Tag: ಚಾಮರಾಜ ನಗರ

  • ಸೋಮಣ್ಣಗೆ ಲೋ ಬಿಪಿ

    ಸೋಮಣ್ಣಗೆ ಲೋ ಬಿಪಿ

    ಚಾಮರಾಜನಗರ: ಎರಡು ಕಡೆಯಲ್ಲೂ ಸತತ ಪ್ರಚಾರ ಮಾಡುತ್ತಿರುವ ಬೆನ್ನಲ್ಲೇ ಸಚಿವ ವಿ. ಸೋಮಣ್ಣಗೆ ಲೋ ಬಿಪಿ ಆಗಿ ತಲೆ ಸುತ್ತು ಬಂದ ಪ್ರಸಂಗ ಇಂದು ನಡೆಯಿತು.

    ರಾಜ್ಯ ವಿಧಾನಸಭಾ ಚುನಾವಣೆಗೆ (Election) ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಸಿಲಿನಲ್ಲೂ ವರುಣಾ (Varuna), ಚಾಮರಾಜನಗರ (Chamarajanagara) ಎರಡು ಕ್ಷೇತ್ರದಲ್ಲೂ ವಿ. ಸೋಮಣ್ಣ (V Somanna) ಅವರು ಬೀರುಸಿನ ನಡೆಸುತ್ತಿದ್ದಾರೆ. ಸತತವಾಗಿ ಪ್ರಚಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸೊಮಣ್ಣಗೆ ಲೋ ಬಿಪಿಯಿಂದಾಗಿ ತಲೆ ಸುತ್ತು ಬಂದಿದೆ. ಕೂಡಲೇ ಅಲ್ಲಿದ್ದ ಕಾರ್ಯಕರ್ತರು ಸೋಮಣ್ಣ ಅವರನ್ನು ಚಾಮರಾಜನಗರ ಕೋಡಿಮೊಳೆ ಗ್ರಾಮದಲ್ಲಿ ಚಿಕಿತ್ಸೆ ನೀಡಿದ್ದಾರೆ. ಚಿಕಿತ್ಸೆ ನಂತರ ಸೋಮಣ್ಣ ಮತ್ತೆ ಪ್ರಚಾರ ಆರಂಭಿಸಿದರು. ಇದನ್ನೂ ಓದಿ: ಮದುವೆ ಮನೆಯಲ್ಲಿ ಸಾವಿನ ಸೂತಕ – ಕುದಿಯುವ ರಸಂ ಪಾತ್ರೆಗೆ ಬಿದ್ದು ಯುವಕ ಸಾವು

    ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಆರಾಮಾಗಿದ್ದೇನೆ, ಸ್ವಲ್ಪ ಲೋ ಬಿಪಿ. ನಂಗೆ ತಲೆ ಸುತ್ತು ಬಂತು. ಹಾಗೇ ಕಾರಿನಲ್ಲಿ ಕುಳಿತೆ. 20 ನಿಮಿಷ ರೆಸ್ಟ್ ಮಾಡಿದೆ. ವೈದ್ಯರು ಬಂದು ಚೆಕ್ ಮಾಡಿದರು. ರಕ್ತದೊತ್ತಡ 70ಕ್ಕೆ ಇಳಿದಿತ್ತು. ನಾನು ಸುಮ್ನೆ ಕುಳಿತುಕೊಳ್ಳುವವನು ಅಲ್ಲ. ಸಭೆ ಮುಗಿಸಿ ಮಲಗಿದಾಗ 4 ಗಂಟೆ ಆಗಿತ್ತು. ದೈಹಿಕವಾಗಿ ಬಳಲಿದ್ದೇನೆ ಅಷ್ಟೇ ಎಂದು ತಿಳಿಸಿದರು. ಇದನ್ನೂ ಓದಿ: ಹ್ಯಾಟ್ರಿಕ್ ಗೆಲುವಿನ ಬಳಿಕ ಮತ್ತೆ ಗೆಲ್ತಾರಾ ಹೆಚ್.ಕೆ ಕುಮಾರಸ್ವಾಮಿ? – ಸಕಲೇಶಪುರ ಮೀಸಲು ಕ್ಷೇತ್ರ ಯಾರಿಗೆ ಒಲಿಯುತ್ತೆ

  • ಒಂದು ಕೊಡ್ರಯ್ಯ ಅಂದ್ರೆ 2 ಕೊಟ್ಟವ್ರೆ; ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣಾ ಹೈವೋಲ್ಟೇಜ್: ಸೋಮಣ್ಣ

    ಒಂದು ಕೊಡ್ರಯ್ಯ ಅಂದ್ರೆ 2 ಕೊಟ್ಟವ್ರೆ; ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣಾ ಹೈವೋಲ್ಟೇಜ್: ಸೋಮಣ್ಣ

    ಚಾಮರಾಜನಗರ: ಒಂದು ಕೊಡ್ರಯ್ಯ ಅಂದ್ರೆ ಎರಡು ಕೊಟ್ಟವ್ರೆ, ಚಾಮರಾಜನಗರ (Chamarajanagar) ವೋಲ್ಟೇಜ್ ಆದ್ರೆ, ವರುಣಾ (Varuna) ಹೈ ವೋಲ್ಟೇಜ್ ಎಂದು ಸಚಿವ ವಿ.ಸೋಮಣ್ಣ (V Somanna) ಎರಡು ಕಡೆ ಸ್ಪರ್ಧಿಸಿರುವ ಬಗ್ಗೆ ಮಾರ್ಮಿಕವಾಗಿ ನುಡಿದರು.

    ಚಾಮರಾಜನಗರ ತಾಲೂಕು ಕೊತ್ತಲವಾಡಿಯಲ್ಲಿ ರೋಡ್ ಶೋ (Road Show) ವೇಳೆ ಮಾತನಾಡಿದ ಅವರು, ಎರಡು ಕಡೆ ಓಡಾಡುವುದು ಸುಲಭದ ಕೆಲಸ ಅಲ್ಲ, ವರುಣಾ ಹೈವೋಲ್ಟೇಜ್ ಅಂತ ಅವ್ರು ಹೇಳ್ತಿದ್ರು, ಆದ್ರೆ ಎಂಟೇ ದಿನಕ್ಕೆ ಹೈಯು ಇಲ್ಲ ಪೈಯು ಇಲ್ಲ ಆಗಿದೆ. ಇನ್ನೊಂದು ಮೂರು, ನಾಲ್ಕು ದಿನ ಹೋದ್ರೆ ಎಲ್ಲಾ ವೋಲ್ಟೇಜ್ ಹೋಗಿ ಅವರು ಏನಾಗುತ್ತಾರೆ ಅಂತ ನೀವೇ ನೋಡಿ ಎಂದು ವ್ಯಂಗ್ಯವಾಡಿದರು.

