Tag: ಚಾರ್ಮಾಡಿ

  • ಧರ್ಮಸ್ಥಳದ ಸ್ನಾನಘಟ್ಟ ಅಪವಿತ್ರಕ್ಕೆ ಹುನ್ನಾರ – ನೇತ್ರಾವತಿಯ ಉಪನದಿಯಲ್ಲಿ 11 ಗೋಣಿ ಗೋಮಾಂಸ ಪತ್ತೆ

    ಧರ್ಮಸ್ಥಳದ ಸ್ನಾನಘಟ್ಟ ಅಪವಿತ್ರಕ್ಕೆ ಹುನ್ನಾರ – ನೇತ್ರಾವತಿಯ ಉಪನದಿಯಲ್ಲಿ 11 ಗೋಣಿ ಗೋಮಾಂಸ ಪತ್ತೆ

    – ಚಾರ್ಮಾಡಿಯ ಮೃತ್ಯುಂಜಯ ನದಿಯಲ್ಲಿ ತ್ಯಾಜ್ಯ

    ಮಂಗಳೂರು: ಧರ್ಮಸ್ಥಳದ (Dharmasthala) ಸ್ನಾನಘಟ್ಟವನ್ನು ಅಪವಿತ್ರಗೊಳಿಸಲು ಕೆಲ ಕಿಡಿಗೇಡಿಗಳು ಪ್ರಯತ್ನ ನಡೆಸಿದ್ದಾರೆ.

    ನೇತ್ರಾವತಿ ನದಿಯನ್ನು (Netravati River) ಸೇರುವ ಚಾರ್ಮಾಡಿಯ (Charmadi) ಮೃತ್ಯುಂಜಯ ನದಿಗೆ (Mrityunjaya River) ಕಿಡಿಗೇಡಿಗಳು ಗೋಮಾಂಸದ (Beef) ತ್ಯಾಜ್ಯವನ್ನು ಸುರಿದಿದ್ದಾರೆ. ನದಿಯಲ್ಲಿ ದನದ ಚರ್ಮ, ಕೊಂಬು, ಇತ್ಯಾದಿ ತ್ಯಾಜ್ಯ ಹೊಂದಿರುವ 11 ಗೋಣಿಗಳು ಪತ್ತೆಯಾಗಿದೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರಿನಲ್ಲಿ ಕೇಸ್‌, ತರೀಕೆರೆಯಲ್ಲಿ ವಿಚಾರಣೆ!

    ನೇತ್ರಾವತಿ ನದಿ ಸೇರುವ ಮೃತ್ಯುಂಜಯ ನದಿ ನೀರಿನಲ್ಲಿಯೇ ಧರ್ಮಸ್ಥಳಕ್ಕೆ ಬರುವ ಭಕ್ತಾದಿಗಳು ಸ್ನಾನ ಮಾಡುತ್ತಾರೆ. ಇಂತಹ ನೀರಲ್ಲಿ ಈ ಕೃತ್ಯ ಎಸಗಿರುವುದು ಸಾಕಷ್ಟು ಅನುಮಾನ, ಆಕ್ರೋಶಕ್ಕೆ ಕಾರಣವಾಗಿದೆ.

    ಧಾರ್ಮಿಕ ಕ್ಷೇತ್ರವನ್ನು ಅಪವಿತ್ರ ಮಾಡಬೇಕು ಎನ್ನುವುದು ದುಷ್ಟ ಮನಸ್ಥಿತಿಗಳ ಹುನ್ನಾರ. ಇದು ಮತಾಂಧತೆಯನ್ನು ತೋರಿಸುತ್ತದೆ ಎಂದು ಬಿಜೆಪಿಯ ಪರಿಷತ್‌ ಸದಸ್ಯ ಸಿಟಿ ರವಿ ಕಿಡಿಕಾರಿದ್ದಾರೆ. ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಇದ್ಯೋ?.ಇಲ್ವೋ ಎಂದು ಪ್ರಶ್ನೆ ಮಾಡಿದ್ದಾರೆ.

     

  • ಚಾರ್ಮಾಡಿಯಲ್ಲಿ ಎಷ್ಟು ಹುಡುಕಾಡಿದರೂ ಸಿಗದ ಶರತ್ ಮೃತದೇಹ – ಬರಿಗೈಯಲ್ಲಿ ಬೆಂಗಳೂರು ಪೊಲೀಸರು ವಾಪಸ್

    ಚಾರ್ಮಾಡಿಯಲ್ಲಿ ಎಷ್ಟು ಹುಡುಕಾಡಿದರೂ ಸಿಗದ ಶರತ್ ಮೃತದೇಹ – ಬರಿಗೈಯಲ್ಲಿ ಬೆಂಗಳೂರು ಪೊಲೀಸರು ವಾಪಸ್

    ಚಿಕ್ಕಮಗಳೂರು: ಕಳೆದ 3 ದಿನಗಳಿಂದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ (Charmadi Ghat) ಬೆಂಗಳೂರಿನ (Bengaluru) ಯುವಕ ಶರತ್ (Sharath) ಮೃತದೇಹ ಹುಡುಕುತ್ತಿದ್ದ ಪೊಲೀಸರು (Bengaluru Police) ಶುಕ್ರವಾರ ಬರಿಗೈಯಲ್ಲಿ ವಾಪಾಸಾಗಿದ್ದಾರೆ. 10ಕ್ಕೂ ಹೆಚ್ಚು ಪೊಲೀಸರ ಜೊತೆ 20ಕ್ಕೂ ಹೆಚ್ಚು ಸ್ಥಳೀಯ ಯುವಕರು 3 ದಿನಗಳಿಂದ ನಿರಂತರವಾಗಿ ಹುಡುಕಿದರೂ ಶವ ಸಿಗದ ಹಿನ್ನೆಲೆ ಪೊಲೀಸರು ಮತ್ತೆ ಬರುವುದಾಗಿ ಹೇಳಿ ವಾಪಾಸಾಗಿದ್ದಾರೆ.

    ಬೆಂಗಳೂರಿನ ಕೋಣನಕುಂಟೆ ಮೂಲದ ಶರತ್ ಸಬ್ಸಿಡಿ ದರದಲ್ಲಿ ಕಾರು ಕೊಡಿಸುತ್ತೇನೆ ಎಂದು ನಂಬಿಸಿ ಕೆಲವರಿಂದ ಹಣ ಪಡೆದಿದ್ದ. ಆದರೆ ಕಾರು ಕೊಡಿಸದ ಹಿನ್ನೆಲೆ ಹಣ ಕೊಟ್ಟವರು ಶರತ್‌ನನ್ನು ಅಪಹರಿಸಿ ಹಲ್ಲೆ ಮಾಡಿ ಕೊಲೆಗೈದಿದ್ದರು. ಕೊಲೆಯ ಬಳಿಕ ಮೃತ ದೇಹವನ್ನು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಎಸೆದಿದ್ದರು. 9 ತಿಂಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ ಇದೀಗ ಬೆಳಕಿಗೆ ಬಂದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಶರತ್ ಮೃತ ದೇಹಕ್ಕಾಗಿ 3 ದಿನಗಳಿಂದ ಶೋಧ ನಡೆಸಿದ್ದಾರೆ.

    ಶರತ್ ಮೃತ ದೇಹವನ್ನು ಎಲ್ಲಿ ಎಸೆದಿದ್ದರು ಎಂದು ತಿಳಿದುಕೊಳ್ಳಲು ಆರೋಪಿಗಳನ್ನು ಸ್ಥಳಕ್ಕೆ ಕರೆದುಕೊಂಡು ಬಂದಿದ್ದರು. ಆರೋಪಿಗಳು ಒಂದು ಬಾರಿ ರಸ್ತೆಯ ಎಡ ಭಾಗ ಎಂದರೆ, ಮತ್ತೊಂದು ಬಾರಿ ರಸ್ತೆಯ ಬಲಭಾಗ ಎನ್ನುತ್ತಿದ್ದರು. ಆರೋಪಿಗಳ ದ್ವಂದ್ವ ಹೇಳಿಕೆಯ ಮಧ್ಯೆಯೂ ಪೊಲೀಸರು ಅವರು ಹೇಳಿದ ಜಾಗದಲ್ಲೆಲ್ಲಾ ಹುಡುಕಾಡಿದ್ದಾರೆ. ಆದರೆ ಮೃತದೇಹ ಪತ್ತೆಯಾಗಿಲ್ಲ. 9 ತಿಂಗಳು ಕಳೆದಿರುವುದರಿಂದ ಪೊಲೀಸರಿಗೆ ಮೃತದೇಹದ ಯಾವುದೇ ಕುರುಹು ಪತ್ತೆಯಾಗಿಲ್ಲ. ಅಲ್ಲದೆ ಆರೋಪಿಗಳನ್ನು ಕೋರ್ಟಿಗೆ ಹಾಜರುಪಡಿಸಬೇಕಾದ ಹಿನ್ನೆಲೆ ಮೃತ ದೇಹವನ್ನು ಶೋಧಿಸುವ ಕಾರ್ಯಾಚರಣೆಗೆ ಬ್ರೇಕ್ ಹಾಕಿ ಬೆಂಗಳೂರಿಗೆ ಬರಿಗೈಲಿ ಹಿಂದಿರುಗಿದ್ದಾರೆ.

    ಸಾವಿರಾರು ಅಡಿ ಪ್ರಪಾತದ ಲಕ್ಷಾಂತರ ಹೆಕ್ಟರ್ ಅರಣ್ಯ ಪ್ರದೇಶದಲ್ಲಿ 9 ತಿಂಗಳ ಹಿಂದಿನ ಮೃತದೇಹ ಹುಡುಕುವುದು ಕಲ್ಲನ್ನು ಗುದ್ದಿ ನೀರು ತೆಗೆದಂತೆ. ಅಲ್ಲಿ ಮೃತದೇಹ ಹುಡುಕುವುದು ಅಸಾಧ್ಯವೇ ಸರಿ. ಆದರೂ ಪೊಲೀಸರು 3 ದಿನಗಳ ಕಾಲ ನಿರಂತರವಾಗಿ ಹುಡುಕಿ ಶುಕ್ರವಾರ ಬೆಂಗಳೂರಿಗೆ ಬರಿಗೈಲಿ ವಾಪಾಸಾಗಿದ್ದಾರೆ. ಕೊಲೆ ನಡೆದು 9 ತಿಂಗಳು ಕಳೆದಿರುವುದರಿಂದ ಮೃತದೇಹ ಮಣ್ಣಲ್ಲಿ ಕರಗಿರುವ ಸಾಧ್ಯತೆಯೇ ಹೆಚ್ಚಿದೆ. ಅಲ್ಲದೇ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಹಾಗೂ ಸೀಳು ನಾಯಿಗಳು ಯಥೇಚ್ಛವಾಗಿವೆ. ಪ್ರಾಣಿಗಳು ತಿಂದಿರಬಹುದು. ಇದನ್ನೂ ಓದಿ: ಬೆಂಗಳೂರಿನ ನಾಗರಬಾವಿ ಬಳಿ ಚಿರತೆ ಹೆಜ್ಜೆ

    ಚಾರ್ಮಾಡಿ ಘಾಟ್‌ನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತದೆ. ಇಲ್ಲಿ ಬಿದ್ದ ಮಳೆ ಚಾರ್ಮಾಡಿ ಘಾಟಿಯ ಕಣಿವೆಯಲ್ಲಿ ಹರಿದು ನೇತ್ರಾವತಿ ಸೇರುತ್ತದೆ. 2022ರಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಮಳೆ ಸುರಿದಿದೆ. ಮೃತದೇಹದ ಅವಶೇಷಗಳಿದ್ದರೂ ಕೂಡ ಮಳೆ ನೀರಲ್ಲಿ ಕೊಚ್ಚಿ ಹೋಗಿರುವ ಸಾಧ್ಯತೆ ಇದೆ. ಇದನ್ನೂ ಓದಿ: ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಚಾರ್ಮಾಡಿ ಘಾಟಿಯ ರಸ್ತೆ ಬದಿ ಮಣ್ಣು ಕುಸಿತ – ಘನ ವಾಹನ ಸಂಚಾರ ನಿಷೇಧ ಹೇರಲು ಆಗ್ರಹ

    ಚಾರ್ಮಾಡಿ ಘಾಟಿಯ ರಸ್ತೆ ಬದಿ ಮಣ್ಣು ಕುಸಿತ – ಘನ ವಾಹನ ಸಂಚಾರ ನಿಷೇಧ ಹೇರಲು ಆಗ್ರಹ

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟಿ (Charmadi Ghat) ಸುತ್ತಮುತ್ತ ಮಳೆ ಮುಂದುವರಿದಿದ್ದು, ಭಾರೀ ಗಾಳಿ-ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ರಸ್ತೆ (Road) ಬದಿಯ ಮಣ್ಣು ಕುಸಿದು ಬಿದ್ದಿದೆ.

    ಕೊಟ್ಟಿಗೆಹಾರ ಸಮೀಪದ ಬಿದಿರುತಳ ಎಂಬ ಗ್ರಾಮದಲ್ಲಿ ರಸ್ತೆ ಬದಿಯ ಒಂದು ಭಾಗದ ಮಣ್ಣು ಕುಸಿದು ಬಿದ್ದಿದ್ದು ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿದೆ. ಚಾರ್ಮಾಡಿ ಘಾಟಿಯ ರಸ್ತೆಯ ಒಂದು ಬದಿ ಬೆಟ್ಟ-ಗುಡ್ಡಗಳಿಂದ ಕೂಡಿದ್ದರೆ, ಮತ್ತೊಂದು ಬದಿಯಲ್ಲಿ ಆಳವಾದ ಪ್ರಪಾತವಿದೆ. ಪ್ರಪಾತದ ಬಳಿ ರಸ್ತೆಯ ಮಣ್ಣು ಕುಸಿತಕಂಡು ಕೆಲ ಕಾಲ ಸಂಚಾರ ಅಸ್ತವ್ಯಸ್ತಗೊಂಡಿದೆ. ಆದರೆ, ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಈ ಭಾಗದಲ್ಲಿ ಭಾರೀ ವಾಹನಗಳು ಸಂಚಾರ ಮಾಡಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಲಾಗಿದೆ. ಆದರೆ, ಸ್ಥಳಕ್ಕೆ ಭೇಟಿ ನೀಡಿರುವ ಬಣಕಲ್ ಪೊಲೀಸರು (Police) ರಸ್ತೆ ಕುಸಿದಿರುವ ಜಾಗಕ್ಕೆ ಟೇಪ್ ಹಾಕಿ ಕಲ್ಲುಗಳನ್ನು ಅಡ್ಡವಿಟ್ಟು ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬ್ಯಾನರ್‌ನಲ್ಲಿ ಸಿದ್ದು ಫೋಟೋ ಮಾಯ- ಸಿದ್ದರಾಮಯ್ಯ ಇಲ್ಲಿಗೆ ಬಂದಾಗ ಫೋಟೋ ಹಾಕ್ತಾರೆ: ಡಿಕೆಶಿ

    ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಸುಮಾರು ಗಂಟೆಗೂ ಹೆಚ್ಚು ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಸ್ತೆಗೆ ಮರ ಬಿದ್ದ ಪರಿಣಾಮ ಸುಮಾರು ಒಂದು ಕಿ.ಮೀ. ಹೆಚ್ಚು ಹೊತ್ತು ಟ್ರಾಫಿಕ್ ಜಾಮ್ ಆಗಿತ್ತು. ಬಳಿಕ ಸ್ಥಳೀಯರು ಮರವನ್ನು ತೆರವು ಮಾಡಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಆದರೆ, ಸ್ಥಳೀಯರು ಸರ್ಕಾರ ಮಳೆಗಾಲ ಮುಗಿಯುವವರೆಗೆ ಈ ಭಾಗದಲ್ಲಿ ಭಾರೀ ವಾಹನಗಳಿಗೆ ಸಂಚಾರವನ್ನು ಸಂಪೂರ್ಣ ನಿಷೇಧ ಹೇರಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಪಾರ್ಸೆಲ್ ಮಾಡಿರೋ 10 ದೋಸೆ ನನಗೆ ಬಂದಿಲ್ಲ, ಇದರಲ್ಲೂ ಮೋಸ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಅರಣ್ಯಕ್ಕೆ ಬಿಟ್ಟು ಬಂದರೂ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ ಬಂದ ಕೋತಿ

    ಅರಣ್ಯಕ್ಕೆ ಬಿಟ್ಟು ಬಂದರೂ ಗೊಬ್ಬರದ ಲಾರಿ ಏರಿ ಮತ್ತೆ ಪೇಟೆಗೆ ಬಂದ ಕೋತಿ

    ಚಿಕ್ಕಮಗಳೂರು: ರೇಗಿಸಿದವನ ಮೇಲೆ ದಾಳಿ ಮಾಡಿ ಅವನನ್ನು ಹುಡುಕಿಕೊಂಡು ಆಟೋ ನಿಲ್ದಾಣಕ್ಕೆ ಬಂದು ಸ್ಥಳೀಯರ ಮೇಲೂ ದಾಳಿ ಮಾಡುತ್ತಿದ್ದ ಕೋತಿಯನ್ನು ಸೆರೆಹಿಡಿದು 22 ಕಿ.ಮೀ. ದೂರದ ದಟ್ಟ ಅರಣ್ಯಕ್ಕೆ ಬಿಡಲಾಗಿತ್ತು. ಬಳಿಕ ನಾಲ್ಕೇ ದಿನಕ್ಕೆ ಗೊಬ್ಬರದ ಲಾರಿ ಏರಿ ಕೋತಿ ಮತ್ತೆ ಅದೇ ಜಾಗಕ್ಕೆ ಬಂದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದಿದೆ.

    ಸಾಂದರ್ಭೀಕ ಚಿತ್ರ

    ಸೆಪ್ಟೆಂಬರ್ 16 ರಂದು ಕೊಟ್ಟಿಗೆಹಾರ ಸಮೀಪದ ತುರುವೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿದ್ದ ಕೋತಿಯನ್ನು ಹಿಡಿಯಲು ಹೋದಾಗ ಅರಣ್ಯ ಇಲಾಖೆ ಸಿಬ್ಬಂದಿ ಜೊತೆ ಹೋಗಿದ್ದ ಆಟೋ ಚಾಲಕ ಕೋತಿಗೆ ರೇಗಿಸಿದ್ದರಿಂದ ರೊಚ್ಚಿಗೆದ್ದ ಕೋತಿ ಆತನ ಮೇಲೆ ದಾಳಿ ಮಾಡಿತ್ತು. ಅವನ ಕೈಕಚ್ಚಿ ಸೇಡು ತೀರಿಸಿಕೊಂಡಿತ್ತು. ಬಳಿಕ ಅವನನ್ನು ಹುಡುಕಿಕೊಂಡು ಆಟೋ ನಿಲ್ದಾಣಕ್ಕೆ ಬಂದು ಅವನ ಆಟೋ ಟಾಪ್ ಕಿತ್ತು ಹಾಕಿತ್ತು. ಕೋತಿ ಗಾಬರಿಯಿಂದ ಸ್ಥಳೀಯರ ಮೇಲೂ ದಾಳಿಗೆ ಮುಂದಾಗಿತ್ತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು. 18 ಗಂಟೆ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದು ಕೋತಿಯನ್ನು ಚಾರ್ಮಾಡಿ ಅರಣ್ಯಕ್ಕೆ ಬಿಟ್ಟಿ ಬಂದಿದ್ದರು. ಇದನ್ನೂ ಓದಿ: ಆನೆ ಓಡಿಸಲು ಹೋದ ವ್ಯಕ್ತಿ ನಾಪತ್ತೆ-ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ

    ಕೋತಿಯನ್ನು ಸೆರೆ ಹಿಡಿದು ನಾಲ್ಕು ದಿನ ಕಳೆಯುವುದರೊಳಗೆ ಇದೀಗ ಕೋತಿ ಮತ್ತೆ ಕೊಟ್ಟಿಗೆಹಾರದಲ್ಲಿ ಎಲ್ಲಿ ಸೆರೆಯಾಗಿತ್ತೋ ಅಲ್ಲಿಗೆ ಬಂದು ಕೂತಿದೆ. ಇದರಿಂದ ಸ್ಥಳೀಯರಲ್ಲಿ ಮತ್ತೆ ಆತಂಕ ಮನೆ ಮಾಡಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ವಿವಿಧ ಸಂಘಟನೆಯವರು ಸೇರಿ 18 ಗಂಟೆ ಕಾರ್ಯಾಚರಣೆ ನಡೆಸಿ ಕೋತಿಯನ್ನು ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟು ಬಂದಿದ್ದರು, ಕೋತಿ ಮತ್ತೆ ಗೊಬ್ಬರದ ಲಾರಿ ಏರಿ ಮತ್ತೆ ಕೊಟ್ಟಿಗೆಹಾರಕ್ಕೆ ಬಂದಿದೆ. ಇದನ್ನು ಕಂಡ ಸಾರ್ವಜನಿಕರು ಮತ್ತೆ ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮತ್ತೆ ಕೋತಿಯನ್ನು ಸೆರೆ ಹಿಡಿಯಲು ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಕಿ ಹೊತ್ತಿಕೊಂಡಿದ್ದು ಸಿಲಿಂಡರಿನಿಂದಲ್ಲ- ಯುಪಿಎಸ್, ಮೊಬೈಲ್ ಚಾರ್ಜರ್ ಬಗ್ಗೆ ಶಂಕೆ

  • ಚಾರ್ಮಾಡಿ ಸಂಚಾರ ಬಂದ್- ಕೊಟ್ಟಿಗೆಹಾರದಲ್ಲಿಯೇ ಜನ ಲಾಕ್

    ಚಾರ್ಮಾಡಿ ಸಂಚಾರ ಬಂದ್- ಕೊಟ್ಟಿಗೆಹಾರದಲ್ಲಿಯೇ ಜನ ಲಾಕ್

    ಚಿಕ್ಕಮಗಳೂರು: ಮಲೆನಾಡಲ್ಲಿ ಯಥೇಚ್ಛವಾಗಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಚಾರ್ಮಾಡಿಯಲ್ಲಿ ಯಾವುದೇ ಅನಾಹುತ ಸಂಭವಿಸಬಾರದು ಎಂದು ಜಿಲ್ಲಾಡಳಿತ ಮುಂಜಾಗೃತಾ ಕ್ರಮವಾಗಿ ರಾತ್ರಿ ವೇಳೆ ಚಾರ್ಮಾಡಿ ಸಂಚಾರವನ್ನ ಬಂದ್ ಮಾಡಿದೆ.

    ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಚಾರ್ಮಾಡಿಯಲ್ಲಿ ಯಾವುದೇ ವಾಹನ ಸಂಚಾರ ಮಾಡುವಂತಿಲ್ಲ. ಶುಕ್ರವಾರ ಸಂಜೆಯೇ ಬಂದ್ ಮಾಡಿದ್ದ ಜಿಲ್ಲಾಡಳಿತದ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದರು. ಏಕಾಏಕಿ ಹೀಗೆ ಬಂದ್ ಮಾಡಿದರೆ ನಾವು ದೂರದಿಂದ ಬಂದಿದ್ದೇವೆ ಏನ್ ಮಾಡೋದು ಎಂದು ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದರು. ನಂತರ ಜಿಲ್ಲಾಡಳಿತ ಪ್ರಯಾಣಿಕರ ಅನುಕೂಲಕ್ಕಾಗಿ ರಾತ್ರಿ 10 ಗಂಟೆವರೆಗೂ ಚಾರ್ಮಾಡಿ ಸಂಚಾರಕ್ಕೆ ಅವಕಾಶ ಕಲ್ಪಿಸಿತ್ತು.

    ಶನಿವಾರ ರಾತ್ರಿ ಸಂಚಾರಕ್ಕೆ ಯಾವುದೇ ಅನುಮತಿ ಇರಲಿಲ್ಲ. ಆದರೂ ನೂರಾರು ವಾಹನಗಳು ಕೊಟ್ಟಿಗೆಹಾರಕ್ಕೆ ಬಂದು ಲಾಕ್ ಆಗಿವೆ. ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಬೇಕು. ಮಂಗಳೂರು ಆಸ್ಪತ್ರೆಗೆ ಹೋಗಬೇಕು, ಟಿವಿ ನೋಡಿಲ್ಲ. ಹೋಂ ಸ್ಟೇಗೆ ಹೋಗಿದ್ವಿ ಎಂದು ಹಲವು ಕಾರಣಗಳನ್ನ ಹೇಳಿಕೊಂಡು ಚಾರ್ಮಾಡಿಗೆ ಬಂದಿದ್ದಾರೆ. ಮತ್ತೆ ಕೆಲವರು 7.30ಕ್ಕೆ ಬಂದು ಅರ್ಧ ಗಂಟೆ ಅಷ್ಟೆ ಹೋಗಿಬಿಡುತ್ತೇವೆ ಎಂದು ಪೊಲೀಸರಿಗೆ ದುಂಬಾಲು ಬಿದ್ದಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡಿಲ್ಲ. ಇದನ್ನೂ ಓದಿ: ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಸಂಚಾರ ಬಂದ್

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಸುಮಾರು 150ಕ್ಕೂ ಹೆಚ್ಚು ವಾಹನಗಳು ಸಾಲುಗಟ್ಟಿ ನಿಂತಿವೆ. ಚಾರ್ಮಾಡಿಯಲ್ಲಿ ಉಳಿಯಲು ಲಾಡ್ಜ್ ವ್ಯವಸ್ಥೆ ಇಲ್ಲ. ಲಾಡ್ಜ್ ಬೇಕು ಅಂದ್ರೆ 25 ಕಿ.ಮೀ. ವಾಪಸ್ ಬಂದು ಮೂಡಿಗೆರೆಯಲ್ಲಿ ಉಳಿಯಬೇಕು. ಹಾಗಾಗಿ ಬಹುತೇಕರು ಸಿಕ್ಕಲ್ಲಿ ಕಾರನ್ನ ಸೈಡಿಗೆ ಹಾಕಿ ಕಾರಲ್ಲೇ ನಿದ್ದೆಗೆ ಜಾರಿದ್ದಾರೆ. ಬೆಳಗ್ಗೆ 6 ಗಂಟೆಗೆ ಚಾರ್ಮಾಡಿ ಮೂಲಕ ಹೊರಡಲಿದ್ದಾರೆ. ಆದರೆ ಕೆಲವರು ಗೊತ್ತಿದ್ದು ಹೋಗಿಬಿಡೋಣ ಎಂದು ಬಂದು ಬೀದಿಯಲ್ಲಿ ಮಲಗುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಚಾರ್ಮಾಡಿಯಲ್ಲಿ ಎಲ್ಲೆಂದರಲ್ಲಿ ಪ್ರವಾಸಿಗರ ಡ್ಯಾನ್ಸ್- ವಾಹನ ಸವಾರರಿಗೆ ಕಿರಿಕಿರಿ

  • ಬಂಟ್ವಾಳ-ಚಾರ್ಮಾಡಿ ಹೆದ್ದಾರಿ ಕಾಮಗಾರಿ -“ಭೂಮಿ ನೀಡಿದವರಿಗೆ ಭೂಮಿಯೂ ಇಲ್ಲ, ಪರಿಹಾರನೂ ಇಲ್ಲ”

    ಬಂಟ್ವಾಳ-ಚಾರ್ಮಾಡಿ ಹೆದ್ದಾರಿ ಕಾಮಗಾರಿ -“ಭೂಮಿ ನೀಡಿದವರಿಗೆ ಭೂಮಿಯೂ ಇಲ್ಲ, ಪರಿಹಾರನೂ ಇಲ್ಲ”

    – ಹೆದ್ದಾರಿಗೆ ಬೇಲಿ ಹಾಕಲು ಜನರ ನಿರ್ಧಾರ

    ಮಂಗಳೂರು: ಬಿ.ಸಿ.ರೋಡು-ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದೆ. ಆದರೆ ಹೆದ್ದಾರಿ ಅಗಲೀಕರಣಕ್ಕೆ ಭೂಮಿ ಕೊಟ್ಟ ಜನರಿಗೆ ಪರಿಹಾರ ಮಾತ್ರ ಇನ್ನು ಮರಿಚಿಕೆಯಾಗೇ ಉಳಿದಿದೆ. ಹೀಗಾಗಿ ಆಕ್ರೋಶಗೊಂಡಿರುವ ಸಂತ್ರಸ್ತರು ಹೆದ್ದಾರಿಗೆ ಬೇಲಿ ಹಾಕಿ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ.

    ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳದ ಬಿ.ಸಿರೋಡಿನಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-73 ರಲ್ಲಿ ಬಿ.ಸಿರೋಡ್‍ನಿಂದ ಪುಂಜಾಲಕಟ್ಟೆಯವರೆಗೆ ರಸ್ತೆ ಅಗಲೀಕರಣ ಮಾಡಲಾಗಿದೆ. ಸುಮಾರು 19 ಕಿಲೋ ಮೀಟರ್‍ ನ ರಸ್ತೆ ಅಗಲೀಕರಣ ಕಾಮಗಾರಿಗೆ ಸರ್ಕಾರ 100 ಎಕರೆಗಿಂತ ಹೆಚ್ಚು ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿತ್ತು. ಆದರೆ ಭೂಸ್ವಾಧಿನವಾಗಿ ಮೂರು ವರ್ಷ ಕಳೆದರೂ ಭೂಮಿ ಕಳೆದುಕೊಂಡವರಿಗೆ ಪರಿಹಾರ ಮಾತ್ರ ಇನ್ನು ಸಿಕ್ಕಿಲ್ಲ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಭೂಮಿ ಕೊಟ್ಟ ಜನ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಜುಲೈ 10ರಂದು ತುಳುನಾಡ್ದ ಕಟ್ಟು ಕಟ್ಟಲೆ ವಿಚಾರಗೋಷ್ಠಿ

    ಈಗಾಗಲೇ ರಸ್ತೆ ಕಾಮಗಾರಿ ಪೂರ್ಣವಾಗುತ್ತ ಬಂದಿದೆ. ಇನ್ನೂ ಪರಿಹಾರ ನೀಡದಿರುವುದು ಇಲ್ಲಿನ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಾಧಿಕಾರ ಈಗಾಗಲೇ ಕೇವಲ ಮನೆ ಕಳೆದುಕೊಂಡವರಿಗೆ ಮಾತ್ರ ಪರಿಹಾರ ನೀಡಿ ಕೈ ತೊಳೆದುಕೊಂಡಿದೆ. ಉಳಿದಂತೆ ಕೃಷಿ ಭೂಮಿ, ಇತರ ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ. ಕೇವಲ ಪರಿಹಾರದ ಪತ್ರ ನೀಡಿ ಸಮಾಧಾನ ಪಡಿಸುವ ಕೆಲಸ ಮಾತ್ರ ಮಾಡಿಕೊಂಡು ಬಂದಿದೆ. ಇಲ್ಲಿ ಸುಮಾರು 200ಕ್ಕೂ ಹೆಚ್ಚು ಜನರ ಭೂಸ್ವಾಧೀನ ಆಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡದಿದ್ದರೆ ರಸ್ತೆಗೆ ಬೇಲಿ ಹಾಕುವ ತೀರ್ಮಾನವನ್ನು ಸಂತ್ರಸ್ತರು ಮಾಡಿದ್ದಾರೆ.

    ಪರಿಹಾರ ನೀಡಬೇಕಾದ ಅಧಿಕಾರಿಗಳು ಕೋವಿಡ್‍ನಿಂದ ಆಸ್ಪತ್ರೆ ಸೇರಿರುವ ಕಾರಣ ಪರಿಹಾರ ವಿಳಂಬವಾಗಿದೆ ಎಂಬುದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ವಾದ. ಇಷ್ಟು ವಿಳಂಬ ಆಗಿರುವುದು ಮಾತ್ರ ಯಾರ ನಿರಾಸಕ್ತಿಯಿಂದ ಎಂಬುದು ಗೊತ್ತಿಲ್ಲ. ಒಟ್ಟಿನಲ್ಲಿ ಇನ್ನಾದರೂ ಶೀಘ್ರವಾಗಿ ಪರಿಹಾರದ ಮೊತ್ತ ಜಮೆ ಆಗಲಿ ಎಂಬುದೇ ನಮ್ಮ ಆಶಯ.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಚಾರ್ಮಾಡಿಯಲ್ಲಿ ಕೆಂಪು ಬಸ್ ಸಂಚಾರ ಆರಂಭ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಚಾರ್ಮಾಡಿಯಲ್ಲಿ ಕೆಂಪು ಬಸ್ ಸಂಚಾರ ಆರಂಭ

    – ಮೂರು ದಿನಗಳ ಹಿಂದೆ ವರದಿ ಮಾಡಿದ್ದ ಪಬ್ಲಿಕ್ ಟಿವಿ

    ಚಿಕ್ಕಮಗಳೂರು: ಕಳೆದ ಒಂದೂವರೆ ವರ್ಷದಿಂದ ಬಂದ್ ಆಗಿದ್ದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಮತ್ತೆ ಕೆಂಪು ಬಸ್ ಸಂಚಾರ ಆರಂಭಗೊಂಡಿದ್ದು ಜನರಲ್ಲಿ ಸಂತೋಷ ಮನೆ ಮಾಡಿದೆ.

    2019ರ ಮಳೆಗಾಲದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆ ಸುರಿದಿತ್ತು. ಇದರಿಂದ 22 ಕಿ.ಮೀ‌ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲೆ-ಚಿಕ್ಕಮಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ರಸ್ತೆ ಕುಸಿದಿತ್ತು. ಬೆಟ್ಟಗುಡ್ಡಗಳು ಧರೆಗುರುಳಿದ್ದವು. ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ಸುಮಾರು ಮೂರು ತಿಂಗಳ ಕಾಲ ಈ ಭಾಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು  ನಿಷೇಧಿಸಲಾಗಿತ್ತು.

     

    ದುರಸ್ಥಿಯಾದ ಮೂರು ತಿಂಗಳ ಬಳಿಕ ಮಿನಿ ಬಸ್, ಕಾರು, ಬೈಕ್ಗಳ ಸಂಚಾರಕ್ಕೆ ಮಾತ್ರ ಅವಕಾಶವಿತ್ತು. ಕಳೆದ ಒಂದೂವರೆ ವರ್ಷದಿಂದ ಕೆಂಪು ಬಸ್ ಸಂಚಾರಕ್ಕೆ ಅವಕಾಶವಿರಲಿಲ್ಲ. ಈಗ ರಸ್ತೆ ದುರಸ್ಥಿ ಕಾರ್ಯ ಬಹುತೇಕ ಮುಗಿದಿದ್ದು ಜಿಲ್ಲಾಧಿಕಾರಿ ರಮೇಶ್ ಆರು ಚಕ್ರದ ಲಾರಿ ಹಾಗೂ ಕೆಂಪು ಬಸ್ಸಿನ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇದನ್ನೂ ಓದಿ: ಮುಗಿಯದ ಚಾರ್ಮಾಡಿ ಕಾಮಗಾರಿ- ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

    ಈ ಮಾರ್ಗದಲ್ಲಿ ಅಗತ್ಯವಿರುವ ಕಡೆ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ಯಾವುದೇ ರೀತಿಯ ಅಪಘಾತಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಚಾರ್ಮಾಡಿಯ ಬಹಳಷ್ಟು ಕಡೆ ಭೂಕುಸಿತದಿಂದ ರಸ್ತೆಗೆ ತೀವ್ರವಾದ ಧಕ್ಕೆಯಾಗಿದೆ. ಅತ್ಯಂತ ಜಾಗರೂಕತೆಯಿಂದ ನಿಗದಿತ ವೇಗದ ಮಿತಿಯೊಂದಿಗೆ ವಾಹನಗಳು ಸಂಚರಿಸುವಂತೆ ಸೂಚಿಸಲಾಗಿದೆ.

    ಜನರ ಬದುಕಿನ ದಾರಿ :
    ಜಿಲ್ಲೆ ಸೇರಿದಂತೆ ರಾಜ್ಯದ ಜನ ಚಾರ್ಮಾಡಿ ಘಾಟ್ ಮೇಲೆ ಅವಲಂಬಿತರಾಗಿದ್ದಾರೆ. ಆರೋಗ್ಯ ಸಂಬಂಧಿಸಿದಂತೆ ತುರ್ತು ಸಂದರ್ಭದಲ್ಲಿ ಮಂಗಳೂರು-ಉಡುಪಿ ಹೋಗಲು ಚಾರ್ಮಾಡಿ ಅತ್ಯಂತ ಸಹಾಯಕಾರಿ. ಆದರೆ ಈ ಬಹುಪಯೋಗಿ ರಸ್ತೆ ಸಂಚಾರ ಮುಕ್ತವಾಗದ ಕಾರಣ ಜನರ ಬದುಕಿಗೂ ತೊಂದರೆಯಾಗಿತ್ತು.

     

    ತುರ್ತು ಆರೋಗ್ಯದ ಸಂದರ್ಭದಲ್ಲಿ ಮಂಗಳೂರು, ಉಡುಪಿಗೆ ಹೋಗಲು ಜನ ತೀವ್ರ ತೊದರೆ ಅನುಭವಿಸುತ್ತಿದ್ದರು. ಖಾಸಗಿ ವಾಹನಗಳಿಗೆ ಸಾವಿರಾರು ರೂಪಾಯಿ ಹಣ ನೀಡಿ ಹೋಗಬೇಕಿತ್ತು. ಹಾಗಾಗಿ ಜನ ಕೆಂಪು ಬಸ್ ಗಳ ಸಂಚಾರವನ್ನ ಎದುರು ನೋಡುತ್ತಿದ್ದರು. ಈಗ ಜಿಲ್ಲಾಡಳಿತ ಕೆಂಪು ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಿರುವುದು ಜನಸಾಮಾನ್ಯರಿಗೆ ಅನುಕೂಲವಾಗಿದೆ.

  • ಚಾರ್ಮಾಡಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು, ಸವಾರರ ಪರದಾಟ!

    ಚಾರ್ಮಾಡಿಯಲ್ಲಿ ಸಾಲುಗಟ್ಟಿ ನಿಂತ ವಾಹನಗಳು, ಸವಾರರ ಪರದಾಟ!

    ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುತ್ತಿದ್ದ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರಕ್ಕೆ ಜಿಲ್ಲಾಡಳಿತ ಸಂಪೂರ್ಣ ಬ್ರೇಕ್ ಹಾಕಿತ್ತು. ಆದರೆ ಈ ಮಾಹಿತಿ ತಿಳಿಯದೆ ಬಂದ ಹತ್ತಾರು ವಾಹನಗಳು ಚಾರ್ಮಾಡಿಯಲ್ಲಿ ಸಾಲುಗಟ್ಟಿ ನಿಂತಿವೆ.

    ಚಾರ್ಮಾಡಿ ಹಾಗೂ ಕೊಟ್ಟಿಗೆಹಾರ ಸುತ್ತಮುತ್ತ ಸಾಧಾರಣ ಮಳೆ ಸುರಿಯುತ್ತಿದೆ. ಸುರಿಯುತ್ತಿರುವ ಮಳೆ ಮಧ್ಯೆಯೂ ವಾಹನ ಸವಾರರು ತಮ್ಮ ಊರುಗಳಿಗೆ ತೆರಳಲು ಪರದಾಡುತ್ತಿದ್ದಾರೆ. ಆದರೆ, ಕೊಟ್ಟಿಗೆಹಾರದಲ್ಲಿ ಬೀಡು ಬಿಟ್ಟಿರುವ ಪೊಲೀಸರು ಯಾವುದೇ ವಾಹನಗಳನ್ನು ಮುಂದೆ ತೆರಳಲು ಬಿಡುತ್ತಿಲ್ಲ. ಇದರಿಂದ ವಾಹನ ಸವಾರರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ.

