ವಿಜಯಪುರ: ಮದ್ಯಪಾನ ಮಾಡಿ ರಸ್ತೆಯಲ್ಲಿ ಅಡ್ಡಾದಿಡ್ಡಿ ಕಾರ್ (Car) ಚಲಾಯಿಸಿ ಅಪಘಾತ ಮಾಡಿದ ವ್ಯಕ್ತಿಗೆ ಮಹಿಳೆಯೊಬ್ಬಳು (Woman) ಚಪ್ಪಲಿ ಸೇವೆ ಮಾಡಿರುವ ಘಟನೆ ವಿಜಯಪುರದಲ್ಲಿ (Vijaypura) ನಡೆದಿದೆ.
ನಗರದ ಸ್ಟೇಷನ್ ರಸ್ತೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆದಿದೆ. ಮದ್ಯ ಸೇವಿಸಿ ಅಡ್ಡಾದಿಡ್ಡಿ ಕಾರ್ ಚಾಲನೆ ಮಾಡಿ 2 ಆಟೋ ಹಾಗೂ 1 ಬೈಕ್‌ಗೆ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಇದರಿಂದ 1 ಆಟೋ ಪಲ್ಟಿಯಾಗಿದೆ. ಪಲ್ಟಿಯಾದ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕಾರ್ ಚಾಲಕನಿಗೆ (Driver) ಚಪ್ಪಲಿಯಿಂದ (Slipper) ಥಳಿಸಿದ್ದಾಳೆ.
ಬೇಜವಾಬ್ದಾರಿಯಾಗಿ ಹಾಗೂ ಮದ್ಯ ಸೇವಿಸಿ ಕಾರ್ ಚಾಲನೆ ಮಾಡಿ ಅಪಘಾತ ಮಾಡಿರುವುದಕ್ಕೆ ಆಕ್ರೋಶಗೊಂಡ ಮಹಿಳೆ ಚಪ್ಪಲಿ ಏಟು ನೀಡಿದ್ದಾಳೆ. ಆಟೋಗಳಲ್ಲಿ ಹಾಗೂ ಬೈಕ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಕಾರ್ ಚಾಲಕನಿಗೆ ಚಪ್ಪಲಿ ಏಟು ನೀಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಮಸ್ಕತ್‌ನಿಂದ ಭಾರತಕ್ಕೆ ಅಕ್ರಮ ಚಿನ್ನ ಸಾಗಾಟ – 2.28 ಕೋಟಿ ರೂ. ಮೌಲ್ಯದ ಚಿನ್ನದ ಧೂಳು ವಶ
ಕೊಪ್ಪಳ: ಮಹಿಳೆಯ ಜೊತೆ ಅನುಚಿತ ವರ್ತನೆ ತೋರಿದ ನಿವೃತ್ತ ಪ್ರಾಚರ್ಯನೊಬ್ಬ ಸಾರ್ವಜನಿಕವಾಗಿ ಚಪ್ಪಲಿ ಏಟು ತಿಂದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕೊಪ್ಪಳದ ಬಸ್ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಸರ್ಕಾರಿ ಕಾಲೇಜಿನ ನಿವೃತ್ತ ಪ್ರಾಚರ್ಯ ವಿ.ಬಿ ರಡ್ಡೆರ್ ಗೆ ಮಹಿಳೆಯಿಂದ ಚಪ್ಪಲಿಯ ಏಟು ಬಿದ್ದಿದೆ. ದಾರಿಯಲ್ಲಿ ಹೊಗುತ್ತಿದ್ದ ಮಹಿಳೆ ಜೊತೆ ರಡ್ಡೆರ್ ಅನುಚಿತವಾಗಿ ವರ್ತಿಸಿದ್ದಾನೆ.
ರಡ್ಡೆರ್ ನಡೆಗೆ ಕೋಪಗೊಂಡ ಮಹಿಳೆಯರಿಬ್ಬರು ಸಾರ್ವಜನಿಕರ ಎದುರೇ ಚಪ್ಪಲಿ ಏಟು ನೀಡಿ ಬುದ್ಧಿ ಕಲಿಸಿದ್ದಾರೆ. ಚಪ್ಪಲಿಯಿಂದ ಹೊಡೆದ ಇಬ್ಬರು ಮಹಿಳೆಯರಲ್ಲಿ ಒಬ್ಬರಿಗೆ ಈ ಹಿಂದೆ ರಡ್ಡೆರ್ ಲೈಂಗಿಕ ಕಿರುಕುಳ ನೀಡಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ಮಂಡ್ಯ: ಕೆ.ಆರ್ ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಅವರು ಸಿಂಪತಿ ಗಿಟ್ಟಿಸಿಕೊಳ್ಳಲು, ನಮ್ಮ ಕಡೆಯಿದ್ದ ಜನರನ್ನು ನೋಡಿ ಹೊಟ್ಟೆ ಉರಿಯಿಂದ ಜೆಡಿಎಸ್‍ನವರು ಚಪ್ಪಲಿಯಲ್ಲಿ ಹೊಡೆದರು ಎನ್ನುತ್ತಿದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ವಾಗ್ದಾಳಿ ನಡೆಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಅವರು ಯಾವುದೇ ಗಲಾಟೆಯಾಗಿಲ್ಲ, ಯಾರೂ ಚಪ್ಪಲಿಯಲ್ಲಿ ಹೊಡೆದಿಲ್ಲ ಎನ್ನುತ್ತಿದ್ದಾರೆ. ಆದರೆ ನಾರಾಯಣಗೌಡ ಅವರು ನನ್ನ ತಮ್ಮ ಚಪ್ಪಲಿಯಲ್ಲಿ ಹೊಡೆದಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ಹಾಗೆ ಹೇಳುತ್ತಿದ್ದಾರೆ. ನಮ್ಮ ತಮ್ಮ ಹಾಗೆ ನಡೆದುಕೊಂಡಿಲ್ಲ. ನಾರಾಯಣಗೌಡರ ಮೇಲೆ ಹಲ್ಲೆ ಮಾಡಿಲ್ಲ. ಚುನಾವಣೆಗೆ ಯಾವುದೇ ಕೆಲಸ ಮಾಡದ ನಾರಾಯಣಗೌಡ ಈಗ ಈ ಘಟನೆಯನ್ನ ಹಿಡಿದುಕೊಂಡು ಸಿಂಪತಿ ಗಿಟ್ಟಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ನಮ್ಮ ಕಡೆಯಿದ್ದ ಜನರನ್ನು ನೋಡಿ ಹೊಟ್ಟೆ ಉರಿಯಿಂದ ಹೀಗೆ ಆರೋಪಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಎಕ್ಕಡದಲ್ಲಿ ಹೊಡೆದ್ರು, ದೇವರಾಜು ಅದನ್ನ ಅನುಭವಿಸಲೇ ಬೇಕು: ನಾರಾಯಣಗೌಡ ಆಕ್ರೋಶ
ನಾರಾಯಣಗೌಡರು ರಾಜೀನಾಮೆ ನೀಡದೆ ಹೋಗಿದ್ದರೆ ಚುನಾವಣೆ ನಡೆಯುತ್ತಿರಲಿಲ್ಲ. ನೀವು ರಾಜೀನಾಮೆ ನೀಡದಿದ್ದರೆ ಆ ರೀತಿಯ ಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ ಎಂದು ಟಾಂಗ್ ಕೊಟ್ಟರು. ಚಪ್ಪಲಿಯಲ್ಲಿ ಹೊಡೆದ ಘಟನೆ ನಡೆದಿಲ್ಲ, ನಮ್ಮ ಜೆಡಿಎಸ್ ಕಾರ್ಯಕರ್ತರು ಶಾಂತ ಸ್ವಭಾವದವರು. ಕಳೆದ ನಾಲ್ಕು ತಿಂಗಳುಗಳಿಂದ ನಮ್ಮ ಕಾರ್ಯಕರ್ತರು ಎಲ್ಲೂ ಗಲಾಟೆ ಮಾಡಿಲ್ಲ. ಅದರಲ್ಲೂ ಪೊಲೀಸರು, ಸುತ್ತಲೂ ಜನರಿರುವಾಗ ಹಲ್ಲೆ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದನ್ನೂ ಓದಿ:ರಾಜ್ಯದ ಹೈವೋಲ್ಟೇಜ್ ಕ್ಷೇತ್ರ ಹೊಸಕೋಟೆಯಲ್ಲಿ ಚಿಮ್ಮಿತು ರಕ್ತ
ಇಂದು ನಾರಾಯಣಗೌಡರು ಉಪಚುನಾವಣಾ ನಾಮಪತ್ರ ಸಲ್ಲಿಸಲು ತಾಲೂಕು ಕಚೇರಿಗೆ ಆಗಮಿಸುತ್ತಿದ್ದರು. ಇತ್ತ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಸಹ ಇಂದೇ ನಾಮಪತ್ರ ಸಲ್ಲಿಕೆಗೆ ತಾಲೂಕು ಕಚೇರಿಗೆ ಆಗಮಿಸಿದ್ದರು. ಮೂರು ಪಕ್ಷಗಳ ಬೆಂಬಲಿಗರು ಒಂದೆಡೆ ಸೇರಿದ್ದರಿಂದ ಘೋಷಣೆಗಳು ಜೋರಾಗಿದ್ದವು. ಈ ವೇಳೆ ಕೆಲ ಕಿಡಿಗೇಡಿಗಳು ನಾರಾಯಣಗೌಡರ ಮೇಲೆ ಚಪ್ಪಲಿ ಎಸೆದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಇದನ್ನೂ ಓದಿ:ಜೆಡಿಎಸ್ ಕೋಟೆ ಛಿದ್ರ ಮಾಡಲು ನಾರಾಯಣಗೌಡ ಮಾಸ್ಟರ್ ಪ್ಲಾನ್!
