Tag: ಚಿಕ್ಕೊಡಿ

  • ಹೋಳಿ ಆಡುವ ನೆಪದಲ್ಲಿ ವಸೂಲಿ ದಂಧೆ

    ಹೋಳಿ ಆಡುವ ನೆಪದಲ್ಲಿ ವಸೂಲಿ ದಂಧೆ

    ಚಿಕ್ಕೊಡಿ: ಹೋಳಿ ಹಬ್ಬದ ನಿಮಿತ್ತ ಬಣ್ಣ ಆಡುವ ನೆಪದಲ್ಲಿ ಕೆಲ ಯುವಕರು ವಸೂಲಿ ದಂಧೆಗೆ ಇಳಿದಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಕ್ಕೋಡಿ ರೋಡ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ.

    ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ತಡೆದು ವಸೂಲಿಗೆ ಇಳಿದಿರುವ ಖದೀಮರು ಹೆದ್ದಾರಿಯ ಮೇಲೆ ಮರದ ದಿಂಬುಗಳನ್ನ ಅಳವಡಿಸಿ ಹಣ ವಸೂಲಿ ಮಾಡುತ್ತಿದ್ದರು. ಪ್ರತಿ ವಾಹನದಿಂದ 30 ರಿಂದ 50 ರೂಪಾಯಿವರೆಗೆ ವಸೂಲಿ ಮಾಡುತ್ತಿದ್ದಾರೆ. ಹಣ ನೀಡಿದರೇ ಮಾತ್ರ ಮುಂದೆ ಹೋಗಲು ಅವಕಾಶ ಕಲ್ಪಿಸುತ್ತಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಸಮಯದಲ್ಲೇ ಉಪಚುನಾವಣೆ ಯಾಕೆ – ಆಯೋಗದ ವಿರುದ್ಧ ಮಮತಾ ಕಿಡಿ

    30ಕ್ಕೂ ಹೆಚ್ಚು ಜನರಿಂದ ಹೆದ್ದಾರಿ ಮೇಲೆ ಹಗಲು ದರೋಡೆ ನಡೆಯುತ್ತಿದ್ದರೂ ಪೊಲೀಸರು ಕಣ್ಮುಚ್ಚಿ ಕುಳಿತಿದ್ದರು. ಪೊಲೀಸರಿಗೆ ಮಾಹಿತಿ ನೀಡಿದರು ಸ್ಥಳಕ್ಕೆ ಬಾರದ ಪೊಲೀಸರ ವಿರುದ್ದ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಗೋಕಾಕ್ ಅಭಿವೃದ್ಧಿ ಆಗಿಲ್ಲವೆಂದ್ರೆ ಸ್ಥಳದಲ್ಲೇ ರಾಜೀನಾಮೆ ಕೊಡುತ್ತೇನೆ: ಸವಾಲು ಹಾಕಿದ ರಮೇಶ್‌ ಜಾರಕಿಹೊಳಿ

    ಗೋಕಾಕ್ ಅಭಿವೃದ್ಧಿ ಆಗಿಲ್ಲವೆಂದ್ರೆ ಸ್ಥಳದಲ್ಲೇ ರಾಜೀನಾಮೆ ಕೊಡುತ್ತೇನೆ: ಸವಾಲು ಹಾಕಿದ ರಮೇಶ್‌ ಜಾರಕಿಹೊಳಿ

    ಚಿಕ್ಕೋಡಿ: ಗೋಕಾಕ್ ಕ್ಷೇತ್ರ ಅಭಿವೃದ್ಧಿಯಾಗಿಲ್ಲ ಎಂದರೆ ಸ್ಥಳದಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ್ ಕ್ಷೇತ್ರದಲ್ಲಿ ರಸ್ತೆಗಳ ಅಭಿವೃದ್ಧಿ ಆಗಿಲ್ಲ ಎಂದು ಸತೀಶ್ ಜಾರಕಿಹೊಳಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಜಾರಕಿಹೊಳಿ ಸತೀಶ್ ಜಾರಕಿಹೊಳಿಗೆ ಚಾಲೆಂಜ್ ಮಾಡುತ್ತೇನೆ. ರಸ್ತೆ ಕೆಟ್ಟಿದೆ, ರಸ್ತೆಯೇ ಇಲ್ಲ ಎಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸವಾಲೆಸೆದರು.

    satish jarkiholi

    ಮೂಲ ಜಗಳ ಆರಂಭವಾಗಿದ್ದೇ ಅಥಣಿ ಮತಕ್ಷೇತ್ರಕ್ಕಾಗಿ. ಅಲ್ಲಿ ನೀರಾವರಿ ಯೋಜನೆ ಅನುಷ್ಠಾನ ಮಾಡದಿರುವುದಕ್ಕೆ ನಾನು ಕಾಂಗ್ರೆಸ್ ತೊರೆದಿದ್ದೆ. ಆದರೆ ಅಥಣಿ ಮತಕ್ಷೇತ್ರದ ಅಭಿವೃದ್ಧಿಯನ್ನು ಬಿಜೆಪಿ ಮಾಡುತ್ತದೆ ಎಂದು ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಯಾರನ್ನೂ ನಂಬಲ್ಲ, ಭದ್ರತಾ ಅಧಿಕಾರಿಯೇ ನನ್ನನ್ನು ಶೂಟ್ ಮಾಡ್ಬೋದು: ಅಬ್ದುಲ್ಲಾ ಆಝಂ ಖಾನ್

    ನಾನು ಹಾಗೂ ಮಹೇಶ್ ಕುಮಟಳ್ಳಿ ಸಚಿವರಾಗುವುದರ ಬಗ್ಗೆ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದ ಅವರು, ಲಖನ್ ಜಾರಕಿಹೊಳಿ ಸ್ವತಂತ್ರರು. ಅವರ ಹೇಳಿಕೆ ಬಗ್ಗೆ ನನಗೆ ಮಾಹಿತಿಯಿಲ್ಲ. ಲಕ್ಷ್ಮಣ ಸವದಿ ನಾವು ಒಂದೇ ಪಕ್ಷದಲ್ಲಿ ಇರುವ ಕಾರಣ ಪಕ್ಷದ ಆಂತರಿಕ ಸಭೆಯಲ್ಲಿ ಮಾತನಾಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಗದರಿಸಿದ ಮಾತ್ರಕ್ಕೆ ತಂದೆಯನ್ನು ಮಗ ಕೊಲೆ ಮಾಡುವಂತಿಲ್ಲ: ಹೈಕೋರ್ಟ್

    ಬೆಳಗಾವಿ ಶಾಸಕರ ನಿಯೋಗ ಸಿಎಂ ಬಳಿ ಏನೂ ಹೇಳಿದೆ ಎನ್ನುವುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸಿಎಂ ಹಾಗೂ ಹೈಕಮಾಂಡ್ ಕರೆದು ಕೇಳಿದಾಗ ಉತ್ತರ ಕೊಡುತ್ತೇನೆ. ಉಮೇಶ್ ಕತ್ತಿ ಅವರ ಹೇಳಿಕೆ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದ ಅವರು ಬೆಳಗಾವಿ ರಾಜಕಾರಣದಲ್ಲಿ ಭಿನ್ನಮತ ವಿಚಾರ ಬಗೆಹರಿಸಲು ಬಾಲಚಂದ್ರ ಜಾರಕಿಹೊಳಿ ಮುಂದಾಳತ್ವ ವಹಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಹಾಗೂ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಮಹೇಶ್ ಕುಮಟಳ್ಳಿ ಸೇರಿದಂತೆ ರಮೇಶ ಜಾರಕಿಹೊಳಿ ಬೆಂಬಲಿಗರು ಉಪಸ್ಥಿತರಿದ್ದರು.

  • ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಮಹಿಳೆಗೆ ಗುಂಡಿಕ್ಕಿ ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯ ಅರೆಸ್ಟ್

    ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದ ಮಹಿಳೆಯ ಶೂಟೌಟ್ ಪ್ರಕರಣವನ್ನು ಸಂಕೇಶ್ವರ ಪೊಲೀಸರು ಭೇದಿಸಿದ್ದು, ಶೂಟೌಟ್ ನಡೆಸಿ ಮಹಿಳೆಯನ್ನು ಕೊಲೆ ಮಾಡಿದ್ದ ಬಿಜೆಪಿ ಪುರಸಭೆ ಸದಸ್ಯನನ್ನು ಪೊಲೀಸರು ಬಂಧಿಸಿದ್ದಾರೆ.

    ಸಂಕೇಶ್ವರ ವಾರ್ಡ್ ನಂಬರ್ 14ರ ಬಿಜೆಪಿ ಪುರಸಭೆ ಸದಸ್ಯ ಉಮೇಶ್ ಕಾಂಬಳೆ ಎಂಬಾತನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಕಳೆದ ಜ.16ರಂದು ನಾಡ ಪಿಸ್ತೂಲ್‍ನಿಂದ ಶೈಲಾ ನಿರಂಜನ್ ಸುಭೇದಾರ್(56) ಮಹಿಳೆಯ ಎದೆಗೆ ಹಾಗೂ ಕೈಗೆ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.

    POLICE JEEP

    ಪ್ರಕರಣದ ಬೆನ್ನತ್ತಿದ್ದ ಸಂಕೇಶ್ವರ ಪಿಎಸ್‍ಐ ಗಣಪತಿ ಕೊಂಗನೊಳ್ಳಿ ಹಾಗೂ ಸಿಪಿಐ ರಮೇಶ್ ಛಾಯಾಗೋಳ, ಹವಾಲ್ದಾರ್ ಭೀಮಪ್ಪ ನಾಗನೂರೆ, ಬಸವರಾಜ ಕಪರಟ್ಟಿ ಅವರ ತಂಡ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: ಜನರಿಗೆ ತೊಂದ್ರೆ ಕೊಡೋದ್ರಿಂದ ಸರ್ಕಾರಕ್ಕೆ ಲಾಭವೂ, ಇಲ್ಲ ನಷ್ಟವೂ ಇಲ್ಲ: ಸುಧಾಕರ್

    ಲೇವಾದೇವಿ ವ್ಯವಹಾರ ಮಾಡುತ್ತಿದ್ದ ಮಹಿಳೆಯಿಂದ 25 ಲಕ್ಷ ರೂ. ಹಣವನ್ನು ಉಮೇಶ ಕಾಂಬಳೆ ಪಡೆದಿದ್ದ. ಬಡ್ಡಿ ಸಮೇತ ಹಣ ಹಿಂದಿರಿಗಿಸಲು ಮಹಿಳೆ ಪೀಡಿಸುತ್ತಿದ್ದ ಕಾರಣ ಮಹಾರಾಷ್ಟ್ರದ ಸಾಂಗ್ಲಿಯಿಂದ ಪಿಸ್ತೂಲ್‍ನ್ನು ತಂದು ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜ.31ರ ವರೆಗೆ ಟಫ್ ರೂಲ್ಸ್ ಜಾರಿ

    ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರಿಂದ ಶೋಧ ಕಾರ್ಯ ಮುಂದುವರಿದಿದೆ. ಸಂಕೇಶ್ವರ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

  • ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ: ಲಕ್ಷ್ಮಣ್ ಸವದಿ

    ರಾಜಕೀಯದಲ್ಲಿ ಅಧಿಕಾರ ಶಾಶ್ವತವಲ್ಲ: ಲಕ್ಷ್ಮಣ್ ಸವದಿ

    ಚಿಕ್ಕೋಡಿ: ರಾಜಕಾರಣದಲ್ಲಿ ಅಧಿಕಾರ ಶ್ವಾಶ್ವತವಲ್ಲ. ಅವಕಾಶ ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅಭಿಪ್ರಾಯಪಟ್ಟಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಶ್ರೀಮಂತ ಪಾಟೀಲ್ ಬಿಜೆಪಿ ಸೇರುವಾಗ ಹಣದ ಅಮೀಷ ಒಡ್ಡಿದ್ದರು ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಶ್ರೀಮಂತ ಪಾಟೀಲ್‍ರ ಹೇಳಿಕೆಗಳನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ಅವರನ್ನು ಭೇಟಿ ಮಾಡಿಲ್ಲ. ಯಾರು ಹಣ ಕೊಡಲು ಹೋಗಿದ್ದರು, ಯಾರು ಅಮೀಷ ಒಡ್ಡಿದ್ದರು ಎಂಬುದನ್ನು ಪರೀಶಿಲನೆ ಮಾಡಬೇಕು ಎಂದರು. ಇದನ್ನೂ ಓದಿ: ಹೆಣ್ಣು ಬಳೆ ತೊಟ್ಟಿದ್ದಾಳೆ ಅಂದರೆ ಅಬಲೆ ಅಂತಾನಾ? – ತನ್ವೀರ್ ಸೇಠ್ ವಿರುದ್ಧ ಪ್ರತಾಪ್ ಸಿಂಹ ಕಿಡಿ

    ರಾಜಕಾರಣದಲ್ಲಿ ಅಧಿಕಾರ ಶಾಶ್ವತವಲ್ಲ. ಅವಕಾಶ ಸಿಕ್ಕಾಗ ಸದ್ಬಳಕೆ ಮಾಡಿಕೊಳ್ಳಬೇಕು. ಶ್ರೀಮಂತ ಪಾಟೀಲ್ ವೈಮನಸ್ಸಿನಿಂದ ಹಾಗೆ ಹೇಳುತ್ತಿದ್ದಾರೆ ಅಷ್ಟೆ. ಮಾತನಾಡುವ ಭರದಲ್ಲಿ ಈ ರೀತಿ ಹೇಳಿರಬಹುದು. ಖುದ್ದಾಗಿ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತನಾಡುತ್ತೇನೆ ಎಂದರು.  ಇದನ್ನೂ ಓದಿ: ಹಿಂದೂ ದೇವಸ್ಥಾನ ಟಾರ್ಗೆಟ್ ಮಾಡಿ ಧ್ವಂಸ ಮಾಡಲಾಗುತ್ತಿದೆ: ಪ್ರತಾಪ್ ಸಿಂಹ

  • ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

    ಸರ್ಕಸ್ ಕಲಾವಿದರಿಗೆ ದಿನಸಿ ಸಾಮಗ್ರಿ ವಿತರಿಸಿದ ಶಾಸಕ ಗಣೇಶ ಹುಕ್ಕೇರಿ

    ಚಿಕ್ಕೋಡಿ: ಲಾಕ್‍ಡೌನ್ ಆಗುವ ಮೊದಲು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ಸರ್ಕಸ್ ಪ್ರದರ್ಶಿಸಲು ಸರ್ಕಸ್ ಕಲಾವಿದರು ಆಗಮಿಸಿದ್ದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಪ್ರದರ್ಶನ ಇಲ್ಲದೆ ಹಣ, ಊಟವಿಲ್ಲದೆ ಕೊರಗುತ್ತಿದ್ದ ಸರ್ಕಸ್ ಕಲಾವಿದರಿಗೆ ಶಾಸಕ ಗಣೆಶ್ ಹುಕ್ಕೇರಿ ದಿನಸಿ ಸಾಮಾಗ್ರಿ ವಿತರಿಸಿದ್ದಾರೆ.

    ಸರ್ಕಸ್ ಕಂಪನಿಯ ಕಲಾವಿದರು ಸಂಕಷ್ಟದಲ್ಲಿ ಇರುವುದನ್ನು ಮನಗಂಡು, ಚಿಕ್ಕೋಡಿ-ಸದಲಗಾ ಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ ಸುಮಾರು ಆರವತ್ತಕ್ಕೂ ಹೆಚ್ಚು ಕಲಾವಿದರಿಗೆ ಒಂದು ತಿಂಗಳಿಗೆ ಸಾಕಾಗುವಷ್ಟು ರೇಶನ್ ಹಾಗೂ ಗೃಹಪಯೋಗಿ ಸಾಮಗ್ರಿಗಳನ್ನು ವಿತರಿಸಿದ್ದಾರೆ. ಇದನ್ನೂ ಓದಿ: ಮಂಗಳಮುಖಿಯರಿಗೆ ಲಸಿಕೆಯೊಂದಿಗೆ ದಿನಸಿ ಕಿಟ್ ವಿತರಣೆ


