Tag: ಚಕ್ರವರ್ತಿ ಸೂಲಿಬೆಲೆ

  • ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

    ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

    ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ವಿರುದ್ಧ ಉಳ್ಳಾಲ (Ullala)  ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು.

    ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ದೂರಿನ‌ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

    ಸೂಲಿಬೆಲೆ ಹೇಳಿದ್ದು ಏನು?
    ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

    ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ. ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದರು.

  • ಎಡಪಂಥೀಯರು ಹಿಂದೂಗಳನ್ನ ಜಾತಿ, ಮತ, ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ: ಚಕ್ರವರ್ತಿ ಸೂಲಿಬೆಲೆ

    ಎಡಪಂಥೀಯರು ಹಿಂದೂಗಳನ್ನ ಜಾತಿ, ಮತ, ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ: ಚಕ್ರವರ್ತಿ ಸೂಲಿಬೆಲೆ

    – ಅಮೆರಿಕ ಪ್ರಾಯೋಜಿತ ಮತಾಂತರ, ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ ಸಮಾಜ ಬಲಿಯಾಗ್ತಿದೆ
    – ಧರ್ಮ ರಕ್ಷಣೆಗಾಗಿ ಸರ್ವಸ್ವದ ತ್ಯಾಗಕ್ಕೂ ಸಿದ್ಧರಾಗಬೇಕು ಎಂದ ಚಿಂತಕ

    ಮಂಗಳೂರು: ಅಮೆರಿಕ ಪ್ರಾಯೋಜಿತ ಮತಾಂತರ ಹಾಗೂ ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ ಸಮಾಜ ವ್ಯಾಪಕವಾಗಿ ಬಲಿಯಾಗುತ್ತಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಆತಂಕ ವ್ಯಕ್ತಪಡಿಸಿದ್ದಾರೆ.

    ಮಂಗಳೂರು (Mangaluru) ಹೊರವಲಯ ಬಂಟ್ವಾಳದಲ್ಲಿ ನಡೆದ ʻಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಆಗ್ರಹಿಸಿ ಪ್ರಾಂತೀಯ ಹಿಂದೂ ರಾಷ್ಟ್ರʼ ಅಧಿವೇಶನದಲ್ಲಿ ಮಾತನಾಡಿದ ಅವರು, ಹಿಂದೂ ಧರ್ಮ ಗಂಗೆಯ ಸ್ವರೂಪ, ಹಿಂದೂ ಧರ್ಮದ ಮೇಲೆ ಯಾಕಿಷ್ಟು ಕೋಪ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೇದಾರನಾಥಲ್ಲಿ ʻಹಿಂದೂಯೇತರರʼ ಪ್ರವೇಶ ನಿಷೇಧಿಸಿ – ಬಿಜೆಪಿ ಶಾಸಕಿ ವಿವಾದಿತ ಹೇಳಿಕೆ

    ಹೋಳಿ, ದೀಪಾವಳಿ ಯಾವುದೇ ಹಿಂದೂ ಹಬ್ಬ ಇರಲಿ ಹಿಂದೂ ಧರ್ಮದ ಮೇಲೆ ನಿರಂತರ ಸಾಂಸ್ಕೃತಿಕ ಆಘಾತ ನಡೆಯುತ್ತಿದೆ. ಹಿಂದೂಗಳ ಆಚರಣೆಗಳನ್ನು ಮಾಧ್ಯಮಗಳ ಮೂಲಕ ಅಪಹಾಸ್ಯ ಮಾಡಲಾಗುತ್ತಿದೆ. ಹಿಂದೂಗಳ ಶ್ರದ್ಧಾ ಕೇಂದ್ರಗಳಾದ ದೇವಸ್ಥಾನಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸಂತರ ಮೇಲೆ ಆರೋಪಗಳನ್ನು ಹಾಕಲಾಗುತ್ತದೆ, ಆಕ್ರಮಣ ಮಾಡಲಾಗುತ್ತದೆ. ಎಡಪಂಥೀಯರು ಹಿಂದೂಗಳನ್ನು ಜಾತಿ, ಮತ, ಪಂಥಗಳ ಹೆಸರಿನಲ್ಲಿ ವಿಭಜಿಸುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಡಾನೆ ಸೆರೆ ಮೊದಲ ದಿನದ ಕಾರ್ಯಾಚರಣೆ ಯಶಸ್ವಿ – ಸತತ 4 ಗಂಟೆಗಳ ನಂತರ ಒಂಟಿಸಲಗ ಸೆರೆ

    ಅಮೆರಿಕ ಪ್ರಾಯೋಜಿತ ಮತಾಂತರ ಹಾಗೂ ದೇಶ ವಿರೋಧಿ ಷಡ್ಯಂತ್ರಕ್ಕೆ ಹಿಂದೂ ಸಮಾಜ ವ್ಯಾಪಕವಾಗಿ ಬಲಿಯಾಗುತ್ತಿದೆ. ಇದೆಲ್ಲದಕ್ಕೂ ಪರಿಹಾರವೆಂದರೆ ನಮ್ಮ ಧರ್ಮ ರಕ್ಷಣೆ ನಮ್ಮದೇ ಕರ್ತವ್ಯವಾಗಿದೆ ಎಂಬ ಅರಿವು ಮೂಡಿಸುವುದು. ಧರ್ಮ ರಕ್ಷಣೆಗಾಗಿ ಸರ್ವಸ್ವದ ತ್ಯಾಗ ಮಾಡಲು ನಾವು ಸಿದ್ಧರಾಗಿರಬೇಕು. ಹಿಂದೂ ಸಮಾಜ ಜಾಗೃತವಾದರೆ ಇತರರು ಏನೂ ಮಾಡಲು ಸಾಧ್ಯವಿಲ್ಲ ಎಂದು ಕರೆ ನೀಡಿದ್ದಾರೆ. ಇದನ್ನೂ ಓದಿ: ಸರ್ಕಾರದ ನಿರ್ಲಕ್ಷ್ಯಕ್ಕೆ ಸರ್ಕಾರಿ ಶಾಲೆಗಳಿಗೆ ಆಪತ್ತು – ಜಿಲ್ಲೆಯಲ್ಲಿ 579 ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ದಾಖಲಾತಿ

  • ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಹಿಂದೂ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿವಾದದ ಮಾತು

    ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಹಿಂದೂ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿವಾದದ ಮಾತು

    – ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತೀಯಪ್ಪ.. ಬೇರೆ ಧರ್ಮದ ಹುಡುಗಿಯರನ್ನೂ ನೋಡು
    – ಮಂಗಳೂರಲ್ಲಿ ಕಿಚ್ಚು ಹಚ್ಚಿದ ಸೂಲಿಬೆಲೆ ಭಾಷಣ

    ಮಂಗಳೂರು: ಅನ್ಯಧರ್ಮದ ಯುವತಿಯರನ್ನು ಪ್ರೀತಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕರೆ ಕೊಟ್ಟಿದ್ದಾರೆ.

