Tag: ಚಿಕಿತ್ಸೆ

  • ಖ್ಯಾತ ನಟ ಧರ್ಮೇಂದ್ರಗೆ ಅನಾರೋಗ್ಯ: ಅಮೆರಿಕಾದಲ್ಲಿ ಚಿಕಿತ್ಸೆ

    ಖ್ಯಾತ ನಟ ಧರ್ಮೇಂದ್ರಗೆ ಅನಾರೋಗ್ಯ: ಅಮೆರಿಕಾದಲ್ಲಿ ಚಿಕಿತ್ಸೆ

    ಬಾಲಿವುಡ್ ಖ್ಯಾತ ನಟ ಧರ್ಮೇಂದ್ರಗೆ (Dharmendra) ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರನ್ನು ಅಮೆರಿಕಾಗೆ (America) ಕರೆದುಕೊಂಡು ಹೋಗಲಾಗಿದೆ. ಸ್ವತಃ ಧರ್ಮೇಂದ್ರ ಅವರ ಪುತ್ರ ಸನ್ನಿ ಡಿಯೋಲ್ ಅವರೇ ತಂದೆಯನ್ನು ಅಮೆರಿಕಾಗೆ ಕರೆದುಕೊಂಡು ಹೋಗಿ ಚಿಕಿತ್ಸೆ (Treatment) ಕೊಡಿಸುತ್ತಿದ್ದಾರೆ. 87ರ ವಯಸ್ಸಿನ ಧರ್ಮೆಂದ್ರ ಅವರು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

    ಅಮೆರಿಕಾದಲ್ಲಿ ಧರ್ಮೆಂದ್ರ ಮತ್ತು ಪುತ್ರ ಸನ್ನಿ ಡಿಯೋಲ್ 20 ದಿನಗಳ ಕಾಲ ಇರಲಿದ್ದಾರಂತೆ. ತಂದೆಯನ್ನು ಗುಣಪಡಿಸಿಕೊಂಡೇ ಸನ್ನಿ ವಾಪಸ್ಸು ಭಾರತಕ್ಕೆ ಆಗಮಿಸಲಿದ್ದಾರೆ ಎಂದು  ಮಾಹಿತಿ ಸಿಕ್ಕಿದೆ. ಹಾಗಂತ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

    ರಾಜಕಾರಣದ ಬಗ್ಗೆ ಸನ್ನಿ ಬೇಸರ

    ದರ್ 2′ (Gadar 2) ಸಕ್ಸಸ್ ನಂತರ ಸನ್ನಿ ಡಿಯೋಲ್‌ಗೆ (Sunny Deol) ಭರ್ಜರಿ ಆಫರ್ಸ್ ಬರುತ್ತಿದೆ. ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಮುಂದಿನ 2024ರ ಚುನಾವಣೆ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ರಂಗದ ವಿಚಾರವಾಗಿ ತಮ್ಮ ನಿಲುವೇನು? ಎಂದು ಮಾತನಾಡಿದ್ದಾರೆ.  ಸಂಸತ್ತಿನಲ್ಲಿ ಹಾಜರಿ ಕಡಿಮೆ ಇರುವುದು ಮತ್ತು 2024ರ ಚುನಾವಣೆ (Politics) ಬಗ್ಗೆ ನಟ ಸನ್ನಿ ಡಿಯೋಲ್‌ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಅವರು ನೇರವಾಗಿ ಉತ್ತರಿಸಿದ್ದಾರೆ. ಸಂಸತ್ತಿಗೆ ಹೋಗೋದು ನಿಜವಾಗಿಯೂ ಕಡಿಮೆಯಾಗಿದೆ. ನಾನು ರಾಜಕೀಯಕ್ಕೆ ಬಂದಾಗ, ಇದು ನನ್ನ ಪ್ರಪಂಚವಲ್ಲ ಎಂದು ನಾನು ಅರಿತುಕೊಂಡೆ ಎಂದಿದ್ದಾರೆ.

    ನಾನು ನನ್ನ ಕ್ಷೇತ್ರಕ್ಕಾಗಿ ಕೆಲಸ ಮಾಡುತ್ತಿದ್ದೇನೆ. ಮುಂದೆಯೂ ಅದನ್ನು ಮಾಡುತ್ತೇನೆ. ಒಂದೊಮ್ಮೆ ನಾನು ಸಂಸತ್ತಿಗೆ ಹೋದರೂ, ಹೋಗದಿದ್ದರೂ ಅದು ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸದ ಮೇಲೆ ಪರಿಣಾಮ ಬೀರುವುದಿಲ್ಲ. ನಾನು ಸಂಸತ್ತಿಗೆ ಹೋದಾಗ ಸಮಸ್ಯೆಗಳನ್ನು ಎದುರಿಸುತ್ತೇನೆ. ನಟನಾಗಿ ನೀವು ಎಲ್ಲಿಗೆ ಹೋದರೂ ಜನರು ನಿಮ್ಮನ್ನು ಗುರುತಿಸುತ್ತಾರೆ. ಪ್ರೀತಿಯಿಂದ ಮಾತನಾಡಿಸುತ್ತಾರೆ. ನನ್ನ ಕ್ಷೇತ್ರಕ್ಕೆ ನಾನು ಮಾಡಿದ ಕೆಲಸಗಳ ಪಟ್ಟಿ ನನ್ನ ಬಳಿ ಇದೆ. ಮಾಡಿದ ಕೆಲಸವನ್ನು ಪ್ರಚಾರ ಮಾಡುವುದರಲ್ಲಿ ನನಗೆ ಆಸಕ್ತಿ ಇಲ್ಲ. ರಾಜಕೀಯ ನನಗೆ ಸರಿಹೊಂದದ ವೃತ್ತಿ ಎಂದಿದ್ದಾರೆ.

     

    2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೀರೇ ಎಂದು ಎದುರಾದ ಪ್ರಶ್ನೆಗೆ ನಾಜುಕಾಗಿ ನಟ ಉತ್ತರಿಸಿದ್ದಾರೆ. ಅದಕ್ಕೆ ಇಲ್ಲ ಎನ್ನುವ ಉತ್ತರ ಬಂದಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನಿಮ್ಮ ಬಳಿ ಸ್ಪರ್ಧೆ ಮಾಡುವಂತೆ ಕೇಳಿದರೆ ಏನು ಮಾಡುತ್ತೀರಿ ಎಂದೂ ಕೇಳಲಾಯಿತು. ಸಿನಿಮಾ ಮೂಲಕ ನಾನು ದೇಶ ಸೇವೆ ಮಾಡುತ್ತಿದ್ದೇನೆ ಎಂಬುದು ಮೋದಿ ಅವರಿಗೂ ತಿಳಿದಿದೆ ಎಂದಿದ್ದಾರೆ. ಈ ಮೂಲಕ ನನಗೆ ರಾಜಕೀಯ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

    ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶ

    ಬೆಂಗಳೂರು: ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ 3 ದಿನಗಳಿಂದ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

    ಬಿಹಾರ ಮೂಲದ ನೋವಾಕುಮಾರಿ (25) ಮೃತ ಮಹಿಳೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಆರ್ಮೋರ್ ಪ್ಲಾಸ್ಟಾ ಮೆಡಿ ಡಿವೈಸ್ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದರು. ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅತ್ತಿಬೆಲೆ ಸಮೀಪದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಸೋಮವಾರ ಅವರನ್ನು ಆಪರೇಶನ್ ಥಿಯೇಟರ್‌ಗೆ ಕರೆದುಕೊಂಡು ಹೋಗಿ 2 ಗಂಟೆಗಳ ಬಳಿಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?

    3 ದಿನ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಇದೀಗ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಆಗಮಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆ ಸಿಗದೇ ಭೀಮನ ನರಳಾಟ

    ಶಾರ್ಪ್ ಶೂಟರ್ ವೆಂಕಟೇಶ್ ಸಾವಿನ ಬಳಿಕ ಚಿಕಿತ್ಸೆ ಸಿಗದೇ ಭೀಮನ ನರಳಾಟ

    – ಭೀಮ ಬದುಕೋದು ಕಷ್ಟ ಎನ್ನುತ್ತಿದ್ದಾರೆ ಸ್ಥಳೀಯರು

    ಹಾಸನ: ಶಾರ್ಪ್ ಶೂಟರ್ ವೆಂಕಟೇಶ್ (Sharp Shooter Venkatesh) ಸಾವಿನ ಬಳಿಕ ಗಾಯಗೊಂಡಿದ್ದ ಆನೆ ಭೀಮ (Elephant Bheema) ಚಿಕಿತ್ಸೆ ಸಿಗದೇ ನರಳಾಡುತ್ತಿದೆ.