    ಗೋವಿಂದರಾಜನಗರ ತಬ್ಬಲಿ ಆಗಿದೆ, ನೂರಾರು ಜನ ಕಾರ್ಯಕರ್ತರು ಇಲ್ಲಿ ಬಂದು ಓಡಾಡುತ್ತಿದ್ದಾರೆ. ವರುಣಾದಲ್ಲಿ ಸಾವಿರಾರು ಜನರು ಬಂದು ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಸಿದ್ದರಾಮಯ್ಯ ಅವರು ನಾನು ನಾಮಪತ್ರ ಹಾಕಿದ್ರೆ ಮತ್ತೆ ವೋಟ್ ಹಾಕುವುದಕ್ಕೆ ಮಾತ್ರ ಬರುತ್ತೇನೆ ಎಂದು ಹೇಳಿದ್ದರು. ಆದರೆ ಅವರು ಸೋಮವಾರದಿಂದ ವರುಣಾದಲ್ಲೇ ಇರುತ್ತಾರಂತೆ. ಮುಂದಿನ ಸೋಮವಾರದಿಂದ ವರುಣಾದಲ್ಲೇರುತ್ತೇನೆ, ನನ್ನ ಕೈಲಿ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

    ಸಿದ್ದರಾಮಯ್ಯ (Siddaramaiah) ಅವರ ಕುಟುಂಬ ಯಾವತ್ತೂ ರೋಡ್‌ಗೆ ಹೋಗಿ ಒಂದು ವೋಟ್ ಕೇಳಿರಲಿಲ್ಲ. ಈಗ ಎಲ್ಲಾ ಕಡೆ ಕೇಳ್ತಿದ್ದಾರೆ. ಎಲ್ಲಾ ಹೈ ವೋಲ್ಟೇಜ್ ಪ್ರಭಾವ ಎಂದ ಅವರು, ವರುಣಾದಲ್ಲಿ ಒಂದು ದಿನ ಅಲ್ಲ, ದಿನವೂ ನಮ್ಮ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಸಿಎಂಗೆ ಮುಜುಗರವಾಗಬಾರದೆಂದು ಸಹಿಸಿಕೊಂಡಿದ್ದೇನೆ. ಅರ್ಥ ಮಾಡಿಕೊಂಡಿಲ್ಲ ಅಂದ್ರೆ ಹೇಗೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹೂವಿನಲ್ಲಿ ಕಲ್ಲು ಬಂದಿಲ್ಲ, ಯಾರೋ ದುಷ್ಕರ್ಮಿಗಳು ಎಸೆದಿದ್ದಾರೆ : ಪರಮೇಶ್ವರ್

    ಪ್ರತಾಪ್ ಸಿಂಹರಿಂದಲೇ ಗಲಾಟೆಯಾಗ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿದ ಅವರು, ಪ್ರತಾಪ್ ಸಿಂಹ ಜವಾಬ್ದಾರಿಯುತ ಲೋಕಸಭಾ ಸದಸ್ಯ. ಆತ ನನಗೆ ಸಹೋದರ ಸಮಾನ, ಪಕ್ಷದ ಭವಿಷ್ಯದ ನಾಯಕ, ವಾಸ್ತವಾಂಶ ಇರೋದನ್ನು ಮಾತಾಡ್ತಾರೆ ಎಂದರು. ಇದನ್ನೂ ಓದಿ: ಮೋದಿ ರೋಡ್ ಶೋ- ಮದುಮಗ ಆಯ್ತು, ಈಗ ಮದುವೆಗೆ ಹೋಗಲು ಕಷ್ಟಪಟ್ಟ ವಧು

  • ಬೀದರ್‌ನಿಂದ ಚಾಮರಾಜನಗರದವರೆಗೆ ಅವಳಿ ಸಹೋದರರ ಸೈಕಲ್ ಸವಾರಿ

    ಬೀದರ್‌ನಿಂದ ಚಾಮರಾಜನಗರದವರೆಗೆ ಅವಳಿ ಸಹೋದರರ ಸೈಕಲ್ ಸವಾರಿ

    ಬೀದರ್: 75 ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಬೀದರ್‌ನಿಂದ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದವರೆಗೆ ಅವಳಿ ಸಹೋದರರು ಸೈಕಲ್ ಸವಾರಿ ಮಾಡಲಿದ್ದಾರೆ.

    ಬೀದರ್‌ನ 16 ವರ್ಷದ ಅವಳಿ ಸಹೋದರರು ಔರಾದ್‍ನಿಂದ ಚಾಮರಾಜನಗರದವರೆಗೆ ಸೈಕಲ್ ಯಾತ್ರೆ ಪ್ರಾರಂಭ ಮಾಡಿದ್ದು, 25 ದಿನಗಳ ಕಾಲ 1,250 ಕಿಮೀವರೆಗೆ ಪುಟಾಣಿಗಳು ಸೈಕಲ್ ತುಳಿಯಲಿದ್ದಾರೆ.

    ಔರಾದ್ ತಾಲೂಕಿನ ಕೊಳ್ಳೂರು ಗ್ರಾಮದ ಅರುಣ್ ಹಾಗೂ ಕರಣ್ ರ್ಯಾಕಲೆ ಎಂಬ ಅವಳಿ ಸಹೋದರರಿಂದ ಸೈಕಲ್ ಯಾತ್ರೆ ಪ್ರಾರಂಭವಾಗಿದೆ. 75 ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಸ್ವಾತಂತ್ರ್ಯ ಹೋರಾಟಗಾರರನ್ನು ಗುರುತಿಸಿ ಅವರಿಗೆ ಸನ್ಮಾನ ಮಾಡಿ ನಮನ ಸಲ್ಲಿಸುವ ಸದುದ್ದೇಶದಿಂದ ಈ ಸೈಕಲ್ ಯಾತ್ರೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಹೀಗೆ ಮಾತನಾಡಿದ್ರೆ ಹಿಟ್ ವಿಕೆಟ್ ಆಗ್ತೀರಾ: ಆರ್.ಅಶೋಕ್ ತಿರುಗೇಟು

    ಬೀದರ್‌ನಿಂದ ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ತುಮಕೂರು, ಬೆಂಗಳೂರು, ಮಂಡ್ಯ ಮೂಲಕ ಚಾಮರಾಜನಗರ ಮಲೆ ಮಹದೇಶ್ವರನ ಬೆಟ್ಟ ತಲುಪಲಿದ್ದು, ಬಳಿಕ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಈ ಪುಟಾಣಿಗಳು ತಮ್ಮ ಸೈಕಲ್ ಯಾತ್ರೆಯನ್ನು ಮುಕ್ತಾಯಗೊಳಿಸಲಿದ್ದಾರೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಬನವಾಸಿ ಮಧುಕೇಶ್ವರ ರಥೋತ್ಸವಕ್ಕೆ ಹಿಂದೂಯೇತರ ವ್ಯಾಪಾರಿಗಳಿಗೆ ನಿರ್ಬಂಧ

  • ಈಶ್ವರಪ್ಪ, ಮುತಾಲಿಕ್ ದೇಶದ ತಾಲಿಬಾನಿಗಳು: ಧ್ರುವನಾರಾಯಣ್

    ಈಶ್ವರಪ್ಪ, ಮುತಾಲಿಕ್ ದೇಶದ ತಾಲಿಬಾನಿಗಳು: ಧ್ರುವನಾರಾಯಣ್

    ಚಾಮರಾಜನಗರ: ಸಚಿವ ಈಶ್ವರಪ್ಪ, ಪ್ರಮೋದ್ ಮುತಾಲಿಕ್ ಇವರೆಲ್ಲರೂ ದೇಶದ ತಾಲಿಬಾನಿಗಳು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ವಾಗ್ದಾಳಿ ನಡೆಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು. ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದರು.

