Tag: ಚಂಪಾ

  • ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರು ಇಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂಪಾ ಎಂದೇ ಖ್ಯಾತಿ ಪಡೆದಿರುವ ಚಂದ್ರಶೇಖರ್ ಪಾಟೀಲ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರಿಗೆ ರಾಜಕೀಯ ರಂಗದ ಅನೇಕ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

    ಅನ್ಯಾಯ, ಅಸಮಾನತೆ, ಸರ್ವಾಧಿಕಾರದ ವಿರುದ್ಧ ಸಿಡಿಯುತ್ತಲೇ ಇದ್ದ ಹುಟ್ಟು ಬಂಡಾಯಗಾರ, ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತರಾಗಿದ್ದ ಪ್ರೊ. ಚಂದ್ರಶೇಖರ ಪಾಟೀಲ್ ನಿಧನದಿಂದ ದುಃಖಿತನಾಗಿದ್ದೇನೆ. ಇವರ ಕುಟುಂಬ ಹಾಗೂ ಅಭಿಮಾನಿಗಳ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಚಂಪಾ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಕನ್ನಡಪರ ಹೋರಾಟಗಾರ, ಕವಿ, ನಾಟಕಕಾರ, ಸಂಘಟನಕಾರ, ಪತ್ರಕರ್ತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ವಿಶ್ರಾಂತ ಅಧ್ಯಕ್ಷರಾಗಿದ್ದ ಚಂದ್ರಶೇಖರ ಪಾಟೀಲ ಅವರ ನಿಧನ ಬಹಳ ದುಃಖ ಉಂಟು ಮಾಡಿದೆ. ಚಂಪಾ ಎಂದೇ ಸಾರಸ್ವತ ಲೋಕದಲ್ಲಿ ಹೆಸರಾಗಿದ್ದ, ಅವರು ಸಾಹಿತ್ಯ ಕೃಷಿಯ ಜತೆಗೆ ನಾಡು, ನುಡಿ, ನೆಲಕ್ಕಾಗಿ ತಮ್ಮ ಬದುಕನ್ನು ಮೀಸಲಿಟ್ಟಿದ್ದರು. ಚಂಪಾ ಅವರ ಅಗಲಿಕೆ ನಾಡಿಗೆ ದೊಡ್ಡ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದ ಸದಸ್ಯರು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರ್‌ಸ್ವಾಮಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

    ಖ್ಯಾತ ಕವಿ, ಚಂಪಾ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಶ್ರೀ ಚಂದ್ರಶೇಖರ ಪಾಟೀಲ್‌ರ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ. ಸಂಘಟನಕಾರರಾಗಿ, ಹೋರಾಟಗಾರರಾಗಿ, ನಾಡಿನ ಸಾಮಾಜಿಕ, ಸಾಂಸ್ಕೃತಿಕ ಚಳುವಳಿಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದ ಚಂಪಾ ಅವರ ನಿಧನದಿಂದ ನಮ್ಮ ನಾಡು ಹಿರಿಯ ಚೇತನವೊಂದನ್ನು ಕಳೆದುಕೊಂಡಿದೆ. ಶ್ರೀಯುತರ ಆತ್ಮಕ್ಕೆ ಸದ್ಗತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಚಂಪಾ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ: ಸಿಎಂ ಸಂತಾಪ

    ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ನಿಧನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ. ಚಂಪಾ ಎಂದೇ ಪ್ರಸಿದ್ಧರಾದ, ಚಂದ್ರಶೇಖರ್ ಪಾಟೀಲ್ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕ ಬಡವಾಗಿದೆ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಸೇವೆ ಅನುಪಮವಾದುದು. ಗೋಕಾಕ್ ಚಳುವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳನ್ನು ರೂಪಿಸಿದ್ದಲ್ಲದೆ ಅವುಗಳಲ್ಲಿ ಮುಂಚೂಣಿಯಾಗಿ ನಿಂತವರು, ಎಂದು ಸಚಿವರು, ಸ್ಮರಿಸಿದ್ದಾರೆ. ಮೃತರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೋರಿದ್ದಾರೆ.

    ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಅವರು ಮಾತನಾಡಿ, ಚಂಪಾ ಅವರ ಅಕಾಲಿಕ ಅಗಲಿಕೆಯಿಂದ ಮನಸ್ಸಿಗೆ ತೀವ್ರ ದುಃಖವಾಗಿದೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

  • ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

    ಚಂಪಾ ನಿಧನ ನಾಡಿಗೆ ತುಂಬಲಾರದ ನಷ್ಟ: ನಾಡೋಜ ಡಾ. ಮಹೇಶ್‌ ಜೋಶಿ

    ಬೆಂಗಳೂರು: ನಾಡಿನ ಹಿರಿಯ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದ ಪ್ರೊ. ಚಂದ್ರಶೇಖರ್‌ ಪಾಟೀಲ್ ಅವರ ನಿಧನ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ್‌ ಜೋಶಿ ಹೇಳಿಕೆ ಬಿಡುಗಡೆ ಮಾಡಿ ಸಂತಾಪ ಸೂಚಿಸಿದ್ದಾರೆ.