    ಮಂಗಳೂರಿನ (Mangaluru) ಕುತ್ತಾರು ಕೊರಗಜ್ಜನ ಸನ್ನಿಧಾನದಲ್ಲಿ ನಡೆದ ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನಕ್ಕೆ ಬಜೆಟ್‌ನಲ್ಲಿ ಜೂಜು, ಎಣ್ಣೆ, ಮಟ್ಕಾ, ಗಾಂಜಾ ಗ್ಯಾರಂಟಿ: ರೇವಣ್ಣ ವ್ಯಂಗ್ಯ

    ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ ಎಂದು ಹೇಳಿದ್ದಾರೆ.

    ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ ಎಂದಿದ್ದಾರೆ. ಇದನ್ನೂ ಓದಿ: ರನ್ಯಾ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಚಿವರ ಲಿಂಕ್ ಆರೋಪ – ಯಾರಾದ್ರೂ ಇದ್ರೆ ತನಿಖೆಯಲ್ಲಿ ಗೊತ್ತಾಗುತ್ತೆ ಎಂದ ಪರಮೇಶ್ವರ್‌

    ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದಾರೆ.

  • ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು

    ಶ್ಯೂರಿಟಿ ನೀಡಲು ಸಿಂಧನೂರು ಡಿವೈಎಸ್‌ಪಿ ಕಚೇರಿಗೆ ಸೂಲಿಬೆಲೆ ಹಾಜರು

    – ವಕ್ಫ್‌ ಕಬಳಿಸಿದ ಆಸ್ತಿಯನ್ನೇ ಖರ್ಗೆ ಕುಟುಂಬ ಕಬಳಿಸಿದೆ
    – ಯೋಗ್ಯ ರೀತಿಯನ್ನು ಆಸ್ತಿಯನ್ನು ಮರಳಿಸಿ ಅಯೋಗ್ಯ ಅಂತ ಪ್ರೂ ಮಾಡಿದ್ದಾರೆ

    ರಾಯಚೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ದ‌ ಅಪಮಾನಕರ ಭಾಷಣ ಪ್ರಕರಣ ಎದುರಿಸುತ್ತಿರುವ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ನಿರೀಕ್ಷಣಾ ಜಾಮೀನು ಮಂಜೂರು ಹಿನ್ನೆಲೆ ಶ್ಯೂರಿಟಿ ನೀಡಲು ಸಿಂಧನೂರು (Sindhanur) ಡಿವೈಎಸ್‌ಪಿ ಕಚೇರಿಗೆ ಗುರುವಾರ ಹಾಜರಾದರು.

    ಸಿರವಾರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಕಲಬುರ್ಗಿ ಹೈಕೋರ್ಟ್ (Kalaburagi High Court) ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು. ಸದ್ಯ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದಾರೆ.

    ಡಿವೈಎಸ್‌ಪಿ ಕಚೇರಿ ಭೇಟಿ ಬಳಿಕ ಸಿಂಧನೂರಿನಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಖರ್ಗೆ ಕುಟುಂಬದ ಬಗ್ಗೆ ಹರಿಹಾಯ್ದರು. ಸಿರವಾರದಲ್ಲಿ ಮೋದಿಯವರ ಬಗ್ಗೆ ಮಾತನಾಡುತ್ತಾ ಖರ್ಗೆ ಕುಟುಂಬದ ಭ್ರಷ್ಟಾಚಾರ ಬಯಲಿಗೆಳೆಯುವ ಪ್ರಯತ್ನ ಮಾಡಿದ್ದೆ, ಮಾತನಾಡುವಾಗ ಈ ತರದ ಅಯೋಗ್ಯರು ಸಮಾಜ ಸೇವೆಗೆ ಉಪಯೋಗಿ ಅಲ್ಲ ಎನ್ನುವ ರೀತಿ ಮಾತು ಆಡಿದ್ದೆ. ಅದನ್ನ ಕಾಂಗ್ರೆಸ್‌ನವರು ತಿರುಚಿದ್ದಾರೆ. ದಲಿತರನ್ನು ಅಯೋಗ್ಯರು ಅಂತ ಕರೆದಿದ್ದಾರೆ ಜಾತಿ ನಿಂದನೆ ಮಾಡಿದ್ದಾರೆ ಅಂತ ತಿರುಚಿದರು. ಅಧಿಕಾರ ತಮ್ಮಬಳಿ ಇದೆ ಎಂಬ ಕಾರಣಕ್ಕೆ ಪ್ರಿಯಾಂಕ್‌ ಖರ್ಗೆ (Priyank Kharge) ತಮ್ಮ ಅಧಿಕಾರ ಬಳಸಿ ನನ್ನ ಹಣಿಯುವಂತ ಕೆಲಸಕ್ಕೆ ಮುಂದಾದರು ಎಂದು ಕಿಡಿಕಾರಿದರು. ಇದನ್ನೂ ಓದಿ: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ, ಪಾಕ್‌ನಿಂದ ಎಕೆ 47 ಖರೀದಿ – ಬಿಷ್ಣೋಯ್‌ ಗ್ಯಾಂಗ್‌ ಪ್ಲ್ಯಾನ್‌ ಹೇಗಿತ್ತು?