    ಆಗಸ್ಟ್ 31 ರಂದು ಭೀಮನಿಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆ ವೇಳೆಯೇ ವೆಂಕಟೇಶ್ ಮೇಲೆ ಆನೆ ದಾಳಿ ನಡೆಸಿದ್ದು, ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದರು. ವೆಂಕಟೇಶ್ ಸಾವಿನ ಬಳಿಕ ಅರಣ್ಯ ಇಲಾಖೆ ಭೀಮನಿಗೆ ಚಿಕಿತ್ಸೆ ನೀಡುವ ಕಾರ್ಯಾಚರಣೆಯನ್ನೇ ಕೈಬಿಟ್ಟಿದೆ.

    ಇದೀಗ ಭೀಮನಿಗೆ ಆಗಿರುವ ಗಾಯ ಉಲ್ಬಗೊಂಡಿದ್ದು ಓಡಾಡಲು ಸಾಧ್ಯವಾಗದೇ ಒಂದೆಡೆಯೇ ನಿಲ್ಲುತ್ತಿದೆ. ಕಾಡಾನೆಯ ಬೆನ್ನಿನ ಹಿಂಭಾಗದಲ್ಲಿ ಗಾಯ ಕೊಳೆಯುತ್ತಿದ್ದು, ಚಿಕಿತ್ಸೆ ನೀಡದಿದ್ದರೆ ಭೀಮ ಬದುಕುವುದು ಕಷ್ಟ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವ್ಯಾನ್‌ಗೆ ಲಾರಿ ಡಿಕ್ಕಿ: 7 ಮಹಿಳೆಯರ ದುರ್ಮರಣ

    ಭೀಮನನ್ನು ಉಳಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಲಾಗಿದ್ದು, ಭೀಮನಿಗೆ ಶೀಘ್ರವೇ ಚಿಕಿತ್ಸೆ ನೀಡುವಂತೆ ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಕುಂಬ್ಳೆಗೂ ತಟ್ಟಿದ ಬೆಂಗಳೂರು ಬಂದ್ ಬಿಸಿ – ಬಿಎಂಟಿಸಿಯಲ್ಲಿ ಪ್ರಯಾಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ತನ ಕ್ಯಾನ್ಸರ್ ಬರಲು ಕಾರಣಗಳೇನು..?- ಚಿಕಿತ್ಸೆ ಹೇಗೆ..?

    ಸ್ತನ ಕ್ಯಾನ್ಸರ್ ಬರಲು ಕಾರಣಗಳೇನು..?- ಚಿಕಿತ್ಸೆ ಹೇಗೆ..?

    ಹಿಳೆಯರ ಅಂದವನ್ನು ಕಾಪಾಡುವಲ್ಲಿ ಸ್ತನಗಳು ಪ್ರಮುಖ ಪಾತ್ರ ವಹಿಸುತ್ತವೆ. ಆದರೆ ಈ ಸ್ತನಗಳಿಗೂ ಮಾರಕ ಕಾಯಿಲೆ ಕ್ಯಾನ್ಸರ್ ವಕ್ಕರಿಸುತ್ತದೆ. ಹೌದು. ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಮಾರಕ ಕಾಯಿಲೆಗಳಲ್ಲಿ ಸ್ತನ ಕ್ಯಾನ್ಸರ್ (Breast Cancer) ಕೂಡ ಒಂದಾಗಿದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಈ ರೋಗವು ಹೆಚ್ಚಾಗಿ ಕಂಡುಬರುತ್ತಿದೆ. ಸುಮಾರು 8 ಮಹಿಳೆಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್‍ಗೆ ಒಳಗಾಗುತ್ತಾರೆ. ಇದು ಒಂದು ಅಥವಾ ಎರಡು ಸ್ತನಗಳ ಮೇಲೆಯೂ ಪರಿಣಾಮ ಬೀರಬಹುದು. ಇದು ಸ್ತನದ ವಿವಿಧ ಭಾಗಗಳಲ್ಲಿ ಸಂಭವಿಸಬಹುದು ಮತ್ತು ಇದು ಸ್ತನದಲ್ಲಿ ಸಂಭವಿಸುವ ಅಸಹಜ ಬೆಳವಣಿಗೆಯಾಗಿದ್ದು ಅದು ಹರಡಲೂಬಹುದು.

    ಕೆಲವು ಮಹಿಳೆಯರು ವಯಸ್ಸಾದ್ರೂ ಯಂಗ್ ಆಂಡ್ ಬ್ಯೂಟಿಫುಲ್ ಆಗಿ ಕಾಣಲು ಪಾಶ್ಚಿಮಾತ್ಯ ಡಯಟ್ ಪ್ಲಾನ್ ಮೊರೆ ಹೋಗುತ್ತಿದ್ದು, ಇದೇ ಈಗ ಮಾರಕ ಕಾಯಿಲೆಗೆ ಕಾರಣವಾಗುತ್ತಿದೆ ಎಂಬ ಆತಂಕಕಾರಿ ವಿಚಾರವೊಂದು ಬಯಲಾಗಿದೆ. ಗ್ರಾಮೀಣ ಭಾಗದ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಬಗ್ಗೆ ಇರುವ ಮೂಡನಂಭಿಕೆ ಹಾಗೂ ತಿಳುವಳಿಕೆ ಕೊರತೆ ಕೂಡಾ ಸ್ತನ ಕ್ಯಾನ್ಸರ್ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಸಾಕಷ್ಟು ಮಹಿಳೆಯರು ಕೊನೆಯ ಹಂತದಲ್ಲಿ ಸ್ತನ ಕ್ಯಾನ್ಸರ್ ಬೆಳಕಿಗೆ ಬಂದು ಸಾವಿಗೆ ಕಾರಣರಾಗುತ್ತಿದ್ದಾರೆ.

    ಸಿಲಿಕಾನ್ ಸಿಟಿಯಲ್ಲಿ ಕಳೆದ ವರ್ಷಗಳಿಂದ ಸ್ತನ ಕ್ಯಾನ್ಸರ್ ಪ್ರಕರಣ ಏರಿಕೆಯಾಗುತ್ತಿದ್ದು, ಈ ಸಂಬಂಧ ಬಗ್ಗೆ ಕಿದ್ವಾಯಿ ಆಸ್ಪತ್ರೆಯ ವೈದ್ಯರು ಅಚ್ಚರಿಯ ಮಾಹಿತಿಯೊಂದನ್ನು ಹೊರಹಾಕಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನ ಮಹಿಳೆಯರಲ್ಲಿ ಕೊರೊನಾಕ್ಕೂ ಮೊದಲು ವರ್ಷಕ್ಕೆ 700 ರಿಂದ 750 ಸ್ತನ ಕ್ಯಾನ್ಸರ್ ಪತ್ತೆಯಾಗುತ್ತಿತ್ತು. ಆದರೆ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 1012 ಕೇಸ್ ಕಾಣಿಸಿಕೊಂಡಿದೆ. ಅದರಲ್ಲೂ ಹೆಚ್ಚಾಗಿ ಮಧ್ಯವಯಸ್ಸಿನ ಮಹಿಳೆಯರು 3ನೇ ಹಂತ ಅಥವಾ 4ನೇ ಹಂತ ಸ್ಥಿತಿಗಳಲ್ಲಿ ಸ್ತನದ ಕ್ಯಾನ್ಸರ್ ಪತ್ತೆಯಾಗ್ತೀರೊದು ಸಾಕಷ್ಟು ಸಾವಿಗೆ ಕಾರಣವಾಗುತ್ತಿದೆ. ಹೀಗಾಗಿ ಮಹಿಳೆಯರು ಪ್ರತಿ ತಿಂಗಳು ಒಂದು ಸರಿ ತಮ್ಮನ್ನು ತಾವು ಪರೀಕ್ಷೆ ಮಾಡಿಕೊಳ್ಳುವುದು ಉತ್ತಮ ಅವಶ್ಯ ಎಂದು ಹೇಳಿದ್ದಾರೆ.

    ಸ್ತನ ಕ್ಯಾನ್ಸರ್‌ಗೆ ಕಾರಣಗಳೇನು..?
    * ಮಹಿಳೆಯರಲ್ಲಿ ಹೆಚ್ಚಾದ ಮದ್ಯಪಾನ ಹಾಗೂ ಧೂಮಪಾನ
    * ಪಾಶ್ಚಿಮಾತ್ಯ ಜೀವನ ಶೈಲಿ ಹಾಗೂ ಡಯಟ್ ಪ್ಲಾನ್
    * ಅತಿ ಬೇಗನೇ ಋತುಸ್ರಾವ
    * ತಡವಾದ ಋತುಬಂಧ
    * ಸಂತಾನೋತ್ಪತ್ತಿ ಅಂಶಗಳು
    * ಗರ್ಭನಿರೋಧಕ ಬಳಕೆ
    * ಹಾರ್ಮೋನು ಬದಲಾವಣೆಯ ಚಿಕಿತ್ಸೆ
    * ಬೊಜ್ಜು, ತೂಕ ಹೆಚ್ಚಾಗುವುದು ಹಾಗೂ ಕೊಬ್ಬಿನ ಅಂಶ ಈ ಎಲ್ಲವುಗಳು ಸ್ತನ ಕ್ಯಾನ್ಸರ್‍ಗೆ ಕಾರಣವಾಗಿರುತ್ತದೆ.