    ಹೇಳಿಕೆಯಲ್ಲಿ ಏನಿದೆ?:
    ಪ್ರಾಧ್ಯಾಪಕರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರ್‌ ಪಾಟೀಲ್ ಅವರು ಚಂಪಾ ಎಂದೇ ಪ್ರಸಿದ್ಧರಾಗಿದ್ದರು. ಅವರು ಸಂಕ್ರಮಣ ಪತ್ರಿಕೆಯ ಸಂಪಾದಕರಾಗಿ, ಅಂಕಣಕಾರರಾಗಿ, ಲೇಖಕರಾಗಿ ಬಂಡಾಯ, ನವೋದಯ ಸಾಹಿತ್ಯ ಚಳವಳಿಯಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ದೆಸೆಯಿಂದಲೂ ಅನೇಕ ಕನ್ನಡಪರ ಚಳವಳಿಗಳಲ್ಲಿ ಭಾಗವಹಿಸುತ್ತಿದ್ದ ಚಂಪಾ ಅವರು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು.

    ಗೋಕಾಕ ಚಳವಳಿ ಮುಂತಾದ ಅನೇಕ ಜನಪರ ಚಳವಳಿಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದ ಚಂಪಾ ಅವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಜೈಲುವಾಸವನ್ನೂ ಸಹ ಅನುಭವಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಚಂಪಾ ಅವರು ಪುಸ್ತಕ ಸಂತೆಯನ್ನು ಏರ್ಪಡಿಸಿ ಸಣ್ಣ ಪ್ರಮಾಣದ ಪ್ರಕಾಶಕರನ್ನು ಉತ್ತೇಜಿಸುವ ಕೆಲಸ ಮಾಡಿದ್ದರು. ಗಡಿನಾಡ ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕಾಗಿ ಅಧ್ಯಕ್ಷರ ಪುಸ್ತಕ ನಿಧಿಯನ್ನು ಪ್ರಾರಂಭಿಸಿ ನೆರವಾಗಿದ್ದರು. ಇದನ್ನೂ ಓದಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಇವರ ಸಾಹಿತ್ಯ ಕೃಷಿಗೆ, ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಪಂಪ ಪ್ರಶಸ್ತಿ, ಆಳ್ವಾಸ್ ನುಡಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವ ಪುರಸ್ಕಾರಗಳು ಸಂದಿವೆ. ಮೈಸೂರಿನಲ್ಲಿ ಜರುಗಿದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ನೀಡಿ ಪರಿಷತ್ತು ಗೌರವಿಸಿತ್ತು. ಇದನ್ನೂ ಓದಿ: ಇಂದಿನಿಂದ ಬೂಸ್ಟರ್ ಡೋಸ್ – ಯಾರು ಪಡೆಯಬಹುದು? ಅರ್ಹತೆ ಏನು?

    ಕನ್ನಡ ಕನ್ನಡ ರ‍್ರಿ ನಮ್ಮ ಸಂಗಡ ಎಂದು ಎಲ್ಲರನ್ನೂ ಕನ್ನಡದ ಕಾಯಕದಲ್ಲಿ ಒಳಗೊಳ್ಳುವಂತೆ ಪ್ರೇರೆಪಿಸುತ್ತಿದ್ದ ಪ್ರೊ. ಚಂಪಾ ಅವರ ನಿಧನದಿಂದಾಗಿ ನಾಡಿಗೆ ಅಪಾರ ನಷ್ಟವುಂಟಾಗಿದೆ. ಅವರ ಆತ್ಮಕ್ಕೆ ಶಾಂತಿಯನ್ನು ಕೋರುತ್ತಾ, ಚಂಪಾ ಅವರ ಕುಟುಂಬಕ್ಕೆ, ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

  • ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌ ನಿಧನ

    ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್‌(82) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ

    ದೀರ್ಘಕಾಲದ ಅನಾರೋಗ್ಯ ದಿಂದ ಬಳಲುತ್ತಿದ್ದ ಚಂದ್ರಶೇಖರ ಪಾಟೀಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಗ್ಗೆ 6:30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಕೋಣನಕುಂಟೆ ಕ್ರಾಸ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

    ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದ ಮೂಲಕ ಗುರತಿಸಿಕೊಂಡಿದ್ದ ಅವರು ʼಚಂಪಾʼ ಕಾವ್ಯನಾಮದ ಮೂಲಕ ಪ್ರಸಿದ್ಧರಾಗಿದ್ದರು. ಚಂಪಾ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

    ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ 1939ರ ಜೂನ್‌ 18ರಂದು ಜನಿಸಿದ್ದ ಚಂಪಾ ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದಿದ್ದರು.

