Tag: ಚರಣಜಿತ್ ಸಿಂಗ್ ಚನ್ನಿ

  • ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲು!

    ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲು!

    ಚಂಡೀಗಢ: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಇತರ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದ ಎಎಪಿ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಪಂಜಾಬ್ ಮುಖ್ಯ ಚುನಾವಣಾಧಿಕಾರಿ ಅವರು ಸಾಹಿಬ್ಜಾದಾ ಅಜಿತ್ ಸಿಂಗ್ ನಗರದ ಹಿರಿಯ ಎಸ್‌ಪಿಗೆ ಆದೇಶ ಹೊರಡಿಸಿದ್ದಾರೆ.

    ಶಿರೋಮಣಿ ಅಕಾಲಿ ದಳದ ದೂರಿನನ್ವಯ ಕೇಜ್ರಿವಾಲ್ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಹಾಗೂ ಇತರೆ ಪಕ್ಷಗಳ ವಿರುದ್ಧ ಕ್ಷುಲ್ಲಕವಾಗಿ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದೆ. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖ್ಯಸ್ಥ ಸುಖ್‌ಬೀರ್ ಸಿಂಗ್ ಬಾದಲ್ ಅವರು ಚುನಾವಣಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ದಂಡದ ಕ್ರಮಕ್ಕೆ ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನ ನಂತರ ಈ ಘಟನೆ ನಡೆದಿದೆ. ಇದನ್ನೂ ಓದಿ: ದೇಶದ ಮೊದಲ ಪ್ರಧಾನಿ ಶಂಕುಸ್ಥಾಪನೆ ಮಾಡಿದ್ದ ಯೋಜನೆಗಳು ಮೋದಿ ಸರ್ಕಾರದಿಂದ ಪೂರ್ಣ: ಅಮಿತ್ ಶಾ

    ಪ್ರಚಾರ ಮುಗಿದ ನಂತರವೂ ಮಾನಸಾ ಕ್ಷೇತ್ರದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿಧು ಮೂಸ್ ವಾಲಾ ವಿರುದ್ಧವೂ ಪ್ರಕರಣ ದಾಖಲಾಗಿದೆ. ಎಎಪಿ ದೂರಿನ ಆಧಾರದ ಮೇಲೆ ಮಾನ್ಸಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಕೂಚ್ ಬೆಹಾರ್ ಪ್ರತ್ಯೇಕ ರಾಜ್ಯದ ಬೇಡಿಕೆ ಇಡುವವರ ಮೊಣಕಾಲು ಮುರಿಯುತ್ತೇವೆ: ಉದಯನ್ ಗುಹಾ

  • ಕೇಜ್ರಿವಾಲ್‍ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ

    ಕೇಜ್ರಿವಾಲ್‍ಗೆ ಖಾಲಿಸ್ತಾನ್ ಉಗ್ರರ ನಂಟು – ತನಿಖೆ ನಡೆಸುತ್ತೇವೆ ಎಂದ ಅಮಿತ್ ಶಾ

    ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಾಲಿಸ್ತಾನಿ ಪ್ರತ್ಯೇಕ ರಾಷ್ಟ್ರದ ಪ್ರಧಾನಿಯಾಗಬೇಕೆಂದು ಬಯಸಿದ್ದರು ಎಂದು ಮಾಜಿ ಆಪ್ ನಾಯಕ ಕುಮಾರ್ ವಿಶ್ವಾಸ್ ಮಾಡಿದ ಆರೋಪವು ದಿನದಿಂದ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಬಗ್ಗೆ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.

    ಈ ಆರೋಪದ ಬಗ್ಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಈ ಆರೋಪವನ್ನು ಗಂಭೀರವಾಗಿ ತೆಗೆದುಕೊಂಡು, ಪರಿಶೀಲನೆ ನಡೆಸಿ ತನಿಖೆ ನಡೆಸಲಾಗುವುದು. ಜೊತೆಗೆ ಶೀಘ್ರದಲ್ಲೇ ಕೇಜ್ರಿವಾಲ್ ಅವರನ್ನು ತನಿಖೆಗೆ ಒಳಪಡಿಸಲಾಗುತ್ತದೆ ಎಂದು ಪಂಜಾಬ್‍ನ ಮುಖ್ಯಮಂತ್ರಿ ಚನ್ನಿಗೆ ಭರವಸೆ ನೀಡಿದರು.

