Tag: ಚಾಮುಂಡಿಬೆಟ್ಟ

  • ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

    ಮುಡಾ ಸಂಕಷ್ಟದ ಹೊತ್ತಲ್ಲೇ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ

    – ಈಡುಗಾಯಿ ಒಡೆದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ಸಿದ್ದರಾಮಯ್ಯ

    ಮೈಸೂರು: ಮುಡಾ ಹಗರಣ (MUDA Scam) ಸಂಕಷ್ಟದ ನಡುವೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಡದೇವತೆ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿಗೆ ಮಂಗಳವಾರ ಭೇಟಿ ನೀಡಿದ ಸಿಎಂ ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಚಾಮುಂಡಿಬೆಟ್ಟಕ್ಕೆ (Chamundeshwari Temple) ಸಿಎಂ ಭೇಟಿ ಹಿನ್ನೆಲೆ ಬೆಟ್ಟದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ದೇವಾಲಯ ಮುಂಭಾಗ ಯಾರೂ ಓಡಾಡದಂತೆ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಭದ್ರತೆಗೆಗಾಗಿ ಬೆಟ್ಟದಲ್ಲಿ ಸಾಕಷ್ಟು ಪೊಲೀಸರ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: ರಾಜ್ಯಪಾಲರು ಬಿಜೆಪಿ ಏಜೆಂಟ್ ರೀತಿ ವರ್ತಿಸ್ತಿದ್ದಾರೆ: ಪ್ರದೀಪ್ ಈಶ್ವರ್ ಕಿಡಿ

    ಚಾಮುಂಡಿ ಬೆಟ್ಟಕ್ಕೆ ಸಿಎಂ ಬರುತ್ತಿದ್ದಂತೆ ದೇವಸ್ಥಾನ ಆಡಳಿತ ಮಂಡಳಿ, ಮಂಗಳವಾದ್ಯಗಳ ಮೂಲಕ ಸ್ವಾಗತ ಕೋರಿತು. ಈ ವೇಳೆ ಸಿಎಂಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ವೆಂಕಟೇಶ್ ಸಾಥ್ ನೀಡಿದರು.

    ಬಳಿಕ ಸಿಎಂ, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. 23 ದಿನಗಳಲ್ಲಿ ಎರಡನೇ ಬಾರಿಗೆ ಚಾಮುಂಡಿ ದರ್ಶನ ಮಾಡಿದರು. ಈಡುಗಾಯಿ ಒಡೆದು ನಾಡದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ತಂದೆ ಜೊತೆ ಆಗಮಿಸಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಚಾಮುಂಡೇಶ್ವರಿಗೆ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ

    ಸಿದ್ದರಾಮಯ್ಯ ಹೆಸರಿನಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಲಾಯಿತು. ಪೂಜೆ ಬಳಿಕ ಸಿದ್ದರಾಮಯ್ಯಗೆ ಮಂಗಳಾರತಿ ಕೊಡಲಾಯಿತು. ಸಿದ್ದರಾಮಯ್ಯ ಹಣೆಗೆ ಅರ್ಚಕರು ಕುಂಕುಮ ಇಟ್ಟರು. ಬಳಿಕ ಚಾಮುಂಡೇಶ್ವರಿ ಪಾದುಕೆಗೆ ಸಿಎಂ ನಮಸ್ಕರಿಸಿ ಭಕ್ತಿಯಿಂದ ಪ್ರಾರ್ಥಿಸಿದರು. ನಂತರ ಗಣಪತಿ, ಆಂಜನೇಯ ಸೇರಿದಂತೆ ಇತರ ದೇವರಲ್ಲೂ ಪ್ರಾರ್ಥನೆ ಮಾಡಿದರು. ಬಳಿಕ ದೇವಿಗೆ ಈಡುಗಾಯಿ ಹೊಡೆದ ಸಿದ್ದರಾಮಯ್ಯ.

