Tag: ಚಂದ್ರ ಮೋಹನ್

  • ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’  ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ಮಲ್ಟಿಸ್ಟಾರ್ ನಟನೆಯ ‘ಫಾರೆಸ್ಟ್’ ಚಿತ್ರಕ್ಕೆ ಚಂದ್ರ ಮೋಹನ್ ಡೈರೆಕ್ಟರ್

    ನ್ನಡದಲ್ಲಿ ‌ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್,  ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ಜನ ತಾರೆಯರನ್ನು ಒಂದೇ ಫ್ರೇಮ್ ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ಡಬ್ಬಲ್ ಇಂಜಿನ್, ಬ್ರಹ್ಮಚಾರಿ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.

    ಚಂದ್ರ ಮೋಹನ್ (Chandra Mohan) ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್  (Forrest) ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.

    ಚಿಕ್ಕಣ್ಣ, ಅನೀಶ್ , ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ಫಾರೆಸ್ಟ್ ಸಿನಿಮಾದ ಆಧಾರ ಸ್ತಂಭಗಳು. ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

    ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್  ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

  • ಹೃದಯಾಘಾತದಿಂದ ನಟ ಚಂದ್ರಮೋಹನ್ ನಿಧನ

    ಹೃದಯಾಘಾತದಿಂದ ನಟ ಚಂದ್ರಮೋಹನ್ ನಿಧನ

    ತೆಲುಗು (Telugu) ಸಿನಿಮಾ ರಂಗದ ಖ್ಯಾತ ನಟ ಚಂದ್ರ ಮೋಹನ್ (Chandra Mohan) ಹೃದಯಾಘಾತದಿಂದ (Heart attack) ನಿಧನರಾಗಿದ್ದಾರೆ (Death). 82ರ ವಯಸ್ಸಿನ ಚಂದ್ರಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗಿ ವಿಧಿವಶರಾಗಿದ್ದಾರೆ.

    ತೆಲುಗು ಚಿತ್ರೋದ್ಯಮದಲ್ಲಿ ದಾಖಲೆ ಎನ್ನುವಷ್ಟು ಸಿನಿಮಾಗಳಲ್ಲಿ ಚಂದ್ರ ಮೋಹನ್ ನಟಿಸಿದ್ದಾರೆ. ಈವರೆಗೂ 900ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 1966ರಲ್ಲಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದ ಅವರು, ರಂಗುಲ ರತ್ನಂ ಚಿತ್ರಕ್ಕೆ ಮೊದಲ ಬಾರಿಗೆ ಬಣ್ಣ ಹಚ್ಚಿದ್ದರು. ಆನಂತರ ತಿರುಗಿ ನೋಡಿದ ಇತಿಹಾಸವೇ ಇರಲಿಲ್ಲ.

    ನೂರಾರು ಸಿನಿಮಾಗಳಲ್ಲಿ ನಾಯಕರಾಗಿ, ಅನೇಕ ಚಿತ್ರಗಳಲ್ಲಿ ಸಹ ನಟರಾಗಿ ಕೆಲಸ ಮಾಡಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಿದ್ದರು ಚಂದ್ರಮೋಹನ್. ಹಿರಿಯ ನಟನ ನಿಧನಕ್ಕೆ ಅನೇಕ ಸಿನಿಮಾ ನಟರು, ನಟಿಯರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಗಣ್ಯರು ಕೂಡ ಕಂಬನಿ ಮಿಡಿದಿದ್ದಾರೆ.

  • ಉಪಾಧ್ಯಕ್ಷನಾದ ಖ್ಯಾತ ಹಾಸ್ಯನಟ ಚಿಕ್ಕಣ್ಣ : ಹೀರೋ ಆಗಿ ಲಾಂಚ್

    ಉಪಾಧ್ಯಕ್ಷನಾದ ಖ್ಯಾತ ಹಾಸ್ಯನಟ ಚಿಕ್ಕಣ್ಣ : ಹೀರೋ ಆಗಿ ಲಾಂಚ್

    ನ್ನಡದ ಹೆಸರಾಂತ ಹಾಸ್ಯನಟ ಚಿಕ್ಕಣ್ಣ ಸ್ಯಾಂಡಲ್‌ವುಡ್‌ನ ಬಹುತೇಕ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ಪ್ರಮುಖ ಪಾತ್ರ ಕೂಡ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಅವರು ಹೀರೋ ಆಗಿ ಲಾಂಚ್ ಆಗಿದ್ದಾರೆ. ಈ ಹಿಂದೆ ಶರಣ್ ಜೊತೆ ಚಿಕ್ಕಣ್ಣ ‘ಅಧ್ಯಕ್ಷ’ ಸಿನಿಮಾದಲ್ಲಿ ನಟಿಸಿದ್ದರು. ಈ ಸಿನಿಮಾದ ಮುಂದುವರಿದ ಭಾಗವೇ ‘ಉಪಾಧ್ಯಕ್ಷ’ ಸಿನಿಮಾವಂತೆ.