    ರಾಜಕೀಯ ಪಕ್ಷ ಉಗ್ರವಾದಿ ಸಂಘಟನೆಗಳೊಂದಿಗೆ ಸಂಬಂಧವನ್ನು ಇಟ್ಟುಕೊಳ್ಳುವುದು ಹಾಗೂ ಅವುಗಳ ಬೆಂಬಲ ಪಡೆಯುವುದು ಅತ್ಯಂತ ಗಂಭೀರ ವಿಚಾರವಾಗಿದೆ. ಅಧಿಕಾರಕ್ಕಾಗಿ ಪ್ರತ್ಯೇಕವಾದಿಗಳೊಡನೆ ಕೈಜೋಡಿಸುವುದು ಖಂಡನೀಯ. ಪಂಜಾಬ್ ರಾಜ್ಯವನ್ನು ವಿಂಗಡನೆ ಮಾಡಲು ಹೋರಟಿರುವುದನ್ನು ವಿರೋಧಿಸುತ್ತೇವೆ. ಇಂತಹ ಸಂಘಟನೆಗಳ ಅಜೆಂಡಾ ರಾಷ್ಟ್ರ ವಿರೋಧಿಗಳ ಅಜೆಂಡಾಗಳಿಗಿಂತ ಭಿನ್ನವಲ್ಲ. ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದೆ. ನಾನೇ ಸ್ವತಃ ಇದನ್ನು ಪರಿಶೀಲನೆ ನಡೆಸುತ್ತೇನೆ. ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರಲು ಯಾರಿಗೂ ಅವಕಾಶ ನೀಡಲ್ಲ ಎಂದು ತಿಳಿಸಿದರು.

    ಈ ಹಿಂದೆ ವಿಶ್ವಾಸ್ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಆರೋಪಿ ತನಿಖೆಗೆ ಪಂಜಾಬ್‍ನ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಹಾಗೂ ಪ್ರಧಾನಿ ಮೋದಿ ಅವರನ್ನು ಒತ್ತಾಯಿಸಿದ್ದರು. ಅಲ್ಲದೆ ಆಪ್‍ಗೆ ಸಿಖ್ಸ್ ಫಾರ್ ಜಸ್ಟಿಸ್ ಎಂಬ ಖಲಿಸ್ತಾನಿ ಸಂಘಟನೆ ಬೆಂಬಲ ವ್ಯಕ್ತಪಡಿಸಿ ಬರದಿರುವ ಪತ್ರವನ್ನು ಗಮನ ಸೆಳೆದಿದ್ದರು. ಇದನ್ನೂ ಓದಿ: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್‌ ಸ್ಫೋಟ!

    ಈ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿ, ಕೇಂದ್ರ ಸರ್ಕಾರವು ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿಗೆ ಪತ್ರ ಬರೆದು ತನಿಖೆಗೆ ಒತ್ತಾಯೊಸಲು ಕೇಳಿಕೊಂಡಿದೆ. ಇನ್ನೆರಡು ದಿನಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ನನ್ನ ವಿರುದ್ಧ ಎಫ್‍ಐಆರ್‍ನ್ನು ದಾಖಲಿಸುತ್ತದೆ ಎಂದು ಕೇಳಲ್ಪಟ್ಟಿದ್ದೇನೆ. ನನ್ನ ಮೇಲೆ ಬಂದಿರುವ ಎಲ್ಲಾ ಕೇಸ್‍ಗಳನ್ನು ಸ್ವಾಗತಿಸುತ್ತೇನೆ. ಆದರೆ ಕೇಂದ್ರವು ಭದ್ರತೆಯ ಬಗ್ಗೆ ಈ ರೀತಿ ವ್ಯವಹರಿಸುತ್ತಿರುವುದು ನನಗೆ ಸಾಕಷ್ಟು ಚಿಂತೆಯನ್ನು ಉಂಟು ಮಾಡಿದೆ. ಜೊತೆ ರಾಷ್ಟ್ರೀಯ ಭದ್ರತೆಯನ್ನು ಕೇಂದ್ರ ಹಾಸ್ಯ ಮಾಡಿತ್ತಿದೆ. ಎಲ್ಲಾ ಭ್ರಷ್ಟರು ಒಂದಾಗಿದ್ದಾರೆ. ನನ್ನನ್ನು ಹೆದರಿಸಲು ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.  ಇದನ್ನೂ ಓದಿ: ಪಂಜಾಬ್‍ನನ್ನು ಕಾಂಗ್ರೆಸ್ ಲೂಟಿ ಮಾಡುತ್ತಿದೆ: ಅರವಿಂದ್ ಕೇಜ್ರಿವಾಲ್

  • ದಲಿತ ಮತಗಳ ಮೇಲೆ ಕಣ್ಣು-  ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ?