    ಚಾಮುಂಡೇಶ್ವರಿ ಪ್ರಸಾದ ಪಡೆಯದ ಮಹದೇವಪ್ಪ:
    ಸಿಎಂ ಜೊತೆ ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಹೆಚ್.ಸಿ.ಮಹದೇವಪ್ಪ ಪ್ರಸಾದ ಸ್ವೀಕರಿಸದ ಘಟನೆ ನಡೆಯಿತು. ಚಾಮುಂಡೇಶ್ವರಿ ದೇವಿಯ ಕುಂಕುಮ ಹಾಗೂ ಹೂವನ್ನು ಸಿಎಂ ಪ್ರಸಾದವಾಗಿ ಪಡೆದರು. ಈ ವೇಳೆ ಮಹದೇವಪ್ಪಗೂ ಪ್ರಸಾದ ನೀಡಲು ಅರ್ಚಕರು ಮುಂದಾದರು. ಆಗ ಕೈ ಸನ್ನೆಯಲ್ಲೇ ನನಗೆ ಬೇಡಾ ಎಂದು ಸಚಿವರು ಹೇಳಿದರು.

  • ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದು ತಾಯಿ ಚಾಮುಂಡಿಗೆ ಸೆರಗೊಡ್ಡಿ ಬೇಡಿಕೊಂಡಿದ್ದೆ: ಲಕ್ಷ್ಮಿ ಹೆಬ್ಬಾಳ್ಕರ್

    ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದು ತಾಯಿ ಚಾಮುಂಡಿಗೆ ಸೆರಗೊಡ್ಡಿ ಬೇಡಿಕೊಂಡಿದ್ದೆ: ಲಕ್ಷ್ಮಿ ಹೆಬ್ಬಾಳ್ಕರ್

    – ಈಗ ರಾಜ್ಯದಲ್ಲಿ ಒಳ್ಳೆ ಮಳೆಯಾಗಲೆಂದು ಪ್ರಾರ್ಥಿಸಿದ್ದೇನೆ ಎಂದ ಸಚಿವೆ

    ಮೈಸೂರು: ಆಷಾಢ ಮಾಸ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ (Chamundi Hills) ತೆರಳಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಅವರಿಂದು ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿ ತಾಯಿ ಚಾಮುಂಡೇಶ್ವರಿ ಕೃಪೆಗೆ ಪಾತ್ರರಾದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರಲಿ ಅಂತಾ ತಾಯಿ ಚಾಮುಂಡೇಶ್ವರಿಗೆ (Chamundeshwari) ಹರಕೆ ಹೊತ್ತಿದ್ದೆ. ದೇವಿ ಮುಂದೆ ಸೆರಗೊಡ್ಡಿ ಬೇಡಿಕೊಂಡಿದ್ದೆ. ನಾವೀಗ ಅಧಿಕಾರಕ್ಕೆ ಬಂದಿದ್ದೇವೆ. ಆದ್ದರಿಂದ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ. ಈಗ ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಅಂತಾ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂಡಿಯಾ ಈಸ್ ಇಂದಿರಾ, ಇಂದಿರಾ ಈಸ್ ಇಂಡಿಯಾ ಎಂದ ಕಂಗನಾ ಡೈಲಾಗ್‌ಗೆ ಫ್ಯಾನ್ಸ್ ದಿಲ್ ಖುಷ್

    ಗೃಹಲಕ್ಷ್ಮಿ ವಿಳಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದೇವೆ. ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಎಲ್ಲಾ ತಯಾರಿ ಮಾಡಿದ್ದೇವೆ. ಜೂನ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಸಿಎಂಗೆ ಆ್ಯಪ್ ತೋರಿಸಿ, ನಂತರ ಅರ್ಜಿ ಸಲ್ಲಿಕೆಗೆ ಬಿಡುಗಡೆ ಮಾಡುತ್ತೇವೆ. ಆಗಸ್ಟ್ 17ರ ನಂತರ ಫಲನಾಭವಿಗಳ ಖಾತೆಗೆ ಹಣ ಹಾಕುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಬಂಡೀಪುರಕ್ಕೆ ಮೋದಿ ಬಂದು ಹೋದ ನಂತ್ರ ಹೆಚ್ಚಾಯ್ತು ಪ್ರವಾಸಿಗರ ಸಂಖ್ಯೆ, ಹರಿದು ಬಂತು ಆದಾಯ

    ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆಗೆ ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಒಂದು ರೂಪಾಯಿ ಹಣವನ್ನೂ ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರಾ. ಇದರಲ್ಲಿ ಯಾವುದೇ ಗೊಂದಲಗಳು ಬೇಡ ಎಂದು ಅಭಯ ನೀಡಿದ್ದಾರೆ.

  • ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮಕ್ಕೆ ಕ್ಷಣಗಣನೆ

    ಚಾಮುಂಡಿ ಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಸಂಭ್ರಮಕ್ಕೆ ಕ್ಷಣಗಣನೆ

    – ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ನೋ ಎಂಟ್ರಿ
    – ಭಕ್ತರಿಗೆ ಉಚಿತ ಪ್ರಯಾಣಕ್ಕೆ 50 ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ

    ಮೈಸೂರು: ಚಾಮುಂಡಿ ಬೆಟ್ಟದಲ್ಲಿ (Chamundi Hills) ಮೊದಲ ಆಷಾಢ ಶುಕ್ರವಾರದ (Ashada Friday) ಸಂಭ್ರಮಕ್ಕೆ ಕೌಂಟ್‌ಡೌನ್‌ ಶುರುವಾಗಿದೆ. ಬೆಟ್ಟಕ್ಕೆ ಪ್ರತಿ ಆಷಾಢ ಶುಕ್ರವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧ ವಿಧಿಸಲಾಗುತ್ತದೆ. ಅಂತೆಯೇ ಈ ಬಾರಿಯೂ ಖಾಸಗಿ ಬಸ್‌ಗಳಿಗೆ ನಿರ್ಬಂಧ ವಿಧಿಸಿದ್ದು, ಸರ್ಕಾರಿ ಬಸ್‌ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಆಷಾಢ ಪೂಜಾ ಕೈಂಕರ್ಯಗಳಿಗೆ ಸಿದ್ಧತೆ ಜೋರಾಗಿದೆ.

    ಆಷಾಢ ಶುಕ್ರವಾರ ಬಂದ್ರೆ ಸಾಕು ಅರಮನೆ ನಗರಿ ಮೈಸೂರು (Mysuru) ಹಾಗೂ ಚಾಮುಂಡಿ ಭಕ್ತರಿಗೆ ಸಂಭ್ರಮವೋ ಸಂಭ್ರಮ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರ ಹಿನ್ನೆಲೆ ನಾಳೆ ನಾಡದೇವತೆ, ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ನಾಳೆ ಮುಂಜಾನೆ 3 ಗಂಟೆ 30 ನಿಮಿಷಕ್ಕೆ ಅಭಿಷೇಕದೊಂದಿಗೆ ಆರಂಭವಾಗುವ ವಿವಿಧ ರೀತಿಯ ಪೂಜಾ ಕೈಂಕರ್ಯ ಎರಡು ಗಂಟೆಗಳ ಕಾಲ ನಿರಂತರವಾಗಿ ನಡೆಯಲಿವೆ. ನಾಳೆ ದೇವಿಗೆ ಲಕ್ಷ್ಮೀ ಅಲಂಕಾರ ಮಾಡಿ ಬಳಿಕ‌ 5 ಗಂಟೆ 30 ನಿಮಿಷಕ್ಕೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ. ಇದನ್ನೂ ಓದಿ: ಮೈಸೂರಿನ ಶ್ರೀಗಂಧದ ಪೆಟ್ಟಿಗೆಯಲ್ಲಿ ಬೈಡನ್‌ಗೆ ಉಡುಗೊರೆ – ಮೋದಿ ಕೊಟ್ಟ ಗಿಫ್ಟ್ ಬಾಕ್ಸ್‌ನಲ್ಲಿ ಏನಿದೆ?

    ಆಷಾಢ ಶುಕ್ರವಾರದ ಪೂಜೆಗೆ ಚಾಮುಂಡಿಬೆಟ್ಟದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಕಿರಿದಾದ ಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಬಾರದೆಂದು ಖಾಸಗಿ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಭಕ್ತರಿಗೆ ಜಿಲ್ಲಾಡಳಿತ 50 ಕೆಎಸ್ಆರ್‌ಟಿಸಿ ಬಸ್ಸಿನ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ. ನಗರದ ಲಲಿತಮಹಲ್ ಹೆಲಿಪ್ಯಾಡ್‌ ಸಮೀಪದಿಂದ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೆಸ್‌ ಹೆಲಿಪ್ಯಾಡ್‌ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ 300 ಮತ್ತು 50 ರೂಪಾಯಿ ಟಿಕೆಟ್ ಇರಲಿದೆ.