    ಪೌಷ್ಟಿಕಾಂಶದ ಅಂಶಗಳಲ್ಲಿ, ತೂಕ ಹೆಚ್ಚಾಗುವುದು ಮತ್ತು ಹೆಚ್ಚಿನ ಕ್ಯಾಲೋರಿ ಸೇವನೆಯು ಸ್ತನ ಕ್ಯಾನ್ಸರ್ ಬೆಳವಣಿಗೆಗೆ ಎರಡು ಕಾರಣಗಳಾಗಿವೆ. 1940 ರಲ್ಲಿ ಮೊದಲ ಬಾರಿಗೆ, ಕೊಬ್ಬಿನ ಹೆಚ್ಚಿನ ಬಳಕೆಯು ಪ್ರಾಣಿಗಳಲ್ಲಿ ಸ್ತನ ಗೆಡ್ಡೆಗೆ ಕಾರಣವಾಗುತ್ತದೆ ಎಂದು ಕೆಲ ಸಂಶೋಧನೆಗಳು ತೋರಿಸಿವೆ. ಒಂದೆಡೆ ಕ್ಯಾಲೋರಿ ಸೇವನೆಯು ತೂಕ ಹೆಚ್ಚಳ ಮತ್ತು ಸ್ಥೂಲಕಾಯತೆಗೆ ಕಾರಣವಾಗುತ್ತದೆ, ಮತ್ತೊಂದೆಡೆ ಇದು ಬಾಲ್ಯದಲ್ಲಿ ಎತ್ತರವನ್ನು ಹೆಚ್ಚಿಸುತ್ತದೆ ಮತ್ತು ಪ್ರಸವಪೂರ್ವ ಋತುಬಂಧಕ್ಕೆ ಕಾರಣವಾಗುತ್ತದೆ.

    ಆರಂಭಿಕ ಲಕ್ಷಣಗಳು:
    * ಒಂದು ಅಥವಾ ಎರಡೂ ಸ್ತನಗಳಲ್ಲಿ ಊತ ಅಥವಾ ಕೆಂಪಾಗುವಿಕೆಯಂತಹ ಸ್ಪಷ್ಟ ವ್ಯತ್ಯಾಸಗಳು
    * ಸ್ತನಗಳ ಗಾತ್ರ ಅಥವಾ ಆಕಾರದಲ್ಲಿ ಬದಲಾವಣೆ
    * ಒಂದು ಅಥವಾ ಎರಡೂ ಮೊಲೆತೊಟ್ಟುಗಳ ಹಿಂತೆಗೆದುಕೊಳ್ಳುವಿಕೆ
    * ಎದೆ ಹಾಲು ಹೊರತುಪಡಿಸಿ ನಿಪ್ಪಲ್ ಡಿಸ್ಚಾರ್ಜ್
    * ಸ್ತನಗಳಲ್ಲಿ / ಸುತ್ತಲೂ ಅಸಾಮಾನ್ಯ ನೋವು
    * ಸ್ತನದ ಮೇಲೆ ಅಥವಾ ಒಳಗೆ ಗಂಟುಗಳು ಅಥವಾ ಊತಗಳು

    ಚಿಕಿತ್ಸೆ ಹೇಗೆ..?
    * ಸ್ತನ ಗೆಡ್ಡೆಯನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆ
    * ಸ್ತನ ಮತ್ತು ಸುತ್ತಮುತ್ತಲಿನ ಅಂಗಾಂಶಗಳಲ್ಲಿ ಮರುಕಳಿಸುವ ಅಪಾಯವನ್ನು ಕಡಿಮೆ ಮಾಡಲು ವಿಕಿರಣ ಚಿಕಿತ್ಸೆ
    * ಕ್ಯಾನ್ಸರ್ ಕೋಶಗಳನ್ನು ಕೊಲ್ಲಲು ಮತ್ತು ಹಾರ್ಮೋನ್ ಚಿಕಿತ್ಸೆಗಳು, ಕೀಮೋಥೆರಪಿ ಅಥವಾ ಉದ್ದೇಶಿತ ಜೈವಿಕ ಚಿಕಿತ್ಸೆಗಳು ಸೇರಿದಂತೆ ಹರಡುವಿಕೆಯನ್ನು ತಡೆಯಲು ಔಷಧಿಗಳು.

    ಒಟ್ಟಿನಲ್ಲಿ ಸ್ತನದ ಕ್ಯಾನ್ಸರ್ ಇಷ್ಟು ಗಂಭೀರ ಸಮಸ್ಯೆಯಾಗಿರುವುದರಿಂದ ಪ್ರತಿ ವರ್ಷ ಅಕ್ಟೋಬರ್ ತಿಂಗಳನ್ನು ಸ್ತನ ಕ್ಯಾನ್ಸರ್ ಜಾಗೃತಿಯ ಮಾಸವೆಂದು ಆಚರಿಸಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕ್ಯಾನ್ಸರ್‌ ಭಯ ಬೇಡ – ಕಿಮೋಥೆರಪಿ ಎಂದರೇನು? ಅದು ಹೇಗೆ ಕೆಲಸ ಮಾಡುತ್ತೆ?

    ಕ್ಯಾನ್ಸರ್‌ ಭಯ ಬೇಡ – ಕಿಮೋಥೆರಪಿ ಎಂದರೇನು? ಅದು ಹೇಗೆ ಕೆಲಸ ಮಾಡುತ್ತೆ?

    ಕ್ಯಾನ್ಸರ್‌ (Cancer) ಎಂಬ ಮಹಾಮಾರಿ ರೋಗ ಸದ್ಯ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಕಾಡುತ್ತಿದೆ. ಕೆಲವು ಮಕ್ಕಳಿಗೆ ಹುಟ್ಟಿದ ಕೆಲವು ದಿನಗಳು, ತಿಂಗಳಲ್ಲಿ ಕ್ಯಾನ್ಸರ್‌ ರೋಗ ಅಂಟಿಕೊಂಡರೆ ಇನ್ನುಳಿದವರಿಗೆ ಯಾವಾಗ ಬರುತ್ತದೆ? ಹೇಗೆ ಬರುತ್ತದೆ ಎಂಬುದನ್ನು ಹೇಳಲು ಅಸಾಧ್ಯ. ಕ್ಯಾನ್ಸರ್‌ ರೋಗದಲ್ಲಿ ಅನೇಕ ರೀತಿಯ ವಿಧಗಳಿದ್ದು, ನಾಲ್ಕು ಹಂತಗಳಲ್ಲಿರುತ್ತದೆ. ಈ ರೋಗ ಮೊದಲನೆಯ ಹಂತ ಮತ್ತು ಎರಡನೆಯ ಹಂತದಲ್ಲಿದ್ದರೆ ಅದನ್ನು ಆಪರೇಷನ್‌ ಅಥವಾ ಔಷಧಿಗಳ ಮೂಲಕ ಸರಿಪಡಿಸಬಹುದು ಎಂದು ಡಾಕ್ಟರ್‌ ಹೇಳುತ್ತಾರೆ. ಕ್ಯಾನ್ಸರ್‌ ರೋಗಿಗಳಿಗೆ ಕಿಮೋಥೆರಪಿ (Chemotherapy) ಎಂಬ ಚಿಕಿತ್ಸೆಯನ್ನು ನೀಡುತ್ತಾರೆ ಎಂಬುದನ್ನು ನೀವೆಲ್ಲರೂ ತಿಳಿದಿರಬಹುದು. ಆದರೆ ಇದು ಮಾನವ ದೇಹದಲ್ಲಿ ಹೇಗೆ ಕೆಲಸ ಮಾಡುತ್ತದೆ ಎನ್ನುವುದರ ಬಗ್ಗೆ ಇಲ್ಲಿ ವಿವರ ನೀಡಲಾಗಿದೆ.

    ಕಿಮೋಥೆರಪಿ ಎಂದರೆ ಮಾನವ ದೇಹದಲ್ಲಿ ಉಂಟಾಗುವ ಕ್ಯಾನ್ಸರ್‌ ಜೀವಕೋಶವನ್ನು ನಾಶಪಡಿಸಲು ಬಳಸುವ ಒಂದು ಔಷಧಿಯಾಗಿದೆ. ಈ ಚಿಕಿತ್ಸೆಯನ್ನು ನೀಡುವುದರಿಂದ ದೇಹದಲ್ಲಿ ಕ್ಯಾನ್ಸರ್‌ ಕೋಶ ಬೆಳೆಯದಂತೆ ಹಾಗೂ ಕೋಶ ಬೆಳೆದು ವಿಭಜನೆಯಾಗದಂತೆ ಕಿಮೋಥೆರಪಿ ತಡೆಗಟ್ಟುತ್ತದೆ. ಇದು ರಕ್ತದ ಮುಖಾಂತರ ಮಾನವ ದೇಹಕ್ಕೆ ಹೊಕ್ಕು, ದೇಹದ ಎಲ್ಲಾ ಭಾಗವನ್ನು ಆವರಿಸಿಕೊಳ್ಳುತ್ತದೆ. ಕಿಮೋಥೆರಪಿಯಲ್ಲಿ ಅನೇಕ ರೀತಿಯ ವಿಧಗಳಿವೆ. ಈ ಚಿಕಿತ್ಸೆಗೆ ಬಳಸುವ ಔಷಧಿಗಳು ಪವರ್‌ಫುಲ್‌ ಆಗಿದ್ದು ಕ್ಯಾನ್ಸರ್‌ ಕೋಶಗಳ ವಿರುದ್ಧ ಹೋರಾಡುತ್ತದೆ. ಕ್ಯಾನ್ಸರ್‌ ಜೀವಕೋಶಗಳು ಅತಿವೇಗವಾಗಿ ಮಾನವ ದೇಹದಲ್ಲಿ ಹರಡಿಕೊಳ್ಳುತ್ತದೆ. ಆದ್ದರಿಂದ ಕಿಮೋಥೆರಪಿ ಇದನ್ನು ತಡೆಗಟ್ಟುವಲ್ಲಿ ಅತ್ಯಂತ ಸಹಕಾರಿಯಾಗಿದೆ.

    ಕಿಮೋಥೆರಪಿ ಚಿಕಿತ್ಸೆ ರಕ್ತದ ಮೂಲಕ ಇಡೀ ದೇಹವನ್ನು ಆವರಸಿಕೊಳ್ಳುವ ಸಂದರ್ಭ ಸಾಮಾನ್ಯ ಜೀವಕೋಶಗಳಿಗೆ ಹಾನಿಯುಂಟಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಇದರಿಂದಾಗಿ ಕ್ಯಾನ್ಸರ್‌ ರೋಗಿ ಹಲವು ಅಡ್ಡ ಪರಿಣಾಮವನ್ನು ಎದರಿಸುತ್ತಾರೆ. ಅಂದರೆ ಕಿಮೋಥೆರಪಿ ಚಿಕಿತ್ಸೆಗೆ ಒಳಗಾಗುವ ರೋಗಿಯ ತಲೆ ಕೂದಲು ಸಂಪೂರ್ಣವಾಗಿ ಉದುರುತ್ತದೆ. ಅಲ್ಲದೇ ವಾಕರಿಕೆ, ತಲೆಸುತ್ತು, ಸುಸ್ತು ಮುಂತಾದ ಅಡ್ಡಪರಿಣಾಮಗಳನ್ನು ಎದುರಿಸುತ್ತಾರೆ. ಈ ಥೆರಪಿಯನ್ನು ಕೆಲವು ಡಾಕ್ಟರ್‌ಗಳು ಆಪರೇಷನ್‌ ಬಳಿಕ ಮಾಡುತ್ತಾರೆ. ಇನ್ನೂ ಕೆಲವರು ಆಪರೇಷನ್‌ಗೂ ಮುನ್ನ ಚಿಕಿತ್ಸೆ ನೀಡಿ ಕ್ಯಾನ್ಸರ್‌ ಕೋಶಗಳು ಹರಡದಂತೆ ತಡೆಗಟ್ಟಿ ನಂತರ ಆಪರೇಷನ್‌ಗೆ ಮುಂದಾಗುತ್ತಾರೆ.

    ಕಿಮೋಥೆರಪಿ ಚಿಕಿತ್ಸೆಯನ್ನು ಎರಡು ರೀತಿಯಲ್ಲಿ ನೀಡಬಹುದಾಗಿದೆ. ಮೊದಲನೆಯದು ಇಂಜೆಕ್ಷನ್‌ ರೂಪದಲ್ಲಿ ಇದನ್ನು ನೀಡಬಹುದು. ಪ್ರಸ್ತುತ ಇದು ಮಾತ್ರೆಗಳ ರೂಪದಲ್ಲಿ ಕೂಡಾ ಲಭ್ಯವಿದೆ. ಕ್ಯಾನ್ಸರ್‌ ರೋಗಕ್ಕೆ ಮಾತ್ರವಲ್ಲದೇ ಬೇರೆ ರೋಗಗಳಿಗೂ ಈ ಕಿಮೋಥೆರಪಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಕಿಮೋಥೆರಪಿ ಎಂಬುದು ಸುಮಾರು 40-50 ವರ್ಷಗಳ ಹಿಂದೆ ಆವಿಷ್ಕಾರವಾಗಿರುವಂತಹ ಚಿಕಿತ್ಸೆಯಾಗಿದೆ.

    ಕಿಮೋಥೆರಪಿ ಎಂಬುದು ಕೇವಲ ಒಂದು ಡ್ರಗ್ಸ್‌ ಅನ್ನು ಒಳಗೊಂಡಿಲ್ಲ. ಇದು ಸುಮಾರು ಎರಡರಿಂದ ಮೂರು ಹೈ ಡೋಸೇಜ್ ಡ್ರಗ್ಸ್‌ ಅನ್ನು ಒಳಗೊಂಡಿದ್ದು, ಮಾನವ ದೇಹದಲ್ಲಿ ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಇದನ್ನು ನಾಲ್ಕನೇ ಹಂತದಲ್ಲಿರುವ ಕ್ಯಾನ್ಸರ್‌ ರೋಗಿಗಳಿಗೆ ಅಗತ್ಯವಾಗಿ ಕೊಡಲಾಗುತ್ತದೆ. ಕಿಮೋಥೆರಪಿ ಚಿಕಿತ್ಸೆ ಸುಮಾರು 90% ಕ್ಯಾನ್ಸರ್‌ ರೋಗವನ್ನು ಗುಣಪಡಿಸುತ್ತದೆ. ಕಿಡ್ನಿ ಕ್ಯಾನ್ಸರ್‌ ಮತ್ತು ಚರ್ಮ ಕ್ಯಾನ್ಸರ್‌ಗಳಂತಹ ರೋಗಗಳಿಗೆ ಇದು ಹೆಚ್ಚು ಪರಿಣಾಮಕಾರಿಯಾಗುವುದಿಲ್ಲ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.‌

    ಸ್ತನ ಕ್ಯಾನ್ಸರ್‌, ಧ್ವನಿಪೆಟ್ಟಿಗೆ ಕ್ಯಾನ್ಸರ್‌ನಂತಹ ಕೆಲವು ಕ್ಯಾನ್ಸರ್‌ ರೋಗಗಳಿಗೆ ಕಿಮೋಥೆರಪಿ ಚಿಕಿತ್ಸೆ ನೀಡಿದರೆ ಆಪರೇಷನ್‌ ಮಾಡುವ ಅಗತ್ಯವಿಲ್ಲ. ಇದರಲ್ಲಿಯೇ ಕ್ಯಾನ್ಸರ್‌ ರೋಗ ವಾಸಿಯಾಗುತ್ತದೆ. ಕಿಮೋಥೆರಪಿಯೊಂದಿಗೆ ರೇಡಿಯೇಷನ್‌ ಚಿಕಿತ್ಸೆಯನ್ನು ಕೊಡುವುದರಿಂದ ಕೆಲವು ಕ್ಯಾನ್ಸರ್‌ ರೋಗಿಗಳಿಗೆ ಆಪರೇಷನ್‌ ಮಾಡುವುದನ್ನು ತಪ್ಪಿಸಬಹುದಾಗಿದೆ.

    ಕಿಮೋಥೆರಪಿ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಇನ್ಫೆಕ್ಷನ್‌ ಆಗದ ರೀತಿಯಲ್ಲಿ ಎಚ್ಚರವಹಿಸುವುದು ತುಂಬಾ ಅಗತ್ಯವಾಗಿರುತ್ತದೆ. ಈ ರೀತಿಯಾದಲ್ಲಿ ರೋಗಿ ತುಂಬಾ ಸೀರಿಯಸ್‌ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಈ ಸಮಯದಲ್ಲಿ ತುಂಬಾ ಜಾಗೃತರಾಗಿರಬೇಕು. ಕಿಮೋಥೆರಪಿ ಚಿಕಿತ್ಸೆಯಿಂದ ಬಿಳಿ ರಕ್ತಕಣ, ಕೆಂಪು ರಕ್ತಕಣ ಅಥವಾ ಪ್ಲೇಟ್‌ಲೆಟ್‌ ಕೌಂಟ್‌ ಕೂಡಾ ಕಡಿಮೆಯಾಗುವ ಸಂಭವವಿದೆ. ಕಿಮೋಥೆರಪಿ ಚಿಕಿತ್ಸೆ ಎಂಬುದು ದಿನಾ ನೀಡುವ ಚಿಕಿತ್ಸೆಯಲ್ಲ. ಇದನ್ನು ಎರಡರಿಂದ ಮೂರು ವಾರಗಳಿಗೊಮ್ಮೆ ನೀಡಲಾಗುತ್ತದೆ. ಮಾತ್ರೆಗಳು ಕೂಡಾ ಎರಡು ವಾರಗಳಿಗೊಮ್ಮೆ ನೀಡಲಾಗುತ್ತದೆ.

    ಸುಮಾರು 30ರಿಂದ 40%ನಷ್ಟು ಕ್ಯಾನ್ಸರ್‌ ರೋಗಗಳು ಕೇವಲ ಕಿಮೋಥೆರಪಿ ಚಿಕಿತ್ಸೆಯಿಂದ ಗುಣವಾದರೆ 60ರಿಂದ 70%ನಷ್ಟು ಕ್ಯಾನ್ಸರ್‌ ರೋಗಗಳು ಆಪರೇಷನ್‌, ಕಿಮೋಥೆರಪಿ ಮತ್ತು ರೇಡೀಯೇಷನ್‌ ಚಿಕಿತ್ಸೆಯನ್ನು ನೀಡುವ ಮೂಲಕ ಗುಣಪಡಿಸಬಹುದು. ಕಿಮೋಥೆರಪಿ ಎಂದಾಗ ಜನರು ಭಯಬೀಳುವುದು ಜಾಸ್ತಿ. ಕಿಮೋಥೆರಪಿ ಚಿಕಿತ್ಸೆಗೆ ಯಾರೂ ಭಯಪಡಬೇಕಾದ ಅಗತ್ಯವಿಲ್ಲ. ಇದು ಕ್ಯಾನ್ಸರ್‌ ರೋಗವನ್ನು ಗುಣಪಡಿಸುತ್ತದೆ ಮತ್ತು ಕಿಮೋಥೆರಪಿ ಚಿಕಿತ್ಸೆಯಿಂದ ಉಂಟಾಗುವ ಸೈಡ್‌ ಎಫೆಕ್ಟ್ಸ್‌ಗೂ ಚಿಕಿತ್ಸೆಗಳು ಆಸ್ಪತ್ರೆಗಳಲ್ಲಿ ಲಭ್ಯವಿದೆ. ಆದ್ದರಿಂದ ಭಯಪಡದೇ ಚಿಕಿತ್ಸೆಯನ್ನು ಪಡೆದುಕೊಂಡು ಕಾಯಿಲೆಗಳನ್ನು ಬಗೆಹರಿಸಿಕೊಳ್ಳುವುದು ಉತ್ತಮ. ಇದನ್ನೂ ಓದಿ: ಅಮೆರಿಕದ ಟಾಪ್ ಸೀಕ್ರೆಟ್ ಪ್ಲೇಸ್ – ಅಂಥಾದ್ದೇನಿದೆ ಏರಿಯಾ 51ರಲ್ಲಿ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಿಕಿತ್ಸೆಗೂ ಮುನ್ನ ಸಮಂತಾ ಟೆಂಪಲ್ ರನ್: ಆರೋಗ್ಯಕ್ಕಾಗಿ ನಟಿಯ ಪ್ರಾರ್ಥನೆ

    ಚಿಕಿತ್ಸೆಗೂ ಮುನ್ನ ಸಮಂತಾ ಟೆಂಪಲ್ ರನ್: ಆರೋಗ್ಯಕ್ಕಾಗಿ ನಟಿಯ ಪ್ರಾರ್ಥನೆ

    ಕ್ಷಿಣ ಭಾರತದ ಖ್ಯಾತ ನಟಿ ಸಮಂತಾ, ಚಿಕಿತ್ಸೆಗಾಗಿ ಅಮೆರಿಕಾಗೆ ಹೋಗುವ ಮುನ್ನ ಹಲವು ದೇವಸ್ಥಾನಗಳಿಗೆ ಭೇಡಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮೊನ್ನೆಯಷ್ಟೇ ಅವರು ವೆಲ್ಲೂರಿನ ಶ್ರೀ ಲಕ್ಷ್ಮೀ ನಾರಾಯಣ ಗೋಲ್ಡನ್ ಟೆಂಪಲ್ (Sri Lakshmi Narayana Golden Temple) ಗೆ ಭೇಟಿ ನೀಡಿದ್ದಾರೆ. ಈ ಹಿಂದೆಯೇ ಅವರು ಆರೋಗ್ಯಕ್ಕಾಗಿ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು.

    ವೆಲ್ಲೂರಿನ (Vellore) ದೇವಸ್ಥಾನದಲ್ಲಿ ಫ್ರೆಂಡ್ಸ್ ಜೊತೆ ಕಾರಿನಲ್ಲಿ ತೆರಳಿದ್ದ ಸಮಂತಾ, ಆ ಪ್ರಯಾಣದ ಕುರಿತಾಗಿ ಅವರು ಇನ್ಸ್ಟಾದಲ್ಲಿ ಬರೆದುಕೊಂಡಿದ್ದಾರೆ. ಇಷ್ಟದ ಫ್ರೆಂಡ್ಸ್ ಜೊತೆ ಇಷ್ಟದ ಹಾಡುಗಳು ಕೂಡ ಜೊತೆಯಾಗಿದ್ದವು ಎಂದು ಅವರು ಪೋಸ್ಟ್ ಮಾಡಿದ್ದಾರೆ. ಸಮಂತಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ. ದೇವರು ನಿಮ್ಮೊಂದಿಗೆ ಇದ್ದಾನೆ ಎಂದೂ ಕೆಲವರು ಕಾಮೆಂಟ್ ಮಾಡಿದ್ದಾರೆ.

    ಸಮಂತಾ (Samantha), ಒಪ್ಪಿಕೊಂಡಿದ್ದ ಸಿನಿಮಾಗಳನ್ನ ಮುಗಿಸಿಕೊಟ್ಟಿದ್ದಾರೆ. ಈಗ ತಮ್ಮ ಆರೋಗ್ಯದ ಕಡೆ ಗಮನ ವಹಿಸುತ್ತಿದ್ದಾರೆ. ಡಿವೋರ್ಸ್ ನಂತರ ಒಂದಲ್ಲಾ ಒಂದು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸೂಕ್ತ ಚಿಕಿತ್ಸೆಗಾಗಿ ಅಮೆರಿಕಾಗೆ (America) ಹಾರಿದ್ದಾರೆ ಎಂದು ಹೇಳಲಾಗುತ್ತಿದೆ. ದೇವಸ್ಥಾನಗಳನ್ನು ಭೇಟಿ ಮಾಡಿದ ನಂತರ ಅವರು ವಿಮಾನ ಏರಿದ್ದಾರೆ ಎನ್ನುವುದು ಅವರ ಆಪ್ತರ ಮಾಹಿತಿ.

    ಮೊನ್ನೆಯಷ್ಟೇ ಅವರೊಂದು ಪೋಸ್ಟ್ ಹಾಕಿದ್ದರು. ಜೊತೆಗೆ ತಮ್ಮ ಆರೋಗ್ಯ ಸುಧಾರಣೆಗೆ ಹೊಸ ಮಾದರಿಯ ಥೆರಪಿಯೊಂದನ್ನ ಮಾಡಿಸುತ್ತಿದ್ದಾರೆ. ಇದು ಆಮ್ಲಜನಕ ಥೆರಪಿಯಾಗಿದ್ದು, ಇದರ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಆ ಕುರಿತು ಸಮಂತಾ ವಿವರಣೆಯನ್ನೂ ನೀಡಿದ್ದರು.

    ನಾಗಚೈತನ್ಯ (NagaChaitanya) ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಮಯೋಸಿಟಿಸ್ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದರು. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಚರ್ಮದ ಸಮಸ್ಯೆ, ಶ್ವಾಸಕೋಶದ ಸಮಸ್ಯೆಯನ್ನ ನಟಿ ಎದುರಿಸುತ್ತಿದ್ದರು. ಹಾಗಾಗಿ ಸಿನಿಮಾಗೆ ಕೊಂಚ ಬ್ರೇಕ್ ನೀಡಿ, ತಮ್ಮ ಹೆಲ್ತ್ ಕಡೆ ನಟಿ ಗಮನ ಕೊಡ್ತಿದ್ದಾರೆ.

    ಹೆಚ್‌ಬಿಓಟಿ ಹೆಸರಿನ ಚಿಕಿತ್ಸೆಯನ್ನು ಸ್ಯಾಮ್ ಪಡೆದುಕೊಳ್ಳುತ್ತಿದ್ದಾರೆ. ಹೆಚ್‌ಬಿಓಟಿ ಎಂದರೆ ಹೈಪರ್‌ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ. ಈ ಚಿಕಿತ್ಸೆಯಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ. ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

    ನಟಿ ಸಮಂತಾ, ವಿಜಯ್ ದೇವರಕೊಂಡ (Vijay Devarakonda) ಜೊತೆಗಿನ ‘ಖುಷಿ’ (Kushi)  ಸಿನಿಮಾ ಮುಗಿಸಿ ಕೊಟ್ಟಿದ್ದಾರೆ. ವರುಣ್ ಧವನ್ ಜೊತೆಗಿನ ಸಿಟಾಡೆಲ್ (Citadel) ಕೂಡ ಶೂಟಿಂಗ್ ಮುಗಿದಿದೆ. ಇಂಗ್ಲೀಷ್‌ನ ಒಂದು ಸಿನಿಮಾ, ಬಾಲಿವುಡ್ ಚಿತ್ರವೊಂದನ್ನ ನಟಿ ಓಕೆ ಎಂದಿದ್ದಾರೆ. ಸಮಂತಾ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಮತ್ತೆ ಸಿನಿಮಾ ಮಾಡಲಿದ್ದಾರೆ. ಅಲ್ಲಿಯವರೆಗೂ ನಟಿ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ.

    ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸಮಂತಾ, ದಿನಕ್ಕೊಂದು ಪೋಸ್ಟ್ ಮಾಡಿ ತಮ್ಮ ಅಂತರಾಳದ ದುಗುಡಗಳನ್ನು ಅಭಿಮಾನಿಗಳ ಮುಂಚೆ ಬಿಚ್ಚಿಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದ ಮೂಲಕ ಸದಾ ಅಭಿಮಾನಿಗಳ ಜೊತೆ ಕನೆಕ್ಟ್ ಆಗುವ ಸಮಂತಾ, ಈ ಬಾರಿ ಆರು ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಿನಕ್ಕೂ ಅವು ಯಾತನೆಯ ದಿನಗಳು ಎಂದಿದ್ದಾರೆ.

     

    ಆರೋಗ್ಯದ ಸಮಸ್ಯೆಯಿಂದಾಗಿ ಸಿನಿಮಾ ರಂಗಕ್ಕೆ ಒಂದು ವರ್ಷಗಳ ಕಾಲ ಗೈರಾಗಿದ್ದ ಸಮಂತಾ, ಟ್ರೀಟ್ ಮೆಂಟ್ ನಂತರ ಮತ್ತೆ ಬಂದಿದ್ದರು. ಒಪ್ಪಿಕೊಂಡಿದ್ದ ಪ್ರಾಜೆಕ್ಟ್ ಗಳನ್ನು ಅವರು ಮುಗಿಸಿಕೊಡಬೇಕಿತ್ತು. ಹಾಗಾಗಿ ಆರು ತಿಂಗಳ ಕಾಲ ನೋವಿನಲ್ಲೇ ಕೆಲಸ ಮಾಡಿದ್ದಾರೆ. ಇನ್ನೂ ಸಾಧ್ಯವಿಲ್ಲ ಅನಿಸಿ, ಒಂದಷ್ಟು ಪ್ರಾಜೆಕ್ಟ್ ಗಳಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ವಾಪಸ್ಸು ಮಾಡಿ ಮತ್ತೆ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಿನ್ನರ್ ಪಾರ್ಟಿ ನಂತರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಸಮಂತಾ

    ಡಿನ್ನರ್ ಪಾರ್ಟಿ ನಂತರ ಚಿಕಿತ್ಸೆಗಾಗಿ ಅಮೆರಿಕಾಗೆ ಹಾರಿದ ಸಮಂತಾ

    ಮಂತಾ (Samantha), ಒಪ್ಪಿಕೊಂಡಿದ್ದ ಸಿನಿಮಾಗಳನ್ನ ಮುಗಿಸಿಕೊಟ್ಟಿದ್ದಾರೆ. ಈಗ ತಮ್ಮ ಆರೋಗ್ಯದ ಕಡೆ ಗಮನ ವಹಿಸುತ್ತಿದ್ದಾರೆ. ಡಿವೋರ್ಸ್ ನಂತರ ಒಂದಲ್ಲಾ ಒಂದು ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಸಮಂತಾ ಸೂಕ್ತ ಚಿಕಿತ್ಸೆಗಾಗಿ ಅಮೆರಿಕಾಗೆ (America) ಹಾರಿದ್ದಾರೆ. ತಮ್ಮ ಆರೋಗ್ಯ ಸುಧಾರಣೆಗೆ ಹೊಸ ಮಾದರಿಯ ಥೆರಪಿಯೊಂದನ್ನ ಮಾಡಿಸುತ್ತಿದ್ದಾರೆ. ಇದು ಆಮ್ಲಜನಕ ಥೆರಪಿಯಾಗಿದ್ದು, ಇದರ ಫೋಟೋವನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಅದಕ್ಕೂ ಮುನ್ನ ಫ್ರೆಂಡ್ಸ್ ಜೊತೆ ಡಿನ್ನರ್ ಪಾರ್ಟಿ (dinner party) ಮಾಡಿರುವ ಸಮಂತಾ, ಆನಂತರ ಅಮೆರಿಕಾ ವಿಮಾನ ಏರಿದ್ದಾರೆ.

    ನಾಗಚೈತನ್ಯ (NagaChaitanya) ಜೊತೆಗಿನ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಮೇಲೆ ಮಯೋಸಿಟಿಸ್ ಕಾಯಿಲೆಯಿಂದ ಸಮಂತಾ ಬಳಲುತ್ತಿದ್ದರು. ಇದಕ್ಕೆ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿಯೇ ಚರ್ಮದ ಸಮಸ್ಯೆ, ಶ್ವಾಸಕೋಶದ ಸಮಸ್ಯೆಯನ್ನ ನಟಿ ಎದುರಿಸುತ್ತಿದ್ದರು. ಹಾಗಾಗಿ ಸಿನಿಮಾಗೆ ಕೊಂಚ ಬ್ರೇಕ್ ನೀಡಿ, ತಮ್ಮ ಹೆಲ್ತ್ ಕಡೆ ನಟಿ ಗಮನ ಕೊಡ್ತಿದ್ದಾರೆ. ಇದನ್ನೂ ಓದಿ:ರಿಷಬ್ ನಿರ್ಮಾಣದ ‘ಶಿವಮ್ಮ’ನಿಗೆ ಮತ್ತೆ ಅಂತಾರಾಷ್ಟ್ರೀಯ ಪ್ರಶಸ್ತಿ

    ಹೆಚ್‌ಬಿಓಟಿ ಹೆಸರಿನ ಚಿಕಿತ್ಸೆಯನ್ನು ಸ್ಯಾಮ್ ಪಡೆದುಕೊಳ್ಳುತ್ತಿದ್ದಾರೆ. ಹೆಚ್‌ಬಿಓಟಿ ಎಂದರೆ ಹೈಪರ್‌ಬ್ಯಾರಿಕ್ ಆಕ್ಸಿಜನ್ ಥೆರಪಿ ಎಂದರ್ಥ. ಈ ಚಿಕಿತ್ಸಾ ವಿಧಾನದಲ್ಲಿ ವ್ಯಕ್ತಿಗೆ ಪ್ರತ್ಯೇಕವಾಗಿ ಶುದ್ಧ ಆಮ್ಲಜನಕವನ್ನು ಸಾಮಾನ್ಯಕ್ಕಿಂತಲೂ ಹೆಚ್ಚಿನ ವೇಗದಲ್ಲಿ ನೀಡಲಾಗುತ್ತದೆ. ಈ ಥೆರಪಿ ಮಾಡಿಸಲು ವಿಶೇಷವಾದ ಕೋಣೆ ಅಥವಾ ಚೇಂಬರ್‌ಗಳನ್ನು ನಿರ್ಮಿಸಿ ಅದರಲ್ಲಿ ಚಿಕಿತ್ಸೆ ಪಡೆಯುವವರನ್ನು ಕೂರಿಸಿ ಅಥವಾ ಮಲಗಿಸಿ ವೇಗವಾಗಿ ಶುದ್ಧ ಆಮ್ಲಜನಕವನ್ನು ಅವರ ದೇಹಕ್ಕೆ ಹರಿಸಲಾಗುತ್ತದೆ. ಈ ಚಿಕಿತ್ಸೆಯಿಂದ ಶ್ವಾಸಕೋಶಗಳು ಹೆಚ್ಚು ಆಮ್ಲಜನಕವನ್ನು ಹೀರಿಕೊಳ್ಳುತ್ತವೆ ಹಾಗೂ ರಕ್ತದಲ್ಲಿಯೂ ಆಮ್ಲಜನಕದ ಪ್ರಮಾಣ ಹೆಚ್ಚಾಗುತ್ತದೆ. ಚರ್ಮವು ಶುಷ್ಕವಾಗಿ ಬಿಳಿಚಿಕೊಳ್ಳುವುದರಿಂದ ರಕ್ಷಿಸುತ್ತದೆ. ರಕ್ತದಲ್ಲಿ ಆಮ್ಲಜನಕ ಪ್ರಮಾಣ ಹೆಚ್ಚಾಗುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದೆ. ಶ್ವಾಸಕೋಶದ ಸೋಂಕುಗಳು ನಿವಾರಣೆಯಾಗುತ್ತದೆ. ಗಾಯಗಳು, ನೋವುಗಳು ಬೇಗನೆ ಮಾಯಲು, ವಾಸಿಯಾಗಲು ಪ್ರಾರಂಭವಾಗುತ್ತವೆ.

    ನಟಿ ಸಮಂತಾ, ವಿಜಯ್ ದೇವರಕೊಂಡ (Vijay Devarakonda) ಜೊತೆಗಿನ ‘ಖುಷಿ’ (Kushi)  ಸಿನಿಮಾ ಮುಗಿಸಿ ಕೊಟ್ಟಿದ್ದಾರೆ. ವರುಣ್ ಧವನ್ ಜೊತೆಗಿನ ಸಿಟಾಡೆಲ್ (Citadel) ಕೂಡ ಶೂಟಿಂಗ್ ಮುಗಿದಿದೆ. ಇಂಗ್ಲೀಷ್‌ನ ಒಂದು ಸಿನಿಮಾ, ಬಾಲಿವುಡ್ ಚಿತ್ರವೊಂದನ್ನ ನಟಿ ಓಕೆ ಎಂದಿದ್ದಾರೆ. ಸಮಂತಾ ಆರೋಗ್ಯದಲ್ಲಿ ಚೇತರಿಕೆ ಕಂಡ ಮೇಲೆ ಮತ್ತೆ ಸಿನಿಮಾ ಮಾಡಲಿದ್ದಾರೆ. ಅಲ್ಲಿಯವರೆಗೂ ನಟಿ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ.

    ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ನಟಿ ಸಮಂತಾ, ದಿನಕ್ಕೊಂದು ಪೋಸ್ಟ್ ಮಾಡಿ ತಮ್ಮ ಅಂತರಾಳದ ದುಗುಡಗಳನ್ನು ಅಭಿಮಾನಿಗಳ ಮುಂಚೆ ಬಿಚ್ಚಿಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದ ಮೂಲಕ ಸದಾ ಅಭಿಮಾನಿಗಳ ಜೊತೆ ಕನೆಕ್ಟ್ ಆಗುವ ಸಮಂತಾ, ಈ ಬಾರಿ ಆರು ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ದಿನಕ್ಕೂ ಅವು ಯಾತನೆಯ ದಿನಗಳು ಎಂದಿದ್ದಾರೆ.

     

    ಆರೋಗ್ಯದ ಸಮಸ್ಯೆಯಿಂದಾಗಿ ಸಿನಿಮಾ ರಂಗಕ್ಕೆ ಒಂದು ವರ್ಷಗಳ ಕಾಲ ಗೈರಾಗಿದ್ದ ಸಮಂತಾ, ಟ್ರೀಟ್ ಮೆಂಟ್ ನಂತರ ಮತ್ತೆ ಬಂದಿದ್ದರು. ಒಪ್ಪಿಕೊಂಡಿದ್ದ ಪ್ರಾಜೆಕ್ಟ್ ಗಳನ್ನು ಅವರು ಮುಗಿಸಿಕೊಡಬೇಕಿತ್ತು. ಹಾಗಾಗಿ ಆರು ತಿಂಗಳ ಕಾಲ ನೋವಿನಲ್ಲೇ ಕೆಲಸ ಮಾಡಿದ್ದಾರೆ. ಇನ್ನೂ ಸಾಧ್ಯವಿಲ್ಲ ಅನಿಸಿ, ಒಂದಷ್ಟು ಪ್ರಾಜೆಕ್ಟ್ ಗಳಿಗೆ ತೆಗೆದುಕೊಂಡಿದ್ದ ಅಡ್ವಾನ್ಸ್ ವಾಪಸ್ಸು ಮಾಡಿ ಮತ್ತೆ ಆರೋಗ್ಯದ ಕಡೆ ಗಮನ ಹರಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗಾಯಾಳು ಸಂದೀಪ್‍ಗೆ ಉತ್ತಮ ಚಿಕಿತ್ಸೆ ನೀಡುವಂತೆ ಸುಧಾಕರ್ ಸೂಚನೆ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್: ಗಾಯಾಳು ಸಂದೀಪ್‍ಗೆ ಉತ್ತಮ ಚಿಕಿತ್ಸೆ ನೀಡುವಂತೆ ಸುಧಾಕರ್ ಸೂಚನೆ

    ಬೆಂಗಳೂರು: ರಸ್ತೆ ಗುಂಡಿ (Potholes) ತಪ್ಪಿಸೋಕೆ ಹೋಗಿ ಗಂಭೀರ ಗಾಯಗೊಂಡು ಸದ್ಯ ಚೇರತಿಸಿಕೊಳ್ಳುತ್ತಿರುವ ಸಂದೀಪ್ ಅವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಡೀನ್ ಗೆ ಸೂಚನೆ ಕೊಡುವುದಾಗಿ ಆರೋಗ್ಯ ಸಚಿವ ಕೆ. ಸುಧಾಕರ್ (K Sudhakar) ಭರವಸೆ ನೀಡಿದರು.

    ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಸಿಗದ ವಿಚಾರದ ಕುರಿತು ಇಂದು ಪಬ್ಲಿಕ್ ಟಿವಿ ಸುದ್ದಿ ಬಿತ್ತರಿಸಿತ್ತು. ಈ ಬಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯಿಸಿ, ಈಗಾಗಲೇ ರೋಗಿಗೆ ವಿಕ್ಟೋರಿಯಾದಲ್ಲಿ ಬೆಡ್ ವ್ಯವಸ್ಥೆ ಮಾಡಲಾಗಿದೆ. ಉತ್ತಮ ಚಿಕಿತ್ಸೆ ನೀಡುವಂತೆ ಡೀನ್ ಗೆ ಸೂಚನೆ ಕೊಡ್ತೀನಿ. ರೋಗಿ ಆದಷ್ಟು ಬೇಗ ಹುಷಾರಾಗಲಿ ಎಂದು ಶುಭ ಹಾರೈಸಿದರು.

    ಕೆಲ ಸರ್ಕಾರಿ ಆಸ್ಪತ್ರೆ (Government Hospital) ಗಳಲ್ಲಿ ಕೆಲ ಅಧಿಕಾರಿಗಳಿಂದ ಸಮಸ್ಯೆ ಆಗುತ್ತಿದೆ. ಆ ವ್ಯವಸ್ಥೆಯನ್ನ ಸರಿ ಮಾಡೋ ಕೆಲಸ ಮಾಡುತ್ತಿದ್ದೇವೆ. ಅತ್ಯುತ್ತಮವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಿಗುತ್ತಿದೆ. ಇದನ್ನ ಮತ್ತಷ್ಟು ಉತ್ತಮ ಮಾಡುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸುಧಾಕರ್ ಪಬ್ಲಿಕ್ ಟಿವಿಗೆ ತಿಳಿಸಿದರು. ಇದನ್ನೂ ಓದಿ: ಗುಂಡಿಗೆ ಬಿದ್ದು ಕೋಮಾಗೆ ಜಾರಿದ್ದ ಸಂದೀಪ್- ಪ್ರಜ್ಞಾವಸ್ಥೆಗೆ ಬಂದ ಸವಾರನಿಗೆ ಸಿಗ್ತಿಲ್ಲ ಆಸ್ಪತ್ರೆ ಬೆಡ್

    ಏನಿದು ಘಟನೆ..?: ಕೆಲವು ದಿನಗಳ ಹಿಂದೆಯಷ್ಟೇ ವಿದ್ಯಾರಣ್ಯಪುರದ ನಿವಾಸಿ ಸಂದೀಪ್ ಫ್ರೆಂಡ್ಸ್ ಗಳ ಜೊತೆ ಕ್ರಿಕೆಟ್ ಆಡಿಕೊಂಡು ಜಾಲಹಳ್ಳಿಯ ಗಂಗಮ್ಮ ರಸ್ತೆ ಮಾರ್ಗವಾಗಿ ಬೈಕ್‍ನಲ್ಲಿ ಬರುತ್ತಿದ್ದರು. ಆದರೆ ಅದೇ ದಾರಿಯಲ್ಲಿ ಯಮವಾಗಿದ್ದ ಗುಂಡಿಯೊಂದನ್ನ ತಪ್ಪಿಸಲು ಹೋದ ಸಂದೀಪ್ (Sandeep), ಕೆಳಗೆ ಬಿದ್ದು ಗಂಭೀರ ಗಾಯವಾಗಿ ಹತ್ತಿರದ ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಾದರು. ಸಂದೀಪ್ ಪತ್ನಿ ಸೀಮಾ ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ವಿರುದ್ಧ ದೂರು ಕೂಡ ನೀಡಿದ್ದರು.