    ಕೊರೊನಾ ಹಾಗೂ ಲಾಕಡೌನ್ ಹಿನ್ನೆಲೆ ಅನೇಕ ಕಲಾವಿದರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಒಂದು ದಿನದ ಜೀವನ ಸಾಗಿಸುವುದು ಕೂಡ ಕಷ್ಟವಾಗಿದೆ. ಹಿಗಾಗಿ ನಮ್ಮ ಕ್ಷೇತ್ರದಲ್ಲಿ ಸಮಸ್ಯೆ ಗೊಳಗಾದ ಕಲಾವಿದರ ತಂಡಕ್ಕೆ, ಒಂದು ತಿಂಗಳಿಗೆ ಸಾಕಾಗುವಷ್ಟು ಗೃಹಪಯೋಗಿ ಸಾಮಗ್ರಿಗಳನ್ನು ಹಂಚಿದ್ದೇವೆ. ಈ ಮೂಲಕ ಕಲಾವಿದರ ಸಂಕಷ್ಟದಲ್ಲಿ ಭಾಗಿಯಾಗುವ ಕೆಲಸವನ್ನ ನಾವು ಮಾಡುತ್ತೀದ್ದೇವೆ ಎಂದು ಶಾಸಕ ಗಣೇಶ್ ಹುಕ್ಕೇರಿ ಹೇಳಿದ್ದಾರೆ. ಈ ವೇಳೆ ಚಿಕ್ಕೋಡಿ ಪುರಸಭೆ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

     

  • 2 ವರ್ಷದ ಗಂಡು ಮಗು ಕಿಡ್ನಾಪ್ ಮಾಡಿದ್ದ ಐವರು ಅರೆಸ್ಟ್

    2 ವರ್ಷದ ಗಂಡು ಮಗು ಕಿಡ್ನಾಪ್ ಮಾಡಿದ್ದ ಐವರು ಅರೆಸ್ಟ್

    ಚಿಕ್ಕೋಡಿ(ಬೆಳಗಾವಿ): ಎರಡು ವರ್ಷದ ಗಂಡು ಮಗುವನ್ನು ಕಿಡ್ನಾಪ್ ಮಾಡಿದ್ದ ಐವರನ್ನು ಬಂಧಿಸಲಾಗಿದೆ.

    ಬಂಧಿತರನ್ನು ಪ್ರಶಾಂತ್ ಬಡಕಂಬಿ, ಜ್ಯೋತಿಬಾ ಬಂಗಿ, ಅನಿಲ್ ಬಡಕಂಬಿ, ಜಂಬುಸಾಗರ ನಾಡಗೌಡ, ಕುಮಾರ್ ಹಿರೇಮನಿ ಎಂದು ಗುರುತಿಸಲಾಗಿದೆ. ಹುಸೇನವ್ವ ಬಹುರೂಪಿ ಎಂಬವರ ಎರಡು ವರ್ಷದ ಮಗ ಯಲ್ಲಪ್ಪ ಕಿಡ್ನಾಪ್ ಆಗಿದ್ದನು.

    ಈ ಐವರು ಫೆಬ್ರವರಿ 6 ರಂದು ಸಂಜೆ 4 ಗಂಟೆ ಸುಮಾರಿಗೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ಜೋಪಡಿಪಟ್ಟಿಯಲ್ಲಿದ್ದ 2 ವರ್ಷದ ಮಗುವನ್ನು ಅಪಹರಿಸಿದ್ದರು. ಬೆಳಗಾವಿ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡ ರಚಿಸಿದ್ದರು. ಇದೀಗ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದರು.

    ಗಂಡು ಮಗು ಇಲ್ಲದ್ದಕ್ಕೆ ಅನಾಥ ಆಶ್ರಮದಿಂದ ಮಗು ತಂದುಕೊಡುವಂತೆ ಆರೋಪಿಗಳ ಬಳಿ ಮಹಿಳೆಯೊಬ್ಬರು ಕೇಳಿದ್ದರು. ಮಹಿಳೆಯ ಬಳಿ ಆರೋಪಿಗಳು 4 ಲಕ್ಷಕ್ಕೆ ಬೇಡಿಕೆ ಇಟ್ಟು ಎರಡು ಲಕ್ಷಕ್ಕೆ ಡೀಲ್ ಫೈನಲ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎರಡು ವರ್ಷದ ಮಗು ಕಿಡ್ನಾಪ್ ಮಾಡಿ ಆರೋಪಿಗಳು ಮಹಿಳೆಗೆ ನೀಡಿದ್ದರು. ಇತ್ತ ಮಹಿಳೆಯ ಬಳಿ ಅನಾಥ ಆಶ್ರಮದಿಂದ ಕಾನೂನುಬದ್ಧವಾಗಿ ಮಗು ತಂದಿದ್ದಾಗಿ ಹೇಳಿ ನಂಬಿಸಿದ್ದಾರೆ. ಅಲ್ಲದೆ ಮಹಿಳೆಯಿಂದ ಎರಡು ಲಕ್ಷ ರೂ. ಹಣ ಪಡೆದು ಹಂಚಿಕೊಂಡಿದ್ದರು.

    ಸದ್ಯ ಆರೋಪಿಗಳ ಬಳಿಯಿಂದ 65 ಸಾವಿರ ಹಣ, ಕೃತ್ಯಕ್ಕೆ ಬಳಸಿದ್ದ ಎರಡು ಕಾರು ಜಪ್ತಿ ಮಾಡಲಾಗಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಲ್ಕು ದಿನಗಳಿಂದ ಒಂದೇ ಜಾಗದಲ್ಲಿ ಬೀಡುಬಿಟ್ಟಿದ್ದ ಹಾವುಗಳ ರಕ್ಷಣೆ

    ನಾಲ್ಕು ದಿನಗಳಿಂದ ಒಂದೇ ಜಾಗದಲ್ಲಿ ಬೀಡುಬಿಟ್ಟಿದ್ದ ಹಾವುಗಳ ರಕ್ಷಣೆ

    ಬೆಳಗಾವಿ: ನಾಲ್ಕು ದಿನಗಳಿಂದ ಒಂದೇ ಜಾಗದಲ್ಲಿ ಬೀಡು ಬಿಟ್ಟಿದ್ದ ಎರಡು ಹಾವುಗಳನ್ನು ರಕ್ಷಣೆ ಮಾಡಿರುವ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ನಡೆದಿದೆ.

    ನಾಲ್ಕು ದಿನಗಳ ಹಿಂದೆ ಸಾತಪ್ಪ ಅಂಬಿ ಎಂಬವರಿಗೆ ಸೇರಿದ ಮನೆಯ ಜಾನುವಾರು ಕೊಟ್ಟಿಗೆಯಲ್ಲಿ ಹಾವುಗಳು ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಭಯಭೀತರಾಗಿದ್ದರು. ಗ್ರಾಮಸ್ಥರು ಹಾವುಗಳನ್ನು ಸ್ಥಳದಿಂದ ಓಡಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಹಾವುಗಳು ಮಾತ್ರ ಸ್ಥಳದಿಂದ ಹೋಗಿರಲಿಲ್ಲ.

    ಕೊನೆಗೆ ಗ್ರಾಮಸ್ಥರು ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಉರಗ ತಜ್ಞರು ಎರಡು ಹಾವುಗಳನ್ನು ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವುಗಳು ಸಂತಾನೋತ್ಪತ್ತಿ ಕ್ರಿಯೆಯಲ್ಲಿ ತೊಡಗಿದ್ದರಿಂದ ಹಾವುಗಳು ಒಂದೇ ಸ್ಥಳದಲ್ಲಿದ್ದವು ಅಂತಾ ಉರಗ ತಜ್ಞರು ಹೇಳಿದ್ದಾರೆ.