    ಕನ್ನಡಕ್ಕಾಗಿ ದುಡಿಯುತ್ತಿದ್ದ ಚಂದ್ರಶೇಖರ ಪಾಟೀಲರನ್ನು ಕರ್ನಾಟಕ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತ್ತು. 1996-99ರ ಅವಧಿಗೆ ಈ ಜವಾಬ್ಧಾರಿಯನ್ನು ನಿರ್ವಹಿಸುವುದರ ಜೊತೆಗೆ 2004-08 ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

  • ಕನ್ನಡಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದುಕೊಟ್ಟ ಕೆಲವೇ ಗಣ್ಯರಲ್ಲಿ ಕಾರ್ನಾಡ್ ಒಬ್ಬರು: ಚಂಪಾ

    ಕನ್ನಡಕ್ಕೆ ಅಂತರಾಷ್ಟ್ರೀಯ ಮನ್ನಣೆ ತಂದುಕೊಟ್ಟ ಕೆಲವೇ ಗಣ್ಯರಲ್ಲಿ ಕಾರ್ನಾಡ್ ಒಬ್ಬರು: ಚಂಪಾ

    ಬೆಂಗಳೂರು: ಗಿರೀಶ್ ಕಾರ್ನಾಡ್ ಅವರು ಬ್ರಿಲಿಯಂಟ್ ವಿದ್ಯಾರ್ಥಿಯಾಗಿದ್ದರು ಎಂದು ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರು ನೆನಪನ್ನು ಹಂಚಿಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಬಹಳ ಒಳ್ಳೆಯ ಮನುಷ್ಯ ಅವರಾಗಿದ್ದರು. ಕನ್ನಡಕ್ಕೆ ಅಂತರಾಷ್ಟ್ರೀಯ ಮಾನ್ಯತೆಯನ್ನು ತಂದುಕೊಟ್ಟ ಕೆಲವೇ ಕೆಲವು ವ್ಯಕ್ತಿಗಳ ಪೈಕಿ ಗಿರೀಶ್ ಕಾರ್ನಾಡ್ ಒಬ್ಬರು ಎಂದು ತಿಳಿಸಿದರು. ಇದನ್ನೂ ಓದಿ: ಗಿರೀಶ್ ಅವರನ್ನು ನೋಡ್ತಿದ್ದರೆ ವಿವೇಕಾನಂದ ನೆನಪಾಗ್ತಿದ್ರು: ಬಿ.ಟಿ ಲಲಿತಾ ನಾಯಕ್

    ಧಾರವಾಡದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಓದಿದ ಅವರು ಬ್ರಿಲಿಯಂಟ್ ವಿದ್ಯಾರ್ಥಿಯಾಗಿದ್ದರು. ನವ್ಯ ಬರಹಗಾರ, ನಾಟಕಕಾರ, ಸಿನಿಮಾ ಸಾಮಾಜಿಕ ಪ್ರಜ್ಞೆಯನ್ನು ಹೊಂದಿದ ವ್ಯಕ್ತಿಯಾಗಿದ್ದರು ಎಂದು ಚಂಪಾ ನೆನಪನ್ನು ಹಂಚಿಕೊಂಡರು.

    ಕಳೆದ ವರ್ಷ ಗೌರಿ ಲಂಕೇಶ್ ಕುರಿತು ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊನೆಯ ಬಾರಿ ಕಾರ್ನಾಡ್ ಜೊತೆ ಮಾತನಾಡಿದ್ದೆ ಎಂದು ತಿಳಿಸಿದರು.

    https://www.youtube.com/watch?v=rjR2qIhqevM

  • ಕೇರಳ ಸರ್ಕಾರಕ್ಕೆ ಸಾಹಿತಿ ಚಂಪಾ ಅಭಿನಂದನೆ

    ಕೇರಳ ಸರ್ಕಾರಕ್ಕೆ ಸಾಹಿತಿ ಚಂಪಾ ಅಭಿನಂದನೆ

    ಧಾರವಾಡ: ಇಬ್ಬರು ಮಹಿಳೆಯರಿಗೆ ಭದ್ರತೆ ನೀಡಿ ಶಬರಿಮಲೆ ಅಯ್ಯಪ್ಪ ದೇವಸ್ಥಾನ ಪ್ರವೇಶಿಸಲು ಸಹಾಯ ಮಾಡಿದ್ದಕ್ಕೆ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಕೇರಳ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಕೇರಳ ಸರ್ಕಾರ ನಡೆದುಕೊಂಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದೆ. ಹೀಗಾಗಿ ಕೇರಳ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೆನೆ. ಅಲ್ಲಿನ ಸರ್ಕಾರ ಸೂಕ್ತವಾದ ನಿರ್ಣಯ ತೆಗೆದುಕೊಂಡಿದೆ. ಮಹಿಳೆಯರ ಪ್ರವೇಶಕ್ಕೆ ವಿರೋಧಿಸಿದರೆ ಸುಪ್ರಿಂಗೆ ಅಗೌರವ ಸಲ್ಲಿಸಿದಂತಾಗುತ್ತದೆ. ನಾವು ಇಡೀ ಕೇರಳ ಜನತೆಗೆ ಅಭಿನಂದನೆ ಸಲ್ಲಿಸಬೇಕು. ಒಬ್ಬರಿಗೆ ಎಂಟ್ರಿ ಸಿಕ್ಕರೆ ಸಾಕು ಮೂಢನಂಬಿಕೆ, ಕೋಮುವಾದ ಆಧುನಿಕ ಮೌಲ್ಯಗಳಲ್ಲ ಅಂತ ಅವರು ಹೇಳಿದ್ರು.

