Tag: ಚಿಕ್ಕಮಂಗಳುರು

  • ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

    ಚಿಕ್ಕಮಗಳೂರಿನಲ್ಲಿ ತೆಪ್ಪ ಮುಳುಗಿ ಮೂವರು ಪ್ರವಾಸಿಗರು ದುರ್ಮರಣ

    ಚಿಕ್ಕಮಗಳೂರು: ತೆಪ್ಪ (Raft) ಮುಳುಗಿ ಮೂವರು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ.

    ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು. ಮೂವರು ಪ್ರವಾಸಿಗರು ಭದ್ರಾ ನದಿಯ ಬ್ಯಾಕ್ ವಾಟರ್‌ನಲ್ಲಿ ತೆಪ್ಪದಲ್ಲಿ ಹೋಗಿದ್ದರು. ಈ ವೇಳೆ ತೆಪ್ಪ ಮುಳುಗಿ ಘಟನೆ ಸಂಭವಿಸಿದೆ. ಮೃತರು ಶಿವಮೊಗ್ಗ (Shivamogga) ಜಿಲ್ಲೆಯ ವಿದ್ಯಾನಗರ ಮೂಲದವರು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಗುರುವಾರ 224 ಕ್ಷೇತ್ರಗಳಲ್ಲಿ ಬಿಜೆಪಿ ರಸ್ತೆತಡೆ: ಎನ್ ರವಿಕುಮಾರ್

    ಘಟನಾ ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಎನ್.ಆರ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮೂರನೇ ರೇಪ್ ಕೇಸ್‍ನಲ್ಲಿ ಪ್ರಜ್ವಲ್‍ಗೆ ಮತ್ತೆ 5 ದಿನ ಪೊಲೀಸ್ ಕಸ್ಟಡಿ

  • ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆ

    ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆ

    ಚಿಕ್ಕಮಗಳೂರು: ಎಲ್ಲಾ ರಾಷ್ಟ್ರೀಯ ನಾಯಕರು ನಮ್ಮವರೇ. ಯಾರೂ ಯಾರ ಬಗ್ಗೆಯೂ ಮಾತನಾಡಬಾರದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

    ಕೇಂದ್ರ ಸಚಿವೆಯಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ  ಶೋಭಾ ಕರಂದ್ಲಾಜೆಗೆ ನಗರ ಬಿಜೆಪಿ ಕಾರ್ಯಕರ್ತರು ಪೂರ್ಣಕುಂಭದ ಸ್ವಾಗತ ಕೋರಿದರು. ಇದೇ ವೇಳೆ  ಶೋಭಾ ಕರಂದ್ಲಾಜೆ ಜನಾಶೀರ್ವಾದ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹುಕ್ಕಾ ಬಾರ್ ಹಾಗೂ ಎಣ್ಣೆ ಗಲಾಟೆಗೆ ಪ್ರತಿಕ್ರಿಯೆ ನೀಡಿ ಎಲ್ಲರೂ ನಮ್ಮ ಗೌರವಾನ್ವಿತ ನಾಯಕರು. ಅದಕ್ಕೆ ಜಾತಿ, ಪಕ್ಷ ಹಾಗೂ ಧರ್ಮದ ಭೇದವಿಲ್ಲ. ಅವರವರ ಕಾಲಘಟ್ಟದಲ್ಲಿ ಎಲ್ಲರೂ ದೇಶಕ್ಕಾಗಿ ಕೆಲಸ ಮಾಡಿದ್ದಾರೆ. ಯಾರೂ ಯಾರ ಬಗ್ಗೆಯೂ ಮಾತನಾಡಬಾರದು ಎಲ್ಲರೂ ಗೌರವಾನ್ವಿತರು ಎಂದರು. ಇದನ್ನೂ ಓದಿ:  2 ಡೋಸ್ ಲಸಿಕೆ ಪಡೆದ ವ್ಯಕ್ತಿ ಮತ್ತೆ ವ್ಯಾಕ್ಸಿನ್‍ಗಾಗಿ ಕೋರ್ಟ್ ಮೊರೆ!

    ಒಂದೇ ದಿನ ಜಿಲ್ಲೆಯ ಚಿಕ್ಕಮಗಳೂರು ನಗರ, ಆಲ್ದೂರು, ಬಾಳೆಹೊನ್ನೂರು, ಶೃಂಗೇರಿಯಲ್ಲಿ ನಾಲ್ಕು ಕಡೆ ಜನಾಶೀರ್ವಾದ ಯಾತ್ರೆ ನಡೆಸಿ ಕಾರ್ಯಕರ್ತರನ್ನ ಹುರಿದುಂಬಿಸಿದರು. ಬಳಿಕ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ರಂಭಾಪುರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು. ಜಗದ್ಗುರುಗಳ ಜೊತೆ ಸುಮಾರು ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದರು. ಈ ವೇಳೆ ಜಗದ್ಗುರು ವೀರ ಸೋಮೇಶ್ವರ ಶ್ರೀಗಳು ಶೋಭಾಗೆ ಕೆಲ ಸಲಹೆಗಳನ್ನ ನೀಡಿದರು. ಶೋಭಾ ಕರಂದ್ಲಾಜೆಗೆ ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್, ಮಾಜಿ ಸಚಿವ ಡಿ.ಎನ್ ಜೀವರಾಜ್ ಸಾಥ್ ನೀಡಿದರು.