Tag: ಚಂಪೈ ಸೊರೇನ್‌

  • ಜೈಲಿನಿಂದ ಹೊರಬಂದ ಹೇಮಂತ್‌ ಸೊರೇನ್‌ಗೆ ಸಿಎಂ ಕುರ್ಚಿ ಬಿಟ್ಟುಕೊಟ್ಟ ಚಂಪೈ

    ಜೈಲಿನಿಂದ ಹೊರಬಂದ ಹೇಮಂತ್‌ ಸೊರೇನ್‌ಗೆ ಸಿಎಂ ಕುರ್ಚಿ ಬಿಟ್ಟುಕೊಟ್ಟ ಚಂಪೈ

    – ಜಾರ್ಖಂಡ್‌ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್‌ ರಾಜೀನಾಮೆ

    ರಾಂಚಿ: ಜೈಲಿನಿಂದ ಹೊರಬಂದ ಹೇಮಂತ್‌ ಸೊರೇನ್‌ಗೆ ಜಾರ್ಖಂಡ್‌ ಸಿಎಂ ಚಂಪೈ ಸೊರೇನ್‌ ಮುಖ್ಯಮಂತ್ರಿ ಖುರ್ಚಿ ಬಿಟ್ಟುಕೊಟ್ಟಿದ್ದಾರೆ. ಚಂಪೈ ಸೊರೇನ್‌ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಹೇಮಂತ್‌ ಸೊರೇನ್‌ ಆಡಳಿತಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.

    ಅಕ್ರಮ ಹಣ ವರ್ಗಾವಣೆ, ಭೂ ಹಗರಣ ಆರೋಪ ಹೊತ್ತಿದ್ದ ಹೇಮಂತ್‌ ಸೊರೇನ್‌ ಜೈಲು ಪಾಲಾಗಿದ್ದರು. ಇದಕ್ಕೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಸಂದರ್ಭದಲ್ಲಿ ಜಾರ್ಖಂಡ್‌ ಸಿಎಂ ಆಗಿ ಚಂಪೈ ಸೊರೇನ್‌ ಅಧಿಕಾರ ವಹಿಸಿಕೊಂಡಿದ್ದರು. ಐದು ತಿಂಗಳ ಬಳಿಕ ಚಂಪೈ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಮಹಿಳೆಯರ ಪರ ದನಿಯೆತ್ತಿದ್ದ ಸುಧಾ ಮೂರ್ತಿಯನ್ನು ಹೊಗಳಿದ ಪ್ರಧಾನಿ

    ಜಾರ್ಖಂಡ್ ಮುಕ್ತಿ ಮೋರ್ಚಾದಲ್ಲಿ ಮೂರನೇ ಸ್ಥಾನದಲ್ಲಿರುವ ಚಂಪೈ ಸೊರೇನ್, ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಅಂದಿನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಎರಡು ದಿನಗಳ ನಂತರ ಪ್ರಮಾಣವಚನ ಸ್ವೀಕರಿಸಿದ್ದರು. ಇದೇ ಜೂನ್ 28ರಂದು ಹೇಮಂತ್‌ ಸೊರೇನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

  • ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

    ವಿಶ್ವಾಸಮತ ಗೆದ್ದ ಜಾರ್ಖಂಡ್‌ ನೂತನ ಸಿಎಂ ಚಂಪೈ ಸೊರೇನ್‌

    ರಾಂಚಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ (Champai Soren) ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸ ಮತದ ಪರೀಕ್ಷೆಯಲ್ಲಿ ಗೆದ್ದಿದ್ದಾರೆ. 81 ಶಾಸಕರ ಪೈಕಿ 47 ಶಾಸಕರ ಬೆಂಬಲ ಪಡೆಯುವ ಮೂಲಕ ಅವರು ಯಶಸ್ವಿಯಾಗಿ ಬಹುಮತ ಸಾಬೀತುಪಡಿಸಿದ್ದಾರೆ. ಹೊಸ ಸರ್ಕಾರಕ್ಕೆ ಬಹುಮತವಿದೆ ಎಂದು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಘೋಷಿಸಿದ ಬೆನ್ನಲ್ಲೇ ಶಾಸಕರು ಹರ್ಷೋದ್ಗಾರಗಳೊಂದಿಗೆ ಮುಖ್ಯಮಂತ್ರಿಯನ್ನು ಅಭಿನಂದಿಸಿದರು.