    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 326 ದೇಶದ್ರೋಹ ಪ್ರಕರಣ ದಾಖಲಾಗಿದೆ. ಸರ್ಕಾರದ ವಿರುದ್ಧ ಮಾತಾಡಿದರೆ ದೇಶದ್ರೋಹ ಪ್ರಕರಣ ದಾಖಲಿಸುತ್ತಾರೆ. ಬಿಜೆಪಿಯವರು ಸ್ವಯಂ ಘೋಷಿತ ಹುಸಿ ದೇಶ ಭಕ್ತರು ಎಂದು ಟೀಕಿಸಿದರು. ಇದನ್ನೂ ಓದಿ: ಕಲಾಪ ಹಾಳು ಮಾಡುತ್ತಿರುವವರನ್ನು ಸದನದಿಂದ ಹೊರಹಾಕಿ: ಹೆಚ್‍ಡಿಕೆ

    ಬಿಜೆಪಿ ಅವರು ವಿಧಾನಸಭೆಯಲ್ಲಿ ನಿಮ್ಮಪ್ಪ ಎನ್ನುವ ಪದ ಉಪಯೋಗಿಸಿದ್ದಾರೆ. ಜೈಲಿಗೆ ಹೋಗಿದಿರಿ ಅಂತಿರಿ. ನಿಮ್ಮ ಪಕ್ಷದವರು ಜೈಲಿಗೆ ಹೋಗಿಲ್ವಾ? ಅಮಿತ್ ಶಾ ಎರಡು ವರ್ಷ ಜೈಲಿನಲ್ಲಿ ಇರಲಿಲ್ವಾ. ಡಿಕೆಶಿ ಒಬ್ರೇನೆ ಜೈಲಿನಲ್ಲಿದ್ರಾ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೂಡಿಕೆ ಮಾಡಲು ತೈವಾನ್ ಕಂಪನಿಗಳಿಗೆ ನಿರಾಣಿ ಆಹ್ವಾನ

    ಕೊಳಚೆ ಬಾಯಲ್ಲಿ ಸುಗಂಧ ಬರಲ್ಲ ದುರ್ವಾಸನೆಯೇ ಯಾವಾಗಲೂ ಬರೋದು ಎಂದು ಬಿಜೆಪಿಯನ್ನು ಕುಟುಕಿದ ಅವರು, ಈಶ್ವರಪ್ಪ ರಾಜೀನಾಮೆ ಕೊಡೋವರೆಗು ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

  • ಪ್ರೀತ್ಸೆ ಎಂದು ಲೈಂಗಿಕ ದೌರ್ಜನ್ಯ- ಕಾಮುಕ ಪ್ರೇಮಿಗೆ ಒಂದು ವರ್ಷ ಜೈಲು

    ಪ್ರೀತ್ಸೆ ಎಂದು ಲೈಂಗಿಕ ದೌರ್ಜನ್ಯ- ಕಾಮುಕ ಪ್ರೇಮಿಗೆ ಒಂದು ವರ್ಷ ಜೈಲು

    ಚಾಮರಾಜನಗರ: ಪ್ರೀತ್ಸೆ ಎಂದು ಅಪ್ರಾಪ್ರ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕ ಪ್ರೇಮಿಗೆ ಚಾಮರಾಜನಗರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸದಾಶಿವ ಎಸ್. ಸುಲ್ತಾನ್ ಪುರಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

    ಪ್ರಸಾದ್ ಕುಮಾರ್(20) ಶಿಕ್ಷೆಗೊಳಗಾದ ಆರೋಪಿಯಾಗಿದ್ದಾನೆ. ಈತ ಚಾಮರಾಜನಗರ ತಾಲೂಕಿನ ಲಿಂಗರಾಜಪುರ ಗ್ರಾಮದವನಾಗಿದ್ದಾನೆ. 2019ರ ಮೇ 27 ರಂದು ಅದೇ ಗ್ರಾಮದ 16 ವರ್ಷದ ಬಾಲಕಿಯೊಬ್ಬಳು ಮನೆ ಮುಂದೆ ನಿಂತಿದ್ದ ವೇಳೆ ಬಲವಂತದಿಂದ ಆಕೆಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ತಾನು ಪ್ರೀತಿಸುತ್ತಿದ್ದು, ನೀನು ಪ್ರೀತಿಸಬೇಕೆಂದು ಒತ್ತಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದನ್ನೂ ಓದಿ: ಕೊಚ್ಚೆ ನೀರೇ ಕುಡಿದಿದ್ದೇನೆ – ಹೆಚ್‍ಡಿಕೆಗೆ ಜೆಡಿಎಸ್ ಶಾಸಕ ಟಾಂಗ್

     

    ಈ ಸಂಬಂಧ ಬಾಲಕಿ ತಂದೆ ಚಾಮರಾಜನಗರ ಪೂರ್ವ ಠಾಣೆಗೆ ದೂರು ನೀಡಿದ್ದರು. ವಿಚಾರಣೆ ನಡೆದು ಪ್ರಸಾದ್ ಕುಮಾರ್ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಒಂದು ವರ್ಷ ಜೈಲು, 20 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದ್ದಲ್ಲಿ ಎರಡು ತಿಂಗಳು ಸೆರೆವಾಸದ ಶಿಕ್ಷೆ ನೀಡಿದ್ದಾರೆ. ಸರ್ಕಾರದ ಪರವಾಗಿ ಕೆ.ಯೋಗೇಶ್ ವಾದ ಮಂಡಿಸಿದ್ದಾರೆ. ಇದನ್ನೂ ಓದಿ: ರಜೆ ಮಂಜೂರಿಗೆ ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದ ಸಾರಿಗೆ ಅಧಿಕಾರಿ

  • ಸಾರ್ವಕಾಲಿಕ ದಾಖಲೆ – ಮಾದಪ್ಪನ ಹುಂಡಿಗೆ ಹರಿದು ಬಂತು ಎರಡೂವರೆ ಕೋಟಿ ರೂ. ಕಾಣಿಕೆ

    ಸಾರ್ವಕಾಲಿಕ ದಾಖಲೆ – ಮಾದಪ್ಪನ ಹುಂಡಿಗೆ ಹರಿದು ಬಂತು ಎರಡೂವರೆ ಕೋಟಿ ರೂ. ಕಾಣಿಕೆ

    ಚಾಮರಾಜನಗರ: ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಮಾದಪ್ಪನ ಆದಾಯವು ಅದೇ ರೀತಿ ಏರಿಕೆಯಾಗತೊಡಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮಹದೇಶ್ವರ ದೇವಸ್ಥಾನದ ಹುಂಡಿಯಲ್ಲಿ ಎರಡೂವರೆ ಕೋಟಿ ರೂ.ಗೂ ಹೆಚ್ಚು ಹಣ ಸಂಗ್ರಹವಾಗಿದ್ದು, ಇದೊಂದು ಸಾರ್ವಕಾಲಿಕ ದಾಖಲೆಯಾಗಿದೆ.

    ನಾಡಿನ ಪ್ರಸಿದ್ಧ ದೇವಾಯಗಳ ಪೈಕಿ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟವೂ ಒಂದು. ರಾಜ್ಯದಲ್ಲೇ ಅತಿಹೆಚ್ಚು ಆದಾಯ ಇರುವ ಎರಡನೇ ದೇವಸ್ಥಾನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಲೆಮಹದೇಶ್ವರ ಬೆಟ್ಟಕ್ಕೆ ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚುತ್ತಿದೆ. ಹಬ್ಬ ಹರಿದಿನ ಹಾಗೂ ಜಾತ್ರಾ ಮಹೋತ್ಸವದ ಸಂದರ್ಭಗಳಲ್ಲಿ ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡುತ್ತಾರೆ.

    ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಹೊರುವುದು ಸಾಮಾನ್ಯ. ಬೇಡಿದ ವರವ ಕೊಡುವ ಮಾದಪ್ಪನಿಗೆ ಭಕ್ತರು ಹಣ ಹಾಗೂ ಆಭರಣಗಳ ರೂಪದಲ್ಲಿ ಹರಕೆ ಸಲ್ಲಿಸುವುದು ವಾಡಿಕೆ. ಹೀಗೆ ಭಕ್ತರು ಮಾದಪ್ಪನ ಹುಂಡಿಗೆ ಹಾಕುವ ಹಣ ಪ್ರತಿ ತಿಂಗಳು ಕೋಟಿ ರೂಪಾಯಿ ದಾಟುತ್ತಿದೆ. ಇದೇ ರೀತಿ ಮಲೆಮಹದೇಶ್ವರನ ಹುಂಡಿಯಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ ಬರೋಬ್ಬರಿ 2.52 ಕೋಟಿ ರೂ ಸಂಗ್ರಹವಾಗಿದೆ. ಅಲ್ಲದೆ 50 ಗ್ರಾಂ. ಚಿನ್ನ ಮತ್ತು 2.44 ಕೆ.ಜಿ. ಬೆಳ್ಳಿಯನ್ನು ಭಕ್ತರು ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದರಲ್ಲಿ 15.21 ಲಕ್ಷ ರೂ.ಗಳಷ್ಟು ನಾಣ್ಯಗಳೇ ಸಂಗ್ರಹವಾಗಿವೆ. ಈ ಮೂಲಕ ಹಣ ಸಂಗ್ರಹಣೆಯಲ್ಲಿ ದಾಖಲೆ ನಿರ್ಮಾಣವಾಗಿದೆ. ಕೇವಲ ಒಂದು ತಿಂಗಳ ಅವಧಿಯಲ್ಲಿ ಹಿಂದೆಂದೂ ಇಷ್ಟೊಂದು ಹಣ ಹುಂಡಿಯಲ್ಲಿ ಸಂಗ್ರಹವಾಗಿರಲಿಲ್ಲ. ಇದೊಂದು ಸಾರ್ವಕಾಲಿಕ ದಾಖಲೆ ಎಂದು ಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಮಾಹಿತಿ ನೀಡಿದ್ದಾರೆ.

    ಕೇವಲ ಹುಂಡಿ ಅಷ್ಟೇ ಅಲ್ಲದೆ ಶಿವರಾತ್ರಿ ಜಾತ್ರಾ ಸಂದರ್ಭದಲ್ಲಿ ಲಾಡು ಮಾರಾಟದಿಂದ 1 ಕೋಟಿ 50 ಸಾವಿರ ರೂ., ಉತ್ಸವಗಳಿಂದ 99.50 ಲಕ್ಷ ರೂ., ವಸತಿ ಗೃಹಗಳ ಬಾಡಿಗೆ 86.57 ಲಕ್ಷ ರೂ., ವಿಶೇಷ ಪ್ರವೇಶ ಶುಲ್ಕ 98 ಲಕ್ಷ ರೂ., ವಿವಿಧ ಸೇವೆಗಳಿಂದ 8.39 ಲಕ್ಷ ರೂ. ಸೇರಿದಂತೆ ವಿವಿಧ ಮೂಲಗಳಿಂದ 3.54 ಕೋಟಿ ರೂ.ಗೂ ಹೆಚ್ಚು ಆದಾಯ ಮಾದಪ್ಪನ ಸನ್ನಿಧಿಗೆ ಹರಿದುಬಂದಿದೆ. ಅಲ್ಲದೆ ಶಿವರಾತ್ರಿ ಜಾತ್ರಾ ಸಂದರ್ಭ ಆರು ದಿನಗಳಲ್ಲಿ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧೆಡೆಯಿಂದ 10 ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ದು, ಇದೂ ಸಹ ದಾಖಲೆ ಆಗಿದೆ.

  • ನಗರಸಭೆಗೂ ತಟ್ಟಿದ ಗ್ರಹಣದ ಎಫೆಕ್ಟ್: ಕೆಲಸಕ್ಕೆ ಸಿಬ್ಬಂದಿ ರಜೆ

    ನಗರಸಭೆಗೂ ತಟ್ಟಿದ ಗ್ರಹಣದ ಎಫೆಕ್ಟ್: ಕೆಲಸಕ್ಕೆ ಸಿಬ್ಬಂದಿ ರಜೆ

    ಚಾಮರಾಜನಗರ: ಕಂಕಣ ಸೂರ್ಯ ಗ್ರಹಣದ ಎಫೆಕ್ಟ್ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆಗೂ ತಟ್ಟಿದ್ದು, ನಗರಸಭೆಯ ಬಹುತೇಕ ಸದಸ್ಯರು ಹಾಗೂ ಸಿಬ್ಬಂದಿ ಕೆಲಸಕ್ಕೆ ರಜೆ ಹಾಕಿದ್ದಾರೆ.

    ನಗರಸಭೆ ಕಛೇರಿಯ ಸಿಬ್ಬಂದಿ ಕುರ್ಚಿಗಳು ಖಾಲಿಯಾಗಿತ್ತು. ಬಹುತೇಕ ಸಿಬ್ಬಂದಿ ರಜೆ ಹಾಕಿದ್ದು, ನಗರಸಭೆಗೆ ಕೆಲಸದ ನಿಮಿತ್ತ ಬಂದ ಸಾರ್ವಜನಿಕರಿಗೆ ಸೇವೆ ಸಿಗದೆ ಪರದಾಡಿದ್ದಾರೆ. ಗ್ರಹಣಕ್ಕೆ ಹೆದರಿ ಅಧಿಕಾರಿಗಳು ಕೆಲಸಕ್ಕೆ ಬಾರದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂದ ದಾರಿಗೆ ಸುಂಕವಿಲ್ಲವೆಂಬಂತೆ ವಾಪಸ್ ತೆರಳಿದ್ದಾರೆ.

    ಸರ್ಕಾರಿ ನೌಕರರು ಕೂಡ ಮೌಢ್ಯತೆಗೆ ಹೆದರಿ ಕಚೇರಿಗೆ ರಜೆ ಹಾಕಿರುವುದು ಎಷ್ಟು ಸರಿ? ನಮ್ಮ ಕೆಲಸ ಯಾವುದೂ ಆಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

  • ಸುಳ್ವಾಡಿ ವಿಷ ಪ್ರಸಾದ ಸೇವಿಸಿ ಮೃತಪಟ್ಟವರಿಗೆ ಗಿಡ ನೆಟ್ಟು ಶ್ರದ್ಧಾಂಜಲಿ

    ಸುಳ್ವಾಡಿ ವಿಷ ಪ್ರಸಾದ ಸೇವಿಸಿ ಮೃತಪಟ್ಟವರಿಗೆ ಗಿಡ ನೆಟ್ಟು ಶ್ರದ್ಧಾಂಜಲಿ

    ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ಸೇವಿಸಿ ಮೃತಪಟ್ಟವರಿಗೆ ಗಿಡ ನೆಡುವ ಮೂಲಕ ವಿಶೇಷವಾಗಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

    ಜಿಲ್ಲೆಯ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದ ಕಿಚ್ ಗುತ್ ಮಾರಮ್ಮನ ದೇವಾಲಯದ ಪ್ರಸಾದ ಸೇವಿಸಿ ಸಾವನ್ನಪ್ಪಿದವರಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಪಕ್ಕದಲ್ಲಿ ಅರಳಿ ಹಾಗೂ ಬೇವಿನ ಗಿಡ ನೆಟ್ಟು ವಿಷ ದುರಂತದಲ್ಲಿ ಮಡಿದವರಿಗಾಗಿ ಹಾಲು ತುಪ್ಪ ಎರೆದು ಮೃತರ ಆತ್ಮಕ್ಕೆ ಶಾಂತಿ ಕೋರಲಾಯಿತು.

