Tag: ಚಲೋ

  • ಜಾಮಿಯಾ ಮಸೀದಿ ವಿವಾದಕ್ಕೆ ದಿನಕ್ಕೊಂದು ಟ್ವಿಸ್ಟ್ – ವೀಡಿಯೋ ಸತ್ಯ ಬಯಲು

    ಜಾಮಿಯಾ ಮಸೀದಿ ವಿವಾದಕ್ಕೆ ದಿನಕ್ಕೊಂದು ಟ್ವಿಸ್ಟ್ – ವೀಡಿಯೋ ಸತ್ಯ ಬಯಲು

    ಮಂಡ್ಯ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದ ದಿನದಿಂದ ದಿನಕ್ಕೆ ತಾರಕಕ್ಕೆ ಏರುತ್ತಿದೆ. ಅಲ್ಲದೇ ಈ ಮಸೀದಿಯ ವಿಚಾರದಲ್ಲಿ ಮತ್ತಷ್ಟು ತಿರುವು ತೆಗೆದುಕೊಳ್ಳುತ್ತಿದೆ.

    ಜಾಮಿಯಾ ಮಸೀದಿ ಮಂದಿರವೋ ಅಥವಾ ಮಸೀದಿಯೋ ಎಂದು ನಾವು ನ್ಯಾಯಾಲಯದಲ್ಲಿ ಬಗೆಹರಿಸಿಕೊಳ್ಳುತ್ತೇವೆ. ಆದ್ರೆ ಪುರಾತತ್ವ ಇಲಾಖೆಗೆ ಸೇರಿದ ಜಾಮಿಯಾ ಮಸೀದಿಯ ಕಟ್ಟಡದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಮದರಸವನ್ನು ನಿಲ್ಲಿಸಿಸಬೇಕೆಂದು ಹಿಂದೂಪರ ಸಂಘಟನೆಗಳು ಇದೀಗ ತೀವ್ರತರದಲ್ಲಿ ಹೋರಾಟ ಆರಂಭಿಸವೆ. ಶನಿವಾರ ಶ್ರೀರಂಗಪಟ್ಟಣದಲ್ಲಿ ಹಿಂದೂಪರ ಸಂಘಟನೆಗಳು ಈ ಅಕ್ರಮ ಮದರಸದ ವಿರುದ್ಧ ಗುಡುಗಿದರು. ಇದನ್ನೂ ಓದಿ:  ಗ್ಯಾಂಗ್ ರೇಪ್: ಅಪ್ರಾಪ್ತ ಆರೋಪಿ ಫೋಟೋ ರಿಲೀಸ್ – ಬಿಜೆಪಿ ಶಾಸಕನ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ 

    ವೀಡಿಯೋ ಟ್ವಿಸ್ಟ್
    ಶನಿವಾರ ಹಿಂದೂಪರ ಸಂಘಟನೆಗಳು ವೈರಲ್ ಮಾಡಿದ್ದ ಜಾಮಿಯಾ ಮಸೀದಿ ಒಳಭಾಗದಲ್ಲಿ ಕುಳಿತು ಇಬ್ಬರು ಹನುಮ ಭಕ್ತರು ಮಾಡಿದ್ದ ಹನುಮ ಮತ್ತು ರಾಮನ ಭಜನೆಯ ವೀಡಿಯೋ ಅಸಲಿಯತ್ತು ಸಹ ಇಂದು ಗೊತ್ತಾಗಿದೆ. ಈ ವೀಡಿಯೋವನ್ನು ಜೂನ್ 3 ರ ಸಂಜೆ 4 ಗಂಟೆಯ ವೇಳೆಯಲ್ಲಿ ಮಾಡಿರುವುದಾಗಿ ಜಾಮಿಯಾ ಮಸೀದಿ ಸಿಸಿಟಿವಿ ವೀಡಿಯೋ ಪರಿಶೀಲಿಸಿದಾಗ ತಿಳಿದುಬಂದಿದೆ.

    ಶ್ರೀರಂಗಪಟ್ಟಣದಲ್ಲಿ ಇಂದು 144 ಸೆಕ್ಷನ್ ಮುಗಿದ್ರು ಸಹ ಪಟ್ಟಣದ್ಯಾಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಜರುಗ ಬಾರದೆಂದು ಜಾಮಿಯಾ ಮಸೀದಿಗೆ ಇಂದು ಸಹ ಪ್ರವಾಸಿಗರ ನಿರ್ಬಂಧವನ್ನು ಜಿಲ್ಲಾಡಳಿತ ಏರಿದ್ದು, ಜಾಮಿಯಾ ಮಸೀದಿಯ ಸುತ್ತ ಬಿಗಿ ಪೊಲೀಸ್ ಭದ್ರತೆ ಕಲ್ಪಸಲಾಗಿದೆ.

    ಶ್ರೀರಂಗಪಟ್ಟಣ ಚಲೋ ನಡೆಸಲು ಬಂದ ನೂರಾರು ಮಂದಿ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದರು. ನಂತರ ಕಿರಂಗೂರು ಸರ್ಕಲ್‍ನ ಬನ್ನಿಮಂಟಪದಲ್ಲಿ ಹನುಮಾನ್ ಚಾಲಿಸ್ ಪಠಣೆ ಮಾಡಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮದರಸ ತೆರವು ಮಾಡಬೇಕು ಎಂದು ಹಿಂದೂಪರ ಸಂಘಟನೆಗಳು ಅಧಿಕಾರಿಗಳಿಗೆ 25 ದಿನಗಳ ಗಡುವನ್ನು ನೀಡಿದ್ದಾರೆ. ಒಂದು ಕಡೆ ಜಾಮಿಯಾ ಮಸೀದಿ ವಿವಾದ ತಾರಕಕ್ಕೆ ಏರುತ್ತಿದ್ದು, ಇನ್ನೊಂದು ಕಡೆ ಹೋರಾಟದ ಸ್ವರೂಪಗಳು ತೀವ್ರತೆ ಪಡೆದುಕೊಳ್ಳುತ್ತಿದೆ.

    20 ವರ್ಷಗಳಿಂದ ಹೋರಾಟ
    ಈ ಹೋರಾಟ ನಿನ್ನೆ, ಮೊನ್ನೆಯಿಂದ ನಡೆಯುತ್ತಿರುವುದಲ್ಲ. 20 ವರ್ಷಗಳಿಂದ ಈ ಹೋರಾಟ ನಡೆಯುತ್ತಿದೆ ಎಂದು ಗೋತ್ತಾಗಿದೆ. 2004 ಜುಲೈ 1 ರಂದು ಹಿಂದೂ ಮುಖಂಡ ಗಿರೀಶ್ ಹಾಗೂ ಅವರ ಜೊತೆಯಲ್ಲಿದ್ದವರು ಮೈಸೂರಿನ ವಕೀಲ ಕೇಶವಮೂರ್ತಿ ಅವರ ಮೂಲಕ ಜಿಲ್ಲಾಡಳಿತ, ರಾಜ್ಯ ಸರ್ಕಾರ, ಪುರಾತತ್ವ ಇಲಾಖೆ, ಕೇಂದ್ರ ಸರ್ಕಾರಗಳಿಗೆ ನೋಟಿಸ್ ನೀಡಿದ್ದಾರೆ.

    ನೋಟಿಸ್‍ನಲ್ಲಿ ಏನಿದೆ?
    ಜಾಮಿಯಾ ಮಸೀದಿಯಲ್ಲಿ ಅಕ್ರಮವಾಗಿ ಮದರಸ ಮಾಡಲಾಗುತ್ತಿದೆ. ಇಲ್ಲಿ ಗೋಮಾಂಸವನ್ನು ಬೇಯಿಸಿ ತಿನ್ನುತ್ತಿದ್ದಾರೆ. ಈ ಅಕ್ರಮ ಮದರಸವನ್ನು ತೆರವು ಮಾಡಬೇಕೆಂದು ಉಲ್ಲೇಖಿಸುವುದರ ಜೊತೆಗೆ, ಜಾಮಿಯಾ ಮಸೀದಿಯಲ್ಲಿರುವ ದೇವಸ್ಥಾನದ ಕುರುಹುಗಳನ್ನು ನಾಶ ಮಾಡಲಾಗುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕೆಂದು ನೋಟಿಸ್ ನೀಡಲಾಗಿತ್ತು. ಇದನ್ನೂ ಓದಿ: ಲೋಕಲ್ ಅಲ್ಲ ಫಾರೀನ್ ಹೆಂಡವೇ ಬೇಕು – ಎಣ್ಣೆಯಿಲ್ಲದೆ ನೀರು ಮುಟ್ಟಲ್ಲ ಈ ಹುಂಜ 

    ಈ ವೇಳೆ ಪುರಾತತ್ವ ಇಲಾಖೆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಜಾಮಿಯಾ ಮಸೀದಿಯಲ್ಲಿ ನಡೆಯುತ್ತಿರುವ ಮದರಸ ತೆರವು ಮಾಡಬೇಕೆಂದು ಪತ್ರಬರೆಯಲಾಗಿತ್ತು. ಆದ್ರೆ ಸರ್ಕಾರ ಮತ್ತು ಅಧಿಕಾರಿಗಳು ಇಲ್ಲಿಯವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ.

  • ರಶ್ಮಿಕಾಗೆ ವಿಶೇಷ ಗಿಫ್ಟ್ ಕೊಟ್ಟ ರಕ್ಷಿತ್ ಶೆಟ್ಟಿ

    ರಶ್ಮಿಕಾಗೆ ವಿಶೇಷ ಗಿಫ್ಟ್ ಕೊಟ್ಟ ರಕ್ಷಿತ್ ಶೆಟ್ಟಿ

    ಬೆಂಗಳೂರು: ತನ್ನ ಬಾಳ ಸಂಗಾತಿಯಾಗಲಿರುವ ರಶ್ಮಿಕಾ ಅವರಿಗೆ ರಕ್ಷಿತ್ ಶೆಟ್ಟಿ ಅವರು ವಿಶೇಷ ಗಿಫ್ಟ್ ನೀಡಿದ್ದಾರೆ.

    ರಶ್ಮಿಕಾ ಅವರಿಗೆ ಪ್ರಾಣಿಗಳು ಎಂದರೆ ಬಹಳ ಇಷ್ಟವಂತೆ. ಈ ಕಾರಣಕ್ಕೆ ಬೆಕ್ಕನ್ನು ಗಿಫ್ಟ್ ಆಗಿ ನೀಡಿದ್ದಾರೆ. ಈ ಬೆಕ್ಕಿಗೆ ರಶ್ಮಿಕಾ ‘ಸಿಂಭ’ ಎಂದು ಹೆಸರಿಟ್ಟಿದ್ದು, ಎಲ್ಲೆ ಹೋದರು ಬೆಕ್ಕನ್ನು ತಮ್ಮ ಜೊತೆ ಕರೆದುಕೊಂಡು ಹೋಗುತ್ತಿದ್ದಾರಂತೆ.

    ‘ಕಿರಿಕ್ ಪಾರ್ಟಿ’ಯ ಜೋಡಿಗಳಾದ ರಕ್ಷಿತ್ ಶೆಟ್ಟಿ ಮತ್ತು ರಶ್ಮಿಕಾ ಮಂದಣ್ಣ ಜುಲೈ 4 ಮಂಗಳವಾರದಂದು ಕೊಡಗಿನ ವಿರಾಜಪೇಟೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

    ರಶ್ಮಿಕಾ ಅವರು ಈಗ ತೆಲುಗು ಚಿತ್ರ `ಚಲೋ’ ಪ್ರಮೋಶನ್ ನಲ್ಲಿ ಬ್ಯುಸಿ ಇದ್ದಾರೆ. ನಾಗಶೌರ್ಯ ನಾಯಕರಾಗಿರುವ ಈ ಚಿತ್ರ ಫೆ. 2ರಂದು ಬಿಡುಗಡೆಯಾಗಲಿದೆ.

  • ನಿಮ್ಮ ಯಾವುದೇ ಬೆದರಿಕೆಗೆ ನಾವು ಜಗ್ಗಲ್ಲ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕೆಂಡಾಮಂಡಲ

    ನಿಮ್ಮ ಯಾವುದೇ ಬೆದರಿಕೆಗೆ ನಾವು ಜಗ್ಗಲ್ಲ: ಸಿಎಂ ವಿರುದ್ಧ ಪ್ರತಾಪ್ ಸಿಂಹ ಕೆಂಡಾಮಂಡಲ

    ಮೈಸೂರು: ಬಿಜೆಪಿ ಯುವ ಮೋರ್ಚಾದಿಂದ ಮಂಗಳೂರು ಚಲೋ ಪ್ರತಿಭಟನೆಯಲ್ಲಿ ಭಾಗಿ ಆಗುವವರಿಗೆ ಸ್ಥಳಾವಕಾಶ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮ್ಮ ಬೆದರಿಕೆ ತಂತ್ರಗಳಿಗೆ ನಾವು ಹೆದರೋದಿಲ್ಲ. ನೀವು ಕಲ್ಯಾಣ ಮಂಟಪದ ಮಾಲೀಕರಿಗೆ ಬೆದರಿಕೆ ಪತ್ರ ನೀಡಿ ಏನೂ ಮಾಡೋಕಾಗಲ್ಲ. ನಾವು ನಮ್ಮ ಕಾರ್ಯಕರ್ತರ ಮನೆಯಲ್ಲಿ ಪ್ರತಿಭಟನಾಕಾರರನ್ನು ಉಳಿಸುತ್ತೆವೆ. ಪ್ರಜಾ ತಾಂತ್ರಿಕವಾಗಿ ಎಲ್ಲರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ನೀವು ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದಾಗ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿರಲಿಲ್ಲವೇ? ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸ್ ಇಲಾಖೆಯನ್ನು ಬಳಸಿಕೊಳ್ಳುತ್ತಿದ್ದೀರಾ ಅಂತ ಕಿಡಿಕಾರಿದ್ದಾರೆ.

    ಹಿಂದೂ ಮುಖಂಡರುಗಳ ಕೊಲೆಗೆ ಕಾರಣವಾದ ಕೆಎಫ್ ಡಿ ಹಾಗೂ ಪಿಎಫ್‍ಐ ಸಂಘಟನೆಗಳನ್ನು ನಿಷೇಧ ಮಾಡಿ. ಕಾನೂನು ರೀತಿಯಲ್ಲಿ ನೀವೇ ಆ ಸಂಘಟನೆಗಳನ್ನು ನಿಷೇಧ ಮಾಡಿದ್ದರೆ ನಾವು ಬೈಕ್ ಜಾಥಾವನ್ನು ಮಾಡುತ್ತಿರಲಿಲ್ಲ. ಕೆಎಫ್ ಡಿ, ಪಿಎಫ್‍ಐ ಸಂಘಟನೆಗಳ ಮೇಲೆ ಯಾಕೆ ನಿಮಗೆ ಅಷ್ಟೊಂದು ಪ್ರೀತಿ. ಕಾನೂನು ಸುವ್ಯವಸ್ಥೆಯನ್ನು ಹಿಂದೂ ಮುಖಂಡರು ಆರ್ ಎಸ್‍ಎಸ್ ನವರು ಮಾತ್ರ ಹಾಳು ಮಾಡುತ್ತಾರೆ. ನಿಮ್ಮ ಯಾವುದೇ ಬೆದರಿಕೆಗಳಿಗೆ ನಾವು ಜಗ್ಗಲ್ಲ. ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಸ್ಪಷ್ಟಪಡಿಸಿದ್ರು.

    ಇದನ್ನೂ ಓದಿ: ಮಂಗಳೂರು ಚಲೋ ರ‍್ಯಾಲಿಗೆ ಪೊಲೀಸರ ನೋಟಿಸ್

    ಸಿಎಂ ಏಕವಚನಕ್ಕೆ ಪ್ರತಾಪ್ ಸಿಂಹ ಕಿಡಿ:
    ಮೈಸೂರು ಮಹಾರಾಜರ ಕುರಿತು ಸಿಎಂ ಸಿದ್ದರಾಮಯ್ಯ ಹಗುರವಾಗಿ ಹೇಳಿಕೆ ನೀಡಿದ್ದರ ಬಗ್ಗೆ ಶನಿವಾರ ಮೈಸೂರು ಸಂಸದ ಪ್ರತಾಪ್ ಸಿಂಹ ಕಟುವಾಗಿ ತಿರುಗೇಟು ನೀಡಿದ್ದಾರೆ. ಮಹಾರಾಜರನ್ನು ಏಕವಚನದಲ್ಲಿ ಸಂಬೋಧಿಸಿದ್ದು ನಿಮ್ಮ ನೀಚ ಬುದ್ಧಿಯನ್ನು ತೋರುತ್ತದೆ. ಮಹಾರಾಜ ಜನರ ದುಡ್ಡಲ್ಲಿ ಮಾರ್ಕೆಟ್ ಕಟ್ಟಿದ್ದ ಎಂದು ಪ್ರಶ್ನೆ ಮಾಡುವ ನೀವು ಮೊದಲು ನಿಮ್ಮನ್ನ ನೀವೇ ಆತ್ಮಾವಲೋಕನ ಮಾಡಿಕೊಳ್ಳಿ. ಇಂದಿರಾ ಕ್ಯಾಂಟೀನ್ ಗೆ ಇಂದಿರಾಗಾಂಧಿ ಕುಟುಂಬ ದುಡ್ಡು ಕೊಟ್ಟಿದ್ದಾರಾ? ಅಕ್ಕಿ ಹಾಗೂ ಉಪ್ಪಿನ ಪ್ಯಾಕ್ ಮೇಲೆ ನಿಮ್ಮ ಫೋಟೋ ಹಾಕಿಕೊಳ್ಳಲು ಅದಕ್ಕೆ ನಿಮ್ಮ ಸ್ವಂತ ದುಡ್ಡು ಕೊಟ್ಟಿದ್ದೀರಾ? ಮಹಾರಾಜರು ಕಟ್ಟಿಸಿದ ಯೂನಿವರ್ಸಿಟಿಯಲ್ಲಿ ಪದವಿ ಪಡೆದ ನಿಮಗೆ ಅವರ ಬಗ್ಗೆ ಕನಿಷ್ಠ ಕೃತಜ್ಞತೆಯ ಇಲ್ಲವೇ ಅಂತ ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದ್ರು.

    ಮಹಾರಾಜರನ್ನು ಏಕವಚನದಲ್ಲಿ ಸಂಬೋಧಿಸಿದ ನಿಮಗೆ ಅವರು ನಿರ್ಮಿಸಿದ ರಸ್ತೆಗಳಿಗೆ ಡಾಂಬರ್ ಹಾಕುವ ಶಕ್ತಿ ಇಲ್ಲ ಅಂತ ಟೀಕಿಸಿದ್ರು. ನಿಮಗೆ ಮೈಸೂರು ರಾಜಮನೆತನದ ಕುಟುಂಬದ ಬಗ್ಗೆ ಗೌರವ ಇಲ್ಲ ಅಂತ ನಮಗೆ ಎಂದೋ ತಿಳಿದಿದೆ. ಮಹಾರಾಜರ ಪತನಕ್ಕೆ ಕಾರಣವಾದ ಟಿಪ್ಪು ಜಯಂತಿ ಆಚರಿಸುವ ನಿಮ್ಮ ಬುದ್ಧಿ ಏನೆಂದು ನಮಗೆ ಗೊತ್ತಿದೆ. ಬೇರೆಯವರನ್ನು ಪ್ರಶ್ನೆ ಮಾಡುವ ಮುನ್ನ ನಿಮ್ಮನ್ನು ನೀವು ಆತ್ಮಾವಲೋಕನ ಮಾಡಿಕೊಳ್ಳಿ ಎಂದು ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.