    ಇದೇ ವೇಳೆ ಪ್ರೋ. ಭಗವಾನ್ ಪುಸ್ತಕದಲ್ಲಿ ಶ್ರೀರಾಮನಿಗೆ ಅವಮಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದ ಮುಖ್ಯ ಗುಣ ಪ್ರತಿರೋಧವಾಗಿದೆ. ಪ್ರಜಾಪ್ರಭುತ್ವದಲ್ಲಿ ವೈಚಾರಿಕ ವಿರೋಧಗಳಿರಬೇಕು. ರಾಮಮಂದಿರ ಏಕೆ ಬೇಡ? ಹಳೆಯ ಪುಸ್ತಕವಾಗಿದೆ. ಇದೀಗ ಅದರ ಎರಡನೇ ಮುದ್ರಣ ಹೊರ ಬರುತ್ತಿದೆ. ಈಗ ಅದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ‘ಬೇಡ’ ಅನ್ನೋ ಪುಸ್ತಕ ಬರೆಯಲಾಗಿದೆ. ಅದನ್ನು ಎದುರಿಸಲು ‘ಏಕೆ ಬೇಕು?’ ಅನ್ನೋದನ್ನು ಬರೆಯಬೇಕು ಅಂದ್ರು. ಇದನ್ನೂ ಓದಿ: ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದ್ದು, ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದ್ರಲ್ಲಿ ತಪ್ಪೇನಿದೆ- ಜಯಮಾಲಾ ಪ್ರಶ್ನೆ

    ‘ಏಕೆ ಬೇಕು?’ ಅನ್ನೋ ಪುಸ್ತಕ ಬರೆದು ಎದುರಿಸಲಿ. ಆಗ ಅದು ಪ್ರಜಾಪ್ರಭುತ್ವದ ಗುಣವೆನ್ನಿಸಿಕೊಳ್ಳುತ್ತದೆ. ನಾನು ಮೂಲತಃ ನಾಸ್ತಿಕ. ಹೀಗಾಗಿ ದೇವರು, ಪುರಾಣಗಳ ಬಗ್ಗೆ ನನಗೆ ನಂಬಿಕೆ ಇಲ್ಲ. ಮಂದಿರ ನಿರ್ಮಾಣದ ವಿಚಾರ ನನ್ನ ವ್ಯಾಪ್ತಿಯಲ್ಲಿ ಬರೋದಿಲ್ಲ. ವಾಲ್ಮೀಕಿ ಮುಂಚೆಯೂ ರಾಮಾಯಣದ ಕಥೆ ಇದೆ ಅಂತಾರೆ. ನನ್ನ ಪಾಲಿಗೆ ಅದೊಂದು ಮಹಾಕಾವ್ಯವಾಗಿದೆ. ವಾಲ್ಮೀಕಿ ರಾಮಾಯಣ ಸಂಸ್ಕೃತ ಮೂಲದ್ದಾಗಿದೆ. ಆದರೆ ಸಂಸ್ಕೃತ ನನಗೆ ಬರೋದಿಲ್ಲ. ಹೀಗಾಗಿ ನಾನು ವಾಲ್ಮೀಕಿ ರಾಮಾಯಣ ಓದಿಲ್ಲ. ನಾನು ಕುವೆಂಪು ರಾಮಾಯಣ ಓದಿದ್ದೇನೆ. ನಮ್ಮಲ್ಲಿ ಒಟ್ಟು 300 ರಾಮಾಯಣಗಳಿವೆ. ರಾಮ ದೇವರೋ, ಇತಿಹಾಸ ಪುರುಷನೋ ಅನ್ನೋದನ್ನು ಸಂಶೋಧಕರಿಗೆ ಬಿಡಬೇಕು. ಹೀಗಾಗಿ ಈ ವಿಚಾರ ನನ್ನ ವ್ಯಾಪ್ತಿಗೆ ಬರೋದಿಲ್ಲ ಅಂತ ಅವರು ತಿಳಿಸಿದ್ರು.

    ರಾಮಮಂದಿರ ನಿರ್ಮಾಣ ವಿಚಾರದ ಕುರಿತು ಮಾತನಾಡಿದ ಸಾಹಿತಿ, ಮೋದಿಯವರು ಕೋರ್ಟ್ ಆದೇಶ ಬಂದ ಮೇಲೆ ನೋಡೋಣ ಅಂದಿದ್ದಾರೆ. ಹೀಗಾಗಿ ಪ್ರಧಾನಿ ಹೇಳಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಅಂದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಾಹಿತ್ಯ ಸಮ್ಮೇಳನದಲ್ಲಿ ಟಾಂಗ್ ಕೊಟ್ಟ ಬೆನ್ನಲ್ಲೇ ಅನಂತ್ ಕುಮಾರ್ ಗೆ ಚಂಪಾ ತಿರುಗೇಟು

    ಸಾಹಿತ್ಯ ಸಮ್ಮೇಳನದಲ್ಲಿ ಟಾಂಗ್ ಕೊಟ್ಟ ಬೆನ್ನಲ್ಲೇ ಅನಂತ್ ಕುಮಾರ್ ಗೆ ಚಂಪಾ ತಿರುಗೇಟು

    ಮೈಸೂರು: ನಾನು ಯಾವ ಪಕ್ಷಕ್ಕೂ ಮತ ಹಾಕಿ ಅಂದಿಲ್ಲ. ನಾನು ಸೆಕ್ಯೂಲರ್ ಪಕ್ಷಕ್ಕೆ ಮತ ಹಾಕಿ ಅಂದಿರೋದು. ನಾನು ಯಾವ ಪಕ್ಷದ ಪರ ಇಲ್ಲ ಅಂತ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಹೇಳಿದ್ದಾರೆ.

    83ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ವೈಭವದ ತೆರೆ ಬಿದ್ದಿದ್ದು, ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಚಂಪಾ, ಸೆಕ್ಯುಲರ್ ಪದ ಕೇಳಿದ್ರೆ ಅವರು ಚಿಕ್ಕ ಮಕ್ಕಳಂತೆ ಉಚ್ಚೆ ಊಯ್ದುಕೊಳ್ಳುತ್ತಾರೆ. ಕನ್ನಡ, ನೆಲ, ಜಲದ ವಿಚಾರವಾಗಿ ಕೆಲಸ ಮಾಡುವ ಪ್ರಾದೇಶಿಕ ಜಾತ್ಯಾತೀತ ಪಕ್ಷ ಬೇಕು. ಜಾತ್ಯಾತೀತ ಅನ್ನೋ ಪದವೇ ಸಚಿವ ಅನಂತಕುಮಾರ್ ಅವರಿಗೆ ಅರ್ಥವಾಗಿಲ್ಲ. ಅವರನ್ನು ರಿಪೇರಿ ಮಾಡೋದು ನಮ್ಮ ಕೆಲಸವಲ್ಲ. ಅವರನ್ನು ರಿಪೇರಿ ಮಾಡುವ ಪ್ರಯತ್ನವೂ ವ್ಯರ್ಥ. ಕನ್ನಡದ ಭಾಷೆ, ನೆಲ, ಜಲದ ವಿಚಾರದಲ್ಲಿ ಇದುವರೆಗೂ ಪಕ್ಷಾತೀತವಾದ ಒಂದೇ ಒಂದು ಕೆಲಸ ಆಗಿಲ್ಲ ಎಂದು ಅನಂತ ಕುಮಾರ್ ಹೇಳಿಕೆಗೆ ಪ್ರತ್ಯುತ್ತರ ನೀಡಿದ್ರು.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಅನಂತಕುಮಾರ್ ಅವರ ಭಾಷಣದಲ್ಲಿ ಪವಿತ್ರ ಗಂಗಾ ಜಲವೂ ಇತ್ತು. ಮಲೀನ ಗಟಾರದ ನೀರೂ ಇತ್ತು. ಒಳ್ಳೆಯದನ್ನು ನಾನು ಸ್ವೀಕರಿಸಿದ್ದೇನೆ. ಕೆಟ್ಟದ್ದನ್ನು ಬಿಟ್ಟುಬಿಡೋಣ. ನಾನು ಹಂಸಕ್ಷೀರ ನ್ಯಾಯದಂತೆ ಒಳ್ಳೆಯದನ್ನು ಮಾತ್ರ ಸ್ವೀಕರಿಸುತ್ತೇನೆ. ಅವರ ಭಾಷಣದ ಶೇ.50ರಷ್ಟನ್ನು ನಾನು ಸ್ವೀಕರಿಸಿದ್ದೇನೆ. ಕೇಂದ್ರ ಸಚಿವ ಅನಂತ್ ಕುಮಾರ್ ಉತ್ತರ ಕರ್ನಾಟಕದವರು. ಅವರ ತಾಯಿ ಉತ್ತಮ ವ್ಯಕ್ತಿ. ಅವರ ಪರಂಪರೆಯನ್ನು ಅನಂತ್ ಕುಮಾರ್ ಮುಂದುವರಿಸಿದ್ದಾರೆ ಅಂದ್ರು.

    ಇನ್ನು ಅನಂತ್ ಕುಮಾರ್ ಹೋಗುವಾಗ ಚಂಪಾ ನಮ್ ಮೇಷ್ಟ್ರು ಅಂದ್ರು. ಅನಂತ್ ಕುಮಾರ್ ನನ್ನ ವಿದ್ಯಾರ್ಥಿ ಆಗಿರಬಹುದು. ಅದನ್ನ ನೆನಪಿಟ್ಟಿದ್ದಕ್ಕೆ ನಾನು ಋಣಿ. ಕನ್ನಡದ ಬಗ್ಗೆ ಕಳಕಳಿಯಿಂದ ಮಾತಾಡಿದ್ದು ಖುಷಿ ಕೊಡ್ತು. ಇದು ಏಕಮುಖ ವೇದಿಕೆ ಅಲ್ಲ. ಆದ್ರೆ ಕೆಲವರು ತಾವು ಏನು ಹೇಳಬೇಕೋ ಹೇಳಿ, ಬೇರೆಯವರು ಏನು ಹೇಳ್ತಾರೆ ಎಂಬುದನ್ನ ಕೇಳುವ ತಾಳ್ಮೆ ಇರದೆ ಹೋಗ್ತಾರೆ. ಅನಂತ್ ಕುಮಾರ್, ಪ್ರತಾಪ್ ಹೋದ್ರೂ ಅವರ ಕಣ್ಣು, ಕಿವಿ ಇಲ್ಲೇ ಇವೆ. ನನ್ನ ಮಾತು ವಾಟ್ಸಪ್, ಫೇಸ್ ಬುಕ್, ಟಿವಿ ಮೂಲಕ ಅನಂತ್ ಕುಮಾರ್ ಕಿವಿಗೆ ಬೀಳುತ್ತೆ ಅಂತ ನೇರವಾಗಿಯೇ ಟಾಂಗ್ ನೀಡಿದ್ರು.

