Tag: ಚನ್ನಮ್ಮನಕೆರೆ ಪೊಲೀಸ್‌ ಠಾಣೆ

  • ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    ಬೆಂಗಳೂರು | ಮಹಿಳೆಯ ಭಯಾನಕ ಹತ್ಯೆ ಕೇಸ್‌ – ಅಸ್ಸಾಂ ಮೂಲದ ಲಿವ್‌ ಇನ್‌ ಗೆಳೆಯ ತಮ್ಸುದ್ದಿನ್ ಅರೆಸ್ಟ್‌

    – ಕೇಸ್‌ ದಾಖಲಾದ 20 ಗಂಟೆಯಲ್ಲೇ ಹಂತಕನ ಬಂಧನ

    ಬೆಂಗಳೂರು: ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿಯನ್ನ ಸಿ.ಕೆ ಅಚ್ಚುಕಟ್ಟು ಠಾಣೆ ಪೊಲೀಸರು (Chennamanakere Police Station) ಬಂಧಿಸಿದ್ದಾರೆ.

    ಅಸ್ಸಾಂ (Assam) ಮೂಲದ ತಮ್ಸುದ್ದಿನ್ ಬಂಧಿತ ಆರೋಪಿ. ಕೊಲೆಯಾದ ಮಹಿಳೆ ನಿವಾಸಿ ಪುಷ್ಪಾ @ ಆಶಾ ಮತ್ತು ತಮ್ಸುದ್ದೀನ್‌ ಲಿವ್‌ ಇನ್‌ ರಿಲೇಷನ್‌ನಲ್ಲಿದ್ದರು. ಇಬ್ಬರ ಭಿನ್ನಾಭಿಪ್ರಾಯ ಉಂಟಾಗಿತ್ತು, ಇದೇ ಕೊಲೆಗೆ ಕಾರಣ ಅನ್ನೋದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

    ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್‌ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಘಟನೆ?
    ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿತ್ತು. ತಡರಾತ್ರಿ ಆಟೋದಲ್ಲಿ ಬಂದ ಹಂತಕ ಬಿಬಿಎಂಪಿ ಲಾರಿಯಲ್ಲಿ ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದ.

    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.

  • ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದ ಮಹಿಳೆ – ಗಂಡನೇ ಕೊಲೆ ಮಾಡಿ ಹೆಣ ತಂದು ಬಿಸಾಡಿರುವ ಶಂಕೆ

    – ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ ಕೇಸ್‌ಗೆ ಟ್ವಿಸ್ಟ್‌

    ಬೆಂಗಳೂರು: ಸಿಲಿಕಾನ್ ಸಿಟಿ ಮಂದಿ ಮತ್ತೆ ಬೆಚ್ಚಿ ಬಿದ್ದಿದ್ದಾರೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣಾ (Chennamanakere Police Station) ವಾಪ್ತಿಯಲ್ಲಿ ಮಹಿಳೆಯೋಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮಹಿಳೆಯನ್ನು ಕೊಲೆ ಮಾಡಿದ ಮೂಟೆ ಕಟ್ಟಿ ಕಸದ ಲಾರಿಯಲ್ಲಿಡಲಾಗಿದೆ. ತಡರಾತ್ರಿ ಆಟೋದಲ್ಲಿ ಬಂದ ಹಂತಕರು ಬಿಬಿಎಂಪಿ ಲಾರಿಯಲ್ಲಿ (BBMP garbage truck) ಶವದ ಮೂಟೆ ಎಸೆದು ಎಸ್ಕೇಪ್ ಆಗಿದ್ದಾರೆ. ಸುಮಾರು 30-40 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿದ್ದು. ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದು, ಮಹಿಳೆಯ ಗುರುತು ಪತ್ತೆ ಮಾಡಿದ್ದಾರೆ. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿದೆ. ಈಕೆ ಅನ್ಯಕೋಮಿನ ವ್ಯಕ್ತಿಯನ್ನ ಪ್ರೀತಿಸಿ ಮದ್ವೆಯಾಗಿದ್ದರು. ಇದೀಗ ಗಂಡನೇ ಕೊಲೆ ಮಾಡಿ, ಬಳಿಕ ಸಿ.ಕೆ ಅಚ್ಚುಕಟ್ಟು ಪ್ರದೇಶದಲ್ಲಿ ಮೃತದೇಹವನ್ನ ತಂದು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬಿಬಿಎಂಪಿ ಕಸದ ಲಾರಿಯಲ್ಲಿತ್ತು ಮೃತದೇಹ
    ರಾತ್ರಿ 1.40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿದೆ. ಬಳಿಕ ಮೃತದೇಹ ಇರೋದು ಗೊತ್ತಾಗಿದೆ. ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿದೆ. ಇದನ್ನೂ ಓದಿ: ಆಸ್ತಿ ಇದ್ರೂ ಮದುವೆಯಾಗಿಲ್ಲ ಎಂದ ವಿಡಿಯೋ ವೈರಲ್‌ – 18 ಎಕರೆ ಆಸ್ತಿಗಾಗಿ ಎಂಟ್ರಿ ಕೊಟ್ಟ ಕಿಲ್ಲರ್‌ ಬ್ಯೂಟಿ!

    ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದಾರೆ. ಸದ್ಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

    ಒಟ್ಟಾರೆ.. ಮಹಿಳೆಯನ್ನು ಬೇರೆಡೆ ಹತ್ಯೆ ಮಾಡಿ ಇಲ್ಲಿಗೆ ಮೃತದೇಹ ಎಸೆಯಲಾಯ್ತಾ ಅಥವಾ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಯ್ತಾ ಎಂಬ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: Chikkamagaluru | ವಸತಿ ಶಾಲೆಯ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

  • ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    ಬೆಂಗಳೂರಲ್ಲಿ ಭಯಾನಕ ಹತ್ಯೆ – ಮಹಿಳೆಯ ಕೊಲೆ ಮಾಡಿ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್!

    – ಅತ್ಯಾಚಾರ ಶಂಕೆ, ಹಂತಕರಿಗಾಗಿ ಹುಡುಕಾಟ

    ಬೆಂಗಳೂರು: ನಗರದಲ್ಲಿ ಮಹಿಳೆಯ (woman) ಭಯಾನಕ ಹತ್ಯೆ ನಡೆದಿದ್ದು, ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಮಹಿಳೆಯನ್ನ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್​ ಆಗಿರುವಂತಹ ಘಟನೆ ಚನ್ನಮ್ಮನಕೆರೆ ಠಾಣಾ (Chennamanakere Police Station) ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆಯೂ ವ್ಯಕ್ತವಾಗಿದ್ದು, ಪ್ರಕರಣ ದಾಖಲಾಗಿದೆ.

    ನಿನ್ನೆ‌ ತಡರಾತ್ರಿ ಆಟೋದಲ್ಲಿ ಮಹಿಳೆ ಶವ ತಂದಿದ್ದ ದುಷ್ಕರ್ಮಿ, ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿಟ್ಟು ಪರಾರಿ ಆಗಿದ್ದಾನೆ. ಆಟೋದಲ್ಲಿ ಒಬ್ಬನೇ ವ್ಯಕ್ತಿ ಬಂದಿದ್ದ ಎಂದು ಹೇಳಲಾಗುತ್ತಿದೆ. 30 ರಿಂದ 35 ವರ್ಷದ ಮಹಿಳೆ ಗುರುತು ಪತ್ತೆಗಾಗಿ ಪೊಲೀಸರಿಂದ ತನಿಖೆ ನಡೆದಿದ್ದು, ಅಪರಿಚಿತ ಮಹಿಳೆ ಶವ (Women Dead Body) ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ನಕಲಿ ಬ್ರಾಂಡೆಡ್ ಜೀನ್ಸ್ ತಯಾರಿಕಾ ಅಡ್ಡೆ ಮೇಲೆ ಪೊಲೀಸ್ ದಾಳಿ – 30 ಲಕ್ಷಕ್ಕೂ ಅಧಿಕ ಮೌಲ್ಯದ ಜೀನ್ಸ್ ಸೀಜ್

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಚನ್ನಮ್ಮನಕರೆ ಅಚ್ಚುಕಟ್ಟು ಠಾಣೆಯ ಪೊಲೀಸರು (Chennamanakere Achukattu Police Station) ಕೊಲೆ ಹಂತಕರಿಗಾಗಿ ಹುಡುಕಾಟ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದನ್ನೂ ಓದಿ: Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

    ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
    ನಿನ್ನೆ (ಶನಿವಾರ) ತಡರಾತ್ರಿ 1:40ರ ವೇಳೆಗೆ ವ್ಯಕ್ತಿಯೊಬ್ಬರು ಕಸ ಹಾಕಲು ಸ್ಕೇಟಿಂಗ್ ಗ್ರೌಂಡ್ (Skating Ground) ಬಳಿ ಬಂದಿದ್ದರು. ಈ ವೇಳೆ ಕಸದ ಗುಡ್ಡೆಯಲ್ಲಿದ್ದ ಚೀಲವೊಂದರಲ್ಲಿ ತಲೆಕೂದಲು ಕಾಣಿಸಿದೆ. ಚೀಲ ಬಿಚ್ಚಿ ನೋಡಿದಾಗ ಯುವತಿಯ ದೇಹ ಚೀಲದಲ್ಲಿರುವುದು ಗೊತ್ತಾಗಿದೆ. ತಕ್ಷಣವೇ ಮಾಹಿತಿ ನೀಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದ್ದಾರೆ. ಈ ವೇಳೆ ಒಬ್ಬನೇ ವ್ಯಕ್ತಿ ಆಟೋದಲ್ಲಿ ಮೂಟೆ ಸಮೇತ ತಂದು ಬಿಸಾಡಿ ಹೋಗಿರುವುದು ಗೊತ್ತಾಗಿದೆ. ಸದ್ಯ ಪೊಲೀಸರು ಮೃತಪಟ್ಟಿರೋದು 25-30ನೇ ವಯಸ್ಸಿನ ಯುವತಿ ಅಂತ ಅಂದಾಜಿಸಿದ್ದಾರೆ.

    ಮೃತ ಯುವತಿ ಅರ್ಬನ್ ಕಂಪನಿ ಟಿ ಶರ್ಟ್ ಪ್ಯಾಂಟ್ ಧರಿಸಿರುವುದು ಕಂಡುಬಂದಿದೆ. ಯುವತಿ ದೇಹದ ಮೇಲೆ ಒಳ ಉಡುಪುಗಳು ಇರಲಿಲ್ಲವಾದ್ದರಿಂದ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹಂತಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: 5 ಹುಲಿಕೊಂದ ಹಂತಕರು ಲಾಕ್ – ಕೊನೆಗೂ ಹೊರಬಂತು ರಹಸ್ಯ, 3 ಆರೋಪಿಗಳಿಗೆ ನ್ಯಾಯಾಂಗ ಬಂಧನ