    ಡಿಸೆಂಬರ್ 14, 2018 ರಲ್ಲಿ ಸುಳ್ವಾಡಿ ಮಾರಮ್ಮನ ವಿಷ ದುರಂತದಲ್ಲಿ 17 ಜನ ವಿಷ ಪ್ರಾಶನ ಮಾಡಿ ಸಾವನ್ನಪ್ಪಿದ್ದರು. 120 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದರು. ಸಾವನ್ನಪ್ಪಿದ ಎಲ್ಲರಿಗೂ ಮೃತರ ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

  • ಮೃತಪಟ್ಟಿರುವ ತನ್ನ ಕಂದಮ್ಮನಿಗಾಗಿ ತಾಯಿ ಆನೆಯ ಹುಡುಕಾಟ-ಬಂಡೀಪುರದಲ್ಲೊಂದು ಮನಕಲಕುವ ಘಟನೆ

    ಮೃತಪಟ್ಟಿರುವ ತನ್ನ ಕಂದಮ್ಮನಿಗಾಗಿ ತಾಯಿ ಆನೆಯ ಹುಡುಕಾಟ-ಬಂಡೀಪುರದಲ್ಲೊಂದು ಮನಕಲಕುವ ಘಟನೆ

    ಚಾಮರಾಜನಗರ: ತನ್ನ ಮರಿ ಮೃತಪಟ್ಟಿರುವ ವಿಚಾರವೇ ತಿಳಿಯದ ಆನೆಯೊಂದು ತನ್ನ ಕಂದಮ್ಮನಿಗಾಗಿ ಹುಡುಕಾಟ ನಡೆಸುತ್ತಿರುವ ದೃಶ್ಯ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ಪ್ರದೇಶದ ಓಂಕಾರ ವಲಯದ ಕಾಡಂಚಿನ ಕುರುಬರಹುಂಡಿಯಲ್ಲಿ ಕಂಡು ಬಂದಿದೆ.

    ಜನವರಿ 1 ರಂದು ಭಾನುವಾರ ರಾತ್ರಿ 3 ಆನೆಗಳು ಗ್ರಾಮಕ್ಕೆ ಬಂದಿದ್ದು, ಗ್ರಾಮಸ್ಥರು ಆನೆಗಳನ್ನು ಓಡಿಸಿದ್ದರು. ಈ ವೇಳೆ ಮರಿಯಾನೆ ಅಲ್ಲೇ ಉಳಿದುಕೊಂಡಿತ್ತು. ಒಂದು ತಿಂಗಳ ಆನೆ ಮರಿಯನ್ನು ತಾಯಿ ಆನೆ ಬಿಟ್ಟು ಹೋಗಿತ್ತು. ಮರಿಯಾನೆ ನಿತ್ರಾಣ ಸ್ಥಿತಿಯಲ್ಲಿತ್ತು. ಅದನ್ನು ಕಂಡ ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ನಿತ್ರಾಣ ಸ್ಥಿತಿಯಲ್ಲಿದ್ದ ಆನೆ ಮರಿಯನ್ನು ಗ್ರಾಮಸ್ಥರ ಸಹಾಯದಿಂದ ರಕ್ಷಿಸಿದ್ದರು. ಇದನ್ನು ಓದಿ: ತಾಯಿ ಕಳೆದುಕೊಂಡು ಅರಣ್ಯಾಧಿಕಾರಿಗಳ ರಕ್ಷಣೆಯಲ್ಲಿದ್ದ 1 ತಿಂಗ್ಳ ಮರಿ ಆನೆ ಸಾವು!

    ಆನೆ ಮರಿಯನ್ನು ತಾಯಿಯ ಜೊತೆ ಸೇರಿಸಲು ಅರಣ್ಯ ಇಲಾಖೆಯ ಸಿಬ್ಬಂದಿ ಪ್ರಯತ್ನಿಸಿದ್ದು, ತಾಯಿ ಆನೆ ತನ್ನ ಮರಿಯನ್ನು ಹುಡುಕಿಕೊಂಡು ಬರುತ್ತದೆಂಬ ಭರವಸೆಯಿಂದ ಸದ್ಯ ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಬಳಿಯೇ ಆನೆಯನ್ನ ಇರಿಸಿಕೊಂಡಿದ್ದರು. ಆದ್ರೆ ಅವರ ಶ್ರಮ ವ್ಯರ್ಥವಾಗಿದೆ. ತನ್ನ ತಾಯಿ ಮುಖ ನೋಡದೇ ಒಂದು ರಾತ್ರಿ ಕಳೆದ ಮರಿಯಾನೆ ಜನವರಿ 3 ಮಂಗಳವಾರ ಮಧ್ಯಾಹ್ನ ತೀವ್ರ ಜ್ವರದಿಂದ ಮೃತಪಟ್ಟಿತ್ತು.

    ತನ್ನ ಮರಿಯನ್ನು ಕಳೆದುಕೊಂಡಿರುವ ತಾಯಿಯಾನೆ ಇದೀಗ ಕಂಗಾಲಾಗಿದ್ದು, ತನ್ನ ಮರಿಗಾಗಿ ಪ್ರತಿ ನಿತ್ಯವೂ ಕಾಡಿನಿಂದ ಈ ಗ್ರಾಮಕ್ಕೆ ಬರುತ್ತಿದೆ. ತನ್ನ ಮರಿ ಸಾವನ್ನಪ್ಪಿರುವ ವಿಚಾರ ತಿಳಿಯದ ತಾಯಿ ಆನೆ ತನ್ನ ಕಂದನಿಗಾಗಿ ಹಂಬಲಿಸುತ್ತಿದೆ. ಗ್ರಾಮಕ್ಕೆ ಪ್ರತಿ ನಿತ್ಯ ಈ ಆನೆ ಬರುತ್ತಿರುವುದರಿಂದ ಗ್ರಾಮಸ್ಥರು ಗಾಬರಿಗೊಂಡು ಆನೆಯನ್ನು ಕಾಡಿಗೆ ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇದನ್ನು ಓದಿ: ತಾಯಿ ಆನೆ ಜೊತೆ ಮರಿಯನ್ನ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ

  • ಕುಡಿಯೋಕೆ ನೀರಿಲ್ಲದೆ ಸಾವನ್ನಪ್ಪುತ್ತಿವೆ ಪ್ರಾಣಿಗಳು: ಇಲ್ಲಿದೆ ಕರ್ನಾಟಕದ ಬರದ ಚಿತ್ರಣ

    ಕುಡಿಯೋಕೆ ನೀರಿಲ್ಲದೆ ಸಾವನ್ನಪ್ಪುತ್ತಿವೆ ಪ್ರಾಣಿಗಳು: ಇಲ್ಲಿದೆ ಕರ್ನಾಟಕದ ಬರದ ಚಿತ್ರಣ

    ಅರುಣ್ ಸಿ  ಬಡಿಗೇರ್
    ಬೆಂಗಳೂರು: ಸಾಯುವ ಸ್ಥಿತಿಯಲ್ಲಿ ಬಾಯ್ತೆರೆದು ನಿಂತಿದ್ದಾಳೆ ಧರಿತ್ರಿ. ಹನಿ ನೀರಿಗಾಗಿ ಪರದಾಡುತ್ತಿದ್ದಾರೆ ಭೂ ತಾಯಿ ಮಕ್ಕಳು. ಇನ್ನೊಂದು ತಿಂಗಳು ಕಳೆದರೆ ಬಿಸಿಲಿನ ಬೇಗುದಿಗೆ ಸುಟ್ಟು ಕರಕಲಾಗಲಿವೆ ದೇಹಗಳು. ಒಣಗಿ ಹೋಗಲಿವೆ ಮರಗಿಡಗಳು. ಅನಾಥ ಶವವಾಗಿ ಬೀಳಲಿವೆ ಪ್ರಾಣಿ ಪಕ್ಷಿಗಳು. ಬತ್ತಿ ಹೋಗಿವೆ ಕೆರೆ ಕಟ್ಟೆಗಳು. ಬರಿದಾಗಿದೆ ನದಿಗಳ ಒಡಲು. ಇಂಗಿ ಹೋಗಿದೆ ಭೂ ಜಲದಗಣ್ಣು. ಕಣ್ಣೀರಿಡಲು ಬತ್ತಿ ಹೋಗಿದೆ ದೇಹದ ನೀರು. ಇದೆಲ್ಲವು ರಾಜ್ಯದ ಭೀಕರ ಬರಗಾಲದ ರೌದ್ರ ಚಿತ್ರಣ. ಬರ ಹೇಗಿದೆ ಎನ್ನುವುದನ್ನು ತಿಳಿಯಲು ರಾಜ್ಯದಲ್ಲಿ 2500 ಕಿಮೀ ಸಂಚರಿಸಿ ಪಬ್ಲಿಕ್ ಟಿವಿಯ ತಂಡ ಪ್ರತ್ಯಕ್ಷ ವರದಿ ಮಾಡಿದೆ. ಈ ಸಂದರ್ಭದಲ್ಲಿ ನಮ್ಮ ತಂಡಕ್ಕೆ ಕಂಡಿರೋ ಬರಗಾಲದ ಸ್ಥಿತಿಯನ್ನ ನಿಮ್ಮ ಮುಂದೆ ಇಡುವ ಪ್ರಯತ್ನವಿದು.

    ನೀರಿನ ವಿಷ್ಯದಲ್ಲಿ ಬೆಂಗಳೂರಿಗರು ಪುಣ್ಯವಂತರು. 4-5 ಕಿಮೀ ಬಿಂದಿಗೆ ಹಿಡಿದುಕೊಂಡು ನೀರು ಹೊತ್ತು ತರೋ ಪರಿಸ್ಥಿತಿ ಇಲ್ಲಿಲ್ಲ. ಶಾಲೆಬಿಟ್ಟು ನೀರು ತರಬೇಕಾದ ಅನಿವಾರ್ಯತೆ ಇಲ್ಲಿಲ್ಲ. ನೀರು ತರದೆ ಇದ್ದರೆ ಅಪ್ಪ ಅಮ್ಮನ ಕಡೆ ಹೊಡಿಸಿಕೊಳ್ಳುವಷ್ಟು ಹೀನಾಯ ಸ್ಥಿತಿ ಇಲ್ಲಿನ ಮಕ್ಕಳಿಗೆ ಬಂದಿಲ್ಲ. ಕೆಲಸ ಬಿಟ್ಟು ನೀರಿಗಾಗಿ ಬೋರ್‍ವೆಲ್ ಮುಂದೆ ಸರತಿ ಸಾಲಿನಲ್ಲಿ ನಿಲ್ಲೋ ಸ್ಥಿತಿ ಇಲ್ಲಿಲ್ಲ. ನಿದ್ದೆಗೆಟ್ಟು ಕರೆಂಟ್‍ಗಾಗಿ ಕಾದು ರಾತ್ರಿಯೆಲ್ಲ ನೀರಿಗಾಗಿ ಅಲೆದಾಡೋ ಪ್ರಸಂಗ ಬಂದಿಲ್ಲ. ಕುಡಿಯೋ ನೀರಿಗಾಗಿ ಒಂದು ಕಡೆ, ಬಳಸೋ ನೀರಿಗಾಗಿ ಇನ್ನೊಂದು ಕಡೆ ಹೋಗಿ ಬಿಂದಿಗೆ ತುಂಬಿಕೊಂಡು ಬರೋ ದುರ್ದೈವ ಇಲ್ಲಿಲ್ಲ. ನೀರಿಲ್ಲದ ಊರು ಅಂತ ಹೆಣ್ಣು ಕೊಡದೇ ಇರುವಷ್ಟು ಬರಗೆಟ್ಟು ಹೋಗಿಲ್ಲ ಈ ಬೆಂಗಳೂರು. ಬತ್ತಿಹೋದ ನದಿಯಲ್ಲಿ 5 ಅಡಿ ಗುಂಡಿ ತೋಡಿ ಬಂದ ನೀರನ್ನ ಗಂಟೆ ಗಟ್ಟಲೆ ಕುಳಿತು ಒಂದು ಬಿಂದಿಗೆ ತುಂಬಿಸಿಕೊಂಡು 4 ಕಿಮೀ ನಡೆದುಕೊಂಡು ಹೋಗುವ ಹೀನಾಯ ಸ್ಥಿತಿ ಬೆಂಗಳೂರಿನಲ್ಲಿ ಕಾಣಿಸುತ್ತಿಲ್ಲ. ಎಲ್ಲೋ ಹರಿಯೋ ನದಿಯಿಂದ ನೀರನ್ನ ಪಡೆದು ದಾಹ ತೀರಿಸಿಕೊಳ್ಳೋ ಬೆಂಗಳೂರಿನವರಷ್ಟು ಪುಣ್ಯವಂತರು ಹಳ್ಳಿಯ ಜನರಲ್ಲ.