    ಸಚಿವರು ಏನ್ ಹೇಳಿದ್ದರು?: ಈ ವೇದಿಕೆ ರಾಜಕೀಯ ಭಾಷಣ ಮಾಡಲು ಅಲ್ಲ. ಯಾರಿಗೆ ಮತ ಹಾಕಬೇಕು ಅನ್ನುವುದನ್ನು ಹೇಳುವುದಕ್ಕೆ ಬೇರೆ ವೇದಿಕೆಗಳಿವೆ, ಅಲ್ಲಿ ಹೇಳಿ. ಕನ್ನಡ ಸಮ್ಮೇಳನದಲ್ಲಿ ಕನ್ನಡದ ಬಗ್ಗೆ ಮಾತನಾಡಿ. ಇಡೀ ದೇಶವೇ ಸಮ್ಮೇಳವನ್ನು ನೋಡುತ್ತಿದೆ. ಹೀಗಿರುವಾಗ ಇಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಸಾಹಿತ್ಯ ಸಮ್ಮೇಳದಲ್ಲಿ ಡೋಂಗಿತನಕ್ಕೆ ಅವಕಾಶ ಕಲ್ಪಿಸಿಕೊಟ್ಟರೆ ವೇದಿಕೆಯ ಮೌಲ್ಯ ಹಾಳಾಗುತ್ತದೆ ಎಂದು ಅನಂತ್ ಕುಮಾರ್ ನೇರವಾಗಿ ಹೇಳಿದ್ದರು.

  • ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಪ್ರತಾಪ್ ಸಿಂಹಗೆ ಚಂಪಾ ನೇರ ಟಾಂಗ್!

    ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಪ್ರತಾಪ್ ಸಿಂಹಗೆ ಚಂಪಾ ನೇರ ಟಾಂಗ್!

    ಮೈಸೂರು: ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಪ್ರೊ. ಚಂಪಾ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ನೇರವಾಗಿ ಟಾಂಗ್ ನೀಡಿದ್ದಾರೆ.

    ಸಿಂಹ ಸಮ್ಮೇಳನಕ್ಕೆ ಮೊದಲೇ ಬರಬೇಕಿತ್ತು. ಆದ್ರೆ ಇವತ್ತಾದ್ರೂ ಬಂದಿದ್ದಾರೆ. ಪ್ರತಾಪ್ ಸಿಂಹ ಬಗ್ಗೆ ನನಗೆ ಗೌರವ ಇತ್ತು. ಅವನ ಲೇಖನಗಳನ್ನು ನಾನು ಇಂದಿಗೂ ಇಟ್ಟಿದ್ದೇನೆ. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೂರುವ ಬದಲು ಹೊರಟುಹೋದ. ಬಸವನ ಜೊತೆ ಬಾಲ ಇದ್ದ ಹಾಗೆ, ಅನಂತ್ ಕುಮಾರ್ ಬಾಲ ಹಿಡಿದು ಹೊರಟು ಹೋದ ಅಂತ ನೇರವಾಗಿ ಟಾಂಗ್ ನೀಡಿದ್ರು.

    ಸಮಾರೋಪದಲ್ಲಿ ಮಾತನಾಡಿ ಸಚಿವ ಅನಂತ್ ಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಬಳಿಕ ಪ್ರತಾಪ್ ಸಿಂಹ ಅವರಿಗೂ ಚಂಪಾ ನೇರವಾಗಿ ಟಾಂಗ್ ನೀಡಿದ್ರು. ಟಿಪ್ಪು ಒಬ್ಬ ಹೀರೋ. ಆತ ಒಬ್ಬ ಸ್ವಾತಂತ್ರ್ಯ ಯೋಧ. ಮೈಸೂರಿನ ಹುಲಿ ಟಿಪ್ಪು ಸುಲ್ತಾನ್. ಅವನ ಜಯಂತಿ ಮಾಡುವಾಗ ಆತನನ್ನು ಕ್ರೂರಿ ಎಂದ್ರು. ಪ್ರತಾಪ್ ಸಿಂಹ ಕರ್ನಾಟಕದಾದ್ಯಂತ ವಿಷ ಬೀಜ ಬಿತ್ತಿದ. ರಾಷ್ಟಪತಿ ಕೋವಿಂದ್ ಟಿಪ್ಪು ಬಗ್ಗೆ ಹೊಗಳಿದ್ರು. ಆದರೆ ಸಿಂಹ ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ ಅಂತ ಟಿಪ್ಪುವನ್ನು ಹಾಡಿ ಹೊಗಳಿದ್ರು.