    ಇತ್ತ ಚಿಂತಾಜನಕ ಸ್ಥಿತಿ ತಲುಪಿ ಸಾವು-ಬದುಕು ನಡುವೆ ಹೋರಾಡ್ತಿದ್ದ ಸಂದೀಪ್ ಕೊನೆಗೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಬಿಬಿಎಂಪಿ ಅಧಿಕಾರಿಗಳು ಮಾಡಿರೋ ಬೇಜವಾಬ್ದಾರಿ ಕೆಲಸಕ್ಕೆ ಬೈಕ್ ಸವಾರ ಸಂದೀಪ್ ಆಸ್ಪತ್ರಗೆ ಕಟ್ಟಿದ್ದು ಬರೋಬ್ಬರಿ 14 ಲಕ್ಷ ಹಣ. ಮಧ್ಯಮ ವರ್ಗ ಕುಟುಂಬದವರಾಗಿರೋ ಸಂದೀಪ್ ಕುಟುಂಬ ಈಗ ಹೆಚ್ಚಿನ ಚಿಕಿತ್ಸೆಗೆ ಹಣ ಇಲ್ಲದೆ ಪರದಾಡ್ತಿದ್ದಾರೆ.

    ಸಂದೀಪ್ ಸಾವು ಬದುಕಿನ ನಡುವೆ ಹೋರಾಡಿ ಸಾವನ್ನೇನೋ ಗೆದ್ದಿದ್ದಾರೆ. ಆದರೆ ಸಂದೀಪ್‍ಗಾಗಿ ಪರಿತಪಿಸ್ತಿರುವ ಪತ್ನಿ ಸೀಮಾ ಇನ್ನೂ ಕಂಗಾಲಾಗಿದ್ದಾರೆ. ಸಂದೀಪ್ ಪತ್ನಿ ಸೀಮಾ ಗೋಳಾಡ್ತಾ ಮಾತನಾಡಿ, ಒಂದೆಡೆ ನಿಮ್ಹಾನ್ಸ್‍ಗೆ ಶಿಫ್ಟ್ ಮಾಡೋಣ ಅಂದ್ರೆ ಅಲ್ಲಿ ಬೆಡ್ ಇಲ್ಲ. ಇಎಸ್‍ಐ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ವಂತೆ. ನಮಗೆ ಏನ್ ಮಾಡ್ಬೇಕು ಅಂತ ಗೊತ್ತಾಗ್ತಿಲ್ಲ. ಬಿಬಿಎಂಪಿ ಅಧಿಕಾರಿಗಳು ನಮ್ಮ ಸಹಾಯಕ್ಕೆ ಬರ್ತಿಲ್ಲ ಅಂತ ತಮ್ಮ ನೋವನ್ನ ಪಬ್ಲಿಕ್ ಟಿವಿ ಮುಂದೆ ತೋಡಿಕೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಮೂವರು ಭಾರತೀಯರು ಸೇರಿದಂತೆ 20 ಮಂದಿ ಸಾವು

    ಅಮೆರಿಕದಲ್ಲಿ ಭೀಕರ ರಸ್ತೆ ಅಪಘಾತ – ಮೂವರು ಭಾರತೀಯರು ಸೇರಿದಂತೆ 20 ಮಂದಿ ಸಾವು

    ವಾಷಿಂಗ್ಟನ್: ಕಾರೊಂದಕ್ಕೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ಪರಿಣಾಮ ಭಾರತದ (India) ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಯುನೈಟೆಡ್ ಸ್ಟೇಟ್ಸ್‌ನ ಪಶ್ವಿಮ ಮ್ಯಾಸಚೂಸೆಟ್ಸ್‌ನಲ್ಲಿ (western Massachusetts) ನಡೆದಿದೆ.

    ಮೃತರನ್ನು ಪ್ರೇಮ್ ಕುಮಾರ್ ರೆಡ್ಡಿ ಗೋಡಾ (27), ಪಾವನಿ ಗುಲ್ಲಪಲ್ಲಿ (22) ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ (22) ಎಂದು ಗುರುತಿಸಲಾಗಿದೆ. ಎರಡು ವಾಹನಗಳು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಉಳಿದ ಐವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮ್ಯಾಸಚೂಸೆಟ್ಸ್ ರಾಜ್ಯ ಮತ್ತು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ನಿರಾಣಿ

    ಗುರುವಾರ ಮುಂಜಾನೆ 5:30ರ ವೇಳೆಗೆ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಮನೋಜ್ ರೆಡ್ಡಿ ದೊಂಡ, ಶ್ರೀಧರ್ ರೆಡ್ಡಿ ಚಿಂತಕುಂಟಾ, ವಿಜಿತ್ ರೆಡ್ಡಿ ಗುಮ್ಮಲ ಮತ್ತು ಹಿಮಾ ಐಶ್ವರ್ಯ ಸಿದ್ದಿರೆಡ್ಡಿ ಅವರನ್ನು ಚಿಕಿತ್ಸೆಗಾಗಿ ಬರ್ಕ್‍ಶೈರ್ ವೈದ್ಯಕೀಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಕಾರಿನಲ್ಲಿದ್ದವರನ್ನು ಅಂತಾರಾಷ್ಟ್ರೀಯ ಕಾಲೇಜು ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಆರು ಮಂದಿಯನ್ನು ನ್ಯೂ ಹೆವನ್ ವಿಶ್ವವಿದ್ಯಾಲಯದಲ್ಲಿ (University of New Haven) ಮತ್ತು ಒಬ್ಬರು ಸೇಕ್ರೆಡ್ ಹಾರ್ಟ್ ವಿಶ್ವವಿದ್ಯಾಲಯದಲ್ಲಿ (Sacred Heart University) ಓದುತ್ತಿದ್ದಾರೆ. ಇನ್ನೂ ವಾಹನದ ಚಾಲಕನನ್ನು 46 ವರ್ಷದ ಅರ್ಮಾಂಡೋ ಬೌಟಿಸ್ಟಾ-ಕ್ರೂಜ್‍ರನ್ನು ಚಿಕಿತ್ಸೆಗಾಗಿ ಫೇರ್‌ವ್ಯೂ ವೈದ್ಯಕೀಯ ಕೇಂದ್ರಕ್ಕೆ ಸಾಗಿಸಲಾಗಿದೆ. ಇದನ್ನೂ ಓದಿ: ಅಪ್ಪು ಕನಸಿನ ಗಂಧದಗುಡಿ ದರ್ಶನ- ಥಿಯೇಟರ್ ಅಂಗಳದಲ್ಲಿ ಅಭಿಮಾನಿಗಳ ಸಂಭ್ರಮ

    Live Tv
    [brid partner=56869869 player=32851 video=960834 autoplay=true]

  • ಬಾರ್ ಗಲಾಟೆಯಲ್ಲಿ ಪ್ರಭಾವಿ ವ್ಯಕ್ತಿಯ ಮಗನಿಂದ ಹಲ್ಲೆಗೊಳಗಾದ ಯುವಕ ಸಾವು

    ಬಾರ್ ಗಲಾಟೆಯಲ್ಲಿ ಪ್ರಭಾವಿ ವ್ಯಕ್ತಿಯ ಮಗನಿಂದ ಹಲ್ಲೆಗೊಳಗಾದ ಯುವಕ ಸಾವು

    ಹುಬ್ಬಳ್ಳಿ: ಕೆಲವು ತಿಂಗಳುಗಳ ಹಿಂದೆ ಬಾರ್‌ನಲ್ಲಿ (Bar) ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಗದೆ ಸಾವಿಗೀಡಾದ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದೆ.

    ಕೆಲವು ತಿಂಗಳ ಹಿಂದೆ ಘಂಟಿಕೇರಿ ಪೋಲಿಸ್ (Police) ಠಾಣೆ ವ್ಯಾಪ್ತಿಯಲ್ಲಿನ ಬಾರ್ ಒಂದರಲ್ಲಿ ರಾತ್ರಿ ಗಲಾಟೆಯಾಗಿತ್ತು. ಈ ವೇಳೆ ಪ್ರಭಾವಿ ವ್ಯಕ್ತಿಯೋರ್ವರ ಮಗ ನವೀನ್ ಎಂಬ ಯುವಕನ ಮೇಲೆ ಇಟ್ಟಿಗೆಯಿಂದ ಹಲ್ಲೆ ನಡೆಸಿದ್ದ. ಇದನ್ನೂ ಓದಿ: ಬೇರೆಯವರೊಂದಿಗೆ ಲೈಂಗಿಕತೆಗೆ ಒಪ್ಪದ ಪತ್ನಿ ಮೇಲೆ ಪತಿಯಿಂದ ಹಲ್ಲೆ

    ಘಟನೆಯಿಂದ ಗಂಭೀರ ಗಾಯಗೊಂಡಿದ್ದ ನವೀನ್ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ನವೀನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದೀಗ ಪ್ರಭಾವಿ ವ್ಯಕ್ತಿಯ ಮಗನ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮದ್ಯದ ಅಮಲಿನಲ್ಲಿ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

    Live Tv
    [brid partner=56869869 player=32851 video=960834 autoplay=true]