    ಅಧ್ಯಕ್ಷ ಸಿನಿಮಾದಲ್ಲಿ ಶರಣ್ ಅಧ್ಯಕ್ಷನಾಗಿ ರಂಜಿಸಿದ್ದರೆ, ಚಿಕ್ಕಣ್ಣ ಉಪಾಧ್ಯಕ್ಷನಾಗಿ ನಗೆಯ ಕಚಗುಳಿ ಇಟ್ಟಿದ್ದರು. ಇಬ್ಬರದ್ದೂ ಲವ್ ಸ್ಟೋರಿ ಬೇರೆ ಇತ್ತು. ಅಧ್ಯಕ್ಷ ಸಿನಿಮಾದಲ್ಲಿ ಶರಣ್‌ಗೆ ಮದುವೆ ಆಗುತ್ತದೆ. ಆನಂತರ ನಡೆಯುವ ಕಥೆಯೇ ಉಪಾಧ್ಯಕ್ಷ ಸಿನಿಮಾವಂತೆ. ಹಾಗಾಗಿ ಈ ಸಿನಿಮಾದಲ್ಲಿ ಕೇವಲ ಚಿಕ್ಕಣ್ಣ ಮಾತ್ರ ಇರಲಿದ್ದಾರೆ. ಇದನ್ನೂ ಓದಿ: ಅಮ್ಮ ಅಂತಾ ಎಷ್ಟೇ ಹೇಳಿಕೊಟ್ಟರೂ ಕೊನೆಗೆ ಅಪ್ಪ ಎಂದು ಕರೆದ ರಾಯನ್

    ಇಂದಿನಿಂದ ಸಿನಿಮಾದ ಶೂಟಿಂಗ್ ಶುರುವಾಗಲಿದ್ದು, ಚಂದ್ರಮೋಹನ್ ಅವರ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬರಲಿದೆ. ಉಮಾಪತಿ ಈ ಸಿನಿಮಾದ ನಿರ್ಮಾಪಕರು. ಅಂದುಕೊಂಡಂತೆ ಆಗಿದ್ದರೆ, ಈ ಮೊದಲೇ ಸಿನಿಮಾದ ಶೂಟಿಂಗ್ ನಡೆಯಬೇಕಿತ್ತು. ಕೊರೊನಾ ಕಾರಣದಿಂದಾಗಿ ತಡವಾಯಿತು. ಇದೀಗ ಪಕ್ಕಾ ಸಿದ್ಧತೆಯೊಂದಿಗೆ ಸಿನಿಮಾ ಟೀಮ್ ಚಿತ್ರೀಕರಣಕ್ಕೆ ತೆರಳುತ್ತಿದೆ. ಮೊದಲ ಹಂತದ ಶೂಟಿಂಗ್ ಮೈಸೂರು ಸುತ್ತಮುತ್ತ ನಡೆಯಲಿದೆಯಂತೆ.

    Live Tv

  • ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ

    ಗಾಗಲೇ ಕನ್ನಡದಲ್ಲಿ ಸಾಕಷ್ಟು ಬಯೋಪಿಕ್ ಚಿತ್ರಗಳು ಬಂದಿವೆ. ಆ ಸಾಲಿಗೆ ಮತ್ತೊಂದು ಸಿನಿಮಾ ಸೇರಲಿದೆ. ಇದು ಪೂರ್ಣ ಪ್ರಮಾಣದಲ್ಲಿ ಬಯೋಪಿಕ್ ಅಲ್ಲದೇ, ಇದ್ದರೂ, ಮಾಜಿ ರೌಡಿ, ಹಾಲಿ ಕನ್ನಡಪರ ಹೋರಾಟಗಾರನೊಬ್ಬನ ಕಥೆಯನ್ನು ಚಿತ್ರ ಮಾಡಲಾಗುತ್ತಿದೆ. ಆದರೆ, ಆ ಡಾನ್ ಯಾರು? ಏನು ಕಥೆ ಎನ್ನುವ ವಿಚಾರ ಮಾತ್ರ ಚಿತ್ರತಂಡ ಗುಟ್ಟಾಗಿ ಇಟ್ಟಿದೆ. ಇದನ್ನೂ ಓದಿ : ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ

    ಭೂಗತ ಜಗತ್ತಿನ ಚಟುವಟಿಕೆಯಲ್ಲಿದ್ದ ಕೆಲವರು ಕನ್ನಡ ಪರ ಸಂಘಟನೆ ಕಟ್ಟಿಕೊಂಡು, ಹೋರಾಟ ಮಾಡುತ್ತಿರುವುದು ಗುಟ್ಟಿನ ಸಂಗತಿಯೇನಲ್ಲ. ಆದರೆ, ಈ ಸಿನಿಮಾ ಯಾರ ಕುರಿತಾದದ್ದು ಎನ್ನುವುದೇ ಸಸ್ಪೆನ್ಸ್.  ಇದನ್ನೂ ನೋಡಿ : ನಟ ಚೇತನ್‌ಗೆ ನೀಡಿದ್ದ ಗನ್ ಮ್ಯಾನ್ ಹಿಂಪಡೆದ ಸರ್ಕಾರ

    ಗುರು ದೇಶಪಾಂಡೆ ಸಾರಥ್ಯದಲ್ಲಿ ಪೆಂಟಗನ್ ಸಿನಿಮಾ ಮೂಡಿ ಬರುತ್ತಿದೆ. ಐದು ಜನ ನಿರ್ದೇಶಕರು, ಐದು ಕಥೆಗಳನ್ನು ಈ ಸಿನಿಮಾದಲ್ಲಿ  ಹೇಳುತ್ತಿದ್ದಾರೆ. ಆ ಐದು ಕಥೆಗಳಲ್ಲಿ ಒಂದು ಕನ್ನಡ ಪರ ಹೋರಾಟಗಾರನ ಕುರಿತಾದದ್ದುಆಗಿದೆ ಎನ್ನುವುದು ವಿಶೇಷ. ಇದನ್ನೂ ಓದಿ : ಪ್ರಭಾಸ್‍ಗೆ ಮಿರ್ಚಿ ಪ್ರಶ್ನೆ ಕೇಳಿದ ದೀಪಿಕಾ ಪಡುಕೋಣೆ!

    ಚೂರಿಕಟ್ಟೆ ಖ್ಯಾತಿಯ ರಾಘು ಶಿವಮೊಗ್ಗ, ಆಕಾಶ್ ‍ಶ್ರೀವತ್ಸ, ಚಂದ್ರ  ಮೋಹನ್, ಕಿರಣ್ ಕುಮಾರ್ ತಲಾ ಒಂದೊಂದು ಕಥೆಗೆ ನಿರ್ದೇಶನ ಮಾಡಿದ್ದರೆ, ಕನ್ನಡ ಪರ ಹೋರಾಟಗಾರನ ಕಥೆಗೆ ಗುರು ದೇಶಪಾಂಡೆ ನಿರ್ದೇಶಕರು. ಇದನ್ನೂ ಓದಿ: ಭಾಸ್ಕರ್.ವಿ.ರೆಡ್ಡಿ ಕ್ಯಾಮೆರಾ ಕಣ್ಣಲ್ಲಿ ಸೆರೆಯಾದ ಮ್ಯೂಸಿಕಲ್ ಲವ್ ಸ್ಟೋರಿ ಸಿನಿಮಾ ‘ಮೈಸೂರು

    ಈಗಾಗಲೇ ನಾಲ್ಕೂ ಕಥೆಗಳ ಚಿತ್ರೀಕರಣ ಮುಗಿದಿದ್ದು, ಐದನೇ ಕಥೆಯಾದ ಕನ್ನಡ ಪರ ಹೋರಾಟಗಾರನ ಕಥೆಯ ಚಿತ್ರೀಕರಣ ಕೂಡ ಕೊನೆಯ ಹಂತದಲ್ಲಿದೆ. ಈ ಪಾತ್ರವನ್ನು ಖ್ಯಾತ ನಟ ಕಿಶೋರ್ ಮಾಡುತ್ತಿದ್ದಾರೆ. ಅಲ್ಲದೇ, ಕರ್ನಾಟಕ ರಕ್ಷಣಾ ವೇದಿಕೆಯಲ್ಲಿ ಗುರುತಿಸಿಕೊಂಡಿರುವ, ನಟಿ ಅಶ್ವಿನಿ ಗೌಡ ಕೂಡ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.