    ಬಡ ದಲಿತರ ಮೇಲೆ ಮೇಲ್ವರ್ಗದ ದಲಿತರು ಅನೇಕ ಬಾರಿ ಎಂಎಲ್‌ಎ ಎಂಪಿ ಆಗಿದ್ದಾರೆ. ಅವರು ಮಿನಿಸ್ಟರ್, ಅವರ ಮಕ್ಕಳು ಮಿನಿಸ್ಟರ್ ಆಗಿದ್ದಾರೆ. ಅಳಿಯ ಸಂಸದರಾದರು. ಇಂತವರು ದಲಿತರ ಕಾರ್ಡ್ ಬಳಸಿಕೊಂಡು ನಿಜವಾದ ದಲಿತರಿಗೆ ಸಿಗಬೇಕಾದ ಸಮಾನತೆ ವಂಚಿತ ಮಾಡುತ್ತಿದ್ದಾರೆ. ಈ ಪ್ರಕ್ರಿಯೆ ನಿಲ್ಲಬೇಕು, ಅಕಸ್ಮಾತ್ ಬಾಬಾ ಸಾಹೇಬರು ಇಲ್ಲದೇ ಹೋಗಿದ್ರೆ ನಮ್ಮಂತವರ ಪರಸ್ಥಿತಿ ಏನಾಗುತ್ತಿತ್ತೋ? ಪ್ರಿಯಾಂಕ್‌ ಖರ್ಗೆ ಹಾಗೂ ಖರ್ಗೆಯವರು ಇನ್ನು ಮುಂದೆಯಾದರೂ ತಮ್ಮನ್ನ ತಾವು ತಿದ್ದಿಕೊಳ್ಳುವ ಪ್ರಯತ್ನ ಮಾಡಬೇಕು. ಭ್ರಷ್ಟಾಚಾರವಿಲ್ಲದ ಬದುಕನ್ನ ನಡೆಸಲು ಪ್ರಯತ್ನ ಮಾಡಲಿ ಅಂತ ಹೇಳಿದರು.

    ಈಗಾಗಲೇ ಅವರು 5 ಎಕರೆ ಜಮೀನನ್ನು ಅಯೋಗ್ಯ ರೀತಿಯಲ್ಲೇ ಸಂಪಾದಿಸಿದ್ದರು. ಅಯೋಗ್ಯ ಪದವನ್ನ ಅಧಿಕೃತವಾಗಿ ಬಳಸಬಹುದು ಅಂತ ಕೋರ್ಟ್‌ ನನಗೆ ಹೇಳಿದೆ. ಜನರ ಯೋಗ್ಯ ಗಲಾಟೆಯಿಂದ ಹೆದರಿ ಯೋಗ್ಯ ರೀತಿಯಲ್ಲಿ ಮರಳಿಸಿ ನಿಜಕ್ಕೂ ನಾನೊಬ್ಬ ಅಯೋಗ್ಯ ಅಂತ ಪ್ರೂ ಮಾಡಿಕೊಂಡಿದ್ದಾರೆ. ರಾಜ್ಯವನ್ನ ಮುನ್ನಡೆಸುವ ಮ್ಯಾಂಡೇಟ್ ಅವರಿಗೆ ಸಿಕ್ಕಿರುವುದರಿಂದ ಮುಂದೆ ಈ ರೀತಿ ಭ್ರಷ್ಟಾಚಾರದಿಂದ ಹೊರಗಿರಲಿ ಅಂತ ಹೇಳಿದರು. ಇದನ್ನೂ ಓದಿ:ಸಂಡೂರು ಟಿಕೆಟ್‌ ಯಾರಿಗೆ? – ಬಿಜೆಪಿ, ಕಾಂಗ್ರೆಸ್‌ನಿಂದ ಲಾಬಿ ಜೋರು

    ಈ ದೇಶದ ಎಲ್ಲಾ ಆಸ್ತಿಯನ್ನು ವಕ್ಫ್‌ ಕಬಳಿಸುವ ಪ್ರಯತ್ನ ಮಾಡುತ್ತಿದ್ದರೆ ವಕ್ಫ ಆಸ್ತಿಯನ್ನೇ ಖರ್ಗೆ ಕುಟುಂಬ ಕಬಳಿಸಿದೆ ಅಂತ ವಕ್ಫ್ ‌ನ ಅಧ್ಯಕ್ಷರೇ ಹೇಳಿದ್ದಾರೆ. ಇದು ಖರ್ಗೆ ಕುಟುಂಬದ ಮೇಲಿರುವ ದೊಡ್ಡ ಆರೋಪ. ಈ ಕುಟುಂಬ ಹಿಂದಿನಿಂದಲೂ ಈ ಕೆಲಸ ಮಾಡಿಕೊಂಡು ಬಂದಿದೆ.ಇದರ ಆರೋಪ ಜಾಯಿಂಟ್ ಪಾರ್ಲಿಮೆಂಟರಿ ಕಮಿಟಿಯಲ್ಲಿ ನಡೆಯುತ್ತಿದೆ ಎಂದರು.

    ಇವತ್ತು ನಾಡಿನ ಜನತೆಗೆ ಅವರು ಉತ್ತರ ಕೊಡಬೇಕಿದೆ. ವಕ್ಫ್‌ ಕಬಳಿಸಿದ ಆಸ್ತಿಯನ್ನ ಇವರು ಕಬಳಿಸಿದ್ದಾರಲ್ಲಾ ಅದಕ್ಕೆ ಉತ್ತರ ಕೊಡಬೇಕು. ರಾಷ್ಟ್ರೀಯತೆ ವಿಚಾರವಾಗಿ ರಾಷ್ಟ್ರಧರ್ಮದ ವಿಚಾರವಾಗಿ ಹೋರಾಟ ಮಾಡುವ ನನಗೆ ಈ ರೀತಿಯ ಸಣ್ಣಪುಟ್ಟ ಬೆದರಿಕೆಗಳಿಗೆ ನಿಂದಿಸುವ ಜೀವ ಇದಲ್ಲ ಅಂತ ಪ್ರಿಯಾಂಕ್‌ ಖರ್ಗೆಗೆ ಪ್ರೀತಿಯಿಂದ ಹೇಳುತ್ತೇನೆ ಎಂದು ವ್ಯಂಗ್ಯವಾಡಿದರು.