    ಜಾರ್ಖಂಡ್ (Jharkhand) ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಚಂಪೈ ಸೊರೇನ್ ಮೊದಲು ವಿಶ್ವಾಸಮತ ಯಾಚನೆ ಮಂಡಿಸಿದರು. ಬಳಿಕ ಮಾತನಾಡಿದ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಚುನಾಯಿತ ರಾಜ್ಯ ಸರ್ಕಾರವನ್ನು “ಅಸ್ಥಿರಗೊಳಿಸಲು” ಪ್ರಯತ್ನಿಸಿದೆ ಎಂದು ಹೇಳಿದರು. ಈ ಮೂಲಕ ಅವರು ಬಂಧಿತ ಮತ್ತು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಕ್ಲೀನ್ ಚಿಟ್ ನೀಡಿದರು. ಇದನ್ನೂ ಓದಿ: 5 ದಿನ ಇಡಿ ಕಸ್ಟಡಿಗೆ ಹೇಮಂತ್ ಸೋರೆನ್

    ಹೇಮಂತ್ ಸೂರೇನ್ ಅವರು ಮಾಡದ ಅಪರಾಧಕ್ಕಾಗಿ ಅವರನ್ನು ಎಳೆಯಲಾಗುತ್ತಿದೆ. ಹೇಮಂತ್ ಸೊರೇನ್ (Hemant Soren) ಅವರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಬಿಜೆಪಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡಿದೆ ಎಂದು ಚಂಪೈ ಸೊರೇನ್ ಅವರು ವಿಶ್ವಾಸಮತ ಯಾಚನೆ ವೇಳೆ ಆರೋಪಿಸಿದರು.

    ಆಪಾದಿತ ಭೂ ಹಗರಣದಲ್ಲಿ ಪ್ರಸ್ತುತ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಹೇಮಂತ್ ಸೊರೇನ್ ಅವರು ಸೋಮವಾರದ ವಿಶ್ವಾಸ ಮತಕ್ಕೆ ಹಾಜರಾಗಿದ್ದರು. ಪಿಎಂಎಲ್‌ಎ ನ್ಯಾಯಾಲಯವು ಅದರಲ್ಲಿ ಭಾಗವಹಿಸಲು ಅನುಮತಿ ನೀಡಿದ ನಂತರ ಮತ ಚಲಾಯಿಸಲು ವಿಧಾನಸಭೆಗೆ ಆಗಮಿಸಿದ್ದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿರು. ಭೂ ಹಗರಣದಲ್ಲಿ ತನಗೆ ಇರುವ ಸಂಬಂಧವನ್ನು ಜಾರಿ ನಿರ್ದೇಶನಾಲಯ ಸಾಬೀತುಪಡಿಸಲಿ ಆರೋಪ ಸಾಬೀತಾದರೆ, “ನಾನು ರಾಜಕೀಯವನ್ನು ತೊರೆಯುತ್ತೇನೆ” ಎಂದು ಸವಾಲು ಹಾಕಿದರು. ಇದನ್ನೂ ಓದಿ: ಜಾರ್ಖಂಡ್‌ ಸಿಎಂ ಆಗಿ ಚಂಪೈ ಸೊರೇನ್‌ ಪ್ರಮಾಣವಚನ ಸ್ವೀಕಾರ