    ಜಲಾಶಯಗಳಲ್ಲಿ ವಾಸನೆ ಬರುತ್ತಿದೆ ನೀರು
    ಕೆಆರ್‍ಎಸ್, ಹಾರಂಗಿ, ಹೇಮಾವತಿ, ಕಬಿನಿ ಜಲಾಶಯ ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರು ಕಪ್ಪಾಗುತ್ತಿದೆ. ಜಲಾಶಯಗಳು ಬರಿದಾಗುವ ಸ್ಥಿತಿ ಬಂದೊದಗಿದೆ. ಜಲಾಶಯದ ಹಿನ್ನಿರಿನ ಹತ್ತಿರ ಹೋಗ್ತಿದ್ದಂತೆ ಮೀನು ಸತ್ತಾಗ ಬರೋ ವಾಸಯಂತೆ ನೀರು ವಾಸನೆ ಬರುತ್ತಿದೆ. ಈ ನೀರನ್ನ ಶುದ್ಧಿಕರಿಸಿ ಬೇಸಿಗೆಯಲ್ಲಿ ಕುಡಿಯೋಕೆ ನೀರು ಸರಬರಾಜು ಮಾಡಲಾಗುತ್ತೆ. ಇನ್ನು ಈ ಜಲಾಶಯದ ನೀರು ನಾಲೆಗಳ ಮೂಲಕ ಮಂಡ್ಯ ಜಿಲ್ಲೆಗೆ ತಲುಪಬೇಕು. ಆದ್ರೆ ನಾಲೆಯಲ್ಲಿ ನೀರನ್ನ ಬಿಡಲಾಗುತ್ತಿಲ್ಲ. ಹಾಗಾಗಿ ನಾಲೆಯನ್ನ ನಂಬಿರೋ ಮಂಡ್ಯ ಜನಕ್ಕೆ ಎಪ್ರಿಲ್ ನಂತರ ಹಾಹಾಕಾರ ಉಂಟಾಗೋದ್ರಲ್ಲಿ ಯಾವುದೇ ಡೌಟೇ ಇಲ್ಲ.

    ನಾಗರಹೊಳೆ ಹಾಗೂ ಬಂಡಿಪುರ ಕಾಡು ಪ್ರಾಣಿಗಳು ನಂಬಿರೋ ಕಬಿನಿ ಜಲಾಶಯದ ನೀರು ಬರಿದಾಗುತ್ತಾ ಸಾಗಿದೆ. ಎಪ್ರಿಲ್ ಹಾಗೂ ಮೇ ತಿಂಗಳಲ್ಲಿ ಈ ಕಾಡು ಪ್ರಾಣಿಗಳ ಸ್ಥಿತಿ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇನ್ನೊಂದು ದುರ್ದೈವ ಅಂದ್ರೆ ಜಲಾಶಯದ ಪಕ್ಕದಲ್ಲೆ ಇರೋ ಹತ್ತಾರು ಹಳ್ಳಿಗಳಿಗೆ ಕುಡಿಯೋಕೆ ನೀರು ಸಿಗೋದೆ ಇಲ್ಲ. ಜಲಾಶಯದಿಂದ ಸುತ್ತಲಿರೋ ಹಳ್ಳಿಗಳ ಕೆರೆಗಳಿಗೆ ನೀರನ್ನ ತುಂಬಿಸಬೇಕು ಅನ್ನೋ ಕನಿಷ್ಟ ಜ್ಞಾನವೂ ನಮ್ಮ ಜನಪ್ರತಿನಿಧಿಗಳಿಗಿಲ್ಲ.

    ಜಲಾಶಯವೇ ಬತ್ತಿ ಹೋದಾಗ
    50 ವರ್ಷದ ಇತಿಹಾಸ ಹೊಂದಿರೋ ಚಾಮರಾಜನಗರ ಜಿಲ್ಲೆ ಚಿಕ್ಕಹೊಳೆ ಜಲಾಶಯ ಸಂಪೂರ್ಣ ಬರಿದಾಗಿದೆ. ಧರಿತ್ರಿ ಹನಿ ನೀರಿಗೆ ಬಾಯ್ತೆರೆದು ಬಿಸಿಲಿನ ದವಡೆಯಲ್ಲಿ ಒದ್ದಾಡುತ್ತಿದ್ದಾಳೆ. ಸುತ್ತಮುತ್ತಲಿನ 21 ಹಳ್ಳಿಗಳ ಜನರ ದಾಹ ನೀಗಿಸುತ್ತಿದ್ದ ಈ ಜಲಾಶಯದ ದಾಹ ತೀರಿಸುವವರು ಯಾರು. ಈ ಜಲಾಶಯದ ಸುತ್ತಲಿರೋ ಕಾಡು ಪ್ರಾಣಿಗಳಂತೂ ನೀರಿಲ್ಲದೆ ಸಾವಿನ ದವಡೆಯಲ್ಲಿವೆ. ಒಂದು ಕಡೆ ಕಾಡ್ಗಿಚ್ಚು ಇನ್ನೊಂದು ಕಡೆ ನೀರಿನ ಬವಣೆ. ಇದರ ಮಧ್ಯೆ ಕಾಡು ಪ್ರಾಣಿಗಳು ದಿಕ್ಕು ಕಾಣದೆ ಸಾಯೋ ಸ್ಥಿತಿಗೆ ಬಂದು ತಲುಪಿವೆ. ಮನುಷ್ಯರೇನೋ ಟ್ಯಾಂಕರ್ ತರಿಸಿ ನೀರು ಕುಡಿತಾರೆ, ಆದ್ರೆ ಪ್ರಾಣಿಗಳ ಸ್ಥಿತಿ ಏನು..?

    ಮರಳು ದಂಧೆಗೆ ಬೀಳುತ್ತಾ ಕಡಿವಾಣ?
    ಕಾವೇರಿ ಉಗಮ ಸ್ಥಾನದಲ್ಲಿ ಹೆಚ್ಚು ಮಳೆ ಸುರಿದಾಗ ನಮ್ಮ ಆಸ್ತಿ ಪಾಸ್ತಿ ಹಾನಿಯಾಗುತ್ತೆ, ಬೆಳೆದ ಬೆಳೆ ನಾಶವಾಗುತ್ತೆ. ಆಗ ನಮ್ಮನ್ನ ನೋಡೋರೆ ದಿಕ್ಕಿರಲ್ಲ. ಆಗ ಮಂಡ್ಯದ ಜನ ಖುಷಿ ಪಡುತ್ತಾರೆ. ಕಾವೇರಿ ತುಂಬಿ ಹರಿಯುತ್ತಿದ್ದಾಳೆಂದು ಸಂಭ್ರಮಿಸ್ತಾರೆ. ಆದ್ರೆ ನಾವಿಲ್ಲ ಕಣ್ಣೀರು ಹಾಕ್ತೀವಿ ಅಂತಾ ಕೊಡಗಿನ ಭಾಗಮಂಡಲದ ಜನ ನೋವಿನಿಂದ ಹೇಳಿಕೊಳ್ತಾರೆ. ಇದಲ್ಲದೆ ಕಾವೇರಿ ಒಡಲಲ್ಲಿ ಮರಳುದಂಧೆ ಕೂಡ ಎಗ್ಗಿಲ್ಲದೆ ಸಾಗಿದೆ, ಇದೆಲ್ಲದಕ್ಕಿಂತ ಹೆಚ್ಚಾಗಿ ಕಾವೇರಿ ನದಿಯ ಒತ್ತುವರಿ ಮಾಡಿ ಕಟ್ಟಡಗಳನ್ನ ಕಟ್ಟಿಕೊಳ್ಳೋಕೆ ಜನ ಶುರು ಮಾಡಿದ್ದಾರೆ. ಚರಂಡಿ ನೀರನ್ನೆಲ್ಲ ಕಾವೇರಿ ನದಿಗೆ ಹರಿಯಬಿಡ್ತಿದ್ದಾರೆ. ಇದರ ಮಧ್ಯೆ ಕಾವೇರಿ ಕಲುಷಿತಗೊಂಡು ಬತ್ತಿ ಹೋಗುತ್ತಿದ್ದಾಳೆ. ಈಗಲೇ ಇದರ ಸಂರಕ್ಷಣೆ ಮಾಡದೇ ಇದ್ದರೆ ಗಂಗಾ ನದಿಯಂತೆ ಸಂಪೂರ್ಣ ಮಲೀನವಾಗೋದ್ರಲ್ಲಿ ಯಾವುದೇ ಸಂದೇಹವಿಲ್ಲ.

