Tag: ಚಿಕ್ಕಬಳ್ಳಾಪುರ ಆಸ್ಪತ್ರೆ

  • ವಿದ್ಯುತ್ ಶಾಕ್ ತಗುಲಿ ಮಗನ ದಾರುಣ ಸಾವು – ತಾಯಿಯ ಆಕ್ರಂದನ

    ವಿದ್ಯುತ್ ಶಾಕ್ ತಗುಲಿ ಮಗನ ದಾರುಣ ಸಾವು – ತಾಯಿಯ ಆಕ್ರಂದನ

    ಚಿಕ್ಕಬಳ್ಳಾಪುರ: ವಿದ್ಯುತ್ ಶಾಕ್ (Electric shock) ತಗುಲಿ ಯುವಕನೊರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಕುರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ನರಸಿಂಹಪ್ಪ ಹಾಗೂ ನಾಗಮಣಿ ದಂಪತಿಗಳ ಪುತ್ರ 17 ವರ್ಷದ ಯಶವಂತ್ ಮೃತ ದುರ್ದೈವಿ. ಅಂದಹಾಗೆ ತಂದೆ ತಾಯಿ ಕೂಲಿ ಕೆಲಸ ಮಾಡುವವರಾಗಿದ್ದು, ಹಳೆಯ ಮನೆ ಬಾಡಿಗೆಗೆ ಪಡೆದು ಅಲ್ಲಿಯೇ ಜೀವನ ನಡೆಸುತ್ತಿದ್ದರು. ಇದನ್ನೂ ಓದಿ: ತಲಕಾವೇರಿಯಲ್ಲಿ ತೀಥೋದ್ಭವ ಬಳಿಕ ಹಾರಂಗಿ ಜಲಾಶಯಕ್ಕೆ ಎ ಮಂಜು, ಮಂಥರ್ ಗೌಡ ಬಾಗಿನ ಅರ್ಪಣೆ

    ಮೃತ ಯಶ್ವಂತ್ ಚಿಕ್ಕಬಳ್ಳಾಪುರ ನಗರದ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡ್ತಿದ್ದ. ಇತ್ತೀಚೆಗೆ ಸುರಿದ ಮಳೆಗೆ ಮನೆಯ ಕಲ್ಲು ಚಪ್ಪಡಿಗಳ ಮೇಲ್ಛಾವಣಿಯಿಂದ ನೀರು ಸೋರಿಕೆಯಾಗಿ ಬಲ್ಬ್‌ಗೆ ಉರಿಯುತ್ತಿರಲಿಲ್ಲವಂತೆ. ಇದರಿಂದ ವಿದ್ಯುತ್‌ ಸಂಪರ್ಕ ಸರಿಮಾಡಲು ಯಶವಂತ್ ಕತ್ತರಿಯಿಂದ ವೈರ್ ಕಟ್ ಮಾಡುವಾಗ ಕೆರೆಂಟ್ ಶಾಕ್ ಹೊಡೆದು ಕೆಳಗೆ ಬಿದ್ದಿದ್ದಾನೆ.

    ಈ ವೇಳೆ ಮನೆಯ ಹೊರಗಡೆ ಬಟ್ಟೆ ಒಗೆಯುತ್ತಿದ್ದ ತಾಯಿ ಓಟಿ ಹೋಗಿ ನೋಡುವಷ್ಟರಲ್ಲಿ ಮಗ ಪ್ರಜ್ಞಾಹೀನನಾಗಿ ಬಿದ್ದಿದ್ದ. ಕೂಡಲೇ ಆಟೋ ಮೂಲಕ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಅಷ್ಟರಲ್ಲಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಗನನ್ನ ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಚುನಾವಣೆ ನೀತಿ ಸಂಹಿತೆ ಕಾರಣದಿಂದ ಪಂಚಮಸಾಲಿ ಮೀಸಲಾತಿ ನಿರ್ಧಾರ ಸಾಧ್ಯವಿಲ್ಲ: ಸಿದ್ದರಾಮಯ್ಯ

  • ಆಸ್ಪತ್ರೆಗೆ ಎಂಟ್ರಿ ಕೊಡಬೇಕಂದ್ರೂ ಕೋವಿಡ್ ಪರೀಕ್ಷೆ ಕಡ್ಡಾಯ!

    ಆಸ್ಪತ್ರೆಗೆ ಎಂಟ್ರಿ ಕೊಡಬೇಕಂದ್ರೂ ಕೋವಿಡ್ ಪರೀಕ್ಷೆ ಕಡ್ಡಾಯ!

    ಚಿಕ್ಕಬಳ್ಳಾಪುರ: ಆರೋಗ್ಯ ಸಚಿವರ ತವರು ಜಿಲ್ಲಾಸ್ಪತ್ರೆಯಲ್ಲಿ ವೈದ್ಯರು ಹಾಗೂ ದಾದಿಯರಿಗೆ ಕೊರೊನಾ ವಕ್ಕರಿಸಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರು ಸಹ ಕೋವಿಡ್ ಪರೀಕ್ಷೆ ಮಾಡಿಸಬೇಕೆಂದು ಸೂಚನೆ ನೀಡಲಾಗಿದೆ.

    ಆಸ್ಪತ್ರೆ ಪ್ರವೇಶಿಸಬೇಕಾದರೆ ರೋಗಿಗಳು, ಅವರ ಸಂಬಂಧಿಕರು ಕೋವಿಡ್ ಪರೀಕ್ಷೆ ಮಾಡಿಸುವುದು ಕಡ್ಡಾಯ. ಇಲ್ಲಿದಿದ್ದರೆ ಒಳಗಡೆಗೆ ಪ್ರವೇಶಾವಕಾಶ ಕಲ್ಪಿಸುವುದಿಲ್ಲ ಎಂದು ಮುಖ್ಯ ವೈದ್ಯಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಮಾಜಿ ಪ್ರಧಾನಿ ಈಗ ಮೇಕೆದಾಟು ಬಗ್ಗೆ ಪ್ರತಿಕ್ರಿಯೆ ನೀಡಲ್ಲ: ಎಚ್‍ಡಿಡಿ

    ಈ ನಿಯಮಕ್ಕೆ ರೋಗಿಗಳು ಹಾಗೂ ಸಂಬಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಯ ಜೊತೆಯಲ್ಲಿ ಬರುವವರು ಸಹ ಆಸ್ಪತ್ರೆಯ ಓಳಗೆ ಹೋಗುವ ಮುನ್ನ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕಿದೆ. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ರುದ್ರಮೂರ್ತಿ, ಸರ್ಕಾರದ ಆದೇಶದಂತೆ ನಿಯಮ ಮಾಡಿದ್ದೇವೆ. ಆಸ್ಪತ್ರೆಯಲ್ಲಿ ಮೂವರು ವೈದ್ಯರು, ನಾಲ್ವರು ದಾದಿಯರು ಹಾಗೂ ಮೂವರು ಲ್ಯಾಬ್ ಟೆಕ್ನಿಷಿಯನ್ಸ್ ಸೇರಿದಂತೆ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹೀಗಾಗಿ ಕೊರೊನಾಗೆ ಕಡಿವಾಣ ಹಾಕಲು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಲಾಗಿದೆ.

    ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರು ಆಸ್ಪತ್ರೆಯ ಓಳಗೆ ಬರುವ ಮುನ್ನವೇ ಅವರನ್ನು ತಡೆಯಲಾಗುತ್ತಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: 1 ಕಿ.ಮೀ ಓಡಿ ಕಳ್ಳನನ್ನು ಹಿಡಿದ ಮಂಗಳೂರು ಪೊಲೀಸ್ ವೀಡಿಯೋ ವೈರಲ್