  • ಜಾರ್ಖಂಡ್‌ ಸಿಎಂ ಆಗಿ ಚಂಪೈ ಸೊರೇನ್‌ ಪ್ರಮಾಣವಚನ ಸ್ವೀಕಾರ

    ಜಾರ್ಖಂಡ್‌ ಸಿಎಂ ಆಗಿ ಚಂಪೈ ಸೊರೇನ್‌ ಪ್ರಮಾಣವಚನ ಸ್ವೀಕಾರ

    ರಾಂಚಿ: ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಜಾರ್ಖಂಡ್ (Jharkhand) ಮುಕ್ತಿ ಮೋರ್ಚಾದ ಹಿರಿಯ ನಾಯಕ ಚಂಪೈ ಸೊರೇನ್ (Champai Soren) ಇಂದು (ಶುಕ್ರವಾರ) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    67 ವಯಸ್ಸಿನ ಚಂಪೈ ಮಧ್ಯಾಹ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಲಾಗಿದೆ. ಹೀಗಾಗಿ ರಾಜ್ಯದ ಸಿಎಂ ಆಗುವಂತೆ ಚಂಪೈ ಅವರಿಗೆ ಆಹ್ವಾನ ನೀಡಿದ್ದರು. ಇದನ್ನೂ ಓದಿ: ಜಾರ್ಖಂಡ್‌ ಮಾಜಿ ಸಿಎಂ ಹೇಮಂತ್‌ ಸೋರೆನ್‌ಗೆ 1 ದಿನ ನ್ಯಾಯಾಂಗ ಬಂಧನ

    ಗುರುವಾರ ಚಂಪೈ ಸೊರೇನ್ ಅವರನ್ನು ಭೇಟಿ ಮಾಡಿದ ಕೆಲವೇ ಗಂಟೆಗಳ ನಂತರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಮಾಣವಚನ ಸ್ವೀಕರಿಸಲು ಆಹ್ವಾನ ಕೊಟ್ಟಿದ್ದರು. ರಾಜ್ಯದಲ್ಲಿ 18 ಗಂಟೆಗಳ ಕಾಲ ಯಾವುದೇ ಸರ್ಕಾರವಿಲ್ಲ. ಗೊಂದಲದ ಪರಿಸ್ಥಿತಿ ಇದೆ. ಸಾಂವಿಧಾನಿಕ ಮುಖ್ಯಸ್ಥರಾಗಿರುವ ನೀವು ಶೀಘ್ರದಲ್ಲೇ ಜನಪ್ರಿಯ ಸರ್ಕಾರ ರಚನೆಗೆ ಕ್ರಮಗಳನ್ನು ತೆಗೆದುಕೊಳ್ಳುತ್ತೀರಿ ಎಂದು ನಾವು ನಿರೀಕ್ಷಿಸುತ್ತೇವೆ ಎಂದು ರಾಜ್ಯಪಾಲರು ಹೇಳಿದ್ದರು.

    ಜಾರ್ಖಂಡ್‌ನ ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟವು 81 ಸದಸ್ಯರ ವಿಧಾನಸಭೆಯಲ್ಲಿ 47 ಶಾಸಕರನ್ನು ಹೊಂದಿದೆ. ಬಹುಮತಕ್ಕೆ 41 ಸ್ಥಾನಗಳ ಅಗತ್ಯವಿದೆ. ಪ್ರಸ್ತುತ 43 ಶಾಸಕರು ಚಂಪೈ ಸೊರೇನ್ ಅವರನ್ನು ಬೆಂಬಲಿಸಿದ್ದರು.

    ಬಿಜೆಪಿ 25 ಶಾಸಕರನ್ನು ಹೊಂದಿದೆ. AJSU ಅಥವಾ ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟವು ಮೂವರು ಶಾಸಕರನ್ನು ಹೊಂದಿದೆ. ಎನ್‌ಸಿಪಿ ಮತ್ತು ಎಡಪಕ್ಷಗಳು ತಲಾ ಒಂದು ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಇದನ್ನೂ ಓದಿ: ಹೇಮಂತ್‌ ಸೋರೆನ್‌ ತಂದೆಯೂ ಹಿಂದೆ ಜೈಲುಪಾಲು!

    ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ಉನ್ನತ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ ಜಾರಿ ನಿರ್ದೇಶನಾಲಯವು ಹೇಮಂತ್ ಸೊರೇನ್ ಅವರನ್ನು ಬಂಧಿಸಿದೆ. ಅವರು 600 ಕೋಟಿ ರೂ. ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪಿಸಿದೆ.