Tag: ಚಾಮರಾಜನರ

  • ಕೈದಿಗಳಿಗೆ ಮಂತ್ರಾಕ್ಷತೆ, ರಾಮ ಕಥಾ ಪುಸ್ತಕ ವಿತರಣೆ – ವಿಭಿನ್ನ ಆಚರಣೆಗೆ ಸಾಕ್ಷಿಯಾಯ್ತು ಚಾಮರಾಜನಗರದ ಜೈಲು

    ಕೈದಿಗಳಿಗೆ ಮಂತ್ರಾಕ್ಷತೆ, ರಾಮ ಕಥಾ ಪುಸ್ತಕ ವಿತರಣೆ – ವಿಭಿನ್ನ ಆಚರಣೆಗೆ ಸಾಕ್ಷಿಯಾಯ್ತು ಚಾಮರಾಜನಗರದ ಜೈಲು

    ಚಾಮರಾಜನಗರ: ಅತ್ತ ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆಗಳು ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಜಾಮರಾಜನಗರ ಬಂಧಿಖಾನೆ ವಿಭಿನ್ನ ಆಚರಣೆಗೆ ಸಾಕ್ಷಿಯಾಗಿದೆ.

    ವಿಚಾರಣಾಧೀನ ಕೈದಿಗಳಿಗೆ ಅಯೋಧ್ಯೆಯ ಮಂತ್ರಾಕ್ಷತೆ, ರಾಮ ಕಥಾ ಮಹಿಮೆ ಪುಸ್ತಕ ಹಾಗೂ ತುಳಸಿಮಾಲೆ ವಿತರಿಸಲಾಗಿದ್ದು ಕೈದಿಗಳ ಬಾಯಲ್ಲಿ ರಾಮ ನಾಮ ಜಪ ಮೂಡಿಬಂದಿದೆ. ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣಗೆ ಅಗ್ನಿ ಪರೀಕ್ಷೆ; ಚುನಾವಣೆಯಲ್ಲಿ ಅಕ್ರಮ ಆರೋಪ ಪ್ರಕರಣ ಸುಪ್ರೀಂನಲ್ಲಿ ಇಂದು ವಿಚಾರಣೆ

    ನಗರದ ಜನಾರ್ಧನ ಪ್ರತಿಷ್ಠಾನ ಆಯೋಜಿಸಿದ್ದ ಈ ವಿಭಿನ್ನ ಕಾರ್ಯಕ್ರಮದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಗಳೂ ಆದ ನ್ಯಾಯಾಧೀಶ ಎಂ.ಶ್ರೀಧರ್ ಭಾಗಿಯಾಗಿ ಕೈದಿಗಳಿಗೆ ಅಯೋಧ್ಯೆಯ ಮಂತ್ರಾಕ್ಷತೆ, ರಾಮ ಕಥಾ ಮಹಿಮೆ ಪುಸ್ತಕ, ತುಳಸಿ ಜಪಮಾಲೆ ವಿತರಿಸಿದರು. ಇದನ್ನೂ ಓದಿ: Annapoorni: ರಾಮನ ಕುರಿತು ವಿವಾದಾತ್ಮಕ ಡೈಲಾಗ್- ಕೊನೆಗೂ ಮೌನ ಮುರಿದ ನಯನತಾರಾ

    ಯಾವುದೋ ಸಂದರ್ಭದಲ್ಲಿ ಮಾಡಿದ ತಪ್ಪಿಗೆ ಮನಃ ಪರಿವರ್ತನೆಯಾಗಿ ಹೊಸ ಜೀವನ ನಡೆಸಿ ಎಂದು ನ್ಯಾಯಾಧೀಶರು ತಿಳಿಹೇಳಿದರು. ಕೈದಿಗಳಿಗೆ ಜನಾರ್ಧನ ಪ್ರತಿಷ್ಠಾನದ ಅರ್ಚಕ ಅನಂತ್ ಪ್ರಸಾದ್‌ರಿಂದ ರಾಮ ನಾಮ ಮಂತ್ರ ಬೋಧನೆ ಮಾಡಿಸಲಾಯಿತು. ರಾಮನಾಮ ಜಪಿಸಿದ ಕೈದಿಗಳು ಭಾವುಕರಾದರು ಕಾರ್ಯಕಮಕ್ಕೂ ಮುನ್ನ ಹರಳುಕೋಟೆ ಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು. ಇದನ್ನೂ ಓದಿ: ಆನೇಕಲ್‌ನಲ್ಲಿ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡ ಕುಸಿತ – 20ಕ್ಕೂ ಹೆಚ್ಚು ಕಾರ್ಮಿಕರು ಗಂಭೀರ 

  • ಮಗುವಿಗೆ ಕುಕ್ಕಿದ ಕೋಳಿ- ಶಾಲೆಗೆ ಬೀಗ ಜಡಿದು ಪ್ರತಿಭಟನೆ

    ಮಗುವಿಗೆ ಕುಕ್ಕಿದ ಕೋಳಿ- ಶಾಲೆಗೆ ಬೀಗ ಜಡಿದು ಪ್ರತಿಭಟನೆ

    ಚಾಮರಾಜನಗರ: ಶಾಲೆಗೆ ಯಾವುದೇ ಸೂಕ್ತ ವ್ಯವಸ್ಥೆ ಇಲ್ಲದೇ ಕೋಳಿಯೊಂದು ಬಾಲಕಿಯನ್ನು ಕುಕ್ಕಿದ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಪೆದ್ದನಪಾಳ್ಯ ಎಂಬ ಗ್ರಾಮದಲ್ಲಿ ನಡೆದಿದೆ.

    ಘಟನೆಯ ಬಳಿಕ ಬಾಲಕಿಯ ಪಾಲಕರು ಆಕ್ರೋಶಗೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಲೆಯಲ್ಲಿ ಒಂದನೇ ತರಗತಿ ಬಾಲಕಿಗೆ ಕೋಳಿ ಕಚ್ಚಿ ಗಾಯಗೊಳಿಸಿದ್ದು, ಗುರುವಾರದಂದೇ ಶಾಲೆಗೆ ಬೀಗ ಜಡಿದು ಮಕ್ಕಳನ್ನು ಪಾಲಕರು ಮನೆಗೆ ಕರೆದೊಯ್ದಿದ್ದರು. ಇಂದು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸದೇ ಪಾಲಕರು ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ವಿರುದ್ಧ ಪ್ರತಿಭಟಿಸಿ ಅಕ್ರೋಶ ಹೊರಹಾಕಿದ್ದಾರೆ.

    ಶಾಲೆಯ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ವಿನಾಕಾರಣ ಹಸು-ಕರುಗಳನ್ನು ಕಟ್ಟುತ್ತಿದ್ದು, ಜೊತೆಗೆ ಕೋಳಿಗಳನ್ನು ಮೇಯಲು ಬಿಡುತ್ತಿರುವ ಪರಿಣಾಮ ಈ ಘಟನೆ ನಡೆದಿದೆ. ಹೀಗಾಗಿ ಇಲಾಖೆ ಸರಿಯಾದ ರೀತಿ ವ್ಯವಸ್ಥೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಸದ್ಯ ಅಧಿಕಾರಿಗಳು ಇಂದು ಶಾಲೆಗೆ ಭೇಟಿ ಕೊಟ್ಟು ಪಾಲಕರ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಸ್ಪೀಕರ್‌ ಅನುಮತಿ ಇಲ್ಲದೇ ಡಿಕೆಶಿ ಕೇಸ್‌ ತನಿಖೆಗೆ ಆದೇಶಿಸಿರುವುದು ಕಾನೂನುಬಾಹಿರ: ಸಿದ್ದರಾಮಯ್ಯ

  • ಸಿಎಂ ಬಿಎಸ್‍ವೈ ಬದಲಾವಣೆ ಸೂಕ್ತ ತೀರ್ಮಾನವಲ್ಲ: ಶಾಸಕ ಎನ್.ಮಹೇಶ್

    ಸಿಎಂ ಬಿಎಸ್‍ವೈ ಬದಲಾವಣೆ ಸೂಕ್ತ ತೀರ್ಮಾನವಲ್ಲ: ಶಾಸಕ ಎನ್.ಮಹೇಶ್

    ಚಾಮರಾಜನಗರ: ಸಿಎಂ ಯಡಿಯೂರಪ್ಪ ಬದಲಾವಣೆ ಸೂಕ್ತ ತೀರ್ಮಾನವಲ್ಲ. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿದರೆ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು, ಅವರ ಬದಲಾವಣೆ ಸರಿಯಲ್ಲ. ಅನುಭವಿ ರಾಜಕಾರಣಿಯಾಗಿರುವ ಯಡಿಯೂರಪ್ಪ ಅವರನ್ನು ಬದಲಿಸಿ ಬೇರೆಯವರನ್ನು ತಂದು ಕೂರಿಸಿದರೆ ಆಡಳಿತದ, ಕ್ಷೇತ್ರಗಳ ಪರಿಚಯ ಪಡೆದುಕೊಳ್ಳಲು 6-7 ತಿಂಗಳು ಬೇಕಾಗಲಿದೆ. ಉಳಿದ ಕೇವಲ ಎರಡು ವರ್ಷದಲ್ಲಿ ಈ 6-7 ತಿಂಗಳು ವೇಸ್ಟ್ ಆಗಲಿದೆ. ಅನುಭವಿ ಯಡಿಯೂರಪ್ಪ ಅವರೇ ಮುಂದುವರಿದರೆ ರಾಜ್ಯ ಅಭಿವೃದ್ಧಿ ಪಥದಲ್ಲಿ ನಡೆಯಲಿದೆ ಎಂದಿದ್ದಾರೆ.

    ಕೊರೊನಾ, ಪ್ರವಾಹವನ್ನು ಸಮರ್ಥವಾಗಿ ಎದುರಿಸಿದ್ದಾರೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಒಂದು ವೇಳೆ ಬದಲಾವಣೆಯಾದರೆ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದನ್ನೂ ಓದಿ:‘ನನ್ನವರೇ ನನಗೆ ಶತ್ರುವಾದ್ರು..’ – ಆಪ್ತರ ಬಳಿ ಬಿಎಸ್‍ವೈ ಭಾವುಕ..!

  • ಮೋದಿ ಸಮಾವೇಶದಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಿಎಂ ಮಾಸ್ಟರ್ ಪ್ಲಾನ್

    ಮೋದಿ ಸಮಾವೇಶದಿಂದಾದ ಡ್ಯಾಮೇಜ್ ಕಂಟ್ರೋಲ್ ಮಾಡಲು ಸಿಎಂ ಮಾಸ್ಟರ್ ಪ್ಲಾನ್

    ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದ ಪ್ರಧಾನಿ ಮೋದಿ ಸಮಾವೇಶದಿಂದ ಕಾಂಗ್ರೆಸ್ ಗೆ ಆಗಿರುವ ಡ್ಯಾಮೇಜನ್ನು ಕಂಟ್ರೋಲ್ ಮಾಡಲು ಇದೀಗ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿಯಲ್ಲಿ ಮಾತ್ರ ಸಮಾವೇಶ ನಡೆಸಿದ್ರೆ, ಸಿಎಂ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ರೋಡ್ ಶೋ ಹಾಗೂ ಸಮಾವೇಶವನ್ನು ನಡೆಸಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸಿಎಂಗೆ 2+1 ಫಾರ್ಮುಲಾ, ಇತರೆ ಮಂತ್ರಿಗಳಿಗೆ 1+1 ಫಾರ್ಮುಲಾ: ಮೋದಿ ವಾಗ್ದಾಳಿ

    ಹನೂರು, ಕೊಳ್ಳೆಗಾಲ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಕ್ಷೇತ್ರಗಳಿಗೆ ಸೋಮವಾರ ಭೇಟಿ ನೀಡಲಿರುವ ಸಿಎಂ, ನಾಲ್ಕು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಜೊತೆ ರೋಡ್ ಶೋ ಮತ್ತು ಸಮಾವೇಶ ಮಾಡಲಿದ್ದಾರೆ. ಈ ಮೂಲಕ ಮೋದಿ ಸಮಾವೇಶದಿಂದ ಕಾಂಗ್ರೆಸ್ ಗೆ ಆಗಿರುವ ಡ್ಯಾಮೇಜ್ ನ್ನು ಕಂಟ್ರೋಲ್ ಮಾಡಲಿದ್ದಾರೆ ಎನ್ನಲಾಗಿದೆ.

    ಈ ಚುನಾವಣಾ ಪ್ರಚಾರದಲ್ಲಿ ಮೋದಿ ಚಾಮರಾಜನಗರಕ್ಕೆ ಬರದೇ ಇರೋದನ್ನಾ ಪ್ರಮುಖ ಅಸ್ತ್ರವನ್ನಾಗಿ ಸಿಎಂ ಬಳಸಿಕೊಳ್ಳಲಿದ್ದಾರೆ. ನಾಲ್ಕು ಕ್ಷೇತ್ರಗಳಲ್ಲೂ ಮೋದಿ ಅಧಿಕಾರ ಹೋಗುತ್ತೆ ಅಂತಾ ಚಾಮರಾಜನಗರಕ್ಕೆ ಬರಲಿಲ್ಲಾ ಅಂತಾ ಪ್ರಸ್ತಾಪ ಮಾಡಲಿದ್ದಾರೆ. ಈ ಮೂಲಕ ಗಡಿ ಜಿಲ್ಲೆಯಲ್ಲಿ ಎದ್ದಿದ್ದ ಮೋದಿ ಅಲೆಯನ್ನು ಕಟ್ಟಿಹಾಕಲಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಅದಾಗಿನಿಂದ ಚಾಮರಾಜನಗರಕ್ಕೆ ಇದು 11 ನೇ ಬಾರಿಯ ಪ್ರವಾಸವಾಗಲಿದೆ.