    ಪ್ರಸಾದ ಕೌಂಟರ್‌ಗಳಲ್ಲಿ ಫುಡ್ ಸೇಫ್ಟಿ ಆಫೀಸರ್‌ಗಳ ತಂಡ ಇರಲಿದೆ. ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ. ಇದನ್ನೂ ಓದಿ: 13 ಬಾರಿ ಬಜೆಟ್ ಕೊಟ್ಟ ಕೂಡಲೇ ಗದ್ದೆಯಲ್ಲಿ ಭತ್ತ ಬೆಳೆದು ಅಕ್ಕಿ ಕೊಡೋಕೆ ಆಗಲ್ಲ: ಸಿದ್ದುಗೆ ಡಿವಿಎಸ್ ಟಾಂಗ್

    ಆಷಾಢ ಶುಕ್ರವಾರದಂದು ಶಕ್ತಿ ದೇವತೆಯನ್ನು ಪೂಜಿಸಿದವರಿಗೆ ವಿಘ್ನಗಳು ನಿರವಾರಣೆಯಾಗಿ, ಇಷ್ಠಾರ್ಥ ಸಿದ್ಧಿಸುತ್ತದೆ ಅನ್ನೋ ನಂಬಿಕೆಯಿದೆ. ಈ ನಿಟ್ಟಿನಲ್ಲಿ ಮೈಸೂರು ಮಾತ್ರವಲ್ಲದೆ ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯದ ಲಕ್ಷಾಂತರ ಭಕ್ತರು ಸಹ ಆಗಮಿಸುತ್ತಿದ್ದಾರೆ. ಒಟ್ಟಾರೆ ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಆಷಾಢ ಮಾಸದ‌ ಪೂಜೆಗೆ ಸಿದ್ಧತೆ ಜೋರಾಗಿ ನಡೆದಿದೆ.

  • ಹೊಸ ವರ್ಷಾಚರಣೆಗೆ ಮೈಸೂರು ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಹೊಸ ವರ್ಷಾಚರಣೆಗೆ ಮೈಸೂರು ಚಾಮುಂಡಿಬೆಟ್ಟಕ್ಕೆ ಪ್ರವೇಶ ನಿರ್ಬಂಧ

    ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಗೆ (Newyear 2023) ಇಡೀ ರಾಜ್ಯ ಕಾದು ಕುಳಿತಿದೆ. ಕೊರೊನಾ (Corona) ಕಂಟಕದ ಬಳಿಕ ಬಂದಿರೋ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

    ಬಹುತೇಕರು ವಿವಿಧ ಸ್ಥಳಗಳಿಗೆ ಪ್ರವಾಸ ಕಾರ್ಯಕ್ರಮಕ್ಕೆ ಪ್ಲ್ಯಾನ್‌ ಮಾಡಿಕೊಂಡಿದ್ದಾರೆ. ಆದ್ರೆ ಕಟ್ಟುನಿಟ್ಟಿನ ನಿಯಮಗಳು ಪ್ರವಾಸಿಗರಿಗೆ ನಿರಾಶೆಯುಂಟುಮಾಡಿವೆ. ಇದನ್ನೂ ಓದಿ: ಚಾಲಕನಿಗೆ ಹೃದಯಾಘಾತ – ಬಸ್, ಕಾರು ನಡುವಿನ ಭೀಕರ ಅಪಘಾತದಲ್ಲಿ 9 ಸಾವು, 28 ಮಂದಿಗೆ ಗಾಯ

    ಈಗಾಗಲೇ ರಾಜಧಾನಿಯಲ್ಲಿ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಪ್ರತಿಷ್ಠಿತ ಪ್ರವಾಸಿ ತಾಣವಾದ ಚಾಮುಂಡಿಬೆಟ್ಟಕ್ಕೂ (Chamundi Hills) ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 31ರ ರಾತ್ರಿ 9 ಗಂಟೆಯಿಂದ 2023 ಜನವರಿ 1ರ ಬೆಳಗ್ಗೆ 5 ಗಂಟೆವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ (Police) ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಜೊತೆಗಿನ `ಕಿರಿಕ್ ಪಾರ್ಟಿ’ ಚಿತ್ರ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ

    ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ಬಳಿ ಹೆಚ್ಚು ಜನ ಸೇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ಬೆಟ್ಟದ ನಿವಾಸಿಗಳು ಸಿಬ್ಬಂದಿಗೆ ಮಾತ್ರ ಅವಕಾಶವಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದ ಪೂಜೆ ಸಲ್ಲಿಸಿದ ಪ್ರಧಾನಿ – ಬೆಟ್ಟದಲ್ಲಿ ಹಬ್ಬದ ಸಡಗರ

    ನಾಡದೇವತೆ ಚಾಮುಂಡೇಶ್ವರಿಗೆ ಭಕ್ತಿಭಾವದ ಪೂಜೆ ಸಲ್ಲಿಸಿದ ಪ್ರಧಾನಿ – ಬೆಟ್ಟದಲ್ಲಿ ಹಬ್ಬದ ಸಡಗರ

    ಮೈಸೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ಸಂಜೆ ನಾಡದೇವವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಧಾನಿ ಮೋದಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಸಾಥ್ ನೀಡಿದರು.

    ಸುತ್ತೂರು ಮಠದಲ್ಲಿನ ಕಾರ್ಯಕ್ರಮ ಮುಗಿಸಿದ ಮೋದಿ ನೇರವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದಂತೆ ಮೋದಿ ಅವರನ್ನು ನೋಡಲು ಮಾರ್ಗದುದ್ದಕ್ಕೂ ಜನ ಕಾದು ಕುಳಿತಿದ್ದರು. ಎಲ್ಲರತ್ತ ಕೈ ಬೀಸುತ್ತಾ ತೆರಳಿದ ಮೋದಿ ಚಾಮುಂಡೇಶ್ವರಿ ದೇಗುಲ ಪ್ರವೇಶಿಸಿದರು.

    ಚಾಮುಂಡೇಶ್ವರಿ ದೇಗುಲ ಪ್ರೇವಶ ದ್ವಾರದಲ್ಲಿರುವ ಗಣಪತಿಗೆ ಪೂಜೆ ಸಲ್ಲಿಸಿದ ಮೋದಿ ಒಳ ಪ್ರವೇಶಿಸಿದರು. ಈ ವೇಳೆ ಅರ್ಚಕರು ಶಾಲು ಹೊದಿಸಿ ಪ್ರಧಾನಿಯನ್ನು ಸ್ವಾಗತಿಸಿದರು. ನಾಡದೇವತೆಗೆ ಪಾರ್ಥನೆ ಸಲ್ಲಿಸಿದ ಮೋದಿ ಕುಂಕುಮಾರ್ಚನೆ ಪೂಜೆ ನೆರವೇರಿಸಿದರು. ದೇವಸ್ಥಾನದ ಗರ್ಭಗುಡಿ ಎದುರು ಕುಳಿತು ಪೂಜೆ ನೆರವೇರಿಸಿದರು. ಇದೇ ವೇಳೆ ಮೋದಿ ನಾಡದೇವತೆ ಎದರು ಸಂಕಲ್ಪ ಮಾಡಿದರು. ಬಳಿಕ ಗರ್ಭಗುಡಿಗೆ ಸುತ್ತು ಹಾಕಿದ ಮೋದಿ, ಚಾಮುಂಡಿ ತಾಯಿ ಪಾದಕ್ಕೆ ನಮಸ್ಕರಿಸಿದರು. ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ಹೊರಬಂದ ಮೋದಿ ದೇಗುಲಕ್ಕೆ ಕಾಣಿಕೆ ಹಾಕಿದರು.

    ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ: ಬಾಂಬ್ ನಿಷ್ಕ್ರಿಯದಳ, ಶ್ವಾನದಳದಿಂದ ದೇವಸ್ಥಾನದ ಸುತ್ತ ಹಾಗೂ ರಸ್ತೆ ಅಕ್ಕಪ್ಕದಲ್ಲಿ ಪರಿಶೀಲನೆ ನಡೆಸಲಾಗಿತ್ತು. ಸಂಸದ ಪ್ರತಾಪ್‌ಸಿಂಹ ನೇತೃತ್ವದಲ್ಲಿ ಅಂಗಡಿ ಮುಂಗಟ್ಟುಗಳ ಬಳಿಯೂ ತಪಾಸಣೆ ನಡೆಸಲಾಗಿತ್ತು.

