್ನಾಗಿ ಬಡ್ತಿ ಹೊಂದಿದ್ದ.


    ಹುಬ್ಬಳ್ಳಿಯ ಸರಳವಾಸ್ತು ಕಚೇರಿಯಲ್ಲಿ ವನಜಾಕ್ಷಿ ಎಂಬಾಕೆ ಪರಿಚಯವಾಗಿ, ಪ್ರೇಮಾಂಕುರವಾಗಿತ್ತು. ಗುರೂಜಿಯೇ ಮುಂದೆ ನಿಂತು 2013ರಲ್ಲಿ ಮದುವೆ ಮಾಡಿಸಿದ್ದರು. ಗುರೂಜಿ ನಿರ್ಮಿಸಿರುವ `ಗುರೂಜಿ ಗೋಕುಲ’ ಎಂಬ ಅಪಾರ್ಟ್ಮೆಂಟ್‌ನಲ್ಲೇ ವಾಸವಾಗಿದ್ದರು.

    2006ರಲ್ಲಿ ಮಹಾಂತೇಶ, 2019ರಲ್ಲಿ ಪತ್ನಿ ವನಜಾಕ್ಷಿ ಕೂಡ ಸರಳವಾಸ್ತು ಕಂಪನಿಯಿಂದ ಹೊರಬಿದ್ದಿದ್ದರು. ಈ ಅಪಾರ್ಟ್‌ಮೆಂಟ್‌ ಒಡೆತನದ ಬಗ್ಗೆ ಪೊಲೀಸರು ತನಿಖೆ ಶುರು ಮಾಡಿದ್ದಾರೆ. ಮೂಲಗಳ ಪ್ರಕಾರ ಈ ಆಸ್ತಿಯನ್ನು ಗುರೂಜಿ ವಾಪಸ್ ಕೇಳಿಯೇ ಇರಲಿಲ್ಲ. ಹಾಗಿದ್ದರೂ ಸಹ ಗುರೂಜಿ ಹತ್ಯೆ ಮಾಡುವಷ್ಟು ದ್ವೇಷ ಬೆಳೆದಿದ್ದು ಯಾಕೆ? ಬೇನಾಮಿಗೂ ಮೀರಿದ ವಿಚಾರಕ್ಕೆ ಗುರೂಜಿ ಹತ್ಯೆ ಆಯ್ತಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಗುರೂಜಿ ಹತ್ಯೆ ಪ್ರಕರಣ- ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಹಂತಕರಿಗೆ ಬೇಡಿ ತೊಡಿಸಿದ ಖಾಕಿ

    ಗುರೂಜಿ ಹತ್ಯೆ ಪ್ರಕರಣ- ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಹಂತಕರಿಗೆ ಬೇಡಿ ತೊಡಿಸಿದ ಖಾಕಿ

    ಬೆಳಗಾವಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹಂತಕರನ್ನು ಸಿನಿಮೀಯ ಸ್ಟೈಲ್‍ನಲ್ಲಿ ಬಂಧಿಸಲಾಗಿದೆ.

    ಘಟನೆ ನಡೆದ ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾರಲ್ಲಿ ಮುಂಬೈಗೆ ಎಸ್ಕೇಪ್ ಆಗುತ್ತಿದ್ದ ಇಬ್ಬರು ಹಂತಕರಾದ ಧಾರವಾಡದ ಮಹಂತೇಶ್ ಶಿರೂರ ಮತ್ತು ಕಲಘಟಗಿಯ ಮಂಜುನಾಥ್‍ನನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    ಮೊಬೈಲ್ ಲೋಕೇಷನ್ ಆಧರಿಸಿ ಬೆನ್ನಟ್ಟಿದ ಪೊಲೀಸರು ಆರೋಪಿಗಳು ಎಸ್ಕೇಪ್ ಆಗದಂತೆ ಸುತ್ತುವರಿದಿದ್ದಾರೆ. ರಸ್ತೆಗೆ ಅಡ್ಡಲಾಗಿ ಜೆಸಿಬಿಗಳು ನಿಂತಿದ್ದರಿಂದ ಆರೋಪಿಗಳು ಎಸ್ಕೇಪ್ ಆಗಲು ಸಾಧ್ಯವಾಗದೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು ಓಡಲು ಪ್ರಶ್ನಿಸಿದಾಗ ರಾಮದುರ್ಗ ಡಿವೈಎಸ್ಪಿ ಶೂಟೌಟ್ ಮಾಡೋ ಎಚ್ಚರಿಕೆ ನೀಡಿ ಅರೆಸ್ಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಮಹಂತೇಶ್ ಶಿರೂರ ಪತ್ನಿ ವನಜಾಕ್ಷಿಯನ್ನು ಪೊಲೀಸ್ರು ಬಂಧಿಸಿದ್ರು. ಮುಂಬೈನಿಂದ ಕುಟುಂಬಸ್ಥರು ಹುಬ್ಬಳ್ಳಿಗೆ ಧಾವಿಸಿದ್ದು, ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ರಸ್ತೆಯ ಫಾರಂಹೌಸ್‍ನಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ನಡೆಯಲಿದೆ. ಸರಳವಾಸ್ತು ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಗುರೂಜಿ ಹುಬ್ಬಳ್ಳಿ ಹೋಟೆಲ್‌ಗೆ ಹೋಗಿದ್ದು ಯಾಕೆ?

    ನಡೆದಿದ್ದೇನು..?: 
    ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ಭೀಕರವಾಗಿ ಕೊಲ್ಲಲಾಗಿದೆ. 58 ವರ್ಷದ ಚಂದ್ರಶೇಖರ್ ಗುರೂಜಿಯನ್ನು ಭೇಟಿ ಮಾಡಲು ಬಂದ ಅವರ ಮಾಜಿ ಆಪ್ತ ಸಹಾಯಕರು ಈ ಕೃತ್ಯ ಎಸಗಿದ್ದಾರೆ. ಇಂದು ಮಧ್ಯಾಹ್ನ 12.23ರ ಸಮಯಲ್ಲಿ ಹೋಟೆಲ್ ರೂಂನಿಂದ ರಿಸೆಪ್ಶನ್‍ಗೆ ಬಂದ ಚಂದ್ರಶೇಖರ ಗುರೂಜಿ ಪಾದಕ್ಕೆ ಒಬ್ಬ ನಮಸ್ಕರಿಸುವ ಹೊತ್ತಲ್ಲೇ ಅಲ್ಲೇ ನಿಂತಿದ್ದ ಇನ್ನೊಬ್ಬ ಗುರೂಜಿ ಎದೆಗೆ ಚಾಕು ಹಾಕಿದ್ದ. ಇದನ್ನೂ ಓದಿ: ಚಂದ್ರಶೇಖರ್‌ ಗುರೂಜಿ ಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್‌

    ನಂತರ ಇಬ್ಬರೂ ಸೇರಿಕೊಂಡು ಕೇವಲ 40 ಸೆಕೆಂಡ್‍ಗಳ ಅಂತರದಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ, ಕತ್ತು ಕೊಯ್ದು ಭೀಕರವಾಗಿ ಕೊಂದಿದ್ದಾರೆ. ರಕ್ತದ ಮಡುವಿನಲ್ಲಿದ್ದ ಚಂದ್ರಶೇಖರ ಗುರೂಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹತ್ಯೆ ಬೆನ್ನಲ್ಲೇ ಇಬ್ಬರು ಹಂತಕರು ಅಲ್ಲಿಂದ ಹೊರಗೆ ಓಡಿದ್ದಾರೆ. ಈ ಎಲ್ಲಾ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.

    Live Tv
    [brid partner=56869869 player=32851 video=960834 autoplay=true]

  • ಚಂದ್ರಶೇಖರ ಗುರೂಜಿ ಹುಬ್ಬಳ್ಳಿ ಹೋಟೆಲ್‌ಗೆ ಹೋಗಿದ್ದು ಯಾಕೆ?

    ಚಂದ್ರಶೇಖರ ಗುರೂಜಿ ಹುಬ್ಬಳ್ಳಿ ಹೋಟೆಲ್‌ಗೆ ಹೋಗಿದ್ದು ಯಾಕೆ?

    ಹುಬ್ಬಳ್ಳಿ: `ಸರಳ ವಾಸ್ತು’ ಖ್ಯಾತಿಯ ಜ್ಯೋತಿಷಿ ಚಂದ್ರಶೇಖರ್ ಗುರೂಜಿ ಅವರನ್ನು ಇಂದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹುಬ್ಬಳ್ಳಿಯ ಹೋಟೆಲ್‌ನಲ್ಲಿ ಕಾಲಿಗೆ ಅಡ್ಡಬಿದ್ದು ನಮಸ್ಕಾರ ಮಾಡುವ ನೆಪದಲ್ಲಿ ಬಂದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

    ಗುರೂಜಿ ಹುಬ್ಬಳ್ಳಿಗೆ ತೆಳಿದ್ದು ಯಾಕೆ?
    ಕಳೆದ ಎರಡು ದಿನಗಳ ಹಿಂದೆಯಷ್ಟೇ ಚಂದ್ರಶೇಖರ್ ಗುರೂಜಿ ಅವರ ಅಣ್ಣನ ಮಗು ಸಾವನ್ನಪ್ಪಿತ್ತು. ಮೊಮ್ಮಗುವಿನ ಸಾವಿನಿಂದಲೇ ಇಡೀ ಕುಟುಂಬ ದುಃಖತಪ್ತವಾಗಿತ್ತು. ಮೊಮ್ಮಗುವನ್ನು ನೋಡುವುದಕ್ಕಾಗಿಯೇ ಗುರೂಜಿ ಶುಕ್ರವಾರ ಹುಬ್ಬಳ್ಳಿಗೆ ತೆರಳಿ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದರು. ತಮ್ಮ 2ನೇ ಪತ್ನಿಯೂ ಅದೇ ಹೋಟೆಲ್ ರೂಂನಲ್ಲಿದ್ದರು. ಇದನ್ನೂ ಓದಿ: ಗುರೂಜಿ ಹತ್ಯೆ ಹಿಂದೆ ಬೇನಾಮಿ ಅಪಾರ್ಟ್‌ಮೆಂಟ್‌ ಆಸ್ತಿ ಗಲಾಟೆ? – ಆಪ್ತನ ಪತ್ನಿ ಬಂಧನ

    ಮೊದಲ ಪತ್ನಿಯ ಸಾವಿನ ಬಳಿಕ ಗುರೂಜಿ 2ನೇ ಮದುವೆಯಾಗಿದ್ದರು. ಮೊದಲ ಪತ್ನಿಯ ಮಗಳು ಮುಂಬೈನಲ್ಲಿ ವಾಸವಾಗಿದ್ದಾರೆ. ಗುರೂಜಿ ಒಟ್ಟು 4 ದಿನಗಳಿಗೆ ರೂಂ ಪಡೆದಿದ್ದರು. ರೂಂ ನಂಬರ್ 220ರಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ತಮ್ಮ ಮೊಮ್ಮಗುವಿನ ಕಾರ್ಯ ಮುಗಿಸಿ ಹೋಟೆಲ್‌ನಲ್ಲೇ ತಂಗಿದ್ದರು. ಇಂದು ಅಥವಾ ನಾಳೆ ರೂಂ ಖಾಲಿ ಮಾಡಿ ತಮ್ಮ ಮಗಳನ್ನು ನೋಡಲು ಮುಂಬೈಗೆ ತೆರಳಲು ಮುಂದಾಗಿದ್ದರು. ಇದನ್ನೂ ಓದಿ: ದೆಹಲಿ ಪೊಲೀಸರಿಂದ ಸಂಸದ ತೇಜಸ್ವಿ ಸೂರ್ಯ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಗುರೂಜಿ ಹತ್ಯೆ ಹಿಂದೆ ಬೇನಾಮಿ ಅಪಾರ್ಟ್‌ಮೆಂಟ್‌ ಆಸ್ತಿ ಗಲಾಟೆ? – ಆಪ್ತನ ಪತ್ನಿ ವಶಕ್ಕೆ

    ಗುರೂಜಿ ಹತ್ಯೆ ಹಿಂದೆ ಬೇನಾಮಿ ಅಪಾರ್ಟ್‌ಮೆಂಟ್‌ ಆಸ್ತಿ ಗಲಾಟೆ? – ಆಪ್ತನ ಪತ್ನಿ ವಶಕ್ಕೆ

    ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಬೇನಾಮಿ ಆಸ್ತಿ ವಿಚಾರಕ್ಕೆ ಈ ಹತ್ಯೆ ನಡೆದಿದ್ಯಾ ಎಂಬ ಪ್ರಶ್ನೆ ಎದ್ದಿದೆ.

    ಆಪ್ತ ಮಹಾಂತೇಶ್‌ನಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಸಿಸಿಟಿವಿ ಆಧಾರದಲ್ಲಿ ಮಹಾಂತೇಶ್‌ನನ್ನು ಗುರುತಿಸಲಾಗಿದ್ದು, ಈಗ ಮಹಾಂತೇಶ್‌ ಪತ್ನಿ ವನಜಾಕ್ಷಿಯನ್ನು ವಶಕ್ಕೆ ಪಡೆದಿದ್ದಾರೆ.

    ಗೋಕುಲ ರೋಡ್ ಠಾಣೆ ಪೊಲೀಸರು ವನಜಾಕ್ಷಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನ 12:23ಕ್ಕೆ ಗುರೂಜಿ ಅವರನ್ನು ಹತ್ಯೆ ಮಾಡಿದ ಬಳಿಕ ಮಹಾಂತೇಶ್‌ ಸ್ನೇಹಿತ ಮಂಜುನಾಥನೊಂದಿಗೆ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ


    ಹತ್ಯೆ ಮಾಡಿದ್ದು ಯಾಕೆ?
    ವನಜಾಕ್ಷಿ ಸರಳವಾಸ್ತು ಸಂಸ್ಥೆಯ ಮಾಜಿ ಉದ್ಯೋಗಿಯಾಗಿದ್ದಾಳೆ. ಈ ಹಿಂದೆ ಗುರೂಜಿ ವನಜಾಕ್ಷಿ ಹೆಸರಿನಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆ ಬಳಿಯ ಅಪಾರ್ಟ್‌ಮೆಂಟ್‌ ನಿರ್ಮಿಸಿದ್ದರು. ಈ ಬೇನಾಮಿ ಆಸ್ತಿಯನ್ನು ಗುರೂಜಿ ವಾಪಸ್‌ ಕೇಳಿದ್ದರು. ಈ ವಿಚಾರ ಅಲ್ಲದೇ ಹಣಕಾಸಿನ ವಿಚಾರವಾಗಿ ಕೆಲ ದಿನಗಳಿಂದ ಮಹಾಂತೇಶ್‌ ಮಧ್ಯೆ ಗಲಾಟೆ ನಡೆಯುತ್ತಿತ್ತು. ಇಂದು ಇದು ವಿಕೋಪಕ್ಕೆ ತಿರುಗಿ ಗುರೂಜಿ ಕೊಲೆಯಲ್ಲಿ ಅಂತ್ಯವಾಗಿರಬಹುದು ಎಂಬ ಪ್ರಾಥಮಿಕ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

    ಸ್ವಾಮೀಜಿ ಯಾರನ್ನು ದ್ವೇಷಿಸುತ್ತಿರಲಿಲ್ಲ. ಯಾರ ಮೇಲೂ ದ್ವೇಷ ಇರಲಿಲ್ಲ. ಕೊಲೆ ವಿಚಾರವನ್ನು ಕೇಳಿ ಶಾಕ್‌ ಆಗಿದೆ ಎಂದು ಗುರೂಜಿ ಕಚೇರಿಯ ಸಿಬ್ಬಂದಿ ಸದಾನಂದ ಹೇಳಿಕೆ ನೀಡಿದ್ದಾರೆ.

    ಸಾವಿರಾರು ಕೋಟಿ ಆಸ್ತಿಗೆ ಒಡೆಯರಾಗಿದ್ದ ಚಂದ್ರಶೇಖರ ಗುರೂಜಿ ಅವರಿಗೆ ದೇಶ, ವಿದೇಶಗಳಲ್ಲೂ ಭಕ್ತರಿದ್ದಾರೆ. ಮುಂಬೈನಲ್ಲೂ ತನ್ನ ಕಚೇರಿಯನ್ನು ತೆರೆದಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ

    ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ

    ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್‌ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಭಕ್ತರ ಸೋಗಿನಲ್ಲಿ ಬಂದ ಇಬ್ಬರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಪರಿಚಯಸ್ಥರಿಂದಲೇ ಈ ಹತ್ಯೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

    ಹತ್ಯೆ ಹೇಗಾಯ್ತು?
    ಚಂದ್ರಶೇಖರ್‌ ಗುರೂಜಿ ಇಂದು ಹೋಟೆಲಿನಲ್ಲಿ ತಂಗಿದ್ದರು. ಹೋಟೆಲಿನಲ್ಲಿ ತಂಗಿದ್ದ ಇವರನ್ನು ಕರೆ ಮಾಡಿದ ಇಬ್ಬರು ರಿಸೆಪ್ಶನಿಸ್ಟ್‌ ಜಾಗಕ್ಕೆ ಬರಲು ಹೇಳಿದ್ದಾರೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯಕ್ಕೆ ಎರಡೂವರೆ ವರ್ಷದ ಮಗು ಸಾವು

    ಗುರೂಜಿ ಇವರ ಬಳಿ ಬರುತ್ತಿದ್ದಂತೆ ಇಬ್ಬರು ಎದ್ದು ನಿಂತಿದ್ದಾರೆ. ಗುರೂಜಿ ಕುಳಿತ ಬಳಿಕ ಒಬ್ಬ ಆಶೀರ್ವಾದ ಪಡೆಯುವ ನಾಟಕ ಮಾಡಿದ್ದರೆ ಮತ್ತೊಬ್ಬ ನಿಂತಿದ್ದ. ಕೆಲ ಕ್ಷಣದಲ್ಲೇ ಮುಂದುಗಡೆ ನಿಂತಿದ್ದ ಯುವಕ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಮತ್ತೊಬ್ಬ ಚಾಕುವಿನಿಂದ ಇರಿದಿದ್ದಾನೆ. ನಂತರ ಇಬ್ಬರು ಮನ ಬಂದಂತೆ ಇರಿದು ಬರ್ಬರವಾಘಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಒಟ್ಟು 20 ಸೆಕೆಂಡ್‌ನಲ್ಲಿ 60 ಬಾರಿ ಚಾಕುವಿನಿಂದ ಇರಿಯಲಾಗಿದೆ.

    Live Tv
    [brid partner=56869869 player=32851 video=960834 autoplay=true]