     

  • ನಾನು ರಾಜಕಾರಣ ಮಾತಾಡಲ್ಲ.. ಮೋದಿಗಾಗಿ ಮಾತ್ರ ಮಾತನಾಡ್ತೀನಿ: ಚಕ್ರವರ್ತಿ ಸೂಲಿಬೆಲೆ

    ನಾನು ರಾಜಕಾರಣ ಮಾತಾಡಲ್ಲ.. ಮೋದಿಗಾಗಿ ಮಾತ್ರ ಮಾತನಾಡ್ತೀನಿ: ಚಕ್ರವರ್ತಿ ಸೂಲಿಬೆಲೆ

    – ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ದೇವರ ಮುಂದೆ ನಿಂತು ಕಣ್ಣೀರು ಹಾಕಿ

    ವಿಜಯಪುರ: ನಾನು ರಾಜಕಾರಣ ಮಾತನಾಡಲ್ಲ, ಮೋದಿಗಾಗಿ ಮಾತ್ರ ರಾಜಕಾರಣ ಮಾತನಾಡಿದ್ದೇನೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ತಿಳಿಸಿದರು.

    ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ಈಗ ಕಾಂಗ್ರೆಸ್‌ಗೆ ವೋಟು ಹಾಕಿದ್ದಕ್ಕೆ ದೇವರ ಮುಂದೆ ನಿಂತು ಕಣ್ಣೀರು ಹಾಕಿ ಎಂದು ಹೇಳಿದರು. ಇದನ್ನೂ ಓದಿ: ಅತ್ಯಾಚಾರ ಕೇಸ್‌- ಶಾಸಕ ಮುನಿರತ್ನಗೆ ಜಾಮೀನು

    ಗಲಭೆ ಮಾಡಿದವರನ್ನ ಪೊಲೀಸರು ಬಂಧಿಸಿದಾಗ, ಸಚಿವರೇ.. ‘ಅವರು ಅಮಾಯಕರು ಬಿಡಿ’ ಎಂದು ಪತ್ರ ಬರೆಯುತ್ತಾರೆ. ಜ್ಞಾನ ದೇಗುಲ ಹೆಸರು, ಕಾಲೇಜುಗಳಲ್ಲಿ ಸರಸ್ವತಿ ಪೂಜೆ ನಿಲ್ಲಿಸಿದ್ರು ಎಂದು ಕಾಂಗ್ರೆಸ್‌ ವಿರುದ್ಧ ಆಕ್ರೋಶ ಹೊರಹಾಕಿದರು.

    ಇಂದು ವಕ್ಫ್‌ ಬೋರ್ಡ್‌ಗೆ ಯುವಕರು ಕಳೆದುಕೊಂಡರೆ, ನಾಳೆ ತಲೆ ತಗ್ಗಿಸಿಕೊಂಡು ನಮ್ಮ ಭೂಮಿಯನ್ನ ಕೊಡಬೇಕಾಗುತ್ತೆ. ನಾಳೆ ನಮ್ಮದೇ ಹಿಂದೂಗಳು, ಇಷ್ಟು ಭೂಮಿ ಕೊಟ್ಟರೆ ಏನಾಗುತ್ತೆ ಕೊಡಿ ಎನ್ನುತ್ತಾರೆ. ಈಗ ಹೋರಾಡುವ ಸಮಯ ಎಂದು ಎಚ್ಚರಿಸಿದರು. ಇದನ್ನೂ ಓದಿ: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರ ಗೊಂದಲ ನಿವಾರಣೆಗೆ ಕ್ರಮ: ಸಿದ್ದರಾಮಯ್ಯ

    ವಿಜಯಪುರದಲ್ಲಿ ಅತಿ ಹೆಚ್ಚು ಸ್ಲೀಪರ್ ಸೆಲ್‌ಗಳಿದ್ದಾರೆ.‌ ಇಲ್ಲಿಯೆ ಕುಂತು ಮಾಹಿತಿ ಕೊಡ್ತಾರೆ. ವಕ್ಫ್‌ ಬೋರ್ಡ್ ಹೋರಾಟ ವಿಜಯಪುರದ ಹೋರಾಟ ಅಲ್ಲ, ತಮಿಳುನಾಡಿನಿಂದ ಶುರುವಾಗಿದೆ. ಇಸ್ಲಾಂ ಧರ್ಮ ಹುಟ್ಟಿಯೇ ಇರಲಿಲ್ಲ, ಆಗ ಹಿಂದೂ ದೇಗುಲಗಳಲ್ಲಿ ಗಂಟೆ, ಜಾಗಟೆ ಸದ್ದು ಕೇಳ್ತಿದ್ವು ಎಂದರು.

    ವಿಜಯಪುರದಲ್ಲಿ ಹಿಂದೂಗಳು ಜಾಗೃತರಾಗಿದ್ದಾರೆ. ವಿಜಯಪುರದಿಂದಲೇ ಹಿಂದೂಸ್ತಾನ ಹೋರಾಟ ಆರಂಭವಾಗಲಿದೆ. ವಿಜಯಪುರದ ಒಂದಿಂಚು ಜಾಗ ಮುಟ್ಟಲು ಬಿಡಲ್ಲ ಎಂದು ತಿಳಿಸಿದರು.

  • ಪಾಕಿಸ್ತಾನ ಭಯೋತ್ಪಾದಕರು ಇಲ್ಲಿ ಮಾಡೋದೇನಿಲ್ಲ, ಇಲ್ಲೇ ಭಯೋತ್ಪಾದರನ್ನ ಸೃಷ್ಟಿಸಿದ್ದಾರೆ: ಸೂಲಿಬೆಲೆ

    ಪಾಕಿಸ್ತಾನ ಭಯೋತ್ಪಾದಕರು ಇಲ್ಲಿ ಮಾಡೋದೇನಿಲ್ಲ, ಇಲ್ಲೇ ಭಯೋತ್ಪಾದರನ್ನ ಸೃಷ್ಟಿಸಿದ್ದಾರೆ: ಸೂಲಿಬೆಲೆ

    – ಮೋದಿ ಪ್ರಧಾನಿಯಾದ್ಮೇಲೆ ದೇಶದಲ್ಲಿ ಬಾಂಬ್‌ ಬ್ಲಾಸ್ಟ್‌ ಘಟನೆಗಳು ನಡೆದಿರಲಿಲ್ಲ
    – ಭಯೋತ್ಪಾದಕರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರ ಇದೆ ಎಂದ ಸೂಲಿಬೆಲೆ

    ಯಾದಗಿರಿ: ಪಾಕಿಸ್ತಾನದ (Pakistan) ಭಯೋತ್ಪಾದಕರು ಇಲ್ಲಿ ಬಂದು ಮಾಡೋದು ಏನೂ ಇಲ್ಲ. ಇಲ್ಲೇ ಭಯೋತ್ಪಾದಕರನ್ನ ಸೃಷ್ಟಿ ಮಾಡಿದ್ದಾರೆ. ಅವರಿಗೆ ಸಪೋರ್ಟ್‌ ಮಾಡಲು ಕರ್ನಾಟಕ ಸರ್ಕಾರ ಇದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

    ಯಾದಗಿರಿ (Yadagiri) ಜಿಲ್ಲೆಯ ಶಹಾಪುರದ ಕಾರ್ಯಕ್ರಮವೊಂದರಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟ (Rameshwaram Cafe Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್; ಆರೋಪಿಯನ್ನು ಯಾವ ಕಾರಣಕ್ಕೂ ಬಿಡೋದಿಲ್ಲ: ಜಿ.ಪರಮೇಶ್ವರ್

    ಬೆಂಗಳೂರಿನಲ್ಲಿ ಬಹಳ ವರ್ಷಗಳ ನಂತರ ಬಾಂಬ್ ಬ್ಲಾಸ್ಟ್ ಆಗಿದ್ದನ್ನು ಕೇಳಿದ್ದೇವೆ. ಮೋದಿ ಅವರು ಪಿಎಂ ಆದ ನಂತರ ದೇಶದಲ್ಲಿ ಬಾಂಬ್ ಬ್ಲಾಸ್ಟ್ ಘಟನೆಗಳು ನಡೆದಿಲ್ಲ. ಬಹಳ ವರ್ಷಗಳ ನಂತರ ಈಗ ಬೆಂಗಳೂರಿನಲ್ಲಿ ನಡೆದಿದೆ. ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ಬಂದು ಮಾಡೋದು ಏನೂ ಇಲ್ಲ. ಇಲ್ಲಿಯೇ ಭಯೋತ್ಪಾದರನ್ನು ಸೃಷ್ಟಿ ಮಾಡಿಬಿಟ್ಟಿದ್ದಾರೆ. ಅವರಿಗೆ ಸಪೋರ್ಟ್‌ ಮಾಡಲು ಕರ್ನಾಟಕ ಸರ್ಕಾರ ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬ್ಲಾಸ್ಟ್‌ ಪ್ರಕರಣ- ನಾಲ್ವರ ವಶಕ್ಕೆ ಪಡೆದು ವಿಚಾರಣೆ

    ಮೋದಿ ಅವರು‌ ಪಾಕಿಸ್ತಾನದ ಭಯೋತ್ಪಾದಕರನ್ನು ಭಾರತದ ಗಡಿಯೊಳಗೆ ಬಿಡ್ತಿಲ್ಲ. ಭಾರತದ ಮೋಸ್ಟ್ ವಾಂಟೆಡ್ ಉಗ್ರರನ್ನು ಅಲ್ಲಿಯೇ ಮುಗಿಸಿ ಬಿಡ್ತಾರೆ. ಆದ್ರೆ ಈಗ ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ಬಂದು ಮಾಡೋದಕ್ಕೆ ಏನೂ ಇಲ್ಲ. ಅದಕ್ಕೆ ಇಲ್ಲಿಯೇ ಕೆಲವು ಭಯೋತ್ಪಾದರನ್ನು ಸೃಷ್ಟಿ ಮಾಡಿಬಿಟ್ಟಿದ್ದಾರೆ. ಅವರಿಗೆ ಸಪೋರ್ಟ್‌ ಮಾಡಲು ಕರ್ನಾಟಕ ಸರ್ಕಾರವಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ. ಸಂವಿಧಾನ ರಕ್ಷಣೆ ಮಾಡುವ ಕೇಂದ್ರದಲ್ಲಿ ಘೋಷಣೆ ಕೂಗಿದ್ದಾರೆ. ಬಿ.ಕೆ ಹರಿಪ್ರಸಾದ್ ಅವ್ರು ಪಾಕಿಸ್ತಾನ ಬಿಜೆಪಿಗೆ ಶತ್ರು ಇರಬಹುದು, ಕಾಂಗ್ರೆಸ್‌ಗೆ ಅಲ್ಲ ಅಂತ ಹೇಳಿದ್ದಾರೆ. ಅವರು ಲೇವಲ್ ಅಂತ ತೋರಿಸಿಬಿಟ್ರು. ಕಾಂಗ್ರೆಸ್‌ ಏನು ಮಾಡಲು ಹೊರಟಿದೆ ಅಂತ ಇದರಿಂದಲೇ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಮರಿ ಖರ್ಗೆ ಪುಕ್ಕಲ, ಸ್ವಂತ ಕ್ಷೇತ್ರದಲ್ಲಿ ಸತ್ಯವನ್ನು ಎದುರಿಸುವ ಧೈರ್ಯವಿಲ್ಲ: ಸೂಲಿಬೆಲೆ ಕಿಡಿ

    ಮರಿ ಖರ್ಗೆ ಪುಕ್ಕಲ, ಸ್ವಂತ ಕ್ಷೇತ್ರದಲ್ಲಿ ಸತ್ಯವನ್ನು ಎದುರಿಸುವ ಧೈರ್ಯವಿಲ್ಲ: ಸೂಲಿಬೆಲೆ ಕಿಡಿ

    – ಮೋದಿ ಪ್ರಭಾವಕ್ಕೆ ಕಾಂಗ್ರೆಸ್ ಕಂಗಾಲು

    ಕಲಬುರಗಿ: ರಾಜ್ಯಾದ್ಯಂತ ನಾನು ಪ್ರವಾಸ ಮಾಡಿದ್ದೇನೆ. ನಮ್ಮ ಕಾರ್ಯಕ್ರಮದಿಂದ ಯಾವುದೇ ಜಿಲ್ಲೆಯಲ್ಲೂ ಶಾಂತಿ ಭಂಗವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರದಲ್ಲಿ ಮಾತ್ರ ಶಾಂತಿ ಭಂಗವಾಗುತ್ತದೆಯಾ? ಮರಿ ಖರ್ಗೆ ಅವರಿಗೆ ತಮ್ಮದೇ ಸ್ವಂತ ಕ್ಷೇತ್ರದಲ್ಲಿ ಸತ್ಯವನ್ನು ಎದುರಿಸುವ ಧೈರ್ಯ ಇಲ್ಲ. ಹೀಗಾಗಿ ಪ್ರಿಯಾಂಕ್ ಖರ್ಗೆ (Priyank Kharge) ಅವರು ಒಬ್ಬ ಹೇಡಿ ಮತ್ತು ಪುಕ್ಕಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ವಾಗ್ದಾಳಿ ನಡೆಸಿದ್ದಾರೆ.

     

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಹಾಗೂ ನನ್ನ ನಡುವೆ ಹಿಂದೆಯೂ ಸಾಕಷ್ಟು ಬಾರಿ ಟ್ವೀಟ್ ವಾರ್‌ಗಳಾಗಿವೆ. ಮರಿ ಖರ್ಗೆ ಅವರ ಮನಸ್ಸಿನಲ್ಲಿ ನನ್ನ ಬಗ್ಗೆ ಹೆದರಿಕೆ ಇದೆ. ಮೇಲಾಗಿ ಚಿತ್ತಾಪುರದಲ್ಲಿ ನನ್ನ ಕಾರ್ಯಕ್ರಮದಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂಬ ಭಯವಿದೆ ಎಂದಿದ್ದಾರೆ.

    ಕಳೆದ ಹತ್ತು ವರ್ಷಗಳ ಆಡಳಿತದ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪಾರದರ್ಶಕ ಆಡಳಿತ, ದೇಶದಲ್ಲಿನ ಅಭಿವೃದ್ಧಿ ಕೆಲಸಗಳು ಸೇರಿದಂತೆ ವಿಶ್ವದಲ್ಲಿ ಹೆಸರು ಮಾಡಿರುವ ಅವರ ಪ್ರಭಾವವನ್ನು ನೋಡಿ ಕಾಂಗ್ರೆಸ್ ಸಂಪೂರ್ಣವಾಗಿ ಕಂಗಾಲಾಗಿ ಹೋಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಸ್ವತಃ ಅಬ್ ಕೀ ಬಾರ್ ಚಾರಸೋ ಪಾರ್ ಎಂದಿದ್ದಾರೆ. ಸೋನಿಯಾ ಗಾಂಧಿ ಕೂಡ ಲೋಕಸಭೆಯನ್ನು ಬಿಟ್ಟು ರಾಜ್ಯಸಭೆಗೆ ಹೋಗಿದ್ದಾರೆ. ಇವೆಲ್ಲವೂ ಸಂಗತಿಗಳನ್ನು ನೋಡಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ. ಅದೇ ರೀತಿ ರಾಜ್ಯದಲ್ಲಿ 28 ಸ್ಥಾನಗಳಲ್ಲಿ 28 ಸ್ಥಾನಗಳನ್ನು ಗೆದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದಿಂದ ಒಂದು ದೊಡ್ಡ ಬೊಕ್ಕೆಯನ್ನು ಉಡುಗೊರೆಯಾಗಿ ನೀಡಬೇಕೆಂಬ ಆಸೆಯಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತದ ಅವಧಿಯಲ್ಲಿ ಆಗಿರುವ ಅಭಿವೃದ್ಧಿ ಕೆಲಸಗಳ ಪರಿಚಯವನ್ನು ಸಮಾಜದ ಎಲ್ಲಾ ಜನರಿಗೆ ಪರಿಚಯಿಸುವ ಕೆಲಸವನ್ನು ನಮೋ ಬ್ರಿಗೇಡ್ ವತಿಯಿಂದ ಮಾಡಲಾಗುತ್ತಿದೆ. ಈಗಾಗಲೇ ಚಿಕ್ಕಮಗಳೂರು, ರಾಯಚೂರು, ಬೀದರ್ ಜಿಲ್ಲೆಯ ಬಾಲ್ಕಿಯಲ್ಲೂ ನಮೋ ಭಾರತ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

    ಬೀದರ್ ಜಿಲ್ಲೆಯ ಭಾಲ್ಕಿಯಲ್ಲಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಕಲಬುರಗಿ ಜಿಲ್ಲೆಯ ಚಿತ್ತಾಪುರದ ಬಾಪುರಾವ್ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮಕ್ಕೆ ಬರುವಾಗ ನಿಷೇಧ ಹೇರಿದ್ದು ಹಾಸ್ಯಾಸ್ಪದವಾಗಿದೆ. ಇದರಿಂದ ಕಾಂಗ್ರೆಸ್ ಮನಸ್ಥಿತಿ ಗೊತ್ತಾಗುತ್ತದೆ ಎಂದು ಕಿಡಿಕಾರಿದರು.

  • ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗ – ಸೂಲಿಬೆಲೆಯ ಚಿತ್ತಾಪುರ ಕಾರ್ಯಕ್ರಮಕ್ಕೆ ಅನುಮತಿ

    ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗ – ಸೂಲಿಬೆಲೆಯ ಚಿತ್ತಾಪುರ ಕಾರ್ಯಕ್ರಮಕ್ಕೆ ಅನುಮತಿ

    ಕಲಬುರಗಿ: ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಅವರ ನಮೋ ಭಾರತ್‌ (Namo Bharat) ಕಾರ್ಯಕ್ರಮ ನಿರ್ಬಂಧ ಹೇರಿದ್ದ ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ  ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ (High Court of Karnataka, Kalaburagi Bench) ತೆರವುಗೊಳಿಸಿದೆ.

    ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಪ್ರತಿನಿಧಿಸುವ ಚಿತ್ತಾಪುರ (Chittapur) ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್‌ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಜಿಲ್ಲಾಡಳಿತ ರದ್ದು ಮಾಡಿ ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.  ಇದನ್ನೂ ಓದಿ: ಮೋದಿ ಸಾಧನೆ ಬಗ್ಗೆ ಮಾತಾಡೋದನ್ನ ಸಹಿಸೋಕಾಗದೆ ಕಾರ್ಯಕ್ರಮ ಕ್ಯಾನ್ಸಲ್: ಸೂಲಿಬೆಲೆ ಕಿಡಿ

    ಸೂಲಿಬೆಲೆ ಜಿಲ್ಲೆ ಪ್ರವೇಶಿಸಿದರೆ ಶಾಂತಿ ಕದಡುತ್ತಾರೆ ಹಾಗೂ ಕಾನೂನು ವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಫೆ.‌29 ರಿಂದ ಮಾರ್ಚ್‌ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.  ಇದನ್ನೂ ಓದಿ: 200ಕ್ಕೂ ಅಧಿಕ ಪೊಲೀಸರಿಂದ ಭದ್ರತೆ – ಅಲ್ದೂರಿನಲ್ಲಿ ಸೂಲಿಬೆಲೆಯ ನಮೋ ಭಾರತ್ ಕಾರ್ಯಕ್ರಮ ಯಶಸ್ವಿ

     

    ಜಿಲ್ಲಾಡಳಿತದ ಆದೇಶವನ್ನ ಪ್ರಶ್ನಿಸಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಶ್ರೀಶಾನಂದ ಅವರಿದ್ದ ಪೀಠ, ಈ ಹಿಂದೆ ಕಾರ್ಯಕ್ರಮ ನಡೆಸಲು ಪೊಲೀಸರು ನೀಡಿದ್ದ ಅನುಮತಿಯನ್ನು ನೀಡಬೇಕು. ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೇಳಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವು ಮಾಡಿತು.

    ಕೋರ್ಟ್‌ ತೀರ್ಪು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸೂಲಿಬೆಲೆ, ಅಂಬೇಡ್ಕರ್‌ ನೀಡಿದ ಸಂವಿಧಾನದಿಂದ ಧೈರ್ಯವಾಗಿ ಪ್ರಶ್ನೆ ಮಾಡಿ ನಾವು ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ. ದೇಶ ಭಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ತಾಪುರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.

     

  • ಮೋದಿ ಸಾಧನೆ ಬಗ್ಗೆ ಮಾತಾಡೋದನ್ನ ಸಹಿಸೋಕಾಗದೆ ಕಾರ್ಯಕ್ರಮ ಕ್ಯಾನ್ಸಲ್: ಸೂಲಿಬೆಲೆ ಕಿಡಿ

    ಮೋದಿ ಸಾಧನೆ ಬಗ್ಗೆ ಮಾತಾಡೋದನ್ನ ಸಹಿಸೋಕಾಗದೆ ಕಾರ್ಯಕ್ರಮ ಕ್ಯಾನ್ಸಲ್: ಸೂಲಿಬೆಲೆ ಕಿಡಿ

    ಬೀದರ್: ನಮೋ ಭಾರತ್ ಕಾರ್ಯಕ್ರಮವನ್ನು ಅನೇಕ ಕಡೆ ತಡೆಯುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ (Priyank Kharge) ಕ್ಷೇತ್ರ ಚಿತ್ತಾಪುರದಲ್ಲಿ ಕಾರ್ಯಕ್ರಮ ತಡೆಯುವ ಕೆಲಸ ಆಗಿದ್ದು, ಅವರ ಕ್ಷೇತ್ರದಲ್ಲಿ ಪ್ರಧಾನಿ ಮೋದಿ (Narendra Modi) ಸಾಧನೆ ಬಗ್ಗೆ ಮಾತಾಡೋದನ್ನು ಅವರಿಂದ ಸಹಿಸೋಕೆ ಆಗುತ್ತಿಲ್ಲ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಕಿಡಿಕಾರಿದ್ದಾರೆ.

    ಬೀದರ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಧಿಕಾರದ ಮದ, ಆತಂಕದಿಂದ ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಯದಂತೆ ಪ್ಲ್ಯಾನ್ ಮಾಡಿದ್ದಾರೆ. ಬುಧವಾರ ತಡರಾತ್ರಿ ತಹಶೀಲ್ದಾರ್ ಕಡೆಯಿಂದ ಪತ್ರಕೊಟ್ಟು, ನಿಮ್ಮ ಕಾರ್ಯಕ್ರಮ ಕ್ಯಾನ್ಸಲ್ ಮಾಡಲಾಗಿದೆ ಎಂದು ಮಾಹಿತಿ ಕೊಟ್ಟಿದ್ದಾರೆ. ಬಳಿಕ ಜಿಲ್ಲೆಯ ಗಡಿಯಲ್ಲಿ ಯಾವ ಆದೇಶ ಇಲ್ಲದೇ ತಡೆಯುವ ಕೆಲಸ ಮಾಡಿದ್ದಾರೆ. ಮಧ್ಯರಾತ್ರಿವರೆಗೂ ಅಲ್ಲೇ ಇದ್ದು, ಆದೇಶ ಪ್ರತಿ ಕೊಡುವ ತನಕ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದೆ. ರಾತ್ರಿ 1 ಗಂಟೆಗೆ ಆದೇಶ ಪ್ರತಿ ಕೊಟ್ಟರು ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಕಾರ್ಯಕ್ರಮದ ಪರವಾನಿಗೆ, ಮೈಕ್ ಪರವಾನಗಿ ಕ್ಯಾನ್ಸಲ್ ಮಾಡಿ ಕಾಂಗ್ರೆಸ್ (Congress) ನನಗೆ ವಿನಾಕಾರಣ ಕಿರುಕುಳ ನೀಡಿದೆ. ತುರ್ತಾಗಿ ಕಮಿಷನರ್ ಬಳಿ ಆದೇಶ ಪ್ರತಿ ತಂದು ಕಾರ್ಯಕ್ರಮ ಕ್ಯಾನ್ಸಲ್ ಮಾಡಿದ್ದಾರೆ. ಸರ್ಕಾರದ ಸೂತ್ರ ಹಿಡಿದ ಈ ಜನ ಪ್ರಜಾಪ್ರಭುತ್ವದ ಬಗ್ಗೆ ಮಾತಾಡಿ, ಸಂವಿಧಾನ ಉಳಿಸಿ ಎಂದು ಹೇಳುತ್ತಾರೆ. ಮತ್ತೊಂದೆಡೆ ವ್ಯಕ್ತಿಯೊಬ್ಬನ ಹಕ್ಕು ತಡೆಯುವ ಈ ಪ್ರಯತ್ನ ಮಾಡುತ್ತಾರೆ. ಈ ನಡೆ ಅತ್ಯಂತ ಆತಂಕಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಕರ್ನಾಟಕದಲ್ಲಿ ನಾವು ಹಾಕಿದ ಒಂದು ಮತ ರಾಜ್ಯದಲ್ಲಿ ಇಂತಹ ಸರ್ಕಾರವನ್ನು ತಂದಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ‘ಜೈ ಸೀತಾರಾಮ್‌’ ಎಂದು ಘೋಷಣೆ ಕೂಗಿದ ಸಿದ್ದರಾಮಯ್ಯ; ಬಿಜೆಪಿಗೆ ಠಕ್ಕರ್