    ದಲಿತ ಮತಗಳ ಮೇಲೆ ಕಣ್ಣು- ಎರಡು ಕ್ಷೇತ್ರಗಳಲ್ಲಿ ಸಿಎಂ ಚನ್ನಿ ಸ್ಪರ್ಧೆ?

    ನವದೆಹಲಿ : ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಸ್ಥಾನಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಹೇಳಿವೆ. ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಮತಗಳ ಕ್ರೋಢೀಕರಣಕ್ಕೆ ಈ ತಂತ್ರ ರೂಪಿಸಿದೆ ಎನ್ನಲಾಗಿದೆ.

    ವಿಧಾನಸಭೆ ಚುನಾವಣೆ ಹಿನ್ನೆಲೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಿನ್ನೆ ಮಹತ್ವದ ಸಭೆ ನಡೆಸಲಾಯಿತು. ತಡರಾತ್ರಿವರೆಗೂ ನಡೆದ ಸಭೆಯಲ್ಲಿ 70 ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ. ಸುಮಾರು 5 ಸ್ಥಾನಗಳ ಬಗ್ಗೆ ಒಮ್ಮತ ಮೂಡದ ಕಾರಣ ಮತ್ತೊಮ್ಮೆ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ಸೇರಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದು ಇಂದು ಅಥವಾ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಇದನ್ನೂ ಓದಿ: ರೇಷನ್‌ ಕಾರ್ಡ್‌ ಇದೆಯಾ: ಸ್ನಾನ ಮಾಡ್ತಿದ್ದ ವ್ಯಕ್ತಿ ಬಳಿ ಹೋಗಿ ಬಿಜೆಪಿ ಶಾಸಕನ ಪ್ರಶ್ನೆ

    ಸಭೆಯಲ್ಲಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್ ಚನ್ನಿ ಸ್ಪರ್ಧೆ ಬಗ್ಗೆಯೂ ಗಂಭೀರ ಚರ್ಚೆ ನಡೆದಿದೆ. ಪ್ರಸ್ತುತ ಚಮ್ಕೌರ್ ಸಾಹಿಬ್ ಕ್ಷೇತ್ರದ ಶಾಸಕರಾಗಿರುವ ಚನ್ನಿ, ಅವರನ್ನು ದಲಿತರು ಅತಿ ಹೆಚ್ಚು ಸಂಖ್ಯೆಯಲ್ಲಿರುವ ದೋಬಾ ಪ್ರದೇಶದಲ್ಲಿ ಬರುವ ಆದಂಪುರ ಕ್ಷೇತ್ರದಿಂದಲೂ ಕಣಕ್ಕಿಳಿಸಲು ಚಿಂತಿಸಲಾಗಿದೆ. ಇದನ್ನೂ ಓದಿ: ವಿಶೇಷ ವಿಕಲಚೇತನ ಅಪ್ಪು ಅಭಿಮಾನಿಯಿಂದ ಬೆಂಗಳೂರಿಗೆ ಪಾದಯಾತ್ರೆ

    ಸಮೀಕ್ಷೆಗಳ ಪ್ರಕಾರ ಗೆಲುವಿನ ಸನಿಹದಲ್ಲಿರುವ ಕಾಂಗ್ರೆಸ್, ದಲಿತರ ಮತಗಳನ್ನು ಸೆಳೆಯಲು ಈ ತಂತ್ರ ರೂಪಿಸುತ್ತಿದೆ ಎನ್ನಲಾಗಿದ್ದು, 1 ಅಥವಾ 2 ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ. ಫೆಬ್ರವರಿ 10 ರಿಂದ ಪಂಚ ರಾಜ್ಯಗಳ ಚುನಾವಣೆ ಆರಂಭವಾಗಲಿದ್ದು, 2ನೇ ಹಂತದಲ್ಲಿ ಪಂಜಾಬ್‍ನಲ್ಲಿ ಚುನಾವಣೆ ನಡೆಯಲಿದೆ.