    ಹಬ್ಬದ ವಾತಾವರಣ: ಪ್ರಧಾನಿ ಭೇಟಿ ನೀಡುತ್ತಿರುವ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತಾಯಿ ಚಾಮುಂಡೇಶ್ವರಿಗೆ ಕೆಂಪು, ಬೀಳಿ ಹಾಗೂ ಚಿನ್ನದ ಬಣ್ಣದಿಂದ ಕೂಡಿದ್ದ ಸೀರೆಯಲ್ಲಿ ಅಲಂಕರಿಸಲಾಗಿತ್ತು.

    Live Tv

  • ಮೈಸೂರು ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ

    ಮೈಸೂರು ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ; ಹೆಚ್ಚಿದ ಆತಂಕ

    ಮೈಸೂರು: ನಗರದಲ್ಲಿ ಗುರುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಚಾಮುಂಡಿಬೆಟ್ಟದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಬೆಟ್ಟದ ರಸ್ತೆಯ ಮುಕ್ಕಾಲು ಭಾಗ ಕುಸಿತಕ್ಕೆ ಒಳಗಾಗಿದೆ.

    ಕಳೆದ ತಿಂಗಳು ಭಾರಿ ಮಳೆಯಿಂದಾಗಿ ನಂದಿ ಬೆಟ್ಟಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿತ್ತು.‌ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್ ಅವರು ಈಚೆಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಲ್ಲದೆ ಸಿಎಂ ಜೊತೆಗೆ ಮಾತನಾಡಿ ಶಾಶ್ವತ ಪರಿಹಾರ ಕಾಮಗಾರಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದರು. ಆದರೆ ಈಗ ಬೆಟ್ಟದಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದ ಸ್ತಳೀಯರಲ್ಲಿ ಆತಂಕ ಮೂಡಿದೆ. ಇದನ್ನೂ ಓದಿ: ಪುನೀತ್ ಮಾಡುತ್ತಿದ್ದ ಕೆಲಸಕ್ಕೆ ನಾನೂ ಕೈ ಜೋಡಿಸುತ್ತೇನೆ: ರೇಣುಕಾಚಾರ್ಯ

    ಚಾಮುಂಡಿ ಬೆಟ್ಟದಲ್ಲಿ ನಿರಂತರ ಅಭಿವೃದ್ಧಿ ಕಾಮಗಾರಿ, ನಿರ್ವಹಣೆ ವೈಫಲ್ಯ, ಮರಗಳ ಹನನ, ಬೆಟ್ಟದ ಮೇಲೆ ಹೆಚ್ಚುತ್ತಿರುವ ಒತ್ತಡಗಳು ಕುಸಿತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ದೀಪಾವಳಿ: ನಂಜನಗೂಡಿನಲ್ಲಿ ಗೋಪೂಜೆ ಮಾಡಿದ ಸಚಿವ ಸೋಮಶೇಖರ್‌

    ಬೆಟ್ಟದ ಮೇಲೆ ವಾಣಿಜ್ಯ ಸಂಕೀರ್ಣ, ಹೋಟೆಲ್‌, ಶೌಚಾಲಯ, ದಾಸೋಹ ಭವನ ಸೇರಿದಂತೆ ಅನೇಕ ಕಟ್ಟಡಗಳ ನಿರ್ಮಾಣವಾಗುತ್ತಿವೆ. ಇವುಗಳಿಂದ ಬರುವ ಸಿವೇಜ್‌ ನೀರನ್ನು ರಸ್ತೆ ಪಕ್ಕದಲ್ಲಿ ಬಿಡಲಾಗುತ್ತಿದೆ. ಇದರಿಂದ ರಸ್ತೆಗಳಲ್ಲಿ ತೇವಾಂಶ ಹೆಚ್ಚಾಗಿ ಮಳೆ ಬಿದ್ದಾಗ ಕುಸಿತ ಉಂಟಾಗುತ್ತಿದೆ. ಅಷ್ಟೇ ಅಲ್ಲದೆ ಬೆಟ್ಟದ ಸುತ್ತಮುತ್ತ ಒತ್ತುವರಿ ಮಾಡಿಕೊಂಡು ಮರಗಳನ್ನು ನಾಶ ಮಾಡಲಾಗುತ್ತಿದೆ. ಈ ಎಲ್ಲಾ ಕಾರಣಗಳಿಂದ ಮತ್ತೆ ಮತ್ತೆ ಭೂಕುಸಿತ ಸಂಭವಿಸುತ್ತಿದೆ ಎಂಬ ಗಂಭೀರ ಆರೋಪವೂ ಹಲವರಿಂದ ವ್ಯಕ್ತವಾಗಿದೆ.

  • ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ: ಎಸ್.ಟಿ.ಸೋಮಶೇಖರ್

    ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ: ಎಸ್.ಟಿ.ಸೋಮಶೇಖರ್

    ಮೈಸೂರು: ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

    chamundi betta

    ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ಕಳೆದ ವಾರ ಭೂಕುಸಿತವಾಗಿದ್ದ ಸ್ಥಳಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಕುಸಿತದ ಕುರಿತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಜೊತೆ ಮಾತನಾಡಲಾಗಿದೆ. ದೀಪಾವಳಿ ನಂತರ ಅವರು ಸಹ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಸ್ತುಸ್ಥಿತಿ ತಿಳಿದುಕೊಳ್ಳಲು ಇಂದು ನಾನು ಭೇಟಿ ನೀಡಿದ್ದೇನೆ. ಹೆಚ್ಚು ಹಾನಿಯಾಗಿದ್ದು ಈ ಕೂಡಲೇ ಪರಿಹಾರ ಕಾರ್ಯಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

    ಇದಕ್ಕೂ ಮೊದಲು ಮಳೆ ಹಾನಿ ಕುರಿತಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಪಂ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸಚಿವರು, ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರು ಕೂಡ ಒಟ್ಟಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಳೆ ಹಾನಿ ಕುರಿತು ಅವರ ಗಮನಕ್ಕೆ ತರೋಣ ಎಂದರು. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

    chamundi hill

    147.96 ಎಕರೆ ಬೆಳೆ ಹಾನಿ, 214.97 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ ಅಂದಾಜು 700 ಕಿ.ಮೀ.ನಷ್ಟು ರಸ್ತೆ ಹಾಳಾಗಿದೆ. 67 ಪ್ರಾಥಮಿಕ ಶಾಲೆಗಳು, 33 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ: ಮುಂದಿನ ವರ್ಷ ಜಿಲ್ಲಾ, ರಾಜ್ಯೋತ್ಸವ ಪ್ರಶಸ್ತಿಗೆ ಏಕರೂಪ ನಿಯಮ: ಸುನಿಲ್ ಕುಮಾರ್

    ಈ ಸಂದರ್ಭದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಡಿಸಿಪಿ ಗೀತಾ ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.

  • ಮೊಟ್ಟ ಮೊದಲ ಬಾರಿಗೆ ಚಾಮುಂಡಿಬೆಟ್ಟದಿಂದ ಅರಮನೆಗೆ ಮೆರವಣಿಗೆಯಲ್ಲಿ ಬರಲಿದೆ ಅಂಬಾರಿ ಉತ್ಸವ ಮೂರ್ತಿ

    ಮೊಟ್ಟ ಮೊದಲ ಬಾರಿಗೆ ಚಾಮುಂಡಿಬೆಟ್ಟದಿಂದ ಅರಮನೆಗೆ ಮೆರವಣಿಗೆಯಲ್ಲಿ ಬರಲಿದೆ ಅಂಬಾರಿ ಉತ್ಸವ ಮೂರ್ತಿ

    -ಪೂಜೆ ಸಲ್ಲಿಸಿ ಚಾಲನೆ ನೀಡಲಿರುವ ಎಸ್.ಟಿ.ಸೋಮಶೇಖರ್

    ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನವಾಗಿ ಸಾಗುವ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿಯನ್ನು ಈ ಬಾರಿ ಚಾಮುಂಡಿಬೆಟ್ಟದಿಂದ ಅಲಂಕೃತ ವಾಹನದಲ್ಲಿ ವಿವಿಧ ಕಲಾತಂಡಗಳ ಜೊತೆಗೆ ಮೆರವಣಿಗೆ ಮೂಲಕ ಅರಮನೆಗೆ ತರಲಾಗುತ್ತಿದೆ.

    ವಿಜಯದಶಮಿಯ ದಿನವಾದ ಶುಕ್ರವಾರ ಬೆಳಗ್ಗೆ 8:00 ಗಂಟೆಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಟಾಂಗಾದಲ್ಲಿ ಆಗಮಿಸಿದ ಸೋಮಶೇಖರ್

    ಚಾಮುಂಡೇಶ್ವರಿ ಉತ್ಸವ ಮೂರ್ತಿ ತರುವ ಅಲಂಕೃತ ವಾಹನದೊಂದಿಗೆ ನಾದಸ್ವರ ತಂಡ, ಪೊಲೀಸ್ ಬ್ಯಾಂಡ್, ಅಶ್ವದಳ, ಭಜನಾ ತಂಡ, ವೇದಘೋಷ, ಚಂಡೆ, ನವದುರ್ಗೆಯರು ಸಾಗಲಿದ್ದು, ತಾವರಕಟ್ಟೆ, ಇಟ್ಟಿಗೆಗೂಡು, ಹಾಡಿರ್ಂಚ್ ವೃತ್ತದ ಮೂಲಕ ಅರಮನೆ ಪ್ರವೇಶಿಸಲಾಗುತ್ತದೆ.

    ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಎಲ್. ನಾಗೇಂದ್ರ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಮೈಸೂರು ಮಹಾನಗರ ಪಾಲಿಕೆಯ ಸದಸ್ಯರುಗಳು, ಮತ್ತಿತರ ಗಣ್ಯರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

  • ನಾಡಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಎಸ್ ಅಧಿಕೃತ ಆಹ್ವಾನ

    ನಾಡಹಬ್ಬಕ್ಕೆ ಪ್ರಮೋದಾದೇವಿಯವರಿಗೆ ಎಸ್.ಟಿ.ಎಸ್ ಅಧಿಕೃತ ಆಹ್ವಾನ

    ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಅಧಿಕೃತವಾಗಿ ಆಹ್ವಾನಿಸಿದ್ದಾರೆ.

    ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರತಿವರ್ಷದ ಪದ್ಧತಿಯಂತೆ ದಸರಾ ಮಹೋತ್ಸವಕ್ಕೆ ರಾಜಮಾತೆಯವರನ್ನು ಆಹ್ವಾನಿಸಲಾಯಿತು. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು. ಇದನ್ನೂ ಓದಿ:   ಸಮಂತಾ, ನಾಗ ಚೈತನ್ಯ DIVORCEಗೆ ಅಸಲಿ ಕಾರಣ ಬಯಲು

    ಅ.7ರಿಂದ 15ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿಬರ್ಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ಹೇಳಿದರು. ಇದನ್ನೂ ಓದಿ:  ರಾಜ್ಯ ರಾಜಕಾರಣ ಬಿಟ್ಟು ನಾನು ಬರಲ್ಲ: ಸೋನಿಯಾ ಭೇಟಿಯ ಇನ್‌ಸೈಡ್‌ ಸುದ್ದಿ

    ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಇದರ ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದ್ದು, ಯಾವರೀತಿ ಅವಕಾಶ ಕಲ್ಪಿಸಬೇಕು ಎಂಬುದರ ಕುರಿತಾಗಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು. ಇದನ್ನೂ ಓದಿ: ಡಿಕೆಶಿ ಸಾಕ್ಷ್ಯ ವೇಳೆ ಸುಳ್ಯ ಕೋರ್ಟಲ್ಲಿ ಕೈ ಕೊಟ್ಟ ಕರೆಂಟ್! 

    ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಪಾಲಿಕೆ ಆಯುಕ್ತರಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರೆ ಗಣ್ಯರು ಹಾಗೂ ಅಧಿಕಾರಿವರ್ಗದವರು ಉಪಸ್ಥಿತರಿದ್ದರು.

  • ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ

    ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ

    ಮೈಸೂರು: ಶುಕ್ರವಾರ ರಾತ್ರಿ ಚಾಮುಂಡಿ ಬೆಟ್ಟಕ್ಕೆ ನಟ ಶಿವರಾಜ್ ಕುಮಾರ್ ಭೇಟಿ ನೀಡಿ ನಾಡದೇವಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ.

    ಕುಟುಂಬ ಸಮೇತ ಬೆಟ್ಟಕ್ಕೆ ಭೇಟಿ ನೀಡಿದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಾಯಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿಕೊಂಡಿದ್ದಾರೆ.

    ದೀಪಾವಳಿ ಮಗಿದ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಸಹ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು.