ಹಾಸನ: ಐತಿಹಾಸಿಕ ಬೇಲೂರಿನಲ್ಲಿ (Belur) ಗಣೇಶನ ವಿಗ್ರಹಕ್ಕೆ (Ganesha Idol) ಚಪ್ಪಲಿ (Slippers) ಹಾರ ಹಾಕಿ ಅಪಮಾನ ಮಾಡಿದ ಘಟನೆಯನ್ನು ಖಂಡಿಸಿ ಇಂದು ಬೇಲೂರು ಬಂದ್‌ಗೆ ಕರೆ ನೀಡಲಾಗಿದೆ.
ಹಿಂದೂಪರ ಸಂಘಟನೆಗಳಿಂದ ಬೇಲೂರು ಪಟ್ಟಣ ಬಂದ್‌ಗೆ ಕರೆ ನೀಡಲಾಗಿದೆ. ಸೆ.20ರ ರಾತ್ರಿ ಅಸ್ವಸ್ಥ ಮಹಿಳೆ ದೇವಾಲಯದೊಳಗೆ ತೆರಳಿ ಗಣೇಶ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದ್ದಳು. ಹಾಸನ ನಗರದ ವಿಜಯನಗರ ಬಡಾವಣೆಯ ಮಹಿಳೆ ಲೀಲಮ್ಮ ಕೃತ್ಯವೆಸಗಿದ್ದಾಳೆ. ಈಗಾಗಲೇ ಆರೋಪಿ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸ್ವಸ್ಥ ಮಹಿಳೆಯ ಕೃತ್ಯದ ಹಿಂದೆ ಯಾರಿದ್ದಾರೆಂದು ತನಿಖೆ ನಡೆಸುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಇದನ್ನೂ ಓದಿ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ಅಪಮಾನ – ಮಹಿಳೆ ಪೊಲೀಸರ ವಶಕ್ಕೆ
ಬಂದ್ ಹಿನ್ನೆಲೆ ಪಟ್ಟಣದಲ್ಲಿ ಬಹುತೇಕ ಬಂದ್ ವಾತಾವರಣ ನಿರ್ಮಾಣವಾಗಿದೆ. ವರ್ತಕರು ಸ್ವಯಂಪ್ರೇರಿತವಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ 10:30ರ ಬಳಿಕ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಲಿದ್ದಾರೆ. ಇದನ್ನೂ ಓದಿ: Hassan | ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು
ಪ್ರಕರಣ ಏನು?
ಹಾಸನ ಜಿಲ್ಲೆಯಲ್ಲಿ ಮಹಾಲಯ ಅಮವಾಸ್ಯೆಯ ಬೆನ್ನಲ್ಲೇ ಮಹಿಳೆಯೊಬ್ಬರು ವಿಕೃತಿ ಮೆರೆದಿದ್ದಾರೆ. ಬೇಲೂರು ಪಟ್ಟಣದಲ್ಲಿರುವ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಳಗ್ಗೆ ಭಕ್ತಾಧಿಗಳು ಕೈ ಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿರುವುದು ಬೆಳಕಿಗೆ ಬಂದಿದೆ. ಕೂಡಲೇ ಸ್ಥಳಕ್ಕೆ ಬಂದ ಸ್ಥಳೀಯರು ಕೃತ್ಯ ಖಂಡಿಸಿ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ – ಸೆ.27ರಂದು ಬನ್ನಿ ಮಂಟಪದಲ್ಲಿ ವೈಮಾನಿಕ ಪ್ರದರ್ಶನ
ಇನ್ನು ಪ್ರತಿಭಟನಾ ಸ್ಥಳಕ್ಕೆ ಬೇಲೂರು ತಹಸೀಲ್ದಾರ್, ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದ್ರು. ಮತ್ತೊಂದೆಡೆ ಅರ್ಚಕರು ಶುದ್ಧಿಕಾರ್ಯ ನಡೆಸಿದ್ದಾರೆ. ತನಿಖೆಗೆ ಮುಂದಾದ ಪೊಲೀಸರು ಸಿಸಿಟಿವಿ ದೃಶ್ಯಗಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ದೇವಸ್ಥಾನಕ್ಕೆ ಮಹಿಳೆಯೊಬ್ಬರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಎಂಟ್ರಿಯಾದ ದೃಶ್ಯ ಸೆರೆಯಾಗಿದೆ. ಕಬ್ಬಿಣದ ಬಾಗಿಲು ತೆರೆದು ಒಳಗೆ ಬಂದ ಆಕೆ ಗಣೇಶ ಮೂರ್ತಿ ಬಳಿ ಹೋಗಿರುವ ದೃಶ್ಯ ಸೆರೆಯಾಗಿದೆ. ಇದನ್ನೂ ಓದಿ: ನವರಾತ್ರಿಯಿಂದ ದೇಶದಲ್ಲಿ ಜಿಎಸ್‌ಟಿ ಉಳಿತಾಯ ಉತ್ಸವ – ಸ್ವದೇಶಿ ವಸ್ತುಗಳನ್ನು ಖರೀದಿಸಿ: ಮೋದಿ ಕರೆ
ಘಟನೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿಕಾರಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ತುಷ್ಟೀಕರಣದ ಪರಾಕಾಷ್ಟೆ ಮುಟ್ಟುತ್ತಿದೆ. ಮತಾಂಧ ಮುಸ್ಲಿಮರು ಗಡಿಬಿಡಿ ಕೆಲಸ ಮಾಡುತ್ತಾರೆ. ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್ ಪ್ರೋತ್ಸಾಹ ಇದೆ. ಹೀಗಾಗಿ ಇಂಥಾ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇತ್ತ ಶಾಸಕ ಹೆಚ್.ಕೆ ಸುರೇಶ್ ಮಾತನಾಡಿ, ಹೀನ ಕೃತ್ಯವೆಸಗಿದವರ ಮೇಲೆ ಕ್ರಮ ಆಗಬೇಕು. ಆರೋಪಿಯನ್ನು ಬಂಧಿಸಿ ತಕ್ಕ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿದ್ದರು. ಘಟನಾ ಸ್ಥಳಕ್ಕೆ ಸಿ.ಟಿ ರವಿ ಭೇಟಿ ನೀಡಿ.ಪ್ರತಿಭಟನೆ ನಡೆಸಿ, ಕೃತ್ಯವನ್ನು ಖಂಡಿಸಿದರು. ಇದನ್ನೂ ಓದಿ: ನಾಳೆಯಿಂದ ಜಾತಿ ಜನಗಣತಿ, ಒಬ್ಬ ಸಮೀಕ್ಷಕರಿಗೆ ಕನಿಷ್ಠ 150 ಮನೆ ಹಂಚಿಕೆ: ಮಧುಸೂದನ್ ನಾಯ್ಕ್
ಲಕ್ನೋ: ಲೋಕಸಭಾ ಚುನಾವಣೆಗೆ (Loksabha Elections 2024) ದೇಶಾದ್ಯಂತ ಬಿಸಿ ಬಿಸಿ ವಾತಾವರಣ ನಿರ್ಮಾಣವಾಗಿದೆ. ಚುನಾವಣೆ ಗೆಲ್ಲಲು ಅಭ್ಯರ್ಥಿಗಳು ಹೊಸ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಅಂತೆಯೇ ಉತ್ತರಪ್ರದೇಶದ ಅಲಿಗಢ್‌ನಲ್ಲಿ ಅಭ್ಯರ್ಥಿಯೊಬ್ಬರು ಅಚ್ಚರಿ ಮೂಡಿಸುವ ಕೆಲಸ ಮಾಡಿದ್ದಾರೆ.
ಹೌದು. ಯಾರನ್ನಾದರೂ ಶಿಕ್ಷಿಸಲು ಅಥವಾ ಅವಮಾನಿಸಲು ಚಪ್ಪಲಿ ಹಾರವನ್ನು ಧರಿಸುವುದನ್ನು ನೀವು ಆಗಾಗ್ಗೆ ನೋಡಿರಬಹುದು. ಆದರೆ ಅಲಿಗಢದ (Aligarh Constituency) ಸ್ವತಂತ್ರ ಅಭ್ಯರ್ಥಿ ಪಂಡಿತ್ ಕೇಶವ್ ದೇವ್ ಗೌತಮ್ (Pandit Keshav Dev Gautam) ಚಪ್ಪಲಿ ಹಾರ ಹಾಕಿಕೊಂಡು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಹೂವಿನ ಹಾರದ ಬದಲು ಚಪ್ಪಲಿ ಹಾರ ಹಾಕಿಕೊಂಡು ಮತ ಯಾಚಿಸಿದ್ದನ್ನು ಕಂಡು ಎಲ್ಲರೂ ಅಚ್ಚರಿ ವ್ಯಕ್ತಪಡಿಸಿದ್ದಾರೆ.
#WATCH | Aligarh, UP: Independent candidate from Aligarh Pandit Keshav Dev has been allotted 'slippers' as the election symbol. After which, he was seen carrying out the election campaign wearing a garland of 7 slippers around his neck. (08.04) pic.twitter.com/V0Hm8JYRmC
ಚಪ್ಪಲಿ ಹಾರ ಯಾಕೆ..?: ಪಂಡಿತ್ ಕೇಶವ್ ದೇವ್ ಅವರು ಸ್ವತಂತ್ರ ಅಭ್ಯರ್ಥಿಯಾಗಿದ್ದು, ಅವರ ಚುನಾವಣಾ ಚಿಹ್ನೆ ಚಪ್ಪಲಿ ಆಗಿದೆ. ಸ್ವತಃ ಕೇಶವ್ ದೇವ್ ಅವರೇ ಚಪ್ಪಲಿ ಚುನಾವಣಾ ಚಿಹ್ನೆಗೆ ಅರ್ಜಿ ಸಲ್ಲಿಸಿರುವುದಾಗಿದೆ. ಅದರಂತೆ ಚಿಹ್ನೆ ದೊರೆತ ಬಳಿಕ ಕೊರಳಿಗೆ 7 ಚಪ್ಪಲಿಗಳನ್ನು ಹಾರ ಮಾಡಿ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಕೇಶವ್ ಅವರು ಭ್ರಷ್ಟಾಚಾರವನ್ನು ವಿರೋಧಿಸುವ ಮೂಲಕವೂ ಸುದ್ದಿಯಲ್ಲಿದ್ದಾರೆ. ಇದನ್ನೂ ಓದಿ: ಪ್ರಣಾಳಿಕೆಯನ್ನೇ ಮದ್ವೆ ಕಾರ್ಡ್‌ನಲ್ಲಿ ಮುದ್ರಿಸಿದ ಪವನ್ ಕಲ್ಯಾಣ್ ಬೆಂಬಲಿಗ!
ಮರದ ಮೇಲೆ ಕುಳಿತು ಬಂದಿದ್ದರು: RTI ಕಾರ್ಯಕರ್ತನಾಗಿರುವ ಪಂಡಿತ್ ಕೇಶವ್ ದೇವ್ ಅವರು ಭಾರತೀಯ ಹಿಂದೂ ರಾಷ್ಟ್ರ ಸೇನೆ ಮತ್ತು ಭ್ರಷ್ಟಾಚಾರ ವಿರೋಧಿ ಸೇನೆ ಎಂಬ ಸಂಘಟನೆಗಳನ್ನು ಸಹ ನಡೆಸುತ್ತಿದ್ದಾರೆ. ಎರಡು ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಗರ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಬೇಕಾಯಿತು. ಅಲ್ಲದೇ ಕಳೆದ ವರ್ಷ ಅಲಿಘರ್ ಮುನ್ಸಿಪಲ್ ಕಾರ್ಪೊರೇಶನ್‌ನ 69 ನೇ ವಾರ್ಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಪಂಡಿತ್ ಕೇಶವದೇವ್ ಅವರು ತಮ್ಮ ಮನೆಯಿಂದ ಮರದ ಮೇಲೆ ಕುಳಿತು ಕಲೆಕ್ಟರೇಟ್‌ನಲ್ಲಿರುವ ನಾಮನಿರ್ದೇಶನ ಕೇಂದ್ರವನ್ನು ತಲುಪಿ ಸುದ್ದಿಯಾಗಿದ್ದರು.
ಚುನಾವಣಾ ಕಣದಲ್ಲಿದ್ದಾರೆ 14 ಅಭ್ಯರ್ಥಿಗಳು: ಅಲಿಗಢ ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಅಂದರೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಸೋಮವಾರ ನಾಮಪತ್ರ (Nomination) ಹಿಂಪಡೆಯುವ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇಬ್ಬರು ಪಕ್ಷೇತರರು ನಾಮಪತ್ರ ಹಿಂಪಡೆದಿದ್ದಾರೆ. ಈಗ ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಮಾರ್ಚ್ 28ರಿಂದ ಏಪ್ರಿಲ್ 4ರವರೆಗೆ ಒಟ್ಟು 21 ಮಂದಿ ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ ಲೋಪದೋಷ ಕಂಡು ಬಂದ ಹಿನ್ನೆಲೆಯಲ್ಲಿ 5 ಮಂದಿಯ ನಾಮಪತ್ರಗಳನ್ನು ರದ್ದುಗೊಳಿಸಲಾಗಿದೆ. ಇದಾದ ಬಳಿಕ ಸೋಮವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು.
ಬಾಗಲಕೋಟೆ: ರಂಭಾಪುರಿ ಶ್ರೀಗಳ (Rambhapuri Shree) ಕಾರಿಗೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ಬಾಗಲಕೋಟೆ (Bagalkot) ಜಿಲ್ಲೆಯ ಕಲಾದಗಿಯಲ್ಲಿ (Kaladgi) ನಡೆದಿದೆ.
ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ರಂಭಾಪುರಿ ಶ್ರೀ ವಿರುದ್ಧ ಜನರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಏನಿದು ಗಲಾಟೆ?
ಕಲಾದಗಿಯ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಮ್.ಗಂಗಾಧರ ಸ್ವಾಮೀಜಿಯನ್ನ ನೇಮಕ ಮಾಡಿದ್ದರು. ಇದನ್ನೂ ಓದಿ: 284 ಕೇಸ್, 1.40 ಲಕ್ಷ ರೂ. ಫೈನ್ – ಪೊಲೀಸರ ಬಲೆಗೆ ಬಿದ್ದ ಯುವಕ
ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ಏಕಪಕ್ಷೀಯವಾಗಿ ರಂಭಾಪುರಿ ಶ್ರೀಗಳು ನಿರ್ಧಾರ ತೆಗೆದುಕೊಂಡಿದ್ದಾರೆಂದು ಕೆಲ ಗ್ರಾಮಸ್ಥರು ಆರೋಪಿಸಿದ್ದರು. ನಂತರ ರಂಭಾಪುರಿ ಶ್ರೀಗಳ ವಿರೋಧಿ ಬಣ ನೂತನ ಸ್ವಾಮೀಜಿಯನ್ನಾಗಿ ಮಹಾಂತ ದೇವರು ಸ್ವಾಮೀಜಿಯನ್ನ ಕರೆತಂದು ಅದ್ಧೂರಿ ಮೆರವಣಿಗೆ ಮಾಡಿತ್ತು. ಪರ, ವಿರೋಧ ಬಣಗಳು ಹುಟ್ಟಿಕೊಂಡು ಪ್ರಕರಣ ಈಗ ಜಿಲ್ಲಾ ನ್ಯಾಯಾಲಯದ ಮೆಟ್ಟಿಲೇರಿದೆ.
ಇಂದು ಗಂಗಾಧರ ಸ್ವಾಮೀಜಿ ಮಠದ ಹೊಲದ ಉಳುಮೆಗೆ ಮುಂದಾದಾಗ ಭಕ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಠದ ಒಟ್ಟು 72 ಎಕ್ರೆ ಭೂಮಿಯನ್ನು ರಂಭಾಪುರಿ ಶ್ರೀ ಮತ್ತು ಗಂಗಾಧರ ಸ್ವಾಮೀಜಿ ಲಪಟಾಯಿಸಲು ಮುಂದಾಗಿದ್ದಾರೆ ಎನ್ನುವುದು ಭಕ್ತರ ಆರೋಪ.
ವಿವಾದ ಕೋರ್ಟ್‌ನಲ್ಲಿರುವಾಗ ಕಟ್ಟಡ ದುರಸ್ತಿ ಹಾಗೂ ಜಮೀನು ಉಳುಮೆಗೆ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಗಲಾಟೆ ನಡೆಯುತ್ತಿರುವಾಗಲೇ ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ರಂಭಾಪುರಿ ಶ್ರೀಗಳು ತೆರಳುತ್ತಿದ್ದರು. ಈ ವೇಳೆ ರಂಭಾಪುರಿ ಶ್ರೀಗಳು ಕಾರಿನ ಮೇಲೆ ಚಪ್ಪಲಿ ಎಸೆಯಲಾಗಿದೆ.
ಗಾಂಧಿನಗರ: ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಆತನ ಬಾಯಿಗೆ ಚಪ್ಪಲಿ ತುರುಕಿದ ಆರೋಪದ ಮೇಲೆ ಮಹಿಳಾ ಉದ್ಯಮಿ (Woman Businessman) ಜೊತೆ 6 ಮಂದಿಯ ವಿರುದ್ಧ ಗುಜರಾತ್‍ನ (Gujrat) ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೃತ್ಯ ಎಸಗಿದ ಮಹಿಳಾ ಉದ್ಯಮಿಯನ್ನು ವಿಭೂತಿ ಪಟೇಲ್ ಅಕಾ ರಾಣಿಬಾ ಎಂದು ಗುರುತಿಸಲಾಗಿದೆ. ಈ ಸಂಬಂಧ ಸಂತ್ರಸ್ತ ನಿಲೇಶ್ ದಲ್ಸಾನಿಯಾ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಮೊರ್ಬಿ ನಗರದ ಪೊಲೀಸರು ಇಂದು ಮಹಿಳೆ ವಿಭೂತಿ ಪಟೇಲ್ ಅಕಾ ರಾಣಿಬಾ ಮತ್ತು ಆಕೆಯ ಸಹೋದರ ಓಂ ಪಟೇಲ್ ಮತ್ತು ಮ್ಯಾನೇಜರ್ ಸೇರಿದಂತೆ ಇತರರ ವಿರುದ್ಧ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಸಿ/ಎಸ್‍ಟಿ ಸೆಲ್) ಪ್ರತಿಪಾಲ್‍ಸಿನ್ಹ್ ಝಾಲಾ ಹೇಳಿದರು.