    ಒಟ್ಟಿನಲ್ಲಿ ರಾಜಕೀಯ ಭಾಷಣದಿಂದ ಆರಂಭವಾದ ಸಮ್ಮೇಳನ ರಾಜಕೀಯ ಭಾಷಣದಿಂದಲೇ ಮುಕ್ತಾಯವಾಯಿತು. ಸಮ್ಮೇಳನದ ಸಮಾರೋಪ ಕಾರ್ಯಕ್ರಮ ರಾಜಕೀಯ ಜಿದ್ದಾಜಿದ್ದಿನ ಭಾಷಣಕ್ಕೆ ವೇದಿಕೆಯಾಯಿತು.

  • ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ

    ಮೂರು ದಿನಗಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇಂದು ತೆರೆ

    ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಡೆಯುತ್ತಿರುವ ಮೂರು ದಿನಗಳ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜಾತ್ರೆಗೆ ಇವತ್ತು ಅಧಿಕೃತವಾಗಿ ತೆರೆ ಬೀಳಲಿದೆ.

    ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಮೂರು ದಿನಗಳ ಕನ್ನಡ ಅಕ್ಷರ ಜಾತ್ರೆ ನಡೆದಿದ್ದು, ಹಿರಿಯ ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ್ ಈ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ವಿದ್ಯಾಕಾಶಿ ಧಾರವಾಡದಲ್ಲಿ ನಡೆಯಲಿದ್ದು, ಇಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ.

     

    ಸುಮಾರು 11 ಸಾವಿರ ಪ್ರತಿನಿಧಿಗಳು ಸಮ್ಮೇಳನಕ್ಕೆ ಹೆಸರು ನೋಂದಾಯಿಸಿಕೊಂಡಿದ್ದರು. ಅವರಿಗಾಗಿ ಊಟದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸಲು 200 ಕೌಂಟರ್ ತೆರೆಯಲಾಗಿದ್ದು, ಊಟಕ್ಕಾಗಿ 2,75 ಕೋಟಿ ರೂ. ವೆಚ್ಚ ಮಾಡಲಾಗಿತ್ತು.

    ಆದರೆ ಕನ್ನಡದ ಕಂಪು ಬೀರಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನ, ಆರಂಭದಲ್ಲೇ ರಾಜಕೀಯ ಮತ್ತು ವಿವಾದಾತ್ಮಕ ಹೇಳಿಕೆಗಳ ಮೂಲಕ ಸದ್ದು ಗದ್ದಲವನ್ನು ಸೃಷ್ಟಿಸಿದೆ. ಸಮ್ಮೇಳನಾಧ್ಯಕ್ಷ ಸಾಹಿತಿ ಚಂದ್ರಶೇಖರ ಪಾಟೀಲ ಮೋದಿ ಬಗ್ಗೆ ಟೀಕೆ ಮಾಡುತ್ತಾ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಹೊಗಳುವ ಮೂಲಕ ಕನ್ನಡ ಹಬ್ಬದಲ್ಲಿ ರಾಜಕೀಯವನ್ನು ಬೆರಸಿದರು.

    ಸಚಿವ ತನ್ವೀರ್ ಸೇಠ್‍ಗೆ ಕನ್ನಡ ಪ್ರೇಮವಿಲ್ಲ, ಸಚಿವ ಸ್ಥಾನದಿಂದ ಕೈ ಬಿಟ್ಟು ಕನ್ನಡ ಪ್ರೇಮ ಇರುವವರನ್ನು ಸಚಿವರನ್ನಾಗಿ ನೇಮಿಸಿ ಅಂತಾ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಪ್ರಗತಿಪರ ಚಿಂತಕ ಭಗವಾನ್ ರಾಮನ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಮ ದೇವರಲ್ಲ, ಆತ ಜಾತಿವಾದಿ, ಕೊಲೆಗಡುಕ, ದೇವಸ್ಥಾನ, ಚರ್ಚ್, ಮಸೀದಿಗಳಿಗೆ ಯಾರು ಹೋಗಬೇಡಿ ದಡ್ಡರಾಗುತ್ತೀರಾ ಎನ್ನುವ ಮೂಲಕ ಕೆಲವರ ಧಾರ್ಮಿಕ ಭಾವನೆಯನ್ನು ಕದಡಿದರು. ಅಂತಿಮ ದಿನವಾದ ಇವತ್ತು ಸಮ್ಮೇಳನದ ನಿರ್ಣಯವನ್ನು ಅಂಗೀಕರಿಸಲಾಗುತ್ತದೆ.

