Tag: ಚಾಮರಾಜ ಕ್ಷೇತ್ರ

  • ಪಕ್ಷ ವಿರೋಧಿ ಚಟುವಟಿಕೆ ಆರೋಪ – ಕಾಂಗ್ರೆಸ್ ಮಾಜಿ ಶಾಸಕ ವಾಸುಗೆ ನೋಟಿಸ್

    ಪಕ್ಷ ವಿರೋಧಿ ಚಟುವಟಿಕೆ ಆರೋಪ – ಕಾಂಗ್ರೆಸ್ ಮಾಜಿ ಶಾಸಕ ವಾಸುಗೆ ನೋಟಿಸ್

    ಮೈಸೂರು: ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ (Chamaraja Assembly Constituency) ಮಾಜಿ ಶಾಸಕ ವಾಸು (Vasu) ಮೇಲೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ತೂಗುಗತ್ತಿ ತೂಗೋದಕ್ಕೆ ಆರಂಭವಾಗಿದೆ. ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ವಾಸುಗೆ ನೋಟಿಸ್ ಕೊಟ್ಟಿದೆ. ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ನೋಟಿಸ್ ಕೊಟ್ಟಿದ್ದು ಒಂದು ವಾರದ ಒಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದ್ದಾರೆ.

    ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೀರಿ. ಚಾಮರಾಜ ಕ್ಷೇತ್ರ ಅಧಿಕೃತ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದೀರಿ. ಈ ಬಗ್ಗೆ ಕೆಪಿಸಿಸಿಗೆ ಲಿಖಿತ ಪತ್ರ ಬಂದಿದೆ. ಹೀಗಾಗಿ ನಿಮಗೆ ಪತ್ರ ಬಂದ 7 ದಿನಗಳ ಒಳಗೆ ಲಿಖಿತ ವಿವರಣೆ ಕೊಡಿ ಎಂದು ತಿಳಿಸಲಾಗಿದೆ. ವಾಸುಗೆ ಪಕ್ಷದಿಂದ ಗೇಟ್ ಪಾಸ್ ಕೊಡಿಸಲು ಸಿಎಂ ಸಿದ್ದರಾಮಯ್ಯ ಬೆಂಬಲಿಗರ ಶತಪ್ರಯತ್ನಕ್ಕೆ ಮೊದಲ ಯಶಸ್ಸು ಈ ಮೂಲಕ ಸಿಕ್ಕಂತಾಗಿದೆ. ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದೆ ಬಜೆಟ್ ಅಧಿವೇಶನ ನಡೀತಿರೋದು ಇದೇ ಮೊದಲು: ಬಿಜೆಪಿ ವಿರುದ್ಧ ಸಿಎಂ ಗುಡುಗು

    ಈ ಹಿಂದೆ ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಕಳೆದವಾರ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ (Congress) ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದರು. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದರು. ಇದನ್ನೂ ಓದಿ: ಮಾಜಿ ಶಾಸಕ ವಾಸುರನ್ನ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸಿ – ಸಿಎಂ ಬೆಂಬಲಿಗರಿಂದ ಬಹಿರಂಗ ಪತ್ರ

    ಪತ್ರದಲ್ಲಿ ಏನಿತ್ತು?
    ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ (BJP) ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದರು.

    ಸಿದ್ದು ವಿರುದ್ಧ ಕಿಡಿ ಕಾರಿದ್ದ ವಾಸು:
    ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್‌ ಕೈತಪ್ಪಿದ ನಂತರ ಸುದ್ದುಗೋಷ್ಠಿ ನಡೆಸಿದ್ದ ಮಾಜಿ ಶಾಸಕ ವಾಸು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಶಾಸಕ ವಾಸುರನ್ನ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸಿ – ಸಿಎಂ ಬೆಂಬಲಿಗರಿಂದ ಬಹಿರಂಗ ಪತ್ರ

    ಮಾಜಿ ಶಾಸಕ ವಾಸುರನ್ನ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸಿ – ಸಿಎಂ ಬೆಂಬಲಿಗರಿಂದ ಬಹಿರಂಗ ಪತ್ರ

    ಮೈಸೂರು: ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು (Vasu) ಅವರನ್ನ ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ.

    ಡಿ.ಕೆ ಶಿವಕುಮಾರ್ (DK Shivakumar) ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಇದೀಗ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ (Congress) ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದಾರೆ. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ (BJP) ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಮೋದಿ ಕಟ್ಟಿಹಾಕಲು ಮಹಾಘಟಬಂಧನ್ – ಇಂದು ಬೆಂಗ್ಳೂರಲ್ಲಿ ವಿಪಕ್ಷಗಳ ಶಕ್ತಿಪ್ರದರ್ಶನ!