ವಿಭೂತಿ ಪಟೇಲ್ ಅಕಾ ರಾಣಿಬಾ ಕಂಪನಿಯಲ್ಲಿ 21 ವರ್ಷದ ದಲಿತ ಯುವಕ 15 ದಿನ ಕೆಲಸ ಮಾಡಿದ್ದನು. ಅಂತೆಯೇ ಆತ ಸಂಬಳಕ್ಕೆ ಬೇಡಿಕೆ ಇಟ್ಟಿದ್ದಕ್ಕಾಗಿ ಮಹಿಳಾ ಉದ್ಯಮಿಯು ಯುವಕನ ಬಾಯಿಗೆ ತುರುಕಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾಳೆ. ಈ ಘಟನೆ ಬುಧವಾರ ನಡೆದಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: 4 ತಿಂಗಳ ಪುಟ್ಟ ಕಂದಮ್ಮನಿಗೆ ಹಾಲುಣಿಸಿ ಸಂತೈಸಿದ ಮಹಿಳಾ ಪೊಲೀಸ್: ಭಾರೀ ಮೆಚ್ಚುಗೆ
ದೂರಿನಲ್ಲೇನಿದೆ..?: ಕಳೆದ ಅಕ್ಟೋಬರ್‍ನಲ್ಲಿ ರಾಣಿ ಬಾ ಅವರು ತಮ್ಮ ಸಂಸ್ಥೆಗೆ ನಿಲೇಶ್ ದಲ್ಸಾನಿಯಾನನ್ನು ನೇಮಕ ಮಾಡಿಕೊಂಡಿದ್ದರು. ಅಂತೆಯೇ ಟೈಲ್ಸ್ ಮಾರ್ಕೆಟಿಂಗ್ ಕೆಲಸಕ್ಕಾಗಿ ನಿಲೇಶ್‍ನನ್ನು ನಿಯೋಜಿಸಲಾಗಿತ್ತು. ಆತನಿಗೆ 12 ಸಾವಿರ ರೂಪಾಯಿ ಸಂಬಳ ಕೊಡೋದಾಗಿ ಹೇಳಲಾಗಿತ್ತು. ಆದರೆ ಸಂಬಳವನ್ನೇ ಕೊಟ್ಟಿರಲಿಲ್ಲ ಎಂದು ಎಫ್‍ಐಆರ್ ನಲ್ಲಿ ವಿವರಿಸಲಾಗಿದೆ.
ಅಕ್ಟೋಬರ್ ಅಂತ್ಯದ ವೇಳೆಗೆ ನಿಲೇಶ್‍ನನ್ನು ಇದ್ದಕ್ಕಿದ್ದಂತೆಯೇ ಕೆಲಸದಿಂದ ಕಿತ್ತು ಹಾಕಿದ್ದರು. ಹೀಗಾಗಿ 16 ದಿನ ಕೆಲಸ ಮಾಡಿದ್ದು, ಅಷ್ಟು ದಿನಗಳ ವೇತನವನ್ನಾದರೂ ಕೊಡಿ ಎಂದು ನಿಲೇಶ್ ದಲ್ಸಾನಿಯಾ ಬೇಡಿಕೆ ಇಟ್ಟಿದ್ದರು. ಆದರೆ ಯುವಕ ಬೇಡಿಕೆಗೆ ರಾಣಿ ಬಾ ಕ್ಯಾರೇ ಎಂದಿಲ್ಲ. ಆತನ ಫೋನ್ ಕರೆಗಳನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಬೇಸತ್ತ ನಿಲೇಶ್ ದಲ್ಸಾನಿಯಾ ತಮ್ಮ ಸಹೋದರ ಮೇಹುಲ್ ಹಾಗೂ ನೆರೆ ಮನೆಯ ಭಾವೇಶ್ ಎಂಬಾತನ ಜೊತೆಗೆ ಕಳೆದ ಬುಧವಾರ ರಾಣಿಬಾ ಅವರ ಕಚೇರಿಗೆ ತೆರಳಿದ್ದ. ತಮ್ಮ ಸಂಬಳ ಕೊಡಿ ಎಂದು ಬೇಡಿಕೆ ಇಟ್ಟ. ಈ ವೇಳೆ ರಾಣಿಬಾ ತಮ್ಮ ಸಹೋದರ ಓಂ ಪಟೇಲ್ ಕರೆ ಮಾಡಿದರು.
ಆರೋಪಿ ಮಹಿಳಾ ಉದ್ಯಮಿ ರಾಣಿಬಾ, ಆಕೆಯ ಸಹೋದರ ಓಂ ಪಟೇಲ್, ಕಂಪನಿಯ ಮ್ಯಾನೇಜರ್ ಹಾಗೂ ಇತರ ಕಾರ್ಮಿಕರು ಸೇರಿಕೊಂಡು ಮೂವರಿಗೂ ಥಳಿಸಿದರು. ಕೊನೆಗೆ ನಿಲೇಶ್ ದಲ್ಸಾನಿಯಾ ಬಾಯಿಗೆ ತನ್ನ ಚಪ್ಪಲಿ ತಿರುಕಿದ ರಾಣಿಬಾ ಕ್ಷಮೆ ಕೇಳುವಂತೆ ಆಗ್ರಹಿಸಿದರು. ಇಷ್ಟು ಮಾತ್ರವಲ್ಲದೆ ಮೂವರನ್ನೂ ತಮ್ಮ ವಾಣಿಜ್ಯ ಕಟ್ಟಡದ ಟೆರೇಸ್‍ಗೆ ಎಳೆದೊಯ್ದು ಅಲ್ಲಿಯೂ ಹಿಗ್ಗಾಮುಗ್ಗ ಥಳಿಸಿದರು ಎಂದು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇದೀಗ ಆರು ಮಂದಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.
ಭೋಪಾಲ್: ಚುನಾವಣೆಯಲ್ಲಿ ಗೆಲ್ಲಲು ಅಭ್ಯರ್ಥಿಗಳು ನಾನಾ ಕಸರತ್ತುಗಳನ್ನು ಮಾಡುವುದು ಹೊಸದೆನಲ್ಲ. ಚುನಾವಣೆ ಹತ್ತಿರ ಬಂದಾಗ ಧಾರ್ಮಿಕ ಸ್ಥಳಗಳು, ಜ್ಯೋತಿಷ್ಯದ ಮೊರೆ ಹೋಗುವುದು ಸಹಜ. ಆದರೆ ಮಧ್ಯಪ್ರದೇಶದ (Madhya Pradesh) ಕಾಂಗ್ರೆಸ್ (Congress) ಅಭ್ಯರ್ಥಿಯೊಬ್ಬರು ಚುನಾವಣೆ ಗೆಲ್ಲಲು ಬಾಬಾ ಅವರಿಂದ ಚಪ್ಪಲಿಯಲ್ಲಿ ಹೊಡೆಸಿಕೊಂಡು ಸುದ್ದಿಯಾಗಿದ್ದಾರೆ.
ಚುನಾವಣೆಗೆ ಮುನ್ನ ರತ್ಲಾಮ್‌ನ ಕಾಂಗ್ರೆಸ್ ಅಭ್ಯರ್ಥಿ ಪರಸ್ ಸಕ್ಲೇಚಾ (Paras Saklecha) ಅವರು ಫಕೀರ್ ಬಾಬಾನ (Fakir baba) ಮುಂದೆ ಚಪ್ಪಲಿಯಿಂದ ಹೊಡಿಸಿಕೊಂಡಿದ್ದಾರೆ. ಸದ್ಯ ಈಗ ಚಪ್ಪಲಿಯಿಂದ ಬಾಬಾ ಹೊಡೆಯುತ್ತಿರುವ ವಿಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಶಮಿ ತವರಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾದ ಯೋಗಿ ಸರ್ಕಾರ
ಫಕೀರ್ ಬಾಬಾ ಅವರು ಕೆಲವೊಮ್ಮೆ ಮುಖ, ಬೆನ್ನು, ಭುಜದ ಮೇಲೆ ಚಪ್ಪಲಿಯಿಂದ ಹೊಡೆದಿದ್ದಾರೆ. ಅಲ್ಲಿದ್ದ ವ್ಯಕ್ತಿಗಳು ಹೊಡೆಯುವುದನ್ನು ನಿಲ್ಲಿಸಿ ಎಂದು ಹೇಳಿದರೂ ಬಾಬಾ ಹೊಡೆಯುವುದನ್ನು ನಿಲ್ಲಿಸಿರಲಿಲ್ಲ. ಬಾಬಾ ಹೊಡೆಯುತ್ತಿರುವಾಗ ಅಭ್ಯರ್ಥಿ ನಗುತ್ತಲೇ ಇರುತ್ತಿದ್ದರು. 2019ರಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಅವರನ್ನು ಪರಸ್ ಸಕ್ಲೇಚಾ ಮಾಟಗಾತಿ ಎಂದು ಕರೆದಿದ್ದರು. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ
ರಸ್ತೆಯಲ್ಲಿ ತಿರುಗಾಡುವ ಈ ಬಾಬಾ ತನ್ನ ಬಳಿಗೆ ಬರುವ ಜನರಿಗೆ ಚಪ್ಪಲಿಯಿಂದ ಹೊಡೆದು ಆಶೀರ್ವಾದ ಮಾಡುತ್ತಾರೆ. ಅನೇಕ ಜನರು ತಮ್ಮ ದೂರು, ಸಮಸ್ಯೆ ಹೇಳಿಕೊಂಡು ಬಾಬಾಗೆ ಹೊಸ ಚಪ್ಪಲಿಗಳನ್ನು ನೀಡುತ್ತಾರೆ. ಬಾಬಾ ಚಪ್ಪಲಿಯಿಂದ ಹೊಡೆಯುವ ಮೂಲಕ ಆಶೀರ್ವಾದ ಮಾಡುತ್ತಾರೆ ಎಂದು ವರದಿಯಾಗಿದೆ.
ಒಟ್ಟು 230 ವಿಧಾನಸಭಾ ಕ್ಷೇತ್ರಗಳಿರುವ ಮಧ್ಯಪ್ರದೇಶದಲ್ಲಿ ನ.17 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದು, ಡಿ.3 ರಂದು ಮತ ಎಣಿಕೆ ನಡೆಯಲಿದೆ.
ಗದಗ: ಸರ್ಕಾರದ ಯೋಜನೆಗಳು ನಾನಾ ಸ್ವರೂಪ ಪಡೆದುಕೊಳ್ಳುತ್ತಿವೆ. ಮಕ್ಕಳಿಗೆ ಶೂ (Shoe) ಬದಲು ಚಪ್ಪಲಿ (Slippers) ನೀಡಲಾಗಿದೆ. ಸರ್ಕಾರದ ದ್ವಂದ್ವ ನಿಲುವಿನ ಆದೇಶದಿಂದ ಮಕ್ಕಳು ಹಾಗೂ ಪಾಲಕರಿಗೆ ಬೇಸರ ಮೂಡಿಸಿದ ಘಟನೆ ಗದಗ (Gadag) ಜಿಲ್ಲೆಯಲ್ಲಿ ನಡೆದಿದೆ.
ಗದಗ ಜಿಲ್ಲೆಯಲ್ಲಿ 612 ಸರ್ಕಾರಿ ಪ್ರಾಥಮಿಕ ಶಾಲೆಗಳಿವೆ. ಆ ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿಗಾಗಿ 2,36,67,930 ರೂ. ನೀಡಲಾಗಿದೆ. ಇನ್ನು 113 ಸರ್ಕಾರಿ ಪ್ರೌಢಶಾಲೆಗಳಿದ್ದು, 5,28,430 ರೂ. ನೀಡಲಾಗಿದೆ. ಆದರೆ ಲಕ್ಷ್ಮೇಶ್ವರ ಪಟ್ಟಣದ 2 ಶಾಲೆಗಳಿಗೆ ಶೂ, ಸಾಕ್ಸ್ ಬದಲಾಗಿದೆ ಚಪ್ಪಲಿ ಭಾಗ್ಯ ಕಲ್ಪಿಸಲಾಗಿದೆ.
ಲಕ್ಷ್ಮೇಶ್ವರ ಬಸ್ತಿಬಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂಬರ್ 2 ಹಾಗೂ ಕೆಂಚಲಪೂರ ಸರ್ಕಾರಿ ಶಾಲೆ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ನೀಡಲಾಗಿದೆ. ಒಂದೇ ಮನೆಯಿಂದ ಬೇರೆ ಬೇರೆ ಶಾಲೆಗೆ ಹೋಗುವ ಮಕ್ಕಳಲ್ಲಿ ಶೂ-ಚಪ್ಪಲಿ ವಿಷಯವಾಗಿ ಗಲಾಟೆಗಳು ನಡೆದಿವೆ ಎನ್ನಲಾಗಿದೆ. ಸರ್ಕಾರ ಶೂ, ಸಾಕ್ಸ್ ವಿಷಯದಲ್ಲಿ ಮಕ್ಕಳಲ್ಲಿ ದ್ವಂದ್ವ ನೀತಿ ಮೂಡಿಸಿದೆ. ಇದು ಖಂಡನೀಯ, ಶಿಕ್ಷಣ ಇಲಾಖೆ ಆದೇಶದಿಂದ ಮಕ್ಕಳಿಗೆ ಒಂದು ಕಣ್ಣಿಗೆ ಸುಣ್ಣ, ಒಂದು ಕಣ್ಣಿಗೆ ಬೆಣ್ಣೆ ಹಚ್ಚುತ್ತಿದೆ ಎಂಬ ಆರೋಪ ಪಾಲಕರದ್ದಾಗಿದೆ. ಇದನ್ನೂ ಓದಿ: ವ್ಯಕ್ತಿಯ ಮೇಲೆ ತಮಾಷೆಗೆ ಎಸೆದ ಪಟಾಕಿ ಜೀವವನ್ನೇ ತೆಗೀತು!
ಸರ್ಕಾರ ರಾಜ್ಯದ ಆಯಾ ಭಾಗದ ಪರಿಸರಕ್ಕೆ ಹೊಂದಿಕೆ ಆಗುವಂತಹ ಶೂ ಅಥವಾ ಚಪ್ಪಲಿ ಖರೀದಿಸಬಹುದು ಎಂದು ಆದೇಶ ಹೊರಡಿಸಿದೆ. ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಹೆಚ್ಚಾಗುತ್ತಿದ್ದು ಅಲ್ಲಿ ಶೂ ಒಳ್ಳೆಯದು. ಇನ್ನು ಉತ್ತರ ಕರ್ನಾಟಕ ಭಾಗದಲ್ಲಿ ಉಷ್ಣಾಂಶ ಹೆಚ್ಚಿರುವ ಹಿನ್ನೆಲೆ ಬೆವರಿನಿಂದ ಶೂ ವಾಸನೆ ಬರುತ್ತವೆ. ಹೀಗಾಗಿ ಚಪ್ಪಲಿ ಖರೀದಿಸಬಹುದು ಎಂದು ಆದೇಶಿಸಲಾಗಿದೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ 2 ಶಾಲೆಗಳಲ್ಲಿ ಶೂ ಭಾಗ್ಯ ಬದಲು ಚಪ್ಪಲಿ ಭಾಗ್ಯ ಕಲ್ಪಿಸಲಾಗಿದೆ. ಉತ್ತಮ ಗುಣಮಟ್ಟದ ಶೂ ಅಥವಾ ಪಾದರಕ್ಷೆಗಳನ್ನು ಖರೀದಿಸಿ, ವಿತರಣೆ ಮಾಡುವ ಜವಾಬ್ದಾರಿ ಆಯಾ ಶಾಲಾ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಗೆ ವಹಿಸಲಾಗಿದೆ. ಗದಗ ಭಾಗದಲ್ಲಿ ವಾತಾವರಣಕ್ಕೆ ಶೂ ಗಿಂತ ಚಪ್ಪಲಿ ಒಳ್ಳೆಯದೆಂದು ಖರೀದಿಸಲಾಗಿದೆ. ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಲಾಗುತ್ತದೆ. ಶೂ ಅಥವಾ ಚಪ್ಪಲಿ ಖರೀದಿ ನಿರ್ಧಾರ ಎಸ್‌ಡಿಎಂಸಿ ತೆಗೆದುಕೊಳ್ಳುತ್ತದೆ. ಈ ಹಣ ರಾಜ್ಯ ಕಚೇರಿಯಿಂದ ಬಿಇಒ ಕಚೇರಿಗೆ ನೇರವಾಗಿ ಬಿಡುಗಡೆ ಆಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಗದಗ ಜಿಲ್ಲೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮತ್ತೊಂದೆಡೆ ವಿತರಿಸಿದ ಶೂ ಹಾಗೂ ಚಪ್ಪಲಿಗಳು ಕಳಪೆ ಗುಣಮಟ್ಟದ್ದಾಗಿವೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕಿದೆ. ಒಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಮಕ್ಕಳಿಗೆ ಶೂ ಭಾಗ್ಯ ಬದಲು ಚಪ್ಪಲಿ ಭಾಗ್ಯ ಬಂದಿದ್ದು ಮುಜುಗರಕ್ಕೀಡಾಗಿದೆ. ಸರ್ಕಾರ, ಶಿಕ್ಷಣ ಇಲಾಖೆಯ ಈ ನಿಲುವು ಮಕ್ಕಳಿಗೆ ಹಾಗೂ ಪಾಲಕರಿಗೆ ಬೇಸರ ಮೂಡಿಸಿದೆ. ಇದನ್ನೂ ಓದಿ: ಹಬ್ಬಕ್ಕೆ ಬಟ್ಟೆ ಕೊಂಡೊಯ್ಯುತ್ತಿದ್ದ ಪುರಸಭೆ ಸದಸ್ಯನ ತಡೆದು ಮಾರಕಾಸ್ತ್ರದಿಂದ ಹಲ್ಲೆ
ಬೆಂಗಳೂರು: ಇತ್ತೀಚೆಗೆ 112 ಸಹಾಯವಾಣಿ (112 Helpline) ನಂಬರ್‌ಗೆ ಸರ್ಕಾರ ವ್ಯಾಪಕ ಪ್ರಚಾರ ಕೊಟ್ಟು, ಯಾವುದೇ ತೊಂದರೆ ಇದ್ದಲ್ಲಿಯೂ ಕರೆ ಮಾಡುವಂತೆ ಸೂಚಿಸಿತ್ತು. ಆದರೆ ಇಲ್ಲೊಬ್ಬ ಮಹಾನುಭಾವ ಮಾಡಿರೋ ಕೆಲಸ ಪೊಲೀಸ್ ವ್ಯವಸ್ಥೆಯನ್ನು ದುರ್ಬಳಕೆ ಮಾಡಿಕೊಂಡ ಎನ್ನಬೇಕೋ, ಅಥವಾ ಪೊಲೀಸ್ ಸಿಬ್ಬಂದಿಯ ಅಸಹಾಯಕತೆ ಎನ್ನಬೇಕೋ ಗೊತ್ತಿಲ್ಲ.
ಸಂಕಷ್ಟದಲ್ಲಿರುವವರಿಗೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಲು ಅನುಕೂಲವಾಗಲಿ ಎಂದು ಚಾಲ್ತಿಯಲ್ಲಿರುವ 112 ಸಹಾಯವಾಣಿಗೆ ಕರೆ ಮಾಡಿ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರಿರುವ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ನಿಯಂತ್ರಣ ಕೋಣೆಯ ಸಹಾಯವಾಣಿಗೆ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ಕಾರ್ ಸ್ಟ್ರೀಟ್‌ನಲ್ಲಿರುವ ಬಾಲಂಭಟ್ಟ ಹಾಲ್‌ನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ, ಹಿಂತಿರುಗಿ ಬಂದು ನೋಡಿದಾಗ ನನ್ನ ಚಪ್ಪಲಿ ಕಳೆದು ಹೋಗಿದೆ, ಹುಡುಕಿಕೊಡಿ ಎಂದು ದೂರು ನೀಡಿದ್ದಾನೆ. ವಿಧಿಯಿರದೇ ಪೊಲೀಸ್ ನಿಯಂತ್ರಣ ಕೋಣೆಯ ಸಿಬ್ಬಂದಿ ಸಮೀಪದಲ್ಲಿ ಬೀಟ್‌ನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪ- ಹಲ್ಲೆಗೈದ ನಾಲ್ವರು ಅರೆಸ್ಟ್
ಸ್ಥಳಕ್ಕೆ ತೆರಳಿದ್ದ ಹೊಯ್ಸಳ ಸಿಬ್ಬಂದಿ ದೂರುದಾರನ ಜೊತೆ ಸೇರಿ ಚಪ್ಪಲಿ ಹುಡುಕಾಡಿ ಕೊನೆಗೆ ಚಪ್ಪಲಿ ಸಿಗದ ಕಾರಣ ಠಾಣೆಗೆ ಬಂದು ದೂರು ನೀಡುವಂತೆ ಸೂಚಿಸಿದ್ದಾರೆ. ಇದು ವ್ಯಾಪಕ ಟೀಕೆಗೆ ಕಾರಣವಾಗಿದ್ದು ಪೊಲೀಸ್ ಇಲಾಖೆಯನ್ನು ಈ ರೀತಿ ದುರ್ಬಳಕೆ ಮಾಡಿಕೊಳ್ಳೋದು ಎಷ್ಟು ಸರಿ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಇದನ್ನೂ ಓದಿ: ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ – ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಲಕ್ನೋ: ಬೆಲೆಬಾಳುವ ವಸ್ತುಗಳು ಕಳ್ಳತನವಾದಾಗ ಪೊಲೀಸರಿಗೆ ದೂರು ಕೊಟ್ಟಿದ್ದನ್ನು ಕೇಳಿದ್ದೇವೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಚಪ್ಪಲಿ ಕಳ್ಳತನವಾಗಿದೆ (Slipper Theft) ಎಂದು ಪೊಲೀಸರ ಮೊರೆ ಹೋಗಿ ಇದೀಗ ಎಫ್‍ಐಆರ್ ದಾಖಲಾದ ಪ್ರಸಂಗವೊಂದು ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ.
ಹೌದು. ವಿಚಿತ್ರವಾದರೂ ಸತ್ಯವಾದ ಈ ಘಟನೆ ನಡೆದಿದ್ದು ಕಾನ್ಪುರ ನಗರದಲ್ಲಿರುವ ಸಿವಿಲ್ ಲೈನ್ ನ ಭೈರವ ಬಾಬಾ ದೇವಸ್ಥಾನದಲ್ಲಿ. ದಬೌಲಿ ನಿವಾಸಿ ಕಾಂತಿಲಾಲ್ ನಿಗಮ್ ಭಾನುವಾರ ಬೆಳಗ್ಗೆ ದೇವರ ದರ್ಶನ ಪಡೆಯಲು ದೇವಸ್ಥಾನಕ್ಕೆ ಹೋಗಿದ್ದಾರೆ. ಚಪ್ಪಲಿಯನ್ನು ದೇವಸ್ಥಾನದ ಹೊರಗೆ ಬಿಟ್ಟು, ಹತ್ತಿರದಲ್ಲೇ ಇದ್ದ ಅಂಗಡಿಯೊಂದರಿಂದ ಪೂಜಾ ಸಾಮಗ್ರಿ ತೆಗೆದುಕೊಂಡು ಹೋಗಿದ್ದಾರೆ. ಅಂತೆಯೇ ದೇವರ ದರ್ಶನ ಪಡೆದು, ಪೂಜೆ ಮುಗಿಸಿಕೊಂಡು ವಾಪಸ್ ಅಂಗಡಿಗೆ ಬಂದಾಗ ಚಪ್ಪಲಿ ಕಾಣದಾಗಿದೆ.
ತಾನು ಇಟ್ಟ ಸ್ಥಳದಲ್ಲಿ ಎಷ್ಟು ಹುಡುಕಾಡಿದರೂ ಚಪ್ಪಲಿ ಕಾಣಿಸಲಿಲ್ಲ. ಹೀಗಾಗಿ ಕಾಂತಿಲಾಲ್ ಪೊಲೀಸರ ಮೊರೆ ಹೋಗಿದ್ದಾರೆ. ನನ್ನ ಚಪ್ಪಲಿ ಕಾಣೆಯಾಗಿದೆ ಎಂದು ಇ-ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಕೂಡ ದೂರು ಸ್ವೀಕರಿಸಿ ಎಫ್‍ಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಇಬ್ಬರು ಹೆಂಡ್ತೀರ ಮುದ್ದಿನ ಗಂಡ – ಪತ್ನಿಯರಿಂದ್ಲೇ ಬರ್ಬರವಾಗಿ ಕೊಲೆಯಾಗಿದ್ದೇಕೆ..?
ಕಾಂತಿಲಾಲ್ ದೂರಿನಲ್ಲೇನಿತ್ತು..?: ದೇಗುಲದ ಹೊರಗೆ ಇಟ್ಟಿದ್ದ ನನ್ನ ಚಪ್ಪಲಿಯನ್ನು ಯಾರೋ ಕದ್ದೊಯ್ದಿದ್ದಾರೆ. ನೀಲಿ ಬಣ್ಣದ 7 ಸೈಜ್ ಚಪ್ಪಲಿಯಾಗಿದೆ. ಈ ಚಪ್ಪಲಿಯಲ್ಲಿ ಅಕ್ಯುಪ್ರೆಶರ್ ಇದ್ದು, ಆದಷ್ಟು ಬೇಗ ಹುಡುಕಿಕೊಡಿ ಹಾಗೂ ಕದ್ದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂತಿಲಾಲ್ ಮನವಿ ಮಾಡಿದ್ದಾರೆ.
ಲಕ್ನೋ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿ ದೌರ್ಜನ್ಯ ಎಸಗಿರುವ ಘಟನೆ ಮಾಸುವ ಮುನ್ನವೇ ದಲಿತ (Dalit) ವ್ಯಕ್ತಿಯೊಬ್ಬರನ್ನು ಥಳಿಸಿ, ಚಪ್ಪಲಿ ನೆಕ್ಕಿಸಿರುವ ವಿಕೃತ ಘಟನೆ ಉತ್ತರ ಪ್ರದೇಶದಲ್ಲಿ (Uttar Pradeah) ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಸೋನ್‌ಭದ್ರಾ ಗ್ರಾಮದಲ್ಲಿ ದಲಿತ ವ್ಯಕ್ತಿಯನ್ನು ಥಳಿಸಿ, ಚಪ್ಪಲಿ ನೆಕ್ಕಿಸಿ, ದೌರ್ಜನ್ಯ ಎಸಗಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಗುರುವಾರ ಸಂಜೆ ನಡೆದಿರುವ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ವರದಿಗಳ ಪ್ರಕಾರ ಎಲೆಕ್ಟ್ರಿಕಲ್ ಲೈನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ತೇಜ್‌ಬಲಿ ಸಿಂಗ್ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆಯಾಗಿದ್ದಾಗ ಗ್ರಾಮಸ್ಥರಿಗೆ ಸಹಾಯ ಮಾಡಿದ್ದಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಕೋಪಗೊಂಡಿದ್ದ. ಈ ಹಿನ್ನೆಲೆ ತೇಜ್‌ಬಲಿ ಸಿಂಗ್ ಸಂತ್ರಸ್ತ ರಾಜೇಂದ್ರನ ಮೇಲೆ ಹಲ್ಲೆ ನಡೆಸಿ, ಬಸ್ಕಿ ಹೊಡೆಸಿದ್ದು ಮಾತ್ರವಲ್ಲದೇ ಕಾಲು ಸಮೇತವಾಗಿ ಚಪ್ಪಲಿಯನ್ನು ನೆಕ್ಕಲು ಒತ್ತಾಯಿಸಿ ಅವಮಾನ ಮಾಡಿದ್ದಾನೆ. ಇದನ್ನೂ ಓದಿ: ಭಾರತದ ಪ್ರೇಮಿಯೊಂದಿಗೆ ಹೊಸ ಜೀವನ ಶುರು ಮಾಡ್ತಿದ್ದಾಳೆ ಪಾಕ್ ಮಹಿಳೆ
ಇದೀಗ ವೀಡಿಯೋ ಸಾಮಾಜಿ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಉತ್ತರ ಪ್ರದೇಶದ ಪೊಲೀಸರು 1989ರ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಕಾಯಿದೆ ಸೇರಿದಂತೆ ಭಾರತೀಯ ದಂಡಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮದುವೆ – ಖತರ್ನಾಕ್ ಕಿಲಾಡಿ ಅರೆಸ್ಟ್