    ಮೈಸೂರಿನಲ್ಲಿ ನಡೆಯುತ್ತಿರುವ ಕನ್ನಡ ಸಾಹಿತ್ಯ ಸಮ್ಮೇಳನ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಅಧಿಕಾರವಧಿಯ ದಿನಗಳನ್ನು ನೆನೆದರು. ನಾನು ಪ್ರಧಾನಿಯಾಗಿದ್ದು, ಒಂದು ಘಟನೆ. ನಮ್ಮ ಸರ್ಕಾರವನ್ನು 5 ವರ್ಷ ಆಡಳಿತ ಮಾಡಲು ಬಿಡಲ್ಲ ಎಂದು ವಿರೋಧ ಪಕ್ಷದವರು ಶಪಥ ತೊಟ್ಟಿದ್ದರು. ನಾನು 5 ವರ್ಷವಾಗಲಿ, 5 ದಿನವಾಗಲೀ ಜನರ ಋಣ ತೀರಿಸುತ್ತೇನೆ ಎಂದಿದ್ದೆ. ಅಂತೆಯೇ ನಾನು ಪ್ರಧಾನಿ ಆಗಿದ್ದ ವೇಳೆ ಜನರ ಋಣ ತೀರಿಸುವಂತೆ ಮಾತಾಡಿದ್ದೇನೆ ಎಂದರು.

     

  • ಲಿಮ್ಕಾ ದಾಖಲೆ ಬರೆದ ಜಯನಗರದ ಕನ್ನಡ ಬಾವುಟ!

    ಲಿಮ್ಕಾ ದಾಖಲೆ ಬರೆದ ಜಯನಗರದ ಕನ್ನಡ ಬಾವುಟ!

    ಬೆಂಗಳೂರು: ಜಯನಗರದ ಕನ್ನಡ  ಮನಸ್ಸುಗಳ ವೇದಿಕೆಯಿಂದ ಇಂದು ವಿಭಿನ್ನವಾಗಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು.

    ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಉದ್ದದ ಕನ್ನಡ ಬಾವುಟ ಪಥ ಸಂಚಲನ ಮಾಡಿದ್ರು. ಸುಮಾರು 2040 ಮೀಟರ್ ಉದ್ದದ ಕನ್ನಡ ಬಾವುಟವನ್ನು ತಯಾರಿಸಿ ಜಯನಗರದ ಸಂಗಮ ಸರ್ಕಲ್ ಬಳಿಯಿಂದ ಪಥ ಸಂಚಲನ ಪ್ರಾರಂಭ ಮಾಡಿದ್ರು.

    ಕರ್ನಾಟಕ ಹಾಗೂ ದೇಶದ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಉದ್ದದ ಕನ್ನಡ ಬಾವುಟ ಪಥಸಂಚಲನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬೃಹತ್ ಆಕಾರದ ಬಾವುಟ ಲಿಮ್ಕಾ ಬುಕ್ ಆಫ್ ರೆಕಾರ್ಡ್‍ಗೆ ಸೇರಿದೆ.

    ಇಷ್ಟೇ ಅಲ್ಲದೆ ಪ್ರಥಮ ಬಾರಿಗೆ ಸಂಚಾರಿ ಕವಿಗೋಷ್ಠಿಯನ್ನು ಕೂಡ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಕನ್ನಡದ ಹಿರಿಯ ಸಾಹಿತಿ ಚಂಪಾ, ಶಾಲಾಮಕ್ಕಳು ಸೇರಿದಂತೆ ನೂರಾರು ಕನ್ನಡಿಗರು ಹಾಗೂ ಶಾಸಕ ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

  • 83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂಪಾ ಆಯ್ಕೆ

    83ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂಪಾ ಆಯ್ಕೆ

    ಮಂಗಳೂರು: ಪ್ರೊ. ಚಂದ್ರಶೇಖರ ಪಾಟೀಲ ಅವರನ್ನು 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

    ಕರ್ನಾಟಕ-ಕೇರಳ ಗಡಿ ಪ್ರದೇಶ ತಲಪಾಡಿಯಲ್ಲಿ ಕಸಾಪ ರಾಜ್ಯಾಧ್ಯಕ್ಷ ಮನುಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಮಿತಿ ಸಭೆ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ನವೆಂವರ್ 24ರಿಂದ 26 ರವರೆಗೆ ಮೈಸೂರಿನಲ್ಲಿ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಡೆಯಲಿದೆ. ಪ್ರೊ. ಚಂದ್ರಶೇಖರ ಪಾಟೀಲ ಅವರು, 2009ನೇ ಸಾಲಿನ ಪಂಪ ಪ್ರಶಸ್ತಿಗೆ ಪಾತ್ರರಾಗಿದ್ದರು.

    ಸಂಶೋಧಕ ಡಾ.ಎಂ.ಎಂ. ಕಲಬುರ್ಗಿ ಹತ್ಯೆ ಖಂಡಿಸಿದ್ದ ಪ್ರೊ. ಚಂದ್ರಶೇಖರ ಪಾಟೀಲ ಅವರು, 2009ನೇ ಸಾಲಿನ ಪಂಪ ಪ್ರಶಸ್ತಿಯನ್ನು 2015ರಲ್ಲಿ ಸರ್ಕಾರಕ್ಕೆ ಹಿಂದಿರುಗಿಸಿದ್ದರು.