Tag: ಚಂದ್ರ ಆರ್ಯ

  • ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಕೆನಡಾ ಚುನಾವಣೆ| ಮೋದಿಯನ್ನು ಭೇಟಿಯಾಗಿದ್ದಕ್ಕೆ ಚಂದ್ರ ಆರ್ಯಗೆ ಟಿಕೆಟ್‌ ಮಿಸ್‌

    ಒಟ್ಟಾವಾ: ಕೆನಡಾದಲ್ಲಿ(Canada Election) ಅಧಿಕಾರದಲ್ಲಿರುವ ಲಿಬರಲ್ ಪಾರ್ಟಿ ಭಾರತದ (India) ಮೇಲೆ ದ್ವೇಷ ಮುಂದುವರಿಸಿದೆ. ಖಲಿಸ್ತಾನಿಗಳ (Khalistan) ವಿರುದ್ಧ ಕಠಿಣ ನಿಲುವು ತಾಳಿದ್ದ ತುಮಕೂರು ಮೂಲದ ಸಂಸದ ಚಂದ್ರ ಆರ್ಯಗೆ (Chandra Arya) ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಲು ನಿರಾಕರಿಸಿದೆ. ಇದನ್ನೂ ಓದಿ: ಓಲಾ, ಊಬರ್ ಕ್ಯಾಬ್‍ಗಳಿಗೆ ಕೇಂದ್ರ ಸರ್ಕಾರದಿಂದ ಶಾಕ್ – ಸಹಕಾರ್ ಟ್ಯಾಕ್ಸಿ ಲೋಕಾರ್ಪಣೆಗೆ ಸಿದ್ಧತೆ

     

    ಕಳೆದ ವರ್ಷ ಭಾರತ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ಮಾಡಿದ್ದ ಬಗ್ಗೆ ಸರ್ಕಾರಕ್ಕೆ ಚಂದ್ರ ಆರ್ಯ ಮಾಹಿತಿ ನೀಡಿಲ್ಲ ಎಂಬ ನೆಪ ಹೇಳಿ ಟಿಕೆಟ್ ಕೊಟ್ಟಿಲ್ಲ. ಕೆನಡಾ ಮತ್ತು ಭಾರತ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹದೆಗೆಟ್ಟ ಕಾರಣವನ್ನೂ ನೀಡಲಾಗಿದೆ. ಇದನ್ನೂ ಓದಿ : ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ತಮ್ಮ ಮೇಲೆ ಭಾರತ ಸರ್ಕಾರದ ಪ್ರಭಾವವಿದೆ ಎಂಬ ಆರೋಪಗಳನ್ನು ಚಂದ್ರ ಆರ್ಯ ತಿರಸ್ಕರಿಸಿದ್ದಾರೆ. ಏಪ್ರಿಲ್ 28ಕ್ಕೆ ಕೆನಡಾ ಸಂಸತ್ ಚುನಾವಣೆ ನಡೆಯಲಿದೆ.

     

  • ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಕೆನಡಾ ಪ್ರಧಾನಿ ಹುದ್ದೆಗೆ ಕನ್ನಡಿಗನ ನಾಮಪತ್ರ – ಭಾಷಣದ ಕೊನೆಯಲ್ಲಿ ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದ ಚಂದ್ರ ಆರ್ಯ

    ಒಟ್ಟಾವಾ: ಕೆನಡಾದ (Canadaa) ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಲಿಬರಲ್ ಪಕ್ಷದಿಂದ ಪ್ರಧಾನಿ ಹುದ್ದೆಗೆ ಉಮೇದುವಾರಿಕೆ ಸಲ್ಲಿಸಿದ ಬಳಿಕ ಕನ್ನಡದಲ್ಲಿ (Kannada) ಮಾತನಾಡಿ ಚಂದ್ರ ಆರ್ಯ (Indian-origin MP Chandra Arya) ಗಮನ ಸೆಳೆದಿದ್ದಾರೆ.