    ಜಿಲ್ಲಾಡಳಿತ ಇಂದು ಬೆಳಗ್ಗೆ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಹಾಕಿ ಆದೇಶ ಹೊರಡಿಸಿತ್ತು. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಚಾರ್ಮಾಡಿಯಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶಿಸಿದ್ದರು. ಆದರೆ ಈ ಮಾಹಿತಿ ತಿಳಿಯದೆ ಬಂದ ವಾಹನ ಸವಾರರು ಕೊಟ್ಟಿಗೆಹಾರದಲ್ಲಿ ಪರದಾಡುವಂತಾಗಿದೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್, ಬಣಕಲ್, ಬಾಳೂರು, ಸುಂಕಸಾಲೆ ಹಾಗೂ ಕೊಟ್ಟಿಗೆಹಾರ ಸೇರಿದಂತೆ ಸುತ್ತಮುತ್ತ ಕಳೆದೊಂದು ವಾರದಿಂದ ಧಾರಾಕಾರ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಪ್ರವಾಸಿಗರಿಗೆ ಹಾಗೂ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಜಿಲ್ಲಾಡಳಿತ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ ಹೇರಿತ್ತು.

    ಕಳೆದ ವರ್ಷ ಈ ಭಾಗದಲ್ಲಿ ಭಾರಿ ಮಳೆಯಿಂದ ಚಾರ್ಮಾಡಿಯಲ್ಲಿ ಸಾಕಷ್ಟು ತೊಂದರೆಯಾಗಿತ್ತು. ಬೆಟ್ಟಗುಡ್ಡಗಳು ಧರೆಗೆ ಉರುಳಿದ್ದವು. ರಸ್ತೆ ಕೂಡ ಕೊಚ್ಚಿ ಹೋಗಿತ್ತು. ಸರ್ಕಾರ ತಿಂಗಳುಗಟ್ಟಲೇ ಈ ಮಾರ್ಗವನ್ನು ದುರಸ್ತಿ ಮಾಡಿತ್ತು. ಈಗ ಮತ್ತೆ ಭಾರೀ ಮಳೆಯಾಗುತ್ತಿರುವುದರಿಂದ ಬೆಟ್ಟಗುಡ್ಡಗಳು ಹಸಿಯಾಗಿದ್ದು ಮತ್ತೆ ಕುಸಿಯುವ ಸಾಧ್ಯತೆಯಿಂದ ಜಿಲ್ಲಾಡಳಿತ ಈ ಮಾರ್ಗದಲ್ಲಿ ರಾತ್ರಿ ಸಂಚಾರಕ್ಕೆ ಬ್ರೇಕ್ ಹಾಕಿತ್ತು. ಆದರೆ ಈ ಆದೇಶ ಗೊತ್ತು-ಗೊತ್ತಿಲ್ಲದೋ ಬಂದ ವಾಹನ ಸವಾರರು ಕೊಟ್ಟಿಗೆಹಾರದ ಬಳಿ ಪರದಾಡುವಂತಾಗಿದೆ.

  • ಚಾರ್ಮಾಡಿ ಸೌಂದರ್ಯಕ್ಕೆ ಜರ್ಮನ್ ಪ್ರಜೆ ಫಿದಾ

    ಚಾರ್ಮಾಡಿ ಸೌಂದರ್ಯಕ್ಕೆ ಜರ್ಮನ್ ಪ್ರಜೆ ಫಿದಾ

    ಚಿಕ್ಕಮಗಳೂರು: ಜರ್ಮನ್ ದೇಶದ ವ್ಯಕ್ತಿ ಭಾರತಕ್ಕೆ ಆಗಮಿಸಿದ್ದು ಮೂರು ತಿಂಗಳುಗಳ ಕಾಲ ದೇಶದಾದ್ಯಂತ ಸಂಚಾರ ಮಾಡಲು ಮುಂದಾಗಿದ್ದಾರೆ. ಹೀಗೆ ಚಿಕ್ಕಮಗಳೂರಿಗೆ ಆಗಮಿಸಿದ ಪ್ರವಾಸಿಗ ಚಾರ್ಮಾಡಿ ಸೌಂದರ್ಯಕ್ಕೆ ಫಿದಾ ಆಗಿದ್ದಾರೆ.

    ದೆಹಲಿಯಿಂದ ಬೆಂಗಳೂರಿಗೆ ಬಂದು ಸ್ನೇಹಿತನ ಬೈಕ್‍ನಲ್ಲಿ ರಾಜ್ಯದ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟು ದೇಶ ಹಾಗೂ ರಾಜ್ಯದ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ಭಾನುವಾರ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರಕ್ಕೆ ಆಗಮಿಸಿದ್ದರು. ಜರ್ಮನಿಯಲ್ಲಿ ಎಂಜಿನಿಯರ್ ಆಗಿರೋ ತೌಬಾ ಕೊಟ್ಟಿಗೆಹಾರದಲ್ಲಿ ಬೈಕ್ ನಿಲ್ಲಿಸಿ ಹೊಟೇಲ್‍ನಲ್ಲಿ ತಿಂಡಿ ಸವಿದಿದ್ದಾರೆ. ಈ ವೇಳೆ ಸ್ಥಳಿಯರೊಂದಿಗೆ ಮಾತನಾಡಿದ ಅವರು ಚಾರ್ಮಾಡಿಯ ಸೌಂದರ್ಯಕ್ಕೆ ಮನಸೋತಿರುವ ಬಗ್ಗೆ ಹೇಳಿಕೊಂಡಿದ್ದಾರೆ.

    ಭಾರತ ಶಾಂತಿಪ್ರಿಯ ಹಾಗೂ ಆತ್ಮೀಯತೆಯ ಗುಣ ಹೊಂದಿರೋ ದೇಶ. ಹೀಗಾಗಿ ನಾನು ಪ್ರತಿ ವರ್ಷ ಭಾರತಕ್ಕೆ ಬಂದು ಬೈಕ್‍ನಲ್ಲಿಯೇ ದೇಶದ ಪ್ರಮುಖ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟು ಇಲ್ಲಿನ ಸೌಂದರ್ಯವನ್ನ ಸವಿಯುತ್ತೇನೆ ಎಂದಿದ್ದಾರೆ.

    ಪ್ರತಿವರ್ಷದಂತೆ ಈ ವರ್ಷವೂ ಸಹ ಮುರುಡೇಶ್ವರ, ಕೊಲ್ಲೂರು, ಗೋಕರ್ಣ, ಶೃಂಗೇರಿ, ಧರ್ಮಸ್ಥಳ ಹಾಗೂ ಹೊರನಾಡಿಗೆ ಭೇಟಿ ನೀಡಲಿದ್ದೇನೆ. ಬಳಿಕ ಬೇಲೂರು-ಹಳೇಬೀಡನ್ನ ನೋಡಿಕೊಂಡು ಮಡಿಕೇರಿಗೆ ಹೋಗುವುದಾಗಿ ವಿದೇಶಿ ಪ್ರಜೆ ತಿಳಿಸಿದರು. ಭಾರತದ ಸಂಸ್ಕೃತಿ ಹಾಗೂ ಸಂಸ್ಕೃತಿಯುತ ಬದುಕು ನಮ್ಮನ್ನ ಆಕರ್ಷಿಸಿದೆ ಎಂದು ಈ ಪುಣ್ಯಭೂಮಿಯನ್ನ ಹಾಡಿ ಹೊಗಳಿದ್ದಾರೆ. ಸ್ಥಳಿಯರು ಕೂಡ ಜರ್ಮನ್ ಪ್ರಜೆ ಕಂಡು ಕುತೂಹಲಭರಿತರಾಗಿ ವೀಕ್ಷಿಸಿ ಮಾತನಾಡಿಸಿದ್ದಾರೆ.

  • ಚಾರ್ಮಾಡಿಯಲ್ಲಿ ಅರಳಿ ನಿಂತ ನೀಲಾಂಜನಿ ಕುರಂಜಿ

    ಚಾರ್ಮಾಡಿಯಲ್ಲಿ ಅರಳಿ ನಿಂತ ನೀಲಾಂಜನಿ ಕುರಂಜಿ

    -12 ವರ್ಷಗಳಿಗೊಮ್ಮೆ ಅರಳುವ ಹೂವು

    ಚಿಕ್ಕಮಗಳೂರು: ಹೂ ಚೆಲುವೆಲ್ಲಾ ನಂದೆಂದಿತು ಅನ್ನೋ ಹಾಡು ಕಾಫಿನಾಡಿನಲ್ಲಿ ಅಕ್ಷರಶಃ ಸತ್ಯವಾಗಿದೆ. ಜಗತ್ತಿನ ಸೌಂದರ್ಯವನ್ನೆಲ್ಲಾ ತನ್ನಲ್ಲೇ ಹುದುಗಿಸಿಕೊಂಡಿರೋ ಪ್ರಕೃತಿಯ ಸಿರಿತನದೆದುರು ಉಳಿದದೆಲ್ಲವು ನಶ್ವರವೇ ಸರಿ ಎನಿಸುವಂತೆ ಕಾಫಿನಾಡಲ್ಲಿ ಅಪರೂಪದ ಹೂವೊಂದು ಅರಳಿ ನಿಂತು, ಇಲ್ಲಿನ ಪ್ರಕೃತಿ ಸೌಂದರ್ಯದ ಶ್ರೀಮಂತಿಕೆಯನ್ನ ಇಮ್ಮಡಿಗೊಳಿಸಿದೆ.

    ಹೌದು. 12 ವರ್ಷಗಳಿಗೊಮ್ಮೆ ಅರಳುವ ಕುರಂಜಿ ಹೂವು ಕಾಫಿನಾಡಿನ ಸೌಂದರ್ಯದ ದಿಕ್ಕನ್ನೇ ಬದಲಿಸಲಿದೆ. ಕಣ್ಣು ಹಾಯಿಸಿದಲೆಲ್ಲ ಕಾಣೋ ಅಪರೂಪದ ಕುರಂಜಿ ನೋಡುಗರ ಕಣ್ಮನ ಸೆಳೆಯೋದರ ಜೊತೆಗೆ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.

    ಮುಂಗಾರು ಮಳೆಯಿಂದಾಗಿ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಅನುಪಮ ಸೌಂದರ್ಯ ತುಂಬಿಕೊಂಡಿದೆ. ಅದರಲ್ಲೂ, 12 ವರ್ಷಗಳಿಗೊಮ್ಮೆ ಅರಳೋ ಕುರಂಜಿಯಿಂದಾಗಿ ಚಂದ್ರದ್ರೋಣ ಪರ್ವತ, ದೇವರ ಮನೆ ಬೆಟ್ಟ, ಚಾರ್ಮುಡಿ ಬೆಟ್ಟ ಸೇರಿದಂತೆ ಕಾಫಿನಾಡ ಬೆಟ್ಟಗುಡ್ಡಗಳು ಎಲ್ಲರ ಕಣ್ಮನ ಸೆಳೆಯುತ್ತಿದೆ. ಕಣ್ಣು ಹಾಯಿಸಿದಷ್ಟು ದೂರ ನೀಲಾಂಜಲಿಯೇ ಕಾಣುತ್ತಿದ್ದು, ಇದನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡೇ ಚಿಕ್ಕಮಗಳೂರಿನತ್ತ ಹರಿದು ಬರುತ್ತಿದೆ.

    ಧಾರ್ಮಿಕ ಇತಿಹಾಸ ಹೊಂದಿರೋ ಈ ಹೂವು ಅರಳಿದ ಕೂಡಲೇ ಸುಬ್ರಹ್ಮಣ್ಯ ದೇವರಿಗೆ ಅರ್ಪಿಸುತ್ತಾರೆ. ಮಳೆ, ಗಾಳಿ, ನೀರು, ಬೆಳಕು ಹಾಗೂ ಪ್ರಕೃತಿಯ ಸಮತೋಲನವಾಗಿದ್ದಾಗ ಮಾತ್ರ ಕುರಂಜಿ ಅರಳುತ್ತೆ. ಇದಕ್ಕೆ ಗುರ್ಗಿ ಅನ್ನೋ ಹೆಸರು ಕೂಡ ಇದ್ದು, ಇದರಲ್ಲಿ ನಾನಾ ವಿಧಗಳಿವೆ. 5, 7, 12, 14 ವರ್ಷಗಳಿಗೆ ಅರಳೋ ಪ್ರಭೇದದ ಹೂವುಗಳೂ ಇವೆ. ಈ ಹೂವುಗಳು ಅರಳಿದಾಗ ಕಾಂಡದಲ್ಲಿ ಔಷಧಿಯ ಗುಣಗಳನ್ನು ಹೊಂದಿರುತ್ತದೆ. ಹೀಗಾಗಿ ನಾನಾ ಕಾಯಿಲೆಗೂ ಇದನ್ನು ಬಳಸುತ್ತಾರೆ. ವರುಣನ ಆರ್ಭಟಕ್ಕೆ ಪ್ರವಾಹ, ಭೂಕುಸಿತದಿಂದ ಭೀತಿಗೊಂಡಿರೋ ಕಾಫಿನಾಡಿನ ಜನ ಈಗ ಕುರಂಜಿ ನೋಡಿ ಮಂದಸ್ಮಿತರಾಗ್ತಿದ್ದಾರೆ.