    ಸಿದ್ದು ವಿರುದ್ಧ ಕಿಡಿ ಕಾರಿದ್ದ ವಾಸು:
    ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್‌ ಕೈತಪ್ಪಿದ ನಂತರ ಸುದ್ದುಗೋಷ್ಠಿ ನಡೆಸಿದ್ದ ಮಾಜಿ ಶಾಸಕ ವಾಸು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ: ಸಿದ್ದು ವಿರುದ್ಧ ವಾಸು ಕಿಡಿ

    ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಹುಲಿ ಬಾಯಿಗೆ ಸಿಕ್ಕ ಮಗುವಿನಂತಾಗಿದೆ. ಐದು ವರ್ಷಗಳ ಆಡಳಿತದ ನಂತರ 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಸಿದ್ದರಾಮಯ್ಯ ಅವರ ಜಾತಿ ರಾಜಕಾರಣವೇ ಕಾರಣ. ನಾನು ಸಿದ್ದರಾಮಯ್ಯ ಅವರ ಜಾತಿ ರಾಜಕಾರಣ ವಿರೋಧಿಸಿದ್ದೆ. 2018ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಿದ್ದು ಸಿದ್ದರಾಮಯ್ಯನವರೇ. ಸಿದ್ದರಾಮಯ್ಯ ಕಡೆಯವರು ನನ್ನ ವಿರುದ್ಧ ಕೆಲಸ ಮಾಡಿದ್ದರು. ಆಗ ಕ್ಷೇತ್ರದಲ್ಲಿ ಸತ್ಯ ಮಾತಾಡಿದ್ದ ಶಾಹಿದ್‍ನನ್ನು ತೆಗೆದು ಹಾಕಿದ್ದರು. ಅಲ್ಲದೇ ಸಿದ್ದರಾಮಯ್ಯ ಅವರ ಹಗೆತನಕ್ಕೆ ಅನೇಕರು ಬಲಿಯಾಗಿದ್ದಾರೆ ಎಂದೂ ದೂರಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ: ಸಿದ್ದು ವಿರುದ್ಧ ವಾಸು ಕಿಡಿ

    2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ: ಸಿದ್ದು ವಿರುದ್ಧ ವಾಸು ಕಿಡಿ

    ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಕಾಂಗ್ರೆಸ್ (Congress) ಹುಲಿ ಬಾಯಿಗೆ ಸಿಕ್ಕ ಮಗುವಿನಂತಾಗಿದೆ ಎಂದು ಚಾಮರಾಜ ಕ್ಷೇತ್ರ (Chamaraja Assembly constituency) ಟಿಕೆಟ್ ವಂಚಿತ ಮಾಜಿ ಶಾಸಕ ವಾಸು ಮೈಸೂರಿನಲ್ಲಿ (Mysuru) ಭಾನುವಾರ ವಾಗ್ದಾಳಿ ನಡೆಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐದು ವರ್ಷಗಳ ಆಡಳಿತದ ನಂತರ 2018ರಲ್ಲಿ ಕಾಂಗ್ರೆಸ್ ಸೋಲು ಕಾಣಲು ಜಾತಿ ರಾಜಕಾರಣವೇ ಕಾರಣ. ನಾನು ಸಿದ್ದರಾಮಯ್ಯ ಅವರ ಜಾತಿ ರಾಜಕಾರಣವನ್ನು ವಿರೋಧಿಸಿದ್ದೆ. 2018ರ ಚುನಾವಣೆಯಲ್ಲಿ (Election) ನನ್ನನ್ನು ಸೋಲಿಸಿದ್ದು ಸಿದ್ದರಾಮಯ್ಯನವರೇ. ಸಿದ್ದರಾಮಯ್ಯ ಕಡೆಯವರು ನನ್ನ ವಿರುದ್ಧ ಕೆಲಸ ಮಾಡಿದ್ದರು. ಆಗ ಕ್ಷೇತ್ರದಲ್ಲಿ ಸತ್ಯ ಮಾತಾಡಿದ್ದ ಶಾಹಿದ್‍ನನ್ನು ತೆಗೆದು ಹಾಕಿದರು ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಸೂಚನೆ ನೀಡಿದರೆ ಸಿಬಿಐ ನನ್ನನ್ನು ಬಂಧಿಸಬಹುದು: ಅರವಿಂದ್ ಕೇಜ್ರಿವಾಲ್

    ಕಾಂಗ್ರೆಸ್ ಪಕ್ಷದಲ್ಲಿ 40 ವರ್ಷಗಳಿಂದಲೂ ಇದ್ದೇನೆ. ಸಾಕಷ್ಟು ನೋವಾದಾಗಲೂ ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಬ್ಲಾಕ್ ಮಟ್ಟದಿಂದ ರಾಷ್ಟಮಟ್ಟದವರೆಗೂ ನಾಯಕರು ನನ್ನ ಬೆನ್ನಿಗೆ ನಿಂತಿದ್ದರು. ರಾಷ್ಟ್ರ ಮಟ್ಟದವರೆಗೂ ನನ್ನ ಹೆಸರು ಸೂಚಿಸದ್ದಕ್ಕೆ ಅವರಿಗೆ ಅಬಾರಿಯಾಗಿರುತ್ತೇನೆ ಎಂದಿದ್ದಾರೆ.

    1999 ರಿಂದಲೂ ರಾಜಕಾರಣದಲ್ಲಿ ಇದ್ದೇನೆ. ಮೇಯರ್ ಆಗಿ, ಮುಖ್ಯಮಂತ್ರಿ ಕಾರ್ಯದರ್ಶಿಯಾಗಿ ಹಲವಾರು ಹುದ್ದೆ ನಿಭಾಯಿಸಿದ್ದೇನೆ. 1999 ಹಾಗೂ 2018 ರಲ್ಲಿ ಸೋತು 2013 ರಲ್ಲಿ ಗೆದ್ದಿದ್ದೆ. ಕ್ಷೇತ್ರದಲ್ಲಿ ಮಹಾರಾಜರ ನಂತರ ಅನೇಕ ಅಭಿವೃದ್ಧಿಯನ್ನು ನಾನು ಮಾಡಿದ್ದೇನೆ. ಇಲ್ಲಿಯವರೆಗೂ ಮಂತ್ರಿ ಸ್ಥಾನವನ್ನೂ ಕೇಳಿಲ್ಲ. ಅಲ್ಲದೇ ಒಂದೇ ಒಂದು ವರ್ಗಾವಣೆಯನ್ನೂ ಕೇಳಿಲ್ಲ. ಕೇವಲ ವಿದ್ಯಾರ್ಥಿಗಳಿಗಾಗಿ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಮಾತಾಡಿದ್ದೆ. 2018 ರಲ್ಲಿ ಸೋಲದೇ ಗೆದ್ದಿದ್ದರೆ, ನಿಮಾನ್ಸ್, ಏಮ್ಸ್ ಹಾಗೂ ನೆಫ್ರೋಲಜಿ ಘಟಕ ತರುತ್ತಿದ್ದೆ ಎಂದು ಹೇಳಿದರು.

    ನಾನು ಚುನಾವಣೆಯಲ್ಲಿ ಸೋತಿದ್ದೆ ನಿಜ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿಯೇ ಸೋತಿರಲಿಲ್ಲವೆ? ನನಗೆ ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಆಗುತ್ತಿಲ್ಲ. ಕ್ಷೇತ್ರದ ಅಭಿವೃದ್ಧಿಯ ಗುರಿ ಸಾಧಿಸಲು ಸಾಧ್ಯವಾಗಲಿಲ್ಲ ಎಂಬ ಬೇಸರವಿದೆ. ಬೇರೆ ಪಕ್ಷಗಳು ಆಹ್ವಾನ ನೀಡಿವೆ ಇನ್ನೆರಡು ದಿನದಲ್ಲಿ ಆ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇನೆ. ಪಕ್ಷ ತೊರೆಯುವುದರಿಂದ ನನ್ನ ಬೆಂಬಲಿಗರಿಗೆ ಅನ್ಯಾಯ ಮಾಡಿದಂತೆ ಆಗುತ್ತದೆ. ಇಲ್ಲಿಯವರೆಗೂ ಅವಕಾಶ ನೀಡಿದ ಪಕ್ಷವನ್ನು ನಾನು ದೂರುವುದಿಲ್ಲ. ಟಿಕೆಟ್ ತಪ್ಪಿಸುವುದರಿಂದ ನನ್ನ ಧ್ವನಿ ಹತ್ತಿಕ್ಕಲಾಗುವುದಿಲ್ಲ. ನನ್ನ ಇಲ್ಲಿಯವರೆಗಿನ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿಯನ್ನು ತೋರಿಸಿದರೂ ದಂಡ ಕಟ್ಟಿ ನಿವೃತ್ತಿ ತೆಗೆದುಕೊಳ್ಳಲು ತಯಾರಿದ್ದೇನೆ. ಸಿದ್ದರಾಮಯ್ಯ ಅವರ ಹಗೆತನಕ್ಕೆ ಅನೇಕರು ಬಲಿಯಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಸಿ.ಟಿ.ರವಿ ಆಸ್ಪತ್ರೆಗೆ ದಾಖಲು