ಈ ಕುರಿತು ಪ್ರತಿಕ್ರಿಯಿಸಿgದ ನಾರಾಯಣಗೌಡ, ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜು ಅವರ ಸೋದರ ತಮ್ಮ ಬೆಂಬಲಿಗರೊಂದಿಗೆ ಹಲ್ಲೆ ನಡೆಸಿದ್ದಾರೆ. ನನಗೆ ಎಕ್ಕಡದಲ್ಲಿ ಹೊಡೆಸಿ, ಜೊತೆಯಲ್ಲಿದ್ದ ಸಚಿವ ಮಾಧುಸ್ವಾಮಿ ಅವರನ್ನು ನೂಕಾಡಿದ್ದಾರೆ. ಚಪ್ಪಲಿಯಲ್ಲಿ ಹೊಡಿಸುವ ಅಧಿಕಾರ ಯಾರಿಗಿದೆ ಎಂದು ಪ್ರಶ್ನೆ ಮಾಡಿ ಮುಂದಿನ ದಿನಗಳಲ್ಲಿ ಎಲ್ಲರು ಪರಿಣಾಮ ಎದುರಿಸಲಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದರು.
ನಾಮಪತ್ರ ಸಲ್ಲಿಸಿ ಹೊರ ಬಂದ ಕೂಡಲೇ ಜೆಡಿಎಸ್ ಕಾರ್ಯಕರ್ತರ ಗುಂಪು `ಬಾಂಬೆ ಕಳ್ಳ’ ಎಂದು ಕೂಗಲು ಆರಂಭಿಸಿದರು. ಕಾರ್ಯಕರ್ತರ ಗಲಾಟೆ ಹೆಚ್ಚಾಗುತ್ತಿದ್ದಂತೆ ಪೊಲೀಸರು ತಮ್ಮ ವಾಹನದಲ್ಲಿಯೇ ನಾರಾಯಣಗೌಡರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿದ್ದರು.
ಬಾಗಲಕೋಟೆ: ನಾಟಕ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಲಾವಿದೆ ಜೊತೆ ಅನುಚಿತವಾಗಿ ವರ್ತಿಸಿದ ಯುವಕನೊಬ್ಬ ಚಪ್ಪಲಿ ಏಟು ತಿಂದ ಘಟನೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಹಿಪ್ಪರಗಿ ಗ್ರಾಮದಲ್ಲಿ ನಡೆದಿದೆ.
ಸೋಮವಾರ ರಾತ್ರಿ ಹಿಪ್ಪರಗಿ ಗ್ರಾಮದಲ್ಲಿ “ಸೇಡಿಗಾಗಿ ಸಿಡಿದೆದ್ದ ಬಡವ” ಎಂಬ ನಾಟಕ ಪ್ರದರ್ಶನ ನಡೆಯುತ್ತಿತ್ತು. ನಾಟಕಕ್ಕೂ ಮುನ್ನ ಹಿಪ್ಪರಗಿ ಗ್ರಾಮದ ನಿವಾಸಿ ಬಸವರಾಜ್ ನಾಟಕ ಕಲಾವಿದೆ ರೇಖಾ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ ನನ್ನನ್ನು ಚುಂಬಿಸಲು ಬಂದಿದ್ದ ಎಂದು ಆರೋಪಿಸಿ ಕಲಾವಿದೆ ಬಸವರಾಜ್‍ಗೆ ಚಪ್ಪಲಿಯಿಂದ ಭರ್ಜರಿಯಾಗಿ ಥಳಿಸಿದ್ದಾರೆ. ಇದನ್ನೂ ಓದಿ:ನಾಟಕದ ವೇದಿಕೆಯ ಮೇಲೆಯೇ ಮೈ ಮರೆತು ಜೋಡಿಯಿಂದ ಲಿಪ್‍ಲಾಕ್
ಬಳಿಕ ಈ ವಿಷಯ ತಿಳಿದ ಗ್ರಾಮಸ್ಥರು ಇಂದು ಬೆಳಿಗ್ಗೆ ಇದೇ ವಿಚಾರವಾಗಿ ಗುರುಹಿರಿಯರ ಸಮ್ಮುಖದಲ್ಲಿ ಮಾತುಕತೆ ನಡೆಸಿದ್ದರು. ಈ ವೇಳೆ ಕೂಡ ಯುವಕನಿಗೆ ಕಲಾವಿದೆ ಚಪ್ಪಲಿ ಏಟು ನೀಡಿದ್ದಾರೆ. ನಂತರ ಗ್ರಾಮಸ್ಥರು ಯುವಕನಿಗೆ ಬುದ್ಧಿವಾದ ಹೇಳಿ, ಕಲಾವಿದೆಯ ಕಾಲಿಗೆ ಬೀಳಿಸಿ, ಕ್ಷಮೆ ಕೇಳಿಸಿ, ಪರಿಸ್ಥಿತಿ ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.