    ಸದನವನ್ನು ಉದ್ದೇಶಿಸಿ ಆರ್ಯ ಅವರು ತಮ್ಮ ಪರಂಪರೆಯ ಬಗ್ಗೆ ಅಪಾರ ಹೆಮ್ಮೆಯಿಂದ ಮಾತನಾಡಿದರು. ಕರ್ನಾಟಕದ (Karnataka) ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದ ವ್ಯಕ್ತಿಯೊಬ್ಬರು ಕೆನಡಾದಲ್ಲಿ ಸಂಸದರಾಗಿ ಆಯ್ಕೆಯಾಗಿದ್ದು, ಈಗ ಈ ಗೌರವಾನ್ವಿತ ಸಂಸ್ಥೆಯಲ್ಲಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ಕ್ಷಣವಾಗಿದೆ ಎಂದು ತಿಳಿಸಿದರು.

    ಭಾಷಣದ ಕೊನೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಗೂ ನಟ ಡಾ.ರಾಜ್‌ಕುಮಾರ್ ಅವರು ಹಾಡಿದ್ದ ಪ್ರಸಿದ್ಧ ಹಾಡಿನ ಸಾಲನ್ನು ಹೇಳಿದರು. ಎಲ್ಲಾದರೂ ಇರು ಎಂಥಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು, ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂದು ಹೇಳಿ ತಮ್ಮ ಮಾತಿಗೆ ಪೂರ್ಣ ವಿರಾಮ ಹಾಕಿದರು. ಈ ಹಿಂದೆ ಸಂಸದರಾಗಿ ಆಯ್ಕೆಯಾದ ವೇಳೆಯೂ ಸಂಸತ್‌ನಲ್ಲಿ ಕನ್ನಡದಲ್ಲಿ ಮಾತನಾಡಿ ಗಮನ ಸೆಳೆದಿದ್ದರು.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

     

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಕೆನಡಾ ಪ್ರಧಾನಿ ರೇಸ್‌ನಲ್ಲಿ ಕನ್ನಡಿಗ ಚಂದ್ರ ಆರ್ಯ!

    ಒಟ್ಟಾವಾ: ಕೆನಡಾದ ಪ್ರಧಾನಿ ಸ್ಥಾನದ ಪೈಪೋಟಿಯಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ ಅವರ ಹೆಸರು ಕೇಳಿಬಂದಿದೆ.

    ಕೆನಡಾದ ಪ್ರಧಾನ ಮಂತ್ರಿ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಅವರು ಘೋಷಿಸಿದ್ದಾರೆ. ಲಿಬರಲ್ ಪಕ್ಷದ ಸಂಸದರಾಗಿರುವ ಅವರು, ದೇಶವನ್ನು ಸಾರ್ವಭೌಮ ಗಣರಾಜ್ಯವನ್ನಾಗಿ ಪರಿವರ್ತಿಸುವ ಭರವಸೆ ನೀಡಿದ್ದಾರೆ. ಇನ್ನೂ, ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ ನಂತರ ಆಡಳಿತಾರೂಢ ಲಿಬರಲ್ ಪಕ್ಷದ ನಾಯಕ ಮತ್ತು ಪ್ರಧಾನಿ ಸ್ಥಾನದಿಂದ ಕೆಳಗಿಳಿಯಲು ಜಸ್ಟಿನ್ ಟ್ರುಡೊ ಸೋಮವಾರ ನಿರ್ಧಾರ ಪ್ರಕಟಿಸಿದ್ದರು. ಇದಾದ ಬಳಿಕ ಈ ಬೆಳವಣಿಗೆಯಾಗಿದೆ.

    ಆರ್ಯ ಚಂದ್ರ ಅವರು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ತೇನ್‌ನ್ನು ಒಂದು ರಾಜ್ಯವಾಗಿ ಗುರುತಿಸುವುದು ಸೇರಿದಂತೆ ಮಹತ್ವಾಕಾಂಕ್ಷೆಯ ನೀತಿ ಪ್ರಸ್ತಾಪಗಳನ್ನು ಉಮೇದುವಾರಿಕೆ ಬಳಿಕ ವಿವರಿಸಿದ್ದಾರೆ.

    ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸಲು ಹೆಚ್ಚು ಪರಿಣಾಮಕಾರಿ ಸರ್ಕಾರವನ್ನು ಮುನ್ನಡೆಸಲು ಕೆನಡಾದ ಮುಂದಿನ ಪ್ರಧಾನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಅವರು ಎಕ್ಸ್‌ನಲ್ಲಿ ಹೇಳಿಕೊಂಡಿದ್ದಾರೆ.

    ನಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಹಿತದೃಷ್ಟಿಯಿಂದ, ನಾವು ಸಂಪೂರ್ಣವಾಗಿ ಅಗತ್ಯವಾದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಲಿಬರಲ್ ಪಕ್ಷದ ಮುಂದಿನ ನಾಯಕರಾಗಿ ಆಯ್ಕೆಯಾದರೆ, ನನ್ನ ಜ್ಞಾನ ಮತ್ತು ಪರಿಣತಿಯ ಮೇಲೆ ಉತ್ತಮ ಆಡಳಿತ ನೀಡುತ್ತೇನೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

    ಆರ್ಯ ಅವರು 2015 ರಲ್ಲಿ ಮೊದಲ ಬಾರಿಗೆ ಹೌಸ್ ಆಫ್ ಕಾಮನ್ಸ್‌ಗೆ ಆಯ್ಕೆಯಾದರು ಮತ್ತು 2019 ರಲ್ಲಿ ಮರು ಆಯ್ಕೆಯಾದರು. 2022 ರಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತೃಭಾಷೆ ಕನ್ನಡದಲ್ಲಿ ಮಾತನಾಡುವ ಮೂಲಕ ಗಮನ ಸೆಳೆದರು. ಹಿಂದೂ ಕೆನಡಿಯನ್ನರ ಪರವಾಗಿ ವಾದಿಸುವ ವಕೀಲರಾಗಿ, ಆರ್ಯ ಆಗಾಗ ದೃಢವಾದ ನಿಲುವುಗಳನ್ನು ತೆಗೆದುಕೊಂಡಿದ್ದಾರೆ.

    2024 ರಲ್ಲಿ ಸಂಸತ್ತಿನ ಹೊರಗೆ ‘ಓಂ’ ಚಿಹ್ನೆಯನ್ನು ಹೊಂದಿರುವ ಕೇಸರಿ ಧ್ವಜವನ್ನು ಹಾರಿಸಿದ್ದರು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಹಿಂದೂ ಸಮುದಾಯ ರಾಜಕೀಯದಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಲು ಅವರು ಈ ಸಂದರ್ಭವನ್ನು ಬಳಸಿಕೊಂಡಿದ್ದರು.

    ತುಮಕೂರು ಮೂಲದ ಆರ್ಯ ಅವರು, ಧಾರವಾಡದಲ್ಲಿರುವ ಕೌಸಾಲಿ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ಒಟ್ಟಾವಾಕ್ಕೆ ತೆರಳಿದ್ದರು. ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು.

  • ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ

    ಖಲಿಸ್ತಾನಿಗಳಿಂದ ಹಿಂದೂ ದೇವಾಲಯಗಳ ಟಾರ್ಗೆಟ್: ಕ್ರಮಕ್ಕೆ ಕೆನಡಾ ಸಂಸದ ಒತ್ತಾಯ

    ಒಟ್ಟೋವಾ: ಖಲಿಸ್ತಾನಿ (Khalistani) ಪರ ಬೆಂಬಲಿಗರು ಹಿಂದೂ ದೇವಾಲಯಗಳನ್ನ ಟಾರ್ಗೆಟ್‌ ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಭಾರತ ಮೂಲದ ಕೆನಡಾದ (Canada) ಸಂಸದ ಚಂದ್ರ ಆರ್ಯ (Chandra Arya) ಒತ್ತಾಯಿಸಿದ್ದಾರೆ.