    ಎಲ್ಲೆಲ್ಲೂ ಜಾನುವಾರುಗಳ ಮೂಳೆಗಳೆ ಪತ್ತೆ
    ಇನ್ನು ನಮ್ಮ ತಂಡ ತೆರಳಿದ ಹಲವು ಜಲಾಶಯಗಳು, ಬತ್ತಿಹೋದ ನದಿ, ಹೊಳೆ, ಕಾಲುವೆ, ಕೆರೆ ಪಕ್ಕದಲ್ಲಿ ಪ್ರಾಣಿಗಳ ಮೂಳೆಗಳು ಕಂಡುಬಂದ್ವು. ಒಂದು ಕಡೆ ಮಳೆ ಇಲ್ಲದೆ ಹಸಿರೆಲ್ಲ ಮರೆಯಾಗಿದೆ. ಇನ್ನೊಂದು ಕಡೆ ಬಿಸಿಲಿನ ಝಳ. ಇದರ ಮಧ್ಯೆ ಕುಡಿಯೋಕೆ ನೀರಿಲ್ಲದೆ ಅನೇಕ ಪ್ರಾಣಿಗಳು ಸಾವನ್ನಪ್ಪುತ್ತಿವೆ. ಪ್ರಾಣಿಗಳ ಅವಶೇಷ ನೋಡ್ತಾ ಇದ್ರೆ ಕಣ್ಣಂಚಲ್ಲಿ ನೀರು ಬರದೆ ಇರದು. ಇನ್ನೂ ಕೆಲವು ಕಡೆಯಲ್ಲಂತೂ ನೀರಿಲ್ಲದೆ ಮೀನುಗಳ ಮಾರಣಹೋಮ ನಡೆಯುತ್ತಿದೆ. ಜಲಚರಗಳು ಜೀವನ್ಮರಣದ ಮಧ್ಯೆ ಹೋರಾಡುತ್ತಿವೆ. ಬುದ್ಧಿ ಜೀವಿ ಮನುಷ್ಯ ಮಾತ್ರ ದುಡ್ಡುಕೊಟ್ಟು ನೀರು ಖರೀದಿಸ್ತಾನೆ. ಆದ್ರೆ, ಮೂಖ ಪ್ರಾಣಿಗಳ ವೇದನೆಯನ್ನ ಕೇಳೋರಾದ್ರು ಯಾರು..?

    ಪ್ರಾಣಿಗಳಿಗಾಗಿ ಟ್ಯಾಂಕರ್ ನೀರು.
    ಕುಡಿಯೋಕೆ ನೀರು ಸಿಕ್ರೆ ಸಾಕು ಅನ್ನೋ ಈ ಕಾಲದಲ್ಲಿ ಒಂದು ವಿಶೇಷ ಗ್ರಾಮವೊಂದಿದೆ. ಈ ರಂಗಪುರ ಗ್ರಾಮ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿದೆ. ಈ ಗ್ರಾಮದ ಜನರಿಗೆ ಕುಡಿಯೋಕೆ ನೀರಿನ ಸಮಸ್ಯೆ. ಆದ್ರೆ, ಈ ಗ್ರಾಮದ ಜನ ಮಾತ್ರ ತಮಗೆ ಎಷ್ಟೆ ಕಷ್ಟವಾದ್ರು ಚಿಂತೆಯಿಲ್ಲ ಪ್ರಾಣಿಗಳು ನೀರಿಲ್ಲದೆ ಸಾವನ್ನಪ್ಪಬಾರದು ಅಂತಾ ಒಣಗಿ ಹೋಗಿರೋ ಕೆರೆಗೆ ವಾರಕ್ಕೊಮ್ಮೆ ಟ್ಯಾಂಕರ್‍ನಿಂದ ನೀರು ಸುರಿಯುತ್ತಿದ್ದಾರೆ. ಕೆರೆ ತುಂಬಿಸೋಕೆ ಸಾಧ್ಯವಾಗದೆ ಇದ್ದರು ಕುರಿ, ದನಕರುಗಳು, ಮಂಗಗಳು, ನಾಯಿಗಳು, ಪಕ್ಷಿಗಳು ತಮ್ಮ ದಾಹ ತೀರಿಸಿಕೊಳ್ಳುತ್ತಿವೆ.

    ಗೋ ಶಾಲೆಗಳು
    ನಮ್ಮ ತಂಡ ಹೋದ ಕೆಲವು ಕಡೆ ಗೋ ಶಾಲೆಗಳು ಸಿಕ್ವು. ಸರ್ಕಾರವೇನೋ ಗೋ ಶಾಲೆಗಳ ವ್ಯವಸ್ಥೆ ಮಾಡ್ತಿದೆ. ಆದ್ರೆ, ಕೆಲ ಗೋ ಶಾಲೆಗಳಲ್ಲಿ ಚಿರತೆ ಕಾಟವಿದೆ. ಇನ್ನೂ ಕೆಲವು ಕಡೆ ರಾತ್ರಿ ವಿದ್ಯುತ್ ಸಂಪರ್ಕವೇ ಇಲ್ಲ. ಗೋವುಗಳ ಜೊತೆ ಬಂದ ಮಾಲೀಕರು ಕತ್ತಲಲ್ಲೆ ರಾತ್ರಿ ಕಳೆಯೋ ಹಾಗಾಗಿದೆ. ಹಾವುಗಳ ಕಾಟ ಬೇರೆ ಇದೆ. ಗೋವುಗಳಿಗೆ ನೀರಿನ ವ್ಯವಸ್ಥೆ ಏನೋ ಮಾಡಿದ್ದಾರೆ. ಆದ್ರೆ ಗೋವುಗಳ ಜೊತೆ ಬಂದವರು ಉಪವಾಸ ಕೂರುವಂತಾಗಿದೆ. ಮನೆಗೆ ಹೋಗಿ ಬರಬೇಕಂದ್ರೆ ಹಳ್ಳಿಯಿಂದ 30-40 ಕಿಮೀ ದೂರದಲ್ಲಿದ್ದಾರೆ. ಹೋಗಿ ಬರೋದಕ್ಕೂ ವ್ಯವಸ್ಥೆ ಇಲ್ಲ. ಯಾಕಂದ್ರೆ ಬಹಳಷ್ಟು ಗೋ ಶಾಲೆಗಳಿರೋದು ಮುಖ್ಯ ರಸ್ತೆಯಿಂದ ಬಹುದೂರ ಒಳಗಡೆ. ಅಲ್ಲಿ ಬಸ್ ಸೌಲಭ್ಯವಂತೂ ಇಲ್ಲವೆ ಇಲ್ಲ. ಇದೇನೂ ದೊಡ್ಡ ಸಮಸ್ಯೆ ಅಲ್ಲ. ಆದ್ರೂ ಸಂಬಂಧ ಪಟ್ಟವರು ಸ್ವಲ್ಪ ವ್ಯವಸ್ಥೆ ಮಾಡಿದ್ರೆ ಒಳ್ಳೆಯದಾಗುತ್ತೆ.