  • 200ಕ್ಕೂ ಅಧಿಕ ಪೊಲೀಸರಿಂದ ಭದ್ರತೆ – ಅಲ್ದೂರಿನಲ್ಲಿ ಸೂಲಿಬೆಲೆಯ ನಮೋ ಭಾರತ್ ಕಾರ್ಯಕ್ರಮ ಯಶಸ್ವಿ

    200ಕ್ಕೂ ಅಧಿಕ ಪೊಲೀಸರಿಂದ ಭದ್ರತೆ – ಅಲ್ದೂರಿನಲ್ಲಿ ಸೂಲಿಬೆಲೆಯ ನಮೋ ಭಾರತ್ ಕಾರ್ಯಕ್ರಮ ಯಶಸ್ವಿ

    ಚಿಕ್ಕಮಗಳೂರು: ಬಿಗಿ ಪೊಲೀಸ್‌ ಭದ್ರತೆ ಮಧ್ಯೆ ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರ (Chakravarty Sulibele) ನಮೋ ಭಾರತ್‌ ಕಾರ್ಯಕ್ರಮ ಆಲ್ದೂರು (Aldur) ಪಟ್ಟಣದಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ.

    ಚಿಕ್ಕಮಗಳೂರು ನಗರದಲ್ಲಿ ನಮೋ ಭಾರತ್‌ (Namo Bharat) ಕಾರ್ಯಕ್ರಮ ನಡೆದಾಗ ಯೂತ್ ಕಾಂಗ್ರೆಸ್ (Youth Congress) ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಕಾರಣಕ್ಕೆ ಆಲ್ದೂರು ಚಿಕ್ಕಮಗಳೂರು ಜಿಲ್ಲೆಯ ಸೂಕ್ಷ್ಮ ಪಟ್ಟಣವಾಗಿದ್ದ ಕಾರಣ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದನ್ನೂ ಓದಿ: 70 ವರ್ಷಗಳ ಕಾಂಗ್ರೆಸ್ ದುರಾಡಳಿತದಿಂದ ಭಾರತ ಪ್ರಗತಿ ಕಂಡಿಲ್ಲ: ಜಗದೀಶ್ ಶೆಟ್ಟರ್

    ಒಬ್ಬರು ಎಸ್‌ಪಿ, ಐದು ಪಿಎಸ್‌ಐ, ಇಬ್ಬರು ಇನ್ಸ್‌ಪೆಕ್ಟರ್‌, 200ಕ್ಕೂ ಅಧಿಕ ಪೊಲೀಸರ ಭದ್ರತೆಯಲ್ಲಿ ನಮೋ ಭಾರತ್ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯವಾಯಿತು.  ಇದನ್ನೂ ಓದಿ: ವಿರುಷ್ಕಾ ದಂಪತಿ ಪುತ್ರ ‘ಅಕಾಯ್‌’ ಹೆಸರಿನ ಅರ್ಥವೇನು ಗೊತ್ತಾ?

    ಚಿಕ್ಕಮಗಳೂರಿನಲ್ಲಿ ಕಾರ್ಯಕ್ರಮ ನಡೆದಾಗ ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶಿಸಿ, ಚಕ್ರವರ್ತಿ ಸೂಲೆಬೆಲೆ ವಿರುದ್ಧ ಅವಹೇಳನಕಾರಿ ಬ್ಯಾನರ್ ಹಾಕಿದ್ದರು. ಸೂಲಿಬೆಲೆ ಭಾಷಣದ ಹಿಂಭಾಗದಲ್ಲಿ ಬ್ಯಾನರ್ ಹಾಕಿದ್ದರಿಂದ ನೋಡ ನೋಡುತ್ತಿದ್ದಂತೆಯೇ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಬಿಜೆಪಿ ಕಾರ್ಯಕರ್ತರು ಉದ್ರಿಕ್ತರಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆಗೆ ಯತ್ನಿಸಿದ್ದರು‌. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.

    ಈ ಘಟನೆಯಿಂದ ಎಚ್ಚೆತ್ತ ಜಿಲ್ಲಾ ಪೊಲೀಸ್‌ ಒಬ್ಬರು ಎಎಸ್‌ಪಿ, ಪಿಎಸ್ಐ, ಸಿಪಿಐ, ಡಿವೈಎಸ್‌ಪಿ ಸೇರಿ 200ಕ್ಕೂ ಅಧಿಕ ಪೊಲೀಸರನ್ನು ಕಾರ್ಯಕ್ರಮಕ್ಕೆ ನಿಯೋಜನೆ ಮಾಡಿತ್ತು.