    ಖಲಿಸ್ತಾನಿಗಳು ಲಕ್ಷ್ಮಿ ನಾರಾಯಣ ಮಂದಿರದಲ್ಲಿ ತೊಂದರೆ ಸೃಷ್ಟಿಸಲು ಮುಂದಾಗಿದ್ದಾರೆ. ಇವರ ವಿರುದ್ಧ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು ಎಂದು ಕ್ರಿ.ಪೂ. ಸರ್ರೆಯಲ್ಲಿರುವ ಸಿಖ್ ಗುರುದ್ವಾರದ ಹೊರಗೆ ಖಲಿಸ್ತಾನ್ ಬೆಂಬಲಿಗರು ಸಿಖ್ ಕುಟುಂಬವನ್ನು ಮೌಖಿಕವಾಗಿ ನಿಂದಿಸಿದ್ದಾರೆ. ಈಗ ಅದೇ ಖಲಿಸ್ತಾನ್ ಗುಂಪು ಸರ್ರೆಯ ಹಿಂದೂ ಲಕ್ಷ್ಮೀ ನಾರಾಯಣ ಮಂದಿರದಲ್ಲಿ ತೊಂದರೆಯನ್ನು ಸೃಷ್ಟಿಸಲು ಬಯಸಿದೆ ಎಂದು ಚಂದ್ರ ಆರ್ಯ ಅವರು ಎಕ್ಸ್‌ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಗಾಜಾದ ಆಸ್ಪತ್ರೆಯನ್ನೇ ಉಗ್ರ ಚಟುವಟಿಕೆಗಳ ತಾಣವಾಗಿಸಿದ ಹಮಾಸ್- ಇಸ್ರೇಲ್ ವೀಡಿಯೋ ಸಾಕ್ಷಿ

    ಇವೆಲ್ಲವನ್ನೂ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಮಾಡಲಾಗುತ್ತಿದೆ. ಕೆನಡಾದ ಅಧಿಕಾರಿಗಳು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳುವಂತೆ ನಾನು ಮತ್ತೊಮ್ಮೆ ಕೇಳುತ್ತಿದ್ದೇನೆ ಎಂದು ಪೋಸ್ಟ್‌ನಲ್ಲಿ ಒತ್ತಾಯಿಸಿದ್ದಾರೆ.

    ಕಳೆದ ವರ್ಷಗಳಲ್ಲಿ ಹಿಂದೂ ದೇವಾಲಯಗಳು ದಾಳಿಗೆ ಗುರಿಯಾಗಿವೆ. ಎರಡು ವರ್ಷಗಳ ಅವಧಿಯಲ್ಲಿ ಹಿಂದೂ ದೇವಾಲಯಗಳ ಮೇಲೆ ಹಲವು ಬಾರಿ ದಾಳಿ ನಡೆಸಲಾಗಿದೆ. ಹಿಂದೂ-ಕೆನಡಿಯನ್ನರ ವಿರುದ್ಧ ದ್ವೇಷದ ಅಪರಾಧಗಳು ನಡೆಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 22 ಕೋಟಿ ರೂ.ಗೆ ಮಾರಾಟವಾಯ್ತು 60 ವರ್ಷ ಹಳೆಯ ಒಂದು ಬಾಟಲಿ ವಿಸ್ಕಿ

    ಇಂತಹ ಕೃತ್ಯಗಳನ್ನು ಬಹಿರಂಗವಾಗಿ ಮತ್ತು ಸಾರ್ವಜನಿಕವಾಗಿ ಮಾಡಲು ಅವಕಾಶ ನೀಡುವುದು ಸ್ವೀಕಾರಾರ್ಹವಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಆಗಸ್ಟ್‌ನಲ್ಲಿ ಖಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಪೋಸ್ಟರ್‌ಗಳೊಂದಿಗೆ ಉಗ್ರಗಾಮಿಗಳು ಕೆನಡಾದಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಿದ್ದರು.

  • ಕೆನಡಾ ಸಂಸದ ಚಂದ್ರ ಆರ್ಯ ಹುಟ್ಟೂರು ತುಮಕೂರಿಗೆ ಭೇಟಿ

    ಕೆನಡಾ ಸಂಸದ ಚಂದ್ರ ಆರ್ಯ ಹುಟ್ಟೂರು ತುಮಕೂರಿಗೆ ಭೇಟಿ

    ತುಮಕೂರು: ಕೆನಡಾ ಸಂಸದ ಚಂದ್ರ ಆರ್ಯ ಅವರು ತಮ್ಮ ಹುಟ್ಟೂರು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮಕ್ಕೆ ಭೇಟಿ ನೀಡಿದರು.

    ಈ ವೇಳೆ ಮಾತನಾಡಿದ ಅವರು, ಗಜ್ಜಿಗರಹಳ್ಳಿ ನಮ್ಮ ತಾತ ಅವರ ಊರಾಗಿದೆ. ಇಲ್ಲಿಗೆ ಬರುವುದು ಎಂದರೆ ನಮಗೆ ತುಂಬಾ ಸಂತೋಷ. ಕಳೆದ ನಾಲ್ಕೈದು ವರ್ಷದಲ್ಲಿ ಹಲವು ಬಾರಿ ಇಲ್ಲಿಗೆ ಬಂದಿದ್ದೇನೆ. ಈ ಗ್ರಾಮದಲ್ಲಿ ರಸ್ತೆ ಆಗಬೇಕು. ಮೊದಲು ದೇವಸ್ಥಾನ ಇರಲಿಲ್ಲ. ಈಗ ಗ್ರಾಮದವರೇ ಕಟ್ಟಿಸಿದ್ದಾರೆ ಎಂದರು.

    ನಂತರ ಗಜ್ಜಿಗರಹಳ್ಳಿ ಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಚಂದ್ರ ಆರ್ಯ ಅವರು, ಕೆಲಕಾಲ ಗ್ರಾಮದ ಹಳೆ ಸ್ನೇಹಿತರೊಂದಿಗೆ ಕೂತು ಚರ್ಚೆ ನಡೆಸಿದರು. ಪತ್ನಿಯೊಂದಿಗೆ ಭೇಟಿ ಕೊಟ್ಟ ಚಂದ್ರ ಆರ್ಯ ಅವರನ್ನು ಗ್ರಾಮಸ್ಥರು ಹಾರ, ಪೇಟ ಹಾಕಿ ಸನ್ಮಾನಿಸಿದರು. ಇದನ್ನೂ ಓದಿ: ಎಐಡಿಎಂಕೆ ಕಾರ್ಯಕರ್ತರ ನಡುವೆ ಮಾರಾಮಾರಿ- ಕಚೇರಿಯ ಬಾಗಿಲು ಒಡೆದ ಬೆಂಬಲಿಗರು

    ಇತ್ತೀಚೆಗೆ ಕೆನಡಾ ಸಂಸತ್ತಿನಲ್ಲಿ ಮಾತೃಭಾಷೆ ಕನ್ನಡವನ್ನು ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ತಮಗೆ ಕನ್ನಡದ ಮೇಲೆ ಇರುವ ಪ್ರೀತಿ, ಗೌರವ, ಅಭಿಮಾನವನ್ನು ವ್ಯಕ್ತಪಡಿಸಿದ್ದರು. ಈ ಮೂಲಕ ಕನ್ನಡ ಕಂಪನ್ನು ಕೆನಡಾ ಸಂಸತ್ತಿವರಿಗೂ ಪಸರಿಸಿದ್ದರು. ಇದನ್ನೂ ಓದಿ: ಗೋವಾದಲ್ಲೂ ಆಪರೇಷನ್‍ಗೆ ಮುಂದಾಗಿದ್ಯಾ ಬಿಜೆಪಿ..? – ಕಾಂಗ್ರೆಸ್ ಶಾಸಕರಿಗೆ 40 ಕೋಟಿ ಆಫರ್

    Live Tv
    [brid partner=56869869 player=32851 video=960834 autoplay=true]

  • ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ

    ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ: ಕನ್ನಡಿಗ ಸಂಸದ ಬೇಸರ

    ಒಟ್ಟೋವಾ: ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯ ಬೇಸರ ವ್ಯಕ್ತಪಡಿಸಿದ್ದಾರೆ.

    ಕಾಳಿದೇವಿ ಸಾಕ್ಷ್ಯಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅವರು, ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಕಾಳಿ ಕುರಿತಾದ ಸಾಕ್ಷ್ಯಚಿತ್ರ ಪೋಸ್ಟರ್ ನೋಡಿ ಬೇಸರವಾಗಿದೆ. ಕೆಲ ವರ್ಷಗಳಿಂದ ಕೆನಡಾದಲ್ಲೂ ಸಾಂಪ್ರದಾಯಿಕ ಹಿಂದೂ ವಿರೋಧಿ ಮತ್ತು ಭಾರತ-ವಿರೋಧಿ ಗುಂಪುಗಳು ಸೇರಿಕೊಂಡು ಮಾಧ್ಯಮಗಳಲ್ಲಿ ʻಹಿಂದೂಫೋಬಿಕ್ʼ (ಹಿಂದೂ ಧರ್ಮದ ಬಗ್ಗೆ ಭಯ ಹುಟ್ಟಿಸುವುದು) ಲೇಖನಗಳನ್ನು ಪ್ರಕಟಿಸುತ್ತಿವೆ. ಹಿಂದೂ ಧರ್ಮದ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ

    https://twitter.com/AryaCanada/status/1544413469059186688

    ʻಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಯಾವುದೇ ಉದ್ದೇಶವಿಲ್ಲ. ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ವಿಷಾದ ವ್ಯಕ್ತಪಡಿಸುತ್ತೇವೆʼ ಎಂದು ಅಗಾಖಾನ್‌ ಮ್ಯೂಸಿಯಂ ಕ್ಷಮೆಯಾಚಿಸಿರುವುದನ್ನು ಸ್ವಾಗತಿಸುತ್ತೇನೆಂದು ಚಂದ್ರ ಆರ್ಯ ತಿಳಿಸಿದ್ದಾರೆ.

    ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್‍ನಲ್ಲಿ ಬಿಡುಗಡೆ ಆಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆ ಬಳಿಕ ಈ ಪೋಸ್ಟರ್ ಕುರಿತಾಗಿ ಆಕ್ರೋಶ ಕೇಳಿ ಬರುತ್ತಿದೆ. ಇದನ್ನೂ ಓದಿ: ಜೀಸಸ್‌ ಸುಪ್ರೀಂ ಎಂದಿದ್ದ ವ್ಯಕ್ತಿಗೆ ಪಾಕ್‌ನಲ್ಲಿ ಗಲ್ಲು ಶಿಕ್ಷೆ

    Live Tv
    [brid partner=56869869 player=32851 video=960834 autoplay=true]

  • ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಬೆಂಗಳೂರು: ನಮ್ಮ ನಾಡಿನಲ್ಲಿ ಹುಟ್ಟಿ ಬೆಳೆದು ದೂರದ ಕೆನಡಾದಲ್ಲಿ ಮೂರನೇ ಬಾರಿಗೆ ಸಂಸದರಾಗಿರುವ ಚಂದ್ರ ಆರ್ಯ ಅವರು, ಇಂದು ಮಾತೃಭಾಷೆ ಕನ್ನಡದಲ್ಲಿ ಕೆನಡಾ ಸಂಸತ್ತಿನಲ್ಲಿ ಮಾತನಾಡಿದ್ದಾರೆ. ಈ ಮೂಲಕ ಇಡೀ ಕನ್ನಡಿಗರಲ್ಲಿ ಹೆಮ್ಮೆಯ ಪುತ್ರ ಚಂದ್ರ ಆರ್ಯ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

    ತುಮಕೂರು ಜಿಲ್ಲೆಯ ಶಿರಾ ಮೂಲದವರಾಗಿದ್ದು, ಪ್ರಸ್ತುತ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಆತ್ಮೀಯ ಗೆಳೆಯರ ಬಳಗದ ಬಡಾವಣೆಯಲ್ಲಿ ಚಂದ್ರ ಆರ್ಯ ಅವರ ತಂದೆ ಹಾಗೂ ಅಕ್ಕ ವಾಸವಾಗಿದ್ದಾರೆ. ಈ ಹಿನ್ನೆಲೆ ತಂದೆ ಗೋವಿಂದಯ್ಯ ಹಾಗೂ ಅಕ್ಕ ಲೀಲಾ ʼಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು 

    ಮಧ್ಯಮ ವರ್ಗದಲ್ಲಿ ಹುಟ್ಟಿ ತುಮಕೂರು ಜಿಲ್ಲೆಯ ಶಿರಾ ಮೂಲದ ಚಂದ್ರ ಆರ್ಯ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಇವರು ಸುಮಾರು 1 ನಿಮಿಷಗಳ ಕಾಲ ಕನ್ನಡದ ಕುರಿತು ಭಾಷಣ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ಚಂದ್ರ ಆರ್ಯ ಬಿ.ಇ ಮತ್ತು ಎಂ.ಬಿ.ಎ ಪದವೀಧರರಾಗಿದ್ದಾರೆ. ಪ್ರಸ್ತುತ ಕೆನಡಾದ ನೇಪಿಯನ್ ಕ್ಷೇತ್ರದಿಂದ ಲಿಬರ್ಟಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.

    ಚಂದ್ರ ಆರ್ಯ ಅವರು 2003ರಲ್ಲಿ ಕೆನಡಾದ ಖಾಸಗಿ ಕಂಪನಿಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಬಳಿಕ ರಾಜಕೀಯಕ್ಕೆ ಧುಮುಕಿದ ಚಂದ್ರ ಆರ್ಯ ಅವರು ಮೂರನೇ ಬಾರಿಯು ಬಹುಮತದಿಂದ ಗೆದ್ದು ಆಯ್ಕೆಯಾಗಿದ್ದಾರೆ. ಈ ವೇಳೆ ತಂದೆ ಹಾಗೂ ಅಕ್ಕ ಚಂದ್ರ ಆರ್ಯ ಸಾಧನೆ ಹಾಗೂ ಕನ್ನಡ ಭಾಷೆಯ ಪ್ರೇಮವನ್ನು ಹಾಡಿ ಹೊಗಳಿ ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿದ ಭೂಪ 

    ಇಂದು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ, ಕನ್ನಡಿಗನಾಗಿ ನನಗೆ ಹೆಮ್ಮೆ ಇದೆ ಎಂದು ಹೇಳಿದರು. ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ಪದ್ಯವನ್ನು ಓದುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.

  • ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಒಟ್ಟಾವಾ: ಭಾರತೀಯರು ಅದರಲ್ಲೂ ಕನ್ನಡಿಗರೊಬ್ಬರು ದೂರದ ಕೆನಡಾ ಸಂಸದರಾಗಿ ಆಯ್ಕೆಯಾಗಿರೋದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅಂತಹದ್ರಲ್ಲಿ ಅದೇ ಕೆನಡಾ ದೇಶದ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

    KANNADA FLAG

    ಚಂದ್ರ ಆರ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಇವರು ಕೆನಡಾ ದೇಶದ ಸಂಸದರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ನಿವರ್ಹಿಸುತ್ತಿದ್ದಾರೆ. ಚಂದ್ರ,ಆರ್ಯ ಅವರು ಕೆನಡಾದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆನಡಾ ದೇಶದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆಯಿಂದ ಸಂಭವಿಸಿದ ಅವಾಂತರಗಳೇನು?

    https://twitter.com/AryaCanada/status/1527360696958459905?t=4Lm0HftrpsjWuj3H9_hjHg&s=08

    ಈ ಬಗ್ಗೆ ಸ್ವತಃ ಚಂದ್ರ ಆರ್ಯ ಅವರು ಟ್ವೀಟ್ ಮಾಡಿದ್ದು, ನಾನು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಲ್ಲಿ ಮಾತನಾಡಿದ್ದೇನೆ. ಪುರಾತನ ಇತಿಹಾಸವುಳ್ಳ ಸುಂದರವಾದ ನಮ್ಮ ಕನ್ನಡ ಭಾಷೆಯನ್ನ, 5 ಕೋಟಿ ಜನ ಮಾತನಾಡುತ್ತಾರೆ. ಪ್ರಪಂಚದಲ್ಲಿ ಇದೇ ಮೊದಲ ಬಾರಿಗೆ ವಿದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯ ಮೂಲಕ ಮಾತನಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಕೆನಡಾ ಸಂಸತ್ತಿನಲ್ಲಿ ಮಾತನಾಡಿರುವ ಚಂದ್ರ ಆರ್ಯ ಅವರು, ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಸಂತೋಷ ತಂದಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ದ್ವಾರಳು ಗ್ರಾಮದ ವ್ಯಕ್ತಿಯೊರ್ವ ಕೆನಡಾದಲ್ಲಿ ಸಂಸದನಾಗಿ ಅಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಇದನ್ನೂ ಓದಿ:  ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

    ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಹಾಗೂ ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಹಾಡಿರುವ ‘ಎಲ್ಲಾದಾರೂ ಇರು ಎಂತಾದರೂ ಇರು. .ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ಹೇಳಿ ತಮ್ಮ ಮಾತು ಮುಗಿಸಿದ್ದಾರೆ. ಚಂದ್ರ ಆರ್ಯ ಅವರ ಭಾಷಾ ಪ್ರೇಮ ಕಂಡು ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.